ದಾವಣಗೆರೆ: ಇಲ್ಲಿನ ವಸತಿ ಶಾಲೆಯೊಂದರಲ್ಲಿ (Residential School) ಬಾಯ್ಲರ್ ಬಿದ್ದು ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ವಸತಿ ಶಾಲೆಯ ಮುಖ್ಯೋಪಾಧ್ಯಾಯ ಹಾಗೂ ವಾರ್ಡನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಪೋಷಕರ ದೂರಿನ ಮೇರೆಗೆ ಬಂಧಿಸಲಾಗಿದೆ.
ಇತ್ತೀಚೆಗೆ ನಗರದ (Davanagare) ಮಂಜುನಾಥಸ್ವಾಮಿ ಪರಿಶಿಷ್ಟ ವರ್ಗಗಳ ವಸತಿ ನಿಲಯದಲ್ಲಿ ಬಾಲಕ ರಂಗನಾಥ್ ಮೇಲೆ ಬಾಯ್ಲರ್ ಬಿದ್ದು ಸಾವನ್ನಪ್ಪಿದ್ದ. ಬಾಯ್ಲರ್‌ಗೆ ವಾರ್ಡನ್ ಕಟ್ಟಿಗೆ ಹಾಕಿ ಬರಲು ಬಾಲಕನಿಗೆ ಹೇಳಿದ್ದರು. ಕಟ್ಟಿಗೆ ಹಾಕಲು ತೆರಳಿದ್ದಾಗ ಈ ಅವಘಡ ನಡೆದಿತ್ತು.
ಅವಘಡ ನಡೆದಾಗ ಸರಿಯಾದ ಸಮಯಕ್ಕೆ ಚಿಕಿತ್ಸೆ ಕೊಡಿಸದೇ ಬಾಲಕ ಸಾವನ್ನಪ್ಪಿದ್ದಾನೆ ಎಂದು ಮೃತ ಬಾಲಕನ ಪೋಷಕರು ಆರೋಪಿಸಿದ್ದಾರೆ. ಈ ಸಂಬಂಧ ಬಾಲಕನ ತಂದೆ ರಾಮಪ್ಪ, ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಅನ್ವಯ ಪೊಲೀಸರು ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಬೆಂಗಳೂರು: ಕಾಂಗ್ರೆಸ್ (Congress) ಸರ್ಕಾರದಲ್ಲಿ ಎಲ್ಲಾ ಅಧಿಕಾರ ಅಧಿಕಾರಿಗಳ ಕೈಯಲ್ಲೇ ಇದ್ದು, ಸಚಿವರು ಮನೆಯಲ್ಲಿ ಮಜಾ ಮಾಡುತ್ತಿದ್ದಾರೆ. ವಸತಿ ಶಾಲೆಯಲ್ಲಿ (Residential School) ರಾಷ್ಟ್ರಕವಿ ಕುವೆಂಪು ಅವರ ವಾಣಿಯನ್ನು ಬದಲಿಸಿದ ಅಧಿಕಾರಿಯ ವಿರುದ್ಧ ಕೂಡಲೇ ಕ್ರಮ ವಹಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಅಧಿಕಾರಿಗಳು ಹುಚ್ಚುಚ್ಚಾಗಿ ಮನಸ್ಸಿಗೆ ಬಂದಂತೆ ಕೆಲಸ ಮಾಡುತ್ತಿದ್ದಾರೆ. ವಿಧಾನಸೌಧದ ಮುಂಭಾಗ ‘ಸರ್ಕಾರದ ಕೆಲಸ ದೇವರ ಕೆಲಸ’ ಎಂಬ ಘೋಷವಾಕ್ಯವಿದೆ. ಯಾರೋ ಕಾರ್ಯದರ್ಶಿಗಳು ಬಂದು ಅದನ್ನು ತೆಗೆದುಹಾಕಿ ಎಂದರೆ ಹೇಗಿರುತ್ತದೆ? ಶಾಲೆಯಲ್ಲಿ ಕೈ ಮುಗಿದು ಒಳಗೆ ಬನ್ನಿ ಎಂದರೆ ತಪ್ಪೇನು? ಬೇರೆ ದೇಶದ ಅಧ್ಯಕ್ಷರು ನಮ್ಮ ದೇಶಕ್ಕೆ ಬಂದರೆ ಕೈ ಮುಗಿಯುತ್ತಾರೆ. ಇದೇ ನಮ್ಮ ಸಂಸ್ಕೃತಿ ಎಂದರು. ಇದನ್ನೂ ಓದಿ: ಬಿಎಂಟಿಸಿ ನೌಕರರಿಗೆ 1 ಕೋಟಿ ರೂ. ಅಪಘಾತ ವಿಮೆ ಜಾರಿ
