Tag: Renuka Chowdhury

  • ನಾಗ್ಪುರ ಹಿಂಸಾಚಾರವು ಆಕಸ್ಮಿಕವಲ್ಲ, ಪೂರ್ವ ಯೋಜಿತ ದಾಳಿ – ʻಮಹಾʼ ಸಿಎಂ ದೇವೇಂದ್ರ ಫಡ್ನವೀಸ್

    ನಾಗ್ಪುರ ಹಿಂಸಾಚಾರವು ಆಕಸ್ಮಿಕವಲ್ಲ, ಪೂರ್ವ ಯೋಜಿತ ದಾಳಿ – ʻಮಹಾʼ ಸಿಎಂ ದೇವೇಂದ್ರ ಫಡ್ನವೀಸ್

    ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಹಿಂಸಾಚಾರ (Nagpur violence) ಘಟನೆಯು ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಈ ಘಟನೆಯ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ (Devendra Fadnavis) ಅವರಿಂದು ವಿಧಾನಸಭೆಯಲ್ಲಿ ಮಾತನಾಡಿದ್ದು, ಈ ಹಿಂಸಾಚಾರವು ಆಕಸ್ಮಿಕವಾಗಿ ನಡೆದಿಲ್ಲ. ಇದು ಪೂರ್ವ ಯೋಜಿತ ದಾಳಿ ಎಂದು ಆರೋಪಿಸಿದ್ದಾರೆ.

    ನಾಗ್ಪುರದ ಮಹಾಲ್ ಪ್ರದೇಶದಲ್ಲಿರುವ ಔರಂಗಜೇಬ್ ಸಮಾಧಿಯನ್ನು ತೆಗೆದುಹಾಕಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ (VHP) ಮತ್ತು ಬಜರಂಗ ದಳದ ಸದಸ್ಯರು ಚತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ ನಂತರ ಈ ಹಿಂಸಾಚಾರ ಭುಗಿಲೆದ್ದಿತು. ಪ್ರತಿಭಟನೆಯ ಸಂದರ್ಭದಲ್ಲಿ ಮುಸ್ಲಿಂ ಧಾರ್ಮಿಕ ಗ್ರಂಥ ಕುರಾನ್‌ ಅನ್ನು ಸುಟ್ಟು ಹಾಕಲಾಗಿದೆ ಎಂಬ ವದಂತಿಗಳು ಹರಡಿದ್ದವು. ಇದು ಎರಡು ಗುಂಪುಗಳ ನಡುವೆ ಘರ್ಷಣೆಗೆ ಕಾರಣವಾಯಿತು. ಈ ಘಟನೆಯಲ್ಲಿ ಪೊಲೀಸರು ಮತ್ತು ಸಾರ್ವಜನಿಕ ಆಸ್ತಿಗೆ ದಾಳಿ ನಡೆದಿದ್ದು, 33 ಪೊಲೀಸ್ ಸಿಬ್ಬಂದಿ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.

    ಈ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡುತ್ತಾ, ಈ ದಾಳಿಯು ಸಾಮಾಜಿಕ ಸಾಮರಸ್ಯವನ್ನು ಭಂಗಗೊಳಿಸುವ ಉದ್ದೇಶದಿಂದ ನಡೆದಿದೆ. ಪೊಲೀಸರ ಮೇಲೆ ಉದ್ದೇಶಪೂರ್ವಕವಾಗಿ ದಾಳಿ ನಡೆಸಲಾಗಿದ್ದು, ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡಲಾಗಿದೆ. ಆರೋಪಿಗಳು ಯಾರೇ ಆಗಿರಲಿ, ಯಾವ ಧರ್ಮಕ್ಕೆ ಸೇರಿದವರಾಗಿರಲಿ, ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಕಾನೂನನ್ನು ಕೈಗೆ ತೆಗೆದುಕೊಳ್ಳಲು ಯಾರಿಗೂ ಅನುಮತಿ ಇಲ್ಲ. ಶಾಂತಿ ಕಾಪಾಡುವಂತೆ ಎಲ್ಲರಿಗೂ ಮನವಿ ಮಾಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: Aurangzeb Tomb Row| ಧರ್ಮಗ್ರಂಥ ಸುಟ್ಟ ವದಂತಿಯಿಂದ ನಾಗ್ಪುರದಲ್ಲಿ ಹಿಂಸಾಚಾರ, ಕರ್ಫ್ಯೂ ಜಾರಿ

    ಈ ಘಟನೆಯ ಹಿನ್ನೆಲೆಯಲ್ಲಿ ನಾಗ್ಪುರ ಹಲವು ಪ್ರದೇಶಗಳಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಸೆಕ್ಷನ್ 163ರ ಅಡಿಯಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಕೊತ್ವಾಲಿ, ಗಣೇಶಪೇಠ, ತಹಸೀಲ್, ಲಕಡ್‌ಗಂಜ್, ಪಚಪಾವ್ಲಿ, ಶಾಂತಿನಗರ, ಸಕ್ಕರದಾರಾ, ನಂದನವನ್, ಇಮಾಮವಾಡಾ, ಯಶೋಧರನಗರ ಮತ್ತು ಕಪಿಲನಗರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಿಷೇಧಾಜ್ಞೆ ಅನ್ವಯಿಸುತ್ತದೆ. ಪೊಲೀಸ್ ಆಯುಕ್ತ ರವೀಂದ್ರ ಕುಮಾರ್ ಸಿಂಗಲ್ ಅವರು ಈ ಆದೇಶ ಹೊರಡಿಸಿದ್ದು, ಮುಂದಿನ ಸೂಚನೆ ಬರುವವರೆಗೆ ಈ ನಿರ್ಬಂಧ ಮುಂದುವರಿಯಲಿದೆ. ಇದನ್ನೂ ಓದಿ: ಸುಪ್ರೀಂ ಕೋರ್ಟ್ ಜಡ್ಜ್ ಆಗಿ ಬಾಗ್ಚಿ ಅಧಿಕಾರ ಸ್ವೀಕಾರ – 2031ರಲ್ಲಿ ಸಿಜೆಐ ಅಗಲಿದ್ದಾರೆ ಬಾಗ್ಚಿ

    ಹಿಂಸಾಚಾರದಲ್ಲಿ ಭಾಗಿಯಾದವರನ್ನು ಗುರುತಿಸಲು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಮತ್ತು ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ತಪ್ಪು ಮಾಹಿತಿ ಹರಡುವ ಖಾತೆಗಳ ಮೇಲೆಯೂ ನಿಗಾ ಇಡಲಾಗಿದೆ. ಮಹಾರಾಷ್ಟ್ರ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಪ್ಯಾರೆ ಖಾನ್ ಅವರು, ಈ ಹಿಂಸಾಚಾರದಲ್ಲಿ ಬಾಹ್ಯ ಜನರೇ ಭಾಗಿಯಾಗಿದ್ದಾರೆ. ನಾಗ್ಪುರದ ಸಾಮರಸ್ಯವನ್ನು ಭಂಗಗೊಳಿಸಲು ಇದೊಂದು ಪ್ರಯತ್ನವಾಗಿದೆ ಎಂದು ಆರೋಪಿಸಿದ್ದಾರೆ.

    ಪ್ರತಿಪಕ್ಷಗಳು ಈ ಘಟನೆಯನ್ನು ರಾಜ್ಯ ಸರ್ಕಾರದ ಕಾನೂನು ಮತ್ತು ಸುವ್ಯವಸ್ಥೆಯ ವೈಫಲ್ಯ ಎಂದು ಟೀಕಿಸಿವೆ. ಕಾಂಗ್ರೆಸ್ ನಾಯಕ ರೇಣುಕಾ ಚೌಧರಿ ಅವರು ರಾಜ್ಯಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ, ಮುಖ್ಯಮಂತ್ರಿಗಳು ತಮ್ಮ ರಾಜಧರ್ಮವನ್ನು ಪಾಲಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸಂವಿಧಾನ ವಿರುದ್ಧವಾಗಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಟ್ಟು, ಮತಬ್ಯಾಂಕ್‌ ಗಟ್ಟಿಮಾಡಿಕೊಳ್ತಿದೆ: ಬೊಮ್ಮಾಯಿ

    ಇದೇ ವೇಳೆ, ಕೇಂದ್ರ ಸಚಿವ ಮತ್ತು ನಾಗ್ಪುರ ಸಂಸದ ನಿತಿನ್ ಗಡ್ಕರಿ ಅವರು ಶಾಂತಿ ಕಾಪಾಡುವಂತೆ ಮತ್ತು ವದಂತಿಗಳನ್ನು ನಂಬದಂತೆ ಜನರಿಗೆ ಮನವಿ ಮಾಡಿದ್ದಾರೆ.

  • ನನ್ನನ್ನು ಶೂರ್ಪನಖಿ ಎಂದ ಮೋದಿ ವಿರುದ್ಧ ಮಾನನಷ್ಟ ಕೇಸ್‌ ಹಾಕ್ತೀನಿ: ರೇಣುಕಾ ಚೌಧರಿ

    ನವದೆಹಲಿ: ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ರಾಹುಲ್‌ ಗಾಂಧಿ (Rahul Gandhi) ಜೈಲು ಶಿಕ್ಷೆಗೆ ಗುರಿಯಾದ ಬೆನ್ನಲ್ಲೇ ನಾನು ನರೇಂದ್ರ ಮೋದಿ ವಿರುದ್ಧ ನ್ಯಾಯಾಲಯದಲ್ಲಿ ಮಾನನಷ್ಟ ಕೇಸ್‌ ಹಾಕುತ್ತೇನೆ ಎಂದು ಕಾಂಗ್ರೆಸ್‌ ನಾಯಕಿ, ಮಾಜಿ ಸಚಿವೆ ರೇಣುಕಾ ಚೌಧರಿ (Renuka Chowdhury) ಹೇಳಿದ್ದಾರೆ.

    ನನ್ನನ್ನು ಶೂರ್ಪನಖಿ (Surpanaka) ಎಂದು ಉಲ್ಲೇಖಿಸಿದ್ದಾರೆ. ಹೀಗಾಗಿ ನಾನು ಮೋದಿ (Narendra Modi) ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ. ನ್ಯಾಯಾಲಯಗಳು ಎಷ್ಟು ವೇಗವಾಗಿ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ನೋಡೋಣ ಎಂದು ರೇಣುಕಾ ಚೌಧರಿ ಟ್ವೀಟ್‌ ಮಾಡಿ ತಿಳಿಸಿದ್ದಾರೆ.

     

    ಮೋದಿ ಹೇಳಿದ್ದೇನು?
    2018ರ ರಾಜ್ಯಸಭಾ (Rajya Sabha) ಕಲಾಪದ ಹಳೆ ವಿಡಿಯೋದಲ್ಲಿ ಆಧಾರ್‌ ಕಾರ್ಡ್‌ಗೆ (Aadhar Card) ಸಂಬಂಧಿಸಿದಂತೆ ಪ್ರಧಾನಿ ಮೋದಿ ಹೇಳಿಕೆಗೆ ಸಂಸದೆ ರೇಣುಕಾ ಚೌಧರಿ ಜೋರಾಗಿ ನಗುತ್ತಿರುತ್ತಾರೆ. ಈ ಸಂದರ್ಭದಲ್ಲಿ ಸಭಾಧ್ಯಕ್ಷ ವೆಂಕಯ್ಯ ನಾಯ್ಡು (Venkaiah Naidu) ಅವರು, “ನಿಮ್ಮ ಸಮಸ್ಯೆ ಏನು? ನಿಮಗೇನಾದರೂ ಸಮಸ್ಯೆ ಆಗಿದ್ದರೆ ವೈದ್ಯರ ಬಳಿ ಹೋಗಿ, ದಯವಿಟ್ಟು ಸುಮ್ಮನೇ ಕುಳಿತುಕೊಳ್ಳಿ” ಎಂದು ತರಾಟೆಗೆ ತೆಗೆದುಕೊಳ್ಳುತ್ತಾರೆ.

    ವೆಂಕಯ್ಯ ನಾಯ್ಡು ಸೂಚನೆಯನ್ನೂ ಧಿಕ್ಕರಿಸಿ ರೇಣುಕಾ ನಗುವುದನ್ನು ಮುಂದುವರಿಸುತ್ತಾರೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, “ಸಭಾಪತಿಜೀ ರೇಣುಕಾಜೀ ಅವರಿಗೆ ನೀವು ನಗಲು ಬಿಡಿ. ರಾಮಾಯಣ (Ramayana) ಧಾರಾವಾಹಿಯ ನಂತರ ಈ ರೀತಿಯ ನಗುವನ್ನು ಕೇಳುವ ಸೌಭಾಗ್ಯ ಇಂದು ನಮಗೆ ಒದಗಿ ಬಂದಿದೆ” ಎಂದು ವ್ಯಂಗ್ಯವಾಡುತ್ತಾರೆ.

    ಮೋದಿ ರಾಮಾಯಣದ ಉದಾಹರಣೆ ನೀಡಿ ರೇಣುಕಾ ಚೌಧರಿ ಅವರ ಕಾಲೆಳೆಯುತ್ತಿದ್ದಂತೆ ಬಿಜೆಪಿ ಸಂಸದರು ಬೆಂಚನ್ನು ಕುಟ್ಟಿ ಜೋರಾಗಿ ಬಿದ್ದು ಬಿದ್ದು ನಗಲು ಶುರು ಮಾಡುತ್ತಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.  ಇದನ್ನೂ ಓದಿ: ಮೋದಿಗೆ ನಿದ್ರಾಹೀನತೆಯ ಕಾಯಿಲೆಯಿದೆ: ಕೇಜ್ರಿವಾಲ್

    ಕೇಸ್‌ ಹಾಕಲು ಸಾಧ್ಯವೇ?
    ಸಾಮಾಜಿಕ ಜಾಲತಾಣದಲ್ಲಿ ಈಗ ಕಾಂಗ್ರೆಸ್‌ ನಾಯಕರು ಈ ಹೇಳಿಕೆಯ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದ್ದರೆ ಕೆಲವರು ಈ ಹೇಳಿಕೆ ವಿರುದ್ಧ ನ್ಯಾಯಾಲಯದಲ್ಲಿ ಕೇಸ್‌ ದಾಖಲಿಸಲು ಬರುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಮೊದಲನೆಯದಾಗಿ ಮೋದಿ ಎಲ್ಲಿಯೂ ನೇರವಾಗಿ ರೇಣುಕಾ ಚೌಧರಿ ಅವರನ್ನು ʼಶೂರ್ಪನಖಿʼ ಎಂದು ಸಂಬೋಧನೆ ಮಾಡಿಲ್ಲ. ಎರಡನೇಯದಾಗಿ ಮೋದಿ ರಾಜ್ಯಸಭಾ ಕಲಾಪದಲ್ಲಿ ಮಾತನಾಡಿದ್ದಾರೆ. ಸಂಸತ್ತು ಅಥವಾ ರಾಜ್ಯದ ಶಾಸನ ಸಭೆಯಲ್ಲಿ ಸದಸ್ಯರ ವಿರುದ್ಧ ಏನೇ ಮಾತನಾಡಿದರೂ ಆ ಹೇಳಿಕೆಯನ್ನು ಪ್ರಶ್ನಿಸಿ ಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ. ಸದನದಲ್ಲಿ ಮಾತನಾಡಿ ಹಕ್ಕು ಚ್ಯುತಿಯಾಗಿದ್ದರೆ ಅದನ್ನು ಸದನದಲ್ಲೇ ಪ್ರಶ್ನೆ ಮಾಡಬೇಕು. ಈ ವಿಚಾರದಲ್ಲಿ ಅಂತಿಮ ನಿರ್ಧಾರ ಸ್ಪೀಕರ್‌ ತೆಗೆದುಕೊಳ್ಳಬಹುದೇ ವಿನಾ: ನ್ಯಾಯಾಧೀಶರಿಗೆ ತೆಗೆದುಕೊಳ್ಳಲು ಬರುವುದಿಲ್ಲ. ಹೀಗಾಗಿ ಈ ರೇಣುಕಾ ಚೌಧರಿ ಈ ವಿಷಯವನ್ನು ಯಾವ ಆಧಾರದಲ್ಲಿ ಕೋರ್ಟ್‌ನಲ್ಲಿ ಪ್ರಶ್ನೆ ಮಾಡುಬಹುದು ಎಂಬ ಕುತೂಹಲ ಈಗ ಹೆಚ್ಚಾಗಿದೆ.

    ಮೋದಿ ಮಾತನಾಡಿದ್ದು 2018ರಲ್ಲಿ. ಅಲ್ಲಿಂದ ಇಲ್ಲಿಯವರೆಗೂ ಎಲ್ಲಿಯೂ ಕೇಸ್‌ ಹಾಕದ ನೀವು ಈಗ ದೂರು ನೀಡುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ರೇಣುಕಾ ಚೌಧರಿ ಅವರಿಗೆ ನೆಟ್ಟಿಗರು ಕ್ಲಾಸ್‌ ತೆಗೆದುಕೊಳ್ಳುತ್ತಿದ್ದಾರೆ.

  • ಪೊಲೀಸ್ ಅಧಿಕಾರಿ ಕೊರಳಪಟ್ಟಿ ಹಿಡಿದು ಎಳೆದಾಡಿದ ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ ವಿರುದ್ಧ FIR

    ಪೊಲೀಸ್ ಅಧಿಕಾರಿ ಕೊರಳಪಟ್ಟಿ ಹಿಡಿದು ಎಳೆದಾಡಿದ ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ ವಿರುದ್ಧ FIR

    ನವದೆಹಲಿ: ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರಿಗೆ ಇಡಿ ಸಮನ್ಸ್ ನೀಡಿರುವುದನ್ನು ಖಂಡಿಸಿ ಇಂದು ನಡೆದ `ಚಲೋ ರಾಜಭವನ್’ ಪ್ರತಿಭಟನೆ ವೇಳೆ ಕಾಂಗ್ರೆಸ್ ಮಹಿಳಾ ನಾಯಕಿಯೊಬ್ಬರು ಪೊಲೀಸ್ ಅಧಿಕಾರಿಯ ಕೊರಳಪಟ್ಟಿ ಹಿಡಿದು ಎಳೆದಾಡಿರುವ ಘಟನೆ ನಡೆದಿದೆ.

    ಕಾಂಗ್ರೆಸ್ ಮುಖಂಡರಾದ ರೇಣುಕಾ ಚೌಧರಿ ಅವರು ಕರ್ತವ್ಯದಲ್ಲಿದ್ದ ತೆಲಂಗಾಣ ಪೊಲೀಸ್ ಅಧಿಕಾರಿಯೊಬ್ಬರ ಕೊರಳ ಪಟ್ಟಿ ಹಿಡಿದು ಎಳೆದಾಡಿದ್ದಾರೆ. ಅಲ್ಲದೆ ಮಹಿಳಾ ಪೊಲೀಸ್ ಸಿಬ್ಬಂದಿಯ ಮೇಲೂ ತನ್ನ ದರ್ಪ ಮೆರೆದಿದ್ದಾರೆ. ಈ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ಮೆಟ್ರೋ ಸಂಚಾರ ರಾತ್ರಿ 1.30ರ ವರೆಗೂ ವಿಸ್ತರಣೆ – ಯಾಕೆ ಗೊತ್ತೇ? 

    ರೇಣುಕಾ ಚೌಧರಿ ವಿರುದ್ಧ ಐಪಿಸಿ ಸೆಕ್ಷನ್ 353 (ಸಾರ್ವಜನಿಕ ಸೇವೆಯಲ್ಲಿರುವ ಅಧಿಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇಂದು ರಾಜಭವನ ಚಲೋ ಪ್ರಾರಂಭಿಸಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ಮಾಂದಾಗಿದ್ದು, ಹಲವೆಡೆ ಹೈಡ್ರಾಮಾ ಸೃಷ್ಟಿಸಿದೆ. ಇದನ್ನೂ ಓದಿ: ಸೋನಿಯಾ ಗಾಂಧಿಗೆ ಮನೆ ಬೇಕಿದ್ರೆ ಇಂದೇ ಅರ್ಜಿ ಸಲ್ಲಿಸಿ: ಡಿಕೆಶಿಗೆ ಬಿಜೆಪಿ ಟಾಂಗ್

    Live Tv