Tag: Resignation

  • ಜಗದೀಪ್ ಧನಕರ್ ರಾಜೀನಾಮೆ ಸುತ್ತ ಅನುಮಾನದ ಹುತ್ತ- ದಿಢೀರ್‌ ರಿಸೈನ್‌ ಮಾಡಿದ್ದು ಯಾಕೆ?

    ಜಗದೀಪ್ ಧನಕರ್ ರಾಜೀನಾಮೆ ಸುತ್ತ ಅನುಮಾನದ ಹುತ್ತ- ದಿಢೀರ್‌ ರಿಸೈನ್‌ ಮಾಡಿದ್ದು ಯಾಕೆ?

    ನವದೆಹಲಿ: ಉಪರಾಷ್ಟ್ರಪತಿ ಜಗದೀಪ್ ಧನಕರ್ (Vice President Dhankhar) ಸೋಮವಾರ ರಾತ್ರಿ ದಿಢೀರ್ ರಾಜೀನಾಮೆ ನೀಡಿದ್ದಾರೆ. ಇನ್ನೂ ಎರಡೂವರೆ ವರ್ಷ ಸೇವಾವಧಿ ಇದ್ದರೂ ದಿಢೀರ್ ರಾಜೀನಾಮೆ(Resignation) ನೀಡಿರುವುದು ಇಡೀ ದೇಶವೇ ದಿಗ್ಭ್ರಮೆ ಒಳಗಾಗಿದೆ ಮಾತ್ರವಲ್ಲ ಹಲವು ಅನುಮಾನಗಳಿಗೆ ಕಾರಣವಾಗಿದೆ.

    ರಾಷ್ಟ್ರಪತಿ ದ್ರೌಪದಿ ಮುರ್ಮು ರಾಜೀನಾಮೆಯನ್ನು ಅಂಗೀಕರಿಸಿದ್ದು, ಗೃಹ ಸಚಿವಾಲಯಕ್ಕೆ ರವಾನಿಸಿದ್ದಾರೆ. ರಾಜೀನಾಮೆ ಅಂಗೀಕಾರವಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಧನಕರ್ ಕೊಡುಗೆಯನ್ನು ಕೊಂಡಾಡಿದ್ದಾರೆ. ಧನಕರ್ ಆರೋಗ್ಯ ಚೇತರಿಕೆ ಆಗಲಿ ಅಂತಲೂ ಮೋದಿ ಹಾರೈಸಿದ್ದಾರೆ.

    ಅನಾರೋಗ್ಯದಿಂದಲೇ ರಾಜೀನಾಮೆ ನೀಡಿರುವುದಾಗಿ ಧನಕರ್ ಹೇಳಿದ್ದರೂ ಕಾಂಗ್ರೆಸ್ (Congress) ಹಲವು ಪ್ರಶ್ನೆಗಳನ್ನು ಎತ್ತಿದೆ. ಇನ್ನೂ ಎರಡೂವರೆ ವರ್ಷ ಅಧಿಕಾರ ಇದ್ದರೂ, ರಾಜೀನಾಮೆ ಕೊಟ್ಟಿರೋದ್ಯಾಕೆ ಅಂತ ಪ್ರಶ್ನೆ ಮಾಡಿದೆ. ಎಲ್ಲೋ ಏನೋ ಆಗಿದೆ ಅಂತ ರಾಜ್ಯಸಭೆಯ ಕಾಂಗ್ರೆಸ್ ಮುಖ್ಯ ಸಚೇತಕ ಜೈರಾಮ್ ರಮೇಶ್ ಅನುಮಾನ ವ್ಯಕ್ತಪಡಿಸಿದ್ದಾರೆ.

    ಕಾಂಗ್ರೆಸ್ ಆರೋಪವನ್ನು ನಡ್ಡಾ ನಿರಾಕರಿಸಿದ್ದು, ಪ್ರಮುಖ ಸಂಸದೀಯ ಸಭೆಯಲ್ಲಿ ಭಾಗಿಯಾಗಿದ್ದರಿಂದ ನಿರ್ಣಾಯಕ ವ್ಯವಹಾರ ಸಲಹಾ ಸಮಿತಿ (BAC) ಸಭೆಯಲ್ಲಿ ಭಾಗಿಯಾಗಲು ಆಗಲಿಲ್ಲ. ಉಪ ರಾಷ್ಟ್ರಪತಿಗಳಿಗೆ ಮಾಹಿತಿ ನೀಡಲಾಗಿತ್ತು ಎಂದು ಸ್ಪಷ್ಟಪಡಿಸಿದ್ದಾರೆ. ಧನಕರ್ ರಾಜೀನಾಮೆ ಬಗ್ಗೆ ಚರ್ಚೆಗೆ ವಿಪಕ್ಷಗಳು ಒತ್ತಾಯಿಸಿದ್ದರಿಂದ ರಾಜ್ಯಸಭೆ ಕಲಾಪವನ್ನು ಬುಧವಾರಕ್ಕೆ ಮುಂದೂಡಿಕೆ ಮಾಡಲಾಗಿದೆ.

    ಧನಕರ್ ರಾಜೀನಾಮೆ ಯಾಕೆ?
    ಅನುಮಾನ 1: ನಡ್ಡಾ ವಿರುದ್ಧ ಬೇಸರ
    ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ.ಯಶವಂತ ವರ್ಮಾ ವಾಗ್ದಂಡನೆ ವಿಚಾರದಲ್ಲಿ ವಿಪಕ್ಷಗಳ ನೋಟಿಸ್ ಅಂಗೀಕಾರವಾಗಿತ್ತು. ಸೋಮವಾರ ಈ ವಿಚಾರದ ಬಗ್ಗೆ ಸದನದಲ್ಲಿ ಭಾರೀ ಚರ್ಚೆ ನಡೆದಿತ್ತು. ಚರ್ಚೆಯ ವೇಳೆ ಜೆಪಿ ನಡ್ಡಾ (JP Nadda) ನನ್ನ ಹೇಳಿಕೆಯಷ್ಟೇ ದಾಖಲು ಆಗಲಿದೆ. ಬೇರೆಯವರದ್ದು ದಾಖಲಾಗುವುದಿಲ್ಲ ಎಂದಿದ್ದರು. ಈ ಹೇಳಿಕೆಗೆ ಬೇಸರಗೊಂಡಿರುವ ಸಾಧ್ಯತೆಯಿದೆ.

    ಅನುಮಾನ 2: ನ್ಯಾಯಾಂಗದ ಬಗ್ಗೆ ಹೇಳಿಕೆ
    ನ್ಯಾಯಾಂಗ ಬಗ್ಗೆ ಪದೇ ಪದೇ ಧನಕರ್ ಹೇಳಿಕೆ ನೀಡಿದ್ದರು. ನ್ಯಾಯಾಂಗಕ್ಕಿಂತ ಸಂಸತ್ತೇ ದೊಡ್ಡದು ಎಂದು ಹೇಳಿಕೆ ನೀಡಿದ್ದು ದೊಡ್ಡ ಚರ್ಚೆಗೆ ಗ್ರಾಸವಾಗಿತ್ತು. ಧನಕರ್ ಹೇಳಿಕೆಯೂ ರಾಜೀನಾಮೆಗೆ ಕಾರಣ ಆಗಿರಬಹುದು.  ಇದನ್ನೂ ಓದಿ: ಆಧಾರ್, ಮತದಾರರ ಗುರುತಿನ ಚೀಟಿ, ಪಡಿತರ ಚೀಟಿಗಳು ವಿಶ್ವಾಸಾರ್ಹ ದಾಖಲೆಗಳಲ್ಲ: ಸುಪ್ರೀಂಗೆ ಚುನಾವಣಾ ಆಯೋಗ ಅಫಿಡವಿಟ್‌

     

    ಅನುಮಾನ 3: ಬಿಎಸಿ ಸಭೆಗೆ ಗೈರಾಗಿದ್ದಕ್ಕೆ ಅಸಮಾಧಾನ
    ಧನಕರ್ ಸೋಮವಾರ ಮಧ್ಯಾಹ್ನ 12:30ಕ್ಕೆ ನಿರ್ಣಾಯಕ ವ್ಯವಹಾರ ಸಲಹಾ ಸಮಿತಿ (BAC) ಸಭೆ ಕರೆದಿದ್ದರು. ಸಂಜೆ ಮತ್ತೆ ಸಭೆಗೆ ನಿರ್ಧರಿಸಲಾಗಿತ್ತು. ಸಂಜೆಯ ಸಭೆಗೆ ಕೇಂದ್ರ ಸಚಿವ ನಡ್ಡಾ, ರಿಜಿಜು ಗೈರಾಗಿದ್ದರು. ಈ ಸಭೆಗೆ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಎಲ್. ಮುರುಗನ್ ಪ್ರತಿನಿಧಿಸಿದ್ದರು. ಮೂಲಗಳ ಪ್ರಕಾರ ತನಗೆ ತಿಳಿಸದೇ ಜೆಪಿ ನಡ್ಡಾ ಮತ್ತು ರಿಜಿಜು ಅವರು ಗೈರಾಗಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಬಿಎಸಿ ಸಭೆಯನ್ನು ಮಂಗಳವಾರಕ್ಕೆ ಮುಂದೂಡಿದ್ದರು. ಇದನ್ನೂ ಓದಿ: ಕನ್ವರ್ ಯಾತ್ರೆಯ ಮಾರ್ಗದಲ್ಲಿ ಹೋಟೆಲ್‌ಗಳಿಗೆ ಕ್ಯೂಆರ್ ಕೋಡ್ ಕಡ್ಡಾಯ ಆದೇಶ ಎತ್ತಿ ಹಿಡಿದ ಸುಪ್ರೀಂ

    ಬಿಎಸಿ ಚರ್ಚೆಗಳು ನಡೆಯುತ್ತಿರುವಾಗ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಕೊಠಡಿಯಲ್ಲಿ ಮತ್ತೊಂದು ಉನ್ನತ ಮಟ್ಟದ ಸಭೆ ನಡೆಯುತ್ತಿತ್ತು. ನಡ್ಡಾ, ಶಾ, ರಿಜಿಜು, ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮತ್ತು ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸೇರಿದಂತೆ ಹಿರಿಯ ಸಚಿವರು ಭಾಗವಹಿಸಿದ್ದ ಸಭೆಯಲ್ಲಿ ವಾಗ್ದಂಡನೆ ನೋಟಿಸ್‌ಗೆ ದಾಖಲೆಗೆ ಸಹಿ ಹಾಕಲು ಎನ್‌ಡಿಎ ಸಂಸದರನ್ನು ಪ್ರತ್ಯೇಕವಾಗಿ ಕರೆಯಲಾಗಿತ್ತು. ಸಭೆಯು ಸುಮಾರು ಎರಡೂವರೆ ಗಂಟೆಗಳ ಕಾಲ ನಡೆದಿತ್ತು ಮತ್ತು ಬಿಜೆಪಿ ಮಿತ್ರಪಕ್ಷಗಳು ಸಹ ಸಹಿ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದವು.

    ಈ ಸಭೆಯ ಬಳಿಕ ಗೃಹ ಸಚಿವ ಅಮಿತ್ ಶಾ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಿದ್ದರು. ಇದಾದ ಸುಮಾರು ಎರಡು ಗಂಟೆಗಳ ನಂತರ ಧನಕರ್‌ ರಾಜೀನಾಮೆ ಘೋಷಣೆ ಮಾಡಿದ್ದರು.

  • ರಾಜೀನಾಮೆ ಕೊಡಬೇಕು ಅನ್ನೋ ನಿರ್ಧಾರ ಮಾಡಿದ್ದು ನಿಜ: ಬಸವರಾಜ್ ಹೊರಟ್ಟಿ

    ರಾಜೀನಾಮೆ ಕೊಡಬೇಕು ಅನ್ನೋ ನಿರ್ಧಾರ ಮಾಡಿದ್ದು ನಿಜ: ಬಸವರಾಜ್ ಹೊರಟ್ಟಿ

    – ಕಳೆದ ಮೂರು ವರ್ಷಗಳಿಂದ ಅಸಮಾಧಾನ ಇದೆ ಎಂದ ಸಭಾಪತಿ

    ಹುಬ್ಬಳ್ಳಿ: ರಾಜೀನಾಮೆ ( Resignation) ಕೊಡಬೇಕು ಎಂಬ ನಿರ್ಧಾರ ಮಾಡಿದ್ದು ನಿಜ. ಆದರೆ ಇದೀಗ ಬಹಳ ಜನ ನನಗೆ ಕಾಲ್ ಮಾಡಿ ಬೇಡ ಅನ್ನುತ್ತಿದ್ದಾರೆ ಎಂದು ರಾಜೀನಾಮೆ ವಿಚಾರವಾಗಿ ಸಭಾಪತಿ ಬಸವರಾಜ್ ಹೊರಟ್ಟಿ (Basavaraj Horatti) ಸ್ಪಷ್ಟನೆ ನೀಡಿದ್ದಾರೆ.

    ಸಭಾಪತಿ ಬಸವರಾಜ್ ಹೊರಟ್ಟಿ ರಾಜೀನಾಮೆ ಪತ್ರ ವೈರಲ್ ಆಗುತ್ತಿರುವ ವಿಚಾರದ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಹಿ ಮಾಡಿದ ಪತ್ರ ಇನ್ನೂ ಲಾಕರ್‌ನಲ್ಲಿದೆ. ವೈರಲ್ ಆಗಿರುವುದು ಸಹಿ ಮಾಡದ ಪತ್ರ. ನನ್ನ ಪಿ.ಎ ಆ ಪತ್ರವನ್ನು ವೈರಲ್ ಮಾಡಿದ್ದಾರೆ. ದಿನಾಂಕ 21 ಎಂದು ಹಾಕಿದ್ದೆ. ಈ ಪತ್ರ ಬಹಳ ಜನರ ಹತ್ತಿರ ಹೋಗಿದೆ. ಸಚಿವರು, ಪರಿಷತ್ ಸದಸ್ಯರು ಕಾಲ್ ಮಾಡುತ್ತಿದ್ದಾರೆ. ದುಡುಕಿನ ನಿರ್ಧಾರ ಬೇಡ ಎನ್ನುತ್ತಿದ್ದಾರೆ. ಕೆಲವು ಸಲ ಹಿತೈಷಿಗಳ ಮಾತು ಕೇಳಬೇಕಾಗುತ್ತದೆ ಎಂದರು. ಇದನ್ನೂ ಓದಿ: ಬಿಗ್‌ ಬಾಸ್‌ ಮಾಜಿ ಸ್ವರ್ಧಿಗಳಾದ ರಜತ್, ವಿನಯ್ ಗೌಡ ವಿರುದ್ಧ ಎಫ್‌ಐಆರ್

    ರಾಜೀನಾಮೆ ಕುರಿತು ವಿಚಾರ ಮಾಡುತ್ತೇನೆ. ಮಾನಸಿಕವಾಗಿ ಬೇಸರವಾಗಿದ್ದು ನಿಜ. ಹೀಗಾಗಿ ನಾನು ರಾಜೀನಾಮೆ ಕೊಡುವ ನಿರ್ಧಾರ ಮಾಡಿದ್ದೆ. ಕೆಲವರ ನಡುವಳಿಕೆ ನನ್ನ ಮನಸಿಗೆ ಸಮಾಧಾನವಾಗಿಲ್ಲ. ಕಳೆದ ಮೂರು ವರ್ಷಗಳಿಂದ ಅಸಮಾಧಾನವಾಗಿದೆ. ರಾಜ್ಯದ ಎಲ್ಲಾ ಕಡೆಯಿಂದ ಕರೆ ಬಂದಿದೆ, ಮಾನಸಿಕ ನೆಮ್ಮದಿ ಹಾಳಗಿದೆ. ನಾಳೆ ಒಂದು ದಿನ ಕುಳಿತು ವಿಚಾರ ಮಾಡುತ್ತೇನೆ. ಆತ್ಮೀಯರ ಮಾತು ಕೇಳಿಕೊಂಡು ನಿರ್ಧಾರ ಮಾಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಹಾಲಿನ ದರ ಏರಿಕೆ – ಇಂದು ಸಿಎಂ ಸಭೆಯಲ್ಲಿ ನಿರ್ಧಾರ ಸಾಧ್ಯತೆ!