ಈ ಕಾಂಗ್ರೆಸ್ ಸರ್ಕಾರಕ್ಕೆ ಕೇಡುಗಾಲ ಬಂದಿದೆ. ಯಾವುದೇ ಆದೇಶವೇ ಇಲ್ಲದೆ ಈ ಘೋಷವಾಕ್ಯವನ್ನು ಬದಲಿಸಿದ್ದಾರೆ. ಇಲ್ಲಿ ಸರ್ಕಾರ ಸತ್ತಿದೆಯೇ ಬದುಕಿದೆಯೇ ಎಂದು ಗೊತ್ತಿಲ್ಲ. ಕಳೆದ ಬಾರಿ ಇದ್ದ ಸಿದ್ದರಾಮಯ್ಯ ಈಗ ಇಲ್ಲ. ಅವರಿಗೆ ಸರ್ಕಾರದ ಮೇಲೆ ಯಾವುದೇ ಹಿಡಿತವೂ ಇಲ್ಲ. ಅವರು ಆಯವ್ಯಯವನ್ನು ಮಂಡಿಸಿದಾಗಲೇ ಅವರು ಮಂಡಿಸಿದ್ದಲ್ಲ ಎಂದು ಗೊತ್ತಾಯಿತು ಎಂದು ಕಿಡಿಕಾರಿದರು. ಇದನ್ನೂ ಓದಿ: ಕುವೆಂಪು ಘೋಷವಾಕ್ಯ ತೆಗೆದುಹಾಕಲು ಸರ್ಕಾರ ಆದೇಶಿಸಿಲ್ಲ: ಸಚಿವ ಮಹದೇವಪ್ಪ
ಅಧಿಕಾರಿಗಳು ಸಚಿವರು, ಮುಖ್ಯಮಂತ್ರಿಗಳನ್ನು ಕೇಳದೆ ಬೇಕಾಬಿಟ್ಟಿಯಾಗಿ ಆದೇಶ ಮಾಡುತ್ತಿದ್ದಾರೆ ಎಂದರೆ, ಇಲ್ಲಿ ಯಾರಿಗೂ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂಬುದು ಸ್ಪಷ್ಟವಾಗಿದೆ. ಮಕ್ಕಳಿಗೆ ಪಾಠ ಅರ್ಥವಾಗಿಲ್ಲ ಎಂದರೆ ಶಿಕ್ಷಕರ ಬಳಿ ಪ್ರಶ್ನೆ ಮಾಡಬೇಕು. ಆದರೆ ಮಕ್ಕಳು ಧೈರ್ಯದಿಂದ ಯಾರಿಗೆ ಪ್ರಶ್ನೆ ಮಾಡಬೇಕು? ಇಲ್ಲಿ ಹಿಂದೂ, ಕ್ರೈಸ್ತ, ಮುಸಲ್ಮಾನ ಎಂದು ಎಲ್ಲೂ ಬಳಸಿಲ್ಲ. ಈ ಸರ್ಕಾರ ದಿಕ್ಕು ದೆಸೆ ಇಲ್ಲದೆ ಎಡಬಿಡಂಗಿಯಾಗಿದ್ದು, ಅಧಿಕಾರಿಗಳ ಕೈಗೆ ಅಧಿಕಾರ ನೀಡಿ ಎಲ್ಲರೂ ಮೋಜು ಮಸ್ತಿಯಲ್ಲಿ ಕಾಲ ಕಳೆಯುತ್ತಿದ್ದಾರೆ. ಈ ಒಂದು ಉದಾಹರಣೆಯಲ್ಲೇ ಸರ್ಕಾರಿ ಇಲಾಖೆಗಳು ಹೇಗೆ ಕೆಲಸ ಮಾಡುತ್ತಿದೆ ಎಂದು ತಿಳಿಯುತ್ತದೆ ಎಂದು ದೂರಿದರು. ಇದನ್ನೂ ಓದಿ: ʻಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿʼ – ಬರಹ ಬದಲಾವಣೆ ಸಮರ್ಥಿಸಿಕೊಂಡ ಲಕ್ಷ್ಮಿ ಹೆಬ್ಬಾಳ್ಕರ್
– ರಾಮರಾಜ್ಯದ ಪರಿಕಲ್ಪನೆ ಕಾಂಗ್ರೆಸ್‌ನದ್ದು ಎಂದ ಸಚಿವೆ
– ಪ್ರಹ್ಲಾದ್ ಜೋಶಿ ಸೋಲಿಸಲು ಸೂಕ್ತ ಅಭ್ಯರ್ಥಿ ನಿಲ್ಲಿಸುತ್ತೇವೆ
ಹುಬ್ಬಳ್ಳಿ: ಬಿಜೆಪಿಯವರು ಅಗತ್ಯವಿದ್ದಾಗ ಮಾತ್ರ ಜಾತ್ಯತೀತತೆ ಬಗ್ಗೆ ಮಾತನಾಡ್ತಾರೆ. ʻಕೈಮುಗಿದು ಒಳಗೆ ಬಾ ಅಥವಾ ಧೈರ್ಯವಾಗಿ ಪ್ರಶ್ನಿಸಿʼ ಅನ್ನೋದು ಎರಡೂ ಒಂದೇ ಅಂತ ಹೇಳುವ ಮೂಲಕ ವಸತಿ ಶಾಲೆಗಳ (Residential Schools) ದ್ವಾರದಲ್ಲಿದ್ದ ಬರಹ ಬದಲಾವಣೆಯನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಸಮರ್ಥಿಸಿಕೊಂಡರು.
ಹುಬ್ಬಳ್ಳಿಯಲ್ಲಿ (Hubballi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜ್ಞಾನ ದೇಗುಲಕ್ಕೆ ಜ್ಞಾನ ತೆಗೆದುಕೊಳ್ಳಲು ಬನ್ನಿ. ಆತ್ಮವಿಶ್ವಾಸ ಹೆಚ್ಚಿಸಿಕೊಂಡು ಧೈರ್ಯದಿಂದ ಜೀವನ ಸಾಗಿಸಿ, ಇದರ ಬಗ್ಗೆ ನಾನು ಜಾಸ್ತಿ ಹೇಳಿದ್ರೆ ಪರ ವಿರುದ್ಧದ ಹೇಳಿಕೆಗಳು ಹೆಚ್ಚಾಗುತ್ತೆ ಎಂದು ಹೇಳಿದರು. ಇದನ್ನೂ ಓದಿ: ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು- ಚರ್ಚೆಗೆ ಗ್ರಾಸವಾಯ್ತು ವಸತಿ ಶಾಲೆಗಳಲ್ಲಿನ ಬರಹ
ಏನಿದು ವಿವಾದ?
ವಿಜಯಪುರ ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ (Morarji Residential School) ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಬರಹವನ್ನು ಬದಲಿಸಿ ಹಾಕಿ ವಿವಾದಕ್ಕೀಡಾದ ಘಟನೆ ನಡೆದಿದೆ. ಕುವೆಂಪು ಅವರ ‘ಜ್ಞಾನ ದೇಗುಲವಿದು ಕೈಮುಗಿದು ಬಳಗೆ ಬಾ’ ಎಂಬ ಸಾಲುಗಳ ಬದಲಾಗಿ ‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ’ ಎಂದು ಬದಲಾಯಿಸಿ ಶಾಲೆಯ ಪ್ರವೇಶ ದ್ವಾರದಲ್ಲಿ ಬರೆಯಲಾಗಿದೆ. ಇದು ಆಡಳಿತ ಸರ್ಕಾರ ಹಾಗೂ ಪ್ರತಿಪಕ್ಷಗಳ ನಡುವೆ ಚರ್ಚಗೆ ಗ್ರಾಸವಾಗಿದೆ. ಇದನ್ನೂ ಓದಿ: ಧೈರ್ಯವಾಗಿ ಪ್ರಶ್ನಿಸಿ ಅಂದಿದ್ದು ತಪ್ಪಿಲ್ಲ- ಕುವೆಂಪು ಬರಹ ಬದಲಿಕೆಗೆ ಪ್ರಿಯಾಂಕ್ ಖರ್ಗೆ ಸಮರ್ಥನೆ
ರಾಮರಾಜ್ಯದ ಪರಿಕಲ್ಪನೆ ಕಾಂಗ್ರೆಸ್‌ನದ್ದು:
ಇನ್ನೂ ಸುಪ್ರೀಂ ಕೋರ್ಟ್ ಸೂಚಿಸಿದ ಜಾಗದಲ್ಲಿ ರಾಮಮಂದಿರ ಕಟ್ಟಿಲ್ಲ ಎಂಬ ಲಾಡ್ ಹೇಳಿಕೆಗೆ ಪ್ರತಿಕ್ರಿಯಿಸಿ, ಈ ಬಗ್ಗೆ ಸೂಕ್ತ ಉತ್ತರ ಸಿಗಬೇಕಂದ್ರೆ ನೀವು ಸಂತೋಷ್ ಲಾಡ್ ಅವರನ್ನೇ ಕೇಳಿ. ನಾವು ರಾಮ ರಾಜ್ಯದ ಪರಿಕಲ್ಪನೆ ಮೇಲೆ ವಿಶ್ವಾಸ ಇಟ್ಟುಕೊಂಡಿದ್ದೇವೆ. ಮನುಷ್ಯ ನಿಧನವಾದ ನಂತರ ರಾಮ ನಾಮ ಜಪಿಸುತ್ತೇವೆ. ಆ ಸದ್ಗತಿ ಸಿಗಲಿ ಅನ್ನೋದೇ ರಾಮರಾಜ್ಯ ಪರಿಕಲ್ಪನೆ. ರಾಮ ರಾಜ್ಯದಲ್ಲಿ ಎಲ್ಲರೂ ಸಂತೋಷವಾಗಿರಬೇಕು. ಈ ಪರಿಕಲ್ಪನೆ ತಂದವರೇ ಕಾಂಗ್ರೆಸ್‌ನವರು ಎಂದು ಬೀಗಿದರು.
ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಹೆಸರು ಪ್ರಕಟಿಸುವ ಕುರಿತು ಮಾತನಾಡಿ, ಶೀಘ್ರವೇ ಅಭ್ಯರ್ಥಿಯ ಹೆಸರು ಅಂತಿಮವಾಗಲಿದೆ. ನಮ್ಮ ಎದುರಾಳಿ ಪ್ರಹ್ಲಾದ್ ಜೋಶಿ ಈಗಾಗಲೇ ಪ್ರಚಾರ ಆರಂಭಿಸಿದ್ದಾರೆ. ಜೋಶಿ ಹಿಂದೆ 4 ಬಾರಿ ಆಯ್ಕೆಯಾದವರು ಮತ್ತು ಕೇಂದ್ರದಲ್ಲಿ ಸಚಿವರಾದವರು. ಅವರನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಸೂಕ್ತ ಅಭ್ಯರ್ಥಿಯನ್ನು ಅಂತಿಮಗೊಳಿಸುತ್ತೇವೆ ಎಂದರು.
ಹೆಬ್ಬಾಳ್ಕರ್ ಅಳಿಯ ರಜತ್ ಉಳ್ಳಾಗಡ್ಡಿ ಮಠ ಶಕ್ತಿ ಪ್ರದರ್ಶನ ವಿಚಾರ ಕುರಿತು ಮಾತನಾಡಿ, ರಜತ್ ನನ್ನ ಅಳಿಯ ಅನ್ನೋ ಕಾರಣಕ್ಕೆ ಅರ್ಜಿ ಹಾಕಿಲ್ಲ. ಹೈಕಮಾಂಡ್ ಎಲ್ಲವನ್ನೂ ಗಮನಿಸಿ ಸೂಕ್ತ ಕ್ರಮ ಕೈಗೊಳ್ಳಲಿದೆ. ಎಲ್ಲರ ಅಭಿಪ್ರಾಯ ಪಡೆದ ನಂತರವೇ ಅಭ್ಯರ್ಥಿಯನ್ನ ಅಂತಿಮಗೊಳಿಸಲಾಗುತ್ತೆ. ಇಡೀ ರಾಜ್ಯದಲ್ಲಿ ಯುವಕರಿಗೆ ಮತ್ತು ಹಿರಿಯರಿಗೆ ಇಬ್ಬರಿಗೂ ಅವಕಾಶ ಕೊಡಲಾಗುತ್ತೆ.
ವಿಜಯಪುರ: ವಸತಿ ಶಾಲೆಯ ಘೋಷವಾಕ್ಯ ಸಂಬಂಧ ಪಬ್ಲಿಕ್ ಟಿವಿಯಲ್ಲಿ ವರದಿಯಾದ ಬಳಿಕ ಬರಹವನ್ನು ಮೊದಲಿನಂತೆಯೇ ಬದಲಾವಣೆ ಮಾಡಲಾಗಿದೆ.
ಈ ಕುರಿತು ಶಾಲೆಯ ಪ್ರಿನ್ಸಿಪಾಲ್ ದುಂಡಪ್ಪ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿ, ಮುಖ್ಯ ಕಾರ್ಯದರ್ಶಿಗಳ ಮೌಖಿಕ ಸೂಚನೆಯಂತೆ ಘೋಷವಾಕ್ಯ ಬದಲಾಯಿಸಿದ್ದೆವು. ಪಬ್ಲಿಕ್ ಟಿವಿಯಲ್ಲಿ ವರದಿಯಾದ ಬಳಿಕ ಘೋಷವಾಕ್ಯ ಮೊದಲಿನಂತೆಯೇ ಬದಲಾವಣೆ ಮಾಡಿದ್ದೇವೆ ಎಂದರು. ಇದನ್ನೂ ಓದಿ: ವಿಧಾನಸೌಧದಲ್ಲೇ ಶಾಸಕರಿಗೆ ಮಧ್ಯಾಹ್ನದ ಬಿಸಿಯೂಟ- ಖಾದರ್ ಘೋಷಣೆ
ಆಗಿದ್ದೇನು..?: ವಿಜಯಪುರ (Vijayapur) ಜಿ. ಮುದ್ದೇಬಿಹಾಳ ತಾ. ಘಾಳಪೂಜೆ ಮೊರಾರ್ಜಿ ವಸತಿ ಶಾಲೆಯ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ‘ಜ್ಞಾನ ದೇಗುಲವಿದು ಕೈಮುಗಿದು ಬಳಗೆ ಬಾ’ ಎಂಬ ಸಾಲುಗಳ ಬದಲಾಗಿ ‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ’ ಎಂದು ಬದಲಾಯಿಸಿ ಶಾಲೆಯ ಪ್ರವೇಶ ದ್ವಾರದಲ್ಲಿ ಬರೆಯಲಾಗಿದೆ. ಇದು ಭಾರೀ ಚರ್ಚೆಗೆ ಗ್ರಾಸವಾಗಿತ್ತು.
ಕೇವಲ ವಿಜಯಪುರ ಮಾತ್ರವಲ್ಲ, ರಾಯಚೂರು ಜಿಲ್ಲೆಯ 36 ವಸತಿ ಶಾಲೆಗ ಪೈಕಿ ಬಹುತೇಕ ಕಡೆಗಳಲ್ಲಿ ಕುವೆಂಪು ವಾಕ್ಯವನ್ನ ಬದಲಾಯಿಸಿ ಬರೆಯಲಾಗಿದೆ. ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿರುವ ಮುರಾರ್ಜಿ ದೇಸಾಯಿ ವಸತಿ ಶಾಲೆ, ಮಸ್ಕಿ, ಲಿಂಗಸುಗೂರಿನ ಅಡವಿಬಾವಿ ಸೇರಿ ಜಿಲ್ಲೆಯ ಹಲವೆಡೆ ವಾಕ್ಯ ಬದಲಾವಣೆ ಮಾಡಲಾಗಿದೆ.
ವಿಜಯಪುರ: ರಾಷ್ಟ್ರಕವಿ ಕುವೆಂಪು (Kuvempu) ಅವರ ಬರಹ ಬದಲಾಯಿಸಿರುವ ಕುರಿತು ರಾಜ್ಯಾದ್ಯಂತ ಆಕ್ರೋಶ ಎದ್ದ ಬೆನ್ನಲ್ಲೇ ಸಮಾಜ ಕಲ್ಯಾಣ ಇಲಾಖೆ (Social Welfare Department) ಡಿಡಿ ಪುಂಡಲೀಕ ಮಾನವರ ಸ್ಪಷ್ಟನೆ ನೀಡಿದ್ದಾರೆ.
ಒಟ್ಟು 23 ವಸತಿ ಶಾಲೆಯಲ್ಲಿ ಎರಡು ವಸತಿ ಶಾಲೆಯಲ್ಲಿ ಮಾತ್ರ ಬದಲಾವಣೆ ಮಾಡಲಾಗಿದೆ. ನಮ್ಮ ಪ್ರಿನ್ಸಿಪಾಲ್ ಸೆಕ್ರೆಟ್ರಿ ಮಣಿವಣ್ಣನ್ ಅವರ ಟೆಲಿಗ್ರಾಮ ಮೆಸೇಜ್‍ನ ಆದೇಶದ ಮೇಲೆ ಬದಲಿಸಲಾಗಿದೆ. ಇದರ ಬಗ್ಗೆ ಪರಿಶೀಲನೆ ನಡೆಸಿ ಮುಂದಿನ ಕ್ರಮಕೈಗೊಳ್ಳುತ್ತೇನೆ. ಶಾಲೆಯಲ್ಲಿ ಸಮಸ್ಯೆಗಳ ಬಗ್ಗೆ ಪ್ರಶ್ನಿಸುವ ಹಕ್ಕಿದೆ ಎನ್ನುವ ಹಿನ್ನೆಲೆ ಈ ರೀತಿ ಬದಲಾವಣೆ ಮಾಡಲಾಗಿದೆ ಎಮದು ಅವರು ಸ್ಪಷ್ಟಪಡಿಸಿದರು.
ಆಗಿದ್ದೇನು..?; ವಿಜಯಪುರ ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ (Vijayapur School Tagline) ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ‘ಜ್ಞಾನ ದೇಗುಲವಿದು ಕೈಮುಗಿದು ಬಳಗೆ ಬಾ’ ಎಂಬ ಸಾಲುಗಳ ಬದಲಾಗಿ ‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ’ ಎಂದು ಬದಲಾಯಿಸಿ ಶಾಲೆಯ ಪ್ರವೇಶ ದ್ವಾರದಲ್ಲಿ ಬರೆಯಲಾಗಿದೆ. ಇದು ಸದ್ಯ ಭಾರೀ ಚರ್ಚೆಗೆ ಗ್ರಾಸವಾಗಿದೆ.
ವಿಜಯಪುರ: ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ (Morarji Residential School) ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಬರಹವನ್ನು ಬದಲಿಸಿ ಹಾಕಿ ವಿವಾದಕ್ಕೀಡಾದ ಘಟನೆ ನಡೆದಿದೆ.
ಕುವೆಂಪು ಅವರ ‘ಜ್ಞಾನ ದೇಗುಲವಿದು ಕೈಮುಗಿದು ಬಳಗೆ ಬಾ’ ಎಂಬ ಸಾಲುಗಳ ಬದಲಾಗಿ ‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ’ ಎಂದು ಬದಲಾಯಿಸಿ ಶಾಲೆಯ ಪ್ರವೇಶ ದ್ವಾರದಲ್ಲಿ ಬರೆಯಲಾಗಿದೆ. ಮೊರಾರ್ಜಿ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪೋಷಕರು ಧೈರ್ಯವಾಗಿ ಪ್ರಶ್ನೆ ಮಾಡಲಿ ಎಂದ ಉದ್ದೇಶದಿಂದ ಬರೆಯಲಾಗಿದೆ ಎನ್ನಲಾಗಿದೆ.
ಈ ಕುರಿತು ವಿಜಯಪುರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪುಂಡಲೀಕ ಮಾನವರ ಪ್ರತಿಕ್ರಿಯಿಸಿ, ಸರ್ಕಾರದ ಸುತ್ತೋಲೆ ಪ್ರಕಾರ ಜ್ಞಾನ ದೇಗುಲವಿದು, ಧೈರ್ಯವಾಗಿ ಪ್ರಶ್ನಿಸಿ ಎಂದು ಬರಹ ಬದಲಾವಣೆ ಮಾಡಲಾಗಿದೆ. ಮೊರಾರ್ಜಿ ವಸತಿ ಶಾಲಾ ವಿದ್ಯಾರ್ಥಿಗಳ ಪೆÇೀಷಕರು ಧೈರ್ಯವಾಗಿ ಪ್ರಶ್ನೆ ಮಾಡಲಿ. ಮಕ್ಕಳ ಶಿಕ್ಷಣ ವಸತಿ ಊಟ ಸೇರಿದಂತೆ ವಸತಿ ಶಾಲೆಯ ಎಲ್ಲಾ ವಿಚಾರಗಳ ಕುರಿತು ಪ್ರಶ್ನೆ ಮಾಡಲಿ. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಸಿಗಲಿ ಪೋಷಕರು ಧೈರ್ಯವಾಗಿ ಮಾತನಾಡಲಿ ಎನ್ನುವ ಉದ್ದೇಶವಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಘಾಳಪೂಜಿ ಗ್ರಾಮದಲ್ಲಿ ಹಾಗೂ ಇತರ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ದ್ವಾರದಲ್ಲಿ ಬದಲಾಗಿರೋ ಬರಹ ಸದ್ಯ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಏ.13ರಿಂದ 23ರ ವರೆಗೆ ವಿಶ್ವವಿಖ್ಯಾತ ಬೆಂಗಳೂರು ಕರಗ
ಶಿವಮೊಗ್ಗ: ಖಾಸಗಿ ವಸತಿ ಶಾಲೆಯಲ್ಲಿ 8 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣ ಸಾಗರದಲ್ಲಿ (Sagar) ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಸೊರಬ ತಾಲೂಕಿನ ಶಿವಪುರ ಗ್ರಾಮದ ತೇಜಸ್ವಿನಿ (13) ಎಂದು ಗುರುತಿಸಲಾಗಿದೆ. ಈಕೆ ಸಾಗರದ ವನಶ್ರೀ ವಸತಿ ಶಾಲೆಗೆ (Residential School) ಕಳೆದ ಐದು ದಿನಗಳ ಹಿಂದೆ ದಾಖಲಾಗಿದ್ದಳು. ಗುರುವಾರ ಪ್ರಜ್ಞಾ ಹೀನಾ ಸ್ಥಿತಿಯಲ್ಲಿದ್ದ ತೇಜಸ್ವಿಯನ್ನು ಶಾಲೆಯ ಶಿಕ್ಷಕರು ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಇದನ್ನೂ ಓದಿ: ಖಲಿಸ್ತಾನಿ ಬೆಂಬಲಿಗರಿಂದ ಇಂದಿರಾ ಗಾಂಧಿ ಹತ್ಯೆಯ ಸ್ತಬ್ಧಚಿತ್ರ ಮೆರವಣಿಗೆ
ಇದೀಗ ಮಗಳ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದ (Shivamogga) ಮೆಗ್ಗಾನ್ ಆಸ್ಪತ್ರೆಯಲ್ಲಿ (McGann Hospital) ಮರಣೋತ್ತರ ಶವ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಅಲ್ಲದೇ ವಿದ್ಯಾರ್ಥಿನಿ ಸಾವಿನ ಬಗ್ಗೆ ತನಿಖೆ ನಡೆಸುವಂತೆ ವಿದ್ಯಾರ್ಥಿನಿ ಕುಟುಂಬಸ್ಥರು ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ಆಗ್ರಹಿಸಿದ್ದಾರೆ. ಇದನ್ನೂ ಓದಿ: 32 ವರ್ಷದ ಗೆಳತಿಯನ್ನು ಕೊಂದು ಪೀಸ್ ಪೀಸ್ ಮಾಡಿದ 56 ವರ್ಷದ ವ್ಯಕ್ತಿ ಅರೆಸ್ಟ್
ಹಾಸನ: ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ಶಾಲೆಯ (Residential School) ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ (Sexual Abuse) ನಡೆಸಿರುವ ಆರೋಪದಡಿ ಐವರನ್ನು ಬಂಧಿಸಲಾಗಿದೆ.
ಮಾ.7 ರಂದು ಸದರಿ ಹಾಸ್ಟೆಲ್‌ನಲ್ಲಿ ಸೌಲಭ್ಯ ಇಲ್ಲ ಎಂದು ಮಕ್ಕಳು ದಿಢೀರ್ ಪ್ರತಿಭಟನೆಗಿಳಿದಿದ್ದರು. ಈ ವೇಳೆ ಕೆಲವರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಈ ಸಂಬಂಧ ಪ್ರಾಂಶುಪಾಲರಿಗೆ, ಶಿಕ್ಷಕರಿಗೆ ದೂರು ನೀಡಿದರೂ ಪ್ರಯೋಜನ ಆಗಿಲ್ಲ ಎಂದು ವಿದ್ಯಾರ್ಥಿನಿಯರು ಅಳಲು ತೋಡಿಕೊಂಡಿದ್ದರು. ಇದನ್ನೂ ಓದಿ: ಹೋಳಿ ಹಬ್ಬಕ್ಕೆ ಕೋಳಿ ಸಾರು ಮಾಡಲ್ಲ ಅಂದಿದ್ದಕ್ಕೆ ಹೆಂಡತಿ ಕೈಮುರಿದ ಪತಿರಾಯ
ಇದಾದ ಬಳಿಕ ವಿವಿಧ ಇಲಾಖೆಗಳನ್ನೊಳಗೊಂಡ ಅಧಿಕಾರಿಗಳ ತಂಡ ಹಾಸ್ಟೆಲ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಈ ವೇಳೆ ಮಕ್ಕಳನ್ನು ವಿಚಾರಣೆಗೆ ಒಳಪಡಿಸಿದಾಗ 10ನೇ ತರಗತಿಯ ಮೂವರು, 7ನೇ ತರಗತಿಯ ಐವರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಬೆಳಕಿಗೆ ಬಂದಿತು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ.
ಹಾಸ್ಟೆಲ್ ಮೇಲ್ವಿಚಾರಣೆ ನೋಡಿಕೊಳ್ಳುತ್ತಿರುವವರ ನಿರ್ಲಕ್ಷ್ಯವೂ ಇದಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಆದ್ದರಿಂದ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ದೂರಿನ ಮೇರೆಗೆ ಪ್ರಾಂಶುಪಾಲರು, ಇಬ್ಬರು ಶಿಕ್ಷಕರು, ಒಬ್ಬ ಭದ್ರತಾ ಸಿಬ್ಬಂದಿ ಮತ್ತು ಸ್ಥಳೀಯ ನಿವಾಸಿ ಸೇರಿ ಐವರನ್ನ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಳಿಕ ಬಂಧಿತ ಆರೋಪಿಗಳನ್ನ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ, ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಐವರ ವಿರುದ್ಧ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ (SC ST Act) ಹಾಗೂ ಪೋಕ್ಸೋ ಕಾಯ್ದೆ (POCSO Act) ಅಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.
ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯಲ್ಲಿ ಬಹುತೇಕ ವಸತಿ ಕಾಲೇಜುಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ವಸತಿ ಶಾಲೆಯಲ್ಲಿರುವ ಮಕ್ಕಳನ್ನು ಪೋಷಕರು ಮನೆಗಳಿಗೆ ಕರೆದೊಯ್ಯುತ್ತಿದ್ದಾರೆ.
ದಾವಣಗೆರೆಯ ಸಿದ್ದಗಂಗಾ ಶಾಲೆ ಸೇರಿದಂತೆ ಹಲವು ಶಾಲೆಗಳಲ್ಲಿ ಮಕ್ಕಳನ್ನು ಮನೆಗೆ ಕರೆದೊಯ್ಯುಲಾಗುತ್ತಿದೆ. ವಸತಿ ಶಾಲೆಯಲ್ಲಿ ಇದ್ದರೆ ಕೊರೊನಾ ಸೋಂಕು ನಮ್ಮ ಮಕ್ಕಳಿಗೂ ಸಹ ಬರಬಹುದು ಎಂದು ಪೋಷಕರು ಆತಂಕ ಪಡುತ್ತಿದ್ದಾರೆ. ಈ ಪರಿಣಾಮ ಮಕ್ಕಳಿಗೆ ಆನ್‍ಲೈನ್ ಕ್ಲಾಸ್ ಮಾಡಿ ಎಂದು ಹೇಳಿ ಮನೆಗೆ ಕರೆದುಕೊಂಡು ಹೋಗುತ್ತಿದ್ದಾರೆ. ಇದನ್ನೂ ಓದಿ: ರಾಯಚೂರು ಕೋರ್ಟ್ ಮುಂದೆ ಜನಜಂಗುಳಿ
ಪೋಷಕರ ಒತ್ತಾಯದಂತೆ ಮಕ್ಕಳನ್ನು ಕಾಲೇಜು ಅಡಳಿತ ಮನೆಗೆ ಕಳುಹಿಸುತ್ತಿದೆ. ದಾವಣಗೆರೆಯಲ್ಲಿ ಒಂದು ವಾರದಲ್ಲಿ 213 ವಿದ್ಯಾರ್ಥಿಗಳಿಗೆ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಈಗ ಇನ್ನಷ್ಟು ಪ್ರಕರಣಗಳು ಹೆಚ್ಚಾಗಬಹುದು ಎಂದು ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದಾರೆ.
ನಗರದ ಪ್ರತಿಷ್ಠಿತ ಕಾಲೇಜುಗಳಲ್ಲಿ ಮಕ್ಕಳನ್ನು ಓದಲು ಬಿಟ್ಟಿರುವ ನಗರ ಸಮೀಪದ ಊರಿನ ಪೋಷಕರು ಆಡಳಿತ ಮಂಡಳಿಗೆ ಫೋನ್ ಮಾಡಿ ಮಕ್ಕಳ ಸುರಕ್ಷತೆ ವಿಚಾರಿಸುತ್ತಿದ್ದಾರೆ.
2 ಅಥವಾ 3 ತಿಂಗಳಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ ಪರೀಕ್ಷೆಗಳಿರುವ ಕಾರಣ ವಿದ್ಯಾರ್ಥಿಗಳಿಗೆ ಇದು ತುಂಬಾ ಮಹತ್ವದ ಸಮಯ. ಹಾಗೆಂದು ಅವರನ್ನು ಇಲ್ಲೇ ಇರಲು ಬಿಟ್ಟು ಕೊರೊನಾಗೆ ತುತ್ತಾಗಿಸಲು ಪೋಷಕರು ಸಿದ್ಧರಿಲ್ಲ. ಇತ್ತ ರಿಸ್ಕ್ ತೆಗೆದುಕೊಳ್ಳಲು ಆಡಳಿತ ಮಂಡಳಿಯವರು ಸಿದ್ಧರಿಲ್ಲ. ಹೀಗಾಗಿ ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಮಕ್ಕಳು ಶಾಲೆಗಿಂತ ಮನೆಯಲ್ಲಿ ಇರುವುದೇ ಹೆಚ್ಚು ಸುರಕ್ಷಿತ ಎಂಬುದು ಹೆತ್ತವರ ಅಭಿಪ್ರಾಯವಾಗಿದೆ. ಇದನ್ನೂ ಓದಿ: ಕೋವಿಡ್-19 ಪ್ರಕರಣ ಏರಿಕೆ – ಮದುವೆ ನೋಂದಣಿ ಸೇವೆ ಸ್ಥಗಿತ!
ಈಗಾಗಲೇ ನಗರದ ಸರ್‍ಎಂವಿ ಕಾಲೇಜಿನಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಮಲೆಬೆನ್ನೂರಿನ ಸರ್ಕಾರಿ ಪಿಯು ಕಾಲೇಜು, ಹರಿಹರದ ಪಾಲಿಟೆಕ್ನಿಕ್ ಕಾಲೇಜು ಹಾಗೂ ಚನ್ನಗಿರಿ ತಾಲೂಕು ಮಾವಿನಹೊಳೆ ವಸತಿ ಶಾಲೆ ಕೆಲ ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ. ಇದರಿಂದ ಜಿಲ್ಲಾಧಿಕಾರಿ ಸೂಚನೆಯಂತೆ ಈ ಸೋಂಕು ಕಾಣಿಸಿಕೊಂಡ ಶಾಲಾ ಕಾಲೇಜುಗಳಿಗೆ ಒಂದುವಾರ ರಜೆ ಘೋಷಿಸಲಾಗಿದೆ. ಉಳಿದಂತೆ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ನಗರದ ಹಲವು ಖಾಸಗಿ ಕಾಲೇಜುಗಳು ಸ್ವಯಂಪ್ರೇರಿತವಾಗಿ ಆನ್ ಲೈನ್ ಪಾಠಕ್ಕೆ ಮೊರೆ ಹೋಗಿವೆ.
ಯಾದಗಿರಿ: ವಸತಿ ಶಾಲೆಯಲ್ಲಿ ನೀಡುತ್ತಿರುವ ಕಳಪೆ ಆಹಾರ ವಿತರಣೆ ಸಮಸ್ಯೆಯನ್ನು ವಿದ್ಯಾರ್ಥಿನಿಯರು ಡಿಸಿಗೆ ಹೇಳಲು 10 ಕಿ.ಮೀ ನಡೆದು ಜಿಲ್ಲಾಧಿಕಾರಿ ಆಫೀಸ್‍ಗೆ ಬಂದಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಯಾದಗಿರಿ ತಾಲೂಕಿನ ಮುಂಡರಗಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ, ಕಳಪೆ ಆಹಾರ ನೀಡುತ್ತಿರುವ ಹಿನ್ನೆಲೆ ವಿದ್ಯಾರ್ಥಿಗಳು ಇಂದು ಬೆಳಿಗ್ಗೆ ಊಟ ಮಾಡದೆ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ 7 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: 5-6 ದಿನ ಪುನೀತ್ ಸಮಾಧಿ ಬಳಿ ಯಾರನ್ನೂ ಬಿಡಲ್ಲ: ಅರಗ ಜ್ಞಾನೇಂದ್ರ
ಒಂದು ಕಡೆ ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರೆ, ಮತ್ತೊಂದೆಡೆ ವಿದ್ಯಾರ್ಥಿನಿಯರು ವಸತಿ ಶಾಲೆಯಿಂದ ಯಾದಗಿರಿ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಮೂಲಕ ಪ್ರತಿಭಟನೆ ನಡೆಸಿದ್ದಾರೆ. ವಾರ್ಡನ್ ಹಾಗೂ ಪ್ರಾಂಶುಪಾಲರನ್ನು ಬದಲಾವಣೆ ಮಾಡಬೇಕೆಂದು ಒತ್ತಾಯ ಮಾಡಿದರು. ಸುಮಾರು 10ಕಿ.ಮೀ ವರಗೆ ನಡೆದುಕೊಂಡು ಬಂದು ಪ್ರತಿಭಟನೆ ನಡೆಸಿದರು. ಇದನ್ನೂ ಓದಿ:ಕಾಂಗ್ರೆಸ್‍ನವರು ಮತದಾರರಿಗೆ ನೇರವಾಗಿ ಹಣ ಹಂಚಿದ್ದಾರೆ: ಈಶ್ವರಪ್ಪ