Tag: religion

  • ಗೌರಿ ಹಂತಕರ ಶಂಕಿತ ರೇಖಾಚಿತ್ರದಲ್ಲೂ ಹಿಂದೂಗಳೇ ಟಾರ್ಗೆಟ್: ವಿಶ್ವ ಹಿಂದೂ ಪರಿಷದ್

    ಗೌರಿ ಹಂತಕರ ಶಂಕಿತ ರೇಖಾಚಿತ್ರದಲ್ಲೂ ಹಿಂದೂಗಳೇ ಟಾರ್ಗೆಟ್: ವಿಶ್ವ ಹಿಂದೂ ಪರಿಷದ್

    ಉಡುಪಿ: ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಹಂತಕರ ಕುಂಕುಮಧಾರಿ ಶಂಕಿತ ರೇಖಾಚಿತ್ರ ಬಿಡುಗಡೆ ಮಾಡಿರುವ ಪೊಲೀಸರು ಮತ್ತು ರಾಜ್ಯ ಸರ್ಕಾರದ ವಿರುದ್ಧ ವಿಶ್ವ ಹಿಂದೂ ಪರಿಷದ್ ಸಂಘಟನಾ ಕಾರ್ಯದರ್ಶಿ ಗೋಪಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಆರೋಪಿಗಳ ಕುಂಕುಮಧಾರಿ ಶಂಕಿತನ ರೇಖಾಚಿತ್ರ ಬಿಡುಗಡೆ ಹಿನ್ನೆಲೆಯಲ್ಲಿ ಹಿಂದೂಗಳನ್ನು ಟಾರ್ಗೆಟ್ ಮಾಡುತ್ತಿದ್ದಾರೆಂದು ಆರೋಪಿಸಿದರು.

    ಗೌರಿ ಹತ್ಯೆ ವಿಚಾರ ನನಗೂ ದುಃಖ ತಂದಿದೆ. ಆದರೆ ಕುಂಕುಮ ಪ್ರದರ್ಶನ ಹಿಂದೆ ರಾಜಕೀಯ ಇದೆ. ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಸಂಘ ಪರಿವಾರವನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಕಲ್ಬುರ್ಗಿ ಹತ್ಯೆ ನಡೆದಾಗಲೂ ಸಂಘ ಪರಿವಾರವನ್ನು ಟಾರ್ಗೆಟ್ ಮಾಡಿದ್ದರು. ಆದರೆ ಇದುವರೆಗೂ ಸಾಬೀತುಪಡಿಸಲು ಸಾಧ್ಯವಾಗಿಲ್ಲ. ಸಂಘ ಪರಿವಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ನಡೆಯುತ್ತಲೇ ಇದೆ. ಸಿದ್ದರಾಮಯ್ಯ ಬಜರಂಗದಳ ನಾಶದ ಬಗ್ಗೆ ಮಾತನಾಡುತ್ತಲೇ ಬಂದಿದ್ದಾರೆ. ತನಿಖೆ ನಡೆಸಲಿ ಸತ್ಯ ಹೊರಬರುತ್ತದೆ ಅಂತ ಹೇಳಿದರು.

    ಮೌಢ್ಯ ಪ್ರತಿಬಂಧಕ ವಿಧೇಯ ಜಾರಿ ವಿಚಾರದಲ್ಲಿಯೂ ಹಿಂದೂಗಳನ್ನೇ ಟಾರ್ಗೆಟ್ ಮಾಡಿದ್ದಾರೆ. ಹಿಂದೂ ಧರ್ಮದಲ್ಲಿ ಮೌಢ್ಯವಿಲ್ಲ, ಅದು ಇರೋದು ಕ್ರೈಸ್ತರಲ್ಲಿ, ಭೂಮಿ ಇಂದಿಗೂ ಗೋಲಾಕಾರವಿದೆ ಎಂದು ಕ್ರೈಸ್ತರು ನಂಬುವುದಿಲ್ಲ. ಆದರೆ ಹಿಂದೂ ಧರ್ಮದ ನಂಬಿಕೆಯನ್ನು ಮೌಢ್ಯ ಎನ್ನಲಾಗುತ್ತಿದೆ. ನಂಬಿಕೆಯನ್ನು ಮೌಢ್ಯ ಎಂದರೆ ಒಪ್ಪಲಾಗದು ಎಂದು ಸರ್ಕಾರದ ವಿರುದ್ಧ ವಾಗ್ವಾದ ನಡೆಸಿದರು.

