Tag: retaining wall

  • ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ರಿಟೈನಿಂಗ್ ವಾಲ್ ನಿರ್ಮಾಣ- ಸ್ಥಳ ಪರಿಶೀಲಿಸಿದ ಪ್ರತಾಪ್ ಸಿಂಹ

    ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ರಿಟೈನಿಂಗ್ ವಾಲ್ ನಿರ್ಮಾಣ- ಸ್ಥಳ ಪರಿಶೀಲಿಸಿದ ಪ್ರತಾಪ್ ಸಿಂಹ

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಗಾಲದಲ್ಲಿ ಉಂಟಾಗಬಹುದಾದ ಗುಡ್ಡ ಕುಸಿತವನ್ನು ತಪ್ಪಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ-275ರ ಸಂಪಾಜೆ ರಸ್ತೆಯಲ್ಲಿ ಸುಮಾರು 22 ಕಡೆ ರಿಟೈನಿಂಗ್ ವಾಲ್ ನಿರ್ಮಾಣ ಮಾಡಲು ಉದ್ದೇಶಿಸಿದ್ದು, ಈ ಸ್ಥಳವನ್ನು ಇಂದು ಸಂಸದ ಪ್ರತಾಪ್ ಸಿಂಹ ಅವರು ಶಾಸಕ ಕೆ.ಜಿ.ಬೋಪಯ್ಯ, ರಾಷ್ಟ್ರೀಯ ಹೆದ್ದಾರಿ ಕರ್ನಾಟಕ ವಿಭಾಗದ ಮುಖ್ಯ ಎಂಜಿನಿಯರ್ ವಿಜಯ ಕುಮಾರ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು.

    ಬಳಿಕ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಕಳೆದ ಮೂರು ವರ್ಷಗಳಿಂದ ಸುರಿದ ಭಾರೀ ಮಳೆಯಿಂದ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಭೂ ಕುಸಿತ ಸಂಭವಿಸಿ, ಅಪಾರ ಹಾನಿ ಸಂಭವಿಸಿದ್ದು, ರಾಷ್ಟ್ರೀಯ ಹೆದ್ದಾರಿ 275ರ ಮಡಿಕೇರಿಯಿಂದ ಸಂಪಾಜೆ ವರೆಗಿನ ಕೆಲವು ಪ್ರದೇಶಗಳಲ್ಲಿ ಭೂಕುಸಿತ ಉಂಟಾಗಿ ರಸ್ತೆ ಸಂಪರ್ಕ ಕಡಿತಗೊಂಡು ಅನೇಕ ಸಮಸ್ಯೆಗಳು ಉಂಟಾಗಿತ್ತು. ಈ ಸಂಬಂಧ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಭೂ ಕುಸಿತವಾಗುವ ಸ್ಥಳಗಳಲ್ಲಿ ರಿಟೈನಿಂಗ್ ವಾಲ್‍ಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದ್ದು, ಈಗಾಗಲೇ 59 ಕೋಟಿ ರೂ. ವೆಚ್ಚದಲ್ಲಿ 18 ಕಡೆಗಳಲ್ಲಿ ರಿಟೈನಿಂಗ್ ವಾಲ್‍ಗಳನ್ನು ನಿರ್ಮಿಸುವ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.

    ಪ್ರಸಕ್ತ ಸಾಲಿನ ಜೂನ್ ತಿಂಗಳಲ್ಲಿ ಸುರಿದ ಮಳೆಗೆ ಮತ್ತೆ ಕೆಲವು ಕಡೆ ಭೂಕುಸಿತವಾಗಿದ್ದು, ಈ ಸಂಬಂಧ ಅಗತ್ಯವಿರುವ ಕಡೆ ರಿಟೈನಿಂಗ್ ವಾಲ್ ನಿರ್ಮಿಸಲು ಜಾಗ ಗುರುತಿಸಲಾಗಿದ್ದು, ಈ 22 ಕಡೆಗಳಲ್ಲಿ ರಿಟೈನಿಂಗ್ ವಾಲ್ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸುವ ಸಂಬಂಧ ರಾಷ್ಟ್ರೀಯ ಹೆದ್ದಾರಿಯ ಕರ್ನಾಟಕ ವಿಭಾಗದ ಮುಖ್ಯ ಎಂಜಿನಿಯರ್ ವಿಜಯ ಕುಮಾರ್ ಅವರ ಜೊತೆ ಸ್ಥಳ ಪರಿಶೀಲನೆ ನಡೆಸಲಾಗಿದೆ ಎಂದರು.

  • ಭಾರೀ ಮಳೆಗೆ ಮಂಗ್ಳೂರು ವಿಮಾನ ನಿಲ್ದಾಣದ ರನ್‍ವೇ ತಡೆಗೋಡೆ ಕುಸಿತ!

    ಭಾರೀ ಮಳೆಗೆ ಮಂಗ್ಳೂರು ವಿಮಾನ ನಿಲ್ದಾಣದ ರನ್‍ವೇ ತಡೆಗೋಡೆ ಕುಸಿತ!

    ಮಂಗಳೂರು: ಇಂದು ಬೆಳಿಗ್ಗೆ ಸುರಿದ ಭಾರೀ ಮಳೆಗೆ ಮಂಗಳೂರಿನ ಟೇಬಲ್ ಟಾಪ್ ವಿಮಾನ ನಿಲ್ದಾಣದ ರನ್ ವೇ ತಡೆಗೋಡೆ ಕುಸಿದು ಬಿದ್ದಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ರನ್ ವೇ ಸುರಕ್ಷತೆಯ ಬಗ್ಗೆ ಅಧಿಕಾರಿಗಳು ಚಿಂತನೆ ನಡೆಸಿದ್ದು, ಮುಂದಿನ ದಿನಗಳಲ್ಲಿ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಸೂಕ್ತ ರೀತಿಯ ಕ್ರಮ ಕೈಗೊಂಡು ಉತ್ತಮ ತಡೆಗೋಡೆ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದ್ದಾರೆ.

    ಮಂಗಳೂರು ವಿಮಾನ ನಿಲ್ದಾಣ ಟೇಬಲ್ ಟಾಪ್ ವಿಮಾನ ನಿಲ್ದಾಣವಾಗಿದ್ದು, ಲ್ಯಾಂಡಿಂಗ್ ಮತ್ತು ಟೇಕಾಫ್ ವೇಳೆ ಸ್ವಲ್ಪ ಎಚ್ಚರ ತಪ್ಪಿದರೂ ಅಪಾಯ ಕಟ್ಟಿಟ್ಟ ಬುತ್ತಿ. 2010 ರಲ್ಲಿ ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನ ಲ್ಯಾಂಡಿಂಗ್ ವೇಳೆ ರನ್ ವೇ ಬಿಟ್ಟು ಮುಂದೆ ಲ್ಯಾಂಡ್ ಆದ ಪರಿಣಾಮ ಪ್ರಪಾತಕ್ಕೆ ಬಿದ್ದು 158 ಪ್ರಯಾಣಿಕರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಸುತ್ತಲೂ ಭದ್ರವಾದ ತಡೆಗೋಡೆಗಳನ್ನು ನಿರ್ಮಾಣ ಮಾಡಿತ್ತು. ಇಂದು ಸುರಿದ ಭಾರೀ ಮಳೆಗೆ ಭೂ ಕುಸಿತದಿಂದ ರನ್ ವೇ ಸಮೀಪದ ತಡೆಗೋಡೆ ಕುಸಿದು ಬಿದ್ದಿದೆ.

    ಏನಿದು ಟೇಬಲ್ ಟಾಪ್ ವಿಮಾನ ನಿಲ್ದಾಣ?
    ಸುತ್ತಲೂ ಆಳ ಕಣಿವೆಯಿಂದ ಕೂಡಿ, ಬೆಟ್ಟದ ತುದಿಯಲ್ಲಿ ರನ್ ವೇ ಇರುವ ನಿಲ್ದಾಣಗಳನ್ನು ಟೇಬಲ್ ಟಾಪ್ ವಿಮಾನ ನಿಲ್ದಾಣ ಎಂದು ಗುರುತಿಸಲಾಗಿದೆ. ಮಂಗಳೂರು ಹೊರತು ಪಡಿಸಿ ದೇಶದಲ್ಲಿ ಕೋಝಿಕ್ಕೋಡು ಮತ್ತು ಲೆಂಗ್‍ಪುಯಿನಲ್ಲಿ ಈ ರೀತಿಯ ವಿಮಾನ ನಿಲ್ದಾಣಗಳನ್ನು ಕಾಣಬಹುದು.