Tag: resort politics

  • ಬೆಳಗಾವಿ | ಸಹಕಾರ ಕ್ಷೇತ್ರಕ್ಕೂ ಕಾಲಿಟ್ಟ ರೆಸಾರ್ಟ್ ರಾಜಕೀಯ

    ಬೆಳಗಾವಿ | ಸಹಕಾರ ಕ್ಷೇತ್ರಕ್ಕೂ ಕಾಲಿಟ್ಟ ರೆಸಾರ್ಟ್ ರಾಜಕೀಯ

    ಬೆಳಗಾವಿ: ಸಹಕಾರ ಕ್ಷೇತ್ರಕ್ಕೂ ಸಹ ರೆಸಾರ್ಟ್ ರಾಜಕೀಯ ಕಾಲಿಟ್ಟಿದೆ. ಇಷ್ಟು ದಿನಗಳ ಕಾಲ ಶಾಸಕರು ರಾಜಕಾರಣದಲ್ಲಿ ರೆಸಾರ್ಟ್ ರಾಜಕೀಯ (Resort Politics) ಮಾಡ್ತಿದ್ರು. ಆದರೆ ಬೆಳಗಾವಿ (Belagavi) ಡಿಸಿಸಿ ಬ್ಯಾಂಕ್ ವಿಚಾರದಲ್ಲಿ ಸದ್ಯ ಮತದಾನದ ಹಕ್ಕು ಪಡೆದ ಪಿಕೆಪಿಎಸ್ ನಿರ್ದೇಶಕರಿಗೆ ಟೂರ್ ಭ್ಯಾಗ್ಯ ಒದಗಿ ಬಂದಿದೆ.

    ಗೋವಾ, ಮಹಾರಾಷ್ಟ್ರ, ಉತ್ತರ ಭಾರತದ ಧಾರ್ಮಿಕ ಕ್ಷೇತ್ರಗಳಿಗೆ ಪಿಕೆಪಿಎಸ್ ಸದಸ್ಯರು ಟೂರ್ ಹೊರಟಿದ್ದಾರೆ. ಡಿಸಿಸಿ ಬ್ಯಾಂಕ್‌ನ 16 ಸ್ಥಾನಗಳ ಪೈಕಿ 9 ನಿರ್ದೇಶಕರು ಈಗಾಗಲೇ ಅವಿರೋಧ ಆಯ್ಕೆಯಾಗಿದ್ದು, ಇನ್ನೂ 7 ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದೆ. ನಿಪ್ಪಾಣಿ, ಹುಕ್ಕೇರಿ, ಅಥಣಿ, ರಾಯಭಾಗ, ರಾಮದುರ್ಗ, ಕಿತ್ತೂರು, ಬೈಲಹೊಂಗಲದಲ್ಲಿ ಚುನಾವಣೆ ನಡೆಯಲಿದೆ. ಇದನ್ನೂ ಓದಿ: ಚಿತ್ರದುರ್ಗದಲ್ಲಿ ಭ್ರಷ್ಟ ಅಧಿಕಾರಿಗೆ ಬೆಳ್ಳಂಬೆಳಗ್ಗೆ ಶಾಕ್; ಕೃಷಿ ಇಲಾಖೆ ಎಡಿ ಮನೆ ಮೇಲೆ ಲೋಕಾಯುಕ್ತ ದಾಳಿ

    ಜಾರಕಿಹೊಳಿ ಹಾಗೂ ಕತ್ತಿ ಸವದಿ ಬಣಗಳ ಮಧ್ಯೆ ಡಿಸಿಸಿ ಬ್ಯಾಂಕ್ ತೆಕ್ಕೆಗೆ ಪಡೆಯಲು ಜಿದ್ದಾಜಿದ್ದಿಯೂ ನಡೆದಿದೆ. ಅಡ್ಡ ಮತದಾನ, ಮತದಾರರ ಸೆಳೆಯುವ ಭೀತಿಯ ಕಾರಣ ಮತದಾರರನ್ನು ಬೇರೆಡೆ ಸ್ಥಳಾಂತರ ಮಾಡಲಾಗಿದೆ. ಅಕ್ಟೋಬರ್ 19ಕ್ಕೆ ನಡೆಯುವ ಚುನಾವಣೆಗೆ ಮತದಾನ ಮಾಡಲು ನೇರವಾಗಿ ಮತದಾರರು ಬರಲಿದ್ದಾರೆ. ಹೈಟೆಕ್ ಟಿಟಿಯಲ್ಲಿ ಬೇರೆ ಬೇರೆ ರಾಜ್ಯಗಳ ರೆಸಾರ್ಟ್ಗಳಿಗೆ ಮತದಾರರನ್ನು ಶಿಫ್ಟ್ ಮಾಡಲಾಗಿದೆ. ಮತದಾರರು ಭದ್ರತಾ ಸಿಬ್ಬಂದಿ ಕಣ್ಗಾವಲಿನಲ್ಲಿಯೇ ಇರಲಿದ್ದು, ರೆಸಾರ್ಟ್ಗೆ ತೆರಳುವ ಮತದಾರರಿಗೆ ಮೊಬೈಲ್ ಬಳಕೆಗೆ ಅವಕಾಶ ನೀಡಿಲ್ಲ ಎಂದು ತಿಳಿದು ಬಂದಿದೆ.

  • ಅಘಾಡಿಗೆ ಆಪರೇಷನ್‌ ಭೀತಿ – ಮತ್ತೆ ರೆಸಾರ್ಟ್‌ ಪಾಲಿಟಿಕ್ಸ್‌ , ಕರ್ನಾಟಕಕ್ಕೆ ಶಾಸಕರು?

    ಅಘಾಡಿಗೆ ಆಪರೇಷನ್‌ ಭೀತಿ – ಮತ್ತೆ ರೆಸಾರ್ಟ್‌ ಪಾಲಿಟಿಕ್ಸ್‌ , ಕರ್ನಾಟಕಕ್ಕೆ ಶಾಸಕರು?

    ಮುಂಬೈ: ಮಹಾರಾಷ್ಟ್ರ ಚುನಾವಣಾ ಫಲಿತಾಂಶ (Maharashtra Election Results) ಒಂದು ದಿನ ಬಾಕಿ ಇದ್ದು ರೆಸಾರ್ಟ್‌ ಪಾಲಿಟಿಕ್ಸ್‌ (Resort Politics) ಆರಂಭವಾಗುವ ಸಾಧ್ಯತೆಯಿದೆ.

