Tag: resort politics

  • ಕೈ ಶಾಸಕರು ಬಿಡದಿಗೆ ಶಿಫ್ಟ್ – ಬಿಜೆಪಿಯ ಪ್ಲಾನ್ ಬಿ ಆಟ ಇಂದಿನಿಂದ ಆರಂಭ?

    ಕೈ ಶಾಸಕರು ಬಿಡದಿಗೆ ಶಿಫ್ಟ್ – ಬಿಜೆಪಿಯ ಪ್ಲಾನ್ ಬಿ ಆಟ ಇಂದಿನಿಂದ ಆರಂಭ?

    ಬೆಂಗಳೂರು: ಹೇಗಾದ್ರೂ ಮಾಡಿ ಸರ್ಕಾರವನ್ನು ಬೀಳಿಸಿಯೇ ಬಿಡಬೇಕು ಅನ್ನೋ ಹಠಕ್ಕೆ ಬಿದ್ದಿರುವ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಕ್ಷಣಕ್ಕೊಂದು ದಾಳ ಉರುಳಿಸುತ್ತಲೇ ಇದ್ದಾರೆ. ಒಂದು ಪ್ಲ್ಯಾನ್ ಫ್ಲಾಪ್ ಆದ್ರೆ ಮತ್ತೊಂದು. ಈಗ ಮತ್ತೊಂದು ಅಸ್ತ್ರ ಅದೇ ಅವಿಶ್ವಾಸ ನಿರ್ಣಯ.

    ಹೌದು. ಈಗಾಗಲೇ ನಾಲ್ವರು ಶಾಸಕರು ಶುಕ್ರವಾರದ ಶಾಸಕಾಂಗ ಸಭೆಗೆ ಗೈರಾಗಿರುವ ಜೊತೆಗೆ ಇನ್ನೂ ಐವರು ಕಾಂಗ್ರೆಸ್‍ನಿಂದ ಜಂಪ್ ಆಗಬಹುದು ಎನ್ನುವ ನಿರೀಕ್ಷೆ ಬಿಜೆಪಿಯದ್ದು. ಬಜೆಟ್ ಅಧಿವೇಶನಕ್ಕೆ ಇನ್ನೂ 15 ದಿನವಿದೆ. ಫೆ. 6ರಿಂದ ಬಜೆಟ್ ಅಧಿವೇಶನ ನಡೆಯಲಿದ್ದು, ಈ ಅವಧಿಯ ಒಳಗಡೆ ಅವಿಶ್ವಾಸ ನಿರ್ಣಯ ಮಂಡಿಸುವ ವೇಳೆ ಸಂಖ್ಯಾ ಬಲವಿಲ್ಲದೇ ಸರ್ಕಾರ ಪತನವಾಗಲಿದೆ ಎನ್ನುವ ಲೆಕ್ಕಾಚಾರವನ್ನು ಬಿಜೆಪಿ ಹಾಕಿಕೊಂಡಿದೆ ಎನ್ನಲಾಗಿದೆ. ಇತ್ತ ಹರಿಯಾಣದ ರೆಸಾರ್ಟ್ ನಲ್ಲಿ ಉಳಿದುಕೊಂಡಿರುವ ಬಿಜೆಪಿ ಶಾಸಕರು ಇವತ್ತು ಬೆಂಗಳೂರಿಗೆ ವಾಪಸ್ ಆಗುವ ಸಾಧ್ಯತೆ ಇದೆ.

    ಪ್ಲಾನ್ ಬಿ ಏನು?
    1. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರಕ್ಕೆ ಬಹುಮತ ಇಲ್ಲ ಎಂದು ರಾಜ್ಯಪಾಲರಿಗೆ ದೂರು ಸಾಧ್ಯತೆ
    2. ಈ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಬಹುಮತ ಸಾಬೀತಿಗೆ ಸೂಚಿಸುವಂತೆ ರಾಜ್ಯಪಾಲರಿಗೆ ದುಂಬಾಲು ಸಾಧ್ಯತೆ
    3. ಭಾನುವಾರ ಅಥವಾ ಸೋಮವಾರ ರಾಜ್ಯಪಾಲರನ್ನ ಭೇಟಿಯಾಗಿ ಬಿಜೆಪಿ ನಿಯೋಗದಿಂದ ದೂರು ನಿರೀಕ್ಷೆ
    4. ಬಂಡೆದ್ದಿರುವ ನಾಲ್ವರು ಕಾಂಗ್ರೆಸ್ ಶಾಸಕರು ಇವತ್ತೇ ರಾಜೀನಾಮೆ ಕೊಡ್ತಾರಾ ಎಂಬುದೇ ಯಕ್ಷ ಪ್ರಶ್ನೆ
    5. ಶಾಸಕರು ರಾಜೀನಾಮೆ ಕೊಟ್ಟರೆ ಆಗ ಸರ್ಕಾರ ಬಹುಮತ ಇಲ್ಲ ಎಂದು ರಾಜ್ಯಪಾಲರಿಗೆ ಮನವರಿಕೆ ಮಾಡಬಹುದು


    6. ನಾಲ್ವರು ಶಾಸಕರು ರಾಜೀನಾಮೆ ಕೊಟ್ಟರೆ 3ನೇ ಹಂತದಲ್ಲಿ ಇನ್ನಷ್ಟು ಶಾಸಕರಿಂದ ರಾಜೀನಾಮೆ ಕೊಡಿಸಬಹುದು
    7. ಬಹುಮತ ಯಾಚನೆ ವೇಳೆ ಶಾಸಕರಿಗೆ ಪಕ್ಷದಿಂದ ವಿಪ್ ಜಾರಿ ಆಗುತ್ತೆ, ಆಗ ಅಡ್ಡ ಮತದಾನಕ್ಕೆ ಅವಕಾಶವಿಲ್ಲ
    8. ಒಂದು ವೇಳೆ ವಿಪ್ ಉಲ್ಲಂಘಿಸಿ ಪಕ್ಷಕ್ಕೆ ವಿರುದ್ಧವಾಗಿ ಮತ ಹಾಕಿದ್ರೆ ಪಕ್ಷಾಂತರ ನಿಷೇಧ ಕಾಯ್ದೆಯ ಅಡಿ ಅನರ್ಹ
    9. ಶಾಸಕರು ಅನರ್ಹಗೊಂಡು 6 ವರ್ಷ ನಿಷೇಧಕ್ಕೆ ಒಳಗಾದರೂ ಅವರ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡುವ ಭರವಸೆ

    ಪಕ್ಷಾಂತರ ಕಾಯ್ದೆ ಏನು ಹೇಳುತ್ತೆ?
    ಪಕ್ಷಾಂತರ ನಿಷೇಧ ಕಾಯ್ದೆಯಡಿ ಪಕ್ಷದ ಆದೇಶ ಉಲ್ಲಂಘಿಸಿದರೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತೆಗೆದು ಹಾಕಬಹುದು. ಆಗ ಸಹಜವಾಗಿಯೇ ಶಾಸಕರು ಅನರ್ಹರಾಗುತ್ತಾರೆ. ಅನರ್ಹ ಶಾಸಕರು ವಿಧಾನಸಭೆ ಅವಧಿ ಮುಗಿಯುವವರೆಗೆ ಬೇರೆ ಪಕ್ಷಕ್ಕೆ ಸೇರುವಂತಿಲ್ಲ. ಹಾಲಿ ವಿಧಾನಸಭೆ ಅವಧಿ ಮುಗಿಯುವವರೆಗೂ ಉಪ ಚುನಾವಣೆಯಲ್ಲೂ ಸ್ಪರ್ಧಿಸುವಂತಿಲ್ಲ. ಅನರ್ಹಗೊಂಡ ಶಾಸಕರು ಮಂತ್ರಿ ಸ್ಥಾನ ಸೇರಿದಂತೆ ಯಾವುದೇ ಸರ್ಕಾರಿ ಹುದ್ದೆಯನ್ನು ಹೊಂದುವಂತಿಲ್ಲ.

    ಅನರ್ಹಗೊಂಡ ದಿನದಿಂದ ಅವರ ಶಾಸಕತ್ವ ಅವಧಿ ಯಾವಾಗ ಮುಗಿಯುತ್ತೋ ಅಲ್ಲಿವರೆಗೆ ಹುದ್ದೆಗಳನ್ನು ಹೊಂದುವಂತಿಲ್ಲ. ಪಕ್ಷದ ಒಟ್ಟು ಶಾಸಕರಲ್ಲಿ 2/3ರಷ್ಟು ಶಾಸಕರು ಗುಂಪಾಗಿ ಪಕ್ಷಾಂತರ ಮಾಡಿದರಷ್ಟೇ ಅನರ್ಹತೆ ಅನ್ವಯಿಸಲ್ಲ. ಶಾಸಕರನ್ನು ಅನರ್ಹಗೊಳಿಸುವ ಅಧಿಕಾರ ವಿಧಾನಸಭೆ ಸ್ಪೀಕರ್ ಕೈಯಲ್ಲಿದ್ದು, ಅನರ್ಹತೆ ಪ್ರಶ್ನಿಸಿ ಸ್ಪೀಕರ್ ಅವರಿಗೂ ಮನವಿ, ಕಾನೂನು ಹೋರಾಟವನ್ನೂ ಮಾಡಬಹುದು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

     

  • ರಾಜ್ಯದಲ್ಲಿ ಬರಗಾಲ ಇರೋವಾಗ ರೆಸಾರ್ಟ್ ಗೆ ಹೋಗೋದು ಎಷ್ಟು ಸರಿ: ಜಗದೀಶ್ ಶೆಟ್ಟರ್

    ರಾಜ್ಯದಲ್ಲಿ ಬರಗಾಲ ಇರೋವಾಗ ರೆಸಾರ್ಟ್ ಗೆ ಹೋಗೋದು ಎಷ್ಟು ಸರಿ: ಜಗದೀಶ್ ಶೆಟ್ಟರ್

    ಬೆಂಗಳೂರು: ರಾಜ್ಯದಲ್ಲಿ ಬರಗಾಲವಿದೆ. ಈ ಸಮಯದಲ್ಲಿ ರೆಸಾರ್ಟ್ ಗೆ ಹೋಗುವುದು ಎಷ್ಟು ಸರಿ ಎಂದು ಬಿಜೆಪಿ ಮುಖಂಡ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

    ಸಿಎಲ್‍ಪಿ ಸಭೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್‍ನ ಹಣೆ ಬರಹ ಏನು ಎನ್ನುವುದು ಎಲ್ಲರಿಗೂ ಇಂದು ಗೊತ್ತಾಗಿದೆ. ಅವರಿಗೆ ತಮ್ಮ ಶಾಸಕರ ಮೇಲೆ ನಂಬಿಕೆಯೇ ಇಲ್ಲ. ಹೀಗಾಗಿ ರೆಸಾರ್ಟ್ ಗೆ ಅವರನ್ನು ಶಿಫ್ಟ್ ಮಾಡಿದ್ದಾರೆ ಎಂದು ವ್ಯಂಗ್ಯವಾಡಿದರು. ಇದನ್ನು ಓದಿ: ಗುರುಗ್ರಾಮದಲ್ಲಿ ಶಾಸಕರನ್ನು ಇಟ್ಟಿದ್ಯಾಕೆ? ಕೊನೆಗೂ ಉತ್ತರ ನೀಡಿದ ಬಿಎಸ್‍ವೈ

    ರಾಷ್ಟ್ರೀಯ ಪಕ್ಷವಾಗಿರುವ ಕಾಂಗ್ರೆಸ್ ಈ ರೀತಿ ತಮ್ಮ ಶಾಸಕರನ್ನು ರೆಸಾರ್ಟ್ ಗೆ ಕರೆದುಕೊಂಡು ಹೋಗುತ್ತಿರುವುದು ನಾಚಿಕೆಗೇಡು ಸಂಗತಿ. ಕಾಂಗ್ರೆಸ್‍ನಲ್ಲಿ ಎರಡು ಗುಂಪುಗಳಿದ್ದು, ಹೀಗಾಗಿ ಅವರ ಶಾಸಕರ ಮೇಲೆ ನಂಬಿಕೆ ಇಲ್ಲ. ಅವರಲ್ಲಿ ಒಗ್ಗಟ್ಟಿನ ಕೊರತೆಯಿದೆ. ಇದರಿಂದಾಗಿ ಸಿಎಲ್‍ಪಿ ಸಭೆ ಹೆಸರಿನಲ್ಲಿ ಶಾಸಕರನ್ನು ಕರೆಸಿಕೊಂಡು ರೆಸಾರ್ಟ್ ಗೆ ಕರೆದುಕೊಂಡು ಹೋಗುತ್ತಿದ್ದಾರೆ ಎಂದರು. ಇದನ್ನು ಓದಿ: ಬಿಜೆಪಿ ಕಿರುಕುಳದಿಂದಾಗಿ ರೆಸಾರ್ಟ್​ಗೆ ಹೋಗ್ತಿದ್ದೀವಿ: ದಿನೇಶ್ ಗುಂಡೂರಾವ್

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗುಜರಾತ್ ಕೈ ಶಾಸಕರು ತಂಗಿರೋ ರೆಸಾರ್ಟ್ ಗೆ 4 ದಿನ ಹಿಂದೆ 982 ಕೋಟಿ ದಂಡ ವಿಧಿಸಿದ್ದ ಸರ್ಕಾರ!

    ಗುಜರಾತ್ ಕೈ ಶಾಸಕರು ತಂಗಿರೋ ರೆಸಾರ್ಟ್ ಗೆ 4 ದಿನ ಹಿಂದೆ 982 ಕೋಟಿ ದಂಡ ವಿಧಿಸಿದ್ದ ಸರ್ಕಾರ!

    ಬೆಂಗಳೂರು: ರಾಜ್ಯ ಸರ್ಕಾರ ದಂಡ ವಿಧಿಸಿದ್ದ ರೆಸಾರ್ಟ್ ನಲ್ಲಿ ಈಗ ಗುಜರಾತ್ ಕೈ ಶಾಸಕರು ಉಳಿದುಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ.

    ಹೌದು. ಬಿಡದಿ ಬಳಿ ಇರುವ ಈಗಲ್‍ಟನ್ ರೆಸಾರ್ಟ್ ಗೆ ನಾಲ್ಕು ದಿನಗಳ ಹಿಂದೆಯಷ್ಟೇ ಪೆನಾಲ್ಟಿ ವಿಧಿಸಿ ಕ್ಯಾಬಿನೆಟ್ ತೀರ್ಮಾನ ಕೈಗೊಂಡಿತ್ತು. ಈಗ ಅದೇ ರೆಸಾರ್ಟ್ ನಲ್ಲಿ ಗುಜರಾತ್ ನ 42 ಶಾಸಕರು ವಾಸ್ತವ್ಯ ಹೂಡಿದ್ದಾರೆ.

    77 ಎಕರೆ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿದ್ದಕ್ಕೆ ಈಗಲ್‍ಟನ್ ರೆಸಾರ್ಟ್ ಮೇಲೆ ರಾಜ್ಯ ಸರ್ಕಾರ ಬರೋಬ್ಬರಿ 982 ಕೋಟಿ ರೂ. ದಂಡ ಹಾಕಿತ್ತು. ಸುಪ್ರೀಂಕೋರ್ಟ್ ಮಾರ್ಗದರ್ಶನದಂತೆ ಪೆನಾಲ್ಟಿ ಹಾಕಲು ಕ್ಯಾಬಿನೆಟ್ ತೀರ್ಮಾನಿಸಿದೆ. 982 ಕೋಟಿ ರೂ. ದಂಡ ಕಟ್ಟಬೇಕು ಇಲ್ಲದೇ ಇದ್ದರೆ 77 ಎಕ್ರೆ ಭೂಮಿಯನ್ನು ಸರ್ಕಾರಕ್ಕೆ ನೀಡಬೇಕು ಎಂದು ಕಾನೂನು ಸಚಿವ ಟಿ.ಬಿ. ಜಯಚಂದ್ರ ತಿಳಿಸಿದ್ದರು.

    2012ರಲ್ಲೂ ಬಿಜೆಪಿ ಸರ್ಕಾರ ಇದೇ ರೆಸಾರ್ಟ್‍ನ 72 ಎಕರೆ ಸಕ್ರಮಕ್ಕೆ 82 ಕೋಟಿ ರೂ. ಪೆನಾಲ್ಟಿ ಹಾಕಿತ್ತು. ಬಳಿಕ ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು.

    ಆಂಧ್ರಪ್ರದೇಶದ ಉದ್ಯಮಿ ಮೇದಾ ಅಶೋಕ್‍ಗೆ ಈ ರೆಸಾರ್ಟ್ ಸೇರಿದ್ದು, 2000ನೇ ಇಸ್ವಿಯಲ್ಲಿ ರೆಸಾರ್ಟ್ ನಿರ್ಮಾಣವಾಗಿತ್ತು. 2013ರಿಂದ ಅವರ ಮಕ್ಕಳಾದ ಮೇದಾ ಕಿರಣ್ ಕುಮಾರ್, ಮೇದಾ ಚೇತನ್ ಅವರು ರೆಸಾರ್ಟ್ ನಡೆಸುತ್ತಿದ್ದಾರೆ. ವಿಶೇಷವಾಗಿ 2006 ರಲ್ಲಿ ಹೆಚ್‍ಡಿ ಕುಮಾರಸ್ವಾಮಿ ಸಿಎಂ ಆಗುವಾಗ ಇದೇ ರೆಸಾರ್ಟ್‍ನಲ್ಲಿ ಜೆಡಿಎಸ್ ಶಾಸಕರು ಇದ್ದರು. ಈಗ ಗುಜರಾತ್ ಶಾಸಕರು ಇಲ್ಲಿ ನೆಲೆಯಾಗಿದ್ದರಿಂದ ಈ ರೆಸಾರ್ಟ್ ಗೆ ಈಗ ಶಾಸಕರ ರೆಸಾರ್ಟ್ ಎನ್ನುವ ಹೆಸರು ಬಂದಿದೆ.

    ಶುಲ್ಕ ಪಾವತಿ ಆಗುತ್ತೆ: ಮಾಧ್ಯಮಗಳಲ್ಲಿ ಈ ವಿಚಾರ ಪ್ರಕಟವಾದ ಬಳಿಕ ಕೈ ಶಾಸಕರನ್ನು ನೋಡಿಕೊಳ್ಳುವ ಉಸ್ತುವಾರಿಯನ್ನು ಹೊತ್ತಿರುವ ಇಂಧನ ಸಚಿವ ಡಿಕೆ ಶಿವಕುಮಾರ್ ಮಾತನಾಡಿ , ಶಾಸಕರು ತಂಗಿರುವ  ರೆಸಾರ್ಟ್ ವೆಚ್ಛವನ್ನು ಪಾವತಿಸಲಾಗುವುದು. ಗುಜರಾತ್ ಪ್ರದೇಶ ಕಾಂಗ್ರೆಸ್ ಕಮಿಟಿ ಎಲ್ಲ ಶುಲ್ಕವನ್ನು ಭರಿಸಲಿದೆ. ರೆಸಾರ್ಟ್ ನವರು ದಂಡವನ್ನು ಪಾವತಿ ಮಾಡಲೇಬೇಕು ಎಂದು ಅವರು ತಿಳಿಸಿದರು.

     

  • ಮತ್ತೆ ರೆಸಾರ್ಟ್ ರಾಜಕಾರಣ ಶುರು – ಬೆಂಗಳೂರಿಗೆ ಬರ್ತಿದ್ದಾರೆ ಗುಜರಾತ್ ‘ಕೈ’ ಶಾಸಕರು

    ಮತ್ತೆ ರೆಸಾರ್ಟ್ ರಾಜಕಾರಣ ಶುರು – ಬೆಂಗಳೂರಿಗೆ ಬರ್ತಿದ್ದಾರೆ ಗುಜರಾತ್ ‘ಕೈ’ ಶಾಸಕರು

    ಬೆಂಗಳೂರು: ಕರ್ನಾಟಕದ ಜನರು ಮತ್ತೊಂದು ರೆಸಾರ್ಟ್ ರಾಜಕಾರಣಕ್ಕೆ ಸಾಕ್ಷಿಯಾಗಬೇಕಿದೆ. ಈ ಹಿಂದೆ ಹಲವಾರು ಬಾರಿ ರಾಜ್ಯದ ರಾಜಕೀಯ ಪಕ್ಷಗಳ ರೆಸಾರ್ಟ್ ರಾಜಕಾರಣ ನೋಡಿದ್ದ ಜನರು ಇಂದು ಮಧ್ಯರಾತ್ರಿಯಿಂದ ಗುಜರಾತ್ ಕಾಂಗ್ರೆಸ್ ಶಾಸಕರ ರೆಸಾರ್ಟ್ ರಾಜಕಾರಣವನ್ನು ನೋಡಬೇಕಿದೆ.

    ಗುಜರಾತ್ ನಲ್ಲಿ ಶಾಸಕರ ಪಕ್ಷಾಂತರ ಪರ್ವಕ್ಕೆ ಕಾಂಗ್ರೆಸ್ ಬೆಚ್ಚಿ ಬಿದ್ದಿದೆ. ರಾಜ್ಯಸಭಾ ಚುನಾವಣೆ ವೇಳೆ ಕುದುರೆ ವ್ಯಾಪಾರ ನಡೆಯಬಹುದು ಎಂಬ ಭಯದಿಂದ ಗುಜರಾತ್ ನ 17 ಶಾಸಕರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಈಗಾಗಲೇ ಕಾಂಗ್ರೆಸ್ ನ 6 ಶಾಸಕರು ಬಿಜೆಪಿ ಸೇರ್ಪಡೆಯಾಗಿದ್ದಾರೆ.

    ಬೆಂಗಳೂರಿನ ರೆಸಾರ್ಟ್ ವೊಂದರಲ್ಲಿ 17 ಶಾಸಕರು ಆಗಮಿಸಲಿದ್ದು, ಇಂದು ರಾತ್ರಿ 1.30ರ ವೇಳೆಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ. ಅಲ್ಲಿಂದ ಎಲ್ಲರೂ ನೇರವಾಗಿ ಬೆಂಗಳೂರು ಹೊರವಲಯದಲ್ಲಿರುವ ರೆಸಾರ್ಟ್ ಗೆ ಆಗಮಿಸಲಿದ್ದಾರೆ ಎನ್ನಲಾಗಿದೆ. ಆರಂಭದಲ್ಲಿ 45 ಶಾಸಕರು ಬರುತ್ತಾರೆ ಎನ್ನಲಾಗಿದ್ದರೂ ಸದ್ಯಕ್ಕೆ 17 ಶಾಸಕರಿಗೆ ಮಾತ್ರ ವಿಮಾನ ಟಿಕೆಟ್ ಬುಕ್ ಆಗಿದೆ.

    ಪಕ್ಷಾಂತರ ಪರ್ವ ಆರಂಭವಾಗಿರುವ ಹಿನ್ನೆಲೆಯಲ್ಲಿ ಶಾಸಕರನ್ನು ಮುಂಬೈ ಅಥವಾ ಕರ್ನಾಟಕಕ್ಕೆ ಕಳುಹಿಸಲು ನಿರ್ಧರಿಸಲಾಗಿತ್ತು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಇರುವ ಕಾರಣ ಬೆಂಗಳೂರು ಸೇಫ್ ಎಂಬ ಕಾರಣಕ್ಕೆ 17 ಶಾಸಕರನ್ನು ಕರ್ನಾಟಕಕ್ಕೆ ಕಳುಹಿಸುತ್ತಿದ್ದಾರೆ ಎಂದು ವಿಶ್ವಸನೀಯ ಮೂಲಗಳು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿವೆ.

    ಗುಜರಾತ್ ನಿಂದ ಅಹಮದ್ ಪಟೇಲ್ ರಾಜ್ಯಸಭೆಗೆ ಕಾಂಗ್ರೆಸ್ ನಿಂದ ಸ್ಪರ್ಧಿಸುತ್ತಿದ್ದು ಇವರನ್ನು ಹೇಗಾದರೂ ಮಾಡಿ ಗೆಲ್ಲಿಸಲೇಬೇಕು ಎಂದು ಪಣತೊಟ್ಟು ಕಾಂಗ್ರೆಸ್ ಹೈಕಮಾಂಡ್ ರೆಸಾರ್ಟ್ ರಾಜಕೀಯದ ಮೊರೆ ಹೋಗಿದೆ.

     ಇದನ್ನೂ ಓದಿ: ಕಾಂಗ್ರೆಸ್ಸಿಗೆ ಈಗ ಗುಜರಾತ್‍ನಲ್ಲಿ ಕೈ ಶಾಸಕರಿಂದಲೇ ಶಾಕ್