    ಧರ್ಮ ಸಂಸತ್ತು: ನವೆಂಬರ್ 24, 25, 26ಕ್ಕೆ ಧರ್ಮ ಸಂಸತ್ತು ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ರವಿಶಂಕರ್ ಗುರೂಜಿ, ಬಾಬಾ ರಾಮ್ ದೇವ್, ಯೋಗಿ ಆದಿತ್ಯನಾಥ್, ಮಾತಾ ಅಮೃತಾನಂದಮಯಿ ಬರುತ್ತಾರೆ. ದೇಶ ರಾಜ್ಯದ ಧಾರ್ಮಿಕ ಪ್ರಮುಖರು ಪಾಲ್ಗೊಳ್ಳುತ್ತಾರೆ. ಅಯೋಧ್ಯಾ ರಾಮಮಂದಿರ ನಿರ್ಮಾಣದ ಚರ್ಚೆಯಾಗಲಿದೆ. ಅಸ್ಪೃಷ್ಯತೆ, ಗೋರಕ್ಷಣೆ, ಮತಾಂತರ ವಿಚಾರಗಳ ಬಗ್ಗೆ ವಿಚಾರ ಮಂಡನೆಯಾಗಲಿದೆ. ಧರ್ಮಸಂಸತ್ತಿನಲ್ಲಿ ಸಂತರೇ ಹಲವು ನಿರ್ಣಯ ಮಾಡಲಿದ್ದಾರೆ. ನ.26 ರಾಜ್ಯದ ಎಲ್ಲಾ ಜಾತಿ ಪ್ರಮುಖರು ಬರುತ್ತಾರೆ. ಈ ಕಾರ್ಯಕ್ರಮಕ್ಕೆ 3500 ಜಾತಿ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಹಿಂದೂ ಧರ್ಮದ ಮೇಲಿನ ಆಕ್ರಮಣ ಹೆಚ್ಚಾಗಿದ್ದು, ಹಿಂದೂ ಧರ್ಮದ ಜನರಲ್ಲಿ ಜಾಗೃತಿ ನಡೆಯಲಿದೆ ಗೋಪಾಲ್ ತಿಳಿಸಿದರು.

    https://www.youtube.com/watch?v=9WT11xFPWIc

    https://www.youtube.com/watch?v=gMCRfdWRT8w

  • ನಮ್ಮ ಜೊತೆ ಬನ್ನಿ, ಇಲ್ಲ ಮಠ ಬಿಡಿ- ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಮತ್ತೆ ಸಭೆಗೆ ನಿರ್ಧಾರ

    ನಮ್ಮ ಜೊತೆ ಬನ್ನಿ, ಇಲ್ಲ ಮಠ ಬಿಡಿ- ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಮತ್ತೆ ಸಭೆಗೆ ನಿರ್ಧಾರ

    ಬೆಂಗಳೂರು: ನಮ್ಮ ಜೊತೆ ಬನ್ನಿ…ಇಲ್ಲ ಮಠ ಬಿಡಿ…! ಇಂಥದೊಂದು ಘೋಷ ವಾಕ್ಯ ಇಟ್ಟುಕೊಂಡು ಲಿಂಗಾಯತ ಮುಖಂಡರು ಹೋರಾಟ ಆರಂಭಿಸಲು ತೀರ್ಮಾನಿಸಿದ್ದಾರೆ.