    ಈ ಮೊದಲು ಮಾತನಾಡಿದ್ದ ಹೊರಟ್ಟಿ, ನಾನು ಸಭಾಪತಿ ಹುದ್ದೆಗೆ ರಾಜೀನಾಮೆ ಕೊಡುತ್ತೇನೆ. ಸಾಕಾಗಿದೆ, ಇನ್ನೂ ಸ್ವಲ್ಪ ಟೆಕ್ನಿಕಲ್ ಸಮಸ್ಯೆ ಇದೆ. ಜನರಿಗೆ ಮೋಸ ಮಾಡೋ ಟ್ರೆಂಡ್ ಬಂದಿದೆ. ಇದೀಗ ವಿಧಾನ ಮಂಡಲಕ್ಕೆ ಬಂದಿದೆ. ರಾಜಕಾರಣ ಬಹಳ ಕಲುಷಿತ ಆಗಿದೆ. ಕಾಲ ಕೆಟ್ಟಿದೆ, ಸದನದ ಗೌರವ ಹೋಗಿ ಬಹಳ ದಿನ ಆಗಿದೆ. ಚುನಾವಣೆಯಲ್ಲಿ ಸೋಲಿಸೋಕೆ ಆಗಿದಿದ್ರೆ ಈ ತರಹ ಟಾರ್ಗೆಟ್ ಮಾಡೋದು ಸರಿಯಲ್ಲ. ಇದೆಲ್ಲ ದುರ್ದೈವ. ಇತ್ತಿಚೆಗೆ ಸದನದಲ್ಲಿ ನಡೆದ ಬೆಳವಣಿಗೆ ನನ್ನ ಮನಸಿಗೆ ಬೇಸರ ತರಿಸಿದೆ. ಈ ಸಭಾಧ್ಯಕ್ಷ ಸ್ಥಾನದಲ್ಲಿ ಮುಂದುವರೆಯುವುದು ಸೂಕ್ತವಲ್ಲ ಎಂಬ ಭಾವನೆ ಬಂದಿದೆ. ಸದನದಲ್ಲಿ ನಡೆದ ಬೆಳವಣಿಗೆ ನಿಯಂತ್ರಿಸುವಲ್ಲಿ ನಾನು ವಿಫಲವಾಗಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ತುಮಕೂರು ಜಿಲ್ಲಾ ಕಾಂಗ್ರೆಸ್‌ನಲ್ಲಿ ಶೀತಲ ಸಮರ; ಡಾ.ರಂಗನಾಥ್-ರಾಜಣ್ಣ ಕುಟುಂಬ ನಡುವೆ ವಾರ್

    ಮೇಲೆಮನೆ ಚಿಂತಕರ ಛವಾಡಿ ಎಂದು ಕರೆಯುತ್ತೇವೆ. ಆದರೆ ಸದನದಲ್ಲಿ ಪ್ಲೇಕಾರ್ಡ್ ಹಿಡಿದು ಬಂದ್ರು, ಘೋಷಣೆ ಕೂಗಿದರು. ಗದ್ದಲದಲ್ಲಿ ಕೆಲ ಬಿಲ್‌ಗಳು ಪಾಸ್ ಆಗಿವೆ. ಏನೂ ಚರ್ಚೆಯೇ ಆಗದೆ ಬಿಲ್ ಪಾಸ್ ಆಗುತ್ತಿವೆ. ಮುಸ್ಲಿಂ ಮೀಸಲಾತಿ ವಿಚಾರದ ಬಗ್ಗೆ ಸಣ್ಣದೊಂದು ಚರ್ಚೆ ಆಗಿದ್ದು ಬಿಟ್ಟರೆ, ಯಾವುದೇ ಬಿಲ್ ಬಗ್ಗೆ ಚರ್ಚೆಯೇ ಆಗಲಿಲ್ಲ. ಇನ್ನೂ ನಾನು ಸದನದಲ್ಲಿ ಇದ್ದು ಏನು ಪ್ರಯೋಜನ? ಹುದ್ದೆಗೆ ಘನತೆ ಗೌರವ ಇಲ್ಲದಿದ್ದ ಮೇಲೆ ಅಲ್ಲಿ ಇರಬಾರದು ಎಂದು ತೀರ್ಮಾನಕ್ಕೆ ಬಂದಿದ್ದೇನೆ ಎಂದು ಅತ್ಯಂತ ಭಾವುಕರಾಗಿ ಮಾತನಾಡಿದ್ದರು. ಇದನ್ನೂ ಓದಿ: ಶಿರಸಿ: ತ್ಯಾಜ್ಯ ವಿಲೇವಾರಿ ಘಟಕಕ್ಕೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ

    ಸಭಾಪತಿ ಹುದ್ದೆಗೆ ಬಸವರಾಜ ಹೊರಟ್ಟಿ ರಾಜೀನಾಮೆ ಹೇಳಿಕೆ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಫೇಕ್ ರಾಜೀನಾಮೆ ಪತ್ರ ವೈರಲ್ ಆಗಿದೆ. ಬಸವರಾಜ ಹೊರಟ್ಟಿ ಲೆಟರ್ ಹೆಡ್‌ನಲ್ಲಿ ರಾಜೀನಾಮೆಯ ನಕಲಿ ಪತ್ರ ವೈರಲ್ ಆಗಿತ್ತು. ಆದರೆ ಇದು ಸುಳ್ಳು ಎಂದು ಹೊರಟ್ಟಿ ಕಚೇರಿಯ ಸಿಬ್ಬಂದಿ ವರ್ಗ ‘ಪಬ್ಲಿಕ್ ಟಿವಿ’ಗೆ ಸ್ಪಷ್ಟನೆ ನೀಡಿದೆ. ಇದನ್ನೂ ಓದಿ: IPL 2025: ಗಾಯಕ್ವಾಡ್‌, ರಚಿನ್‌ ಫಿಫ್ಟಿ ಆಟ – ಮುಂಬೈ ವಿರುದ್ಧ ಚೆನ್ನೈಗೆ 4 ವಿಕೆಟ್‌ಗಳ ಜಯ

  • ಜನಾಂಗೀಯ ಹಿಂಸಾಚಾರ; ಬಿಕ್ಕಟ್ಟಿನ ರಾಜ್ಯದ ಸಿಎಂ ರಾಜೀನಾಮೆ – ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿಕೆಯಾಗುತ್ತಾ?

    ಜನಾಂಗೀಯ ಹಿಂಸಾಚಾರ; ಬಿಕ್ಕಟ್ಟಿನ ರಾಜ್ಯದ ಸಿಎಂ ರಾಜೀನಾಮೆ – ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿಕೆಯಾಗುತ್ತಾ?

    ಇಂಪಾಲ್: ಕಳೆದ 2 ವರ್ಷಗಳಿಂದ ಜನಾಂಗೀಯ ಹಿಂಸಾಚಾರದಿಂದ ಬಿಕ್ಕಟ್ಟು ಎದುರಿಸುತ್ತಿರುವ ಮಣಿಪುರ ರಾಜ್ಯದ ಸಿಎಂ ಬಿರೇನ್‌ ಸಿಂಗ್‌ ದಿಢೀರ್‌ ರಾಜೀನಾಮೆ ನೀಡಿರುವುದು ಮತ್ತಷ್ಟು ಸಂಕಷ್ಟ ತಂದಿದೆ. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿಕೆಯಾಗುತ್ತಾ ಎಂಬ ಪ್ರಶ್ನೆ ಉದ್ಭವಿಸಿದೆ.

    ರಾಜ್ಯದ ವಿಧಾನಸಭಾ ಅಧಿವೇಶನದ ಹೊತ್ತಲ್ಲೇ ಸಿಂಗ್‌ ರಾಜೀನಾಮೆ ನೀಡಿದ್ದಾರೆ. ಗೃಹ ಸಚಿವ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಶನಿವಾರ ಬಿರೇನ್‌ ಸಿಂಗ್‌ ಭೇಟಿಯಾಗಿದ್ದರು. 2 ಗಂಟೆಗಳ ಕಾಲ ನಡೆದ ಸಭೆಯ ನಂತರ ಅವರಿಗೆ ರಾಜೀನಾಮೆ ನೀಡುವಂತೆ ಹೇಳಲಾಯಿತು ಎಂದು ಸರ್ಕಾರದ ಮೂಲಗಳು ತಿಳಿಸಿವೆ.

    ಭಾನುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಇಂಪಾಲ್‌ಗೆ ವಿಮಾನದಲ್ಲಿ ಹಿಂತಿರುಗಿದ ಸಿಂಗ್, ಹೊಸದಾಗಿ ನೇಮಕಗೊಂಡ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

    ಈ ಎಲ್ಲಾ ಬೆಳವಣಿಗೆಗಳ ಹೊತ್ತಲ್ಲಿ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿಕೆ ಸಾಧ್ಯತೆ ಕುರಿತು ಪ್ರಶ್ನೆ ಉದ್ಭವಿಸಿದೆ. ರಾಜ್ಯಪಾಲರು ಈಗ ಕೇಂದ್ರದೊಂದಿಗೆ ಸಮಾಲೋಚಿಸಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕೇ ಅಥವಾ ಬೇರೆ ಹೆಸರನ್ನು ಶಿಫಾರಸು ಮಾಡಬೇಕೇ ಎಂಬುದನ್ನು ಪರಿಶೀಲಿಸಲಿದ್ದಾರೆ.

    ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಸಾಧ್ಯತೆ ಹೆಚ್ಚಿದೆ ಎಂದು ಮೂಲಗಳು ತಿಳಿಸಿವೆ. ರಾಷ್ಟ್ರಪತಿ ಆಳ್ವಿಕೆ ಹೇರಲು, ರಾಜ್ಯಪಾಲರು ಪ್ರಸ್ತುತ ಸರ್ಕಾರವು ಆಡಳಿತ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳುವ ವರದಿಯನ್ನು ರಾಷ್ಟ್ರಪತಿಗಳಿಗೆ ಸಲ್ಲಿಸಬೇಕು. ನಂತರ ಅಧಿಸೂಚನೆ ಹೊರಡಿಸಲಾಗುತ್ತದೆ.

    ಮಣಿಪುರ ವಿಧಾನಸಭೆಯಲ್ಲಿ ಬಿಜೆಪಿ ಇನ್ನೂ ಸಂಖ್ಯಾಬಲವನ್ನು ಹೊಂದಿದೆ. ಆದರೆ, ಸಿಂಗ್ ಅವರ ಪಕ್ಷದ ಹೆಚ್ಚಿನ ಸದಸ್ಯರ ವಿಶ್ವಾಸವನ್ನು ಹೊಂದಿಲ್ಲ.

    ಮಣಿಪುರ ಕಾಂಗ್ರೆಸ್ ಅಧ್ಯಕ್ಷ ಕೀಶಮ್ ಮೇಘಚಂದ್ರ ಶುಕ್ರವಾರ, ರಾಜ್ಯ ವಿಧಾನಸಭೆಯಲ್ಲಿ ಎನ್. ಬಿರೇನ್ ಸಿಂಗ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಾಗಿ ಹೇಳಿದ್ದರು.

    60 ಸದಸ್ಯ ಬಲದ ಮಣಿಪುರ ವಿಧಾನಸಭೆಯಲ್ಲಿ ಕಾಂಗ್ರೆಸ್ ಐದು ಶಾಸಕರನ್ನು ಹೊಂದಿದೆ. ಮತ್ತೊಂದು ವಿರೋಧ ಪಕ್ಷವಾದ ನ್ಯಾಷನಲ್ ಪೀಪಲ್ಸ್ ಪಾರ್ಟಿ ಏಳು ಶಾಸಕರನ್ನು ಹೊಂದಿದೆ. ಬಿಜೆಪಿ 32 ಶಾಸಕರನ್ನು ಹೊಂದಿದ್ದು, ನಾಗಾ ಪೀಪಲ್ಸ್ ಫ್ರಂಟ್‌ನ ಐದು ಶಾಸಕರು ಮತ್ತು ಜನತಾದಳ (ಯುನೈಟೆಡ್) ನ ಆರು ಶಾಸಕರ ಬೆಂಬಲವನ್ನು ಹೊಂದಿದೆ. ಮೂವರು ಸ್ವತಂತ್ರ ಶಾಸಕರು ಮತ್ತು ಕುಕಿ ಪೀಪಲ್ಸ್ ಅಲೈಯನ್ಸ್‌ನ ಇಬ್ಬರು ಶಾಸಕರು ಇದ್ದಾರೆ.

  • ಅಶೋಕ್ ಕೇಳಿದ್ರೆ ಹೆಬ್ಬಾಳ್ಕರ್ ರಾಜೀನಾಮೆ ಕೊಡಿಸೋಣ – ಡಿಕೆಶಿ ವ್ಯಂಗ್ಯ

    ಅಶೋಕ್ ಕೇಳಿದ್ರೆ ಹೆಬ್ಬಾಳ್ಕರ್ ರಾಜೀನಾಮೆ ಕೊಡಿಸೋಣ – ಡಿಕೆಶಿ ವ್ಯಂಗ್ಯ

    ಬೆಂಗಳೂರು: ಸಚಿವರಾದ ತಿಮ್ಮಾಪುರ್, ಲಕ್ಷ್ಮಿ ಹೆಬ್ಬಾಳ್ಕರ್ ರಾಜೀನಾಮೆ ಕೇಳಿದ್ದ ವಿಪಕ್ಷ ನಾಯಕ ಆರ್.ಅಶೋಕ್ (R Ashok) ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಲೇವಡಿ ಮಾಡಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ಬರು ಸಚಿವರ ರಾಜೀನಾಮೆಗೆ ವಿಪಕ್ಷ ನಾಯಕರ ಆರ್.ಅಶೋಕ್ ಒತ್ತಾಯ ವಿಚಾರವಾಗಿ ಪಾಪ ಅಶೋಕ್‌ಗೆ ರಾಜೀನಾಮೆ ಕೊಡಿಸೋಣ. ಅಶೋಕ್ ಕೇಳೋದು ದೊಡ್ಡದಾ? ನಾವು ರಾಜೀನಾಮೆ ಕೊಡಿಸೋದು ದೊಡ್ಡದಾ? ಕೊಡೋಣ ಎಂದು ತಿರುಗೇಟು ಕೊಟ್ಟಿದ್ದಾರೆ.ಇದನ್ನೂ ಓದಿ:ಸಿಎಂ ಏನು ತಪ್ಪು ಮಾಡಿಲ್ಲ, ಕಾನೂನಿಗೆ ಗೌರವ ಕೊಟ್ಟು ವಿಚಾರಣೆಗೆ ಹಾಜರಾಗಿದ್ದಾರೆ: ಡಿಕೆಶಿ

    ಸಚಿವ ತಿಮ್ಮಾಪುರ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯಾರು ಬೇಕಾದರೂ ರಾಜ್ಯಪಾಲರಿಗೆ ಪತ್ರ ಬರೆದು ತನಿಖೆ ಮಾಡಿ ಎಂದು ದೂರು ಕೊಡಬಹುದು. ಹಿಂದೆಯೂ ನೂರಾರು ದೂರುಗಳು ಬಂದಿತ್ತು. ಈಗ ಸ್ವಲ್ಪ ವಿಶೇಷವಾಗಿ ಹೊರಟಿದ್ದಾರೆ. ಇದೆಲ್ಲ ಬರೀ ರಾಜಕೀಯದ ಬಣ್ಣ ಅಷ್ಟೆ ಎಂದು ಕಿಡಿಕಾರಿದರು.

    ಬೆಳಗಾವಿಯಲ್ಲಿ ಎಸ್‌ಡಿಎ ಆತ್ಮಹತ್ಯೆ ಕೇಸ್‌ನಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Heabbalkar) ಪಿಎ ಹೆಸರು ಬರೆದಿಟ್ಟಿರುವ ವಿಚಾರವಾಗಿ ಮಾತನಾಡಿ, ಯಾರೇ ಮಾಡಿದರೂ ಪೊಲೀಸ್ ಇದ್ದಾರೆ, ಎಸ್ಪಿ ಇದ್ದಾರೆ, ಪೊಲೀಸ್ ಇಲಾಖೆ ಇದೆ. ಕಾನೂನು ಏನಿದೆ ಅದರ ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.ಇದನ್ನೂ ಓದಿ: ‘ಜೈ ಹನುಮಾನ್’ ಸಿನಿಮಾದಲ್ಲಿ ರಾಮನಾಗಿ ರಾಣಾ ದಗ್ಗುಬಾಟಿ?

  • ಜೆಡಿಎಸ್ ಚಿನ್ಹೆಯಡಿ ಸ್ಪರ್ಧೆಗೆ ಕಾರ್ಯಕರ್ತರು ಒಪ್ಪುತ್ತಿಲ್ಲ: ರಾಜೀನಾಮೆ ಬಳಿಕ ಸಿಪಿವೈ ಫಸ್ಟ್ ರಿಯಾಕ್ಷನ್

    ಜೆಡಿಎಸ್ ಚಿನ್ಹೆಯಡಿ ಸ್ಪರ್ಧೆಗೆ ಕಾರ್ಯಕರ್ತರು ಒಪ್ಪುತ್ತಿಲ್ಲ: ರಾಜೀನಾಮೆ ಬಳಿಕ ಸಿಪಿವೈ ಫಸ್ಟ್ ರಿಯಾಕ್ಷನ್

    – ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದೇನೆಂದ ಸಿಪಿವೈ

    ಹುಬ್ಬಳ್ಳಿ: ನನಗೆ ಜೆಡಿಎಸ್ (JDS) ಚಿನ್ಹೆಯಿಂದ ಸ್ಪರ್ಧೆ ಮಾಡಲು ಯಾವುದೇ ಸಮಸ್ಯೆ ಇಲ್ಲ. ಆದರೆ ಜೆಡಿಎಸ್ ಕಾರ್ಯಕರ್ತರು ವಿರೋಧ ಮಾಡ್ತಿದ್ದಾರೆ ಎಂದು ಸಿಪಿ ಯೋಗೇಶ್ವರ್ (CP Yogeshwar) ಹೇಳಿದರು.

    ಚನ್ನಪಟ್ಟಣ ಉಪಚುನಾವಣೆಯಲ್ಲಿ (Channapattana ByElection) ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿರುವ ಸಿ.ಪಿ ಯೋಗೇಶ್ವರ್ ಅವರಿಂದು ಬಿಜೆಪಿ (BJP) ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಹುಬ್ಬಳ್ಳಿಗೆ ತೆರಳಿ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.ಇದನ್ನೂ ಓದಿ: ಮದುವೆ ಸಂಭ್ರಮದಲ್ಲಿ ನಾಗಚೈತನ್ಯ, ಶೋಭಿತಾ

    ರಾಜೀನಾಮೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವ-ಇಚ್ಛೆಯಿಂದ ರಾಜೀನಾಮೆ ನೀಡಿದ್ದೇನೆ. ಯಾವುದೇ ವೈಯಕ್ತಿಕ ಭಿನ್ನಾಭಿಪ್ರಾಯ ಇಲ್ಲ. ಜೆಡಿಎಸ್ ಚಿಹ್ನೆಯಿಂದ ಸ್ಪರ್ಧೆ ಮಾಡಲು ಯಾವುದೇ ಸಮಸ್ಯೆ ಇಲ್ಲ ಆದರೆ ಜೆಡಿಎಸ್ ಕಾರ್ಯಕರ್ತರು ವಿರೋಧ ಮಾಡಿದ್ದಾರೆ. ಎನ್‌ಡಿಎ ಅಭ್ಯರ್ಥಿಯಾಗುವ ಆಸೆಯಿದೆ. ಇನ್ನೂ ಅವಕಾಶವಿದೆ. ಹೈಕಮಾಂಡ್ ಒಂದು ಅವಕಾಶ ನೀಡಬೇಕು. ನಮ್ಮ ಪಕ್ಷ ನಾಯಕರು ನನ್ನ ಜೊತೆಗಿದ್ದಾರೆ. ಆದರೆ ಕುಮಾರಸ್ವಾಮಿ ಒಪ್ಪಿಗೆಗೆ ಸೂಚನೆ ನೀಡಿಲ್ಲ. ಹೀಗಾಗಿ ನಾನು ಈ ನಿರ್ಧಾರಕ್ಕೆ ಬಂದಿದ್ದೇನೆ. ಉಪಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತೇನೆ. ಈ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಉತ್ಸುಕರನಾಗಿದ್ದೇನೆ ಎಂದು ಹೇಳಿದರು.

    ಕಾಂಗ್ರೆಸ್ ಸೇರ್ಪಡೆ ವಿಚಾರ:
    ಕಾಂಗ್ರೆಸ್ (Congress) ಸೇರುವ ಬಗ್ಗೆ ಯೋಚನೆ ಮಾಡಿಲ್ಲ. ನಾನು ಇಲ್ಲಿಯ ತನಕವೂ ಯಾರ ಸಂಪರ್ಕ ಮಾಡಿಲ್ಲ. ಆದರೆ ನಾಳೆ ಏನು ಆಗುತ್ತದೆ ಎನುವುದನ್ನು ಹೇಳಲು ಸಾಧ್ಯವಿಲ್ಲ ಎಂದರು.ಇದನ್ನೂ ಓದಿ: ಶೂಟಿಂಗ್ ಮುಗಿಸಿದ `ಮೆಜೆಸ್ಟಿಕ್-2’ ಚಿತ್ರ : 126 ದಿನಗಳ ಚಿತ್ರೀಕರಣ

  • ಕೇಂದ್ರದಿಂದ ದುರುಪಯೋಗ ತಡೆಯಲು ಸಿಬಿಐಗೆ ಕೊಟ್ಟಿದ್ದ ಅನುಮತಿ ವಾಪಸ್ ಪಡೆದಿದ್ದೇವೆ: ಚಲುವರಾಯಸ್ವಾಮಿ

    ಕೇಂದ್ರದಿಂದ ದುರುಪಯೋಗ ತಡೆಯಲು ಸಿಬಿಐಗೆ ಕೊಟ್ಟಿದ್ದ ಅನುಮತಿ ವಾಪಸ್ ಪಡೆದಿದ್ದೇವೆ: ಚಲುವರಾಯಸ್ವಾಮಿ

    ಬೆಂಗಳೂರು: ಕೇಂದ್ರ ಸರ್ಕಾರದಿಂದ (Central Government) ದುರುಪಯೋಗ ಆಗುವುದನ್ನು ತಡೆಯಲು ಸಿಬಿಐಗೆ (CBI) ಕೊಟ್ಟಿದ್ದ ಅನುಮತಿ ವಾಪಸ್ ಪಡೆದಿದ್ದೇವೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ (Cheluvarayaswamy) ತಿಳಿಸಿದ್ದಾರೆ.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರ್ಕಾರ ಎಲ್ಲರ ಮೇಲೆ ಮುಗಿಬೀಳ್ತಿದೆ. ಕೇಂದ್ರ ಸರ್ಕಾರ ತನ್ನ ಕೆಲಸ ಮಾಡಬೇಕು. ಇದು ಒಕ್ಕೂಟ ವ್ಯವಸ್ಥೆ. ಸಿಬಿಐ ತರಹದ ಸಂಸ್ಥೆಗಳ ದುರುಪಯೋಗ ಆಗ್ತಿದೆ. ಹೀಗಾಗಬಾರದು ಎನ್ನುವ ಕಾರಣಕ್ಕೆ ಸಿಬಿಐಗೆ ಕೊಟ್ಟಿದ್ದ ಅನುಮತಿ ವಾಪಸ್ ಪಡೆದಿದ್ದೇವೆ ಎಂದು ಹೇಳಿದ್ದಾರೆ.ಇದನ್ನೂ ಓದಿ: ದುರ್ಗಾ ಪೂಜೆಯಂದು ರಜೆ ನೀಡಬಾರದು, ಮೂರ್ತಿಯನ್ನು ನೀರಿನಲ್ಲಿ ವಿಸರ್ಜಿಸಬಾರದು: ಬಾಂಗ್ಲಾ ಹಿಂದೂಗಳಿಗೆ ಎಚ್ಚರಿಕೆ

    ಕೋಳಿವಾಡ (K.B Koliwada) ಹೇಳಿಕೆ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ (Congress) ಇದ್ದಾಗ ತನಿಖಾ ಸಂಸ್ಥೆಗಳ ದುರುಪಯೋಗ ಆಗಿರಲಿಲ್ಲ, ಈಗ ಆಗ್ತಿದೆ. ಕೋಳಿವಾಡ ಅವರು ಯಾಕೆ ಆ ರೀತಿ ಹೇಳಿದರು ಎನ್ನುವುದನ್ನು ಅವರೇ ಹೇಳಬೇಕು. ಎಲ್ಲರನ್ನೂ ಕಂಟ್ರೋಲ್ ಮಾಡಕ್ಕಾಗಲ್ಲ. ಸಿದ್ದರಾಮಯ್ಯ ಜತೆ ನಮ್ಮ ಸಚಿವರು, ಶಾಸಕರು, ಹೈಕಮಾಂಡ್‌ವರು ಇದ್ದಾರೆ. ಸಿದ್ದರಾಮಯ್ಯ (CM Siddaramaiah) ರಾಜೀನಾಮೆ ಪ್ರಶ್ನೆಯೇ ಇಲ್ಲ. ಸಿಎಂ ರಾಜೀನಾಮೆ ಕೊಡಲ್ಲ, ಅವರೇ ಮುಂದುವರೀತಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

    ಇದೇ ವೇಳೆ ಪರಿಷತ್ ಸದಸ್ಯ ಸಲೀಂ ಅಹಮದ್ (Saleem Ahmed) ಮಾತನಾಡಿ, ರಾಜ್ಯಪಾಲರಿಗೆ ಸಂಪುಟದಲ್ಲೇ ಚರ್ಚಿಸಿ ಉತ್ತರ ಕೊಡಬೇಕು. ಈ ತೀರ್ಮಾನ ಒಳ್ಳೆಯದು, ಸ್ವಾಗತಾರ್ಹ. ಯಾವುದೇ ಕಾರಣಕ್ಕೂ ಸಿಎಂ ರಾಜೀನಾಮೆ ಕೊಡಲ್ಲ, ಕೊಡಲೂಬಾರದು. ಕೋಳಿವಾಡ ಹೇಳಿಕೆ ಅವರ ವೈಯಕ್ತಿಕವಾದ ಹೇಳಿಕೆಯಾಗಿದೆ. ಆದರೆ ನಮ್ಮ ನಾಯಕರು, ಕಾರ್ಯಕರ್ತರು ಸಿಎಂ ಪರ ಒಟ್ಟಾಗಿ ಇದ್ದೀವಿ ಎಂದರು.ಇದನ್ನೂ ಓದಿ: ಸ್ವಚ್ಛ ಭಾರತ್ ಮಿಷನ್ ಯೋಜನೆ – ಕೋಲಾರ ನಗರಸಭೆಯಲ್ಲಿ ಭಾರಿ ಗೋಲ್‌ಮಾಲ್!

