ಯಾದಗಿರಿ: ದೇಶದ ಯುವಕರಿಗೆ ರಾಹುಲ್ ಗಾಂಧಿ (Rahul Gandhi) ಆದರ್ಶವಾಗಿದ್ದಾರೆ. ಜನರಿಗಾಗಿ ಅವರು ಭಾರತ್ ಜೋಡೋ ಯಾತ್ರೆ ನಡೆಸಿದ್ದಾರೆ ಎಂದು ತೆಲಂಗಾಣ ಸಿಎಂ ರೇವಂತ್ ರೆಡ್ಡಿ (Revanth Reddy) ಹೇಳಿದ್ದಾರೆ.
ಯಾದಗಿರಿಯಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಮತಯಾಚಿಸಿದರು. ಈ ವೇಳೆ ಮೋದಿಯವರು (Narendra Modi) 10 ವರ್ಷಗಳ ಕಾಲ ಅಧಿಕಾರ ನಡೆಸಿದ್ದಾರೆ. ಆದರೂ ಅವರು ರೈತರ ಹಿತ ಕಾಪಾಡಿಲ್ಲ. ಮೋದಿಯವರು ಜನರ ನಂಬಿಕೆಗೆ ದ್ರೋಹ ಮಾಡಿದ್ದಾರೆ. ಅವರು ಕರ್ನಾಟಕ ರಾಜ್ಯಕ್ಕೆ ಸಹಾಯ ಮಾಡಿಲ್ಲ. ರಾಜ್ಯದಲ್ಲಿ ಬರ ಆವರಿಸಿದ್ರು ಪರಿಹಾರ ನೀಡದೆ ಜನರಿಗೆ ಖಾಲಿ ಚೊಂಬು ನೀಡಿದ್ದಾರೆ. ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ನಂತರ ಹಣ ಬಿಡುಗಡೆ ಮಾಡಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ನಾಲ್ಕೈದು ವರ್ಷಗಳ ಕಥೆ ತಂದು ಈಗ ದೂರು ಕೊಟ್ರೆ ಏನರ್ಥ? – ಪೆನ್‌ಡ್ರೈವ್ ಕೇಸ್ ಬಗ್ಗೆ ಹೆಚ್.ಡಿ ರೇವಣ್ಣ ಫಸ್ಟ್ ರಿಯಾಕ್ಷನ್
ಕೇಂದ್ರ ಬಿಜೆಪಿ (BJP) ಸರ್ಕಾರ ಎಸ್‍ಸಿ, ಎಸ್‍ಟಿ ಹಾಗೂ ಒಬಿಸಿ ಮೀಸಲಾತಿ ರದ್ದು ಮಾಡುವ ಹುನ್ನಾರ ಮಾಡಿದೆ. ಇದಕ್ಕಾಗಿ 400 ಸ್ಥಾನ ಗೆಲ್ಲಿಸಿ ಎನ್ನುತ್ತಿದ್ದಾರೆ. ಬಿಜೆಪಿ ನಾಯಕರು ಮೋದಿ ಮುಖ ನೋಡಿ ಮತ ಹಾಕಿ ಎಂದು ಹೇಳುತ್ತಾರೆ. ಹಾಗಾದರೆ ಬಿಜೆಪಿ ಪಕ್ಷದವರು ಕೈಲಾಗದವರಾ? ಈ ಕ್ಷೇತ್ರದ ಜನ ಕಾಂಗ್ರೆಸ್ ಅಭ್ಯರ್ಥಿಯನ್ನು 1 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಖರ್ಗೆಯವರ (Mallikarjun Kharge) ನಾಯಕತ್ವದಲ್ಲಿ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲ್ಲಿಸಿದ ನಂತರ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ನ್ನು ಗೆಲ್ಲಿಸಿ ರಾಜ್ಯದ ಜನರು ನನ್ನ ಹತ್ತಿರ ಬಂದ್ರೆ, ನಾನು ಹೈದ್ರಾಬಾದ್‍ನಲ್ಲಿಯೇ ಇರುತ್ತೇನೆ. ನಾನು ನಿಮ್ಮ ಸಹಾಯಕ್ಕೆ ಬರುತ್ತೇನೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ: ಮೋದಿ
ನವದೆಹಲಿ: ಅಬ್ ಕಿ ಬಾರ್, 400 ಪಾರ್ ಘೋಷಣೆಯ ಹೊರತಾಗಿಯೂ ಈ ಬಾರಿ ಪ್ರಧಾನಿ ನರೇಂದ್ರ ಮೋದಿ (Narendra Modi) ಗರಿಷ್ಠ 214 ರಿಂದ 240 ಲೋಕಸಭಾ ಸ್ಥಾನಗಳನ್ನು ಗೆಲ್ಲಬಹುದು ಎಂದು ತೆಲಂಗಾಣ ಮುಖ್ಯಮಂತ್ರಿ (Telangana CM) ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಎ. ರೇವಂತ್ ರೆಡ್ಡಿ (Revanth Reddy) ಅವರು ಭವಿಷ್ಯ ನುಡಿದಿದ್ದಾರೆ.
2019ರ ಚುನಾವಣೆಯಲ್ಲಿ ಬಿಜೆಪಿ ಗುಜರಾತ್, ರಾಜಸ್ಥಾನ, ಹರಿಯಾಣ, ದೆಹಲಿಯಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ 303 ಸ್ಥಾನಗಳನ್ನು ಗೆದ್ದಿತ್ತು. ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಮೈತ್ರಿ ಉತ್ತಮ ಸಾಧನೆ ಮಾಡಿತ್ತು. ಈ ಬಾರಿಯೂ ಶೇ.100ರಷ್ಟು ಸಾಧನೆ ಮಾಡಿದರೆ ಅವರು 300 ಸ್ಥಾನ ಗೆಲ್ಲಬಹುದು. ಉಳಿದ 100 ಸ್ಥಾನಗಳನ್ನು ಅವರು ಪಾಕಿಸ್ತಾನದಲ್ಲಿ ಮಾತ್ರ ಗೆಲ್ಲಬಹುದು, ಹಿಂದೂಸ್ತಾನದಲ್ಲಿ ಅಲ್ಲ ಎಂದರು.