    ಚುನಾವಣೋತ್ತರ ಸಮೀಕ್ಷೆಗಳು ಮಹಾರಾಷ್ಟ್ರದಲ್ಲಿ ಮಹಾಯುತಿ ಸರ್ಕಾರ ಮತ್ತೆ ಅಧಿಕಾರಕ್ಕೆ ಏರಲಿದೆ ಎಂದು ಭವಿಷ್ಯ ನುಡಿದರೂ ಈ ಬಾರಿ ಎರಡು ಒಕ್ಕೂಟಗಳ ಮಧ್ಯೆ ನೇರಾನೇರ ಸ್ಪರ್ಧೆ ಇದೆ ಎನ್ನುವುದು ಮಹಾ ವಿಕಾಸ ಅಘಾಡಿ ಮೈತ್ರಿಗೆ ಗೊತ್ತಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರದ ಸಚಿವರೊಬ್ಬರ ತಲೆದಂಡಕ್ಕೆ ಸಿದ್ಧತೆ!

    ಪಕ್ಷಗಳ ಆಂತರಿಕ ಸಮೀಕ್ಷೆಯಲ್ಲಿ ಈ ವಿಚಾರ ತಿಳಿಯುತ್ತಿದ್ದಂತೆ ಕಾಂಗ್ರೆಸ್‌ (Congress)  ಗೆಲುವು  ಸಾಧಿಸಿದ  ಶಾಸಕರನ್ನು ಕರ್ನಾಟಕಕ್ಕೆ (Karnataka) ಕಳುಹಿಸಲು ಮುಂದಾಗಿದೆ.

    ಮೂರು ಚಾರ್ಟರ್ಡ್‌ ವಿಮಾನಗಳ ಸಿದ್ಧವಾಗಿಡುವಂತೆ  ಸೂಚಿಸಲಾಗಿದೆ. ಎನ್‌ಸಿಪಿ ನಾಯಕ ಶರದ್‌ ಪವಾರ್‌ ಮತ್ತು ಶಿವಸೇನಾ ನಾಯಕ ಉದ್ಧವ್‌ ಠಾಕ್ರೆ ನಿರ್ಧಾರಕ್ಕೆ ಕಾಂಗ್ರೆಸ್‌ ಈಗ ಕಾಯುತ್ತಿದೆ. ಒಂದು ವೇಳೆ ಇಬ್ಬರೂ ನಾಯಕರು ಅನುಮತಿ ನೀಡಿದರೆ ಮೂರು ಪಕ್ಷದ ಗೆದ್ದ ಶಾಸಕರು ಕರ್ನಾಟಕಕ್ಕೆ ಬರುವ ಸಾಧ್ಯತೆಯಿದೆ.

    ಈ ಬಾರಿ ಅಧಿಕಾರಕ್ಕೆ ಏರಲೇಬೇಕೆಂದು ಅಘಾಡಿ ಮೈತ್ರಿ ಪಣ ತೊಟ್ಟಿದೆ. ಒಂದು ವೇಳೆ ಮಹಾಯುತಿಗೆ ಬಹುಮತ ಸಿಗದೇ ಇದ್ದರೆ ನಮ್ಮ ಶಾಸಕರನ್ನು ಸೆಳೆಯಬಹುದು ಎಂಬ ಭೀತಿ  ಅಘಾಡಿಗೆ ಇದೆ. ಈ ಕಾರಣಕ್ಕೆ ಈಗಲೇ ಶಾಸಕರನ್ನು ಹಿಡಿದಿಡಲು ಶಾಸಕರನ್ನು ಕರ್ನಾಟಕಕ್ಕೆ ಕಳುಹಿಸುವ ಸಂಬಂಧ ಮಾತುಕತೆ  ನಡೆಸುತ್ತಿದೆ ಎಂದು ವರದಿಯಾಗಿದೆ.

  • ಗೋವಾ ರಿಸಲ್ಟ್‌ಗೆ  ಮೊದ್ಲೇ ರೆಸಾರ್ಟ್ ಪಾಲಿಟಿಕ್ಸ್..!

    ಗೋವಾ ರಿಸಲ್ಟ್‌ಗೆ ಮೊದ್ಲೇ ರೆಸಾರ್ಟ್ ಪಾಲಿಟಿಕ್ಸ್..!

    ಪಣಜಿ: ಹಾರುವ ಶಾಸಕರು ಖ್ಯಾತಿಯ ಗೋವಾದಲ್ಲಿ ಫಲಿತಾಂಶಕ್ಕೆ ಮುನ್ನವೇ ರೆಸಾರ್ಟ್ ಪಾಲಿಟಿಕ್ಸ್ ಶುರುವಾಗಿದೆ. ಬಹುತೇಕ ಎಕ್ಸಿಟ್ ಪೋಲ್‍ (Exit Poll) ಗಳಲ್ಲಿ ಯಾರಿಗೂ ಸ್ಪಷ್ಟ ಬಹುಮತ ಬರಲ್ಲ ಎಂದು ಹೇಳ್ತಿರುವ ಕಾರಣ, ಕಾಂಗ್ರೆಸ್ ಪಕ್ಷ ಎಚ್ಚೆತ್ತಿದೆ. ತಮ್ಮ ಅಭ್ಯರ್ಥಿಗಳು ಬಿಜೆಪಿ ಗಾಳಕ್ಕೆ ಸಿಲುಕಬಾರದು ಎಂಬ ಮುಂದಾಲೋಚನೆಯಿಂದ ಎಲ್ಲರನ್ನು ರೆಸಾರ್ಟ್ ಒಂದಕ್ಕೆ ಶಿಫ್ಟ್ ಮಾಡಿದೆ.

    ಪಿ ಚಿದಂಬರಂ, ಡಿ.ಕೆ ಶಿವಕುಮಾರ್, ದಿನೇಶ್ ಗುಂಡೂರಾವ್ ಈ ರಣತಂತ್ರದ ಮುಂದಾಳತ್ವ ವಹಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಕಾರ್ಯತಂತ್ರವನ್ನೇ ಎಎಪಿಯೂ ಅನುಸರಿಸ್ತಿದೆ. ತಮ್ಮ ಅಭ್ಯರ್ಥಿಗಳನ್ನು ರಹಸ್ಯ ಸ್ಥಳಕ್ಕೆ ಶಿಫ್ಟ್ ಮಾಡಿದೆ. ಇತ್ತ ಬಿಜೆಪಿ ಟೆನ್ಶನ್‍ನಲ್ಲಿದೆ. ನಿನ್ನೆ ಪ್ರಧಾನಿ ಭೇಟಿ ಮಾಡಿದ್ದ ಸಿಎಂ ಪ್ರಮೋದ್ ಸಾವಂತ್, ಇಂದು ದೇವೇಂದ್ರ ಫಡ್ನಾವೀಸ್ ಭೇಟಿ ಮಾಡಿದ್ದಾರೆ. ಕಾಂಗ್ರೆಸ್‍ನ ರೆಸಾರ್ಟ್ ಪಾಲಿಟಿಕ್ಸ್‍ನ್ನು ಗಿಮಿಕ್ ಎಂದು ಟೀಕಿಸಿದ್ದಾರೆ. ಸರ್ಕಾರ ನಾವೇ ರಚಿಸೋದು ಎಂದಿದ್ದಾರೆ. ಇಲ್ಲಿ ಸಣ್ಣ ಪುಟ್ಟ ಪಕ್ಷಗಳು, ಪಕ್ಷೇತರರು ನಿರ್ಣಾಯಕವಾಗುವ ಸಂಭವ ಇದೆ. ಇದನ್ನೂ ಓದಿ: ಗೋವಾದಲ್ಲಿ ಮತ್ತೆ ಬಿಜೆಪಿ ಗೆಲ್ಲಲಿದೆ: ಪ್ರಮೋದ್ ಸಾವಂತ್