  • ಮುಡಾ ಹಗರಣಕ್ಕೂ ನನಗೂ ಸಂಬಂಧವೇ ಇಲ್ಲ, ಏಕೆ ರಾಜೀನಾಮೆ ಕೊಡ್ಬೇಕು? – ಹೆಚ್‌ಡಿಕೆ ಗರಂ

    ಮುಡಾ ಹಗರಣಕ್ಕೂ ನನಗೂ ಸಂಬಂಧವೇ ಇಲ್ಲ, ಏಕೆ ರಾಜೀನಾಮೆ ಕೊಡ್ಬೇಕು? – ಹೆಚ್‌ಡಿಕೆ ಗರಂ

    -ಯಾವನೋ ಬರೆದುಕೊಟ್ಟಿದ್ದನ್ನ ತುತ್ತೂರಿ ಊದಿದ್ದಾರೆ ಎಂದ ಕೇಂದ್ರ ಸಚಿವ

    ಮಂಡ್ಯ: ತನಿಖೆ ಮಾಡಲಿ ಮುಡಾ ಹಗರಣಕ್ಕೂ (MUDA Scam) ನನಗೂ ಸಂಬಂಧವೇ ಇಲ್ಲ. ನಾನು ಯಾಕೆ ರಾಜೀನಾಮೆ (Resignation) ಕೊಡಬೇಕು ಎಂದು ಕಾಂಗ್ರೆಸ್ (Congress) ನಾಯಕರ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumarswamy) ಕಿಡಿಕಾರಿದ್ದಾರೆ.ಇದನ್ನೂ ಓದಿ: ಹಾಲಿವುಡ್‌ನತ್ತ ರಕ್ಕಮ್ಮ- ಆ್ಯಕ್ಷನ್ ಅವತಾರ ತಾಳಿದ ಜಾಕ್ವೆಲಿನ್

    ಜಿಲ್ಲೆಯ ಉರಮಾರಕಸಲಗೆರೆ ಗ್ರಾಮದಲ್ಲಿ ಮಾತನಾಡಿದ ಅವರು, ಡಿನೋಟಿಫಿಕೇಷನ್ ವಿಚಾರವಾಗಿ ಕಾಂಗ್ರೆಸ್ ಸಚಿವರು ರಾಜೀನಾಮೆಗೆ ಒತ್ತಾಯ ಮಾಡುತ್ತಿದ್ದಾರೆ. ನನಗೂ ಮುಡಾ ಹಗರಣಕ್ಕೂ ಏನು ಸಂಬಂಧ? ಕನ್ನಡ ಓದೋಕೊ ಬರುತ್ತೋ, ಇಂಗ್ಲಿಷ್ ಓದೋಕೊ ಬರುತ್ತೋ ಕೇಳಿ. ಮೊದಲು ಆ ಪೇಪರ್‌ನಲ್ಲಿ ಏನಿದೆ ಎಂದು ಸರಿಯಾಗಿ ಕುಳಿತು ನೋಡಲು ಹೇಳಿ ಎಂದರು.

    ಆ ಪೇಪರ್‌ನಲ್ಲಿ ಏನಿದೆ? ಅವರೇನೂ ಹುಚ್ಚರಾ ರಾಜೀನಾಮೆ ಕೇಳವುದಕ್ಕೆ. ಅವರು ಕೇಳಿದರೂ ಅಂತಾ ನಾನು ರಾಜೀನಾಮೆ ಕೊಡಬೇಕು? ಯಾಕೆ ರಾಜೀನಾಮೆ ಕೊಡಬೇಕು? ಏನು ತಪ್ಪು ಮಾಡಿದ್ದೇನೆ? ದಾಖಲೆಗಳನ್ನು ಅವರು ಸರಿಯಾಗಿ ನೋಡಿದ್ದರಾ? ಯಾವನೋ ಬರೆದುಕೊಟ್ಟಿದ್ದಾನೆ ಅದನ್ನು ಬಂದು ತುತ್ತೂರಿ ಊದಿದ್ದಾರೆ. ತನಿಖೆ ಮಾಡಲಿ ಮುಡಾ ಹಗರಣಕ್ಕೂ ನನಗೂ ಸಂಬಂಧವೇ ಇಲ್ಲ. 2015ರಿಂದ ಬಿಟ್ಟುಕೊಂಡು ಇದ್ದಾರೆ. ನಾಲ್ಕು ವರ್ಷ ಏನು ಮಾಡುತ್ತಿದ್ದರು? ಅದರಲ್ಲಿ ನನ್ನ ಪಾತ್ರ ಏನಿದೆ ಹೇಳಲಿ. ಉತ್ತರ ಕೊಡುವ ವಿಚಾರವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.ಇದನ್ನೂ ಓದಿ: ಚಲಿಸುತ್ತಿದ್ದಾಗಲೇ BMTC ಬಸ್‌ ಚಾಲಕನಿಗೆ ಹೃದಯಾಘಾತ – ಟ್ರಾಫಿಕ್ ಪೊಲೀಸರ ಸಮಯ ಪ್ರಜ್ಞೆಯಿಂದ ಬಚಾವ್‌!

  • ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ

    ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ

    ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕರೂ ಆಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Aravind Kejriwal) ಅವರು ಇಂದು (ಮಂಗಳವಾರ) ಸಿಎಂ ಸ್ಥಾನಕ್ಕೆ ರಾಜೀನಾಮೆ (Resignation) ಸಲ್ಲಿಸಿದ್ದಾರೆ.

    ರಾಜಭವನಕ್ಕೆ ತೆರಳಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೆನಾ (VK Saxena) ಅವರಿಗೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಕೇಜ್ರಿವಾಲ್‌ಗೆ ದೆಹಲಿ ಸಚಿವರು ಸಾಥ್ ನೀಡಿದ್ದಾರೆ. ಇದೇ ವೇಳೆ ಹೊಸ ಸರ್ಕಾರ ರಚನೆಗೆ ಅತಿಶಿ (Atishi) ಹಕ್ಕು ಮಂಡಿಸಿದರು. ಸೆ. 15 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮುಂದಿನ 48 ಗಂಟೆಗಳ ಒಳಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಇದನ್ನೂ ಓದಿ: ಮೆಟ್ರೋ ಟ್ರ‍್ಯಾಕ್‌ಗೆ ಹಾರಿ ಆತ್ಮಹತ್ಯೆಗೆ ಯತ್ನ – ಪ್ರಾಣಾಪಾಯದಿಂದ ಯುವಕ ಪಾರು

    ದೆಹಲಿ ನೂತನ ಸಿಎಂ ಸ್ಥಾನಕ್ಕೆ ಸಚಿವೆ ಅತಿಶಿ ಅವರ ಹೆಸರನ್ನು ಅರವಿಂದ್ ಕೇಜ್ರಿವಾಲ್ ಪ್ರಸ್ತಾಪಿಸಿದ್ದಾರೆ. ಅತಿಶಿ ಅವರು ದೆಹಲಿ ಎಎಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂದು ಎಎಪಿ ಮೂಲಗಳು ತಿಳಿಸಿವೆ. ಅರವಿಂದ್ ಕೇಜ್ರಿವಾಲ್ ಅವರ ಉನ್ನತ ಸ್ಥಾನಕ್ಕೆ ರಾಜೀನಾಮೆ ಬಳಿಕ ದೆಹಲಿ ಸಚಿವೆ ಅತಿಶಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇಂದು ನಡೆದ ಆಮ್ ಆದ್ಮಿ ಪಕ್ಷದ (AAP) ನಾಯಕರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅತಿಶಿ ದೆಹಲಿಯ ಮೂರನೇ ಮಹಿಳಾ ಮುಖ್ಯಮಂತ್ರಿಯಾಗಲಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಅಪರಾಧಿಗಳ ಮೇಲುಗೈ, ರಾಜ್ಯ ಪೊಲೀಸರಿಗೆ ಸತ್ವ ಇಲ್ಲ: ಶೋಭಾ ಕರಂದ್ಲಾಜೆ

    ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ಬರೋಬ್ಬರಿ 6 ತಿಂಗಳು ಜೈಲಿನಲ್ಲಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇದೇ ಸೆಪ್ಟೆಂಬರ್ 13ರಂದು ಷರತ್ತು ಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಜೈಲಿಂದ ರಿಲೀಸ್ ಆದ ನಂತರ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾಡಿದ ಮೊದಲ ಭಾಷಣದಲ್ಲಿ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಇದನ್ನೂ ಓದಿ: ಯಾದಗಿರಿ| ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನಿಧನ

    ನಾನು ಜನತೆ ತೀರ್ಪು ನೀಡುವವರೆಗೂ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ. ಪ್ರತಿ ಮನೆ, ಬೀದಿಗೆ ಹೋಗುತ್ತೇನೆ. ಅಲ್ಲಿಯವರೆಗೆ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂರುವುದಿಲ್ಲ. ನಾನು ಜನರಿಂದ ತೀರ್ಪು ಪಡೆಯುತ್ತೇನೆ ಎಂದು ತಮ್ಮ ಭಾಷಣದಲ್ಲಿ ಕೇಜ್ರಿವಾಲ್ ಗುಡುಗಿದ್ದರು. ಇದನ್ನೂ ಓದಿ: ದೇಶದಲ್ಲಿ ಅ.1 ರವರೆಗೆ ‘ಬುಲ್ಡೋಜರ್‌ ಕಾರ್ಯಾಚರಣೆ’ಗೆ ಸುಪ್ರೀಂ ತಡೆ

  • ವಾಲ್ಮೀಕಿ ನಿಗಮದ ಹಗರಣ – ಸರ್ಕಾರವನ್ನು ವಜಾ ಮಾಡುವಂತೆ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ

    ವಾಲ್ಮೀಕಿ ನಿಗಮದ ಹಗರಣ – ಸರ್ಕಾರವನ್ನು ವಜಾ ಮಾಡುವಂತೆ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ

    ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದಲ್ಲಿ (Valmiki Development Corporation Scam) ಸಿಎಂ ಸಿದ್ದರಾಮಯ್ಯ (Siddaramaiah), ಸಚಿವ ನಾಗೇಂದ್ರ (B.Nagendra) ರಾಜೀನಾಮೆ ಕೊಡಬೇಕು. ಅಷ್ಟೇ ಅಲ್ಲದೇ ಭ್ರಷ್ಟ ಸರ್ಕಾರವನ್ನು ವಜಾ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಅಶೋಕ್ ನೇತೃತ್ವದಲ್ಲಿ ಶಾಸಕರನ್ನು ಒಳಗೊಂಡ ನಿಯೋಗ ರಾಜ್ಯಪಾಲರಿಗೆ ಮನವಿ ಮಾಡಿದೆ.

    ರಾಜ್ಯಪಾಲರಿಗೆ ದೂರು ನೀಡಿದ ಬಳಿಕ ಮಾತನಾಡಿದ ವಿಜಯೇಂದ್ರ, ರಾಜ್ಯದಲ್ಲಿ ದೊಡ್ಡ ಹಗರಣ ನಡೆದಿದೆ. ವಾಲ್ಮೀಕಿ ನಿಗಮದ ಹಣ ಹೈದರಾಬಾದ್‍ನಲ್ಲಿ ಫೇಕ್ ಅಕೌಂಟ್ ತೆಗೆದು ವರ್ಗಾವಣೆ ಮಾಡಲಾಗಿದೆ. ಇದೊಂದು ದೊಡ್ಡ ಅಕ್ರಮ. ಹಣಕಾಸು ಇಲಾಖೆ ಅನುಮತಿ ಇಲ್ಲದೆ ಇದು ಆಗಲು ಸಾಧ್ಯವಿಲ್ಲ. ಸಿಎಂ ಗಮನಕ್ಕೆ ಬಾರದೇ ಈ ಹಗರಣ ನಡೆದಿಲ್ಲ. ಹೀಗಾಗಿ ಸಿಎಂ ರಾಜೀನಾಮೆ ಪಡೆಯಬೇಕು ಎಂದು ರಾಜ್ಯಪಾಲರಿಗೆ ತಿಳಿಸಿದ್ದೇವೆ ಎಂದರು. ಇದನ್ನೂ ಓದಿ: ನಾನು ನಿರಪರಾಧಿ, ಸ್ವಯಂಪ್ರೇರಿತನಾಗಿ ರಾಜೀನಾಮೆ ಸಲ್ಲಿಸುತ್ತಿದ್ದೇನೆ: ನಾಗೇಂದ್ರ

    ಸಚಿವರ ರಾಜೀನಾಮೆ ಮಾತ್ರ ಅಲ್ಲ ಸಿಎಂ ರಾಜೀನಾಮೆ ಕೊಡಬೇಕು. ರಾಜ್ಯದಲ್ಲಿ ಇಂತಹ ದೊಡ್ಡ ಹಗರಣ ನಡೆದಿಲ್ಲ. ಸಿಎಂ, ಸಚಿವರು ಇಬ್ಬರ ರಾಜೀನಾಮೆ ಪಡೆಯಬೇಕು ಎಂದು ರಾಜ್ಯಪಾಲನ್ನು ಒತ್ತಾಯಿಸಿದ್ದೇವೆ ಎಂದರು.

    ಬಿಜೆಪಿಯವರು ಪ್ರತಿಭಟನೆ ಮಾಡಿಕೊಳ್ಳಲಿ ಎಂಬ ಸಿಎಂ ಹೇಳಿಕೆಗೆ ತಿರುಗೇಟು ಕೊಟ್ಟ ಅವರು, ಸಿಎಂ ಹೀಗೆ ಉಡಾಫೆ ಮಾತಾಡಿ ಹೀಗೆ ಆಗಿದೆ. ಗ್ಯಾರಂಟಿ 20 ಸ್ಥಾನ ಗೆಲ್ತೀವಿ ಎಂದು ಹೇಳಿ ಜನ ಈ ಮಟ್ಟಕ್ಕೆ ನಿಮ್ಮನ್ನ ತಂದಿದ್ದಾರೆ. ಎಸ್‍ಟಿ ಸಮುದಾಯಕ್ಕೆ ಮೀಸಲಿದ್ದ ಹಣ ಅಕ್ರಮವಾಗಿದೆ. ಈ ಬಗ್ಗೆ ಸಿಎಂ ಹಾರಿಕೆ ಉತ್ತರ ಕೊಡೋದು ಸರಿಯಲ್ಲ. ಅವರು ಆನೆ ನಡೆದಿದ್ದೇ ದಾರಿ ಅಂದುಕೊಳ್ಳಬಾರದು. ಇದನ್ನ ನಾವು ಇಲ್ಲಿಗೆ ಬಿಡೋದಿಲ್ಲ. ರಾಜ್ಯಾದ್ಯಂತ ದೊಡ್ಡ ಹೋರಾಟ ಮಾಡುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ.

    ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, ವಾಲ್ಮೀಕಿ ನಿಗಮದ ಬ್ರಹ್ಮಾಂಡದ ಭ್ರಷ್ಟಾಚಾರವಾಗಿದೆ. ಎಸ್‍ಟಿ ಸಮುದಾಯಕ್ಕೆ ಮೀಸಲಿದ್ದ ಹಣ ಇವತ್ತು ಸಿದ್ದರಾಮಯ್ಯ ಜೇಬಿಗೆ ಹೋಗಿದೆ. ಇಂತಹ ನೀಚ ಸರ್ಕಾರ ಯಾವತ್ತು ಬಂದಿಲ್ಲ. ಎಸ್‍ಟಿ ಜನಾಂಗಕ್ಕೆ ಸೇರಬೇಕಾದ ಹಣ ನುಂಗುತ್ತಾರೆ ಎಂದರೆ ಇಂತಹ ಸರ್ಕಾರ ಕರ್ನಾಟಕದ ಪಾಲಿಗೆ ಸತ್ತು ಹೋಗಿದೆ. ಚುನಾವಣೆಗಾಗಿ ಈ ಹಣ ಹೈದರಾಬಾದ್‍ಗೆ ಹೋಗಿದೆ. ಇದೆಲ್ಲ ಪ್ರೀ ಪ್ಲ್ಯಾನ್. ರಾಹುಲ್ ಗಾಂಧಿಯಿಂದಲೇ ಈ ಹಗರಣ ಆಗಿದೆ ಎಂದು ಅವರು ಆರೋಪಿಸಿದ್ದಾರೆ.

    ಸಿದ್ದರಾಮಯ್ಯ ಮೂಗಿನ ಅಡಿ ಈ ಅಕ್ರಮ ನಡೆದಿದೆ. ನಿಮ್ಮ ಅನುಮತಿ ಇಲ್ಲದೆ ಹಣ ಹೇಗೆ ಹೋಯ್ತು? ಈ ಅಕ್ರಮದಿಂದ ನಾಗೇಂದ್ರಗೆ ಮಾತ್ರ ಕಮಿಷನ್ ಹೋಗಿಲ್ಲ. ನಾಗೇಂದ್ರ 20% ಸಿದ್ದರಾಮಯ್ಯಗೆ 80% ಶೇರ್ ಹೋಗಿದೆ. ಕಾಂಗ್ರೆಸ್ ಒಂದು ವರ್ಷದ ಸಾಧನೆ ಗ್ಯಾರಂಟಿ ಲೂಟಿ, ದೇಶವೇ ಮೆಚ್ಚುವ ಲೂಟಿ ಗ್ಯಾರಂಟಿ ಇವರದ್ದು. ಪಿಕ್ ಪಾಕೆಟ್ ಮಾಡೋದು ಇವರ ಸಾಧನೆ. ಕಾಂಗ್ರೆಸ್ ಎಂದರೆ ಲೂಟಿಕೋರರ ಪಾರ್ಟಿ ಎಂದು ವಾಗ್ದಾಳಿ ನಡೆಸಿದ್ದಾರೆ.

    ಈ ಪ್ರಕರಣ ಮುಚ್ಚಿ ಹಾಕಲು ಸಿಐಡಿಗೆ ಕೊಟ್ಟಿದ್ರು. ಸಿಬಿಐಗೆ ಬ್ಯಾಂಕ್‍ಗೆ ಪತ್ರ ಬರೆದ ಕೂಡಲೇ ಎಸ್‍ಐಟಿ ರಚನೆ ಮಾಡಿದ್ದಾರೆ. ಎಸ್‍ಐಟಿಗೆ ಕೊಟ್ಟರೆ ಸಿಬಿಐಗೆ ಕೇಸ್ ತೆಗೆದುಕೊಳ್ಳಲು ಆಗೊಲ್ಲ ಎಂಬ ತಂತ್ರ ಮಾಡಿದ್ರು. ಈಗಾಗಲೇ ಸಿಬಿಐ ಎಫ್‍ಐಆರ್ ಹಾಕಿದೆ. ಕರ್ನಾಟಕ ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಸಿಬಿಐಗೆ ಒಪ್ಪಿಸಿ. ಇಲ್ಲದೆ ಹೋದರೆ ಇದರಲ್ಲಿ ನಿಮ್ಮ ಪಾತ್ರ ಇದೆ ಎಂದಾಗುತ್ತದೆ. ಇದು ಟಕಾ ಟಕ್ ಎಟಿಎಂ ಸರ್ಕಾರ ಇದು ಅಂತ ವಾಗ್ದಾಳಿ ನಡೆಸಿದ್ದಾರೆ.

    ಇದೊಂದೆ ನಿಗಮ ಅಲ್ಲ, ಅನೇಕ ನಿಗಮಗಳಲ್ಲಿ ಹಣ ವರ್ಗಾವಣೆ ಆಗಿದೆ. ಎಲ್ಲೆಲ್ಲಿಗೆ ಹಣ ಸಾಗಿಸಿದ್ದಾರೆ ತನಿಖೆ ಆಗಬೇಕು. ಹೈದರಾಬಾದ್ ಕಂಪನಿಗಳಿಗೆ ಹೇಗೆ ಹಣ ಹೋಯ್ತು? ಇದಕ್ಕೆ ಸಿಎಂ ಉತ್ತರ ಕೊಡಬೇಕು. ಹೈದರಾಬಾದ್ ನಕಲಿ ಅಕೌಂಟ್‍ಗೆ ಹೋಗಲು ಸಚಿವರ ಪಿಎ ಕಾರಣ ಎಂದು ಹೇಳ್ತಿದ್ದಾರೆ. ಮಾನ ಮರ್ಯಾದೆ ಇದ್ದರೆ ಸಿಎಂ ರಾಜೀನಾಮೆ ಕೊಡಬೇಕು. ಈ ವಿಚಾರವಾಗಿ ಮುಂದೆ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಹಾಗೂ ಸಿಎಂ ಮನೆಗೆ ಮುತ್ತಿಗೆ ಹಾಕುತ್ತೇವೆ. ಇದಕ್ಕೂ ಬಗ್ಗದೇ ಹೋದರೆ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ; ಮೈತ್ರಿ ಅಭ್ಯರ್ಥಿಗೆ ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಭರ್ಜರಿ ಗೆಲುವು

  • ಸಿದ್ದರಾಮಯ್ಯ ದರೋಡೆಕೋರರ ನಾಯಕ: ಛಲವಾದಿ ನಾರಾಯಣಸ್ವಾಮಿ

    ಸಿದ್ದರಾಮಯ್ಯ ದರೋಡೆಕೋರರ ನಾಯಕ: ಛಲವಾದಿ ನಾರಾಯಣಸ್ವಾಮಿ

    ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ದರೋಡೆಕೋರರ ನಾಯಕ ಎಂದು ಬಿಜೆಪಿ (BJP) ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ತೀವ್ರ ವಾಗ್ದಾಳಿ ನಡೆಸಿದ್ದಾರೆ.

    ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ವಾಲ್ಮೀಕಿ ನಿಗಮದ ಭ್ರಷ್ಟಾಚಾರದಲ್ಲಿ (Valmiki Development Corporation Scam) ಮಂತ್ರಿಗಳ ಪಾತ್ರ ಇದೆ ಎಂದು ಚಂದ್ರಶೇಖರನ್ ಡೆತ್ ನೋಟ್ ನಲ್ಲಿ ಬರೆದಿತ್ತು. ಆದರೂ ಇಷ್ಟು ತಡವಾಗಿ ರಾಜೀನಾಮೆ ತೀರ್ಮಾನ ಮಾಡಿದ್ದಾರೆ. ಕೈ ಹುಣ್ಣಿಗೆ ಕನ್ನಡಿ ಬೇಕಾ? ಚಂದ್ರಶೇಖರನ್ ಆತ್ಮಹತ್ಯೆ ಆದ ಕೂಡಲೇ ರಾಜೀನಾಮೆ ಪಡೆಯಬೇಕಿತ್ತು. ಕೇಸ್ ಮುಚ್ಚಿ ಹಾಕಲು ರಾಜೀನಾಮೆ ಪಡೆಯಲಿಲ್ಲ ಎಂದು ಅವರು ಕಿಡಿಕಾರಿದ್ದಾರೆ. ಇದನ್ನೂ ಓದಿ: ಸರ್ಕಾರಕ್ಕೆ ಮುಜುಗರ ಆಗಬಾರದೆಂದು ನಾಗೇಂದ್ರ ರಾಜೀನಾಮೆ ಕೊಟ್ಟಿದ್ದಾರೆ: ಡಿಕೆಶಿ

    ಬಿಜೆಪಿ ಈ ಹಗರಣದ ವಿರುದ್ಧ ಹೋರಾಟ ಮಾಡಿತ್ತು. ರಾಜ್ಯಪಾಲರ ಭೇಟಿ ಮಾಡಿ ಹಗರಣದ ವಿರುದ್ಧ ದೂರು ನೀಡಿದ್ದೇವೆ. ಈಗ ನಾಗೇಂದ್ರ ಅವರ ರಾಜೀನಾಮೆ ಪಡೆದಿದ್ದಾರೆ. ಸಚಿವರ ರಾಜೀನಾಮೆ ಮಾತ್ರ ಸಾಲದು, ಸಿಎಂ ಸಹ ರಾಜೀನಾಮೆ ಕೊಡಬೇಕು. ಇದೊಂದು ಹಗಲು ದರೋಡೆ. ಸಿಎಂ ಅನುಮತಿ ಇಲ್ಲದೆ ಇಷ್ಟು ಹಣ ಹೊರಗೆ ಹೋಗಿಲ್ಲ. ಇದು ಒಂದು ಇಲಾಖೆಯ ಭ್ರಷ್ಟಾಚಾರ ಅಲ್ಲ. ಬೇರೆ ಬೇರೆ ಇಲಾಖೆಯ ನಿಗಮದಲ್ಲೂ ಭ್ರಷ್ಟಾಚಾರ ಆಗಿದೆ. ಇದನ್ನ ನಮ್ಮ ನಾಯಕರು ಪತ್ತೆ ಹಚ್ಚುತ್ತಿದ್ದಾರೆ ಎಂದರು.

    ಎಸ್‍ಟಿ ನಿಗಮದ ಹಣ ಅ ಸಮುದಾಯಕ್ಕಾಗಿ ಬಳಸುವ ಹಣ. ಆ ಸಮುದಾಯದ ಮಂತ್ರಿಯನ್ನು ಬಳಕೆ ಮಾಡಿಕೊಂಡು ಭ್ರಷ್ಟಾಚಾರ ಮಾಡಿದ್ದೀರಿ. ದಲಿತರಿಗೆ ಅನ್ಯಾಯ ಮಾಡೋಕೆ ಮಹಾದೇವಪ್ಪ ಅವರನ್ನು ಮಂತ್ರಿ ಮಾಡಿ ಭ್ರಷ್ಟಾಚಾರ ಮಾಡಿಸಿದ್ದಾರೆ. ಸಿದ್ದರಾಮಯ್ಯ ದರೋಡೆಕೋರರ ನಾಯಕ. ಅವರು ನೇರವಾಗಿ ಭ್ರಷ್ಟಾಚಾರ ಮಾಡುವುದಿಲ್ಲ. ಬೇರೆಯವರಿಂದ ಭ್ರಷ್ಟಾಚಾರ ಮಾಡಿಸುತ್ತಾರೆ. ಭೂಗತ ಡಾನ್‍ಗಳು ಮಾಡುವ ತರಹ ಚೇರ್‍ನಲ್ಲಿ ಕುಳಿತು ಭ್ರಷ್ಟಾಚಾರ ಮಾಡಿಸುತ್ತಾರೆ ಎಂದು ಅವರು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ನಿಗಮದಲ್ಲಿ ಕೋಟ್ಯಂತರ ರೂ. ಹಗರಣಕ್ಕೆ ತಲೆದಂಡ – ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