Tag: Revathi

  • ಕುಮಾರಸ್ವಾಮಿಗೆ ಯಡಿಯೂರಪ್ಪ ಧನ್ಯವಾದ

    ಕುಮಾರಸ್ವಾಮಿಗೆ ಯಡಿಯೂರಪ್ಪ ಧನ್ಯವಾದ

    ಬೆಂಗಳೂರು: ಮಗನ ಮದುವೆಯನ್ನು ಸರಳವಾಗಿ ಮಾಡಿದ್ದಕ್ಕೆ ಎಚ್.ಡಿ.ಕುಮಾರಸ್ವಾಮಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಧನ್ಯವಾದ ತಿಳಿಸಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ ಅವರು, ಕುಮಾರಸ್ವಾಮಿ ಪುತ್ರನ ಮದುವೆಗೆ ಅನುಮತಿ ಕೊಡಲಾಗಿತ್ತು. ಅವರು ಸರಳವಾಗಿ ಮದುವೆ ಮಾಡಿದ್ದಾರೆ. ಅವರ ಕುಟುಂಬ ದೊಡ್ಡದಿದ್ದರೂ ಹೆಚ್ಚು ಜನರನ್ನು ಸೇರಿಸದೆ ಮದುವೆ ಕಾರ್ಯ ಮುಗಿಸಿದ್ದಾರೆ. ಹೀಗಾಗಿ ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

    ಶುಕ್ರವಾರ ನಟ ನಿಖಿಲ್ ಮತ್ತು ರೇವತಿ ವಿವಾಹ ಕಲ್ಯಾಣೋತ್ಸವ ಅದ್ಧೂರಿ ಸೆಟ್‍ನಲ್ಲಿ ರಾಮನಗರ ತಾಲೂಕಿನ ಕೇತಗಾನಹಳ್ಳಿಯಲ್ಲಿನ ಎಚ್‍ಡಿ ಕುಮಾರಸ್ವಾಮಿ ಫಾರ್ಮ್ ಹೌಸ್‍ನಲ್ಲಿ ನಡೆದಿದೆ. ಮದುವೆಗಾಗಿ ಕೇತಗಾನಹಳ್ಳಿಯಲ್ಲಿನ ಕುಮಾರಸ್ವಾಮಿ ಫಾರ್ಮ್ ಹೌಸ್‍ನಲ್ಲಿ ಸಪ್ತಪದಿ ಕಲ್ಯಾಣ ಮಂಟಪವನ್ನು ನಿರ್ಮಿಸಲಾಗಿತ್ತು. ಬೆಳಗ್ಗೆ 9.30ರಿಂದ 10.20ರ ಶುಭಲಗ್ನದಲ್ಲಿ ವರ ನಿಖಿಲ್ ರೇವತಿಯ ಕೊರಳಿಗೆ ಮಾಂಗಲ್ಯಧಾರಣೆ ಮಾಡಿದ್ದರು. ನವ ದಂಪತಿಗೆ ಮದುವೆಯಲ್ಲಿ ಭಾಗಿಯಾಗಿದ್ದ ಗಣ್ಯರು, ಹಿತೈಷಿಗಳು ಧಾರೆ ಎರೆಯುವ ಮೂಲಕ ಆಶೀರ್ವಾದ ಮಾಡಿದ್ದರು.

    ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ದಂಪತಿ, ಎಚ್‍ಡಿ ಕುಮಾರಸ್ವಾಮಿ ದಂಪತಿ ಹಾಗೂ ಉದ್ಯಮಿ ಮಂಜುನಾಥ್ ದಂಪತಿ ಸಮ್ಮುಖದಲ್ಲಿ ನಿಖಿಲ್ ಮತ್ತು ರೇವತಿ ವಿವಾಹ ಕಾರ್ಯಕ್ರಮ ನೆರವೇರಿದೆ. ನಿಖಿಲ್ ಹಾಗೂ ರೇವತಿ ಮನೆಯವರು, ಆಪ್ತರಷ್ಟೆ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

  • ನನ್ನ ಪುತ್ರನ ಮದ್ವೆಗೆ ಮನೆಯಿಂದಲೇ ಹಾರೈಸಿದ ನಿಮ್ಮೆಲ್ಲರಿಗೂ ಸದಾ ಋಣಿ: ಎಚ್‍ಡಿಕೆ

    ನನ್ನ ಪುತ್ರನ ಮದ್ವೆಗೆ ಮನೆಯಿಂದಲೇ ಹಾರೈಸಿದ ನಿಮ್ಮೆಲ್ಲರಿಗೂ ಸದಾ ಋಣಿ: ಎಚ್‍ಡಿಕೆ

    ಬೆಂಗಳೂರು: ಇಂದು ಮಾಜಿ ಸಿಎಂ ಕುಮಾರಸ್ವಾಮಿ ಅವರ ಪುತ್ರ ನಟ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಅವರ ಮದುವೆ ರಾಮನಗರದ ಕೇತಗಾನಹಳ್ಳಿ ತೋಟದ ಮನೆಯಲ್ಲಿ ಸರಳವಾಗಿ ನೇರವೇರಿದೆ. ಇದೇ ಬೆನ್ನಲ್ಲೇ ಎಚ್‍ಡಿಕೆ ಅವರು ಟ್ವೀಟ್ ಮಾಡಿ ತಮ್ಮ ಮಗ ಹಾಗೂ ಸೊಸೆಗೆ ಮನೆಯಿಂದಲೇ ಶುಭ ಹಾರೈಸಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.

    ನನ್ನ ಪುತ್ರ ನಿಖಿಲ್ ಮತ್ತು ರೇವತಿ ಅವರ ವಿವಾಹ ಇಂದು ಅತ್ಯಂತ ಸರಳ ರೀತಿಯಲ್ಲಿ ನಡೆಯಲು ಸಹಕರಿಸಿದ ಲಕ್ಷಾಂತರ ಕಾರ್ಯಕರ್ತರು ಮತ್ತು ಕುಟುಂಬದ ಹಿತೈಷಿಗಳಿಗೆ ಹೃದಯಾಂತರಾಳದ ಕೃತಜ್ಞತೆಗಳು. ಇಡೀ ಜಗತ್ತು ಕೊರೊನಾ ವೈರಸ್ ಎಂಬ ಮಹಾಮಾರಿಯಿಂದ ತತ್ತರಿಸುತ್ತಿರುವ ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿ ಅನ್ವಯ, ವ್ಯವಸ್ಥಿತವಾಗಿ ಸಾಮಾಜಿಕ ಅಂತರ ಹಾಗೂ ಮುನ್ನೆಚ್ಚರಿಕೆಯ ನಡುವೆ ವಿವಾಹ ಅಚ್ಚುಕಟ್ಟಾಗಿ ನೆರವೇರಿದೆ ಎಂದು ಟ್ವಿಟ್ ಮಾಡಿದ್ದಾರೆ.

    ಹಾಗೆಯೇ ಶಾಸಕರು, ಕಾರ್ಯಕರ್ತರು, ಮುಖಂಡರು, ಕುಟುಂಬದ ಹಿತೈಷಿಗಳು ಸೇರಿದಂತೆ ನಾಡಿನ ಲಕ್ಷಾಂತರ ಜನರು ನನ್ನ ಕುಟುಂಬದ ಕುಡಿಯ ವಿವಾಹಕ್ಕೆ ಮನೆಯಿಂದಲೇ ಹರಸಿದ್ದೀರಿ. ನಾನು ಮತ್ತು ನನ್ನ ಕುಟುಂಬ ವರ್ಗ ಮಾಡಿದ ಮನವಿಗೆ ನೀವುಗಳು ಸ್ಪಂದಿಸಿದ ರೀತಿ ಅನುಕರಣೀಯ ಮತ್ತು ಮಾದರಿ ಎಂದು ಎಚ್‍ಡಿಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಜಗತ್ತು ಪ್ರಸಕ್ತ ಎದುರಿಸುತ್ತಿರುವ ಈ ಗಂಡಾಂತರ ಕಳೆದು ಪರಿಸ್ಥಿತಿ ಸಹಜವಾದಾಗ ನಾವು ಮತ್ತು ನೀವುಗಳು ಜತೆ ಸೇರಿ ಒಟ್ಟಿಗೆ ಕುಳಿತು ಊಟ ಮಾಡೋಣ. ನಿಮ್ಮ ಹೃದಯ ವೈಶಾಲ್ಯ ಮತ್ತು ಪ್ರೀತಿಗೆ ನಾವುಗಳು ಸದಾ ಋಣಿ. ನವದಂಪತಿಗೆ ಹರಸಿದ ಪ್ರತಿಯೊಬ್ಬರಿಗೂ ಮತ್ತೊಮ್ಮೆ ಹೃದಯತುಂಬಿದ ಕೃತಜ್ಞತೆಗಳು ಎಂದು ಹೇಳಿದ್ದಾರೆ.

    ಇಂದು ಬೆಳಗ್ಗೆ 9.30ರಿಂದ 10.20ರ ಶುಭಲಗ್ನದಲ್ಲಿ ನಿಖಿಲ್ ಅವರು ರೇವತಿಯ ಕೊರಳಿಗೆ ಮಾಂಗಲ್ಯಧಾರಣೆ ಮಾಡಿದ್ದಾರೆ. ನವ ದಂಪತಿಗೆ ಮದುವೆಯಲ್ಲಿ ಭಾಗಿಯಾಗಿದ್ದ ಗಣ್ಯರು, ಹಿತೈಷಿಗಳು ಧಾರೆ ಎರೆಯುವ ಮೂಲಕ ಆಶೀರ್ವಾದ ಮಾಡಿದ್ದಾರೆ.

    ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ದಂಪತಿ, ಎಚ್‍ಡಿ ಕುಮಾರಸ್ವಾಮಿ ದಂಪತಿ ಹಾಗೂ ಉದ್ಯಮಿ ಮಂಜುನಾಥ್ ದಂಪತಿ ಸಮ್ಮುಖದಲ್ಲಿ ನಿಖಿಲ್ ಮತ್ತು ರೇವತಿ ವಿವಾಹ ಕಾರ್ಯಕ್ರಮ ನೆರವೇರಿದೆ. ನಿಖಿಲ್ ಹಾಗೂ ರೇವತಿ ಮನೆಯವರು, ಆಪ್ತರಷ್ಟೆ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮದುವೆ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ, ಭವಾನಿ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ಕುಟುಂಬದವರು ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಂಡಿದ್ದರು.

  • ರೇವತಿಗೆ ಮಾಂಗಲ್ಯಧಾರಣೆ ಮಾಡಿದ ನಿಖಿಲ್

    ರೇವತಿಗೆ ಮಾಂಗಲ್ಯಧಾರಣೆ ಮಾಡಿದ ನಿಖಿಲ್

    ರಾಮನಗರ: ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಪುತ್ರ ನಟ ನಿಖಿಲ್ ಮತ್ತು ರೇವತಿ ವಿವಾಹ ಕಲ್ಯಾಣೋತ್ಸವ ಅದ್ಧೂರಿ ಸೆಟ್‍ನಲ್ಲಿ ರಾಮನಗರ ತಾಲೂಕಿನ ಕೇತಗಾನಹಳ್ಳಿಯಲ್ಲಿನ ಎಚ್‍ಡಿ ಕುಮಾರಸ್ವಾಮಿ ಫಾರ್ಮ್ ಹೌಸ್‍ನಲ್ಲಿ ನಡೆದಿದೆ.

    ಮದುವೆಗಾಗಿ ಕೇತಗಾನಹಳ್ಳಿಯಲ್ಲಿನ ಕುಮಾರಸ್ವಾಮಿ ಫಾರ್ಮ್ ಹೌಸ್‍ನಲ್ಲಿ ಸಪ್ತಪದಿ ಕಲ್ಯಾಣ ಮಂಟಪವನ್ನು ನಿರ್ಮಿಸಲಾಗಿತ್ತು. ಬೆಳಗ್ಗೆ 9.30ರಿಂದ 10.20ರ ಶುಭಲಗ್ನದಲ್ಲಿ ವರ ನಿಖಿಲ್ ರೇವತಿಯ ಕೊರಳಿಗೆ ಮಾಂಗಲ್ಯಧಾರಣೆ ಮಾಡಿದ್ದಾರೆ. ನವ ದಂಪತಿಗೆ ಮದುವೆಯಲ್ಲಿ ಭಾಗಿಯಾಗಿದ್ದ ಗಣ್ಯರು, ಹಿತೈಷಿಗಳು ಧಾರೆ ಎರೆಯುವ ಮೂಲಕ ಆಶೀರ್ವಾದ ಮಾಡಿದ್ದಾರೆ.

    ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ದಂಪತಿ, ಎಚ್‍ಡಿ ಕುಮಾರಸ್ವಾಮಿ ದಂಪತಿ ಹಾಗೂ ಉದ್ಯಮಿ ಮಂಜುನಾಥ್ ದಂಪತಿ ಸಮ್ಮುಖದಲ್ಲಿ ನಿಖಿಲ್ ಮತ್ತು ರೇವತಿ ವಿವಾಹ ಕಾರ್ಯಕ್ರಮ ನೆರವೇರಿದೆ. ನಿಖಿಲ್ ಹಾಗೂ ರೇವತಿ ಮನೆಯವರು, ಆಪ್ತರಷ್ಟೆ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

    ಮದುವೆ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ, ಭವಾನಿ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ಕುಟುಂಬದವರು ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಂಡಿದ್ದರು.

    https://twitter.com/ANI/status/1251014426817368064

    ಈ ಹಿಂದೆ ರಾಮನಗರದ ಜನಪದ ಲೋಕದ ಬಳಿ ವಿವಾಹ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಕೊರೊನಾ ಪರಿಣಾಮದಿಂದ ಬೆಂಗಳೂರಿನಲ್ಲಿ ಕುಮಾರಸ್ವಾಮಿ ನಿವಾಸಕ್ಕೆ ಶಿಫ್ಟ್ ಆಗಿತ್ತು. ಈಗ ಬೆಂಗಳೂರು ರೆಡ್ ಜೋನ್‍ನಲ್ಲಿದೆ. ಹೀಗಾಗಿ ಕುಮಾರಸ್ವಾಮಿ ಅವರು ಮತ್ತೆ ಗ್ರೀನ್ ಜೋನ್ ರಾಮನಗರಕ್ಕೆ ಮದುವೆ ಶಿಫ್ಟ್ ಮಾಡಿದ್ದರು.

  • ಲಾಕ್‍ಡೌನ್ ನಡುವೆಯೂ ಎಚ್‍ಡಿಕೆ ಪುತ್ರನ ಕಲ್ಯಾಣ

    ಲಾಕ್‍ಡೌನ್ ನಡುವೆಯೂ ಎಚ್‍ಡಿಕೆ ಪುತ್ರನ ಕಲ್ಯಾಣ

    ರಾಮನಗರ: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಕುಟುಂಬದಲ್ಲಿ ನಡೆಯಬೇಕಿದ್ದ ಅದ್ಧೂರಿ ಮದುವೆಗೂ ಲಾಕ್‍ಡೌನ್ ಎಫೆಕ್ಟ್ ತಟ್ಟಿದೆ. ಇಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ವಿವಾಹ ಸರಳವಾಗಿ ನಡೆಯುತ್ತಿದೆ.

    ರಾಮನಗರ ತಾಲೂಕಿನ ಕೇತಗಾನಹಳ್ಳಿಯಲ್ಲಿನ ಎಚ್‍ಡಿಕೆ ಫಾರ್ಮ್‍ಹೌಸ್‍ನಲ್ಲಿ ವಿವಾಹ ನಡೆಯುತ್ತಿದ್ದು, ಪೂರ್ವ ನಿಗದಿಯಾಗಿದ್ದ ದಿನಾಂಕದಂದೇ ಮದುವೆ ನಡೆಯುತ್ತಿದೆ. ಎರಡು ಕುಟುಂಬದವರು ಹಾಗೂ ಕೆಲವು ಆಪ್ತರ ಸಮ್ಮುಖದಲ್ಲಿ ವಿವಾಹ ನಡೆಯಲಿದ್ದು, ನಿಖಿಲ್  ಮತ್ತು ರೇವತಿ ವಿವಾಹ ಬೆಳಗ್ಗೆ 9.30ರಿಂದ 10.20ರ ಶುಭಲಗ್ನದಲ್ಲಿ ನೆರವೇರಲಿದೆ.

    ಈಗಾಗಲೇ ಫಾರ್ಮ್‍ಹೌಸ್‍ನಲ್ಲಿ ವರ ನಿಖಿಲ್ ಮತ್ತು ವಧು ರೇವತಿಗೆ ಅರಿಶಿಣ ಶಾಸ್ತ್ರ ಮಾಡಿ ಮುಗಿಸಿದ್ದಾರೆ. ಮುಂದಿನ ಶಾಸ್ತ್ರಗಳಿಗೆ ಸಿದ್ಧತೆ ನಡೆಯುತ್ತಿದೆ. ಈ ಹಿಂದೆ ರಾಮನಗರದ ಜನಪದ ಲೋಕದ ಬಳಿ ವಿವಾಹ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಕೊರೊನಾ ಪರಿಣಾಮದಿಂದ ಬೆಂಗಳೂರಿನಲ್ಲಿ ಕುಮಾರಸ್ವಾಮಿ ನಿವಾಸಕ್ಕೆ ಮದುವೆ ಶಿಫ್ಟ್ ಆಗಿತ್ತು. ಈಗ ಬೆಂಗಳೂರು ರೆಡ್ ಜೋನ್‍ನಲ್ಲಿದೆ. ಹೀಗಾಗಿ ಕುಮಾರಸ್ವಾಮಿ ಅವರು ಮತ್ತೆ ಗ್ರೀನ್ ಜೋನ್ ರಾಮನಗರಕ್ಕೆ ಮದುವೆ ಶಿಫ್ಟ್ ಮಾಡಿದ್ದರು.

    ಲಾಕ್‍ಡೌನ್ ಹಿನ್ನೆಲೆಯಲ್ಲಿ ಮದುವೆಗೆ ಕೇವಲ ಕುಟುಂಬದವರು ಹಾಗೂ ಆಪ್ತರಿಗೆ ಮಾತ್ರ ಪ್ರವೇಶ ನೀಡಲಾಗಿದೆ. ಪೊಲೀಸರು ಕೂಡ ಪ್ರತಿ ವಾಹನಗಳನ್ನು ತಡೆದು ಪರಿಶೀಲಿಸಿ ಕಳುಹಿಸುತ್ತಿದ್ದಾರೆ. ಪ್ರವೇಶಕ್ಕೆ ಅನುಮತಿ ಪಡೆದಿರುವವರಿಗಷ್ಟೇ ಕಾರ್ ನಂಬರ್ ನೋಡಿ ಪೊಲೀಸರು ಒಳಗೆ ಹೋಗಲು ಅವಕಾಶ ಮಾಡಿಕೊಡುತ್ತಿದ್ದಾರೆ.

  • ಬೆಂಗ್ಳೂರಿನಿಂದ ಮತ್ತೆ ರಾಮನಗರಕ್ಕೆ ನಿಖಿಲ್ ಮದ್ವೆ ಶಿಫ್ಟ್

    ಬೆಂಗ್ಳೂರಿನಿಂದ ಮತ್ತೆ ರಾಮನಗರಕ್ಕೆ ನಿಖಿಲ್ ಮದ್ವೆ ಶಿಫ್ಟ್

    – ತೋಟದ ಮನೆಯಲ್ಲಿ ಸಿಂಪಲ್ ಮ್ಯಾರೇಜ್
    – ನಿಖಿಲ್, ರೇವತಿ ಕುಟುಂಬಸ್ಥರಷ್ಟೇ ಭಾಗಿ

    ರಾಮನಗರ: ನಿಗದಿಯಾದಂತೆ ಏಪ್ರಿಲ್ 17ರಂದೇ ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ, ನಟ ನಿಖಿಲ್ ಹಾಗೂ ರೇವತಿ ಅವರ ಮದುವೆ ನಡೆಯಲಿದ್ದು, ಮದುವೆ ಕಾರ್ಯಕ್ರಮವನ್ನು ಬೆಂಗಳೂರಿನಿಂದ ರಾಮನಗರಕ್ಕೆ ಶಿಫ್ಟ್ ಮಾಡಲಾಗಿದೆ.

    ರಾಮನಗರ ತಾಲೂಕಿನ ಕೇತಗಾನಹಳ್ಳಿ ಗ್ರಾಮದ ಬಳಿ ಇರುವ ತೋಟದ ಮನೆಯಲ್ಲಿ ಸರಳವಾಗಿ ನಿಖಿಲ್ ಹಾಗೂ ರೇವತಿ ಮದುವೆ ನೆರವೇರಿಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಮೊದಲು ರಾಮನಗರದ ಹೊರವಲಯದ ಜನಪದ ಲೋಕದ ಬಳಿ ನಿಖಿಲ್, ರೇವತಿ ವಿವಾಹ ನಡೆಸಲು ನಿಗದಿ ಮಾಡಲಾಗಿತ್ತು. ಆದರೆ ಕೊರೊನಾ ವೈರಸ್ ಭೀತಿ ಹಿನ್ನೆಲೆ ಮದುವೆ ಕಾರ್ಯಕ್ರಮವನ್ನು ಬೆಂಗಳೂರಿನ ಹೆಚ್‍ಡಿಕೆ ನಿವಾಸದ ಬಳಿಯೇ ಮಾಡಲು ನಿರ್ಧರಿಸಲಾಗಿತ್ತು.

    ಈಗ ಕೊರೊನಾ ಹಾವಳಿಗೆ ಬೆಂಗಳೂರು ರೆಡ್ ಜೋನ್‍ನಲ್ಲಿರುವ ಹಿನ್ನೆಲೆ ಮತ್ತೆ ಮದುವೆ ಕಾರ್ಯವನ್ನು ರಾಮನಗರದಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು, ಕೇತಗಾನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿಯೇ ಮದುವೆ ನೆರವೇರಲಿದೆ.

    ಮದುವೆಗೆ ನಿಖಿಲ್ ಹಾಗೂ ರೇವತಿ ಅವರ ಎರಡು ಕುಟುಂಬದವರು ಸೇರಿ ಸುಮಾರು 70 ರಿಂದ 100 ಜನರು ಮಾತ್ರ ಭಾಗಿಯಾಗಲಿದ್ದಾರೆ. ಸರಳವಾಗಿ ನಿಖಿಲ್ ಮದುವೆ ನೆರವೇರಲಿದ್ದು, ಈಗಾಗಲೇ ತೋಟದ ಮನೆ ಬಳಿ ವಿವಾಹಕ್ಕೆ ಸಿದ್ಧತೆ ಭರದಿಂದ ಸಾಗುತ್ತಿದೆ. ತೋಟದ ಮನೆಯ ಬಳಿ ವಿವಾಹಕ್ಕೆ ಸೆಟ್ ಹಾಕುವುದು, ಇರತೆ ವ್ಯವಸ್ಥೆಗಳ ಸಿದ್ಧತಾ ಕಾರ್ಯಗಳು ನಡೆಯುತ್ತಿದೆ.

  • ನಿಶ್ಚಯವಾದಂತೆ ಏಪ್ರಿಲ್ 17ರಂದೇ ನಿಖಿಲ್, ರೇವತಿ ಮದ್ವೆ – ಕುಟುಂಬಸ್ಥರಷ್ಟೇ ಭಾಗಿ

    ನಿಶ್ಚಯವಾದಂತೆ ಏಪ್ರಿಲ್ 17ರಂದೇ ನಿಖಿಲ್, ರೇವತಿ ಮದ್ವೆ – ಕುಟುಂಬಸ್ಥರಷ್ಟೇ ಭಾಗಿ

    ರಾಮನಗರ: ಪುತ್ರ ನಿಖಿಲ್ ಹಾಗೂ ರೇವತಿ ವಿವಾಹ ಕಾರ್ಯ ಪೂರ್ವ ನಿಗದಿಯಂತೆ ಏಪ್ರಿಲ್ 17ರಂದೇ ಬೆಂಗಳೂರಿನ ಮನೆಯ ಬಳಿ ಎರಡು ಕುಟುಂಬಸ್ಥರ ನಡುವೆ ನಡೆಸುವುದಾಗಿ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ರಾಮನಗರದಲ್ಲಿ ತಿಳಿಸಿದ್ದಾರೆ.

    ರಾಮನಗರ ಹೊರವಲಯದ ಜನಪದ ಲೋಕದ ಬಳಿ ನಿಖಿಲ್-ರೇವತಿ ವಿವಾಹ ಕಾರ್ಯವನ್ನು ಅದ್ಧೂರಿಯಾಗಿ ನಡೆಸಲು ಸಿದ್ಧತೆಗಳನ್ನು ನಡೆಸಲಾಗಿತ್ತು. ಆದರೆ ಕೊರೊನಾ ವೈರಸ್ ಭೀತಿಯಿಂದ ಮದುವೆ ಸಿದ್ಧತಾ ಕಾರ್ಯಗಳು ಸ್ಥಗಿತಗೊಂಡಿದ್ದವು. ಅಲ್ಲದೇ ಬೆಂಗಳೂರಿನ ಪ್ಯಾಲೆಸ್ ಮೈದಾನದಲ್ಲಿ ಮದುವೆ ಕಾರ್ಯ ನಡೆಸಲಾಗುತ್ತೆ ಎನ್ನಲಾಗಿತ್ತು.

    ಇದೀಗ ಎಚ್‍ಡಿಕೆಯವರು ಮಗನ ಮದುವೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಪೂರ್ವ ನಿಗದಿಯಂತೆ ಏಪ್ರಿಲ್ 17ರಂದೇ ಶುಭದಿನವಾಗಿದ್ದು, ಬೆಂಗಳೂರಿನ ಮನೆಯ ಬಳಿ ಎರಡು ಕುಟುಂಬಸ್ಥರಷ್ಟೇ 15ರಿಂದ 20 ಮಂದಿ ಸೇರಿಕೊಂಡು ಮದುವೆ ಕಾರ್ಯ ನಡೆಸುತ್ತೇವೆ. ಮುಂದೆ ಅವಕಾಶ ಸಿಕ್ಕರೇ ರಾಮನಗರದಲ್ಲಿ ಒಂದು ಕಾರ್ಯಕ್ರಮ ನಡೆಸುವುದಾಗಿ ತಿಳಿಸಿದ್ದಾರೆ.

  • ನನ್ನ ಕೈ ಹಿಡಿದುಕೊಳ್ಳಿ, ನಾನು ಎಂದಿಗೂ ಬಿಡೋದಿಲ್ಲ – ಭಾವಿ ಪತ್ನಿಗೆ ಭಾವನಾತ್ಮಕ ಸಂದೇಶ

    ನನ್ನ ಕೈ ಹಿಡಿದುಕೊಳ್ಳಿ, ನಾನು ಎಂದಿಗೂ ಬಿಡೋದಿಲ್ಲ – ಭಾವಿ ಪತ್ನಿಗೆ ಭಾವನಾತ್ಮಕ ಸಂದೇಶ

    ಬೆಂಗಳೂರು: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ತಮ್ಮ ಭಾವಿ ಪತ್ನಿ ರೇವತಿ ಅವರಿಗೆ ಭಾವನಾತ್ಮಕ ಸಂದೇಶವನ್ನು ಕಳುಹಿಸಿದ್ದಾರೆ.

    ನಿಖಿಲ್ ನಿಶ್ಚಿತಾರ್ಥದ ನಂತರ ತಮ್ಮ ಭಾವಿ ಪತ್ನಿ ರೇವತಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು, ಅವುಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುತ್ತಿದ್ದಾರೆ. ಜೊತೆಗೆ ಆ ಫೋಟೋಗೆ ರೊಮ್ಯಾಂಟಿಕ್ ಮೂಡಿನಲ್ಲಿ ಕ್ಯಾಪ್ಶನ್ ಕೊಡುತ್ತಿದ್ದಾರೆ. ಇದೀಗ ಮತ್ತೊಂದು ಫೋಟೋವನ್ನು ಇನ್‍ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

    ನಿಖಿಲ್ ಅಪ್ಲೋಡ್ ಮಾಡಿರುವ ಫೋಟೋದಲ್ಲಿ ರೇವತಿಯ ಕೈಯನ್ನು ಹಿಡಿದುಕೊಂಡಿದ್ದಾರೆ. ರೇವತಿ ಅವರು ಕೂಡ ತಮ್ಮ ಭಾವಿ ಪತಿಯ ಕೈಯನ್ನು ಹಿಡಿದುಕೊಂಡು ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಈ ಫೋಟೋಗೆ ನಿಖಿಲ್ “ನನ್ನ ಕೈಯನ್ನು ಹಿಡಿದುಕೊಳ್ಳಿ ಮತ್ತು ನಾನು ಆ ಕೈಯನ್ನು ಎಂದಿಗೂ ಬಿಡುವುದಿಲ್ಲ” ಎಂದು ಭಾವನಾತ್ಮಕವಾಗಿ ಬರೆದುಕೊಳ್ಳುವ ಮೂಲಕ ರೇವತಿಗೆ ಸಂದೇಶ ಕಳುಹಿಸಿದ್ದಾರೆ.

    ನಿಖಿಲ್ ಫೋಟೋ ಅಪ್ಲೋಡ್ ಮಾಡಿದ ತಕ್ಷಣ ಅಭಿಮಾನಿಗಳು ಕಮೆಂಟ್ ಮಾಡುವ ಮೂಲಕ ಸೂಪರ್ ಜೋಡಿ, ಕ್ಯೂಟ್ ದಂಪತಿ ಎಂದೆಲ್ಲಾ ಕಮೆಂಟ್ ಮಾಡುತ್ತಿದ್ದಾರೆ. ನಟ ಪ್ರಥಮ್ ಕೂಡ ಇವರಿಬ್ಬರ ಫೋಟೋಗೆ ಕಮೆಂಟ್ ಮಾಡಿದ್ದಾರೆ.

    https://www.instagram.com/p/B9bJjVBpfVl/

    “10 ದಿನದ ಹಿಂದೆ ನಿಮ್ಮ ಸಂದರ್ಶನದಲ್ಲಿ ನೋಡಿದ ನೆನಪು. ಇನ್ನೂ ಭೇಟಿ ಮಾಡಿಲ್ಲ, ಮಾತನಾಡಿಲ್ಲ. ಒಂದು ಸಲ ಮೀಟ್ ಮಾಡಿ. ನಿಶ್ಚಿತಾರ್ಥ ಆಗುತ್ತಿದ್ದಂತೆ ಏನಣ್ಣ ದಿನ ಅವರ ಮನೆಗೆ ಹಾಜರಾಗುತ್ತಿದ್ದೀರಾ. ನೀವು ರೇವತಿ ಅವರು ಸೂಪರ್. ಕುಮಾರಣ್ಣರಿಗೆ ಸುಕುಮಾರ ಅನ್ನೋ ಮೊಮ್ಮಗ ಆಗಲಿ. ರೇವತಿ ಅವರಿಗೆ ಭಾನುಮತಿ-ಇಂದುಮತಿ ಅನ್ನೋ ಅವಳಿ-ಜವಳಿನೂ ಆಗಿಲಿ” ಎಂದು ಕಮೆಂಟ್ ಮಾಡಿದ್ದಾರೆ.

    ನಿಖಿಲ್ ಮತ್ತು ರೇವತಿ ಅವರ ವಿವಾಹ ಏಪ್ರಿಲ್ 17 ರಂದು ನಡೆಯಲಿದೆ. ಈಗಾಗಲೇ ಎರಡು ಕುಟುಂಬದವರು ಮದುವೆಯ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ.

     

  • ನಿಖಿಲ್ ಮದ್ವೆಗೂ ಮುನ್ನ ರಾಮನಗರ, ಚನ್ನಪಟ್ಟಣ ಜನರಿಗೆ ಭರ್ಜರಿ ಗಿಫ್ಟ್

    ನಿಖಿಲ್ ಮದ್ವೆಗೂ ಮುನ್ನ ರಾಮನಗರ, ಚನ್ನಪಟ್ಟಣ ಜನರಿಗೆ ಭರ್ಜರಿ ಗಿಫ್ಟ್

    – 8 ಲಕ್ಷ ಲಗ್ನ ಪತ್ರಿಕೆ ಮುದ್ರಣ
    – 1 ಸಾವಿರ ಅಡುಗೆ ಸಹಾಯಕರು

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮದುವೆಗೆ ಭರ್ಜರಿ ತಯಾರಿ ನಡೆಯುತ್ತದೆ. ಏಪ್ರಿಲ್‍ 17ರಂದು ನಡೆಯಲಿರುವ ನಿಖಿಲ್, ರೇವತಿ ಅವರ ಮದುವೆಗೆ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಎರಡೂ ಕುಟುಂಬದಲ್ಲೂ ಹಬ್ಬದ ವಾತಾವರಣ ನಿರ್ಮಾಣವಾಗಿದೆ.

    ಬೆಂಗಳೂರು-ಮೈಸೂರು ರಸ್ತೆಯಲ್ಲಿರುವ ಜಾನಪದ ಲೋಕದ ಸಮೀಪ ನಿರ್ಮಿಸಲಾಗುತ್ತಿರುವ ಅದ್ಧೂರಿ ಸಪ್ತಪದಿ ಮಂಟಪದಲ್ಲಿ ನಿಖಿಲ್ ರೇವತಿ ಅವರನ್ನು ವರಿಸಲಿದ್ದಾರೆ. ಗೌಡರ ಕುಟುಂಬಕ್ಕೂ ರಾಮನಗರ ಮತ್ತು ಚನ್ನಪಟ್ಟಣದ ಜನರ ನಡುವೆ ರಾಜಕೀಯವಾಗಿ ಮಾತ್ರವಲ್ಲದೆ, ಭಾವನಾತ್ಮಕ ನಂಟು ಕೂಡ ಇದೆ. ಹೀಗಾಗಿ ತಮ್ಮ ಮಗನ ಮದುವೆ ಸಂಭ್ರಮವನ್ನು ತಮ್ಮ ಕುಟುಂಬಕ್ಕೆ ಮಾತ್ರ ಸೀಮಿತಗೊಳಿಸದೆ, ತಮ್ಮ ಪಕ್ಷದ ಬೆಂಬಲಿಗರು, ಅಭಿಮಾನಿಗಳ ಜೊತೆ ಕೂಡ ಸಂಭ್ರಮಿಸಲು ಕುಮಾರಸ್ವಾಮಿ ಅವರು ನಿರ್ಧರಿಸಿದ್ದು, ಮಗನ ಮದುವೆಗೂ ಮುನ್ನವೇ ರಾಮನಗರ ಮತ್ತು ಚನ್ನಪಟ್ಟಣದ ಜನರಿಗೆ ಭರ್ಜರಿ ಉಡುಗೊರೆ ನೀಡಲು ಮುಂದಾಗಿದ್ದಾರೆ. ಇದನ್ನೂ ಓದಿ:  ‘ಸಾವು ನಮ್ಮನ್ನ ಬೇರ್ಪಡಿಸೋವರೆಗೂ ನಾವಿಬ್ಬರೂ ಹೀಗೇ ಕೈ ಹಿಡಿದಿರ್ಬೇಕು’

    ಪ್ರತಿ ಮನೆಗೂ ಆಹ್ವಾನ:
    ರಾಮನಗರ ಮತ್ತು ಚನ್ನಪಟ್ಟಣ ಕ್ಷೇತ್ರದ ಪ್ರತಿ ಮನೆಗೆ ಲಗ್ನಪತ್ರಿಕೆಯನ್ನು ನೀಡಿ, ಮದುವೆಗೆ ಆಮಂತ್ರಿಸಲು ಕುಮಾರಸ್ವಾಮಿ ಅವರು ನಿರ್ಧರಿಸಿದ್ದಾರೆ. ಲಗ್ನಪತ್ರಿಕೆಯ ಜೊತೆಗೆ ಸೀರೆ, ಪಂಚೆ, ಶರ್ಟ್ ಮತ್ತು ಶಲ್ಯವನ್ನು ಉಡುಗೊರೆಯಾಗಿ ನೀಡಲು ಎಚ್‍ಡಿಕೆ ಮುಂದಾಗಿದ್ದಾರೆ. ಹೀಗಾಗಿ ಈಗಾಗಲೇ ಮುಖಂಡರೊಂದಿಗೆ ಚರ್ಚಿಸಿ ಪ್ರತಿ ಹಳ್ಳಿಯಲ್ಲಿ ಎಷ್ಟು ಮನೆಗಳಿವೆ ಎಂಬ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಇದನ್ನೂ ಓದಿ:  80 ಎಕ್ರೆ ವಿಸ್ತೀರ್ಣದಲ್ಲಿ ಅದ್ಧೂರಿ ಸೆಟ್ – ಏ. 17ರ ಶುಭ ಶುಕ್ರವಾರ ನಿಖಿಲ್, ರೇವತಿ ಕಲ್ಯಾಣ

    ರಾಮನಗರದಲ್ಲಿ 68 ಸಾವಿರ ಮನೆಗಳಿದ್ದು, ಚನ್ನಪಟ್ಟಣದಲ್ಲಿ 70 ಸಾವಿರ ಮನೆಗಳಿವೆ ಎಂಬ ಮಾಹಿತಿ ಇದೆ. ಕ್ಷೇತ್ರಗಳಲ್ಲಿನ ಮುಸ್ಲಿಮರು ಸೇರಿದಂತೆ ಎಲ್ಲಾ ಜಾತಿ, ಧರ್ಮದವರಿಗೂ ಭೇದ ಭಾವವಿಲ್ಲದೆ ಸೀರೆ, ಪ್ಯಾಂಟ್, ಶರ್ಟ್ ನೀಡಲು ಈಗಾಗಲೇ ಎಚ್‍ಡಿಕೆ ಸೂಚಿಸಿದ್ದಾರೆ ಎನ್ನಲಾಗಿದೆ. ಅದರಲ್ಲೂ ಮಹಿಳೆಯರಿಗೆ ಸೀರೆಯ ಜೊತೆಗೆ ಅರಿಶಿನ, ಕುಂಕುಮದ ಭರಣಿಗಳನ್ನ ನೀಡಲು ತಿರ್ಮಾನಿಸಿದ್ದು, ಜಾತಿ ಭೇದ ಮಾಡದೇ ಎಲ್ಲರೂ ನಮ್ಮವರೆ ಎಂದು ಎಚ್‍ಡಿಕೆ ಉಡುಗೊರೆ ನೀಡಲು ನಿರ್ಧರಿಸಿದ್ದಾರೆ. ಇದನ್ನೂ ಓದಿ: ದೊಡ್ಡಗೌಡ್ರ ಕುಟುಂಬವನ್ನು ಬಿಡದ ವಾಸ್ತು, ಶಾಸ್ತ್ರ- ಮಗನ ಮದ್ವೆಗೆ ಎಚ್‍ಡಿಕೆ ದಂಪತಿಯಿಂದ ಭೂಮಿಗೆ ಶಕ್ತಿ ಪೂಜೆ

    8 ಲಕ್ಷ ಲಗ್ನಪತ್ರಿಕೆ ಮುದ್ರಣ:
    ನಿಖಿಲ್ ಮದುವೆಗಾಗಿ 8 ಲಕ್ಷ ಲಗ್ನಪತ್ರಿಕೆಗಳನ್ನು ಮುದ್ರಿಸಲಾಗಿದೆ. ಉಡುಗೊರೆಯ ಜೊತೆಗೆ ಲಗ್ನಪತ್ರಿಕೆ ನೀಡಿ ಮಗನ ಮದುವೆಗೆ ಆಮಂತ್ರಿಸಲು ಎಚ್‍ಡಿಕೆ ನಿರ್ಧರಿಸಿದ್ದಾರೆ. ಸದ್ಯ ಜನರಿಗೆ ನೀಡುವ ಉಡುಗೊರೆಯ ವೆಚ್ಚ 1 ಮನೆಗೆ 3 ಸಾವಿರ ರೂಪಾಯಿಯಷ್ಟು ತಗುಲುತ್ತದೆ ಎಂದು ಅಂದಾಜಿಸಲಾಗಿದೆ.

    1 ಸಾವಿರ ಅಡುಗೆ ಸಹಾಯಕರು
    ಬಳೇಪೇಟೆಯ ಬಾಣಸಿಗ ವೆಂಕಟೇಶ್ ನಿಖಿಲ್ ಮತ್ತು ರೇವತಿ ಮದುವೆಗೆ ಅಡುಗೆಯ ಎಲ್ಲಾ ಜವಾಬ್ದಾರಿಗಳನ್ನು ನಿಭಾಯಿಸಲಿದ್ದಾರೆ. ಮದುವೆಯ ದಿನ ಲಕ್ಷಾಂತರ ಮಂದಿ ಸೇರುವ ನಿರೀಕ್ಷೆ ಇದ್ದು, ಬಂದವರಿಗೆ ಊಟ ಬಡಿಸಲೆಂದೇ 1 ಸಾವಿರ ಮಂದಿ ಅಡುಗೆ ಸಹಾಯಕರನ್ನ ನೇಮಿಸಲಾಗುತ್ತಿದೆ ಎನ್ನಲಾಗಿದೆ.

  • ದೊಡ್ಡಗೌಡ್ರ ಕುಟುಂಬವನ್ನು ಬಿಡದ ವಾಸ್ತು, ಶಾಸ್ತ್ರ- ಮಗನ ಮದ್ವೆಗೆ ಎಚ್‍ಡಿಕೆ ದಂಪತಿಯಿಂದ ಭೂಮಿಗೆ ಶಕ್ತಿ ಪೂಜೆ

    ದೊಡ್ಡಗೌಡ್ರ ಕುಟುಂಬವನ್ನು ಬಿಡದ ವಾಸ್ತು, ಶಾಸ್ತ್ರ- ಮಗನ ಮದ್ವೆಗೆ ಎಚ್‍ಡಿಕೆ ದಂಪತಿಯಿಂದ ಭೂಮಿಗೆ ಶಕ್ತಿ ಪೂಜೆ

    ರಾಮನಗರ: ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಅವರ ವಿವಾಹ ಕಾರ್ಯ ನಡೆಯಲಿರುವ ಅರ್ಚಕರಹಳ್ಳಿ ಸಮೀಪದ ಜಮೀನಿನಲ್ಲಿ ಶುಕ್ರವಾರ ಭೂಮಿಗೆ ಶಕ್ತಿ ತುಂಬುವ ವಿಶೇಷ ಪೂಜೆ-ಹವನಗಳನ್ನ ವಾಸ್ತುತಜ್ಞರು, ಅರ್ಚಕರ ಮೂಲಕ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ದಂಪತಿ ನಡೆಸಲಿದ್ದಾರೆ.

    ಅಂದಹಾಗೇ 54 ಎಕರೆ ಪ್ರದೇಶದಲ್ಲಿ ನಡೆಯಲಿರುವ ಮದುವೆ ಪ್ರದೇಶದಲ್ಲಿ ಸೆಂಟ್ರೆಲ್ ಮುಸ್ಲಿಂ ಅಸೋಸಿಯೇಷನ್ (ಸಿಎಂಎ) 22 ಎಕರೆ, ಉದ್ಯಮಿಗೆ ಸೇರಿದ 23 ಎಕರೆ ಹಾಗೂ ಉಳಿಕೆ ಭೂಮಿ ಸರ್ಕಾರಿ ಹಾಗೂ ಇತರರ ಒಡೆತನದಲ್ಲಿದೆ. ಹೀಗಾಗಿ ಮದುವೆ ಕಾರ್ಯಕ್ಕೆ ಯಾವುದೇ ವಿಘ್ನ ಉಂಟಾಗದಿರಲಿ ಎಂಬ ಉದ್ದೇಶದಿಂದ ಶುಭ ಶುಕ್ರವಾರ ವಿಶೇಷ ಪೂಜೆಯನ್ನ ಎಚ್‍ಡಿ ಕುಮಾರಸ್ವಾಮಿ ದಂಪತಿ ಹಮ್ಮಿಕೊಂಡಿದ್ದಾರೆ.

    ಮಹಾಶಿವರಾತ್ರಿ ದಿನವೇ ಭೂಮಿ ಪೂಜೆ ಸಲ್ಲಿಸಲು ಅನೇಕ ಕಾರಣಗಳಿವೆ ಎನ್ನಲಾಗಿದೆ. ಶಿವನಿಗೆ ಪ್ರಿಯವಾದ ದಿನ ಶುಭಲಗ್ನವಾದ ಬೆಳಗ್ಗೆ 7.30ರಿಂದ 9.35ರೊಳಗೆ ಪೂಜೆ ಸಲ್ಲಿಸಿದರೆ ಎಲ್ಲವೂ ಶುಭವಾಗಲಿದೆ ಎಂಬ ನಂಬಿಕೆ ಇದೆ. ಹೀಗಾಗಿ ಕುಟುಂಬ ಸಮೇತರಾಗಿ ಎಚ್‍ಡಿಕೆ ಪೂಜೆ ಸಲ್ಲಿಸಲಿದ್ದಾರೆ.

    ಇಷ್ಟು ಮಾತ್ರವಲ್ಲದೇ, ವಾಸ್ತು ಶಾಸ್ತ್ರದ ಪ್ರಕಾರವೇ ಮದುವೆ ಸೆಟ್ ಹಾಕಬೇಕಿರುವ ಹಿನ್ನೆಲೆಯಲ್ಲಿ ವಾಸ್ತು ತಜ್ಞರು ಈ ಪೂಜೆಯಲ್ಲಿ ಭಾಗಿಯಾಗಲಿದ್ದು, ವಾಸ್ತು ನಿವಾರಣಾ ಪೂಜೆಯನ್ನು ನಡೆಸಲಿದ್ದಾರೆ. ಜೋತಿಷಿಗಳು, ಶಾಸ್ತ್ರಿಗಳು, ವಾಸ್ತು ತಜ್ಞರು ಒಟ್ಟಿಗೆ ಪೂಜೆ ನೆರವೇರಿಸಲಿರುವುದು ಸಾಕಷ್ಟು ಕೂತುಹಲಕ್ಕೂ ಕಾರಣವಾಗಿದೆ.

    ವಿಘ್ನ ನಿವಾರಕ ಗಣಪನಿಗೆ ಮೊದಲ ಪೂಜೆ ಸಲ್ಲಿಸಿ, ಮದುವೆ ಸೆಟ್ ಹಾಕಲು ಭೂಮಿ ಪೂಜೆ ಸಹ ನಡೆಯಲಿದೆ. ಈಗಾಗಲೇ ಕುರುಚಲು ಕಾಡಿನಂತಿದ್ದ ಜಾಗವನ್ನ ಕಳೆದ ಐದು ದಿನಗಳಿಂದ ನಿರಂತರವಾಗಿ ಜೆಸಿಬಿ ಯಂತ್ರಗಳ ಮೂಲಕ ಸಮತಟ್ಟು ಮಾಡುವ ಕಾರ್ಯವನ್ನ ಮಾಡಲಾಗುತ್ತಿದೆ.

  • ‘ಸಾವು ನಮ್ಮನ್ನ ಬೇರ್ಪಡಿಸೋವರೆಗೂ ನಾವಿಬ್ಬರೂ ಹೀಗೇ ಕೈ ಹಿಡಿದಿರ್ಬೇಕು’

    ‘ಸಾವು ನಮ್ಮನ್ನ ಬೇರ್ಪಡಿಸೋವರೆಗೂ ನಾವಿಬ್ಬರೂ ಹೀಗೇ ಕೈ ಹಿಡಿದಿರ್ಬೇಕು’

    – ಲವ್ ಮೂಡಿನಲ್ಲಿ ನಿಖಿಲ್

    ಬೆಂಗಳೂರು: ಸಾವು ನಮ್ಮನ್ನು ಬೇರ್ಪಡಿಸುವವರೆಗೂ ನಾವಿಬ್ಬರೂ ಕೈಯನ್ನು ಹೀಗೆ ಹಿಡಿದಿರಬೇಕು ಎಂಬುದು ನನ್ನ ಇಚ್ಛೆ. ನನ್ನ ಮುಂದಿನ ಜನ್ಮ ಎಂಬುದು ಇದ್ದರೆ, ಆ ಜನ್ಮದಲ್ಲೂ ನೀವೇ ನನ್ನ ಬಾಳ ಸಂಗಾತಿ ಆಗಬೇಕು ಎಂದು ರೇವತಿ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಇದನ್ನೂ ಓದಿ: ನಂಗೆ ರೇವತಿ ಅವರೇ ಪರ್ಫೆಕ್ಟ್ ಪಾರ್ಟ್ನರ್: ನಿಖಿಲ್

    ನಟ ನಿಖಿಲ್ ಕುಮಾರಸ್ವಾಮಿ ನಿಶ್ಚಿತಾರ್ಥವಾದ ಬಳಿಕ ತನ್ನ ಭಾವಿ ಪತ್ನಿಯ ಜೊತೆ ಸಮಯ ಕಳೆಯುತ್ತಿದ್ದಾರೆ. ಇತ್ತೀಚೆಗೆಷ್ಟೆ ಪ್ರೇಮಿಗಳ ದಿನಾಚರಣೆಯಂದು ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದರು. ಇದೀಗ ಮೊದಲ ಬಾರಿಗೆ ರೇವತಿ ಮೇಲಿರುವ ಭಾವನೆಯನ್ನು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಭಾವಿ ಪತ್ನಿಗೆ ವಜ್ರದುಂಗರ ತೊಡಿಸಿದ ನಿಖಿಲ್

    “ನನ್ನ ರಾಜಕುಮಾರಿ, ನಿಮ್ಮನ್ನು ತುಂಬಾ ಪ್ರೀತಿಸುತ್ತೇನೆ. ಸಮಯ ಕಳೆದಂತೆ ಸೌಂದರ್ಯ ಮಾಸಬಹುದು. ಆದರೆ ಒಳ್ಳೆಯ ಗುಣ ಸದಾ ನಮ್ಮ ಜೊತೆಯಲ್ಲಿಯೇ ಉಳಿಯುತ್ತದೆ. ನಾನು ನಿಮ್ಮ ವ್ಯಕ್ತಿತ್ವವನ್ನು ಪ್ರೀತಿಸುತ್ತೇನೆ. ನಿಮ್ಮೊಂದಿಗೆ ನಾನು ಕಳೆಯುತ್ತಿರುವ ಪ್ರತಿ ಕ್ಷಣವೂ ಅಮೂಲ್ಯವಾದುದ್ದು. ನಾನು ಪ್ರತಿ ಸೆಕೆಂಡ್ ನಿಮ್ಮನ್ನು ಪ್ರೀತಿಸುತ್ತೇನೆ” ಎಂದು ಭಾವಿ ಪತ್ನಿ ಬಗ್ಗೆ ನಿಖಿಲ್ ಇನ್ಸ್‌ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

    “ನಿಮ್ಮ ಜೊತೆ ಕೊನೆಯವರೆಗೂ ಇದೇ ರೀತಿ ಇರಲು ಇಷ್ಟಪಡುತ್ತೇನೆ. ಸಾವು ನಮ್ಮನ್ನು ಬೇರ್ಪಡಿಸುವವರೆಗೂ ನಾವಿಬ್ಬರೂ ಕೈಯನ್ನು ಹೀಗೆ ಹಿಡಿದಿರಬೇಕು ಎಂಬುದು ನನ್ನ ಇಚ್ಛೆ. ನನ್ನ ಮುಂದಿನ ಜನ್ಮ ಎಂಬುದು ಇದ್ದರೆ, ಆ ಜನ್ಮದಲ್ಲೂ ನೀವೇ ನನ್ನ ಬಾಳ ಸಂಗಾತಿ ಆಗಬೇಕು” ಎಂದು ರೇವತಿ ಬಗ್ಗೆ ರೊಮ್ಯಾಂಟಿಕ್ ಮೂಡಿನಲ್ಲಿ ನಿಖಿಲ್ ಹೇಳಿದ್ದಾರೆ.

    https://www.instagram.com/p/B8nsSjep-nd/

    ಅಷ್ಟೇ ಅಲ್ಲದೆ ರೇವತಿ ಕೈಬರಹದಲ್ಲಿ ಬರೆದಿರುವ ಪತ್ರವನ್ನು ನಿಖಿಲ್ ಮತ್ತು ರೇವತಿ ಕೈ-ಕೈ ಹಿಡಿದುಕೊಂಡು ಓದುತ್ತಿರುವ ಫೋಟೋವನ್ನೂ ಇನ್ಸ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

    ಫೆಬ್ರವರಿ 10ರಂದು ತಾಜ್ ವೆಸ್ಟೆಂಡ್ ಹೋಟೆಲಿನಲ್ಲಿ ನಿಖಿಲ್ ಮತ್ತು ರೇವತಿ ನಿಶ್ಚಿತಾರ್ಥ ಅದ್ಧೂರಿಯಾಗಿ ನೆರವೇರಿದೆ. ಇವರ ವಿವಾಹ ಕಾರ್ಯಕ್ರಮ ಏಪ್ರಿಲ್ 17 ರಾಮನಗರ-ಚನ್ನಪಟ್ಟಣ ನಡುವಿನ ಜನಪದ ಲೋಕದ ಬಳಿ ನಡೆಯಲಿದೆ. ಅದ್ಧೂರಿ ಸೆಟ್‍ನಲ್ಲಿ ಶಾಸ್ತ್ರೋಕ್ತ ಮತ್ತು ವಾಸ್ತು ಪ್ರಕಾರವಾಗಿ ಇವರ ಮದುವೆ ನಡೆಯಲಿದೆ.