Tag: Remdesivir

  • ರೆಮ್‍ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟ- 11 ಆರೋಪಿಗಳ ಜಾಮೀನು ಅರ್ಜಿ ವಜಾ

    ರೆಮ್‍ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟ- 11 ಆರೋಪಿಗಳ ಜಾಮೀನು ಅರ್ಜಿ ವಜಾ

    ಬಾಗಲಕೋಟೆ: ರೆಮ್‍ಡಿಸಿವಿರ್ ಕಾಳಸಂತೆಕೋರರಿಗೆ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದ್ದು, ಜಾಮೀನು ಕೋರಿ ಸಲ್ಲಿಸಿದ್ದ 11 ಆರೋಪಿಗಳ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

    ಬಾಗಲಕೋಟೆ ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶರಾದ ಪ್ರಕಾಶ ವಿ. ಮಹತ್ವದ ನಿರ್ಧಾರ ಕೈಗೊಂಡಿದ್ದು, 11 ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ರೆಮ್‍ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟ ಮಾಡುವುದು ಗಂಭೀರ ಪ್ರಕರಣವಾಗಿದೆ. ಹೀಗಾಗಿ ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿರುವುದಾಗಿ ನ್ಯಾಯಾಲಯ ತಿಳಿಸಿದೆ.

    ಮೇ 3ರಂದು ನಗರದಲ್ಲಿ ಸಿಇಎನ್ ಪೊಲೀಸರು ದಾಳಿ ನಡೆಸಿ, ರೆಮ್‍ಡಿಸಿವಿರ್ ಕಾಳಸಂತೆಕೋರರನ್ನು ಬಲೆಗೆ ಕೆಡವಿದ್ದರು. 11 ಜನರನ್ನು ಬಂಧಿಸಿ, ಆರೋಪಿಗಳಿಂದ 14 ಇಂಜೆಕ್ಷನ್ ವಶಪಡಿಸಿಕೊಳ್ಳಲಾಗಿತ್ತು. ಈ ಬಗ್ಗೆ ತನಿಖೆ ಕೈಗೊಂಡಿದ್ದ ಪೊಲೀಸರು 11 ಜನರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.

    ಇಂದು ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಸರ್ಕಾರದ ಪರವಾಗಿ ಎಪಿಪಿ ಮಹೇಶ್ ಪಾಟೀಲ್ ವಾದ ಮಂಡಿಸಿದ್ದರು.

  • ರೆಮ್‍ಡಿಸಿವಿರ್, ಕೊರೊನಾ ಔಷಧಿ ನೀಡುವುದಾಗಿ ಹೇಳಿ ಲಕ್ಷಾಂತರ ರೂ. ವಂಚನೆ- ಇಬ್ಬರು ಅರೆಸ್ಟ್

    ರೆಮ್‍ಡಿಸಿವಿರ್, ಕೊರೊನಾ ಔಷಧಿ ನೀಡುವುದಾಗಿ ಹೇಳಿ ಲಕ್ಷಾಂತರ ರೂ. ವಂಚನೆ- ಇಬ್ಬರು ಅರೆಸ್ಟ್

    ಬೆಂಗಳೂರು: ಹಲವರು ರೆಮ್‍ಡಿಸಿವಿರ್ ಸಿಗುತ್ತಿಲ್ಲ ಎಂದು ಪರದಾಡುತ್ತಿದ್ದಾರೆ. ಇದರ ಮಧ್ಯೆಯೇ ಮೋಸ ಮಾಡುವವರು ಸಹ ಹೆಚ್ಚಾಗಿದ್ದು, ನಕಲಿ ಔಷಧಿ ಕಂಪನಿ ಹೆಸರು ಹೇಳಿ, ರೆಮ್‍ಡಿಸಿವಿರ್ ಸೇರಿದಂತೆ ಇತರೆ ಔಷಧಿಗಳನ್ನು ನೀಡುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ.

