Tag: Retired Warrior

  • ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

    ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

    ಮಡಿಕೇರಿ: ಕೊರೊನಾ ಆತಂಕದಿಂದ ಮನೆಯಲ್ಲೇ ಇದ್ದ ನಿವೃತ್ತ ಯೋಧ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೋಣಕೆರೆಯಲ್ಲಿ ನಡೆದಿದೆ.

    ಚೋಣಕೆರೆಯ ಗ್ರಾಮದ 74 ವರ್ಷದ ಉತ್ತಯ್ಯ ಆತ್ಮಹತ್ಯೆಗೆ ಶರಣಾದ ನಿವೃತ್ತ ಯೋಧ. ತಮ್ಮ ಮನೆಯ ಮಲಗುವ ಕೋಣೆಯಲ್ಲೇ ಸ್ವತಃ ತಾವೇ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಉತ್ತಯ್ಯ ಹಲವು ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದರು. ಇದರಿಂದಾಗಿಯೇ ಮನೆಯಲ್ಲಿದ್ದ ಕೋವಿಯಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ತೀವ್ರ ರಕ್ತ ಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಿಪಿಐ ದಿವಾಕರ್ ಮತ್ತು ನಾಪೋಕ್ಲು ಠಾಣೆ ಎಸ್‍ಐ ಕಿರಣ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.