Tag: ricky rai

  • ರಿಕ್ಕಿ ರೈ ಮೇಲೆ ಶೂಟೌಟ್‌ ಕೇಸ್‌: ಮುತ್ತಪ್ಪ ರೈ 2ನೇ ಪತ್ನಿ ಅನುರಾಧ ಸೇರಿ ನಾಲ್ವರ ವಿರುದ್ಧ FIR

    ರಿಕ್ಕಿ ರೈ ಮೇಲೆ ಶೂಟೌಟ್‌ ಕೇಸ್‌: ಮುತ್ತಪ್ಪ ರೈ 2ನೇ ಪತ್ನಿ ಅನುರಾಧ ಸೇರಿ ನಾಲ್ವರ ವಿರುದ್ಧ FIR

    ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತಪ್ಪ ರೈನ 2ನೇ ಪತ್ನಿ ಅನುರಾಧಾ ಸೇರಿದಂತೆ ನಾಲ್ವರ ವಿರುದ್ಧ ಬಿಡದಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

    ರಾಕೇಶ್‌ಮಲ್ಲಿ, 2ನೇ ಪತ್ನಿ ಅನುರಾಧ, ನಿತೇಶ್ ಶೆಟ್ಟಿ, ವೈದ್ಯನಾಥನ್ ವಿರುದ್ಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 173 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಹೀಗಾಗಿ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಫೈರಿಂಗ್ – ಕೂದಲೆಳೆ ಅಂತರದಲ್ಲಿ ಪಾರು

    2 ಬಾರಿ ದಾಳಿ ನಡೆದಿರೋದು ಕನ್ಫರ್ಮ್‌
    ರಿಕ್ಕಿ ರೈ ಮೇಲೆ 2 ಬಾರಿ ಗುಂಡಿನ ದಾಳಿ ನಡೆದಿರುವುದು ಪೊಲೀಸ್‌ ತನಿಖೆ ವೇಳೆ ತಿಳಿದುಬಂದಿದೆ. ಬಿಡದಿ ಮನೆಯಿಂದ ಸದಾಶಿವ ನಗರ ಮನೆಗೆ ಹೊರಟಿದ್ದ ರಾತ್ರಿ 11 ಗಂಟೆ ಹೊತ್ತಿಗೆ ಫೈರಿಂಗ್ ನಡೆದಿದೆ. ಅದೃಷ್ಟವಶಾತ್ ಈ ವೇಳೆ ಕಾರಿಗೆ ಅಥವಾ ರಿಕ್ಕಿ ರೈಗೆ ಯಾವುದೇ ಗುಂಡು ತಾಗಿಲ್ಲ. ಶಬ್ಧ ಕೇಳಿ ಚಾಲಕ ಬಸವರಾಜು ಕೆಳಗೆ ಇಳಿದು ನೋಡಿದ್ದಾರೆ, ಬಳಿಕ ಪರ್ಸ್‌ ಮರೆತು ಬಂದಿರುವುದಾಗಿ ರಿಕ್ಕಿಗೆ ತಿಳಿಸಿ ಮತ್ತೆ ಮನೆಗೆ ಹೋಗಿದ್ದಾರೆ. ಬಳಿಕ ಬೆಂಗಳೂರಿಗೆ ಹೊರಡಲು ಮುಂದಾದಾಗ ರಾತ್ರಿ 12:50ರ ಸುಮಾರಿಗೆ ಮತ್ತೆ ಗುಂಡಿನ ದಾಳಿ ನಡೆದಿದೆ. ಪೊಲೀಸರು ಪರಿಶೀಲನೆ ನಡೆಸಿದಾಗ 2 ಬುಲೆಟ್‌ಗಳು ಪತ್ತೆಯಾಗಿವೆ.

    ಏನಿದು ಘಟನೆ?
    ರಿಕ್ಕಿ ರೈ ತಮ್ಮ ಫಾರ್ಚೂನರ್ ಕಾರಿನಲ್ಲಿ ಡ್ರೈವರ್ ಮತ್ತು ಗನ್‌ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ 12:50ರ ಸುಮಾರಿಗೆ 2 ಸುತ್ತಿನ ಗುಂಡಿನ ದಾಳಿ ನಡೆದಿದೆ. ಮನೆಯ ಕಾಂಪೌಂಡ್ ಬಳಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ರಿಕ್ಕಿ ರೈ ಅವರಿಗೆ ಗಾಯಗಳಾಗಿವೆ. ತಕ್ಷಣವೇ ಅವರನ್ನು ಬಿಡದಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪ್ರಾಥಮಿಕ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಇದನ್ನೂ ಓದಿ: ರಿಕ್ಕಿ ರೈ ಮೇಲೆ 2 ಸುತ್ತು ಗುಂಡಿನ ದಾಳಿ – ಡ್ರೈವಿಂಗ್‌ ಸೀಟ್‌ ಟಾರ್ಗೆಟ್‌ ಮಾಡಿ ಫೈರಿಂಗ್‌ ಮಾಡಿದ್ದು ಏಕೆ?

    ಡ್ರೈವಿಂಗ್ ಸೀಟ್ ಟಾರ್ಗೆಟ್ ಮಾಡಿ ಫೈರಿಂಗ್:
    ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಮೇಲೆ ನಡೆದ ಶೂಟೌಟ್‌ನಲ್ಲಿ ದುಷ್ಕರ್ಮಿಗಳು ಡ್ರೈವಿಂಗ್ ಸೀಟ್‌ನನ್ನೇ ಗುರಿಯಾಗಿಸಿ ಮೂರು ಸುತ್ತು ಗುಂಡುಗಳನ್ನು ಹಾರಿಸಿದ್ದಾರೆ. ರಿಕ್ಕಿ ರೈ ಸಾಮಾನ್ಯವಾಗಿ ತಾನೇ ಕಾರು ಚಾಲನೆ ಮಾಡುತ್ತಿದ್ದ ಕಾರಣ, ದಾಳಿಕೋರರು ಡ್ರೈವಿಂಗ್ ಸೀಟ್‌ನ ಮೇಲೆ ಗುರಿ ಇಟ್ಟಿದ್ದರು. ಆದರೆ, ಈ ಬಾರಿ ಕಾರನ್ನು ಚಾಲಕ ರಾಜು ಚಲಾಯಿಸುತ್ತಿದ್ದು, ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆದರೆ, ಪಕ್ಕದ ಸೀಟ್‌ನಲ್ಲಿದ್ದ ರಿಕ್ಕಿ ರೈ ಅವರ ಮೂಗು ಮತ್ತು ಕೈಗೆ ಗುಂಡು ತಾಕಿದ್ದು, ಗಂಭೀರ ಗಾಯಗೊಂಡಿದ್ದಾರೆ.

    ಘಟನೆಯ ಸ್ಥಳಕ್ಕೆ ರಾಮನಗರ ಎಸ್ಪಿ ಶ್ರೀನಿವಾಸ್ ಗೌಡ ಮತ್ತು ಡಿವೈಎಸ್‌ಪಿ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ದಾಳಿಯ ಹಿಂದಿನ ಕಾರಣ, ದುಷ್ಕರ್ಮಿಗಳ ಗುರುತು ಮತ್ತು ಈ ಘಟನೆಯ ಹಿನ್ನೆಲೆಯನ್ನು ಪತ್ತೆಹಚ್ಚಲು ತೀವ್ರ ಪ್ರಯತ್ನ ನಡೆಯುತ್ತಿದೆ. ಇದನ್ನೂ ಓದಿ: ಜನಿವಾರ ಹಾಕಿದ್ದಕ್ಕೆ ಸಿಇಟಿ ಪರೀಕ್ಷೆಗೆ ನೋ ಎಂಟ್ರಿ – ಬೀದರ್ ವಿದ್ಯಾರ್ಥಿಗೆ ನ್ಯಾಯ ಕೊಡಿಸಲು ಕೆಇಎ ಸಿದ್ಧತೆ

  • ರಿಕ್ಕಿ ರೈ ಮೇಲೆ 2 ಸುತ್ತು ಗುಂಡಿನ ದಾಳಿ – ಡ್ರೈವಿಂಗ್‌ ಸೀಟ್‌ ಟಾರ್ಗೆಟ್‌ ಮಾಡಿ ಫೈರಿಂಗ್‌ ಮಾಡಿದ್ದು ಏಕೆ?

    ರಿಕ್ಕಿ ರೈ ಮೇಲೆ 2 ಸುತ್ತು ಗುಂಡಿನ ದಾಳಿ – ಡ್ರೈವಿಂಗ್‌ ಸೀಟ್‌ ಟಾರ್ಗೆಟ್‌ ಮಾಡಿ ಫೈರಿಂಗ್‌ ಮಾಡಿದ್ದು ಏಕೆ?

    ಬೆಂಗಳೂರು: ಬಿಡದಿಯಲ್ಲಿ ತಡರಾತ್ರಿ ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ (Ricky Rai) ಮೇಲೆ ದುಷ್ಕರ್ಮಿಗಳು ಶೂಟೌಟ್ ನಡೆಸಿರುವ ಘಟನೆ ನಡೆದಿದೆ. ತಡರಾತ್ರಿ 12:50ರ ವೇಳೆಗೆ 2 ಸುತ್ತು ಗುಂಡು ಹಾರಿಸಿದ್ದ ದುಷ್ಕರ್ಮಿಗಳು ಡ್ರೈವಿಂಗ್‌ ಸೀಟನ್ನೇ (Driving Seat) ಗುರಿಯಾಗಿಸಿ ಗುಂಡಿನ ದಾಳಿ ನಡೆಸಿದ್ದರು ಅನ್ನೋದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

    ಹೌದು. ರಿಕ್ಕಿ ರೈ ಮೇಲೆ ನಡೆದ ಶೂಟೌಟ್‌ನಲ್ಲಿ ದುಷ್ಕರ್ಮಿಗಳು ಡ್ರೈವಿಂಗ್ ಸೀಟ್‌ನನ್ನೇ ಗುರಿಯಾಗಿಸಿ 2 ಸುತ್ತು ಗುಂಡುಗಳನ್ನು ಹಾರಿಸಿದ್ದಾರೆ. ರಿಕ್ಕಿ ರೈ ಸಾಮಾನ್ಯವಾಗಿ ತಾನೇ ಕಾರು ಚಾಲನೆ ಮಾಡುತ್ತಿದ್ದ ಕಾರಣ, ದಾಳಿಕೋರರು ಡ್ರೈವಿಂಗ್ ಸೀಟನ್ನೇ ಟಾರ್ಗೆಟ್‌ ಮಾಡಿದ್ದರು. ಆದ್ರೆ ಈ ಬಾರಿ ಕಾರನ್ನು ಚಾಲಕ ರಾಜು ಚಲಾಯಿಸುತ್ತಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆದರೆ, ಪಕ್ಕದ ಸೀಟ್‌ನಲ್ಲಿದ್ದ ರಿಕ್ಕಿ ರೈ ಅವರ ಮೂಗು ಮತ್ತು ಕೈಗೆ ಗುಂಡು ತಾಕಿದ್ದು, ಗಂಭೀರ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಫೈರಿಂಗ್ – ಕೂದಲೆಳೆ ಅಂತರದಲ್ಲಿ ಪಾರು

    ಏನಿದು ಘಟನೆ?
    ರಿಕ್ಕಿ ರೈ ತಮ್ಮ ಫಾರ್ಚೂನರ್ ಕಾರಿನಲ್ಲಿ ಡ್ರೈವರ್ ಮತ್ತು ಗನ್‌ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ (Bengaluru) ತೆರಳುತ್ತಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ಮನೆಯ ಕಾಂಪೌಂಡ್ ಬಳಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ರಿಕ್ಕಿ ರೈ ಅವರಿಗೆ ಗಾಯಗಳಾಗಿವೆ. ತಕ್ಷಣವೇ ಅವರನ್ನು ಬಿಡದಿಯ ಖಾಸಗಿ ಆಸ್ಪತ್ರೆಗೆ (Private Hospital) ಕರೆದೊಯ್ಯಲಾಗಿದ್ದು, ಪ್ರಾಥಮಿಕ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.  ಇದನ್ನೂ ಓದಿ: ಆನೇಕಲ್ | ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಪೋಸ್ಟ್ ಮಾಡಿ ವ್ಯಕ್ತಿ ಆತ್ಮಹತ್ಯೆ

    ಘಟನೆಯ ಸ್ಥಳಕ್ಕೆ ರಾಮನಗರ ಎಸ್ಪಿ ಶ್ರೀನಿವಾಸ್ ಗೌಡ ಮತ್ತು ಡಿವೈಎಸ್‌ಪಿ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ದಾಳಿಯ ಹಿಂದಿನ ಕಾರಣ, ದುಷ್ಕರ್ಮಿಗಳ ಗುರುತು ಮತ್ತು ಈ ಘಟನೆಯ ಹಿನ್ನೆಲೆಯನ್ನು ಪತ್ತೆಹಚ್ಚಲು ತೀವ್ರ ಪ್ರಯತ್ನ ನಡೆಯುತ್ತಿದೆ. ಇದನ್ನೂ ಓದಿ: Mangaluru| ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಹೊರರಾಜ್ಯದ ಯುವತಿ ಪತ್ತೆ – ಗ್ಯಾಂಗ್ ರೇಪ್ ಯತ್ನ ಶಂಕೆ, ಮೂವರು ಅರೆಸ್ಟ್

  • ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಫೈರಿಂಗ್ – ಕೂದಲೆಳೆ ಅಂತರದಲ್ಲಿ ಪಾರು

    ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಫೈರಿಂಗ್ – ಕೂದಲೆಳೆ ಅಂತರದಲ್ಲಿ ಪಾರು

    ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿಯಲ್ಲಿ ತಡರಾತ್ರಿ ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ (Ricky Rai) ಮೇಲೆ ದುಷ್ಕರ್ಮಿಗಳು ಶೂಟೌಟ್ ನಡೆಸಿರುವ ಘಟನೆ ನಡೆದಿದೆ.

    ಬಿಡದಿಯಲ್ಲಿರುವ ಮುತ್ತಪ್ಪ ರೈ (Muttappa Rai) ನಿವಾಸದ ಮುಂಭಾಗದ ಕಾಂಪೌಂಡ್ ಬಳಿ ರಾತ್ರಿ 12:50ರ ಸುಮಾರಿಗೆ 2 ಸುತ್ತಿನ ಗುಂಡಿನ ದಾಳಿ ನಡೆದಿದೆ. ರಿಕ್ಕಿ ರೈ ಅವರನ್ನು ಗುರಿಯಾಗಿಸಿಕೊಂಡು ಗುಂಡು ಹಾರಿಸಲಾಗಿದೆ. ಈ ವೇಳೆ ರಿಕ್ಕಿ ರೈ, ಮೂಗು, ಕೈಗೆ ಗುಂಡು ತಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕಾರವಾರ| ಮಟ್ಕಾ ಆಡಿಸಲು ಲಂಚ ಪಡೆದ ಪೊಲೀಸ್‌ಗೆ 8 ವರ್ಷಗಳ ಬಳಿಕ ಜೈಲು ಶಿಕ್ಷೆ

    ಏನಿದು ಘಟನೆ?
    ರಿಕ್ಕಿ ರೈ ತಮ್ಮ ಫಾರ್ಚೂನರ್ ಕಾರಿನಲ್ಲಿ ಡ್ರೈವರ್ ಮತ್ತು ಗನ್‌ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ಮನೆಯ ಕಾಂಪೌಂಡ್ ಬಳಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ರಿಕ್ಕಿ ರೈ ಅವರಿಗೆ ಗಾಯಗಳಾಗಿವೆ. ತಕ್ಷಣವೇ ಅವರನ್ನು ಬಿಡದಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪ್ರಾಥಮಿಕ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಇದನ್ನೂ ಓದಿ: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತೇನೆ, ಏನಿವಾಗ? – ಅನುರಾಗ್‌ ಕಶ್ಯಪ್‌ ವಿವಾದ

    ಡ್ರೈವಿಂಗ್ ಸೀಟ್ ಟಾರ್ಗೆಟ್ ಮಾಡಿ ಫೈರಿಂಗ್:
    ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಮೇಲೆ ನಡೆದ ಶೂಟೌಟ್‌ನಲ್ಲಿ ದುಷ್ಕರ್ಮಿಗಳು ಡ್ರೈವಿಂಗ್ ಸೀಟ್‌ನನ್ನೇ ಗುರಿಯಾಗಿಸಿ 2 ಸುತ್ತು ಗುಂಡುಗಳನ್ನು ಹಾರಿಸಿದ್ದಾರೆ. ರಿಕ್ಕಿ ರೈ ಸಾಮಾನ್ಯವಾಗಿ ತಾನೇ ಕಾರು ಚಾಲನೆ ಮಾಡುತ್ತಿದ್ದ ಕಾರಣ, ದಾಳಿಕೋರರು ಡ್ರೈವಿಂಗ್ ಸೀಟ್‌ನ ಮೇಲೆ ಗುರಿ ಇಟ್ಟಿದ್ದರು. ಆದರೆ, ಈ ಬಾರಿ ಕಾರನ್ನು ಚಾಲಕ ರಾಜು ಚಲಾಯಿಸುತ್ತಿದ್ದು, ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆದರೆ, ಪಕ್ಕದ ಸೀಟ್‌ನಲ್ಲಿದ್ದ ರಿಕ್ಕಿ ರೈ ಅವರ ಮೂಗು ಮತ್ತು ಕೈಗೆ ಗುಂಡು ತಾಕಿದ್ದು, ಗಂಭೀರ ಗಾಯಗೊಂಡಿದ್ದಾರೆ.

    ಘಟನೆಯ ಸ್ಥಳಕ್ಕೆ ರಾಮನಗರ ಎಸ್ಪಿ ಶ್ರೀನಿವಾಸ್ ಗೌಡ ಮತ್ತು ಡಿವೈಎಸ್‌ಪಿ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ದಾಳಿಯ ಹಿಂದಿನ ಕಾರಣ, ದುಷ್ಕರ್ಮಿಗಳ ಗುರುತು ಮತ್ತು ಈ ಘಟನೆಯ ಹಿನ್ನೆಲೆಯನ್ನು ಪತ್ತೆಹಚ್ಚಲು ತೀವ್ರ ಪ್ರಯತ್ನ ನಡೆಯುತ್ತಿದೆ. ಇದನ್ನೂ ಓದಿ: ಮೇ ತಿಂಗಳಲ್ಲಿ ಬಾಹ್ಯಾಕಾಶ ನಿಲ್ದಾಣಕ್ಕೆ ಹಾರಲಿದ್ದಾರೆ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ

  • ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ ಎಫ್‌ಐಆರ್

    ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ ಎಫ್‌ಐಆರ್

    ಬೆಂಗಳೂರು: ಹೋಟೆಲ್‌ವೊಂದರಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಾನ್‌ ಮುತ್ತಪ್ಪ ರೈ (Muthappa Rai) ಪುತ್ರ ರಿಕ್ಕಿ ರೈ (Ricky Rai) ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

    8ನೇ ಎಸಿಎಂಎಂ ಕೋರ್ಟ್ ಆದೇಶದ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ. ಕಳೆದ ಎರಡು ತಿಂಗಳ ಹಿಂದೆ ರಿಚ್ಮಂಡ್‌ ರಸ್ತೆ ಬಳಿಯ ಹೋಟೆಲ್‌ವೊಂದರಲ್ಲಿ ಗಲಾಟೆ ನಡೆದಿತ್ತು. ರಿಕ್ಕಿ ರೈ ಹಾಗೂ ಸಹಚರರಿಂದ ಅವಾಚ್ಯ ಶಬ್ಧದಿಂದ ನಿಂದಿಸಿ ಶ್ರೀನಿವಾಸ್ ನಾಯ್ಡು ಎಂಬಾತನ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿತ್ತು. ಇದನ್ನೂ ಓದಿ: ತನ್ನ ಪತ್ನಿ ಜೊತೆ ಹೆಚ್ಚಾಗಿ ಫೋನ್‌ನಲ್ಲಿ ಮಾತನಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕೊಲೆ

    ರಿಕ್ಕಿ ರೈ ಆಪ್ತ ವಕೀಲ ನಾರಾಯಣ ಸ್ವಾಮಿ, ಶ್ರೀನಿವಾಸ್ ನಾಯ್ಡುಗೆ ಬೆದರಿಕೆ ಹಾಕಿದ್ದರು. ಪೊಲೀಸ್ ಠಾಣೆಗೆ ಹೋದರೆ ಕೊಲೆ ಮಾಡುವುದಾಗಿ ಬೆದರಿಸಿದ್ದರೆಂಬ ಆರೋಪ ಹೊರಿಸಲಾಗಿತ್ತು. ಆದರೆ ಘಟನೆಯ ಬಳಿಕ ಶ್ರೀನಿವಾಸ್ ನಾಯ್ಡು ವಿರುದ್ಧವೇ ಪ್ರಕರಣ ದಾಖಲಾಗಿತ್ತು.

    ರಿಕ್ಕಿ ರೈ ಕಾರು ಚಾಲಕ ಸೋಮಶೇಖರ್‌ ದೂರು ದಾಖಲಿಸಿದ್ದರು. ಶ್ರೀನಿವಾಸ್ ನಾಯ್ಡು ಸೇರಿದಂತೆ ನಾಲ್ವರ ವಿರುದ್ಧ ದೂರು ದಾಖಲಾಗಿತ್ತು. ರಿಕ್ಕಿ ರೈ ಮೇಲೆ ಹಲ್ಲೆ ಮಾಡಿದ್ದಾಗಿ ಶ್ರೀನಿವಾಸ್ ನಾಯ್ಡು ವಿರುದ್ಧ ದೂರು ಕೊಡಲಾಗಿತ್ತು. ಇದೀಗ ಕೋರ್ಟ್ ಪಿಸಿಆರ್ ಅನ್ವಯ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಕೇದಾರನಾಥ ಯಾತ್ರೆಗೆ ತೆರಳಿದ್ದ ಚಿಕ್ಕಮಗಳೂರು ಮೂಲದ ಯುವಕ ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಪ್ಪು ಸುಂದರಿ ಮೇಲೆ ಮುತ್ತಪ್ಪ ರೈ ಪುತ್ರನ ಕಣ್ಣು- ಉದ್ಯಮಿಯ ಕಾರು ಸುಟ್ಟ ಕೇಸ್‍ಗೆ ಟ್ವಿಸ್ಟ್

    ಕಪ್ಪು ಸುಂದರಿ ಮೇಲೆ ಮುತ್ತಪ್ಪ ರೈ ಪುತ್ರನ ಕಣ್ಣು- ಉದ್ಯಮಿಯ ಕಾರು ಸುಟ್ಟ ಕೇಸ್‍ಗೆ ಟ್ವಿಸ್ಟ್

    ಬೆಂಗಳೂರು: ಉದ್ಯಮಿ ಶ್ರೀನಿವಾಸ್ ನಾಯ್ಡು (Srinivas Naidu) ಅವರ ಕೋಟಿ ರೂ. ಬೆಳೆಬಾಳುವ ರೇಂಜ್ ರೋವರ್ (Range Rover) ಕಾರಿಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಾನ್ ದಿ.ಮುತ್ತಪ್ಪ ರೈ (Muttappa Rai) ಪುತ್ರ ಸೇರಿದಂತೆ 9 ಜನರ ವಿರುದ್ಧ ಸದಾಶಿವನಗರ ಪೊಲೀಸರು 188 ಪುಟಗಳ ಚಾರ್ಜ್‍ಶೀಟ್ ಸಲ್ಲಿಸಿದ್ದಾರೆ.

    2021ರ ಅಕ್ಟೋಬರ್ ನಲ್ಲಿ ಸದಾಶಿವನಗರದ ಸಪ್ತಗಿರಿ ಅಪಾರ್ಟ್ ಮೆಂಟ್‍ (Saptagiri Apartment Sadashivanagar) ನಲ್ಲಿ ಉದ್ಯಮಿ ಶ್ರೀನಿವಾಸ್ ನಾಯ್ಡು ಅವರ ರೇಂಜ್ ರೋವರ್ ಕಾರನ್ನು ಆರೋಪಿಗಳು ಸುಟ್ಟುಹಾಕಿದ್ದರು. ಈ ಕುರಿತು ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಒಟ್ಟು 10 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ರಿಕ್ಕಿ ರೈ (Rikki Rai) ಸೂಚನೆಯಂತೆ ಕಾರು ಸುಟ್ಟಿರುವುದಾಗಿ ಆರೋಪಿಗಳು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಬ್ಯಾಂಕ್‌ಗಳಲ್ಲಿ ಶುರುವಾಯ್ತು ಪಿಂಕ್ ನೋಟ್ ವಿನಿಮಯ – RBI ಆದೇಶದ ವಿರುದ್ಧ ಹೈಕೋರ್ಟ್‌ಗೆ ಅರ್ಜಿ

    ಘಟನೆ ಕುರಿತು ತನಿಖೆ ನಡೆಸಿದ ಸದಾಶಿವನಗರ ಪೊಲೀಸರು 33ನೇ ಎಸಿಎಂಎಂ ಕೋರ್ಟ್‍ಗೆ 188 ಪುಟಗಳ ಚಾರ್ಜ್‍ಶೀಟ್ ಸಲ್ಲಿಕೆ ಮಾಡಿದ್ದಾರೆ. ಮಾಜಿ ಡಾನ್ ಮುತ್ತಪ್ಪ ರೈ ಅವರ ಮಗ ರಿಕ್ಕಿ ರೈ ಮತ್ತು ಉದ್ಯಮಿ ಶ್ರೀನಿವಾಸ್ ನಾಯ್ಡು ಒಂದು ಕಾಲದಲ್ಲಿ ಆತ್ಮೀಯ ಗೆಳೆಯರಾಗಿದ್ದರು. ಮುತ್ತಪ್ಪ ರೈ ಅವರ ನಿಧನದ ಬಳಿಕ ಶ್ರೀನಿವಾಸ್ ನಾಯ್ಡು ರೈ ಗ್ರೂಪಿನಿಂದ ಹೊರಬಂದಿದ್ದರು. ನಾಯ್ಡು ಹೊರ ಬಂದಿದಕ್ಕೆ ರಿಕ್ಕಿ ರೈ ದ್ವೇಷ ಸಾಧಿಸಿ ಈ ಕೃತ್ಯ ಎಸಗಿದ್ದಾರಾ ಎಂಬ ಶಂಕೆ ಈಗ ವ್ಯಕ್ತವಾಗಿದೆ.