    ಕೇಂದ್ರ ವಿಭಾಗದ ಸಿಇಎನ್ ಪೊಲೀಸರಿಂದ ಆಫ್ರಿಕನ್ ಪ್ರಜೆ ಸೇರಿ ಇಬ್ಬರನ್ನು ಬಂಧಿಸಲಾಗಿದೆ. ಮೊಹಮ್ಮದ್ ಇಸ್ಮಾಯಿಲ್ ಖಾದ್ರಿ ಹಾಗೂ ಅಳದೆ ಅಬ್ದುಲ್ಲಾ ಯೂಸುಫ್ ಬಂಧಿತರು. ಆರೋಪಿಗಳಿಂದ 4 ಮೊಬೈಲ್ಸ್, 1 ಹಾರ್ಡ್ ಡಿಸ್ಕ್, ಸಿಮ್ ಕಾರ್ಡ್ ಹಾಗೂ 4 ಲಕ್ಷ ರೂ. ನಗದು ವಶಕ್ಕೆ ಪಡೆಲಾಗಿದೆ.

    ರೆಮ್‍ಡಿಸಿವಿರ್ ಸೇರಿದಂತೆ ಕೋವಿಡ್-19ಗೆ ಸಂಬಂಧಿಸಿದ ಔಷಧಿಗಳ ಮಾರಾಟ ಮಾಡುವುದಾಗಿ ನಂಬಿಸಿ ಆರೋಪಿಗಳು ವಂಚಿಸುತ್ತಿದ್ದರು. ನಕಲಿ ಔಷಧಿ ಕಂಪನಿ ಹೆಸರು ಹೇಳಿ ಆರೋಪಿಗಳು ಸಾರ್ವಜನಿಕರನ್ನು ಸಂಪರ್ಕಿಸುತ್ತಿದ್ದರು. ಬಳಿಕ ರೆಮ್‍ಡಿಸಿವಿರ್ ಮತ್ತಿತರ ಔಷಧಿಗಳನ್ನು ನೀಡುವುದಾಗಿ ಹಣ ಪಡೆಯುತ್ತಿದ್ದರು. ಹೀಗೆ ಸಾರ್ವಜನಿಕರನ್ನು ಸಂಪರ್ಕಿಸಿ ಔಷಧಿ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿಗಳನ್ನು ಆರೋಪಿಗಳು ವಂಚಿಸಿದ್ದಾರೆ.

  • ರೆಮ್‍ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟ ಮಾಡಿದ್ರೆ ಕಠಿಣ ಕ್ರಮ: ಡಿಸಿ ಕೆ.ಬಿ.ಶಿವಕುಮಾರ್

    ರೆಮ್‍ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟ ಮಾಡಿದ್ರೆ ಕಠಿಣ ಕ್ರಮ: ಡಿಸಿ ಕೆ.ಬಿ.ಶಿವಕುಮಾರ್

    ಶಿವಮೊಗ್ಗ: ರೆಮ್‍ಡಿಸಿವಿರ್ ಇಂಜೆಕ್ಷನ್ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಯಲು ಎಸ್‍ಪಿ ನೇತೃತ್ವದಲ್ಲಿ ತಂಡ ರಚಿಸಲಾಗಿದ್ದು, ಅಂತಹ ಪ್ರಕರಣಗಳು ಕಂಡುಬಂದರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರಸ್ತುತ ಸರ್ಕಾರಿ ಆಸ್ಪತ್ರೆಯಲ್ಲಿ 172 ಹಾಗೂ ಖಾಸಗಿ ಆಸ್ಪತ್ರೆಯಲ್ಲಿ 306 ರೆಮ್‍ಡಿಸಿವಿರ್ ಇಂಜೆಕ್ಷನ್ ಲಭ್ಯವಿದೆ. ಕಾಳಸಂತೆಯಲ್ಲಿ ಮಾರಾಟವಾಗದಂತೆ ಎಚ್ಚರಿಕೆ ವಹಿಸಲಾಗಿದೆ. ಇಂತಹ ಪ್ರಕರಣ ಪತ್ತೆ ಹಚ್ಚಲು ಸ್ಟಿಂಗ್ ಆಪರೇಷನ್ ಸಹ ನಡೆಸಲಾಗುತ್ತಿದೆ ಎಂದರು.

