Tag: religion

  • ಮತಾಂತರ ಮಾಡಿದ್ರೆ 10 ವರ್ಷ ಜೈಲು – ಹಿಮಾಚಲ ಪ್ರದೇಶದಲ್ಲಿ ಸಾಮೂಹಿಕ ಮತಾಂತರ ನಿಷೇಧ

    ಮತಾಂತರ ಮಾಡಿದ್ರೆ 10 ವರ್ಷ ಜೈಲು – ಹಿಮಾಚಲ ಪ್ರದೇಶದಲ್ಲಿ ಸಾಮೂಹಿಕ ಮತಾಂತರ ನಿಷೇಧ

    ಶಿಮ್ಲಾ: ಹಿಮಾಚಲ ಪ್ರದೇಶದ ಸರ್ಕಾರವು ರಾಜ್ಯದಲ್ಲಿ ಸಾಮೂಹಿಕ ಮತಾಂತರವನ್ನು ನಿಷೇಧಿಸಿದ್ದು, ಬಲವಂತದಿಂದ ಮತಾಂತರ ಮಾಡುವವರಿಗೆ 10 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿದೆ.

    ಪ್ರಸಕ್ತ ವರ್ಷದ ಅಂತ್ಯಕ್ಕೆ ಹಿಮಾಚಲ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೂ ಮುನ್ನ ಸರ್ಕಾರ ಈ ಕಾನೂನು ಕ್ರಮವನ್ನು ಜರುಗಿಸಲಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ತಮಿಳುನಾಡು ಸಚಿವರ ಕಾರಿಗೆ ಚಪ್ಪಲಿ ಎಸೆತ – 5 ಬಿಜೆಪಿ ಕಾರ್ಯಕರ್ತರ ಬಂಧನ

    ಜೈ ರಾಮ್ ಠಾಕೂರ್ ನೇತೃತ್ವದ ಸರ್ಕಾರ ಹಿಮಾಚಲ ಪ್ರದೇಶ ವಿಧಾನಸಭೆಯಲ್ಲಿ ಮತಾಂತರ ನಿಷೇಧ ತಿದ್ದುಪಡಿ ವಿಧೇಯಕವನ್ನು ಮಂಡಿಸಲಾಯಿತು. ಇಲ್ಲಿ ಸಾಮೂಹಿಕ ಮತಾಂತರ ನಿಷೇಧಿಸುವ ಮಸೂದೆಯನ್ನು ಅಂಗೀಕರಿಸಿತು. ಅಲ್ಲದೇ 2019ರ ಕಾನೂನಿನ ಅನ್ವಯ ಯಾವುದೇ ಧರ್ಮಕ್ಕೆ ಮತಾಂತರ ಮಾಡುವವರಿಗೆ ಗರಿಷ್ಠ 10 ವರ್ಷಗಳ ಕಾಲ ಶಿಕ್ಷೆ ವಿಧಿಸುವುದಾಗಿ ನಿರ್ಧರಿಸಿತು. ಇದೇ ವೇಳೆ ಹಿಮಾಚಲ ಪ್ರದೇಶ ಧಾರ್ಮಿಕ ಸ್ವಾತಂತ್ರ‍್ಯ (ತಿದ್ದುಪಡಿ) ಮಸೂದೆ-2022 ಅನ್ನು ಧ್ವನಿ ಮತದೊಂದಿಗೆ ಸರ್ವಾನುಮತದಿಂದ ಅಂಗೀಕರಿಲ್ಪಟ್ಟಿತು.

    ಇತ್ತೀಚೆಗೆ ಇಬ್ಬರು ಅಥವಾ ಅದಕ್ಕಿಂತಲೂ ಹೆಚ್ಚಿನವರನ್ನು ಏಕಕಾಲದಲ್ಲಿ ಮತಾಂತರಗೊಳಿಸುತ್ತಿದ್ದಾರೆ. ಅದಕ್ಕಾಗಿ ಮತಾಂತರ ಶಿಕ್ಷೆಯ ಪ್ರಮಾಣವನ್ನು 7 ರಿಂದ 10 ವರ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಮಸೂದೆಯಲ್ಲಿ ಸಭೆಯಲ್ಲಿ ಠಾಕೂರ್ ಉಲ್ಲೇಖಿಸಿದರು. ಇದನ್ನೂ ಓದಿ: ಒಡಿಶಾ ಸರ್ಕಾರದಿಂದ ನವ ವಿವಾಹಿತರಿಗೆ ಕಾಂಡೋಮ್, ಪ್ರೆಗ್ನೆನ್ಸಿ ಟೂಲ್ ಹೊಂದಿದ `ವೆಡ್ಡಿಂಗ್ ಕಿಟ್’ ಗಿಫ್ಟ್

    ಜೈ ರಾಮ್ ಠಾಕೂರ್ ನೇತೃತ್ವದ ಸರ್ಕಾರವು ಶುಕ್ರವಾರ ಹಿಮಾಚಲ ಪ್ರದೇಶ ಧರ್ಮದ ಸ್ವಾತಂತ್ರ‍್ಯ (ತಿದ್ದುಪಡಿ) ಮಸೂದೆ, 2022 ಅನ್ನು ಪರಿಚಯಿಸಿತು. ಇದು 18 ತಿಂಗಳುಗಳ ಹಿಂದಷ್ಟೇ ಜಾರಿಗೆ ಬಂದ ಹಿಮಾಚಲ ಪ್ರದೇಶದ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆ -2019ರ ಹೆಚ್ಚು ಕಟ್ಟುನಿಟ್ಟಾದ ವಿಧೇಯಕವಾಗಿದೆ.

    2019ರ ಮಸೂದೆಯನ್ನು ಡಿಸೆಂಬರ್ 21, 2020 ರಂದು ಅಂದರೆ ರಾಜ್ಯ ವಿಧಾನಸಭೆಯಲ್ಲಿ ಅಂಗೀಕರಿಸಲ್ಪಟ್ಟ 15 ತಿಂಗಳ ನಂತರ ಅಧಿಸೂಚನೆ ಹೊರಡಿಸಲಾಗಿತ್ತು. 2019ರ ಕಾಯ್ದೆಯು 2006ರ ಕಾನೂನನ್ನು ಬದಲಿಸಿದೆ. ಆದರೆ, ಈ ಕಾಯ್ದೆ ಕಡಿಮೆ ಶಿಕ್ಷೆಯನ್ನು ಸೂಚಿಸಿದೆ. ಇನ್ನೊಂದೆಡೆ, ಶುಕ್ರವಾರ ಮಂಡಿಸಲಾಗಿರುವ ತಿದ್ದುಪಡಿ ಮಸೂದೆಯು ಬಲವಂತದ ಮತಾಂತರದ ಶಿಕ್ಷೆಯನ್ನು ಗರಿಷ್ಠ 7 ವರ್ಷಗಳಿಂದ ಗರಿಷ್ಠ 10 ವರ್ಷಗಳಿಗೆ ಹೆಚ್ಚಿಸಲು ಪ್ರಸ್ತಾಪಿಸುತ್ತದೆ ಎಂದು ಒತ್ತಿ ಹೇಳಿದರು. ಇದನ್ನೂ ಓದಿ: ನಿಮ್ಮ ಸ್ಪೂರ್ತಿದಾಯಕ ಸಾಧನೆಯೊಂದಿಗೆ ದೇಶವು ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಕಾಲಿಡುತ್ತಿರುವುದು ವಿಶೇಷ: ಮೋದಿ

    2019ರ ಕಾಯ್ದೆಯೂ ಸಾಮೂಹಿಕ ಮತಾಂತರವನ್ನು ತಡೆಯುವ ಅವಕಾಶಗಳನ್ನು ಹೊಂದಿಲ್ಲ. ಅದಕ್ಕಾಗಿ ಪರಿಣಾಮಕಾರಿ ನಿಬಂಧನೆಗಳನ್ನು ಮಾಡಲಾಗುತ್ತಿದೆ ಎಂದು ಅವರು ಪ್ರಸ್ತಾಪಿಸಿದರು.

    ಬಿಜೆಪಿಯು ಮತಾಂತರ-ವಿರೋಧಿ ಕಾನೂನುಗಳ ಧ್ವನಿಯನ್ನು ಬೆಂಬಲಿಸುತ್ತಿದ್ದು, ಅನೇಕ ಪಕ್ಷ-ಆಡಳಿತ ರಾಜ್ಯಗಳು ಇದೇ ರೀತಿಯ ಕಾನೂನು ಕ್ರಮಗಳನ್ನು ಪರಿಚಯಿಸಿವೆ ಎಂದು ಹೇಳಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಧರ್ಮ, ಸಿದ್ಧಾಂತದ ಹೆಸರಿನಲ್ಲಿ ಕೆಲವರು ಸಂಘರ್ಷ ಸೃಷ್ಟಿಸುತ್ತಿದ್ದಾರೆ: ಅಜಿತ್ ದೋವಲ್

    ಧರ್ಮ, ಸಿದ್ಧಾಂತದ ಹೆಸರಿನಲ್ಲಿ ಕೆಲವರು ಸಂಘರ್ಷ ಸೃಷ್ಟಿಸುತ್ತಿದ್ದಾರೆ: ಅಜಿತ್ ದೋವಲ್

    ನವದೆಹಲಿ: ಕೆಲವರು ಧರ್ಮ ಹಾಗೂ ಸಿದ್ಧಾಂತದ ಹೆಸರಿನಲ್ಲಿ ಸಂಘರ್ಷ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಇದು ದೇಶದ ಮೇಲೆ ಪರಿಣಾಮ ಬೀರುತ್ತಿದೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಶನಿವಾರ ಎಚ್ಚರಿಕೆ ನೀಡಿದರು.

    ದೆಹಲಿಯಲ್ಲಿ ನಡೆದ ಸರ್ವಧರ್ಮ ಸಮ್ಮೇಳನದಲ್ಲಿ ಮಾತನಾಡಿದ ದೋವಲ್, ಕೆಲವು ಅಂಶಗಳು ಭಾರತದ ಪ್ರಗತಿಯನ್ನು ಹಾಳು ಮಾಡುವ ವಾತಾವರಣವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿವೆ. ಧರ್ಮ, ಸಿದ್ಧಾಂತದ ಹೆಸರಿನಲ್ಲಿ ಕ್ರೌರ್ಯ ಹಾಗೂ ಘರ್ಷಣೆಯನ್ನು ಸೃಷ್ಟಿಸುತ್ತಿದ್ದಾರೆ. ಇದು ಇಡೀ ದೇಶದ ಮೇಲೆ ಪರಿಣಾಮ ಬೀರುತ್ತಿದೆ ಹಾಗೂ ದೇಶದ ಹೊರಗೂ ಹರಡುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಗೃಹ ಸಚಿವರ ಮನೆಗೆ ಮುತ್ತಿಗೆ ಪ್ರಕರಣ – ಇಬ್ಬರು ಪೊಲೀಸರು ಅಮಾನತು

    ಜಾಗತಿಕ ಸಂಘರ್ಷವನ್ನು ಹೋಗಲಾಡಿಸಲು ದೇಶದಲ್ಲಿ ಏಕತೆಯನ್ನು ಕಾಪಾಡಬೇಕು. ಜಗತ್ತಿನಲ್ಲಿ ಸಂಘರ್ಷದ ವಾತಾವರಣವಿದೆ. ನಾವು ಆ ವಾತಾವರಣವನ್ನು ನಿಭಾಯಿಸಬೇಕಾದರೆ, ದೇಶದ ಏಕತೆಯನ್ನು ಒಟ್ಟಾಗಿ ಕಾಪಾಡಿಕೊಳ್ಳುವುದು ಮುಖ್ಯ ಎಂದರು. ಇದನ್ನೂ ಓದಿ: ಖಾದಿ ಧ್ವಜಕ್ಕೆ ಬೆಲೆ ಜಾಸ್ತಿ, 10 ಕೋಟಿ ಧ್ವಜ ತಯಾರಿಸುವುದು ಅಸಾಧ್ಯ: ಪ್ರಹ್ಲಾದ್ ಜೋಶಿ

    ನಾವು ಮೂಕ ಪ್ರೇಕ್ಷಕರಾಗುವ ಬದಲು, ನಮ್ಮ ಧ್ವನಿಯನ್ನು ಬಲಪಡಿಸುವುದರೊಂದಿಗೆ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಬೇಕು. ನಾವು ಭಾರತದ ಪ್ರತಿಯೊಂದು ಪಂಗಡದವರು ಒಟ್ಟಾಗಿ ಒಂದು ದೇಶ ಎಂದು ಭಾವಿಸಬೇಕು. ನಾವು ಅದರ ಬಗ್ಗೆ ಹೆಮ್ಮೆಪಡಬೇಕು ಎಂದು ದೋವಲ್ ತಿಳಿ ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • ಯಾವುದೇ ಧರ್ಮವೂ ಕೆಲವರ ಮಾತಿನಿಂದ ನಂಬಿಕೆ ಕೆಡಿಸುವಷ್ಟು ದುರ್ಬಲವಲ್ಲ: ಪ್ರಿಯಾಂಕ ಚತುರ್ವೇದಿ

    ಯಾವುದೇ ಧರ್ಮವೂ ಕೆಲವರ ಮಾತಿನಿಂದ ನಂಬಿಕೆ ಕೆಡಿಸುವಷ್ಟು ದುರ್ಬಲವಲ್ಲ: ಪ್ರಿಯಾಂಕ ಚತುರ್ವೇದಿ

    ನವದೆಹಲಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ಬಿಜೆಪಿ ವಕ್ತಾರೆ ನೀಡಿದ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ಶಿವಸೇನಾ ಸಂಸದೆ ಪ್ರಿಯಾಂಕ ಚತುರ್ವೇದಿ, ಇಸ್ಲಾಮಿಕ್ ಭಯೋತ್ಪಾದಕ ಗುಂಪುಗಳ ಬೆದರಿಕೆಗಳನ್ನು ನಿಸ್ಸಂದಿಗ್ಧವಾಗಿ ಖಂಡಿಸಬೇಕು ಎಂದು ಕರೆ ನೀಡಿದ್ದಾರೆ.

    ಧಾರ್ಮಿಕ ಭಾವನೆಗಳ ಮೇಲಿನ ಗೌರವ ಮತ್ತು ಅದರ ಆಧಾರದ ಮೇಲೆ ಬೆದರಿಕೆಯೊಡ್ಡುತ್ತಿರುವುದರ ನಡುವಿನ ವ್ಯತ್ಯಾಸವನ್ನು ಒತ್ತಿಹೇಳಿದ ಚತುರ್ವೇದಿ, ಯಾವುದೇ ಧರ್ಮವು ಕೆಲವೇ ಕೆಲವರ ಮಾತುಗಳಿಂದ ಅವರ ನಂಬಿಕೆ ಕೆಡಿಸುವಷ್ಟು ದುರ್ಬಲವಾಗಿರುವುದಿಲ್ಲ. ಹಾಗಾಗಿ ಅಲ್-ಖೈದಾದಂತಹ ಇಸ್ಲಾಮಿಕ್ ಭಯೋತ್ಪಾದಕ ಗುಂಪುಗಳ ಬೆದರಿಕೆಗಳನ್ನು ಮಧ್ಯಪ್ರಾಚ್ಯ ರಾಷ್ಟ್ರಗಳು ನಿಸ್ಸಂದಿಗ್ಧವಾಗಿ ಖಂಡಿಸಬೇಕು ಎಂದು ಸಲಹೆ ನೀಡಿದ್ದಾರೆ.

