Tag: Reservations

  • ವಿಚಾರವಾದಿ ಎನಿಸಿಕೊಳ್ಳುವ ಸಿದ್ದು ಅವ್ರು ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರಾ? – ನಟ ಚೇತನ್ ಲೇವಡಿ

    ವಿಚಾರವಾದಿ ಎನಿಸಿಕೊಳ್ಳುವ ಸಿದ್ದು ಅವ್ರು ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರಾ? – ನಟ ಚೇತನ್ ಲೇವಡಿ

    ಬೆಂಗಳೂರು: ನಟ ಹಾಗೂ ಸಾಮಾಜಿಕ ಹೋರಾಟಗಾರರೂ ಆಗಿರುವ ಚೇತನ್ ಅಹಿಂಸಾ (Chetan Kumar) ಒಂದಿಲ್ಲೊಂದು ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿರುತ್ತಾರೆ. ಇದರಿಂದ ಜಾಲತಾಣದಲ್ಲಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗುತ್ತಿರುತ್ತಾರೆ. ಇದೀಗ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah) ಅವರು ಪ್ರಮಾಣವಚನ ಸ್ವೀಕರಿದ ವಿಚಾರವನ್ನೂ ಟೀಕಿಸಿದ್ದಾರೆ.

    ಶನಿವಾರ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು. ಈ ಕಾರ್ಯಕ್ರಮದಲ್ಲಿ 8 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ಈ ವೇಳೆ ಸಿದ್ದರಾಮಯ್ಯ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಇದನ್ನು ಪ್ರಶ್ನಿಸಿ ನಟ ಚೇತನ್ ಫೇಸ್‌ಬುಕ್ ಪುಟದಲ್ಲಿ ಟೀಕೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ದೇವರ ಹೆಸರಿನಲ್ಲಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ

    ‘ವಿಚಾರವಾದಿ’ ಎಂದು ಕರೆಸಿಕೊಳ್ಳುವ ಸಿದ್ದರಾಮಯ್ಯ ಅವರು ಕರ್ನಾಟಕದ ಸಿಎಂ ಆಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರಾ? ಯಾವ/ಯಾರು ದೇವರು? ದೇವರು ಎಲ್ಲಿದ್ದಾನೆ/ಳೆ/ರೆ? ಇದು ನಿರ್ದಿಷ್ಟವಾದ ಸೈದ್ಧಾಂತಿಕ ಆರಂಭವಲ್ಲ ಎಂದಿದ್ದಾರೆ. ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳಿಗೆ ತಾತ್ವಿಕ ಒಪ್ಪಿಗೆ – ಮುಂದಿನ ಕ್ಯಾಬಿನೆಟ್‌ನಲ್ಲಿ ಆದೇಶ

    ಸತೀಶ್ ಜಾರಕಿಹೊಳಿ ಅವರನ್ನೂ ಟೀಕಿಸಿದ್ದು, ಶಾಸಕ ಸತೀಶ ಜಾರಕಿಹೊಳಿ ಅವರು ‘ಬುದ್ಧ-ಬಸವ-ಅಂಬೇಡ್ಕರ್’ ಅಡಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕಾಂಗ್ರೆಸ್ ಪಕ್ಷವು ತನ್ನ ಸ್ವ-ಲಾಭದಾಯಕ ರಾಜಕೀಯ ಅಧಿಕಾರಕ್ಕಾಗಿ ನಮ್ಮ ಸಮಾನತೆಯ ಐಕಾನ್‌ಗಳನ್ನು ಯಾವಾಗಲೂ ಹೈಜಾಕ್ ಮಾಡಿದೆ. ಎಸ್ಟಿ ನಾಯಕ ಸಮುದಾಯದ ಸತೀಶ್ ಜಾರಕಿಹೊಳಿ ಶೋಷಿತ ಎಸ್ಟಿಗಳಿಗೆ ಒಳಮೀಸಲಾತಿಯನ್ನು ಬೆಂಬಲಿಸುತ್ತಾರೆಯೇ? ಅಥವಾ ಬುದ್ಧ-ಬಸವ-ಅಂಬೇಡ್ಕರ್ ಕೇವಲ ಗಿಮಿಕ್ ಮಾತ್ರವೇ? ಎಂದು ಪ್ರಶ್ನಿಸಿದ್ದಾರೆ.

  • ಹಳ್ಳಿಯಲ್ಲಿ ವೈದ್ಯರಾಗಲಿರುವ ವಿದ್ಯಾರ್ಥಿಗಳಿಗೆ ಶೇ.10 ಮೀಸಲಾತಿ

    ಹಳ್ಳಿಯಲ್ಲಿ ವೈದ್ಯರಾಗಲಿರುವ ವಿದ್ಯಾರ್ಥಿಗಳಿಗೆ ಶೇ.10 ಮೀಸಲಾತಿ

    ಮುಂಬೈ: ವೈದ್ಯರಾದ ಬಳಿಕ ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸಲು ಇಚ್ಛಿಸುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಕೋರ್ಸ್‍ಗಳಲ್ಲಿ ಶೇ.10ರಷ್ಟು ಮೀಸಲಾತಿ ನೀಡುವ ಕಾಯ್ದೆ ತರಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ.

    ಮಸೂದೆ ಅಂಗೀಕಾರವಾಗಿ ಕಾಯ್ದೆಯಾದ ಬಳಿಕ ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಗಳಲ್ಲಿ, ದೀರ್ಘಾವಧಿಯ ಆಧಾರದ ಮೇಲೆ ಸ್ವಯಂಪ್ರೇರಣೆಯಿಂದ ತಮ್ಮ ಸೇವೆ ಸಲ್ಲಿಸಲು ಸಿದ್ಧರಿರುವ ಅಭ್ಯರ್ಥಿಗಳಿಗೆ ವೈದ್ಯಕೀಯ ಸ್ಥಾನಗಳನ್ನು ಕಾಯ್ದಿರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

    ವಿದ್ಯಾರ್ಥಿಗಳು ಮುಂದೆ ವೈದ್ಯರಾದ ಬಳಿಕ ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸಲು ಸಿದ್ಧರಿದ್ದರೆ ಅವರಿಗೆ ಈ ಹೊಸ ಮೀಸಲಾತಿ ದೊರಕುತ್ತದೆ. ಸರ್ಕಾರಿ ಆಸ್ಪತ್ರೆಗಳು, ವಿಶೇಷವಾಗಿ ಗ್ರಾಮೀಣ ಪ್ರದೇಶ, ಬುಡಕಟ್ಟು ಪ್ರದೇಶಗಳಲ್ಲಿ ವೈದ್ಯರ ಕೊರತೆಯಿದೆ. ಹೀಗಾಗಿ ಈ ಕೊರತೆಯನ್ನು ನೀಗಿಸಲು ವೈದ್ಯಕೀಯ ಕಾಲೇಜುಗಳಿಗೆ ಈ ಹೊಸ ಮೀಸಲಾತಿ ವ್ಯವಸ್ಥೆಯನ್ನು ಪರಿಚಯಿಸಲು ಮಹಾರಾಷ್ಟ್ರ ಸರ್ಕಾರ ಪ್ಲಾನ್ ಮಾಡಿದೆ.

    ಈ ಮೀಸಲಾತಿ ಪಡೆಯುವ ವಿದ್ಯಾರ್ಥಿಗಳು ಕೋರ್ಸ್ ಮುಗಿದ ನಂತರ ಸರ್ಕಾರಿ ಆಸ್ಪತ್ರೆಗಳಲ್ಲಿ ಕನಿಷ್ಠ 5 ವರ್ಷಗಳ ಕಾಲ ಕಡ್ಡಾಯವಾಗಿ ಕರ್ತವ್ಯ ನಿರ್ವಹಿಸಬೇಕಾಗುತ್ತದೆ ಎನ್ನುವ ಅಂಶ ಈ ಮಸೂದೆಯಲ್ಲಿ ಇರಲಿದೆ.