    ಜಿಲ್ಲೆಯಲ್ಲಿ ಆಕ್ಸಿಜನ್ ಬೇಡಿಕೆ ಪೂರೈಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರಸ್ತುತ ಮೆಗ್ಗಾನ್‍ನಲ್ಲಿ 20 ಕೆಎಲ್ ಸೇರಿದಂತೆ ಒಟ್ಟು 51ಕೆಎಲ್ ಆಕ್ಸಿಜನ್ ಸಂಗ್ರಹಣಾ ಸಾಮಥ್ರ್ಯವಿದೆ. ಭದ್ರಾವತಿಯ ವಿಐಎಸ್‍ಎಲ್‍ನಲ್ಲಿ ಗರಿಷ್ಟ ಸಾಮಥ್ರ್ಯದೊಂದಿಗೆ ಆಕ್ಸಿಜನ್ ಉತ್ಪಾದಿಸಲಾಗುತ್ತಿದ್ದು, ನೆರೆಯ ಚಿಕ್ಕಮಗಳೂರು ಸರ್ಕಾರಿ ಆಸ್ಪತ್ರೆಗೆ ಸಹ ಇಲ್ಲಿಂದ ಆಕ್ಸಿಜನ್ ಪೂರೈಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

    ಜಿಲ್ಲೆಯಲ್ಲಿ ಒಟ್ಟು 104 ವೆಂಟಿಲೇಟರ್ ಲಭ್ಯವಿದೆ. ತಾಲೂಕು ಆಸ್ಪತ್ರೆಗಳಲ್ಲಿರುವ ಕೆಲವು ವೆಂಟಿಲೇಟರ್ ಗಳನ್ನು ಅವಶ್ಯಕತೆಗಳಿಗೆ ಅನುಗುಣವಾಗಿ ಮೆಗ್ಗಾನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ. ಶಿರಾಳಕೊಪ್ಪ ಮತ್ತು ಸೊರಬದಲ್ಲಿ ಒಂದೆರಡು ದಿನಗಳಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸಲು ಸಿದ್ಧತೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

    ಜಿಲ್ಲೆಯಲ್ಲಿ 10,760 ಕೋವಿಶೀಲ್ಡ್ ಮತ್ತು 320 ಡೋಸ್ ಕೋವ್ಯಾಕ್ಸಿನ್ ಲಭ್ಯವಿದೆ. ಕಳೆದ ನಾಲ್ಕು ದಿನಗಳಿಂದ ಕೊರೊನಾ ಪಾಸಿಟಿವ್ ರೇಟ್ ಕಡಿಮೆಯಾಗಿದೆ. ಶೇ.45 ಕ್ಕಿಂತ ಹೆಚ್ಚು ತಲುಪಿದ್ದ ಪಾಸಿಟಿವ್ ರೇಟ್ ಇದೀಗ ಶೇ.40ರ ಆಸು ಪಾಸಿಗೆ ಬಂದಿದೆ. ಸಾರ್ವಜನಿಕರ ಸಹಕಾರದಿಂದ ಇದನ್ನು ಇನ್ನಷ್ಟು ಕಡಿಮೆ ಮಾಡಲು ಸಾಧ್ಯವಿದೆ ಎಂದರು.

  • ಎರಡು ಪ್ರತ್ಯೇಕ ಪ್ರಕರಣ- ನಕಲಿ, ದುಪ್ಪಟ್ಟು ಹಣಕ್ಕೆ ರೆಮ್‍ಡಿಸಿವಿರ್ ಮಾರುತ್ತಿದ್ದ ಐವರ ಬಂಧನ

    ಎರಡು ಪ್ರತ್ಯೇಕ ಪ್ರಕರಣ- ನಕಲಿ, ದುಪ್ಪಟ್ಟು ಹಣಕ್ಕೆ ರೆಮ್‍ಡಿಸಿವಿರ್ ಮಾರುತ್ತಿದ್ದ ಐವರ ಬಂಧನ

    ಬೆಂಗಳೂರು: ಹಲವು ಕೊರೊನಾ ರೋಗಿಗಳು ರೆಮ್‍ಡಿಸಿವಿರ್ ಸಿಗದೆ ನರಳಾಡುತ್ತಿದ್ದಾರೆ. ಕುಟುಂಬಸ್ಥರು ಎಷ್ಟೇ ಪ್ರಯತ್ನಿಸಿದರೂ ರೆಮ್‍ಡಿಸಿವಿರ್ ಸಿಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನಕಲಿ ಹಾಗೂ ದುಪ್ಪಟ್ಟು ಹಣಕ್ಕೆ ರೆಮ್‍ಡಿಸಿವಿರ್ ಮಾರಾಟ ಮಾಡುತ್ತಿದ್ದ ಐವರನ್ನು ಬಂಧಿಸಲಾಗಿದೆ.

    ಸಂಜಯ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ನಡೆದಿದ್ದು, ನಕಲಿ ರೆಮ್‍ಡಿಸಿವಿರ್ ಮಾರಾಟ ಮಾಡುತ್ತಿದ್ದ ಕೃಷ್ಣ, ಸಾಗರ್ ಹಾಗೂ ದುಪ್ಪಟ್ಟು ಹಣಕ್ಕೆ ರೆಮ್‍ಡಿಸಿವಿರ್ ಮಾರಾಟ ಮಾಡುತ್ತಿದ್ದ ರವಿ ಕುಮಾರ್, ಕೃಷ್ಣ, ಮುನಿರಾಜು ಆರೋಪಿಗಳನ್ನು ಬಂಧಿಸಲಾಗಿದೆ.

    ಆರೋಪಿಗಳಾದ ಕೃಷ್ಣ, ಸಾಗರ ದುಪ್ಪಟ್ಟು ಬೆಲೆಗೆ ರೆಮ್‍ಡಿಸಿವಿರ್ ಮಾರಾಟ ಮಾಡುತ್ತಿದ್ದಾಗ ಸಿಕ್ಕಿಬಿದ್ದು, ಕೃಷ್ಣ ಹೊಸೂರು ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾನೆ. ಡಾ.ಸಾಗರ್ ಮಾತೃ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಯಾಗಿ ಕೆಲಸ ಮಾಡಿಕೊಂಡಿದ್ದಾನೆ. ಸರ್ಕಾರದಿಂದ ರೋಗಿಗಳಿಗೆ ಕೊಡಲು ತರುತ್ತಿದ್ದ ರೆಮ್‍ಡಿಸಿವಿರ್ ಉಳಿಸಿಕೊಂಡು ಆರೋಪಿಗಳು ದುಪ್ಪಟ್ಟು ಹಣಕ್ಕೆ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಸಂಜಯ್ ನಗರ ಪೊಲೀಸರು, ಆರೋಪಿಗಳನ್ನ ಬಂಧಿಸಿದ್ದಾರೆ. ಆರೋಪಿಗಳಿಂದ ಅಕ್ರಮವಾಗಿ ದುಪ್ಪಟ್ಟು ಹಣಕ್ಕೆ ಮಾರಾಟ ಮಾಡಲು ಮುಂದಾಗಿದ್ದ ರೆಮ್‍ಡಿಸಿವಿರ್ ವಶಪಡಿಸಿಕೊಳ್ಳಲಾಗಿದೆ.

    ನಕಲಿ ರೆಮ್‍ಡಿಸಿವಿರ್ ಮಾರಾಟ
    ನಕಲಿ ರೆಮ್‍ಡಿಸಿವಿರ್ ಅಸಲಿ ಎಂದು ಮಾರಾಟ ಮಾಡುತ್ತಿದ್ದ ರವಿ ಕುಮಾರ್, ಕೃಷ್ಣ, ಮುನಿರಾಜು ಎಂಬ ಮೂವರು ಆರೋಪಿಗಳನ್ನು ಸಂಜಯ್ ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ನಕಲಿ ರೆಮ್‍ಡಿಸಿವಿರ್ ನ್ನು ಅಸಲಿ ಎಂದು ದುಪ್ಪಟ್ಟು ಹಣಕ್ಕೆ ಮಾರಾಟ ಮಾಡುತ್ತಿದ್ದರು. ಆರೋಪಿಗಳಿಂದ ಒಟ್ಟು 9 ರೆಮ್‍ಡಿಸಿವಿರ್ ವಶಪಡಿಸಿಕೊಳ್ಳಲಾಗಿದೆ. ಸದ್ಯ ಘಟನೆ ಸಂಬಂಧ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

  • ರೆಮ್‍ಡಿಸಿವರ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

    ರೆಮ್‍ಡಿಸಿವರ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

    ಬೆಂಗಳೂರು: ರೆಮ್‍ಡಿಸಿವರ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಲಿಕಾನ್ ಸಿಟಿ ಪೊಲೀಸರು ಬಂಧಿಸಿದ್ದಾರೆ.