ರಾಹುಲ್ ಗಾಂಧಿ (Rahul Gandhi) ಅವರು ಅದಾನಿಯನ್ನು(Adani) ಪಿಕ್‌ಪಾಕೆಟ್ ಎಂದು ಬಣ್ಣಿಸುವ ಸಮಯದಲ್ಲಿ ನೀವು 12,400 ಕೋಟಿ ರೂ. ಯೋಜನೆ ಯಾಕೆ ನೀಡಿದ್ದೀರಿ ಎಂದು ಕೇಳಿದ್ದಕ್ಕೆ ನಾನು ನಾನು ನಮ್ಮ ಯೋಜನೆಗಳನ್ನು ಅದಾನಿಗೆ ನೀಡಲಿಲ್ಲ. ಮೋದಿ ಅವರು ಬಂದರು, ವಿಮಾನ ನಿಲ್ದಾಣಗಳನ್ನು ಅದಾನಿಗೆ ನೀಡಿದ್ದಾರೆ. ಆದರೆ ನಾನು ಅದಾನಿ ಜೇಬಿನಿಂದ ಹಣವನ್ನು ಪಡೆದು ರಾಜ್ಯದಲ್ಲಿ ಹೂಡಿಕೆ ಮಾಡುತ್ತಿದ್ದೇನೆ. ನಮ್ಮ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಗೆ ಯಾರು ಸಹಕಾರ ನೀಡುತ್ತಾರೋ ಅವರಿಗೆ ನಾನು ಸಮಾನವಾಗಿ ಅವಕಾಶ ನೀಡುತ್ತೇನೆ. ಅದಾನಿ, ಟಾಟಾ, ಬಿರ್ಲಾ ಅಂಬಾನಿ ಅಥವಾ ಯಾರೇ ಆಗಿರಲಿ ಎಲ್ಲರನ್ನು ಸಮಾನವಾಗಿ ನೋಡುತ್ತೇನೆ ಎಂದು ಹೇಳಿದರು.
ಹೈದರಾಬಾದ್: ಅದಾನಿ ಸಮೂಹ (Adani Group) ತೆಲಂಗಾಣ ಸಿಎಂ ರೇವಂತ್ ರೆಡ್ಡಿಯನ್ನು (Telangana CM Revanth Reddy) ಬುಧವಾರ ಭೇಟಿ ಮಾಡಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ (Congress) ವಿರುದ್ಧ ಟ್ರೋಲ್ (Troll) ಆರಂಭವಾಗಿದೆ.
ಚುನಾವಣಾ ಭಾಷಣದಲ್ಲಿ, ಸಂಸತ್ ಕಲಾಪದಲ್ಲಿ ಅದಾನಿ ಕಂಪನಿ ವಿರುದ್ಧ ಕಾಂಗ್ರೆಸ್ ನಾಯಕರು ಟೀಕೆ ಮಾಡುತ್ತಲೇ ಇರುತ್ತಾರೆ. ಆದರೆ ಈಗ ಗೌತಮ್ ಅದಾನಿ (Gautam Adani) ಅವರ ಪುತ್ರ ಕರಣ್ ಅದಾನಿ (Karan Adani) ಅವರು ರೇವಂತ್ ರೆಡ್ಡಿ ಅವರ ಜೊತೆ ಡೇಟಾ ಸೆಂಟರ್ ಮತ್ತು ಏರೋಸ್ಪೇಸ್ ಪಾರ್ಕ್ ನಿರ್ಮಾಣ ಹೂಡಿಕೆ ಸಂಬಂಧ ಮಾತುಕತೆ ನಡೆಸಿದ್ದಾರೆ.
In another setback to Rahul Gandhi and left ecosystem, New Congress Telangana CM Revanth Reddy meets son of Adani and company's delegation to discuss investment and growth opportunities in state.
ಅದಾನಿ ಪೋರ್ಟ್ ಮತ್ತು ಎಸ್‌ಇಝಡ್ ಕಂಪನಿಯ ಸಿಇಒ ಆಗಿರುವ ಕರಣ್ ಅದಾನಿ ಅವರು ರೇವಂತ್ ರೆಡ್ಡಿ ಜೊತೆಗಿನ ಮಾತುಕತೆ ವಿಚಾರ ಹೊರ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಕಾಂಗ್ರೆಸ್ ನಾಯಕರನ್ನು ಪ್ರಶ್ನೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಬಂಧನ ಊಹಾಪೋಹ ಮಧ್ಯೆ 3 ದಿನ ಗುಜರಾತ್ ಪ್ರವಾಸ ಕೈಗೊಳ್ಳಲಿದ್ದಾರೆ ಕೇಜ್ರಿವಾಲ್
ರಾಹುಲ್ ಗಾಂಧಿ ಅವರು ಗೌತಮ್ ಅದಾನಿ ಅವರ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿದ್ದರೆ ಇತ್ತ ತೆಲಂಗಾಣ ಸಿಎಂ ಅವರು ಗೌತಮ್ ಅದಾನಿ ಅವರ ಪುತ್ರ ಕರಣ್ ಅದಾನಿ ಜೊತೆ ಮಾತನಾಡುತ್ತಾರೆ ಎಂದು ಟ್ರೋಲ್ ಮಾಡುತ್ತಿದ್ದಾರೆ.
ಕಾಂಗ್ರೆಸ್ ಬೂಟಾಟಿಕೆ ಇದೊಂದು ಉತ್ತಮ ಉದಾಹರಣೆ. ರಾಹುಲ್ ಗಾಂಧಿ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಮಾತ್ರವಲ್ಲ. ಪಕ್ಷದಲ್ಲೇ ಅವರಿಗೆ ಹಿನ್ನಡೆಯಾಗುತ್ತಿದ್ದು, ಅವರ ಮಾತಿಗೆ ಕಾಂಗ್ರೆಸ್‌ನಲ್ಲೇ ಯಾರು ಗೌರವ ನೀಡುತ್ತಿಲ್ಲ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ.
ಹೈದರಾಬಾದ್: ತೆಲಂಗಾಣದ (Telangana) ನೂತನ ಮುಖ್ಯಮಂತ್ರಿಯಾಗಿ (CM) ಅಧಿಕಾರ ವಹಿಸಿಕೊಂಡಿರುವ ರೇವಂತ್ ರೆಡ್ಡಿ (Revanth Reddy), ಪ್ರಮಾಣವಚನ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ತಮ್ಮ ಪ್ರಚಾರದ ವೇಳೆ ನೀಡಿದ್ದ ಪ್ರಮುಖ ಭರವಸೆಯೊಂದನ್ನು ಈಡೇರಿಸಿದ್ದಾರೆ.
ಹೌದು, ರೇವಂತ್ ರೆಡ್ಡಿ ಅವರು ತಮ್ಮ ಅಧಿಕೃತ ನಿವಾಸದ ಮುಂಭಾಗವಿರುವ ಕಬ್ಬಿಣದ ಬ್ಯಾರಿಕೇಡ್ ಅನ್ನು ತೆಗೆಸಿದ್ದಾರೆ. ಪ್ರಮಾಣವಚನ ಸ್ವೀಕಾರ ಸಮಾರಂಭ ಮುಗಿಯುವುದಕ್ಕೂ ಮೊದಲೇ ಮುಖ್ಯಮಂತ್ರಿಗಳ ಅಧಿಕೃತ ನಿವಾಸವಾದ ಹೈದರಾಬಾದ್‌ನ ಪ್ರಗತಿ ಭವನದಲ್ಲಿ ಬಿರುಸಿನ ಚಟುವಟಿಕೆ ನಡೆದಿದೆ. ಹಲವಾರು ಬುಲ್ಡೋಜರ್‌ಗಳು, ಟ್ರ್ಯಾಕ್ಟರ್‌ಗಳು ಹಾಗೂ ಕಟ್ಟಡ ಕಾರ್ಮಿಕರು ಈ ಕಬ್ಬಿಣದ ಬ್ಯಾರಿಕೇಡ್‌ಗಳನ್ನು ಕಿತ್ತು ಹಾಕುವುದು ಕಂಡುಬಂದಿದೆ.
ಈ ಬ್ಯಾರಿಕೇಡ್ ಹಿಂದೆ ಪಾದಚಾರಿಗಳ ಪ್ರವೇಶವನ್ನು ನಿರ್ಬಂಧಿಸುತ್ತಿತ್ತು. ಹಲವು ವರ್ಷಗಳಿಂದ ಈ ಬ್ಯಾರಿಕೇಡ್‌ನಿಂದಾಗಿ ಚಲಿಸುವ ವಾಹನಗಳ ದಟ್ಟಣೆಯೂ ಉಂಟಾಗುತ್ತಿತ್ತು. ಈ ಹಿನ್ನೆಲೆ ರೇವಂತ್ ರೆಡ್ಡಿ ತಮ್ಮ ಚುನಾವಣಾ ಪ್ರಚಾರದ ವೇಳೆ, ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಬ್ಯಾರಿಕೇಡ್ ಅನ್ನು ತೆಗೆಸುವುದಾಗಿ ಭರವಸೆ ನೀಡಿದ್ದರು. ಇದೀಗ ಪ್ರಮಾಣವಚನ ಸ್ವೀಕರಿಸುತ್ತಲೇ ಅವರು ತಮ್ಮ ಮೊದಲ ಭರವಸೆಯನ್ನು ಪೂರೈಸಿದ್ದಾರೆ. ಇದನ್ನೂ ಓದಿ: ತೆಲಂಗಾಣ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ರೇವಂತ್ ರೆಡ್ಡಿ
ಕಳೆದ ತಿಂಗಳು ನಡೆದ ತೆಲಂಗಾಣದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಇಂದು ಹೈದರಾಬಾದ್‌ನ ಎಲ್ಬಿ ಸ್ಟೇಡಿಯಂನಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆದಿದೆ. ರೇವಂತ್ ರೆಡ್ಡಿ ಸಿಎಂ ಆಗಿ, ಮುಖ್ಯಮಂತ್ರಿ ಆಕಾಂಕ್ಷಿಯಾಗಿದ್ದ ಮಲ್ಲು ಭಟ್ಟಿ ವಿಕ್ರಮಾರ್ಕ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದನ್ನೂ ಓದಿ: ರೇವಂತ್ ರೆಡ್ಡಿಗೆ ಶುಭಕೋರಿ ಬೆಂಬಲದ ಭರವಸೆ ಕೊಟ್ಟ ಪ್ರಧಾನಿ ಮೋದಿ
ನವದೆಹಲಿ: ತೆಲಂಗಾಣದ (Telangana) ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ರೇವಂತ್ ರೆಡ್ಡಿಗೆ (Revanth Reddy) ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ಅಲ್ಲದೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.
ಹೈದರಾಬಾದ್‍ನ ಎಲ್ಬಿ ಸ್ಟೇಡಿಯಂನಲ್ಲಿ (LB Stadium Hyderabad) ನಡೆದ ಅದ್ಧೂರಿ ಸಮಾರಂಭದಲ್ಲಿ ರೇವಂತ್ ರೆಡ್ಡಿ ಸೇರಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ಇವರಿಗೆ ರಾಜ್ಯಪಾಲೆ ತಮಿಳಿಸೈ ಸುಂದರರಾಜನ್ ಅವರು ಪ್ರಮಾಣವಚನ ಬೋಧಿಸಿದರು. ರೇವಂತ್ ರೆಡ್ಡಿಯವರು ತೆಲಂಗಾಣ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಂತೆಯೇ ಮೋದಿಯವರು (Narendra Modi) ಎಕ್ಸ್ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ.
Congratulations to Shri Revanth Reddy Garu on taking oath as the Chief Minister of Telangana. I assure all possible support to further the progress of the state and the welfare of its citizens. @revanth_anumula
ಎಕ್ಸ್ ನಲ್ಲಿ ಏನಿದೆ..?: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ರೇವಂತ್ ರೆಡ್ಡಿಯವರಿಗೆ ಅಭಿನಂದನೆಗಳು. ರಾಜ್ಯದ ಪ್ರಗತಿ ಮತ್ತು ನಾಗರಿಕರ ಕಲ್ಯಾಣಕ್ಕಾಗಿ ನನ್ನಿಂದ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ. ಇದನ್ನೂ ಓದಿ: ‘ಮೋದಿ ಜೀ’ ಕರೆದು ಸಾರ್ವಜನಿಕರಿಂದ ನನ್ನ ದೂರ ಮಾಡ್ಬೇಡಿ: ಪ್ರಧಾನಿ ಮನವಿ
ಪ್ರಮಾಣವಚನದ ವೇಳೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ, ಕರ್ನಾಟಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ಗಣ್ಯರು ಉಪಸ್ಥಿತರಿದ್ದರು.
ಹೈದರಾಬಾದ್: ತೆಲಂಗಾಣದ (Telangana) ನೂತನ ಮುಖ್ಯಮಂತ್ರಿಯಾಗಿ (Chief Minister) ರೇವಂತ್ ರೆಡ್ಡಿ (Revanth Reddy) ಗುರುವಾರ ಮಧ್ಯಾಹ್ನ ಪ್ರಮಾಣ ವಚನ (Oath) ಸ್ವೀಕರಿಸಿದರು.
ಹೈದರಾಬಾದ್‌ನ ಎಲ್ಬಿ ಸ್ಟೇಡಿಯಂನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರೇವಂತ್ ರೆಡ್ಡಿ ಸೇರಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ, ಕರ್ನಾಟಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ತೆಲಂಗಾಣ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ (Telangana Vidhanasabha Election Results) ಕಾಂಗ್ರೆಸ್ (Congress) ಅಭೂತಪೂರ್ವ ಜಯಗಳಿಸಿತ್ತು. 119 ಸ್ಥಾನಗಳ ಪೈಕಿ 69 ಸ್ಥಾನಗಳನ್ನು ಗಳಿಸುವ ಮೂಲಕ ಸ್ಪಷ್ಟಬಹುಮತ ಪಡೆದಿತ್ತು.
ಯಾರು ಈ ರೇವಂತ್ ರೆಡ್ಡಿ?: ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (ಟಿಪಿಸಿಸಿ) ಅಧ್ಯಕ್ಷ 56 ವರ್ಷದ ಅನುಮುಲಾ ರೇವಂತ್ ರೆಡ್ಡಿ ಮೊದಲು ಆರ್‌ಎಸ್‌ಎಸ್ ಮತ್ತು ಎಬಿವಿಪಿಯಿಂದ ಗುರುತಿಸಿಕೊಂಡಿದ್ದವರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ರೆಡ್ಡಿ ಅವರು ಕಾಂಗ್ರೆಸ್ ಸೇರಿದರು. ಕಾಂಗ್ರೆಸ್ ಪರ ಅವರು ಕ್ಯಾಂಪೇನ್ ನಡೆಸುತ್ತಿದ್ದಾಗ, ಅವರ ಹಿನ್ನೆಲೆ ಹೆಚ್ಚು ಚರ್ಚೆಯಾಗಿತ್ತು. ಇದನ್ನೂ ಓದಿ: ‘ಮೋದಿ ಜೀ’ ಕರೆದು ಸಾರ್ವಜನಿಕರಿಂದ ನನ್ನ ದೂರ ಮಾಡ್ಬೇಡಿ: ಪ್ರಧಾನಿ ಮನವಿ
ರೇವಂತ್ ರೆಡ್ಡಿ ಆರ್‌ಎಸ್‌ಎಸ್ (RSS) ಕೈಗೊಂಬೆ ಎಂದು ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಅನೇಕ ಬಾರಿ ಟೀಕಿಸಿದ್ದರು. ಬಿಜೆಪಿ ಮತ್ತು ಕಾಂಗ್ರೆಸ್ ಕೆಲವು ಕ್ಷೇತ್ರಗಳಲ್ಲಿ ಒಂದಾಗಿ ಕೆಲಸ ಮಾಡುತ್ತಿವೆ ಎಂದೂ ಸಹ ಓವೈಸಿ ಹಿಂದಿನ ದಿನಗಳಲ್ಲಿ ಆರೋಪಿಸಿದ್ದರು.
ರೇವಂತ್ ರೆಡ್ಡಿ ಅವರು ಎಬಿವಿಪಿಯಿಂದ (ABVP) ರಾಜಕೀಯ ಜೀವನ ಆರಂಭಿಸಿದರು. ನಂತರ ಟಿಡಿಪಿಗೆ (TDP) ಸೇರ್ಪಡೆಯಾದರು. 2009 ಮತ್ತು 2014 ರ ಚುನಾವಣೆಯಲ್ಲಿ ಕೊಡಂಗಲ್ ಕ್ಷೇತ್ರದಿಂದ ಗೆಲುವು ಸಾಧಿಸಿದರು. ಲಂಚ ಹಗರಣದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದ ನಂತರ ಅವರು ಟಿಡಿಪಿ ತೊರೆದರು. 2017 ರ ಅಕ್ಟೋಬರ್‌ನಲ್ಲಿ ಕಾಂಗ್ರೆಸ್ ಸೇರಿದರು. 2018 ರ ಚುನಾವಣೆಯಲ್ಲಿ ಬಿಆರ್‌ಎಸ್ (BRS) ವಿರುದ್ಧ ಸ್ಪರ್ಧಿಸಿ ಕೊಡಂಗಲ್‌ನಿಂದ ಸೋತರು. ಆದರೆ ಮತ್ತೆ ಪುಟಿದೆದ್ದು 2019 ರ ಲೋಕಸಭೆ ಚುನಾವಣೆಯಲ್ಲಿ ಮಲ್ಕಾಜ್‌ಗಿರಿ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದರು. ಜೂನ್ 2021 ರಲ್ಲಿ ಅವರನ್ನು TPCC ಮುಖ್ಯಸ್ಥರನ್ನಾಗಿ ನೇಮಿಸಲಾಯಿತು.
ಬೆಳಗಾವಿ: ಯತ್ನಾಳ್ (Basangouda Patil Yatnal) ಒಬ್ಬ ದ್ವೇಷದ ರಾಜಕಾರಣಿ, ಮಹಾನ್ ಸುಳ್ಳುಗಾರ, ಚುನಾವಣೆ ಗೆಲ್ಲಲು ಈ ರೀತಿ ಮಾತಾಡಬಾರದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಕಿಡಿಕಾರಿದ್ದಾರೆ.
ಬೆಳಗಾವಿಯ (Belagavi) ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಸಿಸ್ ನಂಟಿರುವ ಪೀರಾ ಮೌಲಿ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ ಎಂಬ ಬಿಜೆಪಿ ನಾಯಕ ಯತ್ನಾಳ್ ಆರೋಪಕ್ಕೆ ತಿರುಗೇಟು ಕೊಟ್ಟಿದ್ದಾರೆ. ಅವರ ಜೊತೆಗೆ ನನಗೆ ಬಹಳ ವರ್ಷಗಳ ಸಂಬಂಧ ಇದೆ. ಆಗೆಲ್ಲ ಯಾಕೆ ಅವರು ಸುಮ್ಮನಿದ್ದರು? ಪೀರಾ ಮೌಲಿ ಅವರು ಆರೋಪ ಸಾಬೀತು ಮಾಡಿ ಎಂದು ಹೇಳಿದ್ದಾರೆ. ಕೇಂದ್ರದಲ್ಲಿ ಅವರದ್ದೇ ಸರ್ಕಾರ ಇದೆ ಅದನ್ನು ಸಾಬೀತು ಮಾಡಲಿ ಎಂದು ಸವಾಲು ಹಾಕಿದ್ದಾರೆ. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಸಿಎಂ ತವರಿಗೆ ಶೀಘ್ರವೇ ಅಂಗನವಾಡಿ ಕಟ್ಟಡದ ಭರವಸೆ
ಈಗ ಆರೋಪ ಮಾಡುತ್ತಿರುವ ಯತ್ನಾಳ್, ಅವರದ್ದೇ ಸರ್ಕಾರ ಇದ್ದಾಗ ಏನು ಮಾಡ್ತಿದ್ರು? ಅವರು ಬಿಜೆಪಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು. ವಿರೋಧ ಪಕ್ಷದ ನಾಯಕನ ಸ್ಥಾನಕ್ಕೂ ಪ್ರಯತ್ನ ಮಾಡಿದ್ದರು. ಎರಡೂ ಸಿಗಲಿಲ್ಲ ಅದಕ್ಕೆ ಈಗ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ತೆಲಂಗಾಣದಲ್ಲಿ ರೇವಂತ್ ರೆಡ್ಡಿ (Revanth Reddy) ಸಿಎಂ ಆಗಿ ಅಧಿಕಾರ ಸ್ವೀಕರಿಸಲಿದ್ದು, ಅವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಹೊರಟಿದ್ದೇನೆ. ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ವಿಸ್ತರಣೆ ಆಗುತ್ತಿದೆ ಎಂಬ ಪತ್ರಕರ್ತರ ಪ್ರಶ್ನೆಗೆ, ವಿಸ್ತರಣೆ ಅಲ್ಲ ದಕ್ಷಿಣ ಭಾರತದಲ್ಲಿ ಬಿಜೆಪಿಯೇ ಇಲ್ಲ ಎಂದಿದ್ದಾರೆ.
ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಕಲ್ಯಾಣ ಯೋಜನೆಗಳಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಗೋವಿಂದ ಕಾರಜೋಳ ಅವರ ಕಾಲದಲ್ಲಿ ಎಸ್‍ಟಿಪಿ-ಟಿಎಸ್‍ಪಿ ಹಣ ಯಾಕೆ ಕಡಿಮೆ ಇತ್ತು ಎಂದು ಅವರು ಹೇಳಬೇಕು. ನಾನು ಕೊನೆಯ ಬಜೆಟ್ ಮಂಡಿಸಿದಾಗ 30 ಸಾವಿರ ಕೋಟಿ ರೂ. ಹಣ ಇತ್ತು. ಬಿಜೆಪಿ ಕಾಲದಲ್ಲಿ 25 ಸಾವಿರ ಕೋಟಿ ರೂ. ಆಯ್ತು, ಬಿಜೆಪಿಯವರು ಇದಕ್ಕೆ ಉತ್ತರಿಸಲಿ ಎಂದು ಅವರು ಹೇಳಿದ್ದಾರೆ.
ಎಸ್‍ಟಿಪಿ-ಟಿಎಸ್‍ಪಿ ಕಾಯ್ದೆಯಲ್ಲಿನ ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಿಟ್ಟ ಅನುದಾನ ಅನ್ಯ ಕಾರ್ಯಗಳಿಗೆ ವರ್ಗಾವಣೆಗೆ ಅವಕಾಶ ನೀಡುವ ಕಲಂ 7ಡಿಯನ್ನು ಹಿಂದೆ ಸಿಎಂ ಆಗಿದ್ದಾಗ ರದ್ದು ಮಾಡುತ್ತೇವೆ ಎಂದ ವಿಚಾರವಾಗಿ, ಕಲಂ ರದ್ದು ಮಾಡುತ್ತೇವೆ. ಈ ಬಗ್ಗೆ ಶೀಘ್ರದಲ್ಲೇ ಆದೇಶವನ್ನು ಹೊರಡಿಸುತ್ತೇವೆ ಎಂದು ಅವರು ಹೇಳಿದರು. ಇದನ್ನೂ ಓದಿ: ಜೈನಮುನಿ ಹತ್ಯೆ ಪ್ರಕರಣ- ಹಣವಷ್ಟೇ ಅಲ್ಲ, ಬೈಗುಳವೇ ಕೊಲೆಗೆ ಕಾರಣ?
ನವದೆಹಲಿ: ತೆಲಂಗಾಣದ (Telangana) ನೂತನ ಮುಖ್ಯಮಂತ್ರಿಯಾಗಿ (CM) ರೇವಂತ್ ರೆಡ್ಡಿ (Revanth Reddy) ಆಯ್ಕೆಯಾಗಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಭಾರೀ ಬಹುಮತದೊಂದಿಗೆ ಅಧಿಕಾರಕ್ಕೇರಿದ್ದ ಕಾಂಗ್ರೆಸ್ (Congress) ಮಂಗಳವಾರ ಎಐಸಿಸಿ ಅಧ್ಯಕ್ಷರ ಸಮ್ಮುಖದಲ್ಲಿ ಸುದೀರ್ಘ ಚರ್ಚೆ ಬಳಿಕ ಶಾಸಕರ ಅಭಿಪ್ರಾಯದ ಮೇರೆಗೆ ರೇವಂತ್ ರೆಡ್ಡಿ ಅವರನ್ನು ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸಲಾಗಿದೆ.
ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ರೇವಂತ್ ರೆಡ್ಡಿ ಹೆಸರು ಘೋಷಿಸಿದರು. ನಾಳೆ ಬೆಳಗ್ಗೆ 11 ಗಂಟೆಗೆ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ಈ ನಡುವೆ ರೇವಂತ್ ರೆಡ್ಡಿ ಯಾರು? ಅವರ ರಾಜಕೀಯ ಪ್ರಭಾವ ಎಷ್ಟಿದೆ? ಅವರನ್ನು ಸಿಎಂ ಮಾಡಲು ಕಾರಣಗಳೇನು? ಎಂದು ಚರ್ಚೆಯಾಗುತ್ತಿದೆ.