    ಪ್ರತ್ಯೇಕ ಧರ್ಮದ ವಿಚಾರವಾಗಿ ಅಕ್ಟೋಬರ್ 4ರಂದು ಮತ್ತೆ ಸಭೆ ಸೇರಲು ಲಿಂಗಾಯತ – ವೀರಶೈವ ಮುಖಂಡರು ತೀರ್ಮಾನಿಸಿದ್ದಾರೆ. ಸಚಿವ ಶರಣ್ ಪ್ರಕಾಶ್ ಪಾಟೀಲ್ ಕರೆದಿರೋ ಈ ಸಭೆಯಲ್ಲಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್, ವಿನಯ್ ಕುಲಕರ್ಣಿ, ಬಸವರಾಜ್ ಹೊರಟ್ಟಿ ಸೇರಿದಂತೆ ಎಲ್ಲಾ ಲಿಂಗಾಯಿತ ಮುಖಂಡರು ಭಾಗವಹಿಸಲು ತೀರ್ಮಾನಿಸಿದ್ದಾರೆ.

    ಇದಲ್ಲದೇ ಪ್ರತ್ಯೇಕ ಧರ್ಮಕ್ಕೆ ಒಪ್ಪಿಗೆ ನೀಡದೇ ಇದ್ರೆ ನಮ್ಮ ಪಾಡಿಗೆ ನಾವು, ನಿಮ್ಮ ಪಾಡಿಗೆ ನೀವು ಅನ್ನೋ ಸಂದೇಶ ರವಾನಿಸಲು ಕೂಡ ನಿರ್ಧರಿಸಿದ್ದಾರೆ. ಪದೇ ಪದೇ ಮೀಟಿಂಗ್ ಸೇರಿ ಗೊಂದಲ ಸೃಷ್ಟಿಯಾಗೋದನ್ನು ತಡೆಯಲು ಲಿಂಗಾಯತ ಮುಖಂಡರು ಈ ತೀರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗಿದೆ.

    ಲಿಂಗಾಯಿತ ಪ್ರತ್ಯೇಕ ಧರ್ಮದ ವಿಚಾರಕ್ಕೆ ಬಿಜೆಪಿ ಶಾಸಕರು ಪರೋಕ್ಷವಾಗಿ ಬೆಂಬಲಕ್ಕೆ ನಿಂತಿದ್ದಾರೆ ಎನ್ನಲಾಗಿದೆ. ಧರ್ಮದ ವಿಚಾರವಾಗಿ ತುಟಿಕ್‍ಪಿಟಿಕ್ ಅನ್ನ ಬಾರದು ಅನ್ನೋ ಆರ್‍ಎಸ್‍ಎಸ್ ಕಟ್ಟಾಜ್ಞೆ ಒಂದು ಕಡೆಯಾದ್ರೇ ಹೇಗಾದ್ರು ಸರಿ ನಮ್ಮ ಸಮುದಾಯ ಮತ್ತು ಸಮುದಾಯದ ಮತಗಳನ್ನು ಉಳಿಸಿಕೊಳ್ಳಬೇಕು ಅಂತ ಬಿಜೆಪಿ ಶಾಸಕರು ಶತಾಯಗತಾಯ ಹೋರಾಟಕ್ಕೆ ನಿಂತಿದ್ದಾರಂತೆ.

    ಲಿಂಗಾಯತ ಸಮಾವೇಶ ಎಲ್ಲಿ ನಡೆದರೂ ಕೂಡ ಪರೋಕ್ಷವಾಗಿ ಬಿಜೆಪಿ ಶಾಸಕರು ಸಾರಿಗೆ ವ್ಯವಸ್ಥೆ ಮಾಡಿಕೊಡ್ತಾ ಇದ್ದಾರೆ ಎನ್ನಲಾಗಿದೆ. ಪ್ರತಿ ಸಮಾವೇಶಕ್ಕೂ 30 ರಿಂದ 40 ಬಸ್‍ಗಳಲ್ಲಿ ತಮ್ಮ ಸಮುದಾಯದ ಮುಖಂಡರನ್ನು ಕಳುಹಿಸಿಕೊಡ್ತಿದ್ದು, ಈ ವಿಚಾರ ಎಲ್ಲಿಯೂ ಕೂಡ ಬಹಿರಂಗಪಡಿಸಬೇಡಿ. ಉಳಿದಕ್ಕೆ ನಮ್ಮ ಬೆಂಬಲವಿದೆ ಅನ್ನೋ ಸಂದೇಶ ಲಿಂಗಾಯತ ಮುಖಂಡರಿಗೆ ರವಾನಿಸಿದ್ದಾರೆ ಎಂದು ಹೇಳಲಾಗಿದೆ. ಬಿಜೆಪಿ ಶಾಸಕರ ಈ ನಡೆ ಬಿಎಸ್‍ವೈ ಮತ್ತು ಶೆಟ್ಟರ್ ಅವರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ.

  • ಅನ್ಯಧರ್ಮೀಯ ಯುವತಿಯನ್ನ ಪ್ರೀತ್ಸಿದ್ದಕ್ಕೆ ಯುವಕನನ್ನು ವಿವಸ್ತ್ರಗೊಳಿಸಿ ಥಳಿಸಿದ್ರು

    ಅನ್ಯಧರ್ಮೀಯ ಯುವತಿಯನ್ನ ಪ್ರೀತ್ಸಿದ್ದಕ್ಕೆ ಯುವಕನನ್ನು ವಿವಸ್ತ್ರಗೊಳಿಸಿ ಥಳಿಸಿದ್ರು

    ರಾಂಚಿ: ಅನ್ಯ ಧರ್ಮದ ಯುವತಿಯನ್ನ ಪ್ರೀತಿಸಿದ್ದಕ್ಕೆ ಯುವಕನನ್ನು ವಿವಸ್ತ್ರಗೊಳಿಸಿ ಥಳಿಸಿರುವ ಅಮಾನವೀಯ ಘಟನೆ ಜಾಖಂಡ್‍ನ ಬೊಕಾರೋ ಜಿಲ್ಲೆಯಲ್ಲಿ ನಡೆದಿದೆ.

    ಥಳಿತಕ್ಕೊಳಗಾದ ಯುವಕನನ್ನು ಮೊಹಮ್ಮದ್ ಶಕಿರ್ ಎಂದು ಗುರುತಿಸಲಾಗಿದೆ. ಮಂಗಳವಾರದಂದು ಬೊಕಾರೋದ ಕಥಾರಾ ಪ್ರದೇಶದಲ್ಲಿ ಜನರ ಗುಂಪು ಶಕಿರ್‍ನನ್ನು ಥಳಿಸಿದ ಪರಿಣಾಮ ಅವರಿಗೆ ಗಂಭೀರ ಗಾಯಗಳಾಗಿವೆ.

    ಇಲ್ಲಿನ ಪ್ರಾಗ್ಯಾ ಸೆಂಟರ್‍ನಲ್ಲಿ ಉದ್ಯೋಗಿಯಾಗಿರೋ ಶಕಿರ್ ಯುವತಿಯೊಬ್ಬರ ಜೊತೆ ಕಚೇರಿಯಲ್ಲಿ ಆಕ್ಷೇಪಾರ್ಹ ಸ್ಥಿತಿಯಲ್ಲಿ ಇದ್ದಿದ್ದನ್ನು ಕೆಲವು ಸ್ಥಳೀಯರು ನೋಡಿದ್ರು.

    ಕೂಡಲೇ 10ಕ್ಕೂ ಹೆಚ್ಚು ಜನ ಗುಂಪು ಸೇರಿ ಶಕೀರ್ ಅವರನ್ನ ಆಫೀಸ್‍ನಿಂದ ಹೊರಗೆ ಎಳೆದುಕೊಂಡು ಬಂದಿದ್ದಾರೆ. ನಂತರ ಅವರನ್ನ ವಿವಸ್ತ್ರಗೊಳಿಸಿ ಮಾರ್ಕೆಟ್ ಪ್ರದೇಶದಲ್ಲಿ ಮೆರವಣಿಗೆ ಮಾಡಿದ್ದಾರೆ.

    ನಂತರ ಶಕಿರ್‍ರನ್ನ ಮನಬಂದಂತೆ ಥಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಗುಂಪನ್ನು ನಿಯಂತ್ರಿಸಲು ಹರಸಾಹಸಪಟ್ಟಿದ್ದು, ಶಕಿರ್‍ರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಎಫ್‍ಐಆರ್ ದಖಲಿಸಿಕೊಂಡಿದ್ದು, ಸ್ಥಳೀಯ ಮಂತು ಯಾದವ್ ಎಂಬವರನ್ನ ಬಂಧಿಸಿದ್ದಾರೆ. ವಿಡಿಯೋ ಆಧಾರದ ಮೇಲೆ ಮತ್ತಷ್ಟು ಜನರನ್ನ ಶೀಘ್ರದಲ್ಲೇ ಬಂಧಿಸುವ ಸಾಧ್ಯತೆಯಿದೆ.

    ಘಟನೆ ಬಳಿಕ ಈ ಪ್ರದೇಶದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.

  • 2013ರಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಬೇಕೆಂದಿದ್ದ ಬಿಎಸ್‍ವೈ ಈಗ ಸೈಲೆಂಟ್!

    2013ರಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಬೇಕೆಂದಿದ್ದ ಬಿಎಸ್‍ವೈ ಈಗ ಸೈಲೆಂಟ್!

    ಬೆಂಗಳೂರು: ವೀರಶೈವ-ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡಬೇಕೆನ್ನುವ ವಿಚಾರದಲ್ಲಿ ಈಗ ತಟಸ್ಥರಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಈ ಹಿಂದೆ ಪ್ರತ್ಯೇಕ ಧರ್ಮಕ್ಕಾಗಿ ಒತ್ತಾಯಿಸಿದ ಸ್ಫೋಟಕ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ರಾಜ್ಯ ಕಾಂಗ್ರೆಸ್ ಸರ್ಕಾರ ಎಬ್ಬಿಸಿರುವ ‘ಪ್ರತ್ಯೇಕ ಧರ್ಮ’ದ ವಿವಾದ ಸಂಬಂಧ ಈಗ ಬಿಜೆಪಿ ನಾಯಕರು ಮೌನವಾಗಿದ್ದಾರೆ. ಆದರೆ 2013ರಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಕೆಜೆಪಿಯಲ್ಲಿದ್ದಾಗ ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಪತ್ರ ಬರೆದು ಪ್ರತ್ಯೇಕ ಧರ್ಮಕ್ಕೆ ಪ್ರಸ್ತಾವನೆ ಇಟ್ಟಿದ್ದ ಸ್ಫೋಟಕ ಮಾಹಿತಿ ಇದೀಗ ಲಭ್ಯವಾಗಿದೆ.

    ‘ವೀರಶೈವ-ಲಿಂಗಾಯತಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡಬೇಕು’ ಎಂದು ಒತ್ತಾಯಿಸಿ ಅಖಿಲ ಭಾರತ ವೀರಶೈವ ಮಹಾ ಸಭಾ ನಾಲ್ಕು ವರ್ಷಗಳ ಹಿಂದೆ ಸಲ್ಲಿಸಿದ್ದ ಪತ್ರಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ಸಚಿವರಾದ ಈಶ್ವರ ಖಂಡ್ರೆ, ಶರಣಪ್ರಕಾಶ ಪಾಟೀಲ, ಎಂ.ಬಿ ಪಾಟೀಲ, ವಿನಯ ಕುಲಕರ್ಣಿ, ಮುಖ್ಯ ಸಚೇತಕ ಅಶೋಕ ಪಟ್ಟಣ, ಸಂಸದ ಪ್ರಭಾಕರ ಕೋರೆ, ಮಾಜಿ ಸಚಿವರಾದ ಉಮೇಶ್ ಕತ್ತಿ, ಬಸವರಾಜ ಬೊಮ್ಮಾಯಿ, ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಸೇರಿದಂತೆ ಸುಮಾರು 50ಕ್ಕೂ ಹೆಚ್ಚು ಲಿಂಗಾಯತ ಮುಖಂಡರು ಸಹಿ ಕೂಡ ಮಾಡಿದ್ದಾರೆ.

    ‘ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆಗಾಗಿ ಅಖಿಲ ಭಾರತ ವೀರಶೈವ ಮಹಾಸಭಾ ಸಲ್ಲಿಸಿದ ಮನವಿಗೆ ನಮ್ಮೆಲ್ಲರ ಒಪ್ಪಿಗೆ ಇದ್ದು, ಆದಷ್ಟು ಬೇಗ ಪ್ರತ್ಯೇಕ ಧರ್ಮ ಘೋಷಣೆ ಮಾಡಬೇಕು’ ಎಂದು ಮನವಿಯಲ್ಲಿ ನಾಯಕರು ತಿಳಿಸಿದ್ದಾರೆ. 2013ರ ಜುಲೈ 7ರಂದು ಕೇಂದ್ರ ಗೃಹ ಸಚಿವರಾಗಿದ್ದ ಸುಶೀಲ್ ಕುಮಾರ್ ಶಿಂಧೆಗೆ ಹಾಗೂ ಅದೇ ವರ್ಷ ಜುಲೈ 25ರಂದು ಅಂದಿನ ಪ್ರಧಾನಿಗೆ ಪ್ರತ್ಯೇಕ ಮನವಿ ಸಲ್ಲಿಸಲಾಗಿದೆ.

    ಪತ್ರದಲ್ಲೇನಿದೆ?:  

    ಅಖಿಲ ಭಾರತ ವೀರಶೈವ ಮಹಾಸಭಾ (ರಿ)

    ಗೆ,
    ಡಾ. ಮನಮೋಹನ್ ಸಿಂಗ್
    ಗೌರವಾನ್ವಿತ ಪ್ರಧಾನ ಮಂತ್ರಿಗಳು
    ಭಾರತ ಸರ್ಕಾರ
    ನವದೆಹಲಿ-110001

    ಮಾನ್ಯರೇ,

                                 ವಿಷಯ: ವೀರಶೈವ ಲಿಂಗಾಯತ ಸ್ವತಂತ್ರ ಧರ್ಮವನ್ನಾಗಿ ಪರಿಗಣಿಸುವಂತೆ, ಹಾಗೂ ಜನಗಣತಿಯಲ್ಲಿ ಪ್ರತ್ಯೇಕ ಕೋಡ್, ಕಾಲಂ ನೀಡುವಂತೆ ಕೋರಿ ಸಲ್ಲಿಸಿದ ಮನವಿ

    ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ, ಕೇರಳ ಗೋವಾ ಸೇರಿದಂತೆ ದೇಶದ ಇತರೆ ಪ್ರದೇಶಗಳ ಜನಪ್ರತಿನಿಧಿಗಳಾದ ನಾವು ದಿನಾಂಕ 25-72013 ರಂದು ಬೆಂಗಳೂರಿನಲ್ಲಿ ಸಭೆ ಸೇರಿ, ಸುಮಾರು 4 ಕೋಟಿ ಜನಸಂಖ್ಯೆ ಹೊಂದಿರುವ ವೀರಶೈವ-ಲಿಂಗಾಯತ ಸಮುದಾಯವನ್ನ ಸ್ವತಂತ್ರ ಧರ್ಮವಾಗಿ ಪರಿಗಣಿಸುವಂತೆ ಮನವಿ ಸಲ್ಲಿಸಲು ತೀರ್ಮಾನಿಸಲಾಯ್ತು.

    ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರು ಕೂಡ ಕೇಂದ್ರ ಗೃಹ ಸಚಿವರಿಗೆ ವೀರಶೈವ-ಲಿಂಗಾಯತ ಸಮುದಾಯವನ್ನ ಸ್ವತಂತ್ರ ಧರ್ಮವಾಗಿ ಪರಿಗಣಿಸುವಂತೆ ಮನವಿ ಪತ್ರವನ್ನ ಸಲ್ಲಿಸಿದ್ದು, ಜನಗಣತಿ ಸಂದರ್ಭದಲ್ಲಿ ಜೈನ, ಬೌದ್ಧ, ಸಿಖ್ ಧರ್ಮಗಳಿಗೆ ಇರುವ ಪ್ರತ್ಯೇಕ ಮಾನ್ಯತೆಯಂತೆ ವೀರಶೈವ ಲಿಂಗಾಯತ ಧರ್ಮಕ್ಕೂ ನೀಡಬೇಕೆಂದು ಕೇಳಿಕೊಂಡಿರುತ್ತಾರೆ.
    ನಾವು ವೀರಶೈವ ಲಿಂಗಾಯತ ಧರ್ಮದ ಅನುಯಾಯಿಗಳಾಗಿದ್ದು, ನಾವೆಲ್ಲರೂ ವೀರೆಶೈವ ಲಿಂಗಾಯತ ಧರ್ಮವನ್ನ ಸ್ವತಂತ್ರ ಧರ್ಮವನ್ನಾಗಿ ಪರಿಗಣಿಸಲು ಅಖಿಲ ಭಾರತ ವೀರಶೈವ ಮಹಾಸಭಾ ಸಲ್ಲಿಸಿರುವ ಮನವಿ ಪತ್ರವನ್ನ ನಾವೆಲ್ಲಾ ಒಗ್ಗಟ್ಟಾಗಿ ಬೆಂಬಲಿಸುತ್ತೇವೆ. ಹಾಗೂ ಗೃಹ ಸಚಿವರಿಗೆ ಸಲ್ಲಿಸಿರುವ ಮನವಿಯನ್ನ ಪರಿಗಣಿಸಲು ಸಲಹೆ ನೀಡಬೇಕು ಎಂದು ತಮ್ಮಲ್ಲಿ ಕೇಳಿಕೊಳ್ಳುತ್ತೇವೆ.

    ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರು, ಬಸವ ಸಮಿತಿ ಅಧ್ಯಕ್ಷರು, ಮಹಾರಾಷ್ಟ್ರ, ಕೇರಳ ರಾಜ್ಯಘಟಕದ ಅಧ್ಯಕ್ಷರು, ಕರ್ನಾಟಕ, ಆಂದ್ರ ಪ್ರದೇಶ, ತಮಿಳುನಾಡು ರಾಜ್ಯದ ಸಚಿವರು, ಶಾಸಕರು, ಪರಿಷತ್ ಸದಸ್ಯರು ನ್ಯಾಯಕ್ಕಾಗಿ ಈ ಮನವಿ ಸಲ್ಲಿಸುತ್ತಿದ್ದು, ಯಾವುದೇ ಕಾರಣಕ್ಕೂ ತಡ ಮಾಡದೇ ನಮ್ಮ ಮನವಿಯನ್ನ ಪುರಸ್ಕರಿಸಬೇಕೆಂದು ಕೇಳಿಕೊಳ್ಳುತ್ತೇವೆ.

    ವೀರಶೈವ ಲಿಂಗಾಯತ ಅನುಯಾಯಿಗಳ ಸಂಖ್ಯೆ ಸಿಖ್, ಜೈನ, ಬೌಧ ಧರ್ಮದ ಅನುಯಾಯಿಗಳಿಂದ ಹೆಚ್ಚಿದ್ದಾರೆ. ಇದೆಲ್ಲವನ್ನ ಪರಿಗಣನೆಗೆ ತೆಗೆದುಕೊಂಡು ನಮ್ಮ ಧರ್ಮಕ್ಕೆ ನ್ಯಾಯ ಒದಗಿಸಿ. ಜನಗಣತಿ ಸಮಯದಲ್ಲಿ ವೀರಶೈವ ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಕಾಲಂ/ಕೋಡ್ ನಂಬರ್ ನೀಡುವುದರ ಮೂಲ ವೀರಶೈವ ಲಿಂಗಾಯತರನ್ನ ಜನಸಂಖ್ಯೆಯನ್ನ ಕ್ರೋಢೀಕರಿಸಿ, ಭಾರತ ಸರ್ಕಾರ ಸ್ವತಂತ್ರ ಧರ್ಮವಾಗಿ ಘೋಷಿಸಿ ಎಂದು ಕೇಳಿಕೊಳ್ಳುತ್ತೇವೆ.

                                                  ವಂದನೆಗಳೊಂದಿಗೆ                                                     ಇಂತಿ ನಿಮ್ಮ ವಿಶ್ವಾಸಿ

     

  • ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಒತ್ತಾಯ – ಆಗಸ್ಟ್ 22ಕ್ಕೆ ಬೆಳಗಾವಿಯಲ್ಲಿ ಬೃಹತ್ ಜಾಥಾ

    ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಒತ್ತಾಯ – ಆಗಸ್ಟ್ 22ಕ್ಕೆ ಬೆಳಗಾವಿಯಲ್ಲಿ ಬೃಹತ್ ಜಾಥಾ

    ಬೆಳಗಾವಿ: ಬಸವಾದಿ ಶರಣರು ಸ್ಥಾಪಿಸಿದ ಲಿಂಗಾಯತ ಧರ್ಮಕ್ಕೆ ಸ್ವಾತಂತ್ರ್ಯ ಧರ್ಮದ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಇದೇ ಆಗಸ್ಟ್ 22ರಂದು ಬೆಳಗಾವಿಯಲ್ಲಿ ಲಿಂಗಾಯತರು ಬೃಹತ್ ಜಾಥಾ ನಡೆಸಲಿದ್ದಾರೆ.

    ಜಾಥಾದಲ್ಲಿ ಮೂರು ಲಕ್ಷ ಲಿಂಗಾಯತರು ಭಾಗವಹಿಸಲ್ಲಿದ್ದಾರೆ. ಕೂಡಲೇ ರಾಜ್ಯ ಸರ್ಕಾರ ಪ್ರತ್ಯೇಕ ಲಿಂಗಾಯತ ಧರ್ಮ ರಚನೆಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಸ್ವಾಮೀಜಿಗಳು ಒತ್ತಾಯ ಮಾಡಲಿದ್ದಾರೆ.

    ಜೈನ, ಬೌದ್ಧ, ಸಿಖ್ ಧರ್ಮದಂತೆ ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಬೇಕಾಗಿದೆ ಅಂತಾ ಲಿಂಗಾಯತ ಶ್ರೀಗಳು ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ಮಾಡಿ ಒತ್ತಾಯ ಮಾಡಿದ್ದಾರೆ.

    ಜುಲೈ 19ರಂದು ಬೀದರ್ ನಲ್ಲಿ ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ನೀಡುವಂತೆ ಆಗ್ರಹಿಸಿ  ಲಿಂಗಾಯತ ಧರ್ಮ ಸಮನ್ವಯ ಸಮಿತಿಯಿಂದ  ಬೃಹತ್ ಮೆರವಣಿಗೆ ನಡೆದಿತ್ತು. ಸರ್ಕಾರದ ಮೇಲೆ ಒತ್ತಡ ಹೇರಲು ನಡೆದ ಈ ಮೆರವಣಿಗೆಯಲ್ಲಿ ಲಿಂಗಾಯತ ಸಮುದಾಯ ಭಾಗವಹಿಸುವ ಮೂಲಕ ಹೋರಾಟಕ್ಕೆ ಸಾಕ್ಷಿಯಾಗಿದ್ದರು