    ಸಂತೋಷ್ ಹಾಗೂ ಸುನೀಲ್ ಬಂಧಿತ ಆರೋಪಿಗಳು. ಸಂತೋಷ್ ಖಾಸಗಿ ಆಸ್ಪತ್ರೆ ಸಿಬ್ಬಂದಿಯಾಗಿದ್ರೆ, ಸುನೀಲ್ ಅಂಬುಲೆನ್ಸ್ ಡ್ರೈವರ್ ಆಗಿದ್ದಾನೆ. ಆರೋಪಿಗಳು ರೆಮ್‍ಡಿಸಿವರ್ ಇಂಜೆಕ್ಷನ್ ಅನ್ನು ಹೆಚ್ಚಿನ ಹಣಕ್ಕೆ ಅಕ್ರಮವಾಗಿ ಮಾರಾಟ ಮಾಡುತ್ತಿದ್ದರು.

    ಬಸವೇಶ್ವರ ನಗರದಲ್ಲಿ ಮಾರಾಟ ಮಾಡುತ್ತಿದ್ದ ವೇಳೆ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 8 ರೆಮ್‍ಡಿಸಿವರ್ ಇಂಜೆಕ್ಷನ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಈ ಸಂಬಂಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಅಕ್ರಮವಾಗಿ ರೆಮ್ ಡಿಸಿವರ್ ಚುಚ್ಚುಮದ್ದುಗಳ ಮಾರಾಟ – ಮೂವರ ಬಂಧನ

    ಅಕ್ರಮವಾಗಿ ರೆಮ್ ಡಿಸಿವರ್ ಚುಚ್ಚುಮದ್ದುಗಳ ಮಾರಾಟ – ಮೂವರ ಬಂಧನ

    ಭೋಪಾಲ್: ಕೋವಿಡ್-19 ರೋಗಿಗಳ ಚಿಕಿತ್ಸೆಗೆಂದು ರೆಮ್ ಡಿಸಿವರ್ ಚುಚ್ಚುಮದ್ದುಗಳನ್ನು ಆಕ್ರಮವಾಗಿ ಮಾರಾಟ ಮಾಡುತ್ತಿದ್ದ ಮೆಡಿಕಲ್ ಶಾಪ್ ಮಾಲೀಕ ಹಾಗೂ ಮತ್ತಿಬ್ಬರನ್ನು ಮಧ್ಯಪ್ರದೇಶದ ಪೊಲೀಸರ ವಿಶೇಷ ಕಾರ್ಯಪಡೆ(ಎಸ್‍ಟಿಎಫ್) ಗುರುವಾರ ಬಂಧಿಸಿದೆ.

    ಆರೋಪಿಗಳನ್ನು ರಾಜೇಶ್ ಪಟಿದಾರ್, ಜ್ಞಾನೇಶ್ವರ ಬಾರಸ್ಕರ್ ಮತ್ತು ಅನುರಾಗ್ ಸಿಂಗ್ ಸಿಸೋಡಿಯಾ ಎಂದು ಗುರುತಿಸಲಾಗಿದೆ. ಈ ವಿಚಾರವಾಗಿ ಮಾಹಿತಿ ದೊರೆತ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರ ಬಳಿ ಇದ್ದ ಎಸ್‍ಟಿಎಫ್ ಸ್ಲೀತ್‍ನ ಎರಡು ವಿಭಿನ್ನ ಬ್ರಾಂಡ್‍ಗಳ 12 ಬಾಟಲ್ ಚುಚ್ಚುಮದ್ದುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಮನೀಶ್ ಖತ್ರಿ ಹೇಳಿದ್ದಾರೆ.

    ಬಾಟಲುಗಳ ಮೇಲೆ ಮಾರಾಟದ ನಿಗದಿ ಬೆಲೆಯನ್ನು ಮುದ್ರಿಸಿರಲಿಲ್ಲ. ಆದರೆ ಆರೋಪಿಗಳು ಪ್ರತಿ ಚುಚ್ಚುಮದ್ದಿಗೆ 20,000ರೂ. ಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  • ಚಾಮರಾಜನಗರದಲ್ಲಿ ರೆಮ್‍ಡಿಸಿವಿರ್ ಕೊರತೆ ಇದೆ: ಸುರೇಶ್ ಕುಮಾರ್

