Tag: Richest person

  • ವಿಶ್ವದ ಟಾಪ್-10 ಶ್ರೀಮಂತರ ಪಟ್ಟಿಯಿಂದ ಹೊರಗುಳಿದ ಮುಕೇಶ್ ಅಂಬಾನಿ

    ವಿಶ್ವದ ಟಾಪ್-10 ಶ್ರೀಮಂತರ ಪಟ್ಟಿಯಿಂದ ಹೊರಗುಳಿದ ಮುಕೇಶ್ ಅಂಬಾನಿ

    ನವದೆಹಲಿ: ಜಾಗತಿಕ ಶ್ರೀಮಂತರ ಪಟ್ಟಿಯಲ್ಲಿ ಭಾರತದ ಪ್ರಮುಖ ಉದ್ಯಮಿ ಮತ್ತು ರಿಲಯನ್ಸ್ ಇಂಡಸ್ಟ್ರೀಸ್‌ನ ಅಧ್ಯಕ್ಷ ಮುಕೇಶ್ ಅಂಬಾನಿ ಅವರು ಟಾಪ್-10 ಸ್ಥಾನದಿಂದ ಹೊರಗುಳಿದಿದ್ದಾರೆ. ಹುರುನ್ ಗ್ಲೋಬಲ್ ರಿಚ್ ಲಿಸ್ಟ್ 2025ರ ಪ್ರಕಾರ ಅಂಬಾನಿ ಅವರು ಈ ವರ್ಷ 11ನೇ ಸ್ಥಾನಕ್ಕೆ ತಲುಪಿದ್ದಾರೆ.

    ಮುಕೇಶ್ ಅಂಬಾನಿ ಅವರ ಸಂಪತ್ತಿನ ಮೌಲ್ಯದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದ್ರೆ ಈ ಬಾರಿ ಸ್ವಲ್ಪ ಕಡಿಮೆಯಾಗಿದೆ. ಆದಾಗ್ಯೂ, ಅವರ ಒಟ್ಟಾರೆ ಸಂಪತ್ತು ಇನ್ನೂ ಅಪಾರವಾಗಿದ್ದು, ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ತಮ್ಮ ಪ್ರಾಬಲ್ಯ ಕಾಯ್ದುಕೊಂಡಿದ್ದಾರೆ. ರಿಲಯನ್ಸ್ ಇಂಡಸ್ಟ್ರೀಸ್‌ನ ವ್ಯಾಪಾರ ಕಾರ್ಯತಂತ್ರಗಳು, ತೈಲ ಮತ್ತು ರಾಸಾಯನಿಕ ಉದ್ಯಮದ ಜೊತೆಗೆ ಟೆಲಿಕಾಂ (ರಿಲಯನ್ಸ್ ಜಿಯೋ) ಮತ್ತು ರಿಟೇಲ್ ಕ್ಷೇತ್ರದಲ್ಲಿ ಮಾಡಿದ ಗಣನೀಯ ಹೂಡಿಕೆಗಳು ಅವರ ಸಂಪತ್ತಿನ ಮೇಲೆ ಪ್ರಭಾವ ಬೀರಿವೆ.

    ಈ ವರ್ಷದ ಹುರುನ್ ಗ್ಲೋಬಲ್ ರಿಚ್ ಲಿಸ್ಟ್‌ನಲ್ಲಿ ಅಮೆರಿಕ ಮತ್ತು ಚೀನಾದ ಉದ್ಯಮಿಗಳು ಟಾಪ್-10 ಸ್ಥಾನಗಳಲ್ಲಿ ಪ್ರಾಬಲ್ಯ ಮೆರೆದಿದ್ದಾರೆ. ಎಲಾನ್ ಮಸ್ಕ್ (ಟೆಸ್ಲಾ ಮತ್ತು ಸ್ಪೇಸ್‌ಎಕ್ಸ್‌ನ ಮುಖ್ಯಸ್ಥ), ಜೆಫ್ ಬೆಜೋಸ್ (ಅಮೆಜಾನ್ ಸಂಸ್ಥಾಪಕ), ಮತ್ತು ಮಾರ್ಕ್ ಝುಕರ್‌ಬರ್ಗ್ (ಮೆಟಾ ಸಿಇಒ) ರಂತಹ ದಿಗ್ಗಜರು ಮೊದಲ ಕೆಲವು ಸ್ಥಾನಗಳನ್ನು ಆಕ್ರಮಿಸಿದ್ದಾರೆ.

    ತಂತ್ರಜ್ಞಾನ ಕ್ಷೇತ್ರದಲ್ಲಿ ಈ ಉದ್ಯಮಿಗಳ ಸಂಪತ್ತು ಗಗನಕ್ಕೇರಿರುವುದು ಈ ಪಟ್ಟಿಯಲ್ಲಿ ಅವರ ಪ್ರಾಬಲ್ಯಕ್ಕೆ ಪ್ರಮುಖ ಕಾರಣವಾಗಿದೆ. ಇದರ ಜೊತೆಗೆ, ಚೀನಾದ ಕೆಲವು ಉದ್ಯಮಿಗಳು ತಮ್ಮ ತಂತ್ರಜ್ಞಾನ ಮತ್ತು ಉತ್ಪಾದನಾ ಕಂಪನಿಗಳ ಮೂಲಕ ತಮ್ಮ ಸ್ಥಾನವನ್ನು ಗಟ್ಟಿಗೊಳಿಸಿದ್ದಾರೆ. ಮುಕೇಶ್ ಅಂಬಾನಿ ಟಾಪ್-10 ರಿಂದ ಹೊರಗುಳಿದರೂ, ಏಷ್ಯಾದ ಶ್ರೀಮಂತರ ಪಟ್ಟಿಯಲ್ಲಿ ಅವರು ಉನ್ನತ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.

  • ಗೌತಮ್ ಅದಾನಿ ಈಗ ವಿಶ್ವದ 2ನೇ ಅತ್ಯಂತ ಶ್ರೀಮಂತ ವ್ಯಕ್ತಿ

    ಗೌತಮ್ ಅದಾನಿ ಈಗ ವಿಶ್ವದ 2ನೇ ಅತ್ಯಂತ ಶ್ರೀಮಂತ ವ್ಯಕ್ತಿ

    ವಾಷಿಂಗ್ಟನ್: ಭಾರತದ(India) ಕೈಗಾರಿಕೋದ್ಯಮಿ, ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ(Gautam Adani) ಅವರು ಅಮೆಜಾನ್‌ನ(Amazon) ಮುಖ್ಯಸ್ಥ ಜೆಫ್ ಬೆಜೋಸ್(Jeff Bezos) ಅವರನ್ನು ಹಿಂದಿಕ್ಕಿ ಇದೀಗ ವಿಶ್ವದ 2ನೇ ಶ್ರೀಮಂತ ವ್ಯಕ್ತಿಯಾಗಿದ್ದಾರೆ.

    ಅಮೆರಿಕದ ನಿಯತಕಾಲಿಕೆ ಫೋರ್ಬ್ಸ್ ಪ್ರಕಾರ, ಟೆಸ್ಲಾ ಸಿಇಒ ಎಲೋನ್ ಮಸ್ಕ್(Elon Musk) ಅವರು 273.5 ಬಿಲಿಯನ್ ಡಾಲರ್(ಸುಮಾರು 21 ಲಕ್ಷ ಕೋಟಿ ರೂ.) ನಿವ್ವಳ ಆಸ್ತಿ ಹೊಂದಿದ್ದು, ವಿಶ್ವದ ಶ್ರೀಮಂತ ವ್ಯಕ್ತಿಯ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿಯೇ ಉಳಿದುಕೊಂಡಿದ್ದಾರೆ. ಗೌತಮ್ ಅದಾನಿ ಅವರು ಪ್ರಸ್ತುತ 154.7 ಬಿಲಿಯನ್ ಡಾಲರ್(12.33 ಲಕ್ಷ ಕೋಟಿ ರೂ.) ಆಸ್ತಿಯನ್ನು ಹೊಂದಿದ್ದು, ವಿಶ್ವದ 2ನೇ ಶ್ರೀಮಂತ ವ್ಯಕ್ತಿಯೆನಿಸಿಕೊಂಡಿದ್ದಾರೆ.

    ಕಳೆದ ತಿಂಗಳಷ್ಟೇ ಅದಾನಿ ಅವರು ಲೂಯಿ ವಿಟಾನ್‌ನ ಬರ್ನಾರ್ಡ್ ಅರ್ನಾಲ್ಟ್ ಅವರನ್ನು ಹಿಂದಿಕ್ಕಿ ವಿಶ್ವದ 3ನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದರು. ಅರ್ನಾಲ್ಟ್ ಈಗ ಅವರ ಕುಟುಂಬದ ಒಟ್ಟು ನಿವ್ವಳ ಮೌಲ್ಯ 153.5 ಬಿಲಿಯನ್ ಡಾಲರ್(12.24 ಲಕ್ಷ ಕೋಟಿ ರೂ.) ಇದ್ದು, 3ನೇ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಬೆಜೋಸ್ ಅವರ ಆಸ್ತಿ 149.7 ಬಿಲಿನ್ ಡಾಲರ್‌ಗೆ(11.93 ಲಕ್ಷ ಕೋಟಿ ರೂ.) ಕುಸಿತವಾಗಿದ್ದು, 4ನೇ ಸ್ಥಾನದಲ್ಲಿದ್ದಾರೆ.

    ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಮುಖ್ಯಸ್ಥ ಮುಖೇಶ್ ಅಂಬಾನಿ ಅವರು 92 ಬಿಲಿಯನ್ ಡಾಲರ್(7.33 ಲಕ್ಷ ಕೋಟಿ ರೂ.) ಆಸ್ತಿ ಹೊಂದಿದ್ದು, ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದ್ದಾರೆ. ಇದನ್ನೂ ಓದಿ: ಡ್ಯಾಮ್ ನಿರ್ಮಾಣಕ್ಕೆ ಸಂಗ್ರಹಿಸಿದ್ದು 300 ಕೋಟಿ, ಜಾಹೀರಾತಿಗೆ ಖರ್ಚಾಗಿದ್ದು 500 ಕೋಟಿ

    ಆದಾನಿಗೆ 2ನೇ ಸ್ಥಾನ ಸಿಕ್ಕಿದ್ದು ಹೇಗೆ?
    ಅಮೆರಿಕದಲ್ಲಿ ಹಣದುಬ್ಬರ ಏರಿಕೆಯಾಗುತ್ತಿದ್ದು ಆಗಸ್ಟ್ ನಲ್ಲಿ ಶೇ.8.3ರಷ್ಟಿದೆ. ನಿತ್ಯ ಬಳಕೆ ವಸ್ತುಗಳ ಬೆಲೆಯೇರಿಕೆಯಿಂದ ಅಮೆರಿಕದ ಜನತೆ ಈಗಾಗಲೇ ಹೈರಾಣಾಗಿದ್ದಾರೆ. ಅಮೆರಿಕದ ಕೇಂದ್ರ ಬ್ಯಾಂಕ್ ಫೆಡರಲ್ ರಿಸರ್ವ್ ಕಠಿಣ ಕ್ರಮಗಳನ್ನು ಕೈಗೊಂಡಿದ್ದರೂ ಹಣದುಬ್ಬರ ನಿಯಂತ್ರಣಕ್ಕೆ ಬರುತ್ತಿಲ್ಲ. ಮುಂದಿನ ವಾರ ಫೆಡರಲ್ ರಿಸರ್ವ್ ಬಡ್ಡಿ ದರವನ್ನು ಇನ್ನಷ್ಟು ಏರಿಕೆ ಮಾಡುವ ಸಾಧ್ಯತೆ ಬಹುತೇಕ ಖಚಿತವಾಗಿದೆ. ಈ ಕಾರಣಕ್ಕೆ ಹೂಡಿಕೆದಾರರು ಭಾರೀ ಪ್ರಮಾಣದಲ್ಲಿ ಹಣವನ್ನು ಷೇರು ಮಾರುಕಟ್ಟೆಯಿಂದ ಹಿಂದಕ್ಕೆ ಪಡೆಯುತ್ತಿದ್ದಾರೆ.

    ಹೂಡಿಕೆದಾರರು ಷೇರು ಮಾರಾಟ ಮಾಡುತ್ತಿರುವುದರಿಂದ ಅಮೆರಿಕದ ಉದ್ಯಮಿಗಳ ಸಂಪತ್ತಿನ ಮೌಲ್ಯ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿದೆ. ಕಳೆದ ತಿಂಗಳಷ್ಟೇ ಅಮೆರಿಕದ ಇದೇ ಬಿಲಿಯನೇರ್ ಗಳು ಫೆಡರಲ್ ರಿಸರ್ವ್ ಮುಖ್ಯಸ್ಥ ಜೆರೋಮ್ ಪೊವೆಲ್ ಅವರ 8 ನಿಮಿಷಗಳ ಭಾಷಣದ ಬಳಿಕ ಒಂದೇ ದಿನದಲ್ಲಿ 78 ಬಿಲಿಯನ್ ಡಾಲರ್ ಕಳೆದುಕೊಂಡಿದ್ದರು. ವಿಶ್ವದ 500 ಶ್ರೀಮಂತ ವ್ಯಕ್ತಿಗಳು ಈ ವರ್ಷದ ಪ್ರಾರಂಭಕ್ಕೆ ಹೋಲಿಸಿದರೆ 1.2 ಟ್ರಿಲಿಯನ್ ಡಾಲರ್ ಕಳೆದುಕೊಂಡಿದ್ದರು. ಇದನ್ನೂ ಓದಿ: ವಾಹನ ಸವಾರರೇ ಎಚ್ಚರ- ಹೆಡ್ ಲೈಟ್‌ಗಳಲ್ಲಿ ಹೈ ಬೀಮ್ ಹಾಕಿ ವಾಹನ ಚಲಾಯಿಸಿದರೆ ಕೇಸ್: ಶ್ರೀರಾಮುಲು

    ಗೌತಮ್ ಅದಾನಿಯವರು ಕೇಂದ್ರ ಸರ್ಕಾರದ ಮಹತ್ತರ ಯೋಜನೆಗಳನ್ನು ಮನಗಂಡು, ತಮ್ಮ ಉದ್ಯಮಗಳಲ್ಲಿ ವೇಗವಾಗಿ ಸಮಯಕ್ಕೆ ತಕ್ಕಂತೆ ಬದಲಾವಣೆ ಮಾಡಿಕೊಳ್ಳುತ್ತ ಬಂದಿರುವುದೇ ಇಂದು ಅವರು ಅತ್ಯಂತ ಕಡಿಮೆ ಸಮಯದಲ್ಲಿ ಶ್ರೀಮಂತ ವ್ಯಕ್ತಿಗಳನ್ನು ಹಿಂದಿಕ್ಕಿ 2ನೇ ಸ್ಥಾನಕ್ಕೆ ಬಂದಿದ್ದಾರೆ. ಜೊತೆ ಅದಾನಿ ಕಂಪನಿಯ ಷೇರುಗಳ ಮೌಲ್ಯ ಭಾರೀ ಏರಿಕೆಯಾಗುತ್ತಿದೆ. ಈ ಎಲ್ಲಾ ಕಾರಣಗಳಿಂದ ಅದಾನಿ ಸಂಪತ್ತಿನ ಮೌಲ್ಯ ಏರಿಕೆಯಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಗೌತಮ್ ಅದಾನಿ ಈಗ ವಿಶ್ವದ 3ನೇ ಶ್ರೀಮಂತ – ಏಷ್ಯಾಗೆ ಇದು ಫಸ್ಟ್ ಟೈಂ

    ಗೌತಮ್ ಅದಾನಿ ಈಗ ವಿಶ್ವದ 3ನೇ ಶ್ರೀಮಂತ – ಏಷ್ಯಾಗೆ ಇದು ಫಸ್ಟ್ ಟೈಂ

    ನವದೆಹಲಿ: ಕೆಲ ವರ್ಷಗಳ ಹಿಂದೆ ಭಾರತದ ಹೊರಗೆ ಕೆಲವರಿಗಷ್ಟೇ ತಿಳಿದಿದ್ದ ಭಾರತೀಯ ಉದ್ಯಮಿ ಗೌತಮ್ ಅದಾನಿ ಇದೀಗ ವಿಶ್ವದಲ್ಲೇ 3ನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ. ಕಾಲೇಜನ್ನು ಅರ್ಧಕ್ಕೇ ನಿಲ್ಲಿಸಿ, ವಜ್ರದ ವ್ಯಾಪಾರ ಪ್ರಾರಂಭಿಸಿದ ಅದಾನಿ ಈಗ ವಿಶ್ವದ 3ನೇ ಶ್ರೀಮಂತ ವ್ಯಕ್ತಿ ಮಾತ್ರವಲ್ಲದೇ ಈ ಸ್ಥಾನಕ್ಕೆ ಏರಿದ ಏಷ್ಯಾದ ಮೊದಲ ವ್ಯಕ್ತಿಯೂ ಆಗಿದ್ದಾರೆ.

    ಹೌದು, ಏಷ್ಯಾದ ವ್ಯಕ್ತಿಯೊಬ್ಬರು ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್‌ನ 3ನೇ ಸ್ಥಾನವನ್ನು ಪ್ರವೇಶಿಸಿರುವುದು ಇದೇ ಮೊದಲು. ಈ ಸ್ಥಾನವನ್ನು ಗಳಿಸಲು ಮುಖೇಶ್, ಅಂಬಾನಿ, ಚೀನಾದ ಜಾಕ್ ಮಾ ರಿಂದ ಕೂಡಾ ಆಗಿರಲಿಲ್ಲ. ಇದೀಗ 137.4 ಬಿಲಿಯನ್ ಡಾಲರ್(10.97 ಲಕ್ಷ ಕೋಟಿ ರೂ.) ಮೊತ್ತದ ಆಸ್ತಿಯನ್ನು ಹೊಂದಿರುವ ಅದಾನಿ ಅವರು ಫ್ರಾನ್ಸ್‌ನ ಬರ್ನಾರ್ಡ್ ಅರ್ನಾಲ್ಟ್ ಅವರನ್ನೂ ಹಿಂದಿಕ್ಕಿದ್ದಾರೆ. ಇದೀದ ಟೆಸ್ಲಾ ಸಿಇಒ ಎಲೋನ್ ಮಸ್ಕ್ ಹಾಗೂ ಅಮೆಜಾನ್ ಜೆಫ್ ಬೆಜೋಸ್ ಬಳಿಕದ ಸ್ಥಾನವನ್ನು ಅದಾನಿ ಗಿಟ್ಟಿಸಿಕೊಂಡಿದ್ದಾರೆ. ಇದನ್ನೂ ಓದಿ: ಹಾಲಿನ ದರ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಿಸಿ – ಸರ್ಕಾರಕ್ಕೆ ಕೆಎಂಎಫ್‌ ಪ್ರಸ್ತಾವ

    60 ವಯಸ್ಸಿನ ಅದಾನಿ ಅವರು ಕಳೆದ ಕೆಲವು ವರ್ಷಗಳಿಂದ ಕಲ್ಲಿದ್ದಲು, ಬಂದರುಗಳ ಉದ್ಯಮಗಳನ್ನು ವಿಸ್ತರಿಸುತ್ತಿದ್ದಾರೆ. ಡೇಟಾ ಕೇಂದ್ರಗಳಿಂದ ಹಿಡಿದು ಸಿಮೆಂಟ್, ಮಾಧ್ಯಮ ಮತ್ತು ಅಲ್ಯೂಮೀನಿಯಂ ವರೆಗಿನ ಎಲ್ಲಾ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಅದಾನಿ ಗ್ರೂಪ್ ಈಗ ಭಾರತದ ಅತಿದೊಡ್ಡ ಖಾಸಗಿ ವಲಯದ ಬಂದರು, ವಿಮಾನ ನಿಲ್ದಾಣ ನಿರ್ವಾಹಕ, ಅನಿಲ ವಿತರಕ ಮತ್ತು ಕಲ್ಲಿದ್ದಲು ಗಣಿಗಾರಿಕೆ ಮಾಡುತ್ತಿದೆ. ಇದನ್ನೂ ಓದಿ: ಲಡಾಕ್‍ನ ಸಿಂಧೂ ನದಿ ಸಂಗಮ ಸ್ಥಳಕ್ಕೆ ಶೋಭಾ ಕರಂದ್ಲಾಜೆ ಭೇಟಿ

    ಕೆಲವು ತಜ್ಞರು ಹಾಗೂ ಮಾರುಕಟ್ಟೆ ವೀಕ್ಷಕರು ಅದಾನಿ ಗ್ರೂಪ್‌ನ ಷೇರು ಹೂಡಿಕೆಗಳ ಗೌಪ್ಯತೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಕಂಪನಿ ಷೇರುಗಳು ಒಂದೇ ಸಮನೆ ಏರಿಕೆ ಕಾಣುತ್ತಲೇ ಇವೆ. ಕೆಲವು ಷೇರುಗಳ ಬೆಲೆ 2020ರ ಬಳಿಕ ಶೇ.1,000ಕ್ಕಿಂತ ಹೆಚ್ಚು ಏರಿಕೆ ಕಂಡಿದೆ.

    Live Tv
    [brid partner=56869869 player=32851 video=960834 autoplay=true]