Tag: Richter scale

  • ಪಾಕ್ ಮೇಲೆ ಪ್ರಕೃತಿಗೂ ಮುನಿಸು – ಮತ್ತೆ ಭೂಕಂಪ

    ಪಾಕ್ ಮೇಲೆ ಪ್ರಕೃತಿಗೂ ಮುನಿಸು – ಮತ್ತೆ ಭೂಕಂಪ

    ಇಸ್ಲಾಮಾಬಾದ್: ಕದನ ವಿರಾಮದ ಬಳಿಕವೂ ತನ್ನ ಬಾಲ ಬಿಚ್ಚುತ್ತಿರುವ ಪಾಕ್ (Pakistan) ಮೇಲೆ ಈಗ ಪ್ರಕೃತಿಯೂ ಮುನಿಸಿಕೊಂಡಂತಿದೆ. ಹೌದು. ಪಾಕಿಸ್ತಾನದಲ್ಲಿ ಮತ್ತೆ ಭೂಕಂಪ (Earthquake) ಸಂಭವಿಸಿದೆ. ಕಳೆದ ಒಂದು ವಾರದಲ್ಲಿ ಇದು 4ನೇ ಪ್ರಕರಣವಾಗಿದೆ.ಇದನ್ನೂ ಓದಿ: ಲಷ್ಕರ್ ಉಗ್ರನ ಅಂತ್ಯಕ್ರಿಯೆಯಲ್ಲಿ ಪಾಕ್ ಸೇನಾಧಿಕಾರಿಗಳು ಭಾಗಿ – ಭಾರತ ತೀವ್ರ ಆಕ್ಷೇಪ

    ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಮಾಹಿತಿ ಪ್ರಕಾರ, ಇಂದು ಮಧ್ಯಾಹ್ನ 1:26ರ ಸುಮಾರಿಗೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲಾಗಿದ್ದು, 10 ಕಿ.ಮೀ ಆಳದಲ್ಲಿ ಭೂಕಂಪವಾಗಿದೆ. ಕಳೆದ ಒಂದು ವಾರದಲ್ಲಿ ಉಂಟಾಗಿರುವ ನಾಲ್ಕು ಭೂಕಂಪಗಳು ಒಂದೇ ಪ್ರಮಾಣದಲ್ಲಿವೆ ಎಂದು ತಿಳಿಸಿದೆ.

    ಪಾಕಿಸ್ತಾನವು ವಿಶ್ವದ ಅತ್ಯಂತ ಭೂಕಂಪನಶೀಲ ದೇಶಗಳಲ್ಲಿ ಒಂದಾಗಿದ್ದು, ಆಗಾಗ್ಗೆ ಭೂಕಂಪ ಉಂಟಾಗುತ್ತಿರುತ್ತವೆ. ಇದಕ್ಕೂ ಮುನ್ನ ಮೇ 10ರಂದು 4.6 ತೀವ್ರತೆಯಲ್ಲಿ ಭೂಕಂಪ ಸಂಭವಿಸಿತ್ತು.ಇದನ್ನೂ ಓದಿ: ಪಾಕ್‍ಗೆ ನಾವು ಹೇಗಾದ್ರೂ ಪ್ರತಿಕ್ರಿಯಿಸುತ್ತೇವೆ, ಇದನ್ನು ಟ್ರಂಪ್ ಅರ್ಥ ಮಾಡಿಕೊಳ್ಳಲಿ: ಮೋದಿ

  • ಜಮ್ಮು ಕಾಶ್ಮೀರದಲ್ಲಿ 5.2 ತೀವ್ರತೆಯ ಭೂಕಂಪ ದಾಖಲು

    ಜಮ್ಮು ಕಾಶ್ಮೀರದಲ್ಲಿ 5.2 ತೀವ್ರತೆಯ ಭೂಕಂಪ ದಾಖಲು

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu And Kashmir) ಇಂದು (ನ.13) 5.2 ತೀವ್ರತೆಯ ಭೂಕಂಪ (Earth Quake) ಸಂಭವಿಸಿದೆ.

    ಬುಧವಾರ ರಿಕ್ಟರ್ ಮಾಪಕದಲ್ಲಿ 5.2 ತೀವ್ರತೆಯ ಭೂಕಂಪ ದಾಖಲಾಗಿದ್ದು, ಸದ್ಯ ಯಾವುದೇ ಜೀವಹಾನಿ ಅಥವಾ ಆಸ್ತಿ ಹಾನಿ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಇದನ್ನೂ ಓದಿ: ನಾಲಗೆ ಕಚ್ಚಿ, ಜೋರು ಗದರಿ ಕೈ ಎತ್ತಿದ ಸಿದ್ದರಾಮಯ್ಯ

    ಬೆಳಗ್ಗೆ 10:43ಕ್ಕೆ ಅಫ್ಘಾನಿಸ್ತಾನ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ. ಕಾಶ್ಮೀರದ ಕಣಿವೆಯಲ್ಲಿ ಕಂಪನದ ಅನುಭವವಾಗಿದ್ದು, ಭಯಭೀತರಾಗಿ ಜನರು ಮನೆಯಿಂದಾಚೆ ಓಡಿ ಬಂದಿದ್ದಾರೆ.

    ಇದಕ್ಕೂ ಮುನ್ನ ಕಾಶ್ಮೀರದಲ್ಲಿ 2005ರಲ್ಲಿ ಅ.8 ರಂದು 7.6ರ ತೀವ್ರತೆಯೊಂದಿಗೆ ವಿನಾಶಕಾರಿ ಭೂಕಂಪನ ಸಂಭವಿಸಿತ್ತು. ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮುಜಫರಾಬಾದ್ ಬಳಿ ಭೂಕಂಪವಾಗಿತ್ತು. ಇದು ಜಮ್ಮು ಮತ್ತು ಕಾಶ್ಮೀರದಾದ್ಯಂತ ವ್ಯಾಪಕ ವಿನಾಶವನ್ನು ಉಂಟುಮಾಡಿತ್ತು. ಇದರಿಂದಾಗಿ ಕಾಶ್ಮೀರದಲ್ಲಿ 80,000ಕ್ಕೂ ಹೆಚ್ಚು ಜನರನ್ನು ಸಾವನ್ನಪ್ಪಿ, ಸಾವಿರಾರು ಜನರು ಗಾಯಗೊಂಡಿದ್ದರು.ಇದನ್ನೂ ಓದಿ: PUBLiC TV Impact | ಕೃಷ್ಣಾ ನದಿಗೆ ಭೇಟಿ ನೀಡಿದ ಮಾಲಿನ್ಯ ನಿಯಂತ್ರಣ ಮಂಡಳಿ

  • ಅಫ್ಘಾನಿಸ್ತಾನದಲ್ಲಿ 4.3 ತೀವ್ರತೆಯ ಭೂಕಂಪನ

    ಅಫ್ಘಾನಿಸ್ತಾನದಲ್ಲಿ 4.3 ತೀವ್ರತೆಯ ಭೂಕಂಪನ

    ಕಾಬೂಲ್: ಅಫ್ಘಾನಿಸ್ತಾನದ (Afghanistan) ಕಾಬೂಲ್‍ನಲ್ಲಿ (Kabul) ಬುಧವಾರ ಮುಂಜಾನೆ 4:49ರ ವೇಳೆಗೆ ಭೂಕಂಪನ (Earthquake) ಸಂಭವಿಸಿದೆ. ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ  (Richter Scale) 4.3 ದಾಖಲಾಗಿದೆ.

    ಕಾಬೂಲ್‍ನ 85 ಕಿ.ಮೀ ಸುತ್ತಳತೆಯಲ್ಲಿ ಭೂಮಿಯ ಮೇಲ್ಮೈಯಿಂದ ಕೇವಲ 10 ಕಿ.ಮೀ ಆಳದಲ್ಲಿ ಭೂಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪನ ಅಧ್ಯಯನ ಕೇಂದ್ರ (National Centre for Seismology) ತಿಳಿಸಿದೆ. ಇದನ್ನೂ ಓದಿ: ನೀವು ಮಾಡಿದ್ದೆಲ್ಲಾ ಸಹಿಸಿಕೊಂಡು ಬಿರಿಯಾನಿ ಹಾಕುವ 47ರ ಕಾಲವಲ್ಲ- SDPI ಮುಖಂಡನಿಗೆ ಸಿ.ಟಿ ರವಿ ವಾರ್ನಿಂಗ್

    ಘಟನೆಯಲ್ಲಿ ಯಾವುದೇ ಸಾವು ನೋವಿನ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಈ ಬಗ್ಗೆ ಹೆಚ್ಚಿನ ಪರಿಶೀಲನೆ ನಡೆಯುತ್ತಿದೆ. ಇದೇ ತಿಂಗಳ 21 ರಂದು ಅಘ್ಘಾನಿಸ್ತಾನದಲ್ಲಿ ಭೂಕಂಪನ ಸಂಭವಿಸಿತ್ತು. ಭಾರತದಲ್ಲಿ (India) ದೆಹಲಿ (Delhi) ಹಾಗೂ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭುಕಂಪನದ ಅನುಭವವಾಗಿತ್ತು. ಇದನ್ನೂ ಓದಿ: ರಾಜ್ಯ ವಿಧಾನಸಭೆ ಚುನಾವಣೆಗೆ ಇಂದೇ ಮುಹೂರ್ತ ಫಿಕ್ಸ್

  • ರಾಷ್ಟ್ರ ರಾಜಧಾನಿಯಲ್ಲಿ ಲಘು ಭೂಕಂಪ

    ರಾಷ್ಟ್ರ ರಾಜಧಾನಿಯಲ್ಲಿ ಲಘು ಭೂಕಂಪ

    ನವದೆಹಲಿ: ಭಾರತದ ರಾಜಧಾನಿ ದೆಹಲಿಯಲ್ಲಿ ಇಂದು ಮಧ್ಯಾಹ್ನ ಲಘು ಭೂಕಂಪನ ಸಂಭವಿಸಿದೆ. ಕಂಪನದ ತೀವ್ರತೆ ರಿಕ್ಟರ್ ಮಾಪಕನದಲ್ಲಿ 2.1ರಷ್ಟು ದಾಖಲಾಗಿದ್ದು ಜನ ಆತಂಕಕ್ಕೀಡಾಗಿದ್ದಾರೆ.

    ನ್ಯಾಷನಲ್ ಸೆಂಟರ್ ಫಾರ್ ಸೀಸ್ಮಾಲಜಿ(ಎನ್‍ಸಿಎಸ್) ತಿಳಿಸಿರುವ ಪ್ರಕಾರ ರಿಕ್ಟರ್ ಮಾಪಕದಲ್ಲಿ 2.1 ತೀವ್ರತೆಯ ಭೂಕಂಪ ದೆಹಲಿಯ ಪಂಜಾಬಿ ಬಾಗ್ ಬಳಿ ಸಂಭವಿಸಿದ್ದು, ಭೂಮಿಯ ಮೇಲ್ಮೈಯಿಂದ 7 ಕಿಲೋಮೀಟರ್ ಅಂತರದಲ್ಲಿ ಭೂಮಿ ಕಂಪಿಸಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಕಾಶ್ಮೀರದ ನಾಯಕರ ಜೊತೆ ಮೋದಿ ಸಭೆಗೆ ಪಾಕ್ ಕಿರಿಕ್

    ಭೂಕಂಪನದಿಂದ ಜೀವ ಅಥವಾ ಆಸ್ತಿ, ಪಾಸ್ತಿಗೆ ಹಾನಿ ಸಂಭವಿಸಿರುವ ಬಗ್ಗೆ ಯಾವುದೇ ರೀತಿಯ ವರದಿಯಾಗಿಲ್ಲ. ದೆಹಲಿ ಅಲ್ಲದೆ ಈಶಾನ್ಯ ರಾಜ್ಯಗಳಾದ ಅರುಣಾಚಲ ಪ್ರದೇಶ ಮತ್ತು ಮಣಿಪುರದಲ್ಲಿಯೂ ಇಂದು ಬೆಳಗಿನ ಜಾವ ಭೂಕಂಪ ಸಂಭವಿಸಿದೆ. ಎನ್‍ಸಿಎಸ್ ವರದಿಯ ಪ್ರಕಾರ ಮೊದಲ ಭೂಕಂಪ ಅರುಣಾಚಲ ಪ್ರದೇಶದ ಪಂಗಿನ್‍ನಲ್ಲಿ ಮಧ್ಯರಾತ್ರಿ ಬಳಿಕ 1 ಗಂಟೆ ಸುಮಾರಿಗೆ ಸಂಭವಿಸಿದೆ. ಅದಾದ ಬಳಿಕ ಮಣಿಪುರದ ಉಕ್ರುಲ್ ಜಿಲ್ಲೆಯ ಶಿರೂಯಿ ಗ್ರಾಮದಲ್ಲಿ 3.6 ತೀವ್ರತೆಯ ಭೂಕಂಪ ಸಂಭವಿಸಿತು. ಮೊದಲ ಭೂಕಂಪ 20 ಕಿಲೋಮೀಟರ್ ಆಳದಲ್ಲಿ ಮತ್ತು ಎರಡನೇ ಭೂಕಂಪ 30 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ ಎಂದು ಮಾಹಿತಿ ನೀಡಿದೆ.

    ದೆಹಲಿಯಲ್ಲಿ ಈ ಹಿಂದೆ 1956ರ ಅಕ್ಟೋಬರ್ 10ರಂದು ಬುಲಂದ್ ಶಹರ್‍ನಲ್ಲಿ 6.7ರ ತೀವ್ರತೆಯ ಭೂಕಂಪ ಸಂಭವಿಸಿತ್ತು. ಆ ಬಳಿಕ 1966ರ ಆಗಸ್ಟ್ 15 ರಂದು ಮೊರ್ಡಾಬಾದ್‍ನಲ್ಲಿ 5.8ರ ತೀವ್ರತೆಯ ಭೂಕಂಪನ ದಾಖಲಾಗಿತ್ತು.

  • 24 ಗಂಟೆಯಲ್ಲಿ ಎರಡು ಬಾರಿ ದೆಹಲಿಯಲ್ಲಿ ಲಘು ಭೂಕಂಪನ

    24 ಗಂಟೆಯಲ್ಲಿ ಎರಡು ಬಾರಿ ದೆಹಲಿಯಲ್ಲಿ ಲಘು ಭೂಕಂಪನ

    ನವದೆಹಲಿ: ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೋಮವಾರ ಮಧ್ಯಾಹ್ನ ಲಘು ಭೂಕಂಪನ ಅನುಭವಕ್ಕೆ ಬಂದಿದ್ದು, 24 ಗಂಟೆ ಅವಧಿಯಲ್ಲಿ ಎರಡು ಬಾರಿ ಭೂಮಿ ಕಂಪಿಸಿದೆ.

    ಮಧ್ಯಾಹ್ನ ಸಂಭವಿಸಿದ ಭೂಕಂಪನ ರಿಕ್ಟರ್ ಮಾಪಕದಲ್ಲಿ 2.7 ತೀವ್ರತೆ ದಾಖಲಾಗಿದೆ. ಮಧ್ಯಾಹ್ನ 1.26ಕ್ಕೆ 5 ಕಿಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಹೇಳಿದೆ. ಭೂಕಂಪದಿಂದ ಯಾವುದೇ ರೀತಿಯ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

    ಇದಕ್ಕೂ ಮುನ್ನ ಭಾನುವಾರ ರಾತ್ರಿ 3.5 ತೀವ್ರತೆಯ ಭೂಕಂಪ ಸಂಭವಿಸಿದ್ದು, ಉತ್ತರ ದೆಹಲಿಯ ವಜೀರಾಬಾದ್ ಭೂಕಂಪದ ಕೇಂದ್ರ ಬಿಂದುವಾಗಿತ್ತು. ದೆಹಲಿ ಬಹುತೇಕ ಭಾಗದಲ್ಲಿ ಭಾರೀ ಸದ್ದಿನೊಂದಿಗೆ ನಡುಕದ ಅನುಭವವಾಗಿತ್ತು.