    ಚಾಮರಾಜನಗರದಲ್ಲಿ ರೆಮ್‍ಡಿಸಿವಿರ್ ಕೊರತೆ ಇದೆ: ಸುರೇಶ್ ಕುಮಾರ್

    – ಎಸ್‍ಎಸ್‍ಎಲ್‍ಸಿ, ಪಿಯುಸಿ ಪರೀಕ್ಷೆಗಳು ನಡೆಯುತ್ತವೆ

    ಚಾಮರಾಜನಗರ: ಕೊರೊನಾ ಸೋಂಕಿತರಿಗೆ ನೀಡುವ ರೆಮ್‍ಡಿಸಿವಿರ್ ಚುಚ್ಚುಮದ್ದಿನ ಕೊರತೆ ಇದೆ ಎಂಬ ಚರ್ಚೆ ನಡೆಯುತ್ತಿರುವಾಗಲೇ ಚಾಮರಾಜನಗರ ಜಿಲ್ಲೆಯ ಉಸ್ತುವಾರಿ ಅಚಿವರೂ ಆಗಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.

    ಜಿಲ್ಲೆಯ ಹನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೊರೊನಾ ಸೋಂಕಿತರಿಗೆ ನೀಡುವ ರೆಮ್ ಡಿಸಿವಿರ್ ಚುಚ್ಚುಮದ್ದು ಕೊರತೆ ಇದೆ. ಇನ್ನು ಮೂರ್ನಾಲ್ಕು ದಿನಗಳಿಗಾಗುವಷ್ಟು ಮಾತ್ರ ನಮ್ಮಲ್ಲಿ ಸ್ಟಾಕ್ ಇದೆ. ಅಗತ್ಯ ಸಂಖ್ಯೆಯ ರೆಮ್ ಡಿಸಿವಿರ್ ಚುಚ್ಚು ಮದ್ದು ಕಳಿಸಿಕೊಡುವಂತೆ ಆರೋಗ್ಯ ಇಲಾಖೆಯ ಕಾರ್ಯದರ್ಶಿಗಳನ್ನು ಕೇಳಿದ್ದೇನೆ. ರೆಮ್ ಡೆಸಿವಿರ್‍ಗೆ ಪರ್ಯಾಯವಾಗಿ ಮತ್ತೊಂದು ಚುಚ್ಚುಮದ್ದು ಬಂದಿದೆ ಎಂಬ ಮಾಹಿತಿ ಇದೆ. ಆದಷ್ಟು ಬೇಗ ಸ್ಟಾಕ್ ಪೂರೈಸುವಂತೆ ಆರೋಗ್ಯ ಇಲಾಖೆಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.

    ಈಗಿನ ಪರಿಸ್ಥಿತಿ ನೋಡಿದರೆ ರಾಜ್ಯದಲ್ಲಿ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ಪರೀಕ್ಷೆಗಳು ನಡೆಯುತ್ತವೆ. ಆದರೆ ಮಾರ್ಗಸೂಚಿಗಳ ಬಗ್ಗೆ ಆರೋಗ್ಯ ಇಲಾಖೆಯ ಸಲಹೆ ಕೇಳಿದ್ದೇವೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಿಗದಿಯಾಗಿರುವುದು ಜೂನ್ 21 ಕ್ಕೆ, ಇನ್ನೂ ಎರಡು ತಿಂಗಳು ಸಮಯವಿದೆ. ಹೀಗಾಗಿ ಆಗಿನ ಪರಿಸ್ಥಿತಿಯನ್ನು ನೋಡಿಕೊಂಡು ನಿರ್ಧಾರ ಕೈಗೊಳ್ಳಲಾಗುವುದು. ಆದರೆ ಈಗಿನ ಪರಿಸ್ಥಿತಿಗೆ ಹೇಳುವುದಾದರೆ ಪರೀಕ್ಷೆಗಳು ನಡೆಯುತ್ತವೆ. ಪರೀಕ್ಷೆ ನಡೆಸಲು ಕಳೆದ ವರ್ಷ ನೀಡಿದ್ದ ಎಸ್‍ಒಪಿಯನ್ನೇ ಅಳವಡಿಸಬೇಕೆ, ಇನ್ನೂ ಏನಾದರು ಸುಧಾರಣೆ ಮಾಡಬೇಕೆ ಎಂದು ಆರೋಗ್ಯ ಇಲಾಖೆಯ ಸಲಹೆ ಕೇಳಿದ್ದೇವೆ. ಅವರು ನೀಡಿದ ಎಸ್‍ಒಪಿ ಪ್ರಕಾರ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರು.

