Tag: Retire

  • ಧೋನಿ ಆಸೆಯಂತೆ ನಡೆಯಲಿದೆ ನಿವೃತ್ತಿ ಪಂದ್ಯ – ಚೆನ್ನೈನಲ್ಲಿ ಐಪಿಎಲ್‍ಗೆ ಗುಡ್ ಬೈ ಹೇಳುವುದು ಖಚಿತ

    ಧೋನಿ ಆಸೆಯಂತೆ ನಡೆಯಲಿದೆ ನಿವೃತ್ತಿ ಪಂದ್ಯ – ಚೆನ್ನೈನಲ್ಲಿ ಐಪಿಎಲ್‍ಗೆ ಗುಡ್ ಬೈ ಹೇಳುವುದು ಖಚಿತ

    ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ತವರಿನ ಅಭಿಮಾನಿಗಳ ಮುಂದೆ ಐಪಿಎಲ್‍ಗೆ (IPL) ನಿವೃತ್ತಿ ಘೋಷಿಸುವುದು ಬಹುತೇಕ ಖಚಿತಗೊಂಡಿದೆ.

    15ನೇ ಆವೃತ್ತಿ ಐಪಿಎಲ್ ಧೋನಿಯ ಕೊನೆಯ ಆವೃತ್ತಿ ಎಂದು ಹೇಳಲಾಗಿತ್ತು. ಆದರೆ ಧೋನಿ ನಾನು 16ನೇ ಆವೃತ್ತಿ ಐಪಿಎಲ್ ಆಡುವುದಾಗಿ ಹೇಳಿದ್ದರು. ಜೊತೆಗೆ ಒಂದು ಮಹತ್ತರವಾದ ಆಸೆಯನ್ನು ವ್ಯಕ್ತಪಡಿಸಿದ್ದರು. ಇದೀಗ ಆ ಆಸೆ ನೆರವೇರುವ ಸಾಧ್ಯತೆ ಹೆಚ್ಚಿದೆ. ಇದನ್ನೂ ಓದಿ: 2022ರಲ್ಲಿ ಭಾರತ ಆಡಿದ್ದು 27 ಟಿ20 ಪಂದ್ಯ – ಬುಮ್ರಾ ಆಡಿದ್ದು ಬರೀ 3 ಪಂದ್ಯ!

    ಧೋನಿ ಟೀಂ ಇಂಡಿಯಾ ಬಳಿಕ ಅತೀ ಹೆಚ್ಚು ಭಾವನಾತ್ಮಕವಾಗಿ ಸಂಬಂಧವನ್ನು ಹೊಂದಿರುವ ತಂಡವೆಂದರೆ ಅದು ಚೆನ್ನೈ ಸೂಪರ್ ಕಿಂಗ್ಸ್ ತಂಡ. ಐಪಿಎಲ್ 2008ರಲ್ಲಿ ಆರಂಭವಾದ ಬಳಿಕ ಚೆನ್ನೈ ಪರ ಆಡುತ್ತಿರುವ ಧೋನಿ ವಿಶೇಷವಾದ ಸಂಬಂಧವನ್ನು ಚೆನ್ನೈ ತಂಡ ಮತ್ತು ತಮಿಳುನಾಡಿನ ಜನರೊಂದಿಗೆ ಹೊಂದಿದ್ದಾರೆ. ಹಾಗಾಗಿ ತಮ್ಮ ಕೊನೆಯ ಪಂದ್ಯವನ್ನು ಚೆನ್ನೈ ನಗರದ ಎಂ ಚಿದಂಬರಂ ಸ್ಟೇಡಿಯಂನಲ್ಲಿ ತಮ್ಮ ಅಚ್ಚು-ಮೆಚ್ಚಿನ ಪ್ರೇಕ್ಷಕರ ಮುಂದೆ ಆಡಿ ನಿವೃತ್ತಿ ಘೋಷಿಸುವ ಆಸೆಯನ್ನು ಧೋನಿ ವ್ಯಕ್ತಪಡಿಸಿದ್ದರು. ನನ್ನ ಕೊನೆಯ ತವರಿನ ಏಕದಿನ ಪಂದ್ಯ ರಾಂಚಿಯಲ್ಲೇ ನಡೆದಿದ್ದರೆ ನನ್ನ ಕೊನೆಯ ಟಿ20 ಪಂದ್ಯ ಚೆನ್ನೈನಲ್ಲೇ ಇರಬೇಕೆಂದು ಆಶಿಸುತ್ತೇನೆ. ಇದು ಮುಂದಿನ ವರ್ಷ ಆಗಿರುತ್ತಾ ಅಥವಾ ಮುಂದಿನ ಐದು ವರ್ಷದಲ್ಲಿ ಆಗುತ್ತಾ ನಿಜಕ್ಕೂ ಗೊತ್ತಿಲ್ಲ ಎಂದು ಈ ಹಿಂದೆ ಹೇಳಿದ್ದರು. ಇದನ್ನೂ ಓದಿ: ಓಡೆನ್ ಸ್ಮಿತ್, ಬೇಬಿ ಎಬಿಡಿ ಹೊಡಿಬಡಿ ಆಟ – ತಲಾ ಆರಾರು ಎಸೆತ ಐದೈದು ಸಿಕ್ಸ್ 60 ರನ್‌

    ಇದೀಗ ಧೋನಿ ಆಸೆಯಂತೆ ಅವರ ಕೊನೆಯ ಪಂದ್ಯ ಚೆನ್ನೈನಲ್ಲೇ ನಡೆಯುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ 2023ರ ಐಪಿಎಲ್ ಪಂದ್ಯಗಳು ತವರಿನ ಚರಣದ ಪಂದ್ಯಗಳೊಂದಿಗೆ ನಡೆಯಲಿದೆ ಎಂದು ಬಿಸಿಸಿಐ (BCCI) ಅಧ್ಯಕ್ಷ ಸೌರವ್ ಗಂಗೂಲಿ (Sourav Ganguly) ಸ್ಪಷ್ಟಪಡಿಸಿದ್ದಾರೆ. ಈ ಸುದ್ದಿ ಹೊರಬಿದ್ದ ಬಳಿಕ ಧೋನಿ ನಿವೃತ್ತಿ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ ಎಂಬುದು ಬಹತೇಕ ಖಚಿಗೊಂಡಿದೆ. ಇದು ಧೋನಿ ಅಭಿಮಾನಿಗಳಲ್ಲಿ ಸಂತಸ ತಂದಿದೆ.

    2019ರ ಬಳಿಕ ಧೋನಿ ಚೆನ್ನೈನಲ್ಲಿ ಆಡಿಲ್ಲ. ಕೊರೊನಾದಿಂದಾಗಿ (Corona) 2020ರ ಐಪಿಎಲ್ ಯುಎಇನಲ್ಲಿ (UAE) ನಡೆದರೆ, 2021ರ ಐಪಿಎಲ್ ಮೊದಲ ಚರಣ ಭಾರತದಲ್ಲಿ ನಡೆದರೆ, ಎರಡನೇ ಚರಣ ಯುಎಇನಲ್ಲಿ ನಡೆದಿತ್ತು. 2022ರ ಐಪಿಎಲ್ ಮುಂಬೈ ಮತ್ತು ಪುಣೆ ನಗರದಲ್ಲಿ ಮಾತ್ರ ನಡೆದಿತ್ತು. ಇದೀಗ 2023ರ ಐಪಿಎಲ್ ಎಲ್ಲಾ ನಗರದಲ್ಲೂ ನಡೆಯಲಿದ್ದು, ಪ್ರತಿ ತಂಡಗಳಿಗೆ ತವರಿನ ಪಂದ್ಯ ಕೂಡ ಸಿಗಲಿದೆ. ಹಾಗಾಗಿ ಧೋನಿ ಮತ್ತೆ ತವರಿನ ಅಭಿಮಾನಿಗಳ ಸಮ್ಮುಖದಲ್ಲಿ ಆಡುವ ಬಯಕೆ ಈಡೇರಲಿದೆ. ಇದನ್ನೂ ಓದಿ: ಹಸುಗಳನ್ನು ರಕ್ಷಿಸಿ – ಲಂಪಿ ವೈರಸ್ ಬಗ್ಗೆ ಕಳವಳ ವ್ಯಕ್ತಪಡಿಸಿದ ಶಿಖರ್ ಧವನ್

    ಧೋನಿ ನಾಯಕತ್ವದಲ್ಲಿ ಚೆನ್ನೈ ತಂಡ 2010, 2011, 2018, 2021 ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. 2008, 2012, 2013, 2015, 2019ರಲ್ಲಿ ರನ್ನರ್ ಅಪ್ ಆಗಿ ಹೊರಹೊಮ್ಮಿತ್ತು. ಧೋನಿ ಆರಂಭಿಕ ಆವೃತ್ತಿಯಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆಡಿರುವುದು ವಿಶೇಷ. ಮಧ್ಯದಲ್ಲಿ ಚೆನ್ನೈ ತಂಡ ಐಪಿಎಲ್‍ನಲ್ಲಿ ಬ್ಯಾನ್ ಆದಾಗ ಮಾತ್ರ ಧೋನಿ ಇತರ ಫ್ರಾಂಚೈಸ್ ಪರ ಆಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಟಿ20 ವಿಶ್ವಕಪ್‌ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ: ಡ್ವೇನ್‌ ಬ್ರಾವೋ

    ಟಿ20 ವಿಶ್ವಕಪ್‌ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ: ಡ್ವೇನ್‌ ಬ್ರಾವೋ

    ದುಬೈ: ಟಿ20 ವಿಶ್ವಕಪ್‌ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳುವುದಾಗಿ ವೆಸ್ಟ್‌ ಇಂಡೀಸ್‌ ಆಲ್‌ರೌಂಡರ್‌ ಡ್ವೇನ್‌ ಬ್ರಾವೋ ಘೋಷಿಸಿದ್ದಾರೆ.

    ಶ್ರೀಲಂಕಾ ವಿರುದ್ಧ ಗುರುವಾರ ನಡೆದ ಪಂದ್ಯದಲ್ಲಿ ಸೋಲನುಭವಿಸಿದ ವೆಸ್ಟ್‌ ಇಂಡೀಸ್‌ ತಂಡ ಸೆಮಿಫೈನಲ್‌ನಿಂದ ಹೊರಬಿದ್ದಿದೆ. ಇದನ್ನೂ ಓದಿ: ಟೀಂ ಇಂಡಿಯಾ ಸೆಮಿಫೈನಲ್ ಕನಸು ನನಸಾಗಲು ಇದೊಂದೇ ಮಾರ್ಗ

    ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬ್ರಾವೋ, ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಲು ಇದು ಸೂಕ್ತ ಸಮಯ ಎಂದೆನಿಸಿದೆ. ನಾನು ಉತ್ತಮ ವೃತ್ತಿ ಜೀವನ ಹೊಂದಿದ್ದೇನೆ. 18 ವರ್ಷಗಳ ಕಾಲ ವೆಸ್ಟ್‌ ಇಂಡೀಸ್‌ ತಂಡವನ್ನು ಪ್ರತಿನಿಧಿಸಿದ ಸಂದರ್ಭದಲ್ಲಿ ಹಲವಾರು ಏಳು ಬೀಳುಗಳನ್ನು ಕಂಡಿದ್ದೇನೆ. ಇದನ್ನೂ ಓದಿ: ಅಮೆರಿಕಾದಲ್ಲಿ ಲಕ್ಷ್ಮೀ ಪೂಜೆ ಮಾಡಿದ ಚೋಪ್ರಾ-ನಿಕ್

    2006ರಲ್ಲಿ ಬ್ರಾವೋ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. ಈವರೆಗೆ 90 ಪಂದ್ಯಗಳನ್ನು ಆಡಿದ್ದಾರೆ. ಬ್ರಾವೋ 2018ರಲ್ಲೂ ನಿವೃತ್ತಿ ಘೋಷಿಸಿದ್ದರು. ಆದರೆ 2019ರಲ್ಲಿ ನಿವೃತ್ತಿ ವಾಪಸ್‌ ಪಡೆದು ತಂಡಕ್ಕೆ ಮರಳಿದ್ದರು. 2012, 2016ರ ಟಿ20 ವಿಶ್ವಕಪ್‌ ಗೆದ್ದ ವೆಸ್ಟ್‌ ಇಂಡೀಸ್‌ ತಂಡದಲ್ಲಿ ಬ್ರಾವೋ ಪ್ರಮುಖ ಪಾತ್ರ ವಹಿಸಿದ್ದರು.

  • ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ ಗೌತಮ್ ಗಂಭೀರ್

    ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ ಗೌತಮ್ ಗಂಭೀರ್

    ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ಓಪನಿಂಗ್ ಬ್ಯಾಟ್ಸ್‌ಮನ್ ಗೌತಮ್ ಗಂಭೀರ್ ಎಲ್ಲಾ ಮಾದರಿಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ್ದಾರೆ.

    ಗೌತಮ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ‘ಭಾರವಾದ ಹೃದಯದಿಂದ ಅತ್ಯಂತ ಕಠಿಣವಾದ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದು, ಭಾರವಾದ ಹೃದಯದ ಮೂಲಕವೇ ನನ್ನ ನಿರ್ಧಾರವನ್ನು ಘೋಷಿಸುತ್ತಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.

    ನಿವೃತ್ತಿ ಕುರಿತು ಆಂಗ್ಲ ಸುದ್ದಿವಾಹಿನಿಯೊಂದಿಗೆ ಮಾತನಾಡಿದ ಅವರು, ಸತತವಾಗಿ 15 ವರ್ಷ ಭಾರತ ದೇಶಕ್ಕಾಗಿ ನಾನು ಕ್ರಿಕೆಟ್ ಆಡಿದ್ದೇನೆ. ಈ ಸುಂದರವಾದ ಆಟದಿಂದ ಈಗ ನಿವೃತ್ತಿ ಬಯಸುತ್ತಿದ್ದೇನೆ. ನನ್ನ ಕೊನೆಯ ಪಂದ್ಯವನ್ನು ಡಿಸೆಂಬರ್ 6 ರಂದು ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ನಡೆಯಲಿರುವ ಆಂಧ್ರ ವಿರುದ್ಧದ ರಣಜಿ ಪಂದ್ಯದಲ್ಲಿ ಆಡಲಿದ್ದೇನೆ. ಒಬ್ಬ ಬ್ಯಾಟ್ಸ್‌ಮನ್ ಆಗಿ ಸಮಯಕ್ಕೆ ತುಂಬಾ ಮಹತ್ವವನ್ನು ನೀಡಿದ್ದೇನೆ. ಈಗ ನನಗೆ ಸರಿಯಾದ ಸಮಯ ಬಂದಿದೆ ಎಂದು ಹೇಳಿದ್ದಾರೆ.

    37 ವರ್ಷದ ಗೌತಮ್ ಗಂಭೀರ್ 2003ರ ಏಪ್ರಿಲ್ 11ರಂದು ಬಾಂಗ್ಲಾದೇಶ ವಿರುದ್ಧದ ಏಕದಿನ ಪಂದ್ಯದಲ್ಲಿ ಭಾರತದ 149ನೇ ಆಟಗಾರನಾಗಿ ಅಂತರಾಷ್ಟ್ರೀಯ ಕ್ರಿಕೆಟ್ ಜಗತ್ತಿಗೆ ಪಾದಾರ್ಪಣೆ ಮಾಡಿದ್ದರು. ಬಳಿಕ 2004ರ ನವೆಂಬರ್ 3ರಂದು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭಾರತದ 249ನೇ ಆಟಗಾರನಾಗಿ ಆಡಿದ್ದರು. ಗೌತಮ್ ಇದುವರೆಗೂ ಒಟ್ಟು 147 ಏಕದಿನ ಪಂದ್ಯಗಳನ್ನಾಡಿದ್ದು, 39.68ರ ಸರಾಸರಿಯಲ್ಲಿ 5,238 ರನ್ ಗಳಿಸಿದ್ದಾರೆ. ಇದರಲ್ಲಿ 11 ಶತಕ ಹಾಗೂ 34 ಅರ್ಧ ಶತಕಗಳನ್ನು ಒಳಗೊಂಡಿದೆ. ಕೊನೆಯದಾಗಿ 2013ರ ಜನವರಿ 27ರಂದು ಇಂಗ್ಲೆಂಡ್ ವಿರುದ್ಧ ಏಕದಿನ ಪಂದ್ಯವನ್ನು ಆಡಿದ್ದರು.

    ಟೆಸ್ಟ್ ನಲ್ಲಿ 58 ಪಂದ್ಯಗಳನ್ನು ಆಡಿರುವ ಗಂಭೀರ್, 41.95 ಸರಾಸರಿಯಲ್ಲಿ 4,154 ರನ್ ಗಳಿಸಿದ್ದಾರೆ. ಇದರಲ್ಲಿ 9 ಶತಕ ಸೇರಿದಂತೆ 22 ಅರ್ಧ ಶತಕಗಳು ದಾಖಲಾಗಿವೆ. ಟೆಸ್ಟ್ ನಲ್ಲಿ ಗರಿಷ್ಠ 206 ಹೊಡೆದಿದ್ದಾರೆ. ಅಲ್ಲದೇ ಟಿ-20ಯಲ್ಲಿ 37 ಪಂದ್ಯಗಳನ್ನಾಡಿ 27.41ರ ಸರಾಸರಿಯಲ್ಲಿ 932 ರನ್ ಗಳಿಸಿದ್ದಾರೆ.

    ಇದಲ್ಲದೇ ಭಾರತದ ಚುಟುಕು ಕ್ರಿಕೆಟ್ ಎಂದೇ ಹೆಸರು ಪಡೆದಿರುವ ಐಪಿಲ್ ಪಂದ್ಯಾವಳಿಯಲ್ಲಿ ದೆಹಲಿ ಹಾಗೂ ಕೋಲ್ಕತ್ತಾ ತಂಡಗಳನ್ನು ಗೌತಮ್ ಗಂಭೀರ್ ಮುನ್ನಡೆಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಧೋನಿ ನಿವೃತ್ತಿ ವದಂತಿ: ಕೋಚ್ ರವಿಶಾಸ್ತ್ರಿ ಸ್ಪಷ್ಟನೆ!

    ಧೋನಿ ನಿವೃತ್ತಿ ವದಂತಿ: ಕೋಚ್ ರವಿಶಾಸ್ತ್ರಿ ಸ್ಪಷ್ಟನೆ!

    ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯವರು ಎಲ್ಲಿಯೂ ಹೋಗುವುದಿಲ್ಲ, ಅವರು ತಂಡದಲ್ಲಿಯೇ ಇರುತ್ತಾರೆ ಎಂದು ಭಾರತ ಕ್ರಿಕೆಟ್ ತಂಡದ ತರಬೇತುದಾರ ರವಿಶಾಸ್ತ್ರೀಯವರು ಸ್ಪಷ್ಟನೆ ನೀಡಿದ್ದಾರೆ.

    ಧೋನಿ ನಿವೃತ್ತಿ ವದಂತಿ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ಧೋನಿಯವರು ಕೇವಲ ಬಾಲನ್ನು ಪರೀಕ್ಷೆಗೆ ಒಳಪಡಿಸುವುದಕ್ಕೋಸ್ಕರ ತೆಗೆದುಕೊಂಡಿದ್ದಾರೆ. ಧೋನಿಯವರು ಬಾಲ್ ತೆಗೆದುಕೊಂಡಿದ್ದಕ್ಕೆ ಅವರು ನಿವೃತ್ತಿ ಹೊಂದುತ್ತಾರೆ ಎನ್ನುವ ವಂದತಿ ಹಬ್ಬಿರುವುದು ದುರದೃಷ್ಟಕರ ಸಂಗತಿ. ಧೋನಿಯವರು ಎಲ್ಲಿಯೂ ಹೋಗಲ್ಲ, ಅವರು ಭಾರತ ಕ್ರಿಕೆಟ್ ತಂಡದಲ್ಲಿಯೇ ಇರುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.

    ಇಂಗ್ಲೆಂಡ್ ವಿರುದ್ಧದ ಅಂತಿಮ ಪಂದ್ಯದಲ್ಲಿ ಭಾರತ ತಂಡ ಬೌಲಿಂಗ್ ಮಾಡುವಾಗ 45 ಓವರ್ ಗಳ ಬಳಿಕವು ಬಾಲ್ ವೇಗಿಗಳಿಗೆ ಕೈಕೊಟ್ಟಿತ್ತು. ಈ ಹಿನ್ನೆಲೆಯಲ್ಲಿ ಅನುಮಾನಗೊಂಡ ಧೋನಿ ಬಾಲನ್ನು ಪಡೆದು ತಂಡದ ಭಾರತ್ ಅರುಣ್ ಎಂಬ ಬಾಲ್ ತಜ್ಞರಿಗೆ ತೋರಿಸಿ, ಬಾಲ್ ನ ಸ್ಥಿತಿಗತಿಯ ಬಗ್ಗೆ ತಿಳಿದುಕೊಳ್ಳಲು ಅಂಪೈರ್ ನಿಂದ ಪಡೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಇಂಗ್ಲೆಂಡ್ ವಿರುದ್ಧದ ಕೊನೆಯ ಪಂದ್ಯದಲ್ಲಿ ವಿದಾಯದ ಮುನ್ಸೂಚನೆ ನೀಡಿದ್ರಾ ಧೋನಿ?

    ಏನಿದು ವದಂತಿ?
    ಇಂಗ್ಲೆಂಡಿನಲ್ಲಿ ನಡೆದ ಅಂತಿಮ ಪಂದ್ಯದ ವೇಳೆ ಧೋನಿಯವರು ಅಂಪೈರ್ ನಿಂದ ಬಾಲನ್ನು ಪಡೆದುಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು. ಅಲ್ಲದೇ ಜಾಲತಾಣಿಗರು ವಿಡಿಯೋವನ್ನು ನೋಡಿ ಧೋನಿಯವರು ನಿವೃತ್ತಿಗಾಗಿ ಬಾಲನ್ನು ಪಡೆದುಕೊಂಡಿದ್ದಾರೆ ಎಂದು ವದಂತಿ ಹರಿಬಿಟ್ಟಿದ್ದರು. ಧೋನಿಯವರು ಬಾಲ್ ಪಡೆದ ಬಗ್ಗೆ ಸಾಕಷ್ಟು ಉಹಾಪೋಹಗಳು ಕೇಳಿಬಂದಿದ್ದವು.