    ಧಾರ್ಮಿಕ ಭಾವನೆಗಳನ್ನು ಗೌರವಿಸುವುದು ಒಂದು ಬಗೆ, ಅದರ ಆಧಾರದ ಮೇಲೆಯೇ ಬೆದರಿಕೆಗಳನ್ನು ನೀಡುವುದು ಇನ್ನೊಂದು ಬಗೆ. ಆದರೆ ಕೆಲವರ ಮಾತುಗಳು ಧರ್ಮದ ಮೇಲಿನ ನಂಬಿಕೆಯನ್ನೇ ಕೆಡಿಸಬಹುದು ಎನ್ನುವಷ್ಟು ಯಾವುದೇ ಧರ್ಮವೂ ದುರ್ಬಲವಾಗಿಲ್ಲ ಎಂದು ಅವರು ಒತ್ತಿ ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾಗೆ ಮುಂಬೈ ಪೊಲೀಸರಿಂದ ಸಮನ್ಸ್

    ಭಯೋತ್ಪಾದಕ ಸಂಘಟನೆ ಅಲ್-ಖೈದಾ ಗುಜರಾತ್, ಉತ್ತರ ಪ್ರದೇಶ, ಮುಂಬೈ ಮತ್ತು ದೆಹಲಿಯಲ್ಲಿ ಆತ್ಮಾಹುತಿ ದಾಳಿ ನಡೆಸುವುದಾಗಿ ಬೆದರಿಕೆ ಪತ್ರವನ್ನು ಬಿಡುಗಡೆ ಮಾಡಿದೆ ಎಂದು ವರದಿಯಾಗಿದೆ. ನಮ್ಮ ಪ್ರವಾದಿಯ ಘನತೆಗಾಗಿ ಹೋರಾಡಿ ಎಂದು ಪತ್ರದಲ್ಲಿ ಬರೆದಿದ್ದಾರೆ. ಅಲ್ ಖೈದಾ ಅಂಗಸಂಸ್ಥೆಯು ಕೇಸರಿ ಭಯೋತ್ಪಾದಕರು ಈಗ ದೆಹಲಿ, ಮುಂಬೈ, ಉತ್ತರಪ್ರದೇಶ ಹಾಗೂ ಗುಜರಾತ್‌ನಲ್ಲಿ ತಮ್ಮ ಅಂತ್ಯಕ್ಕಾಗಿ ಕಾಯಬೇಕು ಎಂದೂ ಎಚ್ಚರಿಸಿದೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.

    ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಪತ್ರವನ್ನು ಭದ್ರತಾ ಸಂಸ್ಥೆಗಳು ತನಿಖೆ ನಡೆಸುತ್ತಿವೆ. ಇದನ್ನು ಸಾಮಾಜಿಕ ಜಾಲತಾಣಗಳಲ್ಲಿ ಯಾರು ಅಪ್‌ಲೋಡ್ ಮಾಡಿದ್ದಾರೆ ಎಂಬುದನ್ನು ಪತ್ತೆ ಹಚ್ಚಲು ತನಿಖಾದಳ ಕಾರ್ಯೋನ್ಮುಖವಾಗಿವೆ. ಇದನ್ನೂ ಓದಿ: ಪ್ರವಾದಿ ಮೊಹಮ್ಮದ್‍ ಕುರಿತು ಆಕ್ಷೇಪಾರ್ಹ ಹೇಳಿಕೆ – ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅಮಾನತು

    ಈಗ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರ ವಿವಾದಾತ್ಮಕ ಹೇಳಿಕೆಗಳನ್ನು ಸ್ಪಷ್ಟವಾಗಿ ಉಲ್ಲೇಖಿಸಿ, ವಿಶ್ವದಾದ್ಯಂತ ಅನೇಕ ಮುಸ್ಲಿಮರ ಹೃದಯಗಳು ರಕ್ತಸಿಕ್ತಗೊಂಡಿದ್ದು, ಪ್ರತಿಕಾರದ ಜ್ವಾಲೆಯಿಂದ ಉರಿಯುತ್ತಿವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ನಮ್ಮ ಪ್ರವಾದಿಗೆ ಅವಮಾನಿಸಿರುವವರನ್ನು ನಾವು ಕೊಲ್ಲುತ್ತೇವೆ. ಅವರನ್ನು ಸ್ಫೋಟಿಸಲು ನಮ್ಮ ಮಕ್ಕಳ ದೇಹದೊಂದಿಗೆ ಸ್ಫೋಟಕಗಳನ್ನು ಬಂಧಿಸಿಡುತ್ತೇವೆ. ಇದರಲ್ಲಿ ಯಾವುದೇ ಕ್ಷಮಾದಾನವಿಲ್ಲ ಎಂದು ಎಚ್ಚರಿಕೆ ನೀಡಿದೆ ಎಂದು ವರದಿಯಾಗಿದೆ.

  • ಇಸ್ಲಾಂ ಅನ್ನೋದು ಧರ್ಮವಲ್ಲ, ಕಾಮುಕರ ಗ್ಯಾಂಗ್: ರಾಧಾಕೃಷ್ಣ ಅಡ್ಯಂತಾಯ ವಿವಾದಾತ್ಮಕ ಹೇಳಿಕೆ

    ಇಸ್ಲಾಂ ಅನ್ನೋದು ಧರ್ಮವಲ್ಲ, ಕಾಮುಕರ ಗ್ಯಾಂಗ್: ರಾಧಾಕೃಷ್ಣ ಅಡ್ಯಂತಾಯ ವಿವಾದಾತ್ಮಕ ಹೇಳಿಕೆ

    ಮಂಗಳೂರು: ಇಸ್ಲಾಂ ಅನ್ನೋದು ಧರ್ಮವಲ್ಲ, ಅದೊಂದು ಕ್ರೌರ್ಯ, ಕಾಮುಕರ ಗ್ಯಾಂಗ್ ಎಂಬುದಾಗಿ ಅರ್ಥೈಸಿಕೊಳ್ಳಬಹುದು ಎಂದು ಹಿಂದೂ ಜಾಗರಣ ವೇದಿಕೆ ಮುಖಂಡ ರಾಧಾಕೃಷ್ಣ ಅಡ್ಯಂತಾಯ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದ ಹಿಂದೂ ಜಾಗೃತಿ ಸಭೆಯ ಪ್ರಧಾನ ಭಾಷಣದಲ್ಲಿ ಈ ರೀತಿ ಹೇಳಿದ್ದಾರೆ. ಇದನ್ನೂ ಓದಿ: ಮಾಜಿ ಸಿಎಂ ಪುಂಡ, ಪೋಕರಿಯಂತೆ ಮಾತನಾಡುತ್ತಿದ್ದಾರೆ: ಸಿದ್ದು ವಿರುದ್ಧ ಶೆಟ್ಟರ್ ವಾಗ್ದಾಳಿ

    ಇಸ್ಲಾಂ ಎನ್ನುವಂತದ್ದು ಧರ್ಮವಲ್ಲ, ಮತವಲ್ಲ, ಸಂಸ್ಕೃತಿಯಲ್ಲ, ಸಭ್ಯತೆಯಲ್ಲ, ಸಂಸ್ಕಾರವಲ್ಲ, ಮಾನವೀಯತೆಯೂ ಅಲ್ಲ. ಅದೊಂದು ಕ್ರೌರ್ಯ, ಅಮಾನುಷತೆ, ಅತ್ಯಾಚಾರ, ಲೂಟಿಕೋರರ ತಂಡ. ಅದೊಂದು ಕಾಮುಕರ ಗ್ಯಾಂಗ್. ಈ ರೀತಿಯಾಗಿ ಇಸ್ಲಾಂನ್ನು ಅರ್ಥೈಸಿಕೊಳ್ಳಬಹುದು ಅನ್ನಿಸುತ್ತದೆ ಎಂದಿದ್ದಾರೆ. ಇದನ್ನೂ ಓದಿ: RSS ಚಡ್ಡಿ ಬಗ್ಗೆ ಸಿದ್ದರಾಮಯ್ಯ ಭಯಭೀತರಾಗಿದ್ದಾರೆ: ಕೋಟ ಶ್ರೀನಿವಾಸ ಪೂಜಾರಿ

    ಅವರ ಎಲ್ಲ ಚಟುವಟಿಕೆಗಳು ಮುಂಚೂಣಿಗೆ ಬಂದಾಗ, ನಾವು ಅದನ್ನು ಗಮನಿಸಿದಾಗ ಈ ಎಲ್ಲ ಬೆಳವಣಿಗೆಗಳು ನಮಗೆ ಅರ್ಥವಾಗುತ್ತದೆ ಎಂದ ರಾಧಾಕೃಷ್ಣ, ಲವ್ ಜಿಹಾದ್ ಬಗ್ಗೆಯೂ ಖಂಡನೆ ವ್ಯಕ್ತಪಡಿಸಿದ್ದಾರೆ.

  • ಇನ್ನು ಮುಂದೆ ಬಲವಂತದ ಮತಾಂತರ ಅಪರಾಧ: ಕಾಯ್ದೆಯಲ್ಲಿ ಏನಿದೆ?

    ಇನ್ನು ಮುಂದೆ ಬಲವಂತದ ಮತಾಂತರ ಅಪರಾಧ: ಕಾಯ್ದೆಯಲ್ಲಿ ಏನಿದೆ?

    ಬೆಂಗಳೂರು: ಬಲವಂತದ, ಆಮಿಷದ, ಒತ್ತಡದ ಮತಾಂತರಕ್ಕೆ ರಾಜ್ಯ ಸರ್ಕಾರ ಕೊನೆಗೂ ಕಾನೂನು ಅಸ್ತ್ರ ಪ್ರಯೋಗ ಮಾಡಿದೆ. ರಾಜ್ಯದಲ್ಲಿ ಇನ್ನು ಮುಂದೆ ಬಲವಂತದ ಮತಾಂತರ ಅಪರಾಧವಾಗಲಿದೆ.

    ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ 2021 ಅನ್ನು ಸುಗ್ರಿವಾಜ್ಞೆ ಮೂಲಕ ಜಾರಿ ಮಾಡಲು ಇಂದಿನ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಕಳೆದ ಬೆಳಗಾವಿ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರವಾಗಿತ್ತು.

    ವಿಧಾನ ಪರಿಷತ್ ನಲ್ಲಿ ಬಹುಮತ ಇಲ್ಲದ ಕಾರಣ ಮಸೂದೆ ಮಂಡನೆ ಮಾಡಿರಲಿಲ್ಲ. ಈಗ ಕಾಯ್ದೆ ಜಾರಿಗೆ ಸುಗ್ರಿವಾಜ್ಞೆ ಹೊರಡಿಸಲು ಸರ್ಕಾರ ಮುಂದಾಗಿದೆ. ಈ ಸುಗ್ರಿವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ ಕೂಡಲೇ ಕಾಯ್ದೆ ಜಾರಿ ಆಗಲಿದೆ. ಇದನ್ನೂ ಓದಿ: ಪಿಎಸ್‌ಐ ಅಕ್ರಮ ಪ್ರಕರಣ – ಒಎಂಆರ್‌ ತಿದ್ದಲು ನೆರವಾಗಿದ್ದ ಡಿವೈಎಸ್‌ಪಿ ಶಾಂತಕುಮಾರ್‌ ಬಂಧನ

    BASAVARAJ BOMMAI

    ಕಾಯ್ದೆಯಲ್ಲಿ ಏನಿದೆ?
    * ಬಲವಂತದ ಮತಾಂತರ ಜಾಮೀನುರಹಿತ ಅಪರಾಧ ಮತ್ತು ಅಸಿಂಧು
    * ಉಡುಗೊರೆ, ಕೆಲಸ, ಉಚಿತ ಶಿಕ್ಷಣ, ವಿವಾಹದ ಆಮಿಷ ಒಡ್ಡಿ ಮತಾಂತರ ಮಾಡುವಂತಿಲ್ಲ.
    * ಅಮಿಷ ಒಡ್ಡಿ ಮತಾಂತರಗೊಂಡು ವಿವಾಹ ಆಗಿದ್ದರೆ ಆ ಮದುವೆ ಅಸಿಂಧು
    * ಮತಾಂತರದಲ್ಲಿ ಶಿಕ್ಷಣ ಸಂಸ್ಥೆ, ಆಶ್ರಮ, ಧಾರ್ಮಿಕ ಮಿಷನರಿ, ಎನ್‍ಜಿಓಗಳು ಪಾಲ್ಗೊಳ್ಳುವಂತಿಲ್ಲ.
    * ಸಾಮೂಹಿಕ ಮತಾಂತರದಲ್ಲಿ ಭಾಗಿಯಾದ ಸಂಸ್ಥೆಗಳಿಗೆ ಸರ್ಕಾರದ ಅನುದಾನ ಸ್ಥಗಿತ
    * ಧರ್ಮ ಬದಲಿಸುವ 60 ದಿನ ಮೊದಲು ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಬೇಕು.
    * ಮತಾಂತರಗೊಂಡ ಎಸ್‍ಸಿ, ಎಸ್‍ಟಿ ವ್ಯಕ್ತಿಗಳಿಗೆ ಸಿಗುವ ಮೀಸಲಾತಿ,ಇತರೆ ಸೌಲಭ್ಯ ರದ್ದು

    ದಂಡ ಮತ್ತು ಶಿಕ್ಷೆ
    * ಎಸ್‍ಸಿ,ಎಸ್‍ಟಿ ಸಮುದಾಯದವರನ್ನು ಬಲವಂತವಾಗಿ ಮತಾಂತರ ಮಾಡುವಂತಿಲ್ಲ
    * ಅಪ್ರಾಪ್ತರು, ಮಹಿಳೆಯರು, ಬುದ್ದಿಮಾಂಧ್ಯರಿಗೆ ಆಸೆ, ಆಮಿಷ ಒಡ್ಡಿ ಮತಾಂತರ ಮಾಡಬಾರದು.
    * ಕಾಯ್ದೆ ಉಲ್ಲಂಘಿಸಿದಲ್ಲಿ ಕನಿಷ್ಠ 3ರಿಂದ 10 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ. ದಂಡ.
    * ಇತರರನ್ನು ಬಲವಂತವಾಗಿ ಮತಾಂತರಿಸಿದ್ದಲ್ಲಿ 3 ರಿಂದ 5 ವರ್ಷ ಜೈಲು ಶಿಕ್ಷೆ, 25 ಸಾವಿರ ರೂ. ದಂಡ.
    * ಸಾಮೂಹಿಕ ಮತಾಂತರ ಮಾಡಿದವರಿಗೆ 3ರಿಂದ 10 ವರ್ಷ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ.
    * ಬಲವಂತದ ಮತಾಂತರ ಸಾಬೀತಾದಲ್ಲಿ ಮತಾಂತರಕ್ಕೆ ಒಳಗಾದವನಿಗೆ ಗರಿಷ್ಠ 5 ಲಕ್ಷ ಪರಿಹಾರ
    * ಪರಿಹಾರದ ಮೊತ್ತವನ್ನು ಮತಾಂತರ ಮಾಡಿದವನಿಂದಲೇ ವಸೂಲಿ
    * ಈ ಹಿಂದೆಯೂ ಮತಾಂತರ ಮಾಡಿದ್ದು ಸಾಬೀತಾದಲ್ಲಿ ದುಪ್ಪಟ್ಟು ದಂಡ ವಿಧಿಸಲಾಗುವುದು.

  • ಪ್ರತಿಯೊಬ್ಬರು ಪರಸ್ಪರ ಧರ್ಮವನ್ನು ಗೌರವಿಸಬೇಕು: ನಿತೀಶ್ ಕುಮಾರ್

    ಪ್ರತಿಯೊಬ್ಬರು ಪರಸ್ಪರ ಧರ್ಮವನ್ನು ಗೌರವಿಸಬೇಕು: ನಿತೀಶ್ ಕುಮಾರ್

    ಪಾಟ್ನಾ: ಯಾವುದೇ ಧರ್ಮವನ್ನು ಲೆಕ್ಕಿಸದೇ ಪ್ರತಿಯೊಬ್ಬರು ಪರಸ್ಪರ ಗೌರವಿಸಬೇಕು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.

    ಈದ್ ಸಂದರ್ಭದಲ್ಲಿ ನಡೆದ ವಿಶೇಷ ಪ್ರಾರ್ಥನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದಲ್ಲಿ ಯಾರಾದರೂ ಅನ್ಯ ಧರ್ಮಕ್ಕೆ ಸೇರಿದವರಾಗಿದ್ದರೂ ಪರಸ್ಪರ ಗೌರವವನ್ನು ಹೊಂದಿರಬೇಕು. ನೀವು ಯಾವುದೇ ಧರ್ಮವನ್ನು ಅನುಸರಿಸಬಹುದು. ಆದರೆ ಪ್ರತಿಯೊಬ್ಬರೂ ಪರಸ್ಪರರ ಧರ್ಮವನ್ನು ಗೌರವಿಸಬೇಕು.

    ದೇಶದಲ್ಲಿ ಒಂದು ನಿರ್ದಿಷ್ಟ ಧರ್ಮದ ಜನರು ತಮ್ಮ ಭಾವನೆಗಳಿಗೆ ಅನುಗುಣವಾಗಿ ವರ್ತಿಸುತ್ತಾರೆ ಮತ್ತು ಅವರು ತಮ್ಮದೇ ಆದ ಆಸೆಯನ್ನು ಹೊಂದಿದ್ದಾರೆ, ಅದನ್ನು ಗೌರವಿಸಬೇಕು ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: ಬಂಧನದಲ್ಲಿರುವ ರಾಣಾ ದಂಪತಿ ನಿವಾಸದಲ್ಲಿ ಅಕ್ರಮ ಕಟ್ಟಡ – ಬಿಎಂಸಿ ನೋಟೀಸ್

    loudspeakers

    ಇದೇ ವೇಳೆ ಧ್ವನಿವರ್ಧಕ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ನಿಷೇಧಿಸಬೇಕೇ ಎಂಬ ಬಗ್ಗೆ ನಡೆಯುತ್ತಿರುವ ಚರ್ಚೆಯನ್ನು ನಿಷ್ಪ್ರಯೋಜಕ ಎಂದಿದ್ದಾರೆ. ಇದನ್ನೂ ಓದಿ: ಮೂವರನ್ನು ಒಂದೇ ಮಂಟಪದಲ್ಲಿ ವರಿಸಿದ 46ರ ವ್ಯಕ್ತಿ – ಸಾಕ್ಷಿಯಾದ ಮಕ್ಕಳು

    ರಾಜ್ಯದಲ್ಲಿ ಮಸೀದಿಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸುವಂತೆ ಒತ್ತಾಯಿಸಿ ಬಿಜೆಪಿಯಿಂದ ಹೆಚ್ಚುತ್ತಿರುವ ಗದ್ದಲದ ಬಗ್ಗೆ ಮಾತನಾಡಿದ ಅವರು, ಸಚಿವ ಜನಕ್ ರಾಮ್ ಅವರು ಕೇಸರಿ ಪಕ್ಷದ ನಾಯಕರ ಬಂಡಾಯವನ್ನು ಮುನ್ನಡೆಸುತ್ತಿದ್ದಾರೆ. ಅವರು ಮಸೀದಿಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸಬೇಕು ಮತ್ತು ಕಾನೂನು ತರಬೇಕೆಂದು ಒತ್ತಾಯಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

  • ಇಡೀ ರಾಜ್ಯಕ್ಕೆ ವಿಸ್ತರಿಸಿದ ವ್ಯಾಪಾರ ಧರ್ಮಯುದ್ಧ – ಬೆಂಗ್ಳೂರಿನ  ದೇವಸ್ಥಾನದ ಅಂಗಡಿಗಳು ಬಂದ್

    ಇಡೀ ರಾಜ್ಯಕ್ಕೆ ವಿಸ್ತರಿಸಿದ ವ್ಯಾಪಾರ ಧರ್ಮಯುದ್ಧ – ಬೆಂಗ್ಳೂರಿನ ದೇವಸ್ಥಾನದ ಅಂಗಡಿಗಳು ಬಂದ್

    – ಶಿವಮೊಗ್ಗ ಜಾತ್ರೆ ಅಂಗಡಿ ಮುಂದೆ ಭಗವಾಧ್ವಜ
    – ಮಾರಿಗುಡಿ ಜಾತ್ರೆಯಲ್ಲಿ ಹಿಂದೂಗಳಿಂದ್ಲೇ ವ್ಯಾಪಾರ
    – ನಿಷೇಧ ರಾಜಕೀಯಕ್ಕೆ ಬಪ್ಪನಾಡು ದೇಗುಲ ಬೇಸರ

    ಬೆಂಗಳೂರು: ಹಿಜಬ್ ವಿವಾದದ ಕಿಡಿ ಈಗ ರೂಪಾಂತರಗೊಂಡಿದೆ. ಶಾಲಾ-ಕಾಲೇಜುಗಳಲ್ಲಿ ಅಷ್ಟೇ ಇದ್ದ ವಿವಾದ ಈಗ ಹೊಸ ತಿರುವು ಪಡೆದಿದ್ದು, ಧರ್ಮ ಧರ್ಮಗಳ ನಡುವೆ ದೊಡ್ಡ ಕಂದಕವೇ ನಿರ್ಮಾಣಗೊಳ್ತಿದೆ. ನಿನ್ನೆವರೆಗೂ ಕರಾವಳಿಗೆ ಮಾತ್ರ ಸೀಮಿತವಾಗಿದ್ದ ವ್ಯಾಪಾರ ಧರ್ಮಯುದ್ಧ, ಈಗ ಕೋವಿಡ್ ವೈರಸ್‍ಗಿಂತಲೂ ವೇಗವಾಗಿ ತನ್ನ ವ್ಯಾಪ್ತಿ ವಿಸ್ತರಿಸಿಕೊಳ್ಳತೊಡಗಿದೆ.

    ಬೆಂಗಳೂರಿನಲ್ಲಿಯೂ ಹಿಂದೂ ಸಂಘಟನೆಗಳು ಬಹಿಷ್ಕಾರ ಚಳವಳಿ ಶುರು ಮಾಡಿದ್ದಾರೆ. ಹಲವು ಹಿಂದೂ ದೇಗುಲಗಳಿಗೆ ಸೇರಿದ ಅಂಗಡಿಗಳಿಂದ ಮುಸ್ಲಿಮರನ್ನು ಒಕ್ಕಲೆಬ್ಬಿಸುವ ಪ್ರಯತ್ನ ಶುರುವಾಗಿವೆ. ಉಪ್ಪಾರಪೇಟೆಯ ಆಂಜನೇಯಸ್ವಾಮಿ ದೇಗುಲದ ಮುಂದಿರುವ ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ 8 ಮುಸ್ಲಿಮರ ಅಂಗಡಿಗಳನ್ನು ಹಿಂದೂ ಕಾರ್ಯಕರ್ತರು ಬಂದ್ ಮಾಡಿಸಿದ್ದಾರೆ. ತಹಶೀಲ್ದಾರ್ ಸೂಕ್ತ ಕ್ರಮದ ಭರವಸೆ ನೀಡಿದ ನಂತ್ರ ಪ್ರತಿಭಟನೆ ಕೈಬಿಟ್ಟಿದ್ದಾರೆ. ಬನಶಂಕರಿ ಸೇರಿ ಮುಜರಾಯಿ ವ್ಯಾಪ್ತಿಯ ಎಲ್ಲಾ ದೇಗುಲಗಳ ಜಾತ್ರೆಗಳಲ್ಲಿ, ದೇಗುಲಕ್ಕೆ ಸಂಬಂಧಿಸಿದ ಕಟ್ಟಡಗಳಲ್ಲಿ ವ್ಯಾಪಾರ ಮಾಡಲು ಮುಸ್ಲಿಮರಿಗೆ ಅವಕಾಶ ನೀಡಬಾರದು ಎಂದು ಹಿಂದೂಪರ ಮುಖಂಡರು ಒತ್ತಾಯಿಸಿದ್ದಾರೆ.

    ಇತ್ತ ಕೊಲ್ಲೂರು ದೇವಳದ ಬಳಿಯೂ ಮುಸ್ಲಿಮ್ ವ್ಯಾಪಾರಸ್ಥರಿಗೆ ನಿಷೇಧ ಹೇರಬೇಕು ಎಂದು ಹಿಂದೂ ಮುಖಂಡರು ಪಂಚಾಯತ್ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ನಾಡಿದ್ದು ಕೊಲ್ಲೂರು ಮೂಕಾಂಬಿಕಾ ವಾರ್ಷಿಕ ಜಾತ್ರೆ ಇದ್ದು, ಪಂಚಾಯ್ತಿ ನಡೆ ಕುತೂಹಲ ಮೂಡಿಸಿದೆ. ಅತ್ತ ಚಿಕ್ಕಮಗಳೂರಿನ ಕಿಗ್ಗ ಋಷ್ಯಶೃಂಗ ಜಾತ್ರೆಯಲ್ಲಿ ಅನ್ಯಧರ್ಮೀಯರ ಅಂಗಡಿಗಳಿಗೆ ಅವಕಾಶ ನೀಡಬಾರದು ಎಂಬ ಒತ್ತಾಯ ಕೇಳಿಬಂದಿದೆ.

    ಕಾಪು ಮಾರಿಗುಡಿ ಅಂದ್ರೆ ಸೌಹಾರ್ದತೆಗೆ ಮತ್ತೊಂದು ಹೆಸರು. ಕ್ರೈಸ್ತರು ಬೆಳೆದ ಶಂಕರಪುರ ಮಲ್ಲಿಗೆಯನ್ನು ಮುಸ್ಲಿಮರು ಖರೀದಿಸಿ ಹಿಂದೂಗಳಿಗೆ ಮಾರಾಟ ಮಾಡುತ್ತಿದ್ದರು. ಮಾರಿಗುಡಿಗೆ ಹರಕೆ ಅರ್ಪಿಸುವ ಕೋಳಿ, ಕುರಿಗಳನ್ನು ಸಹ ಮುಸ್ಲಿಮರೇ ಹೆಚ್ಚಾಗಿ ಮಾರಾಟ ಮಾಡುತ್ತಿದ್ದರು. ಆದರೆ ಕಳೆದ ವರ್ಷ ಗಂಗೊಳ್ಳಿಯಲ್ಲಿ ಹಿಂದೂ ಮೀನುಗಾರರಿಗೆ, ಮುಸ್ಲಿಮರು ನಾಲ್ಕು ದಿನ ಬಹಿಷ್ಕಾರ ಹಾಕಿದ್ಮೇಲೆ ನಿಧಾನಕ್ಕೆ ಅದರ ಕಾವು ಎಲ್ಲೆಡೆ ತಟ್ಟತೊಡಗಿತ್ತು.

    ಹಿಜಬ್ ತೀರ್ಪನ್ನು ಖಂಡಿಸಿ ಮುಸ್ಲಿಮರು ಇತ್ತೀಚಿಗೆ ಬಂದ್ ನಡೆಸಿದ್ದು, ಕರಾವಳಿಯ ಹಿಂದೂ ಸಂಘಟನೆಗಳನ್ನು ಬಡಿದೆಬ್ಬಿಸಿತ್ತು. ಅದರ ಪರಿಣಾಮವೇ ಮಾರಿಗುಡಿ ಜಾತ್ರೆಯಲ್ಲಿ ಮುಸ್ಲಿಮ್ ವ್ಯಾಪಾರಿಗಳಿಗೆ ನಿಷೇಧ. ಮುಸ್ಲಿಮರು ಮಾಡ್ತಿದ್ದ ವ್ಯಾಪಾರವನ್ನು ಈಗ ಹಿಂದೂಗಳೇ ಮಾಡಿಕೊಳ್ತಿದ್ದಾರೆ. ಹಿಂದೂ ಸಂಘಟನೆಗಳ ನೆರವಿನಿಂದ ಎರಡೇ ದಿನದಲ್ಲಿ ಕೋಳಿ, ಕುರಿಗಳ ಅಗತ್ಯ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಸೇನಾ ಸಮವಸ್ತ್ರದಲ್ಲಿರೋವಾಗ ತಿಲಕವಿಡಲು ಭಾರತೀಯ ಅಧಿಕಾರಿಗೆ ಅಮೆರಿಕ ಅನುಮತಿ

    ಅತ್ತ ಶಿವಮೊಗ್ಗದ ಮಾರಿಕಾಂಬ ಜಾತ್ರೆಯಲ್ಲೂ ಬರೀ ಹಿಂದೂಗಳಿಗೆ ಅಂಗಡಿ ಹಾಕಲು ಅವಕಾಶ ನೀಡಲಾಗಿದೆ. ಪ್ರತಿಯೊಂದು ಸ್ಟಾಲ್ ಮುಂದೆಯೂ ಭಗವಾ ಧ್ವಜ ಹಾರುತ್ತಿದೆ. ಇನ್ನು, ಮುಸ್ಲಿಮ್ ವ್ಯಾಪಾರಿಗಳಿಗೆ ಬಹಿಷ್ಕಾರ ಸರಿಯಲ್ಲ ಸಿದ್ದರಾಮಯ್ಯ ವಿರುದ್ಧ ಭಜರಂಗ ದಳ ಮತ್ತೊಮ್ಮೆ ಕಿಡಿಕಾರಿದೆ. ಅವರದ್ದು ಪಕ್ಷಪಾತದ ರಾಜಕಾರಣ ಎಂದು ಜರೆದಿದೆ. ಮುಂದಿನ ದಿನಗಳಲ್ಲಿ ಹಲಾಲ್ ವಿವಾದ ಕೆದಕುವ ಸುಳಿವನ್ನು ನೀಡಿದೆ.

    ಮಂಗಳೂರಿನ ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೋತ್ಸವದಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ ಬಹಿಷ್ಕಾರ ಹಾಕುವ ಬ್ಯಾನರ್ ಹಾಕಲಾಗಿದೆ. ಸಮಸ್ತ ಹಿಂದೂ ಬಾಂಧವರು ಎಂಬ ಹೆಸರಿನಲ್ಲಿ ಬ್ಯಾನರ್ ಅಳವಡಿಸಲಾಗಿದೆ. ಇದರಿಂದ ಮುಸ್ಲಿಮರು ವ್ಯಾಪಾರದಿಂದ ಹಿಂದೆ ಸರಿದಿದ್ದಾರೆ. ಆದರೆ ಮುಸ್ಲಿಮ್ ವ್ಯಾಪಾರಿಗಳಿಗೆ ನಿಷೇಧ ಹೇರಿರೋದಕ್ಕೆ ದೇವಸ್ಥಾನದ ಆಡಳಿತ ಮಂಡಳಿ ಅಸಮಾಧಾನ ವ್ಯಕ್ತಪಡಿಸಿದೆ. ಇಲ್ಲಿ ಬ್ಯಾನರ್ ಹಾಕಲು ಅವಕಾಶವಿಲ್ಲ. ಆದರೆ ಯಾರು ಹಾಕಿದ್ರೋ ಗೊತ್ತಿಲ್ಲ. ಮುಸ್ಲಿಮ್ ವ್ಯಾಪಾರಿಗಳು ಬಂದ್ರೂ ಅವರನ್ನ ವಾಪಸ್ ಕಳಿಸಲ್ಲ ಎಂದು ದೇಗುಲದ ಮುಖ್ಯಸ್ಥ ಮನೋಹರ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕಾಶ್ಮೀರ್‌ ಫೈಲ್ಸ್‌ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದ IAS ಅಧಿಕಾರಿ ನಿಯಾಜ್‌ ಖಾನ್‌ಗೆ ನೋಟಿಸ್‌: MP ಗೃಹ ಸಚಿವ

    ಮಾಜಿ ಮೊಕ್ತೇಸರ ಹರಿಕೃಷ್ಣ ಪುನರೂರು ಮಾತನಾಡಿ, ಮುಸ್ಲಿಮರು ಮತಾಂತರಕ್ಕೆ ಮುಂದಾದಲ್ಲಿ ಪ್ರಶ್ನೆ ಮಾಡಬಹುದು.. ಆದ್ರೇ ಅವರು ಬದುಕೋದಕ್ಕೆ ಅಡ್ಡಗಾಲು ಹಾಕೋದು ಸರಿಯಲ್ಲ ಎಂದಿದ್ದಾರೆ. ಈ ಕ್ಷೇತ್ರವನ್ನು ಬಪ್ಪ ಬ್ಯಾರಿ ಎಂಬ ಮುಸ್ಲಿಂ ಜೀರ್ಣೋದ್ಧಾರ ಮಾಡಿದ್ದ ಇತಿಹಾಸವನ್ನು ನೆನಪಿಸಿದ್ದಾರೆ.

  • ಹಿಜಬ್ ವಿವಾದ: ಖಾಸಗಿ ಕಾಲೇಜಿನ ಅರೆಕಾಲಿಕ ಉಪನ್ಯಾಸಕಿ ರಾಜೀನಾಮೆ!

    ಹಿಜಬ್ ವಿವಾದ: ಖಾಸಗಿ ಕಾಲೇಜಿನ ಅರೆಕಾಲಿಕ ಉಪನ್ಯಾಸಕಿ ರಾಜೀನಾಮೆ!

    ತುಮಕೂರು: ಹಿಜಬ್ ತೆಗೆದು ತರಗತಿಯೊಳಗೆ ಬರಬೇಕು ಎಂಬ ನಿಯಮ ಜಾರಿಯಾಗಿದ್ದರಿಂದ ಖಾಸಗಿ ಕಾಲೇಜಿನ ಅರೆಕಾಲಿಕ ಉಪನ್ಯಾಸಕಿ ರಾಜೀನಾಮೆ ಕೊಟ್ಟ ಘಟನೆ ತುಮಕೂರಿನಲ್ಲಿ ನಡೆದಿದೆ.

    ತುಮಕೂರು ನಗರದ ಪುಟ್ಟಸ್ವಾಮಯ್ಯನ ಪಾಳ್ಯದ ಜೈನ್ ಪಿಯು ಕಾಲೇಜಿನ ಇಂಗ್ಲೀಷ್ ಉಪನ್ಯಾಸಕಿ ಚಾಂದಿನಿ ನಯಾಜ್ ರಾಜೀನಾಮೆ ಕೊಟ್ಟವರು. ಕಳೆದ ಮೂರು ವರ್ಷಗಳಿಂದ ಜೈನ್ ಕಾಲೇಜು, ವಿದ್ಯಾವಾಹಿನಿ ಕಾಲೇಜು ಸೇರಿದಂತೆ ಹಲವು ಕಾಲೇಜಿನಲ್ಲಿ ಅರೆಕಾಲಿಕ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು. ಇದನ್ನೂ ಓದಿ: ಹಿಜಬ್ ವಿವಾದ: ಬುರ್ಕಾನೇ ಮುಖ್ಯ, ಸಿಂಧೂರ ತೆಗೆಸಿ ಎಂದ ವಿದ್ಯಾರ್ಥಿನಿಯರು!

    ಹಿಜಬ್ ವಿವಾದದಿಂದಾಗಿ ತಮ್ಮ ಧರ್ಮಕ್ಕೆ ಹೆಚ್ಚು ಅಧ್ಯತೆ ಕೊಟ್ಟು, ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಇವರು ಮಾತ್ರವಲ್ಲ ಕಾಲೇಜಿನ ವಿದ್ಯಾರ್ಥಿನಿಯರು ಧರ್ಮವೇ ಮುಖ್ಯ ಎಂದು ಕಾಲೇಜನ್ನೆ ಬಿಟ್ಟು ಹೋಗುತ್ತಿದ್ದಾರೆ. ಆದರೆ ನ್ಯಾಯಾಲಯವು ಮಕ್ಕಳಲ್ಲಿ ಒಂದೇ ರೀತಿ ನಿಯಮವಿರಬೇಕು ಎಂದು ಈ ನಿರ್ಧಾರ ಮಾಡಿದ್ದು, ಇದಕ್ಕೆ ಪರ-ವಿರೋಧ ಕೇಳಿಬರುತ್ತಿದೆ.

  • 80% ವರ್ಸಸ್ 20% ಧರ್ಮ ಆಧಾರಿತ ಹೇಳಿಕೆಯಲ್ಲ: ಯೋಗಿ ಆದಿತ್ಯನಾಥ್ ಸ್ಪಷ್ಟನೆ

    80% ವರ್ಸಸ್ 20% ಧರ್ಮ ಆಧಾರಿತ ಹೇಳಿಕೆಯಲ್ಲ: ಯೋಗಿ ಆದಿತ್ಯನಾಥ್ ಸ್ಪಷ್ಟನೆ

    ಲಕ್ನೋ: ಉತ್ತರ ಪ್ರದೇಶದಲ್ಲಿ ಇಂದು 55 ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಈ ಮಧ್ಯೆ ಯೋಗಿ ಆದಿತ್ಯನಾಥ್ ಮಹತ್ವದ ಹೇಳಿಕೆ ನೀಡಿದ್ದಾರೆ. ಈ ಹಿಂದೆ ನೀಡಿದ್ದ 80% ವರ್ಸಸ್ 20% ಹೇಳಿಕೆ ಧರ್ಮ ಆಧರಿತವಲ್ಲ ಎಂದು ಅವರು ಸ್ಪಷ್ಟನೆ ನೀಡಿದರು.

    ಇಂದು ನ್ಯೂಸ್ ಏಜೆನ್ಸಿ ಎಎನ್‍ಐ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಈ ಬಗ್ಗೆ ಸ್ಪಷ್ಟನೆ ನೀಡಿದರು. 80% ವರ್ಸಸ್ 20% ಧರ್ಮ ಆಧಾರಿತವಾಗಿರಲಿಲ್ಲ, 80% ಬಿಜೆಪಿ ಬೆಂಬಲಿಗರು, 20% ವಿಪಕ್ಷಗಳನ್ನು ಬೆಂಬಲಿಸುವ ಜನರು ಎನ್ನುವ ರಾಜಕೀಯ ಅರ್ಥದಲ್ಲಿ ನಾನು ಮಾತನಾಡಿದ್ದೆ ಎಂದು ತಮ್ಮ ಹೇಳಿಕೆಯನ್ನು ಸರಿಪಡಿಸಿಕೊಳ್ಳುವ ಪ್ರಯತ್ನ ಮಾಡಿದರು.

    80 ಪ್ರತಿಶತ ಜನರು ಎಂದರೆ, ಭದ್ರತೆಗಾಗಿ ಸರ್ಕಾರದ ಕಾರ್ಯಸೂಚಿಯಿಂದ ಸಂತೋಷವಾಗಿರುವವರು. ಸರ್ಕಾರದ ಜನಪರ ಹಾಗೂ ಬಡವರ ಪರ ಕೆಲಸಗಳಿಂದ ಸಂತಸಗೊಂಡವರು. ಅಭಿವೃದ್ಧಿಯನ್ನು ಇಷ್ಟಪಡುವವರು ಮತ್ತು ಗಮನಾರ್ಹ ಬದಲಾವಣೆಯನ್ನು ಅನುಭವಿಸಿದವರು ರಾಜ್ಯ ಸರ್ಕಾರದ ಎಲ್ಲಾ ಉತ್ತಮ ಕಾರ್ಯಗಳನ್ನು ಬೆಂಬಲಿಸುವ ಜನರು ಎಂದರು.  ಇದನ್ನೂ ಓದಿ: ಒಡಹುಟ್ಟಿದವರೇ ಕಾಂಗ್ರೆಸ್‌ ನಾಶ ಮಾಡ್ತಾರೆ, ಚಿಂತಿಸಬೇಡಿ: ಯೋಗಿ ಆದಿತ್ಯನಾಥ್‌

    20%ರಷ್ಟು ಜನರು ಯಾವಾಗಲೂ ವಿರೋಧಿಸಲು ಬಯಸುವವರನ್ನು ಒಳಗೊಂಡಿದೆ. ಅವರು ಮೊದಲು ವಿರೋಧಿಸುತ್ತಿದ್ದರು ಮತ್ತು ಈಗಲೂ ವಿರೋಧಿಸುತ್ತಿದ್ದಾರೆ. ಅವರು ನಕಾರಾತ್ಮಕ ಮನಸ್ಥಿತಿಯನ್ನು ಹೊಂದಿದ್ದಾರೆ. ಮಾಫಿಯಾ ಮತ್ತು ಅಪರಾಧಿಗಳನ್ನು ಬೆಂಬಲಿಸುತ್ತಾರೆ ಎಂದು ವಿವರಿಸಿದರು. ಇದನ್ನೂ ಓದಿ: ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣ – ಪ್ರಮುಖ ಆರೋಪಿ ಆಶಿಶ್ ಮಿಶ್ರಾ ನಾಳೆ ಬಿಡುಗಡೆ

    ಪಶ್ಚಿಮ ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರದಲ್ಲಿದ್ದ ಯೋಗಿ ಆದಿತ್ಯನಾಥ್ 80% ವರ್ಸಸ್ 20% ಹೇಳಿಕೆ ನೀಡಿದ್ದರು. 80% ಹಿಂದೂಗಳು 20% ಅಲ್ಪ ಅಂಖ್ಯಾತರ ನಡುವಿನ ಹೋರಾಟದ ಹೇಳಿಕೆ ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆದಿತ್ತು. ಜಾಟ್, ಮುಸ್ಲಿಂ ಮತಗಳು ನಿರ್ಣಾಯಕವಾಗಿರುವ ಈ ಪ್ರದೇಶದಲ್ಲಿ ಹಿಂದೂ ಮತಗಳ ಕ್ರೋಢೀಕರಣಕ್ಕೆ ಯೋಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

  • ರಾಷ್ಟ್ರವೋ ಅಥವಾ ಧರ್ಮ ಯಾವುದು ಮುಖ್ಯ: ಹಿಜಬ್ ವಿವಾದಕ್ಕೆ ಮದ್ರಾಸ್ ಹೈಕೋರ್ಟ್ ಪ್ರಶ್ನೆ

    ರಾಷ್ಟ್ರವೋ ಅಥವಾ ಧರ್ಮ ಯಾವುದು ಮುಖ್ಯ: ಹಿಜಬ್ ವಿವಾದಕ್ಕೆ ಮದ್ರಾಸ್ ಹೈಕೋರ್ಟ್ ಪ್ರಶ್ನೆ

    ಚೆನ್ನೈ: ಕರ್ನಾಟಕದಲ್ಲಿ ಭುಗಿಲೆದ್ದಿರುವ ಹಿಜಬ್-ಕೇಸರಿ ಶಾಲು ವಿವಾದವು ಜಗತ್ತಿನಾದ್ಯಂತ ಸದ್ದು ಮಾಡುತ್ತಿದೆ. ಧಾರ್ಮಿಕ ಪ್ರಕರರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್, ರಾಷ್ಟ್ರವೋ ಅಥವಾ ಧರ್ಮವೋ, ಯಾವುದು ಮುಖ್ಯ ಎಂದು ಪ್ರಶ್ನಿಸಿದೆ.

    ದೇವಾಲಯಗಳಲ್ಲಿ ವಸ್ತ್ರ ಸಂಹಿತೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಂ.ಎನ್.ಭಂಡಾರಿ ಮತ್ತು ನ್ಯಾಯಮೂರ್ತಿ ಡಿ.ಭರತ ಚಕ್ರವರ್ತಿ ಅವರಿದ್ದ ಪೀಠವು, ಇದು ನಿಜಕ್ಕೂ ಅಚ್ಚರಿ ಮೂಡಿಸಿದೆ. ಕೆಲವರು ಹಿಜಬ್‌ಗಾಗಿ ಹೋಗುತ್ತಾರೆ. ಮತ್ತೆ ಕೆಲವರು ಟೋಪಿಗಾಗಿ ಹೋರಾಡುತ್ತಾರೆ. ಇನ್ನೂ ಕೆಲವರು ತಮಗೆ ಅಗತ್ಯವಿರುವುದಕ್ಕಾಗಿ ಪ್ರತಿಭಟಿಸುತ್ತಾರೆ. ಇದು ಒಂದು ರಾಷ್ಟ್ರವೋ ಅಥವಾ ಧರ್ಮದಿಂದ ವಿಭಜನೆಯಾಗಿದೆಯೋ ಅಥವಾ ಬೇರೆ ಇನ್ಯಾವುದೋ ಎಂದು ಖಾರವಾಗಿ ಪ್ರಶ್ನಿಸಿದೆ. ಇದನ್ನೂ ಓದಿ: ಕಾಲೇಜುಗಳಿಗೆ ಯಾರೂ ಧಾರ್ಮಿಕ ಬಟ್ಟೆಗಳನ್ನು ಧರಿಸಿ ಹೋಗುವಂತಿಲ್ಲ: ಹೈಕೋರ್ಟ್‌ ಮಧ್ಯಂತರ ಆದೇಶ

    ಭಾರತ ಜಾತ್ಯತೀತ ರಾಷ್ಟ್ರ. ಪ್ರಚಲಿತ ವಿದ್ಯಾಮಾನಗಳಿಂದ ಕಂಡು ಬರುತ್ತಿರುವುದು ಧರ್ಮದ ಹೆಸರಿನಲ್ಲಿ ದೇಶವನ್ನು ಒಡೆಯುವ ಪ್ರಯತ್ನವಲ್ಲದೇ ಬೇರೇನೂ ಅಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಭಂಡಾರಿ ಕಟು ಪದಗಳಿಂದ ಧರ್ಮದ ಹೆಸರಿನಲ್ಲಿ ದೇಶ ಒಡೆಯುವವರ ವಿರುದ್ಧ ಚಾಟಿ ಬೀಸಿದ್ದಾರೆ.

    ತಿರುಚಿರಪಳ್ಳಿ ಜಿಲ್ಲೆಯ ರಂಗರಾಜನ್ ನರಸಿಂಹನ್ ಎಂಬವರು ವಸ್ತ್ರ ಸಂಹಿತೆಗೆ ಸಂಬಂಧಿಸಿದಂತೆ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಭಕ್ತರಿಗೆ ವಸ್ತ್ರ ಸಂಹಿತೆ ರೂಪಿಸಬೇಕು. ರಾಜ್ಯಾದ್ಯಂತ ಇರುವ ದೇವಾಲಯಗಳಿಗೆ ಹಿಂದೂಯೇತರರು ಕಾಲಿಡದಂತೆ ಮತ್ತು ದೇವಸ್ಥಾನಗಳ ಆವರಣದಲ್ಲಿ ವಾಣಿಜ್ಯ ಚಟುವಟಿಕೆಗಳನ್ನು ನಿಷೇಧಿಸಬೇಕು ಎಂದು ಮನವಿ ಮಾಡಿದ್ದರು. ಇದನ್ನೂ ಓದಿ: ಡಿಕೆಶಿ ಪಾಕಿಸ್ತಾನ ಪರ ಹೇಳಿಕೆ ಕೊಡುವವರ ಪರವೋ ಅಥವಾ ಭಾರತ ಮಾತೆಯ ಪರವೋ: ರೇಣುಕಾಚಾರ್ಯ

    ಈ ಅರ್ಜಿ ವಿಚಾರಣೆ ನಡೆಸಿದ ಪೀಠವು, ಮನವಿಗೆ ಸಂಬಂಧಿಸಿದಂತೆ ಸಾಕ್ಷ್ಯಗಳನ್ನು ನೀಡುವಂತೆ ಅರ್ಜಿದಾರನನ್ನು ಪ್ರಶ್ನಿಸಿದೆ. ಆಗಮಗಳ ಯಾವ ಭಾಗವು ಪ್ಯಾಂಟ್, ಧೋತಿ ಮತ್ತು ಶರ್ಟ್‌ಗಳ ಕುರಿತು ಉಲ್ಲೇಖ ಮಾಡಿದೆ ಎಂದು ಪೀಠ ಕೇಳಿದೆ. ಅಂತಿಮವಾಗಿ ವಸ್ತ್ರ ಸಂಹಿತೆಗೆ ಸಂಬಂಧಿಸಿದಂತೆ ವಿವರಣೆಗಳೊಂದಿಗೆ ಅಫಿಡವಿಟ್ ಸಲ್ಲಿಸುವಂತೆ ಪೀಠ ಸೂಚಿಸಿದೆ.