Tag: Representative court

  • ಕಾಲೇಜಲ್ಲಿ ನಾನು ಮೆರಿ‌ಟ್‌ ವಿದ್ಯಾರ್ಥಿ, ಶಿಕ್ಷೆ ಕೊಡುವಾಗ ನನ್ನ ಕುಟುಂಬವನ್ನ ಪರಿಗಣಿಸಿ: ಕೋರ್ಟಲ್ಲಿ ಪ್ರಜ್ವಲ್‌ ರೇವಣ್ಣ ಕಣ್ಣೀರು

    ಕಾಲೇಜಲ್ಲಿ ನಾನು ಮೆರಿ‌ಟ್‌ ವಿದ್ಯಾರ್ಥಿ, ಶಿಕ್ಷೆ ಕೊಡುವಾಗ ನನ್ನ ಕುಟುಂಬವನ್ನ ಪರಿಗಣಿಸಿ: ಕೋರ್ಟಲ್ಲಿ ಪ್ರಜ್ವಲ್‌ ರೇವಣ್ಣ ಕಣ್ಣೀರು

    – ರಾಜಕೀಯವಾಗಿ ಬೇಗ ಬೆಳೆದಿದ್ದೇ ತಪ್ಪಾಯ್ತು
    – 6 ತಿಂಗಳಿಂದ ಅಪ್ಪ-ಅಮ್ಮನ ಮುಖ ನೋಡಿಲ್ಲ; ಅಳಲು

    ಬೆಂಗಳೂರು: ಹಾಸನ ಜಿಲ್ಲೆಗೆ ಸಾಕಷ್ಟು ಕೆಲಸ ಮಾಡಿದ್ದೇನೆ, ನಾನು ಮಹಿಳೆಯ ಅತ್ಯಾಚಾರ ಮಾಡಿದ್ರೆ ಆಕೆಯ ಸಹೋದರಿ ನಮ್ಮ ಮನೇಲಿ ಕೆಲಸ ಮಾಡ್ರಿದ್ರಾ? ಕಳೆದ 6 ತಿಂಗಳಿಂದ ಅಪ್ಪ-ಅಮ್ಮನ ಮುಖವನ್ನೇ ನೋಡಿಲ್ಲ. ದೋಷಿ ಅಂತ ಹೇಳಿದ್ದೀರಿ, ನ್ಯಾಯಾಧೀರ ಆದೇಶಕ್ಕೆ ತಲೆ ಬಾಗುತ್ತೇನೆ. ಶಿಕ್ಷೆ ನೀಡುವಾಗ ನನ್ನ ಕುಟುಂಬವನ್ನ ಪರಿಗಣಿಸಿ.. ಕೋರ್ಟ್‌ ಕಟಕಟೆಯಲ್ಲಿ ಅಪರಾಧಿ ಪ್ರಜ್ವಲ್‌ ರೇವಣ್ಣ (Prajwal Revanna) ಆಡಿದ ಮಾತುಗಳಿವು.

    ಕೆ.ಆರ್ ನಗರದಲ್ಲಿ (KR Nagara) ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ (Rape Case) ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ. ಶಿಕ್ಷೆ ಪ್ರಮಾಣ ಕುರಿತು ಸರ್ಕಾರಿ ಪರ ವಕೀಲರಾಗಿ ಎನ್. ಜಗದೀಶ್, ಅಶೋಕ್ ನಾಯಕ್ ಹಾಗೂ ಪ್ರಜ್ವಲ್ ರೇವಣ್ಣ ಪರ ವಕೀಲ ನಳಿನಿ ಮಾಯಾಗೌಡ ಅವರು ವಾದ ಪ್ರತಿವಾದ ಮಂಡಿಸಿದರು. ವಾದ ಪ್ರತಿವಾದ ಪೂರ್ಣಗೊಂಡಿದ್ದು, ಮಧ್ಯಾಹ್ನ 2:45ಕ್ಕೆ ನ್ಯಾ. ಗಜಾನನ ಭಟ್‌ ಅವರ ಪೀಠ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಲಿದೆ.

    ಇನ್ನೂ ವಾದ-ಪ್ರತಿವಾದದ ಬಳಿಕ ನಿಮ್ಮದೇನಾದ್ರೂ ಹೇಳೋದು ಇದ್ಯಾ? ಅಂತ ನ್ಯಾಯಪೀಠ ಪ್ರಜ್ವಲ್‌ರನ್ನ ಕೇಳಿತು. ಈ ವೇಳೆ ಬಿಕ್ಕಿ ಬಿಕ್ಕಿ ಅತ್ತ ಪ್ರಜ್ವಲ್‌, ಹಾಸನ ಜಿಲ್ಲೆಗೆ ಸಾಕಷ್ಟು ಮಾಡಿದ್ದೇನೆ, ಚುನಾವಣೆಗೆ 6 ದಿನ ಮುಂಚಿತವಾಗಿ ಈ ವಿಡಿಯೋ ರಿಲೀಸ್‌ ಮಾಡಿದ್ದಾರೆ. ನಾನು ಮಹಿಳೆಯ ಅತ್ಯಾಚಾರ ಮಾಡಿದ್ರೆ ಆಕೆಯ ಸಹೋದರಿ ನಮ್ಮ ಮನೇಲಿ ಕೆಲಸ ಮಾಡ್ತಾ ಇದ್ರಾ? ಅಂತ ಕಣ್ಣೀರಿಟ್ಟರು. ಇದನ್ನೂ ಓದಿ:  ಕೆಲಸದಾಕೆಯ ಮೇಲೆ ರೇಪ್‌ – ಪ್ರಜ್ವಲ್‌ ರೇವಣ್ಣ ಅತ್ಯಾಚಾರಿ ಎಂದು ಕೋರ್ಟ್‌ ತೀರ್ಪು

    ಸಾಕಷ್ಟು ವರ್ಷಗಳ ಹಿಂದೆ ನಡೆದಿದೆ ಅಂತ ಹೇಳಿದ್ದಾರೆ. ವಿಡಿಯೋ ಬಂದ ಮೇಲೆ ಮಹಿಳೆ ಹೊರಗೆ ಬಂದು ದೂರು ನೀಡಿದ್ದಾಳೆ. ನನ್ನ ಕುಟುಂಬವನ್ನೇ ನಾನು ಬಿಟ್ಟಂತೆ ಆಗಿಹೋಗಿದೆ. ಅಪ್ಪ – ಅಮ್ಮನನ್ನ 6 ತಿಂಗಳಿಂದ ನೋಡಿಲ್ಲ. ದೋಷಿ ಅಂತ ಹೇಳಿದ್ದೀರಿ, ನ್ಯಾಯಾಲಯದ ಆದೇಶಕ್ಕೆ ತಲೆ ಬಾಗುತ್ತೇನೆ. ಶಿಕ್ಷೆ ನೀಡುವಾಗ ನನ್ನ ಕುಟುಂಬವನ್ನ ಪರಿಗಣಿಸಿ ಅಂತ ನ್ಯಾಯಾಧೀಶರ ಎದುರು ಪ್ರಜ್ವಲ್‌ ಕಣ್ಣೀರಿಟ್ಟು ಬೇಡಿಕೊಂಡಿದ್ದಾರೆ. ಇದನ್ನೂ ಓದಿ: ಸಾಮಾಜಿಕ ಮಾಧ್ಯಮದಲ್ಲಿ ನೀಡುವ ಮಾಹಿತಿ ನಿಖರ, ನಿಷ್ಪಕ್ಷಪಾತವಾಗಿರಬೇಕು – ಇ.ಡಿ ಕಿವಿಹಿಂಡಿದ ದೆಹಲಿ ಕೋರ್ಟ್

    ನಂಗೆ ಕುಟುಂಬ ಇದೆ, 6 ತಿಂಗಳಿಂದ ಅಪ್ಪ-ಅಮ್ಮನನ್ನ ಸರಿಯಾಗಿ ನೋಡಿಲ್ಲ. ಪ್ರತಿಬಾರಿಯೂ ಕೋರ್ಟ್‌ಗೆ ಬರ್ತಾ ಇದ್ದೀನಿ. ನನ್ನ ಕುಟುಂಬ ನನ್ನಿಂದ ಸಂಪೂರ್ಣ ದೂರವಾಗಿದೆ. ನಾನು ರಾಜಕೀಯವಾಗಿ ಬೇಗ ಬೆಳೆದಿದ್ದೇ ತಪ್ಪಾಯ್ತು. ಎಸ್‌ಐಟಿ ನಂಬರ್ ನೀಡಿದ್ದರೂ ಯಾರು ದೂರು ನೀಡಲಿಲ್ಲ. ನಾನು ಕಾಲೇಜಿನಲ್ಲಿ ಮೆರಿಟ್ ವಿದ್ಯಾರ್ಥಿ ಆಗಿದ್ದೆ. ನನ್ನನ್ನ ದುರುದ್ದೇಶದಿಂದ ಸಿಲುಕಿಸಿದ್ರು ಅಂತ ಗಳಗಳನೆ ಅತ್ತಿದ್ದಾರೆ. ಇದನ್ನೂ ಓದಿ: ಅತ್ಯಾಚಾರ ಕೇಸಲ್ಲಿ ಅಪರಾಧಿ; ತೀರ್ಪು ಪ್ರಕಟವಾಗುತ್ತಿದ್ದಂತೆ ಕೋರ್ಟ್‌ನಲ್ಲಿ ಕಣ್ಣೀರಿಟ್ಟ ಪ್ರಜ್ವಲ್ ರೇವಣ್ಣ

    ಏನಿದು ಪ್ರಕರಣ?‌
    ಕೆ.ಆರ್ ನಗರ ಸಂತ್ರಸ್ತೆ ಪ್ರಕರಣದಲ್ಲಿ ಪ್ರಜ್ವಲ್ ವಿರುದ್ಧ ಅತ್ಯಾಚಾರ, ಅಪಹರಣ ಕೇಸ್ ದಾಖಲಾಗಿತ್ತು. ಮನೆಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ನಂತರ ವಿಷಯ ಹೊರಗೆ ಬರುತ್ತೆ ಎಂದು ತಿಳಿದು ಸಂತ್ರಸ್ತೆಯನ್ನ ರೇವಣ್ಣ, ಭವಾನಿ, ಸತೀಶ್ ಬಾಬು ಸೇರಿದಂತೆ 9 ಜನ ಸೇರಿ ಅಪಹರಿಸಿದ್ದರು. ಬಳಿಕ ಆಕೆಯನ್ನು ಹುಣಸೂರು ಬಳಿಯ ತೋಟದ ಮನೆಯೊಂದರಲ್ಲಿ ಕೂಡಿ ಹಾಕಲಾಗಿತ್ತು. ಇದೇ ಅಪಹರಣ ಪ್ರಕರಣದಿಂದಲೇ ರೇವಣ್ಣ ಸೇರಿದಂತೆ 8 ಜನ ಜೈಲಿಗೆ ಹೋಗಿದ್ದರು. ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ ಬಳಿಕ ನಿರೀಕ್ಷಣಾ ಜಾಮೀನು ಪಡೆದಿದ್ದರು.

    ಆನಂತರ ಸಂತ್ರಸ್ತೆಯನ್ನು ರಕ್ಷಿಸಿದ ಎಸ್‌ಐಟಿ, ಆಕೆಯ ಹೇಳಿಕೆ ದಾಖಲು ಮಾಡಿ ಪ್ರಕರಣ ದಾಖಲಿಸಿತ್ತು. ಹೇಳಿಕೆಯ ಮೇಲೆ ತನಿಖೆ ಮಾಡಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಬಳಿಕ ಪ್ರಜ್ವಲ್ ರೇವಣ್ಣ ಮೊಬೈಲ್‌ನಲ್ಲಿ ಸಂತ್ರಸ್ತೆಯನ್ನು ಬೆತ್ತಲುಗೊಳಿಸಿ ಬಲವಂತವಾಗಿ ಲೈಂಗಿಕ ಕಿರುಕುಳ ನೀಡಿದ್ದ ವಿಡಿಯೋವೊಂದು ಪತ್ತೆಯಾಗಿತ್ತು. ಇದು ಪ್ರಕರಣದ ಬಹುದೊಡ್ಡ ಸಾಕ್ಷ್ಯವಾಗಿ ಪರಿಣಮಿಸಿತು. ಕೊನೆಗೆ ಎಫ್‌ಎಸ್‌ಎಲ್‌ ಮೂಲಕ ವಿಡಿಯೋ ತುಣುಕಿನಲ್ಲಿರುವುದು ಪ್ರಜ್ವಲ್ ರೇವಣ್ಣ ಎನ್ನುವುದು ಸಾಬೀತಾಗಿತ್ತು.

    ಕಳೆದ ಲೋಕಸಭಾ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳಿದ್ದ ಪೆನ್ ಡ್ರೈವ್‌ಗಳನ್ನ ಹಾಸನ ಕ್ಷೇತ್ರದಾದ್ಯಂತ ಹಂಚಲಾಗಿತ್ತು. ಬಳಿಕ ಹೊಳೆನರಸೀಪುರದ ಮಹಿಳೆಯೊಬ್ಬರು ನೀಡಿದ್ದ ದೂರಿನ ಆಧಾರದ ಮೇಲೆ ತನಿಖೆ ಆರಂಭವಾಗಿತ್ತು. ಪ್ರಕರಣ ಸಂಬಂಧ 2024ರ ಮೇ 31ರಂದು ಪ್ರಜ್ವಲ್ ರೇವಣ್ಣ ಅವರನ್ನ ಪೊಲೀಸರು ಬಂಧಿಸಿದ್ದರು.

  • ಕೆಲಸದಾಕೆಯ ಮೇಲೆ ರೇಪ್‌ – ಪ್ರಜ್ವಲ್‌ ರೇವಣ್ಣ ಅತ್ಯಾಚಾರಿ ಎಂದು ಕೋರ್ಟ್‌ ತೀರ್ಪು

    ಕೆಲಸದಾಕೆಯ ಮೇಲೆ ರೇಪ್‌ – ಪ್ರಜ್ವಲ್‌ ರೇವಣ್ಣ ಅತ್ಯಾಚಾರಿ ಎಂದು ಕೋರ್ಟ್‌ ತೀರ್ಪು

    ಬೆಂಗಳೂರು: ಕೆ.ಆರ್.ನಗರದಲ್ಲಿ (KR Nagara) ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ (Rape Case) ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

    ನ್ಯಾ. ಗಜಾನನ ಭಟ್‌ ಭಟ್‌ ಅವರಿದ್ದ ಪೀಠ ಪ್ರಜ್ವಲ್‌ ದೋಷಿ ಎಂದು ತೀರ್ಪು ನೀಡಿದೆ. ತೀರ್ಪು ಪ್ರಕಟಿಸುವ ವೇಳೆ ಪ್ರಜ್ವಲ್‌ ರೇವಣ್ಣ ಕೂಡ ಕೋರ್ಟ್‌ ಹಾಲ್‌ನಲ್ಲಿ ಹಾಜರಿದ್ದರು.  ಶಿಕ್ಷೆಯ ಪ್ರಮಾಣ ಶನಿವಾರ ಪ್ರಕಟವಾಗಲಿದೆ.  ಕೋರ್ಟ್‌ ದೋಷಿ ಎಂದು ತೀರ್ಪು ನೀಡುವ ವೇಳೆ ಪ್ರಜ್ವಲ್‌ ರೇವಣ್ಣ  ಕಣ್ಣಿರಿಟ್ಟಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದರೆ ಕನಿಷ್ಠ 10 ವರ್ಷ, ಗರಿಷ್ಟ ಜೀವಾವಧಿ ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ.

    ಈ ಪ್ರಕರಣದ ಕೊನೆಯ ವಿಚಾರಣೆ ಜುಲೈ 30 ರಂದು ನಡೆದಿತ್ತು . ಸರ್ಕಾರಿ ಪರ ವಕೀಲ ಎನ್ ಜಗದೀಶ್ ಹಾಗೂ ಅಶೋಕ್ ನಾಯಕ್ ಹಾಗೂ ಪ್ರಜ್ವಲ್ ರೇವಣ್ಣ (Prajwal Revanna) ಪರ ವಕೀಲ ಅರುಣ್ ಜಿ ಅವರು ಹಾಜರಾಗಿದ್ದರು. ಇದನ್ನೂ ಓದಿ: ಪಬ್, ಹೋಟೆಲ್‌ಗಳಿಗೆ BBMP ಶಾಕ್ – 1 ವಾರದಲ್ಲಿ ಸ್ಮೋಕಿಂಗ್ ಝೋನ್ ನಿರ್ಮಿಸದಿದ್ರೆ ಲೈಸೆನ್ಸ್ ರದ್ದು!

    ತೀರ್ಪು ಕಾಯ್ದಿರಿಸಿದ್ದ ಕೋರ್ಟ್‌ ಮೊಬೈಲ್ ಸಾಕ್ಷ್ಯ, ತಾಂತ್ರಿಕ ಸಾಕ್ಷ್ಯಗಳ ಬಗ್ಗೆ ಸ್ಪಷ್ಟನೆ ಕೇಳಿತ್ತು. ಇದರೊಂದಿಗೆ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಗ್ಗೆ ನ್ಯಾಯಾಧೀಶರು ಕೆಲ ಮಾಹಿತಿ ಕೇಳಿ ಇಂದಿಗೆ ಮುಂದೂಡಿತ್ತು.

    ಕಳೆದ 14 ತಿಂಗಳಿನಿಂದ ಸೆರೆವಾಸದಲ್ಲಿರುವ ಪ್ರಜ್ವಲ್ ರೇವಣ್ಣ ಅವರ ರಾಜಕೀಯ ಭವಿಷ್ಯದ ದೃಷ್ಟಿಯಿಂದಲೂ ಈ ತೀರ್ಪು ಮಹತ್ವ ಪಡೆದಿದೆ. ಈ ಪ್ರಕರಣ ಅಲ್ಲದೇ ಇನ್ನೂ 2 ಪ್ರಕರಣದಲ್ಲಿ ತೀರ್ಪು ಬರಬೇಕಿದೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್‌ – ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕ್ರಮ: ಪರಮೇಶ್ವರ್‌ ಎಚ್ಚರಿಕೆ

    ಏನಿದು ಪ್ರಕರಣ?‌
    ಕೆ.ಆರ್ ನಗರ ಸಂತ್ರಸ್ತೆ ಪ್ರಕರಣದಲ್ಲಿ ಪ್ರಜ್ವಲ್ ವಿರುದ್ಧ ಅತ್ಯಾಚಾರ, ಅಪಹರಣ ಕೇಸ್ ದಾಖಲಾಗಿತ್ತು. ಮನೆಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ನಂತರ ವಿಷಯ ಹೊರಗೆ ಬರುತ್ತೆ ಎಂದು ತಿಳಿದು ಸಂತ್ರಸ್ತೆಯನ್ನ ರೇವಣ್ಣ, ಭವಾನಿ, ಸತೀಶ್ ಬಾಬು ಸೇರಿದಂತೆ 9 ಜನ ಸೇರಿ ಅಪಹರಿಸಿದ್ದರು. ಬಳಿಕ ಆಕೆಯನ್ನು ಹುಣಸೂರು ಬಳಿಯ ತೋಟದ ಮನೆಯೊಂದರಲ್ಲಿ ಕೂಡಿ ಹಾಕಲಾಗಿತ್ತು. ಇದೇ ಅಪಹರಣ ಪ್ರಕರಣದಿಂದಲೇ ರೇವಣ್ಣ ಸೇರಿದಂತೆ 8 ಜನ ಜೈಲಿಗೆ ಹೋಗಿದ್ದರು. ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ ಬಳಿಕ ನಿರೀಕ್ಷಣಾ ಜಾಮೀನು ಪಡೆದಿದ್ದರು.

    ಆನಂತರ ಸಂತ್ರಸ್ತೆಯನ್ನು ರಕ್ಷಿಸಿದ ಎಸ್‌ಐಟಿ, ಆಕೆಯ ಹೇಳಿಕೆ ದಾಖಲು ಮಾಡಿ ಪ್ರಕರಣ ದಾಖಲಿಸಿತ್ತು. ಹೇಳಿಕೆಯ ಮೇಲೆ ತನಿಖೆ ಮಾಡಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಬಳಿಕ ಪ್ರಜ್ವಲ್ ರೇವಣ್ಣ ಮೊಬೈಲ್‌ನಲ್ಲಿ ಸಂತ್ರಸ್ತೆಯನ್ನು ಬೆತ್ತಲುಗೊಳಿಸಿ ಬಲವಂತವಾಗಿ ಲೈಂಗಿಕ ಕಿರುಕುಳ ನೀಡಿದ್ದ ವಿಡಿಯೋವೊಂದು ಪತ್ತೆಯಾಗಿತ್ತು. ಇದು ಪ್ರಕರಣದ ಬಹುದೊಡ್ಡ ಸಾಕ್ಷ್ಯವಾಗಿ ಪರಿಣಮಿಸಿತು. ಕೊನೆಗೆ ಎಫ್‌ಎಸ್‌ಎಸ್ ಮೂಲಕ ವಿಡಿಯೋ ತುಣುಕಿನಲ್ಲಿರುವುದು ಪ್ರಜ್ವಲ್ ರೇವಣ್ಣ ಎನ್ನುವುದು ಸಾಬೀತಾಗಿತ್ತು.

    ಕಳೆದ ಲೋಕಸಭಾ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳಿದ್ದ ಪೆನ್ ಡ್ರೈವ್‌ಗಳನ್ನ ಹಾಸನ ಕ್ಷೇತ್ರದಾದ್ಯಂತ ಹಂಚಲಾಗಿತ್ತು. ಬಳಿಕ ಹೊಳೆನರಸೀಪುರದ ಮಹಿಳೆಯೊಬ್ಬರು ನೀಡಿದ್ದ ದೂರಿನ ಆಧಾರದ ಮೇಲೆ ತನಿಖೆ ಆರಂಭವಾಗಿತ್ತು. ಪ್ರಕರಣ ಸಂಬಂಧ 2024ರ ಮೇ 31ರಂದು ಪ್ರಜ್ವಲ್ ರೇವಣ್ಣ ಅವರನ್ನ ಪೊಲೀಸರು ಬಂಧಿಸಿದ್ದರು.