Tag: Religious Procession

  • Uttar Pradesh | ದುರ್ಗಾದೇವಿ ಮೂರ್ತಿ ವಿಸರ್ಜನೆ ವೇಳೆ ಕೋಮು ಸಂಘರ್ಷ – ಲಾಠಿ ಚಾರ್ಜ್, 30 ಮಂದಿ ಬಂಧನ

    Uttar Pradesh | ದುರ್ಗಾದೇವಿ ಮೂರ್ತಿ ವಿಸರ್ಜನೆ ವೇಳೆ ಕೋಮು ಸಂಘರ್ಷ – ಲಾಠಿ ಚಾರ್ಜ್, 30 ಮಂದಿ ಬಂಧನ

    ಲಕ್ನೋ: ದುರ್ಗಾದೇವಿ ಮೂರ್ತಿ ವಿಸರ್ಜಣೆ ವೇಳೆ ಎರಡು ಗುಂಪುಗಳ ನಡುವೆ ಕೋಮು ಸಂಘರ್ಷ (Communal clashes) ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಮೃತಪಟ್ಟ ಪರಿಣಾಮ ಹಲವು ಮನೆಗಳಿಗೆ ಬೆಂಕಿ ಹಚ್ಚಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್‌ನ (Bahraich) ಹಳ್ಳಿಯೊಂದರಲ್ಲಿ ನಡೆದಿದೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

    ಬಹ್ರೈಚ್‌ನ ಮಹ್ಸಿ ಉಪವಿಭಾಗದ ಮೂಲಕ ಸಾಗುತ್ತಿದ್ದ ಮೆರವಣಿಗೆಯ ಮೇಲೆ ಕಲ್ಲು ತೂರಾಟ ಮತ್ತು ಗುಂಡಿನ ದಾಳಿ ನಡೆಸಿದಾಗ ಘರ್ಷಣೆಗಳು ಭುಗಿಲೆದ್ದವು. ಘರ್ಷಣೆಯ ನಂತರ ಜಿಲ್ಲಾಡಳಿತವು ಮಹ್ಸಿಯಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕನಿಷ್ಠ 30 ಜನರನ್ನು ಬಂಧಿಸಿದ್ದಾರೆ. ಸಲ್ಮಾನ್ ಎಂದು ಗುರುತಿಸಲಾದ ಒರ್ವ ವ್ಯಕ್ತಿಯನ್ನು ಪೊಲೀಸರು (UP Police) ಆತನ ಮನೆ ಮತ್ತು ಅಂಗಡಿಯಿಂದ ಮೆರವಣಿಗೆಯ ಮೇಲೆ ಗುಂಡು ಹಾರಿಸಿದ ಪುರಾವೆಗಳನ್ನು ಕಂಡುಕೊಂಡ ಬಳಿಕ ಬಂಧಿಸಿದ್ದಾರೆ.

    ಜೊತೆಗೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ತು ಜನರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಹತ್ತು ಜನರಲ್ಲಿ ಆರು ಜನರನ್ನು ಅಬ್ದುಲ್ ಹಮೀದ್, ಸರ್ಫರಾಜ್, ಫಹೀಮ್, ಸಾಹಿರ್ ಖಾನ್, ನಂಕೌ ಮತ್ತು ಮಾರ್ಫ್ ಅಲಿ ಎಂದು ಗುರುತಿಸಿದೆ ಬಾಕಿ ನಾಲ್ವರು ಆರೋಪಿಗಳ ಗುರುತು ಪತ್ತೆಯಾಗಬೇಕಿದೆ. ಇದನ್ನೂ ಓದಿ: ಕಾಂಗ್ರೆಸ್‌ ಸರ್ಕಾರಕ್ಕೆ ಭಯೋತ್ಪಾದಕರೇ ಬಿಗ್ ಬಾಸ್, ಸಿದ್ದರಾಮಯ್ಯ ಮುಸಲ್ಮಾನರ ಬಿಗ್‌ ಬಾಸ್: ಅಶೋಕ್‌ ಲೇವಡಿ

    ಗಲಭೆಕೋರರ ವಿರುದ್ಧ ಕಠಿಣ ಕ್ರಮ:
    ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘಟನೆಯನ್ನು ಖಂಡಿಸಿದ್ದಾರೆ. ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆ ಕುರಿತು ಚರ್ಚಿಸಲು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ತಪ್ಪಿತಸ್ಥರನ್ನು ಬಿಡಲಾಗುವುದಿಲ್ಲ, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತಂದವರನ್ನು ಬಿಡಲಾಗುವುದಿಲ್ಲ. ಎಲ್ಲರಿಗೂ ಸುರಕ್ಷತೆಯ ಭರವಸೆ ಇದೆ, ಆದರೆ ಗಲಭೆಕೋರರನ್ನು ಮತ್ತು ಘಟನೆಗೆ ಕಾರಣವಾದವರ ನಿರ್ಲಕ್ಷ್ಯವನ್ನು ಗುರುತಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆಗಳನ್ನು ನೀಡಲಾಗಿದೆ ಎಂದು ಹೇಳಿದ್ದಾರೆ.

    ಯಾವುದೇ ಸಮುದಾಯವು ಇತರ ಸಮುದಾಯವನ್ನು ಕೆರಳಿಸಬಾರದು. ಯಾವುದೇ ಸಮುದಾಯವು ಇತರ ಸಮುದಾಯದ ಮೇಲೆ ಕಲ್ಲು ತೂರಾಟ ಮಾಡಬಾರದು. ನಿಮ್ಮ ಸಮಸ್ಯೆಗಳನ್ನು ಆಡಳಿತಕ್ಕೆ ಹೇಳುವುದು ಸರಿಯಾದ ಮಾರ್ಗವಾಗಿದೆ. ಆದರೆ ಜನರು ಸಮುದಾಯಗಳನ್ನು ಪ್ರಚೋದಿಸುತ್ತಾರೆ ಎಂದು ಎಸ್ಪಿ ನಾಯಕ ಎಸ್‌.ಟಿ ಹಸನ್ ಹೇಳಿದ್ದಾರೆ. ಇದನ್ನೂ ಓದಿ: ಎಸ್‌ಸಿಒ ಶೃಂಗಸಭೆ – ಮಂಗಳವಾರ ಪಾಕ್‌ಗೆ ಪ್ರಯಾಣಿಸಲಿದ್ದಾರೆ ಭಾರತದ ವಿದೇಶಾಂಗ ಸಚಿವ ಜೈಶಂಕರ್‌

    ನಮಾಜ್ ಸಮಯದಲ್ಲಿ ಜನರು ಮಸೀದಿಗಳ ಬಳಿ ಧ್ವನಿವರ್ಧಕದಲ್ಲಿ ಡಿಜೆ ಹಾಕುತ್ತಾರೆ. ಅಂತಹ ಘರ್ಷಣೆಗಳು ನಡೆಯುವ ಹೆಚ್ಚಿನ ಸ್ಥಳಗಳಲ್ಲಿ ಅದು ಹಿಂದೂ-ಮುಸ್ಲಿಂ ಹಿಂಸಾಚಾರವಾಗಿ ಪರಿವರ್ತನೆಯಾಗುತ್ತದೆ. ಇದು ದೇಶ ಮತ್ತು ಸಮಾಜವನ್ನು ದುರ್ಬಲಗೊಳಿಸುತ್ತದೆ. ಕಾನೂನನ್ನು ಕೈಯಲ್ಲಿ ತೆಗೆದುಕೊಳ್ಳುವವರ ವಿರುದ್ಧ ಇದರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಮೊರಾದಾಬಾದ್ ಮಾಜಿ ಸಂಸದರು ಹೇಳಿದ್ದಾರೆ.

  • ವಿಶ್ವ ಹಿಂದೂ ಪರಿಷತ್‌ ಮೆರವಣಿಗೆ ಮೇಲೆ ಕಲ್ಲು ತೂರಾಟ – ಹರಿಯಾಣದಲ್ಲಿ ಹಿಂಸಾಚಾರ, ಇಬ್ಬರು ಸಾವು

    ವಿಶ್ವ ಹಿಂದೂ ಪರಿಷತ್‌ ಮೆರವಣಿಗೆ ಮೇಲೆ ಕಲ್ಲು ತೂರಾಟ – ಹರಿಯಾಣದಲ್ಲಿ ಹಿಂಸಾಚಾರ, ಇಬ್ಬರು ಸಾವು

    ಚಂಡೀಗಢ: ಹರಿಯಾಣದ (Haryana) ಮೇವತ್‌ ಪ್ರದೇಶದ ನಂದ್‌ಗ್ರಾಮ್‌ನಲ್ಲಿ ಸೋಮವಾರ ವಿಶ್ವ ಹಿಂದೂ ಪರಿಷತ್‌ ವತಿಯಿಂದ ಆಯೋಜಿಸಲಾಗಿದ್ದ ಮೆರವಣಿಗೆ (Religious Procession) ಮೇಲೆ ಕಲ್ಲು ತೂರಾಟ ನಡೆದಿದ್ದು, ಗಲಭೆ ತೀವ್ರ ಸ್ವರೂಪ ಪಡೆದು ಹಿಂಸಾಚಾರಕ್ಕೆ ತಿರುಗಿದೆ.

    ಈ ವೇಳೆ ಕಲ್ಲು ಎಸೆದು ಕಾರುಗಳಿಗೆ ಬೆಂಕಿ ಹಚ್ಚಿದ ಗುಂಪೊಂದು ಗುಂಡು ಹಾರಿಸಿ ಇಬ್ಬರು ಹೋಮ್‌ ಗಾರ್ಡ್‌ಗಳನ್ನ ಹತ್ಯೆ ಮಾಡಿದ್ದಾರೆ. ಅಲ್ಲದೇ 7 ಮಂದಿ ಪೊಲೀಸರು ಗಾಯಗೊಂಡಿದ್ದಾರೆ. ಕಿಡಿಗೇಡಿಗಳು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರು (Police) ಅಶ್ರುವಾಯು ಪ್ರಯೋಗಿಸಿದ್ದಾರೆ. ಇದನ್ನೂ ಓದಿ: ಲೇಡಿ ಬೌನ್ಸರ್ ಆಗಿದ್ದ ಮುಸ್ಲಿಂ ಮಹಿಳೆ ಈಗ ಶ್ರೀಕೃಷ್ಣನ ಭಕ್ತಿಯಲ್ಲಿ ಲೀನ!

    ವಿಶ್ವ ಹಿಂದೂ ಪರಿಷತ್‌ (Vishwa Hindu Parishad) ಮತ್ತು ಭಜರಂಗದಳದ ಕಾರ್ಯಕರ್ತರು ಗುರುಗ್ರಾಮದಿಂದ ಶೋಭಾಯಾತ್ರೆಯನ್ನ ಆರಂಭಿಸಿದ್ದರು. ಮೆರವಣಿಗೆ ನಂದ್‌ಗ್ರಾಮ ಸಮೀಪಿಸುತ್ತಿದ್ದಂತೆ ಅನ್ಯಕೋಮಿನ ಕೆಲವರು ಯಾತ್ರೆಯನ್ನ ತಡೆದು ಕಲ್ಲು ತೂರಾಟ ನಡೆಸಲು ಮುಂದಾಗಿದ್ದಾರೆ. ಈ ವೇಳೆ ಸಂಘರ್ಷ ಏರ್ಪಟ್ಟಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಭಾರೀ ಹಿಂಸಾಚಾರ ಏರ್ಪಟ್ಟಿರುವುದರಿಂದ ಸುಮಾರು 2,500 ಪುರುಷರು, ಮಹಿಳೆಯರು ಮತ್ತು ಮಕ್ಕಳು ಗುರುಗ್ರಾಮ್ ಬಳಿಯ ದೇವಸ್ಥಾನದಲ್ಲಿ ಆಶ್ರಯ ಪಡೆದಿದ್ದಾರೆ. ಇದನ್ನೂ ಓದಿ: ಉಡುಪಿ ಕೇಸಲ್ಲಿ ಸಂತ್ರಸ್ತೆ, ಆರೋಪಿಗಳ ವಿಚಾರಣೆ- ಪ್ರಕರಣಕ್ಕೆ ಕೇರಳ ಲಿಂಕ್ ಕೊಟ್ಟು ಬಿಜೆಪಿ ಪ್ರತಿಭಟನೆ

    ಭಿವಾನಿ ಹತ್ಯೆ ಪ್ರಕರಣದ ಆರೋಪಿ ಮೋನು ಮನೇಸರ್‌ ಎಂಬಾತ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿಯೇ ಸಮುದಾಯ ಆಕ್ರೋಶ ವ್ಯಕ್ತಪಡಿಸಿ, ಕಲ್ಲುತೂರಾಟಕ್ಕೆ ಮುಂದಾಗಿದೆ ಎನ್ನಲಾಗಿದೆ. ಮತ್ತೊಂದೆಡೆ ಬಜರಂಗದಳದ ಕಾರ್ಯಕರ್ತರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ವೀಡಿಯೋ ಪೋಸ್ಟ್‌ ಮಾಡಿದ್ದಕ್ಕೆ ಸಂಬಂಧಿಸಿದಂತೆ ಗಲಭೆ ನಡೆದಿದೆ ಎಂದೂ ಹೇಳಲಾಗುತ್ತಿದೆ.

    ಇಂಟರ್ನೆಟ್‌ ಬಂದ್‌, 144 ನಿಷೇಧಾಜ್ಞೆ ಜಾರಿ:
    ಗಲಭೆಯ ವಿಡಿಯೊ ಜಾಲತಾಣಗಳಲ್ಲೂ ಹರಿದಾಡುತ್ತಿದ್ದು ಸಂಘರ್ಷ ಮತ್ತಷ್ಟು ವಿಕೋಪಕ್ಕೆ ಹೋಗುವುದನ್ನು ತಡೆಯಲು ಆಗಸ್ಟ್‌ 2ರವರೆಗೆ ಹರ್ಯಾಣದ ನಹ್‌ ಜಿಲ್ಲೆಯಲ್ಲಿ ಅಂಜರ್ತಾಲ ಸೇವೆ ಸ್ಥಗಿತಗೊಳಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಸೆಕ್ಷನ್‌ 144 ನಿಷೇಧಾಜ್ಞೆ ಜಾರಿಗೊಳಿಸಿದ್ದು, ಸಾರ್ವಜನಿಕರು ಪೊಲೀಸರು ಘಟನೆ ಹತ್ತಿಕ್ಕಲು ಶತಪ್ರಯತ್ನ ನಡೆಸುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]