ಸದ್ಯ ತೆಲಂಗಾಣ ಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿರುವ ರೇವಂತ್ ರೆಡ್ಡಿ ಅವರು 1967ರ ನವೆಂಬರ್ 8 ರಂದು ಅವಿಭಜಿತ ಆಂಧ್ರಪ್ರದೇಶದ ನಾಗರ್‌ಕರ್ನೂಲ್‌ನ ಕೊಂಡರೆಡ್ಡಿ ಪಲ್ಲಿ ಎಂಬ ಸ್ಥಳದಲ್ಲಿ ಜನಿಸಿದರು. ರೇವಂತ್ ತಂದೆಯ ಹೆಸರು ಅನುಮುಲ ನರಸಿಂಹ ರೆಡ್ಡಿ ಮತ್ತು ತಾಯಿ ಅನುಮುಲಾ ರಾಮಚಂದ್ರಮ್ಮ. ಅವರು ಹೈದರಾಬಾದಿನ ಎವಿ ಕಾಲೇಜಿನಲ್ಲಿ (ಉಸ್ಮಾನಿಯಾ ವಿಶ್ವವಿದ್ಯಾನಿಲಯ) ಲಲಿತಕಲೆಯಲ್ಲಿ ಪದವಿ ಪಡೆದಿದ್ದಾರೆ. ಕಾಲೇಜಿನ ಬಳಿಕ ಪ್ರಿಂಟಿಂಗ್ ಪ್ರೆಸ್ ಆರಂಭಿಸಿದರು.
1992ರ ಮೇ 7 ರಂದು ರೇವಂತ್ ರೆಡ್ಡಿ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಜೈಪಾಲ್ ರೆಡ್ಡಿ ಅವರ ಸೋದರ ಸೊಸೆ ಅನುಮುಲಾ ಗೀತಾ ಅವರನ್ನು ವಿವಾಹವಾದರು. ಆದರೆ ಆರಂಭದಲ್ಲಿ ವೃತ್ತಿ ಆಯ್ಕೆಯಿಂದಾಗಿ ಕುಟುಂಬ ಸದಸ್ಯರು ಈ ಸಂಬಂಧವನ್ನು ವಿರೋಧಿಸಿದ್ದರು. ಬಳಿಕ ಮನೆಯವರು ಒಪ್ಪಿ ಗೀತಾ ಜತೆ ವೈವಾಹಿಕ ಸಂಬಂಧ ಆರಂಭಿಸಿದ್ದರು. ಅವರಿಗೆ ನ್ಯಾಮಿಷಾ ಎಂಬ ಮಗಳಿದ್ದಾಳೆ.
ಮದುವೆಯ ನಂತರ ರೇವಂತ್ ರೆಡ್ಡಿ ಅವರ ರಾಜಕೀಯ ಪಯಣ ಆರಂಭವಾಯಿತು. ವಿದ್ಯಾರ್ಥಿ ದಿನಗಳಲ್ಲಿ ಅವರು ಆರ್‌ಎಸ್‌ಎಸ್‌ನ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನೊಂದಿಗೆ ಗುರುತಿಸಿಕೊಂಡಿದ್ದರು. 2006ರಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮಿಡ್ಜಿಲ್ ಮಂಡಲದಿಂದ ಜಿಲ್ಲಾ ಪರಿಷತ್ ಪ್ರಾದೇಶಿಕ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದರು.
ನಂತರ 2007 ರಲ್ಲಿ ಆಂಧ್ರಪ್ರದೇಶದ ವಿಧಾನ ಪರಿಷತ್ತಿನ ಸದಸ್ಯರಾದರು. ಈ ಅವಧಿಯಲ್ಲಿ ಅವರು ಎನ್ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷದ ಭಾಗವಾದರು. 2009 ರಲ್ಲಿ ರೇವಂತ್ ಟಿಡಿಪಿ ಟಿಕೆಟ್‌ನಲ್ಲಿ ತಮ್ಮ ಮೊದಲ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದರು ಮತ್ತು 6,989 ಮತಗಳಿಂದ ಗೆದ್ದರು. ಕೊಡಂಗಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ರೇವಂತ್ 5 ಬಾರಿ ಕಾಂಗ್ರೆಸ್ ಶಾಸಕರಾಗಿದ್ದ ಗುರುನಾಥರೆಡ್ಡಿ ಅವರನ್ನು ಸೋಲಿಸುವ ಮೂಲಕ ಮೊದಲ ಬಾರಿಗೆ ಶಾಸಕರಾದರು. ಇದನ್ನೂ ಓದಿ: ಡಾಲಿ ‘ಲಿಡ್ಕರ್’ಗೆ ರಾಯಭಾರಿ: ಸಿಎಂ ಅಧಿಕೃತ ಘೋಷಣೆ
ತೆಲಂಗಾಣ ರಚನೆಗೂ ಮುನ್ನ 2014ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ರೇವಂತ್ ಮತ್ತೊಮ್ಮೆ ಕೊಡಂಗಲ್‌ನಿಂದ ಟಿಡಿಪಿ ಅಭ್ಯರ್ಥಿಯಾದರು. ಟಿಆರ್‌ಎಸ್ ಅಭ್ಯರ್ಥಿಯಾಗಿದ್ದ ಗುರುನಾಥರೆಡ್ಡಿ ಅವರನ್ನು ಸೋಲಿಸಿದರು. 2014ರ ವಿಧಾನಸಭಾ ಚುನಾವಣೆಯಲ್ಲಿ ರೇವಂತ್ 14,614 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಇದಾದ ನಂತರ ಟಿಡಿಪಿ ರೇವಂತ್ ಅವರನ್ನು ತೆಲಂಗಾಣ ವಿಧಾನಸಭೆಯ ನಾಯಕನನ್ನಾಗಿ ಮಾಡಿತು. ಆದಾಗ್ಯೂ 2017ರ ಅಕ್ಟೋಬರ್ 25 ರಂದು ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಬಹಿರಂಗವಾದ ನಂತರ ಟಿಡಿಪಿ ರೇವಂತ್ ಅವರನ್ನು ಹುದ್ದೆಯಿಂದ ವಜಾಗೊಳಿಸಿತು. ಅಂತಿಮವಾಗಿ 2017ರ ಅಕ್ಟೋಬರ್ 31 ರಂದು ರೇವಂತ್ ಕಾಂಗ್ರೆಸ್ ಸದಸ್ಯರಾದರು.
2018ರ ಸೆಪ್ಟೆಂಬರ್ 20 ರಂದು ಅವರು ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ 3 ಕಾರ್ಯಾಧ್ಯಕ್ಷರಲ್ಲಿ ಒಬ್ಬರಾಗಿ ನೇಮಕಗೊಂಡರು. 2018ರ ತೆಲಂಗಾಣ ವಿಧಾನಸಭೆಯಲ್ಲಿ, ರೇವಂತ್ 3ನೇ ಬಾರಿಗೆ ಕೊಡಂಗಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದ ರೇವಂತ್ ಬಿಆರ್‌ಎಸ್‌ನ ಪಟ್ನಂ ನರೇಂದ್ರ ರೆಡ್ಡಿ ಅವರ ಕೈಯಲ್ಲಿ ಮೊದಲ ಸೋಲು ಅನುಭವಿಸಿದರು.
ಅಸೆಂಬ್ಲಿ ಸೋಲಿನ ನಂತರ ರೇವಂತ್ 2019ರ ಲೋಕಸಭೆ ಚುನಾವಣೆಯಲ್ಲಿ ತಮ್ಮ ಅದೃಷ್ಟವನ್ನು ಪರೀಕ್ಷಿಸಿದರು. 2019ರ ಚುನಾವಣೆಯಲ್ಲಿ ಗೆದ್ದ ತೆಲಂಗಾಣದ ಮೂವರು ಕಾಂಗ್ರೆಸ್ ಸಂಸದರಲ್ಲಿ ರೇವಂತ್ ಒಬ್ಬರು. ಮಲ್ಕಾಜ್‌ಗಿರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿಆರ್‌ಎಸ್‌ನ ಎಂ ರಾಜಶೇಖರ ರೆಡ್ಡಿ ಅವರನ್ನು 10,000ಕ್ಕೂ ಹೆಚ್ಚು ಮತಗಳಿಂದ ಸೋಲಿಸಿದ್ದಾರೆ. 2021ರ ಜೂನ್‌ನಲ್ಲಿ ರೇವಂತ್ ಅವರನ್ನು ಕಾಂಗ್ರೆಸ್ ತನ್ನ ತೆಲಂಗಾಣ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಮಾಡಿದಾಗ ದೊಡ್ಡ ಜವಾಬ್ದಾರಿಯನ್ನು ಪಡೆದರು. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರೇವಂತ್ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಕಾಮರೆಡ್ಡಿ ವಿಧಾನಸಭಾ ಕ್ಷೇತ್ರದಲ್ಲಿ ಈ ಸ್ಪರ್ಧೆ ಏರ್ಪಟ್ಟಿತ್ತು. ಇದನ್ನೂ ಓದಿ: ಚುನಾವಣೆಯಲ್ಲಿ ಸೋಲಿನ ಹೊಣೆ ಹೊತ್ತು ಕಮಲ್ ನಾಥ್ ರಾಜೀನಾಮೆ?
ಹೈದರಾಬಾದ್: ತೆಲಂಗಾಣದ (Telangana) ನೂತನ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರಲು ರೇವಂತ್ ರೆಡ್ಡಿಯವರು (Revanth Reddy) ಸಜ್ಜಾಗಿದ್ದು, ಡಿಸೆಂಬರ್ 7 ರಂದು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ಅಧಿಕೃತವಾಗಿ ಪ್ರಕಟಿಸಲಾಗಿದೆ.
ರೇವಂತ್ ರೆಡ್ಡಿಯವರ ಜೊತೆ ಇತರ ಕೆಲವು ಸಚಿವರುಗಳು ಕೂಡ ಪ್ರಮಣ ವಚನ ಸ್ವೀಕಾರ ಮಾಡಲಿದ್ದಾರೆ. ಹೈದರಾಬಾದ್‍ನಲ್ಲಿ ನಡೆದ ಸಿಎಲ್‍ಪಿ ಸಭೆಯಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದ್ದು, ಸಿಎಂ ನೇಮಕದ ಅಂತಿಮ ನಿರ್ಧಾರವನ್ನು ಪಕ್ಷದ ಹೈಕಮಾಂಡ್ ಕೈಗೊಂಡಿದೆ.
ಈ ಹಿಂದೆ ಡಿಸೆಂಬರ್ 9 ರಂದು ಸೋನಿಯಾ ಗಾಂಧಿಯವರ ಜನ್ಮದಿನವಿದ್ದು, ಇದೇ ದಿನ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಾರೆ ಎಂದು ಹೇಳಲಾಗಿತ್ತು. ತೆಲಂಗಾಣ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ (Telangana Vidhanasabha Election Results) ತೆಲಂಗಾಣದಲ್ಲಿ ಕಾಂಗ್ರೆಸ್ (Congress) ಅಭೂತಪೂರ್ವ ಜಯಗಳಿಸಿತ್ತು. 119 ಸ್ಥಾನಗಳ ಪೈಕಿ 69 ಸ್ಥಾನಗಳನ್ನು ಗಳಿಸುವ ಮೂಲಕ ಸ್ಪಷ್ಟಬಹುಮತ ಪಡೆದಿತ್ತು.
ಯಾರು ಈ ರೇವಂತ್ ರೆಡ್ಡಿ?: ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (ಟಿಪಿಸಿಸಿ) ಅಧ್ಯಕ್ಷ 56 ವರ್ಷದ ಅನುಮುಲಾ ರೇವಂತ್ ರೆಡ್ಡಿ ಪಕ್ಷದ ಪ್ರಮುಖ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ. ಆದರೆ ಇದಕ್ಕೂ ಮೊದಲು ರೇವಂತ್ ರೆಡ್ಡಿ ಆರ್‌ಎಸ್‌ಎಸ್ ಮತ್ತು ಎಬಿವಿಪಿಯಿಂದ ಗುರುತಿಸಿಕೊಂಡಿದ್ದವರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ರೆಡ್ಡಿ ಅವರು ಕಾಂಗ್ರೆಸ್ ಸೇರಿದರು. ಕಾಂಗ್ರೆಸ್ ಪರ ಅವರು ಕ್ಯಾಂಪೇನ್ ನಡೆಸುತ್ತಿದ್ದಾಗ, ಅವರ ಹಿನ್ನೆಲೆ ಹೆಚ್ಚು ಚರ್ಚೆಯಾಗಿತ್ತು.
ರೇವಂತ್ ರೆಡ್ಡಿ ಆರ್‌ಎಸ್‌ಎಸ್ (RSS) ಕೈಗೊಂಬೆ ಎಂದು ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಅನೇಕ ಬಾರಿ ಟೀಕಿಸಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಕೆಲವು ಕ್ಷೇತ್ರಗಳಲ್ಲಿ ಒಂದಾಗಿ ಕೆಲಸ ಮಾಡುತ್ತಿವೆ ಎಂದೂ ಸಹ ಓವೈಸಿ ಹಿಂದಿನ ದಿನಗಳಲ್ಲಿ ಆರೋಪಿಸಿದ್ದರು.
ರೇವಂತ್ ರೆಡ್ಡಿ ಅವರು ಎಬಿವಿಪಿಯಿಂದ (ABVP) ರಾಜಕೀಯ ಜೀವನ ಆರಂಭಿಸಿದರು. ನಂತರ ಟಿಡಿಪಿಗೆ (TDP) ಹೋದರು. 2009 ಮತ್ತು 2014 ರ ಚುನಾವಣೆಯಲ್ಲಿ ಕೊಡಂಗಲ್ ಕ್ಷೇತ್ರದಿಂದ ಗೆಲುವು ಸಾಧಿಸಿದರು. ಲಂಚ ಹಗರಣದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದ ನಂತರ ಅವರು ಟಿಡಿಪಿ ತೊರೆದರು. 2017 ರ ಅಕ್ಟೋಬರ್‌ನಲ್ಲಿ ಕಾಂಗ್ರೆಸ್ ಸೇರಿದರು. 2018 ರ ಚುನಾವಣೆಯಲ್ಲಿ ಬಿಆರ್‌ಎಸ್ (BRS) ವಿರುದ್ಧ ಸ್ಪರ್ಧಿಸಿ ಕೊಡಂಗಲ್‌ನಿಂದ ಸೋತರು. ಆದರೆ ಮತ್ತೆ ಪುಟಿದೆದ್ದು 2019 ರ ಲೋಕಸಭೆ ಚುನಾವಣೆಯಲ್ಲಿ ಮಲ್ಕಾಜ್‌ಗಿರಿ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದರು. ಜೂನ್ 2021 ರಲ್ಲಿ ಅವರನ್ನು TPCC ಮುಖ್ಯಸ್ಥರನ್ನಾಗಿ ನೇಮಿಸಲಾಯಿತು.
ಯಾವುದೇ ಪಕ್ಷ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ, ಆ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷರೇ ಸಿಎಂ ಸ್ಥಾನ ಅಲಂಕರಿಸುವುದು (ಕರ್ನಾಟಕ ಹೊರತುಪಡಿಸಿ) ಸಾಮಾನ್ಯ. ಅಂತೆಯೇ 4 ರಾಜ್ಯ ಚುನಾವಣಾ ಫಲಿತಾಂಶದಲ್ಲಿ ತೆಲಂಗಾಣದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸುವುದು ನಿಚ್ಚಳವಾಗಿದೆ. ಹೀಗಾಗಿ ಪಕ್ಷದ ರಾಜ್ಯಾಧ್ಯಕ್ಷರಾಗಿರುವ ರೇವಂತ್ ರೆಡ್ಡಿಯೇ ಸಿಎಂ ಆಗಬಹುದು ಎಂದು ಮೂಲಗಳು ತಿಳಿಸಿವೆ.
ಹೈದರಾಬಾದ್: ತೆಲಂಗಾಣ (Telangana) ವಿಧಾನಸಭಾ ಚುನಾವಣೆಯ (Election) ಮತ ಎಣಿಕೆ ನಡೆಯುತ್ತಿದ್ದ ವೇಳೆ ತೆಲಂಗಾಣ ಕಾಂಗ್ರೆಸ್ (Congress) ಮುಖ್ಯಸ್ಥ ರೇವಂತ್ ರೆಡ್ಡಿ (Revanth Reddy) ಅವರನ್ನು ಭೇಟಿ ಮಾಡಿದ್ದಕ್ಕಾಗಿ ತೆಲಂಗಾಣದ ಪೊಲೀಸ್ ಮಹಾನಿರ್ದೇಶಕ ಅಂಜನಿ ಕುಮಾರ್ ಅವನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ.
ಅಂಜನಿ ಕುಮಾರ್ ಮತ್ತು ಇತರ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ವಿವರಣೆಯನ್ನು ಸಲ್ಲಿಸುವಂತೆ ಕೇಳಲಾಗಿದೆ.
ಅಂಜನಿ ಕುಮಾರ್ ಮತ್ತು ಇತರ ಪೊಲೀಸ್ ಅಧಿಕಾರಿಗಳು ಇಂದು (ಭಾನುವಾರ) ಮುಂಜಾನೆ ಹೈದರಾಬಾದ್‌ನಲ್ಲಿರುವ ರೇವಂತ್ ರೆಡ್ಡಿ ಅವರನ್ನು ಭೇಟಿಯಾಗಲು ಅವರ ನಿವಾಸಕ್ಕೆ ತೆರಳಿದ್ದರು. ಕಾಂಗ್ರೆಸ್ ಮುಖ್ಯಸ್ಥರಿಗೆ ಉನ್ನತ ಪೊಲೀಸ್ ಪುಷ್ಪಗುಚ್ಛ ನೀಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಡಿಜಿಪಿ ಅಭ್ಯರ್ಥಿಯೊಬ್ಬರನ್ನು ಭೇಟಿಯಾಗಿರುವುದು ಒಂದು ಪಕ್ಷಕ್ಕೆ ತೋರಿದ ಒಲವು ಎಂಬ ಸ್ಪಷ್ಟ ಸೂಚನೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕಾಂಗ್ರೆಸ್‌ಗೆ ಸ್ವೀಟೆಸ್ಟ್ ವಿಕ್ಟರಿ – ರೇವಂತ್ ರೆಡ್ಡಿಗೆ ಅಭಿನಂದನೆ ಸಲ್ಲಿಸಿದ ನಟಿ ರಮ್ಯಾ