Tag: residential schools

  • ವಸತಿ ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ಬ್ರೇಕ್‌; ಆದೇಶ ವಾಪಸ್‌

    ವಸತಿ ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ಬ್ರೇಕ್‌; ಆದೇಶ ವಾಪಸ್‌

    ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿ ಬರುವ ಕರ್ನಾಟಕ ವಸತಿ ಶಾಲಾ-ಕಾಲೇಜುಗಳಲ್ಲಿ (Residential School and Colleges) ಧಾರ್ಮಿಕ ಹಬ್ಬಗಳ ಆಚರಣೆ ಮಾಡಬಾರದು ಎಂದು ಹೊರಡಿಸಿದ್ದ ಆದೇಶವನ್ನು ಸರ್ಕಾರ ಹಿಂಪಡೆದಿದೆ.

    ಆದೇಶ ವಿವಾದದ ಸ್ಮರೂಪ ಪಡೆದುಕೊಂಡ ಬೆನ್ನಲ್ಲೇ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಆದೇಶವನ್ನು ವಾಪಸ್‌ ಪಡೆದಿದೆ. ಇದನ್ನೂ ಓದಿ: ವಸತಿ ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ಸರ್ಕಾರ ಬ್ರೇಕ್

    ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿ ಬರುವ ಕರ್ನಾಟಕ ವಸತಿ ಶಾಲಾ-ಕಾಲೇಜುಗಳಲ್ಲಿ ಇನ್ಮುಂದೆ ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡದಂತೆ ಆದೇಶ ಹೊರಡಿಸಲಾಗಿತ್ತು. ಸರ್ಕಾರದ ಸೂಚನೆ ಮೇರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಯಾವುದೇ ಧರ್ಮದ ಧಾರ್ಮಿಕ ಹಬ್ಬಗಳನ್ನ ಇನ್ನು ಮುಂದೆ ವಸತಿ ಶಾಲಾ-ಕಾಲೇಜುಗಳಲ್ಲಿ ಆಚರಣೆ ಮಾಡದಂತೆ ಸುತ್ತೋಲೆ ಹೊರಡಿಸಿತ್ತು.

    ಯುಗಾದಿ, ರಂಜಾನ್, ಕ್ರಿಸ್ಮಸ್, ಸಂಕ್ರಾಂತಿ, ಈದ್ ಮಿಲಾದ್ ಸೇರಿ ಯಾವುದೇ ಧರ್ಮದ ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡಬಾರದು. ಕೇವಲ ರಾಷ್ಟ್ರೀಯ ಹಬ್ಬಗಳು, ನಾಡಹಬ್ಬ ಮತ್ತು ಆಯ್ದ ಮಹಾ ಪುರುಷರು ಜಯಂತಿ ಸೇರಿ 10 ಆಚರಣೆಗಳನ್ನ ಮಾಡುವಂತೆ ಆದೇಶ ಹೊರಡಿಸಲಾಗಿತ್ತು. ಇದನ್ನೂ ಓದಿ: ವಿಧಾನ ಪರಿಷತ್‌ನಲ್ಲಿ ಗಲಾಟೆ ಸೃಷ್ಟಿಸಿದ ಕೇಂದ್ರ ಸರ್ಕಾರದ ಅನುದಾನ ಫೈಟ್

    ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ, ಗಾಂಧಿ ಜಯಂತಿ, ಕನ್ನಡ ರಾಜ್ಯೋತ್ಸವ, ಅಂಬೇಡ್ಕರ್ ಜಯಂತಿ, ವಾಲ್ಮೀಕಿ ಜಯಂತಿ, ಕನಕದಾಸರ ಜಯಂತಿ, ಬಸವ ಜಯಂತಿ, ಸಂವಿಧಾನ ದಿನಾಚರಣೆ ಹಾಗೂ ಯೋಗ ದಿನಾಚರಣೆ ಮಾತ್ರ ಆಚರಣೆ ಮಾಡುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿತ್ತು. ಒಂದು ವೇಳೆ ನಿಯಮ ಮೀರಿ ಧಾರ್ಮಿಕ ಹಬ್ಬಗಳು‌ ಆಚರಣೆ ಮಾಡಿದರೆ ಶಾಲಾ-ಕಾಲೇಜುಗಳ ಮುಖ್ಯಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳೋದಾಗಿ ಎಚ್ಚರಿಕೆ ನೀಡಲಾಗಿತ್ತು.

  • ರೆಸಿಡೆನ್ಷಿಯಲ್‌ ಶಾಲೆಗಳಿಗೆ ನಾಳೆ ಪ್ರತ್ಯೇಕ ಮಾರ್ಗಸೂಚಿ: ಸಚಿವ ಬಿ.ಸಿ.ನಾಗೇಶ್‌

    ರೆಸಿಡೆನ್ಷಿಯಲ್‌ ಶಾಲೆಗಳಿಗೆ ನಾಳೆ ಪ್ರತ್ಯೇಕ ಮಾರ್ಗಸೂಚಿ: ಸಚಿವ ಬಿ.ಸಿ.ನಾಗೇಶ್‌

    ಬೆಂಗಳೂರು: ರಾಜ್ಯದ ಕೆಲವು ರೆಸಿಡೆನ್ಷಿಯಲ್‌ (ವಸತಿ) ಶಾಲೆಗಳ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯಲ್ಲಿ ಕೊರೊನಾ ಪಾಸಿಟಿವ್‌ ಬಂದಿದೆ. ಮುಂಜಾಗ್ರತೆ ಕ್ರಮವಾಗಿ ರೆಸಿಡೆನ್ಷಿಯಲ್‌ ಶಾಲೆಗಳಿಗೆ ನಾಳೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದ್ದಾರೆ.

    ʼಪಬ್ಲಿಕ್‌ ಟಿವಿʼ ಜೊತೆ ಈ ಕುರಿತು ಮಾತನಾಡಿದ ಅವರು, ಕೆಲವು ವಸತಿ ಶಾಲೆಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಸಂಬಂಧಪಟ್ಟ ಶಾಲೆಗಳ ಆಡಳಿತ ಮಂಡಳಿಗೆ ಸೋಂಕು ನಿಯಂತ್ರಣಕ್ಕೆ ಸೂಕ್ತ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾಳೆಯ ಸಂಪುಟ ಸಭೆಯಲ್ಲಿ ಬಿಗಿ ನಿಯಮಗಳ ಬಗ್ಗೆ ಚರ್ಚೆ: ಬೊಮ್ಮಾಯಿ

    ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಶಾಲಾ-ಕಾಲೇಜು ಬಂದ್‌ ಮಾಡುವುದಿಲ್ಲ. ಆನ್‌ಲೈನ್‌ ತರಗತಿಗಳಿಂದ ಮಕ್ಕಳ ಶೈಕ್ಷಣಿಕ ಪ್ರಗತಿ ಸುಧಾರಿಸುವುದಿಲ್ಲ. ಆದ್ದರಿಂದ ಶಾಲಾ-ಕಾಲೇಜು ಬಂದ್‌ ಮಾಡುವ ಪ್ರಶ್ನೆಯೇ ಇಲ್ಲ. ಆದರೆ ಶಾಲೆಗಳಲ್ಲಿ ಕೋವಿಡ್‌ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

    ಶಾಲಾ-ಕಾಲೇಜು ಬಂದ್‌ ಮಾಡುವುದು ಬೇಡ ಎಂದು ತಜ್ಞರ ಸಮಿತಿ ಹೇಳಿದೆ. ಕೋವಿಡ್‌ ಪರೀಕ್ಷೆಯನ್ನು ಹೆಚ್ಚಿಸಿದ್ದರೂ, ಪಾಸಿಟಿವ್‌ ಪ್ರಕರಣ ಹೆಚ್ಚಾಗಿಲ್ಲ. ಹೀಗಾಗಿ ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಆದರೆ ನಿಯಮ ಪಾಲನೆಗೆ ಕ್ರಮಕೈಗೊಳ್ಳುವಂತೆ ಶಾಲೆಗಳಿಗೆ ಸೂಚಿಸುವಂತೆ ತಜ್ಞರ ಸಮಿತಿ ಸಲಹೆ ನೀಡಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಜನರು ಉತ್ಸಾಹದಿಂದ ಲಸಿಕೆ ಹಾಕಿಸಿಕೊಳ್ತಿದ್ದಾರೆ: ಕೆ. ಸುಧಾಕರ್

    ಎಷ್ಟೋ ಕಡೆ ನೂರಾರು ಮಕ್ಕಳು ಮಾಸ್ಕ್‌ ಹಾಕಿ ಶಾಲೆಗೆ ಬರುವುದೇ ಇಲ್ಲ. ಇದನ್ನು ನಾನೇ ಗಮನಿಸಿದ್ದೇನೆ. ಪೋಷಕರು ತಮ್ಮ ಮಕ್ಕಳಿಗೆ ತಿಳಿಸಿ ಹೇಳಬೇಕು. ಖಂಡಿತ ಮಕ್ಕಳು ಹೇಳಿದ ಮಾತನ್ನು ಕೇಳುತ್ತಾರೆ. ಡಿ.10ರ ನಂತರ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದಿದ್ದಾರೆ.