    ಪರೀಕ್ಷೆ ನಡೆಸುವಂತೆ ಎಲ್ಲ ಕಡೆಯಿಂದ ಒತ್ತಾಯ ಬರುತ್ತಿದೆ. ಸಭಾಪತಿ ಬಸವರಾಜ್ ಹೊರಟ್ಟಿ ಸಹ ಪರೀಕ್ಷೆ ನಡೆಸುವಂತೆ ಪತ್ರ ಬರೆದಿದ್ದಾರೆ. ಪರೀಕ್ಷೆ ಆರಂಭವಾಗುವ ದಿನಾಂಕ ಇನ್ನೂ ಎರಡು ತಿಂಗಳ ಮೇಲಿದೆ. ಆಗಿಂದ್ದಾಗ್ಗೆ ಪರಿಸ್ಥಿತಿ ಅವಲೋಕಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ. 1 ರಿಂದ 9ನೇ ತರಗತಿಗಳಿಗೆ ಪರೀಕ್ಷೆ ನಡೆಸಬೇಕೆ ಬೇಡವೇ ಎಂಬ ಬಗ್ಗೆ ನಿನ್ನೆ ಚರ್ಚೆ ನಡೆಸಲಾಗಿದೆ. ಶೀಘ್ರದಲ್ಲೇ ಅಂತಿಮ ತೀರ್ಮಾನ ಪ್ರಕಟಿಸುತ್ತೇವೆ ಎಂದು ತಿಳಿಸಿದರು.

  • ರಾಜ್ಯದಲ್ಲಿ ರೆಮ್‍ಡೆಸಿವರ್, ಆಕ್ಸಿಜನ್ ಕೊರತೆ ಇಲ್ಲ: ಸುಧಾಕರ್

    ರಾಜ್ಯದಲ್ಲಿ ರೆಮ್‍ಡೆಸಿವರ್, ಆಕ್ಸಿಜನ್ ಕೊರತೆ ಇಲ್ಲ: ಸುಧಾಕರ್

    ಬೆಂಗಳೂರು: ರಾಜ್ಯದ ಸರ್ಕಾರಿ ಸಂಸ್ಥೆಗಳಲ್ಲಿ ರೆಮ್‍ಡೆಸಿವರ್ ಕೊರತೆಯಾಗಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವವರಿಗೆ ಕೊರತೆ ಇದ್ದಲ್ಲಿ ತಕ್ಷಣ ವ್ಯವಸ್ಥೆ ಮಾಡುತ್ತೇವೆ. ರೆಮ್‍ಡೆಸಿವರ್, ಆಕ್ಸಿಜನ್ ಕೊರತೆ ಆಗಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದರು.

    ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೆಲ ಜಿಲ್ಲೆಗಳಲ್ಲಿ ರೆಮ್‍ಡೆಸಿವರ್ ಇಂಜಕ್ಷನ್ ಕೊರತೆ ಎನ್ನಲಾಗುತ್ತಿದೆ. ಆದರೆ ನಮ್ಮ ರಾಜ್ಯದಲ್ಲಿ ರೆಮ್‍ಡೆಸಿವರ್ ತಯಾರು ಮಾಡುವ ಮೂರೂ ಸಂಸ್ಥೆಗಳಿವೆ. ಹೀಗಾಗಿ ಯಾವುದೇ ರೀತಿಯ ಕೊರತೆ ಇಲ್ಲ. ರೆಮ್‍ಡೆಸಿವರ್ ಇಡೀ ದೇಶದಲ್ಲಿ ತಯಾರಿಕೆ ಕಡಿಮೆ ಆಗಿದೆ. ಅಕ್ಟೋಬರ್ ನಿಂದ ಕೊರೊನಾ ಪ್ರಕರಣಗಳು ಕಡಿಮೆ ಆಗಿತ್ತು. ಹೀಗಾಗಿ ತಯಾರಿಕೆ ಕಡಿಮೆ ಆಗಿತ್ತು. ಸರ್ಕಾರಿ ವ್ಯವಸ್ಥೆಯಲ್ಲಿ ಚುಚ್ಚುಮದ್ದು ಕೊರತೆ ಆಗಿಲ್ಲ, ಇದರಲ್ಲಿ ರಾಜಕಾರಣ ಮಾಡಬಾರದು. ಎಲ್ಲರೂ ಸೇರಿಕೊಂಡು ಒಟ್ಟಾಗಿ ಹೋರಾಟ ಮಾಡಿದರೆ ಕೊರೊನಾ ಎದುರಿಸಬಹುದು ಎಂದು ವಿವರಿಸಿದರು.

    ಸಾವಿನ ಪ್ರಮಾಣ ಹೆಚ್ಚಳದ ಕುರಿತು ಪ್ರತಿಕ್ರಿಯಿಸಿದ ಅವರು, ಸಾವಿನ ಪ್ರಮಾಣವನ್ನು ಎಷ್ಟು ಸೋಂಕಿತರಲ್ಲಿ, ಎಷ್ಟು ಜನರ ಸಾವಾಗಿದೆ ಎಂದು ಅಳೆಯಬೇಕು. ನಮ್ಮ ರಾಜ್ಯದಲ್ಲಿ ಸಾವಿನ ಪ್ರಮಾಣ ಅರ್ಧದಷ್ಟೂ ಇಲ್ಲ. ಸಾವಿನ ಪ್ರಮಾಣ ಸದ್ಯ ಶೇ.0.5 ಅಥವಾ 0.6 ರಷ್ಟು ಮಾತ್ರ ಇದೆ. ಇದನ್ನು ಇನ್ನಷ್ಟು ಕಡಿಮೆ ಮಾಡುವ ಗುರಿ ಇದೆ. ಸಿಎಂ ಜೊತೆ ಚರ್ಚಿಸಿ ಕಠಿಣ ಕ್ರಮಗಳನ್ನು ಕೈಗೊಳ್ಳುವ ಕುರಿತು ನಿರ್ಧರಿಸಲಾಗುವುದು ಎಂದು ತಿಳಿಸಿದರು.

    ವಲಯವಾರು ಕೊರೊನಾ ನಿಯಂತ್ರಣಕ್ಕೆ ಸಚಿವರು ಶ್ರಮ ಹಾಕುತ್ತಿದ್ದಾರೆ. ಜನರ ಸಹಭಾಗಿತ್ವ ಸಹ ಅಗತ್ಯ, ಅನೇಕ ರಾಜ್ಯಗಳಲ್ಲಿ ಸಾವಿನ ಪ್ರಮಾಣ ಹೆಚ್ಚಿದೆ. ಇದು ನಮ್ಮ ರಾಜ್ಯದಲ್ಲಿ ಆಗೋದು ಬೇಡ, ನಮ್ಮ ರಾಜ್ಯದ ಪರಿಸ್ಥಿತಿ ನೋಡಿಕೊಂಡು ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ಪರಿಸ್ಥತಿಗೆ ಅನುಗುಣವಾಗಿ ಕ್ರಮ ಕೈಗೊಳ್ಳಲಾಗುವುದು. ಬೇರೆ ರಾಜ್ಯಗಳಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಸಹ ಪರಿಶೀಲಿಸಲಾಗುವುದು.

    ಲಾಕ್‍ಡೌನ್, ಕರ್ಫ್ಯೂ ಬಗ್ಗೆ ಬೇರೆ ರಾಜ್ಯಗಳು ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ಗಮನಿಸುತ್ತಿದ್ದೇವೆ. ಸಿಎಂ, ಗೃಹ ಸಚಿವರು ಸೇರಿದಂತೆ ಎಲ್ಲರೂ ಅವರ ವಲಯಗಳಲ್ಲಿ ಗಮನಿಸಿತ್ತಿದ್ದಾರೆ. ಏನೇ ಆದರೂ ಜನರ ಸಹಕಾರ ಅಗತ್ಯ. ಜನ ಕೆಲವು ಕಾರ್ಯಕ್ರಮಗಳನ್ನು ಮುಂದೆ ಹಾಕುವುದರಿಂದ ಜೀವ ಹೋಗಲ್ಲ. ಜನರ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದರು.