Tag: ResortPolitics

  • ಕಾಂಗ್ರೆಸ್ ರೆಸಾರ್ಟ್ ರಾಜಕೀಯಕ್ಕೆ ಗುನ್ನಾ ಹೊಡೆಯಲು ಬಿಜೆಪಿ ಮಾಸ್ಟರ್ ಪ್ಲಾನ್!

    ಕಾಂಗ್ರೆಸ್ ರೆಸಾರ್ಟ್ ರಾಜಕೀಯಕ್ಕೆ ಗುನ್ನಾ ಹೊಡೆಯಲು ಬಿಜೆಪಿ ಮಾಸ್ಟರ್ ಪ್ಲಾನ್!

    ಬೆಂಗಳೂರು: ಶತಾಯ ಗತಾಯ ಮಾಡಿಯಾದರೂ ಸಮ್ಮಿಶ್ರ ಸರ್ಕಾರವನ್ನು ಕೆಡವಲೇಬೇಕೆಂದು ಪಣ ತೊಟ್ಟಿರುವ ಬಿಜೆಪಿ ಕಾಂಗ್ರೆಸ್ ರೆಸಾರ್ಟ್ ರಾಜಕೀಯಕ್ಕೆ ಗುನ್ನಾ ಹೊಡೆಯಲು ಮಾಸ್ಟರ್ ಪ್ಲಾನ್ ಮಾಡಿದೆ.

    ಹೌದು, ಇಬ್ಬರು ಪಕ್ಷೇತರರು ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದುಕೊಳ್ಳುವ ಮೂಲಕ ಆಪರೇಷನ್ ಕಮಲದ ಮೊದಲ ಹಂತ ಯಶಸ್ವಿಯಾಗಿದೆ. ಈಗ ಎರಡನೇ ಹಂತ ಆರಂಭಗೊಂಡಿದ್ದು, ಈ ಹಂತದಲ್ಲಿ ನಾಲ್ವರು ಅತೃಪ್ತ ಶಾಸಕರು ರಾಜೀನಾಮೆ ನೀಡುವ ಸಾಧ್ಯತೆಯಿದೆ. ರಾಜೀನಾಮೆ ನೀಡಲು ಶಾಸಕರು ಸಿದ್ದರಾಗಿದ್ದಾರೆ ಎನ್ನಲಾಗಿದ್ದು ಯಾವಾಗ ನೀಡುತ್ತಾರೆ ಎನ್ನುವುದೇ ಸದ್ಯದ ಕುತೂಹಲ.

    ಇಂದು ಅಥವಾ ಭಾನುವಾರ ನಾಲ್ವರು ರಾಜೀನಾಮೆ ನೀಡುವ ಸಾಧ್ಯತೆಯಿದೆ. ಕೈ ಅತೃಪ್ತ ಶಾಸಕರಿಂದ ರಾಜೀನಾಮೆ ಕೊಡಿಸಿ ಆಪರೇಷನ್ ಸ್ಟೇಜ್ 2 ಪೂರ್ಣಗೊಳಿಸಲು ಬಿಜೆಪಿ ಮುಂದಾಗಿದೆ ಎನ್ನಲಾಗಿದೆ. ಶಾಸಕರ ರಾಜೀನಾಮೆ ಕೊಟ್ಟ ಬಳಿಕ ಆಪರೇಷನ್ ಮೂರನೇ ಹಂತವನ್ನು ಆರಂಭಿಸಲಿದೆ. ಮೂರನೇ ಹಂತದಲ್ಲಿ ಮತ್ತಷ್ಟು ಅತೃಪ್ತ ಶಾಸಕರನ್ನು ಸೆಳೆಯುವ ಪ್ಲಾನ್ ಅನ್ನು ಬಿಜೆಪಿ ಹಾಕಿಕೊಂಡಿದೆ. ಒಟ್ಟು 7 ಮಂದಿ ಶಾಸಕರನ್ನು ತನ್ನತ್ತ ಸೆಳೆಯಲು ಪ್ಲಾನ್ ಮಾಡಿದೆ ಎನ್ನಲಾಗಿದೆ. ಆಪರೇಷನ್ 3 ಕಾರ್ಯಗತಗೊಳಿಸುವ ಮುನ್ನ ರಾಜ್ಯಪಾಲರು, ಸ್ಪೀಕರ್ ಮುಂದೆ ಬಿಜೆಪಿ ಶಾಸಕರ ಪರೇಡ್ ಮಾಡಿ ತಮ್ಮ ಬಲವನ್ನು ತೋರಿಸುವ ಸಾಧ್ಯತೆಯಿದೆ.

    ಜನವರಿ 14 ರಂದು ಮೂರು ಹಂತದಲ್ಲಿ ಬಿಜೆಪಿ ಆಪರೇಷನ್ ಕಮಲ ಮಾಡಲು ಮುಂದಾಗಿದೆ ಎನ್ನುವ ಎಕ್ಸ್ ಕ್ಲೂಸಿವ್ ಸುದ್ದಿಯನ್ನು ಪಬ್ಲಿಕ್ ಟಿವಿ ಮೊದಲು ಪ್ರಸಾರ ಮಾಡಿತ್ತು. ಶುಕ್ರವಾರ ಶಾಸಕಾಂಗ ಸಭೆಗೆ ವಿಪ್ ಜಾರಿಗೊಳಿಸುವ ಮೂಲಕ ಕಾಂಗ್ರೆಸ್ ತನ್ನ ಶಾಸಕರಿಗೆ ಬಿಸಿ ಮುಟ್ಟಿಸಿತ್ತು. ಆದರೆ ಈ ವಿಪ್ ಗೆ ತಲೆ ಕೆಡಿಸಿಕೊಳ್ಳದ ನಾಲ್ವರು ಶಾಸಕರು ಸಭೆಗೆ ಹಾಜರಾಗದೇ ನೇರವಾಗಿ ಬಂಡಾಯದ ಬಾವುಟ ಹಾರಿಸಿದ್ದಾರೆ. ಬಂಡಾಯ ಹಾರಿಸಿದ ಶಾಸಕರ ಜೊತೆಗೆ ಸಿಎಲ್‍ಪಿ ಸಭೆಯಲ್ಲಿ ಹಾಜರಾಗಿರುವ ಕೆಲ ಶಾಸಕರು ಜೊತೆಯಲ್ಲಿದ್ದಾರೆ ಎನ್ನುವ ಖಚಿತ ಮಾಹಿತಿ ತಿಳಿಯುತ್ತಿದ್ದಂತೆ ಕಾಂಗ್ರೆಸ್ ಎಲ್ಲ ಶಾಸಕರನ್ನು ಬಿಡದಿಯ ಈಗಲ್ ಟನ್ ರೆಸಾರ್ಟ್ ಗೆ ಶಿಫ್ಟ್ ಮಾಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಾಂಗ್ರೆಸ್ ರೆಸಾರ್ಟ್ ರಾಜಕೀಯಕ್ಕೆ ಗುನ್ನಾ ಹೊಡೆಯಲು ಬಿಜೆಪಿ ಮಾಸ್ಟರ್ ಪ್ಲಾನ್!

    ಕಾಂಗ್ರೆಸ್ ರೆಸಾರ್ಟ್ ರಾಜಕೀಯಕ್ಕೆ ಗುನ್ನಾ ಹೊಡೆಯಲು ಬಿಜೆಪಿ ಮಾಸ್ಟರ್ ಪ್ಲಾನ್!

    ಬೆಂಗಳೂರು: ಶತಾಯ ಗತಾಯ ಮಾಡಿಯಾದರೂ ಸಮ್ಮಿಶ್ರ ಸರ್ಕಾರವನ್ನು ಕೆಡವಲೇಬೇಕೆಂದು ಪಣ ತೊಟ್ಟಿರುವ ಬಿಜೆಪಿ ಕಾಂಗ್ರೆಸ್ ರೆಸಾರ್ಟ್ ರಾಜಕೀಯಕ್ಕೆ ಗುನ್ನಾ ಹೊಡೆಯಲು ಮಾಸ್ಟರ್ ಪ್ಲಾನ್ ಮಾಡಿದೆ.

    ಹೌದು, ಇಬ್ಬರು ಪಕ್ಷೇತರರು ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದುಕೊಳ್ಳುವ ಮೂಲಕ ಆಪರೇಷನ್ ಕಮಲದ ಮೊದಲ ಹಂತ ಯಶಸ್ವಿಯಾಗಿದೆ. ಈಗ ಎರಡನೇ ಹಂತ ಆರಂಭಗೊಂಡಿದ್ದು, ಈ ಹಂತದಲ್ಲಿ ನಾಲ್ವರು ಅತೃಪ್ತ ಶಾಸಕರು ರಾಜೀನಾಮೆ ನೀಡುವ ಸಾಧ್ಯತೆಯಿದೆ. ರಾಜೀನಾಮೆ ನೀಡಲು ಶಾಸಕರು ಸಿದ್ದರಾಗಿದ್ದಾರೆ ಎನ್ನಲಾಗಿದ್ದು ಯಾವಾಗ ನೀಡುತ್ತಾರೆ ಎನ್ನುವುದೇ ಸದ್ಯದ ಕುತೂಹಲ.

    ಇಂದು ಅಥವಾ ಭಾನುವಾರ ನಾಲ್ವರು ರಾಜೀನಾಮೆ ನೀಡುವ ಸಾಧ್ಯತೆಯಿದೆ. ಕೈ ಅತೃಪ್ತ ಶಾಸಕರಿಂದ ರಾಜೀನಾಮೆ ಕೊಡಿಸಿ ಆಪರೇಷನ್ ಸ್ಟೇಜ್ 2 ಪೂರ್ಣಗೊಳಿಸಲು ಬಿಜೆಪಿ ಮುಂದಾಗಿದೆ ಎನ್ನಲಾಗಿದೆ. ಶಾಸಕರ ರಾಜೀನಾಮೆ ಕೊಟ್ಟ ಬಳಿಕ ಆಪರೇಷನ್ ಮೂರನೇ ಹಂತವನ್ನು ಆರಂಭಿಸಲಿದೆ. ಮೂರನೇ ಹಂತದಲ್ಲಿ ಮತ್ತಷ್ಟು ಅತೃಪ್ತ ಶಾಸಕರನ್ನು ಸೆಳೆಯುವ ಪ್ಲಾನ್ ಅನ್ನು ಬಿಜೆಪಿ ಹಾಕಿಕೊಂಡಿದೆ. ಒಟ್ಟು 7 ಮಂದಿ ಶಾಸಕರನ್ನು ತನ್ನತ್ತ ಸೆಳೆಯಲು ಪ್ಲಾನ್ ಮಾಡಿದೆ ಎನ್ನಲಾಗಿದೆ. ಆಪರೇಷನ್ 3 ಕಾರ್ಯಗತಗೊಳಿಸುವ ಮುನ್ನ ರಾಜ್ಯಪಾಲರು, ಸ್ಪೀಕರ್ ಮುಂದೆ ಬಿಜೆಪಿ ಶಾಸಕರ ಪರೇಡ್ ಮಾಡಿ ತಮ್ಮ ಬಲವನ್ನು ತೋರಿಸುವ ಸಾಧ್ಯತೆಯಿದೆ.

    ಜನವರಿ 14 ರಂದು ಮೂರು ಹಂತದಲ್ಲಿ ಬಿಜೆಪಿ ಆಪರೇಷನ್ ಕಮಲ ಮಾಡಲು ಮುಂದಾಗಿದೆ ಎನ್ನುವ ಎಕ್ಸ್ ಕ್ಲೂಸಿವ್ ಸುದ್ದಿಯನ್ನು ಪಬ್ಲಿಕ್ ಟಿವಿ ಮೊದಲು ಪ್ರಸಾರ ಮಾಡಿತ್ತು. ಶುಕ್ರವಾರ ಶಾಸಕಾಂಗ ಸಭೆಗೆ ವಿಪ್ ಜಾರಿಗೊಳಿಸುವ ಮೂಲಕ ಕಾಂಗ್ರೆಸ್ ತನ್ನ ಶಾಸಕರಿಗೆ ಬಿಸಿ ಮುಟ್ಟಿಸಿತ್ತು. ಆದರೆ ಈ ವಿಪ್ ಗೆ ತಲೆ ಕೆಡಿಸಿಕೊಳ್ಳದ ನಾಲ್ವರು ಶಾಸಕರು ಸಭೆಗೆ ಹಾಜರಾಗದೇ ನೇರವಾಗಿ ಬಂಡಾಯದ ಬಾವುಟ ಹಾರಿಸಿದ್ದಾರೆ. ಬಂಡಾಯ ಹಾರಿಸಿದ ಶಾಸಕರ ಜೊತೆಗೆ ಸಿಎಲ್‍ಪಿ ಸಭೆಯಲ್ಲಿ ಹಾಜರಾಗಿರುವ ಕೆಲ ಶಾಸಕರು ಜೊತೆಯಲ್ಲಿದ್ದಾರೆ ಎನ್ನುವ ಖಚಿತ ಮಾಹಿತಿ ಳಿಯುತ್ತಿದ್ದಂತೆ ಕಾಂಗ್ರೆಸ್ ಎಲ್ಲ ಶಾಸಕರನ್ನು ಬಿಡದಿಯ ಈಗಲ್ ಟನ್ ರೆಸಾರ್ಟ್ ಗೆ ಶಿಫ್ಟ್ ಮಾಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೋಟಿ ಆಮಿಷ ಒಡ್ಡಿದ್ದರೂ ಪಕ್ಷದ ಜೊತೆ ಇದ್ದಿದ್ದಕ್ಕೆ ಖುಷಿ : ಅತೃಪ್ತರಿಗೆ ಮಾಜಿ ಸಿಎಂ ರಾಜಕೀಯ ಪಾಠ

    ಕೋಟಿ ಆಮಿಷ ಒಡ್ಡಿದ್ದರೂ ಪಕ್ಷದ ಜೊತೆ ಇದ್ದಿದ್ದಕ್ಕೆ ಖುಷಿ : ಅತೃಪ್ತರಿಗೆ ಮಾಜಿ ಸಿಎಂ ರಾಜಕೀಯ ಪಾಠ

    ಬೆಂಗಳೂರು: `ಆಪರೇಷನ್ ಕಮಲ’ ಭೀತಿಯಲ್ಲಿ ರಾತ್ರೋರಾತ್ರಿ ರೆಸಾರ್ಟ್ ಸೇರಿಕೊಂಡಿರುವ ಕೈ ಶಾಸಕರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯ ಪಾಠ ಮಾಡಿದ್ದಾರೆ.

    ಕಾಂಗ್ರೆಸ್ ಶಾಸಕಾಂಗ ಸಭೆ ಬಳಿಕ ವಿಧಾನಸೌಧದಿಂದ ಸೀದಾ ಬಿಡದಿಯ ಈಗಲ್‍ಟನ್ ರೆಸಾರ್ಟ್ ನಲ್ಲಿ ಕೈ ಶಾಸಕರು ವಾಸ್ತವ್ಯ ಹೂಡಿದ್ದಾರೆ. ಸಚಿವ ಡಿಕೆ ಶಿವಕುಮಾರ್ ಅವರ ತಮ್ಮ ಸಂಸದ ಡಿಕೆ ಸುರೇಶ್‍ಗೆ ಕೈ ಶಾಸಕರನ್ನು ಕಾಯುವ ಹೊಣೆಯನ್ನು ಕಾಂಗ್ರೆಸ್ ಒಪ್ಪಿಸಿದೆ. ಶುಕ್ರವಾರ ರಾತ್ರಿ ಅತೃಪ್ತ ಶಾಸಕರನ್ನು ಕೂರಿಸಿಕೊಂಡು ಊಟದ ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯ ಪಾಠವನ್ನು ಮಾಡಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

    ಪಾಠದಲ್ಲಿ ಏನಿತ್ತು?
    ನಾವು ಹೇಳುವ ತನಕ ನೀವು ರೆಸಾರ್ಟ್ ನಲ್ಲೇ ಇರಬೇಕಾಗುತ್ತದೆ. ಸದ್ಯ ರಾಜ್ಯದಲ್ಲಿ ರಾಜಕೀಯ ಪರಿಸ್ಥಿತಿ ಸರಿಯಿಲ್ಲ. ಒಂದು ವೇಳೆ ನೀವು ಈಗ ಇಲ್ಲಿಂದ ಹೊರಗೆ ಹೋದರೆ ಮತ್ತೆ ಪಕ್ಷಕ್ಕೆ ಕಷ್ಟ ಆಗುತ್ತದೆ. ಹೀಗಾಗಿ ಆಪರೇಷನ್ ಕಮಲ ತಣ್ಣಗಾಗುವರೆಗೆ ರೆಸಾರ್ಟ್ ನಲ್ಲೇ ಉಳಿದುಕೊಳ್ಳಬೇಕು. ನಮ್ಮ ಶಾಸಕರ ರಾಜೀನಾಮೆ ಕೊಡಿಸಲು ಬಿಜೆಪಿಯವರು ಯತ್ನಿಸಿದ್ದಾರೆ. ಅತೃಪ್ತ ಶಾಸಕರಿಗೆ ಬಿಜೆಪಿಯವರು ಕೋಟಿ-ಕೋಟಿ ಆಮಿಷ ಒಡ್ಡಿ ಸೆಳೆಯಲು ಯತ್ನಿಸಿದ್ದಾರೆ. ಆದರೂ ಆಮಿಷಕ್ಕೆ ಒಳಗಾಗದೇ ನೀವೆಲ್ಲರೂ ಪಕ್ಷದ ಜೊತೆಗೆ ಇರುವುದಕ್ಕೆ ಖುಷಿಯಾಗುತ್ತಿದೆ.

    ಭಾನುವಾರ ಮುಕ್ತಾಯ?: ಬಿಜೆಪಿ ಶಾಸಕರು ಶನಿವಾರವೇ ಬೆಂಗಳೂರಿಗೆ ಬಂದರೂ ಕಾಂಗ್ರೆಸ್ ಶಾಸಕರ ರೆಸಾರ್ಟ್ ವಾಸ್ತವ್ಯ ಇವತ್ತಿಗೆ ಮುಗಿಯುವುದಿಲ್ಲ. ಬೆಳಗ್ಗೆ 11 ಗಂಟೆ ನಂತರ ಶಾಸಕರ ಜೊತೆ ವೇಣುಗೋಪಾಲ್ ಹಾಗೂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಎಲ್ಲಾ ಬಿಜೆಪಿ ಶಾಸಕರು ಇಂದು ಬೆಂಗಳೂರಿಗೆ ತಲುಪಿದ್ದು ಖಚಿತವಾದರೆ, ಭಾನುವಾರ ಮಧ್ಯಾಹ್ನದ ಬಳಿಕ ಕಾಂಗ್ರೆಸ್ ಶಾಸಕರು ರೆಸಾರ್ಟ್ ಹೊರಡುವ ಸಾಧ್ಯತೆಯಿದೆ.

    ಬಹುತೇಕ ಎಲ್ಲಾ ಸಚಿವರಿಗೆ ರೆಸಾರ್ಟ್ ನಲ್ಲೇ ಇರಬೇಕು ಎಂಬ ಯಾವುದೇ ಷರತ್ತು ಇಲ್ಲ. ಬೆಂಗಳೂರಿನ ಹೆಚ್ಚಿನ ಶಾಸಕರು ರಾತ್ರಿಯೇ ತಮ್ಮ ತಮ್ಮ ನಿವಾಸಕ್ಕೆ ತೆರಾಳಿದ್ದಾರೆ. ಸದ್ಯ ಈಗ 48 ಶಾಸಕರು ಮಾತ್ರ ಈಗಲ್ ಟನ್ ರೆಸಾರ್ಟ್ ನಲ್ಲಿದ್ದು, ಉಳಿದ ಶಾಸಕ ಹಾಗೂ ಸಚಿವರು ಬೆಳಗ್ಗಿನ ಸಭೆಗೆ ರೆಸಾರ್ಟ್ ಗೆ ಆಗಮಿಸಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv