Tag: Relief

  • ಕೋವಿಡ್ ಮೃತರ ಕುಟುಂಬಕ್ಕೆ ರಾಜ್ಯದಿಂದ 1 ಲಕ್ಷ, ಕೇಂದ್ರದಿಂದ 50 ಸಾವಿರ ಪರಿಹಾರ: ಆರ್.ಅಶೋಕ್

    ಕೋವಿಡ್ ಮೃತರ ಕುಟುಂಬಕ್ಕೆ ರಾಜ್ಯದಿಂದ 1 ಲಕ್ಷ, ಕೇಂದ್ರದಿಂದ 50 ಸಾವಿರ ಪರಿಹಾರ: ಆರ್.ಅಶೋಕ್

    – ಅರ್ಜಿ ಸಲ್ಲಿಕೆಗೆ ಈ ಕೆಳಗಿನ ದಾಖಲೆಗಳು ಅಗತ್ಯ

    ಬೆಂಗಳೂರು: ಕೊರೊನಾದಿಂದ ಮೃತಪಟ್ಟ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ 1 ಲಕ್ಷ ರೂ. ಹಾಗೂ ಕೇಂದ್ರ ಸರ್ಕಾರದಿಂದ 50 ಸಾವಿರ ರೂ.ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೊಕ್ ತಿಳಿಸಿದರು. ಇದೇ ವೇಳೆ ಅರ್ಜಿ ಸಲ್ಲಿಕೆಗೆ ಯಾವೆಲ್ಲ ದಾಖಲೆಗಳು ಬೇಕು ಎಂಬುದನ್ನು ಸಹ ವಿವರಿಸಿದರು.

    ವಿಧಾನಸೌಧದಲ್ಲಿ ಮಾತನಾಡಿದ ಅವರು, ಕೋವಿಡ್ ನಿಂದ ಮೃತಪಟ್ಚ ಕುಟುಂಬಗಳಿಗೆ ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ವಿಪತ್ತು ನಿರ್ವಹಣಾ ವಿಭಾಗದಿಂದ ಪರಿಹಾರ ಕೊಡುತ್ತೇವೆ. ರಾಜ್ಯ ಸರ್ಕಾರದಿಂದ 1 ಲಕ್ಷ ರೂಪಾಯಿ, ಈ ಪರಿಹಾರ ಬಿಪಿಎಲ್ ಕಾರ್ಡ್ ಇದ್ದವರಿಗೆ ಮಾತ್ರ. ಕೇಂದ್ರ ಸರ್ಕಾರ ಸಹ 50 ಸಾವಿರ ರೂ. ಪರಿಹಾರ ಘೋಷಿಸಿದೆ. ಇದು ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಹೊಂದಿದ ಎಲ್ಲರಿಗೂ ಸಿಗಲಿದೆ. ಬಿಪಿಎಲ್ ಕಾರ್ಡ್ ಇರುವವರಿಗೆ ಒಟ್ಟು 1.50 ಲಕ್ಷ ರೂ. ಹಣ ಬರುತ್ತದೆ. ಎಪಿಎಲ್ ಕಾರ್ಡ್ ಹೊಂದಿದವರಿಗೆ ಕೇಂದ್ರ ಸರ್ಕಾರದ 50 ಸಾವಿರ ರೂ.ಪರಿಹಾರ ಮಾತ್ರ ಬರುತ್ತದೆ ಎಂದರು. ಇದನ್ನೂ ಓದಿ:

    ಅರ್ಜಿ ಸಲ್ಲಿಕೆಗೆ ಯಾವೆಲ್ಲ ದಾಖಲೆ ಬೇಕು?
    ಕೋವಿಡ್ ಸೋಂಕಿತರ ವರದಿಯ ಬಿ.ಯು ನಂಬರ್ ಬೇಕು. ಮೃತ ವ್ಯಕ್ತಿಯ ಮರಣ ಪತ್ರ, ಆಧಾರ್ ಪ್ರತಿ, ಮೃತ ವ್ಯಕ್ತಿಯ ಬಿಪಿಎಲ್ ಕಾರ್ಡ್, ಗುರುತಿನ ಚೀಟಿ, ಅರ್ಜಿದಾರರ ಬ್ಯಾಂಕ್ ಅಕೌಂಟ್ ವಿವರ ಕೊಡಬೇಕು. ಅರ್ಜಿದಾರರ ಸ್ವಯಂ ಘೋಷಣಾ ಫಾರಂ-2 ನೀಡಬೇಕು, ಕುಟುಂಬದ ಉಳಿದವರಿಗೆ ಕೊಡಬೇಕಾದರೆ ಫಾರಂ-3 ಅರ್ಜಿ ಕೊಡಬೇಕು. ಅರ್ಜಿಗಳನ್ನು ಜಿಲ್ಲಾಧಿಕಾರಿ, ತಹಶಿಲ್ದಾರರ್ ಗೆ ಸಲ್ಲಿಸಬಹುದು ಎಂದು ತಿಳಿಸಿದರು.

    ಕೇಂದ್ರ ಸರ್ಕಾರದ ಪರಿಹಾರದ ಹಣ ಆರ್‍ಟಿಜಿಎಸ್ ಮೂಲಕ ಅಕೌಂಟ್ ಗೆ ಹೋಗುತ್ತದೆ. ಈ ಕಮಿಟಿಯಲ್ಲಿ ಜಿಲ್ಲಾಧಿಕಾರಿ, ವೈದ್ಯಾಧಿಕಾರಿ, ಸದಸ್ಯ ಕಾರ್ಯದರ್ಶಿ ಇರುತ್ತಾರೆ. ಬೆಂಗಳೂರು ಪಾಲಿಕೆಯಲ್ಲಿ ವಲಯ ಜಂಟಿ ಆಯುಕ್ತರು ಇರುತ್ತಾರೆ. ಆರೋಗ್ಯ ಇಲಾಖೆಯಿಂದ ಪರಿಶೀಲಿಸಿ ನಿರ್ಧಾರ ಮಾಡುತ್ತಾರೆ ಎಂದು ಮಾಹಿತಿ ನೀಡಿದರು.

    ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆಯಲ್ಲಿ ವ್ಯತ್ಯಾಸದ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಅದು ಅವರ ಆರೋಪ ಅಷ್ಟೇ, ಯಾರೆಲ್ಲ ಸಾವನ್ನಪ್ಪಿದ್ದಾರೆ ಅವರ ಮಾಹಿತಿ ಇದೆ, ಡಾಕ್ಟರ್ ಸರ್ಟಿಫಿಕೇಟ್ ಸಹ ಇರುತ್ತೆ. ತಹಶೀಲ್ದಾರ್ ಹಾಗೂ ರೆವಿನ್ಯೂ ಅಧಿಕಾರಿಗಳ ಬಳಿ ವರದಿ ಇರುತ್ತದೆ. ಬೋಗಸ್ ಆಗಲು ಅವಕಾಶ ಇರಲ್ಲ. ಆಸ್ಪತ್ರೆಯಿಂದ ಕೋಡ್ ನಂಬರ್ ಇರುತ್ತೆ. ಕಾಂಗ್ರೆಸ್ ಗೆ ಆರೋಪ ಮಾಡುವ ಚಟ ಇದೆ ಎಂದು ತಿರುಗೇಟು ನೀಡಿದರು.

    ಮತಾಂತರ ಮಾಡುವವರೆಲ್ಲ ಅವರೆಲ್ಲ ದೇಶ ದ್ರೋಹಿಗಳು, ನೆಲದ ಸಂಸ್ಕೃತಿ ಹಾಳು ಮಾಡಲು ಮತಾಂತರ ಮಾಡುತ್ತಿದ್ದಾರೆ. ಮತಾಂತರ ನಿಷೇಧ ಕಾಯ್ದೆ ತರಬೇಕು. ಯಾವುದೋ ದೇಶದ ದುಡ್ಡನ್ನು ತಂದು ಹೀಗೆ ಮಾಡುತ್ತಿದ್ದಾರೆ. ಸಿಎಂ ಹಾಗೂ ಗೃಹ ಇಲಾಖೆ ಜೊತೆಗೆ ಮಾತಾಡುತ್ತೇನೆ. ಸೂಕ್ತ ಕಾಯ್ದೆ ತರಬೇಕು. ನಮ್ಮ ಸರ್ಕಾರ ಇರೋದಕ್ಕೆ ಇದೆಲ್ಲ ಆಚೆ ಬರುತ್ತಿದೆ ಎಂದರು.

  • ಪಟಾಕಿ ಅಂಗಡಿಯಲ್ಲಿ ಸ್ಫೋಟದಿಂದ ಇಬ್ಬರು ಸಾವು- ತಲಾ 2 ಲಕ್ಷ ಪರಿಹಾರ ಘೋಷಿಸಿದ ಜಮೀರ್

    ಪಟಾಕಿ ಅಂಗಡಿಯಲ್ಲಿ ಸ್ಫೋಟದಿಂದ ಇಬ್ಬರು ಸಾವು- ತಲಾ 2 ಲಕ್ಷ ಪರಿಹಾರ ಘೋಷಿಸಿದ ಜಮೀರ್

    ಬೆಂಗಳೂರು: ಪಟಾಕಿ ಗೋದಾಮಿನಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರ ಕುಟುಂಬಗಳಿಗೆ ಶಾಸಕ ಜಮೀರ್ ಅಹ್ಮದ್ ಖಾನ್ ವೈಯಕ್ತಿಕವಾಗಿ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್, ಪಟಾಕಿ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ವೈಯಕ್ತಿಕವಾಗಿ 2 ಲಕ್ಷ ರೂ.ಗಳ ಪರಿಹಾರ ನೀಡುತ್ತೇನೆ. ವೈದ್ಯಕೀಯ ಖರ್ಚನ್ನು ನೋಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿದ್ದಾರೆ.

    ಗಾಯಾಳು ಮಂಜುನಾಥ್‍ನನ್ನು ಬೃಂದಾವನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪಾಲಿಕೆಯಿಂದ ಅನುಮತಿ ಪಡೆದೇ ಪಟಾಕಿ ಸ್ಟೋರೇಜ್ ಮಾಡಲಾಗಿದೆ. ಈ ಬಗ್ಗೆ ಪೊಲೀಸರ ತನಿಖೆ ನಡೆಯುತ್ತಿದೆ. ಸ್ಥಳೀಯರೇ ಮೃತಪಟ್ಟಿದ್ದಾರೆ. 75 ವರ್ಷದ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ. ಕೆಲ ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಸರಣಿ ಸ್ಫೋಟ – ಮೂವರು ಸಾವು, ನಾಲ್ವರ ಸ್ಥಿತಿ ಗಂಭೀರ

    ಪಟಾಕಿ ಹಾಗೂ ಸಂಬಂಧಿಸಿದ ವಸ್ತುಗಳನ್ನು ಗೋಡೌನ್ ನಲ್ಲಿಟ್ಟುಕೊಂಡು, ಬೇರೆಡೆಗೆ ಸಾಗಾಟ ಮಾಡುತ್ತಿದ್ದರು. ಈ ವೇಳೆ ಸ್ಫೋಟ ಸಂಭವಿಸಿದೆ. ಸರ್ಕಾರದಿಂದ ಬಡವರಿಗೆ ಪರಿಹಾರ ನೀಡಬೇಕು. ಮೃತರ ಕುಟುಂಬಕ್ಕೆ ನಾನೂ ವೈಯಕ್ತಿಕವಾಗಿ 2 ಲಕ್ಷ ರೂ.ಗಳ ಪರಿಹಾರ ನೀಡುತ್ತೇನೆ. ವೈದ್ಯಕೀಯ ಖರ್ಚನ್ನು ನೋಡಿಕೊಳ್ಳುತ್ತೇನೆ ಎಂದರು.

    ಪಟಾಕಿ ಅಂಗಡಿ, ಶ್ರೀ ಪತ್ರ ಕಾಳಿ ಅಮ್ಮನ್ ಲಾರಿ ಸರ್ವೀಸ್ ಗೋದಾಮಿಯಲ್ಲಿ ಪಟಾಕಿ ಸ್ಫೋಟ ಹಾಗೂ ಪಂಕ್ಚರ್ ಅಂಗಡಿಯಲ್ಲಿ ಹೈಡ್ರೋಲಿಕ್ ಸಿಲಿಂಡರ್ ಸ್ಫೋಟ ಸಂಭವಿಸಿದೆ. ನಗರ್ತರಪೇಟೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದರೆ, ಶ್ರೀ ಪತ್ರಕಾಳಿ ಅಮ್ಮನ್ ಲಾರಿ ಸರ್ವೀಸಸ್ ಗೋಡೌನ್‍ನಲ್ಲಿ ಪಟಾಕಿ ಸ್ಫೋಟಗೊಂಡು ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪಟಾಕಿ ಸ್ಫೋಟದಿಂದ ಮೃತರ ದೇಹ ಛಿದ್ರಗೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ.

    ಮೃತರನ್ನು ಅಸ್ಲಾಂ, ಮನೋಹರ್ ಎಂದು ಗುರುತಿಸಲಾಗಿದೆ. ಸ್ಫೋಟದ ವೇಳೆ ಪಂಕ್ಚರ್ ಅಂಗಡಿ ಮುಂದೆ ನಿಂತಿದ್ದ 10ಕ್ಕೂ ಹೆಚ್ಚು ವಾಹನಗಳು ಜಖಂ ಆಗಿದ್ದು, ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಇದೀಗ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಘಟನಾ ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

  • ಅಧಿವೇಶನದ ಬಳಿಕ ಬಾಕಿ ಉಳಿದ ಬೆಳಗಾವಿಯ ನೆರೆ ಸಂತ್ರಸ್ತರಿಗೆ ಪರಿಹಾರ- ಸಿಎಂ ಭರವಸೆ

    ಅಧಿವೇಶನದ ಬಳಿಕ ಬಾಕಿ ಉಳಿದ ಬೆಳಗಾವಿಯ ನೆರೆ ಸಂತ್ರಸ್ತರಿಗೆ ಪರಿಹಾರ- ಸಿಎಂ ಭರವಸೆ

    ಬೆಳಗಾವಿ: ಪ್ರವಾಹದಿಂದ ಜಿಲ್ಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿದೆ. ಅಧಿವೇಶನ ಮುಗಿದ ಬಳಿಕ ಬಾಕಿ ಉಳಿದಿರುವ ಸಂತ್ರಸ್ತರಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

    ಈ ಕುರಿತು ಮಾತನಾಡಿದ ಅವರು, ನೆರೆ ಪರಿಹಾರಕ್ಕಾಗಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಎದುರು ಸಂತ್ರಸ್ತರು ಧರಣಿ ನಡೆಸುತ್ತಿರುವ ವಿಚಾರದ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇನೆ. ಅಧಿವೇಶನ ಮುಗಿದ ಬಳಿಕ ವಿಶೇಷವಾಗಿ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿಯಾದ ಮನೆಗಳ ಪರಿಹಾರದ ಬಗ್ಗೆ ಹಣಕಾಸು, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆಯವರೊಂದಿಗೆ ಚರ್ಚೆ ನಡೆಸುತ್ತೇನೆ ಎಂದರು. ಇದನ್ನೂ ಓದಿ: ನಮಗೆ ಮನೆ ಕಟ್ಟಿಸಿ ಕೊಡಿ- ಘಟಪ್ರಭಾ ಪ್ರವಾಹದಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಂದ ಪ್ರತಿಭಟನೆ

    ಸಂತ್ರಸ್ತರೆಲ್ಲರಿಗೂ ಪರಿಹಾರ ನೀಡುವ ಕಾರ್ಯ ಮಾಡಲಾಗುವುದು. ಪ್ರವಾಹದಲ್ಲಿ ಬಿದ್ದ ಮನೆಗಳಿಗೆ ಪರಿಹಾರ ಸಿಕ್ಕಿಲ್ಲ ಎಂಬ ಬಗ್ಗೆ ಇರುವ ಗೊಂದಲ ಸರಿಪಡಿಸುವ ಕೆಲಸ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

  • ಹಳೆ ಬೆಳೆ ಕೊಚ್ಚಿ ಹೋಯ್ತು – ಹೊಸ ಬೆಳೆ ಬಿತ್ತನೆಗೆ ಪರದಾಡುತ್ತಿದ್ದಾರೆ ರೈತರು

    ಹಳೆ ಬೆಳೆ ಕೊಚ್ಚಿ ಹೋಯ್ತು – ಹೊಸ ಬೆಳೆ ಬಿತ್ತನೆಗೆ ಪರದಾಡುತ್ತಿದ್ದಾರೆ ರೈತರು

    ಚಿಕ್ಕೋಡಿ: ರಣ ಭೀಕರ ಪ್ರವಾಹ ಬಂದು ಎರಡು ತಿಂಗಳು ಕಳೆದರೂ ನದಿ ತೀರದ ಸಂತ್ರಸ್ತರ ಸಂಕಷ್ಟ ಮುಂದುವರೆದಿದೆ. ರೈತರು ನಾಶವಾದ ಬೆಳೆ ತೆಗೆದು ಹೊಸ ಬೆಳೆ ಬಿತ್ತನೆಗೆ ಪರದಾಡುತ್ತಿದ್ದಾರೆ.

    ಭೀಕರ ಪ್ರವಾಹದಿಂದ ಕಷ್ಟ ಪಟ್ಟು ಬೆಳೆದ ಬೆಳೆಗಳು ಕೊಚ್ಚಿ ಹೋಗಿ ನದಿ ತೀರದ ರೈತರು ಕಂಗಾಲಾಗಿದ್ದಾರೆ. ಈ ಪ್ರವಾಹಕ್ಕೆ ಕಬ್ಬು, ಸೊಯಾಬೀನ್, ಗೋವಿನ ಜೋಳ ಸೇರಿದಂತೆ ವಿವಿಧ ಬೆಳೆಗಳು ನಾಶವಾಗಿ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ, ಆದರೂ ಸಹ ಸರ್ಕಾರ ಮಾತ್ರ ರೈತರ ಸಹಾಯಕ್ಕೆ ಇದೂವರೆಗೂ ಮುಂದಾಗಿಲ್ಲ. ತಮ್ಮ ಜಮೀನುಗಳನ್ನು ಸ್ವಚ್ಛಗೊಳಿಸಿ ಬೇರೆ ಹೊಸ ಬೆಳೆ ಬಿತ್ತನೆ ಮಾಡಲು ರೈತರು ಹಣ ಇಲ್ಲದೆ ಪರದಾಡುತ್ತಿದ್ದಾರೆ. ಇದನ್ನೂ ಓದಿ: ಮಾರ್ಷಲ್‍ನನ್ನೇ ಕಾರಿನ ಬಾನೆಟ್ ಮೇಲೆ ಎಳೆದುಕೊಂಡು ಹೋದ ಚಾಲಕ

    ರೈತರಿಗೆ ಇಷ್ಟೆಲ್ಲಾ ಕಷ್ಟಗಳಿದ್ದರೂ, ಸರ್ಕಾರ ಹಣವನ್ನು ಬಿಡುಗಡೆ ಮಾಡಿಲ್ಲ. ಈ ಹಿನ್ನೆಲೆ ಪರಿಹಾರ ಸಿಗದೇ ರೈತರು ಸರ್ವೆ ಹೆಸರಿನಲ್ಲಿ ಕಾಲ ಕಳೆಯುತ್ತಿರುವ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಬೇಗ ಬೆಳೆ ಹಾನಿಗೆ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ತೆರಿಗೆ ವಸೂಲಿ ಮಾಡಲು ಸುಳ್ಳು ಲೆಕ್ಕ ಹೇಳಿ ದಾರಿ ತಪ್ಪಿಸ್ತಿದ್ದಾರೆ – ಸಾರ್ವಜನಿಕರ ಆಕ್ರೋಶ

  • ನನ್ನ ಸ್ವಂತ ಹಣದಿಂದ ಕ್ಷೇತ್ರದ ಜನರಿಗೆ ಪರಿಹಾರ ನೀಡುತ್ತೇನೆ: ಶ್ರೀಮಂತ ಪಾಟೀಲ್

    ನನ್ನ ಸ್ವಂತ ಹಣದಿಂದ ಕ್ಷೇತ್ರದ ಜನರಿಗೆ ಪರಿಹಾರ ನೀಡುತ್ತೇನೆ: ಶ್ರೀಮಂತ ಪಾಟೀಲ್

    ಬೆಳಗಾವಿ: ಸರ್ಕಾರ ನೆರೆ ಪರಿಹಾರ ನೀಡದೇ ಇದ್ದರೆ ನನ್ನ ಸ್ವಂತ ಹಣದಿಂದ ಕ್ಷೇತ್ರದ ಜನರಿಗೆ ಪರಿಹಾರ ನೀಡುತ್ತೇನೆ ಎಂದು ಮಾಜಿ ಸಚಿವ ಹಾಗೂ ಕಾಗವಾಡ ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್ ಹೇಳಿದ್ದಾರೆ.

    ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೆಂಪವಾಡ ಗ್ರಾಮದ ನೆರೆ ಪರಿಹಾರದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೆರೆ ಪೀಡಿತ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ವಿಳಂಬವಾಗುತ್ತಿದೆ. ಈ ಕುರಿತು ನಾನು ಸಿಎಂ ಬಸವರಾಜ ಬೊಮ್ಮಾಯಿ ಅವರ ಬಳಿ ಮಾತನಾಡಿದ್ದೇನೆ. ಅವರಿಗೆ ಪರಿಹಾರ ನೀಡುವಂತೆ ಮನವಿ ಮಾಡಿದ್ದೇನೆ. ಸಿಎಂ ಪರಿಹಾರ ನೀಡುತ್ತಾರೆಂಬ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಇದನ್ನೂ ಓದಿ:ಕಾರು ಅಪಘಾತಕ್ಕೂ ಮುನ್ನ ಮದ್ಯ ಖರೀದಿಸಿದ್ದ ಇಷಿತಾ, ಬಿಂದು

    ಒಂದು ವೇಳೆ ಸರ್ಕಾರ ಪರಿಹಾರ ನೀಡದೇ ಇದ್ದರೆ ನನ್ನ ಜೇಬಿನಿಂದ ನನ್ನ ಕ್ಷೇತ್ರದ ಸಂತ್ರಸ್ತರಿಗೆ ಪರಿಹಾರ ನೀಡುತ್ತೇನೆ. ಪರಿಹಾರ ಸಿಗದ ಕಾರಣ ಕ್ಷೇತ್ರದ ಜನ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದರು. ಯಾರಿಗೂ ಪ್ರತಿಭಟನೆ ಮಾಡದಂತೆ ನಾನು ವಿನಂತಿ ಮಾಡಿಕೊಂಡಿದ್ದೇನೆ ಎಂದು ತಿಳಿಸಿದರು.ಇದನ್ನೂ ಓದಿ:ಹೆಲಿಕಾಪ್ಟರ್ ಗೆ ಮೃತ ದೇಹವನ್ನು ನೇತು ಹಾಕಿ ಹಾರಾಟ – ಮತ್ತೆ ಶುರುವಾಯ್ತು ಉಗ್ರರ ಅಟ್ಟಹಾಸ

    ಪ್ರವಾಹ ಸಂದರ್ಭದಲ್ಲಿ ನದಿ ತೀರದ ಜನರು ತಮ್ಮ ಆಹಾರ ಸಾಮಗ್ರಿ ಹಾಗೂ ಜಾನುವಾರುಗಳ ಸ್ಥಳಾಂತರಕ್ಕೆ ಹಣ ಖರ್ಚು ಮಾಡಿದ್ದಾರೆ. ಹೀಗಾಗಿ ನದಿ ನೀರು ಹೋದ ಮನೆಗಳ ಜೊತೆಗೆ ನದಿ ತೀರದ ಮನೆಗಳಿಗೂ ಪರಿಹಾರ ನೀಡಬೇಕು. ಇಲ್ಲವಾದಲ್ಲಿ ನಾನೇ ನನ್ನ ಜೇಬಿನಿಂದ ಪರಿಹಾರ ನೀಡುತ್ತೇನೆ ಎಂದು ಹೇಳಿದರು.ಇದನ್ನೂ ಓದಿ:ಸಾರ್ವಜನಿಕ ಗಣೇಶೋತ್ಸವ ಸೆಪ್ಟೆಂಬರ್ 5 ರಂದು ತೀರ್ಮಾನ : ಬೊಮ್ಮಾಯಿ

  • ಕಳೆದ ಬಾರಿಯ ನೆರೆ ಪರಿಹಾರವೇ ಬಂದಿಲ್ಲ, ಈ ಬಾರಿ ದೇವರೇ ಗತಿ: ಸತೀಶ್ ಜಾರಕಿಹೊಳಿ

    ಕಳೆದ ಬಾರಿಯ ನೆರೆ ಪರಿಹಾರವೇ ಬಂದಿಲ್ಲ, ಈ ಬಾರಿ ದೇವರೇ ಗತಿ: ಸತೀಶ್ ಜಾರಕಿಹೊಳಿ

    ಬೆಳಗಾವಿ: ಕಳೆದ ಬಾರಿ ಆಗಿರುವ ನೆರೆ ಪರಿಹಾರವೇ ಜನರಿಗೆ ಸಿಕ್ಕಿಲ್ಲ. ಸರ್ಕಾರದ ಆಂತರಿಕ ಕಿತ್ತಾಟದಲ್ಲಿ ಜನರು ಬಲಿಪಶುಗಳಾಗುತ್ತಿದ್ದಾರೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಸತೀಶ ಜಾರಕಿಹೊಳಿ ಆಕ್ರೋಶ ವ್ಯಕ್ತಪಡಿಸಿದರು.

    ನಗರದಲ್ಲಿಂದು ಮಹಿಳಾ ಕಾಂಗ್ರೆಸ್ ಸಮಾರಂಭದಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ನೆರೆ ಹಾನಿಯ ಬಗ್ಗೆ ಅಧ್ಯಯನ ಮಾಡುತ್ತಿದ್ದೇವೆ. ಸಿ.ಎಲ್.ಪಿ ಟೀಮ್ ನಿಂದ ಈಗಾಗಲೇ ಎಲ್ಲೆಲ್ಲಿ ಹಾನಿಯಾಗಿದೆಯೋ ಅಲ್ಲಿ ಪರಿಹಾರ ನೀಡುವಂತೆ ಜಿಲ್ಲಾಡಳಿತದ ಗಮನಕ್ಕೆ ತರಲಾಗುತ್ತದೆ ಎಂದು ಅವರು ಹೇಳಿದರು.

    ಚುನಾವಣೆಗೆ ಇನ್ನೂ ಅಭ್ಯರ್ಥಿಗಳನ್ನು ನಿಶ್ಚಯ ಮಾಡಿಲ್ಲ. ಕಾಂಗ್ರೆಸ್ ಬೇರೆ, ಜೆಡಿಎಸ್ ಬೇರೆ ನಮ್ಮ ಕಾರ್ಯವೈಖರಿ ಭಿನ್ನವಾಗಿದೆ. ಬಿಜೆಪಿಯವರು ಸುಮಾರು ಎರಡು ವರ್ಷಗಳಿಂದ ಕಿತ್ತಾಟ ನಡೆಸುತ್ತಿದ್ದಾರೆ. ಅವರಿಗೆ ಅಧಿಕಾರ ಬೇಕಿದೆಯೇ ಹೊರತು ಜನರ ಯೋಗಕ್ಷೇಮ ಬೇಕಿಲ್ಲ ಎಂದರು.

  • ನೆರೆ ಪೀಡಿತ ಜಿಲ್ಲೆಗಳ ಡಿಸಿಗಳೊಂದಿಗೆ ಸಿಎಂ ಸಭೆ

    ನೆರೆ ಪೀಡಿತ ಜಿಲ್ಲೆಗಳ ಡಿಸಿಗಳೊಂದಿಗೆ ಸಿಎಂ ಸಭೆ

    ಬೆಂಗಳೂರು: ನೆರೆ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಡಿಯೋ ಸಂವಾದ ನಡೆಸಿದರು. ಮಳೆಯಿಂದ ಆಗುತ್ತಿರುವ ಹಾನಿ ಹಾಗೂ ಕೈಗೊಳ್ಳಲಾಗಿರುವ ಪರಿಹಾರ ಕ್ರಮಗಳ ಕುರಿತು ಮಾಹಿತಿ ಪಡೆದು ಸೂಚನೆಗಳನ್ನು ನೀಡಿದರು.

    ಕೊಡಗು, ಬಳ್ಳಾರಿ, ಹಾಸನ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಮಂಗಳೂರು, ಚಿಕ್ಕಮಗಳೂರು, ವಿಜಯಪುರ, ಕಲಬುರಗಿ, ಮೈಸೂರು, ಕೊಪ್ಪಳ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಕಳೆದ 8 ದಿನಗಳಿಂದ ಹೆಚ್ಚಿನ ಮಳೆಯಾಗುತ್ತಿದ್ದು, ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿ ಪರಿಹಾರ ಕ್ರಮಗಳನ್ನು ತುರ್ತಾಗಿ ಕೈಗೊಳ್ಳುವಂತೆ ಸೂಚಿಸಿದರು.

    ಪ್ರವಾಹ ತಡೆಗಟ್ಟಲು ಅತ್ಯಾಧುನಿಕ ಉಪಕರಣಗಳನ್ನು ಖರೀದಿಸಲು ಹಣ ಬಿಡುಗಡೆ ಮಾಡಲಾಗುವುದು. ಜಿಲ್ಲಾಧಿಕಾರಿಗಳ ಪಿಡಿ ಖಾತೆಗಳಲ್ಲಿ ಈಗಾಗಲೇ ಲಭ್ಯವಿರುವ ಮೊತ್ತವನ್ನು ಪ್ರವಾಹ ಪರಿಸ್ಥಿತಿ ನಿಭಾಯಿಸಲು ಬಳಕೆ ಮಾಡಬೇಕು. ನದಿ ಮತ್ತು ಭೂಕುಸಿತ ಉಂಟಾಗುವ ಸ್ಥಳಗಳನ್ನು ಗುರುತಿಸಲು ವಿಶೇಷ ತಂಡವನ್ನು ರಚಿಸಲು ಕ್ರಮಕೈಗೊಳ್ಳಬೇಕು. ಭೂಕುಸಿತ ಉಂಟಾಗಬಹುದಾದ ಪ್ರದೇಶಗಳಲ್ಲಿರುವ ಜನರನ್ನು ಮುಂಚಿತವಾಗಿಯೇ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಬೇಕು ಎಂದು ತಿಳಿಸಿದರು.

    ಬೆಳೆ ನಷ್ಟ ಉಂಟಾಗಿರುವ ಬಗ್ಗೆ ಸಮೀಕ್ಷೆ ನಡೆಸಿ, ವರದಿ ಪಡೆದು, ಪರಿಹಾರ ವಿತರಣೆಗೆ ತಕ್ಷಣವೇ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಕಂದಾಯ ಸಚಿವ ಆರ್.ಅಶೋಕ್, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಕೃಷಿ ಸಚಿವ ಬಿ.ಸಿ.ಪಾಟೀಲ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು.

  • ಶಾಲಾ-ಕಾಲೇಜುಗಳ ಬೋಧಕೇತರ ಸಿಬ್ಬಂದಿಗೂ ಪರಿಹಾರ ಕೊಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

    ಶಾಲಾ-ಕಾಲೇಜುಗಳ ಬೋಧಕೇತರ ಸಿಬ್ಬಂದಿಗೂ ಪರಿಹಾರ ಕೊಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

    ಬೆಂಗಳೂರು: ಖಾಸಗಿ ಅನುದಾನಿತ ಶಾಲೆ-ಕಾಲೇಜುಗಳಲ್ಲಿ ಸರ್ಕಾರಿ ಸಂಬಳ ಪಡೆಯದೇ ದುಡಿಯುತ್ತಿರುವ ಎಲ್ಲಾ ಸಿಬ್ಬಂದಿಗಳಿಗೂ ಪರಿಹಾರ ಘೋಷಿಸಬೇಕು ಎಂದು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

    ಕೊರೊನಾ ಸಂಕಷ್ಟಕ್ಕೆ ಸಿಲುಕಿ ಒದ್ದಾಡುತ್ತಿರುವ ರಾಜ್ಯದ ಜನರಿಗೆ ಸರ್ಕಾರ ಬಿಡಿಗಾಸಿನ ಪರಿಹಾರದ ಪ್ಯಾಕೇಜ್ ಘೋಷಿಸಿದೆ. ಅದರಲ್ಲಿ ಅನುದಾನ ರಹಿತ ಶಾಲೆಗಳ ಶಿಕ್ಷಕರಿಗೂ ಸೇರಿಸಿದ್ದಾರೆ. ಈ ಪ್ಯಾಕೇಜ್‍ನ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಲು ಜೂನ್ 14 ಕೊನೆಯ ದಿನ ಎಂದು ತಿಳಿಸಲಾಗಿದೆ. ಆದರೆ ಈ ಪ್ಯಾಕೇಜ್ ಘೋಷಿಸುವಾಗ ಸರ್ಕಾರ ಖಾಸಗಿ ಅನುದಾನಿತ ಶಾಲೆಗಳ ಖಾಯಂ ಅಲ್ಲದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯನ್ನು ಕೈ ಬಿಟ್ಟಿದೆ. ಅನುದಾನಿತ ಶಾಲೆ-ಕಾಲೇಜುಗಳಲ್ಲೂ 3-5 ಸಾವಿರ ರೂಪಾಯಿ ಮಾತ್ರ ಪಡೆದು ಕೆಲಸ ಮಾಡುವ ಸಾಕಷ್ಟು ಮಂದಿ ಅತಿಥಿ ಶಿಕ್ಷಕರು, ಉಪನ್ಯಾಸಕರು, ಸಿಬ್ಬಂದಿಗಳು ಇದ್ದಾರೆ. ಬಹು ದೊಡ್ಡ ಸಂಖ್ಯೆಯಲ್ಲಿರುವ ಇವರನ್ನು ಸರ್ಕಾರದ ಪ್ಯಾಕೇಜ್‍ನಲ್ಲಿ ಸೇರಿಸದಿರುವುದು ನ್ಯಾಯಸಮ್ಮತವಲ್ಲ.

    ಮೊದಲ ಅಲೆಯಲ್ಲೂ ಅನುದಾನಿತ ಶಾಲೆ ಕಾಲೇಜುಗಳ ಸಿಬ್ಬಂದಿ ಹೈರಾಣಾಗಿದ್ದರು. ಆಗಲೂ ಸರ್ಕಾರ ಇವರ ನೆರವಿಗೆ ಬರಲಿಲ್ಲ. ಒಂದೂವರೆ ವರ್ಷದಿಂದ ಸಂಬಳಗಳಿಲ್ಲದೆ ಈ ಕುಟುಂಬಗಳು ವಿಪರೀತ ಸಂಕಷ್ಟದಲ್ಲಿವೆ. ಖಾಸಗಿ ಅನುದಾನಿತ ಶಾಲಾ-ಕಾಲೇಜುಗಳ ಅತಿಥಿ ಶಿಕ್ಷಕರು ಬೀದಿ ಬದಿ ತರಕಾರಿ, ಹೂ, ಹಣ್ಣು ಮಾರಾಟ ಮಾಡುತ್ತಿರುವುದು, ನರೇಗಾ ಕೂಲಿ ಕೆಲಸಕ್ಕೆ ಹೋಗಿರುವ ಅಸಂಖ್ಯಾತ ಪ್ರಕರಣಗಳನ್ನು ಹಾಗೂ ಸಂಕಷ್ಟ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳನ್ನು ಮಾಧ್ಯಮಗಳು ವರದಿ ಮಾಡಿವೆ.

    ಸಾಮಾಜಿಕ ತಾಣಗಳಲ್ಲಿ ಇವರು ತಮ್ಮ ಕಷ್ಟಗಳನ್ನು ಹೇಳಿಕೊಂಡಿದ್ದಾರೆ. ಇಷ್ಟಾದರೂ ಸರ್ಕಾರ ಇವರ ಕಡೆಗೆ ಗಮನ ಹರಿಸದಿರುವುದು ಅಕ್ಷಮ್ಯ ಸಂಗತಿ. ಮಕ್ಕಳಿಗೆ ಪಾಠ ಮಾಡುವ ಈ ಸಿಬ್ಬಂದಿ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲಾಗದ ಸ್ಥಿತಿಯಲ್ಲಿದ್ದಾರೆ. ಇದನ್ನೂ ಓದಿ: ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಎಲ್ಲದಕ್ಕೂ ಕ್ಯೂ: ಡಿ.ಕೆ.ಶಿವಕುಮಾರ್ ತರಾಟೆ

    ಸರ್ಕಾರದ ಪ್ಯಾಕೇಜ್‍ನಲ್ಲಿ ಖಾಸಗಿ ಕಾಲೇಜುಗಳ ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪರಿಹಾರ ಘೋಷಿಸಿಲ್ಲ. ಅವರಿಗೂ ಪರಿಹಾರ ಘೋಷಿಸಬೇಕು. ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಬೇಕು. ಅಥವಾ ಅರ್ಜಿ ಕರೆದು ಭಿಕ್ಷೆಯಂತೆ ಒಂದೆರಡು ಸಾವಿರ ನೀಡುವ ಬದಲಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ಈ ಸಿಬ್ಬಂದಿಗಳ ವಿವರಗಳನ್ನು ಪಡೆದು ನೇರವಾಗಿ ಅವರ ಖಾತೆಗಳಿಗೆ ಪರಿಹಾರದ ಹಣವನ್ನು ವರ್ಗಾಯಿಸಬೇಕೆಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಜನಸಾಮಾನ್ಯರು ಕೋವಿಡ್ ಚಿಕಿತ್ಸೆಗೆ ಕಟ್ಟಿರುವ ಹಣ ಹಿಂದಿರುಗಿಸಿ ಸರ್ಕಾರಕ್ಕೆ ಡಿ.ಕೆ.ಶಿವಕುಮಾರ್ ಮನವಿ

  • ಚಾಕೇನಹಳ್ಳಿ ಸ್ಫೋಟ ಪ್ರಕರಣ- ಮೃತರ ಕುಟುಂಬಗಳಿಗೆ ಪರಿಹಾರದ ಚೆಕ್ ನೀಡಿದ ಸಚಿವ ಗೋಪಾಲಯ್ಯ

    ಚಾಕೇನಹಳ್ಳಿ ಸ್ಫೋಟ ಪ್ರಕರಣ- ಮೃತರ ಕುಟುಂಬಗಳಿಗೆ ಪರಿಹಾರದ ಚೆಕ್ ನೀಡಿದ ಸಚಿವ ಗೋಪಾಲಯ್ಯ

    ಹಾಸನ: ಜಿಲೆಟಿನ್ ರೀತಿಯ ವಸ್ತು ಸಿಡಿದು ಮೃತಪಟ್ಟ ಮೂವರ ಕುಟುಂಬಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಪರಿಹಾರದ ಚೆಕ್ ವಿತರಿಸಿದರು.

    ಜಿಲೆಟಿನ್ ರೀತಿಯ ಸ್ಫೋಟಕ ಸಿಡಿದು ಮೂವರು ಮೃತಪಟ್ಟಿದ್ದ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಚಾಕೇನಹಳ್ಳಿಯಲ್ಲಿ ನಡೆದಿತ್ತು. ಈ ವೇಳೆ ಮೂವರು ಸಾವನ್ನಪ್ಪಿದ್ದರು. ಇವರ ಕುಟುಂಬಗಳಿಗೆ ಇದೀಗ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ರೂ.ಗಳ ಚೆಕ್‍ನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ವಿತರಿಸಿದರು. ಇದನ್ನೂ ಓದಿ: ಚಾಕೇನಹಳ್ಳಿ ಸ್ಫೋಟ ಪ್ರಕರಣ- ಸಚಿವ, ಸಂಸದ, ಶಾಸಕರು ಸ್ಥಳಕ್ಕೆ ಭೇಟಿ, ಪರಿಶೀಲನೆ

    ನಂತರ ಮಾತನಾಡಿದ ಅವರು, ಮೃತರ ಕುಟುಂಬದ ನಿರ್ವಹಣೆಗಾಗಿ 5 ಲಕ್ಷ ರೂ.ಗಳ ಚಕ್‍ನ್ನು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ವಿತರಿಸಲಾಗಿದೆ. ಇನ್ನೂ 7.5 ಲಕ್ಷ ರೂ.ಗಳನ್ನು ಗಣಿ ಮಾಲೀಕರಿಂದ ನೀಡಲಾಗುತ್ತದೆ ಎಂದು ತಿಳಿದಿದರು. ಈ ವೇಳೆ ಶಾಸಕ ಬಾಲಕೃಷ್ಣ, ಜಿಲ್ಲಾಧಿಕಾರಿ ಗಿರೀಶ್, ಅಪರ ಜಿಲ್ಲಾಧಿಕಾರಿ ಕವಿತ ರಾಜ್, ಸಿಇಒ ಪರಮೇಶ್, ಸಚಿವರ ಆಪ್ತ ಕಾರ್ಯದರ್ಶಿ ಕಾಂತರಾಜ್ ಉಪಸ್ಥಿತರಿದ್ದರು.

  • ಸರಕಾರದ ಕ್ರಮಕ್ಕೆ ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ಸ್ವಾಗತ

    ಸರಕಾರದ ಕ್ರಮಕ್ಕೆ ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ಸ್ವಾಗತ

    ಬೆಂಗಳೂರು: ಕೊರೊನಾ ಪರಿಹಾರ ಪ್ಯಾಕೇಜ್‍ನಲ್ಲಿ ಮಸ್ಜಿದ್ ಇಮಾಮರಿಗೂ ಸಹಾಯ ಧನ ಘೋಷಿಸಿರುವ ರಾಜ್ಯ ಸರಕಾರದ ಕ್ರಮವನ್ನು ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ರಾಜ್ಯಾಧ್ಯಕ್ಷ ಹಝ್ರತ್ ಮೌಲಾನಾ ಅತೀಕುರ್ ರಹ್ಮಾನ್ ಅಶ್ರಫಿ ಸ್ವಾಗತಿಸಿದ್ದಾರೆ.

    ಕೋವಿಡ್ ನಿಗ್ರಹಕ್ಕಾಗಿ ವಿಧಿಸಲಾಗಿದ್ದ ಲಾಕ್‍ಡೌನ್ ವೇಳೆ ರಾಜ್ಯ ಸರಕಾರವು ದೇವಸ್ಥಾನಗಳ ಅರ್ಚಕರಿಗೆ ಪರಿಹಾರ ಘೋಷಿಸಿತ್ತು. ಅದರಂತೆ ಮಸ್ಜಿದ್ ಇಮಾಮರಿಗೂ ಪರಿಹಾರ ಘೋಷಿಸಬೇಕೆಂದು ಈ ಮುನ್ನ ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ರಾಜ್ಯಾಧ್ಯಕ್ಷ ಮೌಲಾನಾ ಅತೀಕುರ್ರಹ್ಮಾನ್ ಅಶ್ರಫಿರವರು ಮನವಿ ಮಾಡಿಕೊಂಡಿದ್ದರು.

    ಕೊರೊನಾ ಮತ್ತು ಲಾಕ್ ಡೌನ್ ಸಂಕಷ್ಟದ ಪ್ರಾರಂಭದಿಂದಲೂ ಮಸ್ಜಿದ್ ಇಮಾಮರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಜೀವನ ನಿರ್ವಹಣೆಗಾಗಿ ಆದಾಯವಿಲ್ಲದೆ ಅವರು ತೀವ್ರ ಸಂಕಷ್ಟವನ್ನು ಎದುರಿಸುತ್ತಿದ್ದರು. ಇದನ್ನು ಮನಗಂಡಿದ್ದ ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್, ಇಮಾಮರಿಗೆ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಸರಕಾರವನ್ನು ನಿರಂತರವಾಗಿ ಆಗ್ರಹಿಸುತ್ತಾ ಬಂದಿತ್ತು. ಪತ್ರಿಕಾ ಪ್ರಕಟನೆ ಮೂಲಕ ಮತ್ತು ಶಾಸಕರು ಹಾಗೂ ಸರಕಾರದ ಅಧಿಕೃತರನ್ನು ಸಂಪರ್ಕಿಸಿ ತನ್ನ ಬೇಡಿಕೆಯನ್ನು ಮುಂದಿಟ್ಟಿತ್ತು. ಇದೀಗ ಪರಿಹಾರ ಪ್ಯಾಕೇಜ್ ನಲ್ಲಿ ಮಸ್ಜಿದ್ ಇಮಾಮರು ಮತ್ತು ಮುಅಝ್ಝಿನ್ ಗಳನ್ನು ಪರಿಗಣಿಸಿರುವುದು ಸಂತಸದ ವಿಚಾರವಾಗಿದೆ ಮತ್ತು ಇದಕ್ಕಾಗಿ ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ರಾಜ್ಯ ಸರಕಾರಕ್ಕೆ ಅಭಿನಂದನೆಯನ್ನು ಸಲ್ಲಿಸಿದೆ. ಇದನ್ನು ಓದಿ: ಕೊರೊನಾ ನಿಯಮ ಉಲ್ಲಂಘನೆ-ಹುಟ್ಟುಹಬ್ಬ ಆಚರಿಸಿಕೊಂಡ ಸಬ್ ಇನ್‌ಸ್ಪೆಕ್ಟರ್

    ಪರಿಹಾರ ವಿತರಣೆಯ ಪ್ರಕ್ರಿಯೆಯನ್ನು ಸರಳಗೊಳಿಸಬೇಕು ಮತ್ತು ಸಂಕಷ್ಟದಲ್ಲಿರುವ ಎಲ್ಲಾ ಇಮಾಮರಿಗೂ ಸಮರ್ಪಕವಾಗಿ ಸಹಾಯಧನ ತಲುಪಿಸಲು ಕ್ರಮಕೈಗೊಳ್ಳಬೇಕು. ಅದೇ ರೀತಿ ಈ ಪರಿಹಾರ ಪ್ಯಾಕೇಜನ್ನು ರಾಜ್ಯದಲ್ಲಿರುವ ಮದ್ರಸ ಅಧ್ಯಾಪಕರಿಗೂ ವಿಸ್ತರಿಸಬೇಕೆಂದು ಮೌಲಾನಾ ಅತೀಕುರ್ ರಹ್ಮಾನ್ ಅಶ್ರಫಿ ಒತ್ತಾಯಿಸಿದ್ದಾರೆ. ಇದನ್ನು ಓದಿ:ಅಧಿಕಾರಿಗಳ ಮಧ್ಯೆ ಸಂಘರ್ಷ – ಎಲ್ಲವನ್ನೂ ಚಾಮುಂಡಿ ತಾಯಿ ನೋಡುತ್ತಿದ್ದಾಳೆ ಎಂದ ಎಸ್‍ಟಿಎಸ್