    Exit Poll- ಗೋವಾದಲ್ಲಿ ಅತಂತ್ರ ಫಲಿತಾಂಶ
    ಪೋಲ್ ಆಫ್ ದಿ ಪೋಲ್ಸ್ ಪ್ರಕಾರ ಅತಂತ್ರ ವಿಧಾನಸಭೆ. ಸಮೀಕ್ಷೆ ಪ್ರಕಾರ ಕಾಂಗ್ರೆಸ್ 16+, ಬಿಜೆಪಿ 16+ ಸ್ಥಾನ ಸಿಗಲಿದೆ. ಎಎಪಿ, ಟಿಎಂಸಿ+ಎಂಜಿಪಿ, ಪಕ್ಷೇತರರಿಗೆ 4-8 ಸ್ಥಾನ ಸಿಗಲಿದ್ದು ಇವರೇ ನಿರ್ಣಾಯಕರಾಗಲಿದ್ದಾರೆ. ಟಿಎಂಸಿ, ಎಎಪಿ ಬೆಂಬಲದ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ. ಆಪರೇಷನ್ ಹಸ್ತಕ್ಕೆ ಚಿದು-ಡಿಕೆ ಟೀಂ ಪ್ರಯತ್ನ ಮಾಡುತ್ತಿದೆ. ಎಂಜಿಪಿ, ಪಕ್ಷೇತರರ ಬೆಂಬಲದ ನಿರೀಕ್ಷೆಯಲ್ಲಿ ಬಿಜೆಪಿ ಇದ್ದು, ಆಪರೇಷನ್ ಕಮಲಕ್ಕಾಗಿ ಫಡ್ನಾವೀಸ್. ಸಿ.ಟಿ.ರವಿ ರೆಡಿಯಾಗಿದ್ದಾರೆ. ಇದನ್ನೂ ಓದಿ: ಗುರುವಾರ ಪಂಚರಾಜ್ಯ ಚುನಾವಣಾ ಫಲಿತಾಂಶ- ಯುಪಿಯಲ್ಲಿ ಯಾರಿಗೆ ಒಲಿಯುತ್ತೆ ಅದೃಷ್ಟ..?

    ಒಟ್ಟು ಸ್ಥಾನಗಳು 40, ಬಹುಮತಕ್ಕೆ 21
    ಇಂಡಿಯಾ ಟುಡೇ
    ಬಿಜೆಪಿ 14-18, ಕಾಂಗ್ರೆಸ್‌+ 15-20, ಆಪ್‌ – 0, ಟಿಎಂಸಿ 2-5, ಇತರರು 0-4

    ರಿಪಬ್ಲಿಕ್‌
    ಬಿಜೆಪಿ 13-17, ಕಾಂಗ್ರೆಸ್‌+ 13-17, ಆಪ್‌ 2-6, ಟಿಎಂಸಿ 2-4, ಇತರರು 0-4

    ಟೈಮ್ಸ್‌ ನೌ
    ಬಿಜೆಪಿ 14, ಕಾಂಗ್ರೆಸ್‌+ 16, ಆಪ್‌ 0, ಟಿಎಂಸಿ 0, ಇತರರು 10 ಇದನ್ನೂ ಓದಿ: ಪಂಜಾಬ್‍ನಲ್ಲಿ ಆಪ್‍ಗೆ ಸಿಗುತ್ತಾ ಅಧಿಕಾರ..?- ಉತ್ತರಾಖಂಡ್, ಮಣಿಪುರ ಕತೆಯೇನು..?

    ಜನ್‍ ಕೀ ಬಾತ್
    ಬಿಜೆಪಿ 14-19, ಕಾಂಗ್ರೆಸ್+‌ 13-19, ಆಪ್‌ 2-1, ಟಿಎಂಸಿ 5-2 ಇತರರು 1-3

    2017 ಫಲಿತಾಂಶ
    ಕಾಂಗ್ರೆಸ್ 17, ಬಿಜೆಪಿ 13, ಆಪ್ 0, ಇತರರು 10

  • ರೆಸಾರ್ಟ್‍ನಲ್ಲಿ ಅತೃಪ್ತ ಶಾಸಕರ ರಹಸ್ಯ ಸಭೆ- ಸುದ್ದಿಯಾಗುತ್ತಿದ್ದಂತೆ ಕಾಲ್ಕಿತ್ತ ಯೋಗೇಶ್ವರ್

    ರೆಸಾರ್ಟ್‍ನಲ್ಲಿ ಅತೃಪ್ತ ಶಾಸಕರ ರಹಸ್ಯ ಸಭೆ- ಸುದ್ದಿಯಾಗುತ್ತಿದ್ದಂತೆ ಕಾಲ್ಕಿತ್ತ ಯೋಗೇಶ್ವರ್

    – ಏತನೀರಾವರಿ ಕುರಿತು ಚರ್ಚಿಸಲು ಸಭೆ ನಡೆಸಿದ್ದೇವೆಂದ ಜಾರಕಿಹೊಳಿ

    ಚಿಕ್ಕಮಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೆ ಶುರುವಾಯಿತಾ ಸಂಚಲನ ಎಂಬ ಪ್ರಶ್ನೆ ಇದೀಗ ಮೂಡಿದ್ದು, ರೆಸಾರ್ಟ್ ರಾಜಕಾರಣ ಮತ್ತೆ ಗರಿಗೆದರಿದೆ. ಚಿಕ್ಕಮಗಳೂರಿನ ರೆಸಾರ್ಟ್‍ನಲ್ಲಿ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಗೌಪ್ಯ ಸಭೆ ನಡೆಸಲಾಗಿದೆ. ಈ ಬಗ್ಗೆ ಪ್ರಶ್ನಿಸಿದರೆ ಏತನೀರಾವರಿ ಕುರಿತು ಚರ್ಚಿಸಲು ಸಭೆ ನಡೆಸಿದ್ದೇವೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹಾರಿಕೆ ಉತ್ತರ ನೀಡಿದ್ದಾರೆ.

    ಚಿಕ್ಕಮಗಳೂರು ಹೊರವಲಯದ ಸರಾಯ್ ರೆಸಾರ್ಟ್‍ನಲ್ಲಿ ಅತೃಪ್ತರ ಸಭೆ ನಡೆದಿದ್ದು, ರಮೇಶ್ ಜಾರಕಿಹೊಳಿ, ಸಿ.ಪಿ.ಯೋಗೇಶ್ವರ್, ಗೋಪಾಲಯ್ಯ, ಶಾಸಕ ಎಂ.ಪಿ.ಕುಮಾರಸ್ವಾಮಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ನಾಯಕರು ನಿನ್ನೆ ರಾತ್ರಿಯೇ ರೆಸಾರ್ಟ್‍ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಹೀಗಾಗಿ ಬಿಜೆಪಿ ಸರ್ಕಾರ ರಚನೆಗೆ ಕಾರಣವಾಗಿದ್ದ ಸಚಿವ ರಮೇಶ್ ಜಾರಕಿಹೊಳಿಯಿಂದಲೇ ಸರ್ಕಾರ ಬೀಳಿಸುವ ಪ್ರಯತ್ನ ನಡೆದಿದೆಯಾ ಎಂಬ ಪ್ರಶ್ನೆ ಇದೀಗ ಎದ್ದಿದೆ.

    ಸಭೆ ನಡೆಸಿದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ, ಎತ್ತಿನಹೊಳೆ ಏತನೀರಾವರಿ ಬಗ್ಗೆ ಅಧಿಕಾರಿಗಳ ಸಭೆ ನಡೆಸಿದ್ದೇವೆ. ನಿನ್ನೆ ನಡೆದ ಕಾಮಗಾರಿಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ನಾವು ಸಭೆ ನಡೆಸುವ ಬಗ್ಗೆ ಜಿಲ್ಲಾಧಿಕಾರಿಗೆ ಮಾಹಿತಿ ನೀಡಿಲ್ಲ. ಕೇವಲ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.

    ಸುದ್ದಿ ಪ್ರಸಾರವಾಗುತ್ತಲೇ ಸಚಿವ ಸಿ.ಪಿ.ಯೋಗೇಶ್ವರ್ ರೆಸಾರ್ಟ್ ನಿಂದ ಹೊರನಡೆದಿದ್ದಾರೆ. ನಿನ್ನೆಯಿಂದಲೂ ನಾಯಕರು ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದು, ನಿರ್ದಿಷ್ಟ ಖಾತೆಗಳಿಗಾಗಿ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಚೌಕಾಸಿ ಸಭೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

  • ಪಕ್ಷದ ನಾಯಕರಿಗೇ ಸವಾಲೆಸೆದು ರೆಸಾರ್ಟಿನತ್ತ 15ಕ್ಕೂ ಹೆಚ್ಚು ಶಾಸಕರು?

    ಪಕ್ಷದ ನಾಯಕರಿಗೇ ಸವಾಲೆಸೆದು ರೆಸಾರ್ಟಿನತ್ತ 15ಕ್ಕೂ ಹೆಚ್ಚು ಶಾಸಕರು?

    – ಮಂಗ್ಳೂರಲ್ಲಿ ರೆಸಾರ್ಟ್ ವಾಸ್ತವ್ಯಕ್ಕೆ ಪ್ಲಾನ್

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೆ ರೆಸಾರ್ಟ್ ರಾಜಕೀಯ ಆರಂಭವಾಗಿದೆ. ಕೆಲವೇ ತಿಂಗಳುಗಳ ಹಿಂದೆ ನಡೆದಿದ್ದ ರೆಸಾರ್ಟ್ ರಾಜಕಾರಣ ರಾಜ್ಯದಲ್ಲಿದ್ದ ಸಮ್ಮಿಶ್ರ ಸರ್ಕಾರವನ್ನು ಉರುಳಿಸಿತ್ತು. ಈಗ ಅದೇ ಮಾದರಿಯಲ್ಲಿ ರೆಸಾರ್ಟ್ ರಾಜಕಾರಣಕ್ಕೆ ಸದ್ದಿಲ್ಲದೇ ಸಿದ್ಧತೆ ನಡೆಸಲಾಗುತ್ತಿದ್ದು, 15ಕ್ಕೂ ಹೆಚ್ಚು ಶಾಸಕರು ರೆಸಾರ್ಟಿಗೆ ಶೀಫ್ಟ್ ಆಗಲು ರೆಡಿಯಾಗಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಪಕ್ಷದ ಹೈಕಮಾಂಡ್ ದೇವೇಗೌಡರು ನವೆಂಬರ್ 6 ರಂದು ಪಕ್ಷದ ಶಾಸಕರ ಸಭೆ ಕರೆದಿದ್ದಾರೆ. ಕುಮಾರಸ್ವಾಮಿ ಹಾಗೂ ಶಾಸಕರ ನಡುವಿನ ಸಂದಾನ ಸಭೆಗೆ ಹಾಜರಾಗಲ್ಲ ನಾನು ಲಂಡನ್ ಗೆ ಹೋಗುತ್ತಿದ್ದೇನೆ ಎಂದು ಕುಮಾರಸ್ವಾಮಿ ಈಗಾಗಲೇ ಹೇಳಿದ್ದಾರೆ. ಇದರಿಂದ ಮತ್ತಷ್ಟು ಕೆರಳಿದ ಜೆಡಿಎಸ್ ಶಾಸಕರು ತಮ್ಮ ಒಗ್ಗಟ್ಟು ತೋರಿಸಲು ಮುಂದಾಗಿದ್ದಾರೆ.

    ಮಂಗಳೂರು ಸಮೀಪದ ರೆಸಾರ್ಟ್ ಒಂದರಲ್ಲಿ ವಾಸ್ತವ್ಯ ಹೂಡಿ ತಮ್ಮ ಒಗ್ಗಟ್ಟು ಪ್ರದರ್ಶಿಸಲು ಮುಂದಾಗಿದ್ದಾರೆ. ಜಿ.ಟಿ ದೇವೇಗೌಡ, ಗುಬ್ಬಿ ಶ್ರೀನಿವಾಸ್, ಶರವಣ, ಚೌಡರೆಡ್ಡಿ ಸೇರಿದಂತೆ ಶಾಸಕರು ಹಾಗೂ ಪರಿಷತ್ ಸದಸ್ಯರು ರೆಸಾರ್ಟ್ ನತ್ತ ಮುಖ ಮಾಡಿದ್ದಾರೆ. ಇನ್ನೆರಡು ದಿನದಲ್ಲಿ ಮಂಗಳೂರು ಸಮೀಪದ ರೆಸಾರ್ಟಿನಲ್ಲಿ ವಾಸ್ತವ್ಯ ಹೂಡಲು ಮುಂದಾಗಿದ್ದಾರೆ. ಇದನ್ನೂ ಓದಿ: ಟಾರ್ಗೆಟ್ 7, ಸೆಂಟಿಮೆಂಟ್ ಡೈಲಾಗ್‍ಗೆ ಜೆಡಿಎಸ್ ರೆಬೆಲ್‍ಗಳು ಥಂಡಾ!

    ದೇವೇಗೌಡರು ಕರೆದ ಸಭೆಗೆ ಮಾಜಿ ಸಿಎಂ ಕುಮಾರಸ್ವಾಮಿಯವರು ಗೈರಾಗಲು ಮುಂದಾದರೆ, ಅಸಮಾಧಾನಿತ ಶಾಸಕರು ರೆಸಾರ್ಟಿನಲ್ಲಿ ಕುಳಿತು ತಮ್ಮ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಮುಂದಾಗಿದ್ದಾರೆ. ಒಟ್ಟಾರೆ ಮಾಜಿ ಸಿಎಂ ಹಾಗೂ ಶಾಸಕರ ನಡುವಿನ ಅಸಮಾಧಾನ ಈಗ ದೇವೇಗೌಡರ ಮಾತಿಗೂ ಶಾಸಕರು ಕ್ಯಾರೇ ಎನ್ನದಂತಾಗಿದೆ ಎಂಬುದಾಗಿ ತಿಳಿದುಬಂದಿದೆ.

  • ಪೈಸೆ ಲೆಕ್ಕದಲ್ಲಿ ಶಾಸಕರನ್ನು ಹರಾಜು ಹಾಕಿದ ರೈತರು

    ಪೈಸೆ ಲೆಕ್ಕದಲ್ಲಿ ಶಾಸಕರನ್ನು ಹರಾಜು ಹಾಕಿದ ರೈತರು

    ಚಾಮರಾಜನಗರ: ರೆಸಾರ್ಟ್ ರಾಜಕಾರಣ ಮಾಡುತ್ತಿರುವ ಶಾಸಕರನ್ನು ಪೈಸೆ ಲೆಕ್ಕದಲ್ಲಿ ಹರಾಜು ಹಾಕಲಾಗಿದೆ. ಜನರ ಹಿತಾಸಕ್ತಿ ಮರೆತು ರಾಜಕೀಯ ದೊಂಬರಾಟದಲ್ಲಿ ಮುಳುಗಿರುವ ರಾಜಕೀಯ ಪಕ್ಷಗಳ ನಾಯಕರಿಗೆ ಜನ ಥೂ ಎಂದು ಕ್ಯಾಕರಿಸಿ ಉಗಿಯುತ್ತಿದ್ದಾರೆ. ಅವರ ಭಾವಚಿತ್ರಗಳಿಗೆ ಚಪ್ಪಲಿ, ಪೊರಕೆಗಳಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ರಾಜ್ಯದಲ್ಲಿ ನಡೆಯುತ್ತಿರುವ ಅಸಹ್ಯ ರಾಜಕೀಯ ಬೆಳವಣಿಗೆಯ ಬಗ್ಗೆ ಚಾಮರಾಜನಗರದಲ್ಲಿ ರೈತರು ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಭೀಕರ ಬರ ಇದ್ದರೂ ಆ ಬಗ್ಗೆ ತಲೆ ಕೆಡಿಸಿಕೊಳ್ಳದೆ ಅಧಿಕಾರಕ್ಕಾಗಿ ರೆಸಾರ್ಟ್ ರಾಜಕಾರಣ ಮಾಡುತ್ತಿದ್ದಾರೆಂದು ಆರೋಪಿಸಿ ನಗರದ ಭುವನೇಶ್ವರಿ ವೃತ್ತದಲ್ಲಿ ಶಾಸಕರನ್ನು ಪೈಸೆ ಲೆಕ್ಕದಲ್ಲಿ ಹರಾಜು ಹಾಕುವ ಅಣುಕು ಪ್ರದರ್ಶನ ನಡೆಸಿದರು.

    ಮುಖ್ಯಮಂತ್ರಿ, ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪ ಅವರ ಭಾವಚಿತ್ರಗಳಿಗೆ ಕ್ಯಾಕರಿಸಿ ಉಗಿದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಚಪ್ಪಲಿ ಹಾಗೂ ಪೊರಕೆಗಳಿಂದ ಹೊಡೆದು, ನಗರದ ಭುವನೇಶ್ವರಿ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

  • ರೆಸಾರ್ಟ್ ರಾಜಕಾರಣ ವಿರುದ್ಧ ರೈತರಿಂದ ಛೀ.. ಥೂ.. ಚಳುವಳಿ

    ರೆಸಾರ್ಟ್ ರಾಜಕಾರಣ ವಿರುದ್ಧ ರೈತರಿಂದ ಛೀ.. ಥೂ.. ಚಳುವಳಿ

    ತುಮಕೂರು: ರಾಜ್ಯದ ಜನತೆಯ ಹಿತಾಸಕ್ತಿಯನ್ನು ಮರೆತು ಅಧಿಕಾರಕೋಸ್ಕರ ರೆಸಾರ್ಟ್ ರಾಜಕಾರಣ ಮಾಡುತ್ತಿರುವ ಜನಪ್ರತಿನಿಧಿಗಳ ವಿರುದ್ಧ ರೈತರು ಛೀ…ಥೂ.. ಚಳುವಳಿ ಕೈಗೊಂಡಿದ್ದಾರೆ.

    ತುಮಕೂರು ಜಿಲ್ಲೆಯಾದ್ಯಂತ ರಾಜ್ಯ ರೈತ ಸಂಘದ ಕಾರ್ಯಕರ್ತರು ರೆಸಾರ್ಟ್ ರಾಜಕಾರಣ ಮಾಡುತಿರುವ ಜನಪ್ರತಿನಿಧಿಗಳ ಭಾವಚಿತ್ರಕ್ಕೆ ಎಲೆ ಅಡಿಕೆಯ ಎಂಜಲನ್ನು ಉಗಿದು ಛೀ…ಥೂ.. ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ತುಮಕೂರು ನಗರದ ಟೌನ್ ಹಾಲ್ ವೃತ್ತದಲ್ಲಿ ಜಿಲ್ಲಾಧ್ಯಕ್ಷ ಆನಂದ ಹುಲಿಕಟ್ಟೆ ನೇತೃತ್ವದಲ್ಲಿ ನೂರಾರು ಜನ ರೈತರು ಸೇರಿ. ಜನಪ್ರತಿನಿಧಿಗಳ ಭಾವಚಿತ್ರಕ್ಕೆ ಎಂಜಲಿನ ಮಜ್ಜನ ಮಾಡಿಸಿ, ಚಪ್ಪಲಿ ಏಟು ಕೊಟ್ಟು ಪ್ರತಿಕೃತಿ ದಹಿಸಿದ್ದಾರೆ. ರಾಜ್ಯದ ಅಭಿವೃದ್ಧಿ ಮರೆತ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ಕಾಂಗ್ರೆಸ್ ಹಾಗೂ ಜೆಡಿಎಸ್ ನ 13 ಮಂದಿ ಶಾಸಕರು ರಾಜೀನಾಮೆ ನೀಡಿ ಮುಂಬೈ ಹೋಟೆಲ್ ನಲ್ಲಿ ತಂಗಿದ್ದಾರೆ. ಹೀಗಾಗಿ ಅವರ ಮನವೊಲಿಸುವ ಕಾರ್ಯವನ್ನು ಕೈಗೊಂಡು ದೋಸ್ತಿಗಳು ವಿಫಲರಾದರು. ಇತ್ತ ರಿವರ್ಸ್ ಆಪರೇಷನ್ ಭಯದಿಂದ ಬಿಜೆಪಿ ಶಾಸಕರು ರಮಡ ಮತ್ತು ಸಾಯಿಲೀಲಾ ರೆಸಾರ್ಟ್ ನಲ್ಲಿ ವಾಸ್ತವ್ಯ ಮಾಡಿದ್ದಾರೆ. ಜೆಡಿಎಸ್ ನವರು ಕೂಡ ಉಳಿದ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಸಲುವಾಗಿ ನಂದಿಬೆಟ್ಟದ ಬಳಿಯಿರೋ ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟ್ ಸೇರಿದ್ದರೆ, ಇತ್ತ ಕಾಂಗ್ರೆಸ್ ನಾಯಕರು ತಾಜ್ ವಿವಾಂತ ರೆಸಾರ್ಟಿನಲ್ಲಿದ್ದಾರೆ.

  • ರೆಸಾರ್ಟ್ ರಾಜಕಾರಣದ ವಿರುದ್ಧ ಏಕಾಂಗಿಯಾಗಿ ವೃದ್ಧನಿಂದ ಪ್ರತಿಭಟನೆ

    ರೆಸಾರ್ಟ್ ರಾಜಕಾರಣದ ವಿರುದ್ಧ ಏಕಾಂಗಿಯಾಗಿ ವೃದ್ಧನಿಂದ ಪ್ರತಿಭಟನೆ

    ದಾವಣಗೆರೆ: ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ರೆಸಾರ್ಟ್ ರಾಜಕೀಯವನ್ನು ವಿರೋಧಿಸಿ ವೃದ್ಧರೊಬ್ಬರು ಮೈಕ್ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

    ದಾವಣಗೆರೆಯ ಅಶೋಕ ಚಿತ್ರಮಂದಿರದ ಬಳಿ ಪ್ರತಿಭಟನೆ ನಡೆಸಿದ ಮಂಜುನಾಥಯ್ಯ, ರಾಜಕಾರಣಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಮಳೆಯಿಲ್ಲದೆ ರೈತರು ಪರದಾಡುವಂತಾಗಿದೆ. ಕುಡಿಯುವ ನೀರಿಗೆ ತೊಂದರೆಯಾಗಿದೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು.

    ರಾಜ್ಯದಲ್ಲಿ ಈ ರೀತಿಯ ಪರಿಸ್ಥಿತಿ ಇರುವಾಗ ಹಣ ಹಾಗೂ ಅಧಿಕಾರಕ್ಕಾಗಿ ರಾಜ್ಯದ ಶಾಸಕರ ಐಶಾರಾಮಿ ಹೋಟೆಲ್, ರೆಸಾರ್ಟಿನಲ್ಲಿ ವಾಸ್ತವ್ಯ ಹೂಡಿದ್ದಾರೆ. ಕೂಡಲೇ ರಾಜ್ಯದ ಜನತೆ ಈ ರೀತಿಯ ಕೀಳು ಮಟ್ಟದ ರಾಜಕಾರಣಿಗಳ ವಿರುದ್ಧ ಹೋರಾಟ ನಡೆಸಬೇಕು. ಮತ್ತೊಮ್ಮೆ ಚುನಾವಣೆಯಲ್ಲಿ ಮತಯಾಚನೆಗೆ ಬಂದರೆ ತಕ್ಕ ಶಾಸ್ತಿ ಮಾಡಿ ಎಂದು ಏಕಾಂಗಿಯಾಗಿ ಪ್ರತಿಭಟನೆ ನಡೆಸುವ ಮೂಲಕ ಜನಜಾಗೃತಿ ಮೂಡಿಸುವ ಪ್ರಯತ್ನ ನಡೆಸಿದರು.

  • ರಾಜ್ಯ ರಾಜಕೀಯದಲ್ಲಿ ಶೀಘ್ರವೇ ಭಾರೀ ಪಲ್ಲಟ- ಗೋವಾದಲ್ಲಿ 30 ರೂಮ್ಸ್ ಬುಕ್!

    ರಾಜ್ಯ ರಾಜಕೀಯದಲ್ಲಿ ಶೀಘ್ರವೇ ಭಾರೀ ಪಲ್ಲಟ- ಗೋವಾದಲ್ಲಿ 30 ರೂಮ್ಸ್ ಬುಕ್!

    ಬೆಳಗಾವಿ: ರಾಜ್ಯ ರಾಜಕೀಯ ಕಡಲ ನಗರಿ ಗೋವಾಗೆ ಶಿಫ್ಟ್ ಆಗುವ ಸಾಧ್ಯತೆಯಿದೆ. ಆಪರೇಶನ್ ಕಮಲಕ್ಕೆ ಸಿದ್ಧತೆ ನಡೆದಿದ್ದು ಅದಕ್ಕೆ ಗೋವಾ ಸಾಕ್ಷಿಯಾಗಲಿದೆಯಾ ಎಂಬ ಗುಮಾನಿ ಭಾರೀ ಸುದ್ದಿಯಾಗುತ್ತಿದೆ. ಇದಕ್ಕೆ ಪುಷ್ಠಿ ಎನ್ನುವಂತೆ ಗೋವಾದ ಹೋಟೆಲೊಂದರಲ್ಲಿ ಕೊಠಡಿಗಳು ಬುಕ್ ಆಗಿವೆ ಎಂದು ಹೇಳಲಾಗುತ್ತಿದೆ.

    ಹೌದು. ಲೋಕಸಭಾ ಚುನಾವಣಾ ಫಲಿತಾಂಶ ಮೈತ್ರಿ ಸರ್ಕಾರದ ಪತನಕ್ಕೆ ನಾಂದಿ ಹಾಡಿದೆ. ಇದಕ್ಕೆ ಪುಷ್ಠಿ ಎಂಬಂತೆ ರಾಜ್ಯ ರಾಜಕೀಯದಲ್ಲಿ ಆಪರೇಶನ್ ಕಮಲ ಹಾಗೂ ರೆಸಾರ್ಟ್ ಪಾಲಿಟಿಕ್ಸ್ ಮತ್ತೆ ಶುರುವಾಗುತ್ತಿದೆ. ಈ ಬಾರಿ ಕೆಲ ರೆಬಲ್ ಶಾಸಕರೇ, ಖುದ್ದು ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿಗೆ ಫೋನ್ ಮಾಡಿ, ದೇಶದಲ್ಲಿ ಬಿಜೆಪಿ ಹವಾ ಹುಬ್ಬೇರಿಸಿದೆ. ಈಗ ಆಪರೇಶನ್ ಕಮಲಕ್ಕೆ ಸರಿಯಾದ ಸಮಯ ಎನ್ನುತ್ತಿದ್ದಾರೆ. ಇದನ್ನೇ ಅಸ್ತ್ರ ಮಾಡಿಕೊಂಡಿರುವ ರೆಬೆಲ್ ಶಾಸಕರ ರೆಬೆಲ್ ಕ್ಯಾಪ್ಟನ್ ರಮೇಶ್ ಜಾರಕಿಹೊಳಿ, ಆಪರೇಶನ್ ಕಮಲಕ್ಕಾಗಿ ದಿನಾಂಕ ನೀವು ನಿಗದಿಪಡಿಸಿ, ಅದುವರೆಗೆ ಶಾಸಕರು ನನ್ನ ಜೊತೆ ಇರ್ತಾರೆ ಎಂದು ಹೇಳಿದ್ದಾರೆ ಎನ್ನಲಾಗಿದೆ.

    ಗೋವಾದಲ್ಲಿ ರೆಸಾರ್ಟ್ ಪಾಲಿಟಿಕ್ಸ್!:
    ಕಳೆದ ಬಾರಿ ಆಪರೇಶನ್ ಕಮಲಕ್ಕೆ ಜಾಗ ಗುರುತಿಸಿದ್ದು ಮಾಯಾ ನಗರಿ ಮುಂಬೈ. ಆದರೆ ಶತಾಯಗತಾಯ ಪ್ರಯತ್ನ ಮಾಡಿ ಶಾಸಕರ ಬಲ ಹೆಚ್ಚಾಗದೆ ಮೈ ಪರಚಿಕೊಂಡು ಮನೆಗೆ ಬಂದ ರಮೇಶ್ ಅವರಿಗೆ ಯಾಕೋ ಮುಂಬೈ ನಗರದ ಮೇಲೆ ಮೊಹ ಕಡಿಮೆಯಾಗಿದೆಯಂತೆ. ಹೀಗಾಗಿ ಕಡಲನಗರಿ ಗೋವಾದಲ್ಲಿಯೇ ಆಪರೇಶನ್ ಆಟ ಶುರು ಮಾಡುತ್ತಿದ್ದಾರೆ. ಇದಕ್ಕಾಗಿ ಗೋವಾದ ಪ್ರಭಾವಿ ಸಚಿವರಿಗೆ ಉಸ್ತುವಾರಿ ನೀಡಲಾಗಿದೆ. ಗೋವಾದ ಫೋರ್ಟ್ ಅಗುಡಾದಲ್ಲಿರುವ ದುಬಾರಿ ಫೈಸ್ಟಾರ್ ರೆಸಾರ್ಟ್ ತಾಜ್ ಹಾಲಿಡೇ ವಿಲೇಜ್‍ನಲ್ಲಿ 30 ರೂಂಗಳನ್ನು ಬುಕ್ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

    ಸಮುದ್ರ ತೀರದಲ್ಲಿರುವ ಈ ಹೋಟೆಲ್‍ನ ಎರಡೂ ಕಡೆ ಬೀಚ್ ಇದ್ದು ಒಂದು ಕಡೆ ಗುಡ್ಡವಿದೆಯಂತೆ. ಇದು ಭದ್ರತೆಗೆ ಸರಿಯಾದ ತಾಣ. ಯಾವುದೇ ಕ್ಷಣದಲ್ಲಿ ಗೆಸ್ಟ್ ಬರಬಹುದು ಅದಕ್ಕಾಗಿ ಸಿದ್ಧವಾಗಿರಿ ಎಂದು ಹೋಟೆಲ್ ಮ್ಯಾನೆಜ್‍ಮೆಂಟ್‍ಗೆ ಸೂಚನೆ ನೀಡಲಾಗಿದೆ. ಈಗಾಗಲೇ ಉಸ್ತುವಾರಿ ಸಚಿವರು ಎಲ್ಲಾ ಸಿದ್ಧತೆ ಪರಿಶೀಲಿಸಿಕೊಂಡು ಹೋಗಿದ್ದಾರೆ ಎಂದು ಹೇಳಲಾಗುತ್ತಿದ್ದು, ಇದರಿಂದ ದೋಸ್ತಿ ಸರ್ಕಾರಕ್ಕೆ ಮತ್ತೆ ಆತಂಕ ಎದುರಾಗಿದೆ.

  • ಸರ್ಕಾರ ಹೋದ್ರೆ ಬೇರೆ ಸರ್ಕಾರ ಬರುತ್ತೆ, ನನ್ನ ಪತಿ ಹೋದ್ರೆ – ಕೈ ನಾಯಕರಿಗೆ ಆನಂದ್ ಸಿಂಗ್ ಪತ್ನಿ ಕ್ಲಾಸ್

    ಸರ್ಕಾರ ಹೋದ್ರೆ ಬೇರೆ ಸರ್ಕಾರ ಬರುತ್ತೆ, ನನ್ನ ಪತಿ ಹೋದ್ರೆ – ಕೈ ನಾಯಕರಿಗೆ ಆನಂದ್ ಸಿಂಗ್ ಪತ್ನಿ ಕ್ಲಾಸ್

    ಬೆಂಗಳೂರು: ಆಪರೇಷನ್ ಕಮಲಕ್ಕೆ ಸೆಡ್ಡು ಹೊಡೆಯಲು ಪಕ್ಷದ ಶಾಸಕರನ್ನು ಬಿಡದಿಯ ಈಗಲ್ಟನ್ ರೆಸಾರ್ಟಿಗೆ ಕರೆದೊಯ್ದ ಕಾಂಗ್ರೆಸ್ ನಾಯಕರಿಗೆ ಶಾಸಕ ಆನಂದ್ ಸಿಂಗ್ ಅವರ ಮೇಲೆ ನಡೆದ ಹಲ್ಲೆ ಪ್ರಕರಣ ತೀವ್ರ ತಲೆನೋವಾಗಿ ಪರಿಣಮಿಸಿದೆ.

    ವಿಧಾನಸಭಾ ಅಧಿವೇಶನಕ್ಕೆ ಗೈರು ಹಾಜರಿ ಆಗಿದ್ದ ಬಂಡಾಯ ಶಾಸಕರ ಮನವೊಲಿಕೆ ಕಾರ್ಯ ಒಂದೆಡೆಯಾದರೆ, ಶಾಸಕ ಗಣೇಶ್ ಹಲ್ಲೆ ಪ್ರಕರಣದಲ್ಲಿ ಆನಂದ್ ಸಿಂಗ್ ಅವರ ಮನವೊಲಿಸಲು ಕಾಂಗ್ರೆಸ್ ಪ್ರಯತ್ನ ನಡೆಸಿದೆ. ಆದರೆ ಕಾಂಗ್ರೆಸ್ ನಾಯಕರ ಸಂಧಾನ ಪ್ರಕ್ರಿಯೆಗೆ ಶಾಸಕ ಆನಂದ್ ಸಿಂಗ್ ಕುಟುಂಬ ಒಪ್ಪಿಗೆ ನೀಡದೇ ಗಣೇಶ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದೆ.

    ಘಟನೆ ಸಂಬಂಧ ಶಾಸಕ ಆನಂದ್ ಸಿಂಗ್ ಅವರ ಪತ್ನಿಯನ್ನು ಕಾಂಗ್ರೆಸ್ ನಾಯಕರು ಮನವೊಲಿಸಲು ಪ್ರಯತ್ನ ನಡೆಸಿದ್ದು, ಪ್ರಕರಣ ನಡೆದ ದಿನದಿಂದಲೂ ಕೂಡ ಸಚಿವ ಜಮೀರ್ ಅಹ್ಮದ್ ಅವರು ಈ ಕಾರ್ಯದಲ್ಲೇ ತೊಡಗಿದ್ದರು. ಆದರೆ ಈ ವೇಳೆ ಆನಂದ್ ಸಿಂಗ್ ಅವರ ಪತ್ನಿ ಲಕ್ಷ್ಮಿ ಸಿಂಗ್ ಅವರ ರೌದ್ರಾವತಾರಕ್ಕೆ ಕಾಂಗ್ರೆಸ್ ನಾಯಕರು ಕಂಗಾಲಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಇದೊಂದು ಸರಿ ಕ್ಷಮಿಸಿ ಬಿಡಿ. ಇದು ಸರ್ಕಾರದ ಅಳಿವು ಉಳಿವಿನ ಪ್ರಶ್ನೆ ಎಂದು ಹಿರಿಯ ಕಾಂಗ್ರೆಸ್ ನಾಯಕರು ಕೇಳಿಕೊಂಡರೂ ಕೇರ್ ಮಾಡದ ಪತ್ನಿ ತಮ್ಮ ಸ್ವಾಭಿಮಾನಕ್ಕೆ ಧಕ್ಕೆಯಾದ ರೀತಿಯಲ್ಲಿ ಈ ಘಟನೆಯನ್ನು ತೆಗೆದುಕೊಂಡಿದ್ದಾರೆ.

    ಇದು ನನ್ನ ಗಂಡನ ಅಳಿವು ಉಳಿವಿನ ಪ್ರಶ್ನೆ ಆಗಿದ್ದು, ಸರ್ಕಾರ ಹೋದರೆ ಬೇರೆ ಸರ್ಕಾರ ಬರುತ್ತೆ. ಆದರೆ ನನ್ನ ಗಂಡ ಹೋದರೆ ಬೇರೆ ಗಂಡನನ್ನು ತರಲು ಆಗುತ್ತಾ ಎಂದು ಕೈ ನಾಯಕರ ಮುಖಕ್ಕೆ ಹೊಡೆದಂತೆ ಪ್ರಶ್ನಿಸಿದ್ದಾರೆ. ಅಲ್ಲದೇ ರಾಜಕೀಯವೇ ಬೇರೆ ಈ ಘಟನೆಯೇ ಬೇರೆ. ಪತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಆ ಗಣೇಶ್‍ನನ್ನು ಯಾವುದೇ ಕಾರಣಕ್ಕೂ ಕ್ಷಮಿಸಲಾರೆ. ಆತನ ವಿರುದ್ಧ ಕ್ರಮ ಕೈಗೊಳ್ಳಲೇಬೇಕು ಎಂದು ಆಗ್ರಹಿಸಿದ್ದಾಗಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.

    ಶಾಸಕ ಆನಂದ್ ಸಿಂಗ್ ಅವರು ಕಾಂಗ್ರೆಸ್ ನಾಯಕರ ಮಾತಿಗೆ ಒಪ್ಪಿಗೆ ನೀಡಿದ್ದರೂ ಲಕ್ಷ್ಮಿ ಸಿಂಗ್ ಮತ್ತು ಅವರ ಕುಟುಂಬ ಒಪ್ಪಿಗೆ ನೀಡಿಲ್ಲ ಎಂಬ ಮಾಹಿತಿ ಲಭಿಸಿದೆ. ಪ್ರಕರಣದಲ್ಲಿ ಆನಂದ್ ಸಿಂಗ್ ಮತ್ತು ಗಣೇಶ್ ನಡುವೆ ಸಂಧಾನ ಮಾಡಿ ಗಣೇಶ್‍ರನ್ನು ಪಕ್ಷಕ್ಕೆ ಮತ್ತೆ ಕರೆತರುವ ಉದ್ದೇಶ ಕಾಂಗ್ರೆಸ್ ನಾಯಕರಿಗೆ ಇತ್ತು. ಅಲ್ಲದೇ ಶಾಸಕ ಗಣೇಶ್ ಕೂಡ ಸಂಧಾನ ಮಾಡಿಕೊಳ್ಳಲು ಸಿದ್ಧರಾಗಿದ್ದರು. ಆದರೆ ಲಕ್ಷ್ಮಿ ಸಿಂಗ್ ಅವರ ಖಡಕ್ ಮಾತಿಗೆ ಕೈ ನಾಯಕರು ಏನು ಮಾತನಾಡದೇ ಈಗ ಮೌನಕ್ಕೆ ಜಾರಿದ್ದು ಮುಂದೆ ಏನು ಮಾಡಬೇಕೆಂಬ ಚಿಂತೆಯಲ್ಲಿದ್ದಾರೆ ಎನ್ನಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv