Tag: Rifles

  • ಮೂವರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ 6 ಮಂದಿಯನ್ನು ಗುಂಡಿಕ್ಕಿ ಹತ್ಯೆ!

    ಭೋಪಾಲ್: ಜಮೀನು ವಿವಾದದ ಗಲಾಟೆಯಲ್ಲಿ ಮೂವರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಆರು ಸದಸ್ಯರನ್ನು ಗುಂಡಿಕ್ಕಿ (shoot) ಹತ್ಯೆ ಮಾಡಿದ ಘಟನೆ ಶುಕ್ರವಾರ ಮಧ್ಯಪ್ರದೇಶದ (Madhya Pradesh) ಮೊರೆನಾದಲ್ಲಿ (Morena) ನಡೆದಿದೆ.

    ಘಟನೆಯ ಆಘಾತಕಾರಿ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ವೀಡಿಯೋದಲ್ಲಿ ಇಬ್ಬರು ರೈಫಲ್‍ಗಳನ್ನು (Rifles) ಹಿಡಿದು ಇನ್ನೊಂದು ಗುಂಪಿನ ಕಡೆ ಗುಂಡು ಹಾರಿಸುವುದು ದಾಖಲಾಗಿದೆ. ನಂತರ ಕೆಲವರು ಅವರನ್ನು ಕೋಲುಗಳಿಂದ ಥಳಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ತಂದೆಗೆ ಬಿಜೆಪಿ ಟಿಕೆಟ್ ಸಿಕ್ಕ ಖುಷಿಗೆ ಗಾಳಿಯಲ್ಲಿ ಗುಂಡು ಪ್ರಕರಣ – ಅಭ್ಯರ್ಥಿ ಪುತ್ರನ ವಿರುದ್ಧ ಎಫ್‍ಐಆರ್

    ಘಟನೆಯ ಹಿನ್ನೆಲೆ:
    ಧೀರ್ ಸಿಂಗ್ ತೋಮರ್ ಮತ್ತು ಗಜೇಂದ್ರ ಸಿಂಗ್ ತೋಮರ್ ಕುಟುಂಬಗಳ ನಡುವೆ 2013ರಲ್ಲಿ ತ್ಯಾಜ್ಯ ಸುರಿಯುವ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳವಾಗಿತ್ತು. ಆಗ ಧೀರ್ ಸಿಂಗ್ ತೋಮರ್ ಕುಟುಂಬದ ಇಬ್ಬರು ಸಾವನ್ನಪ್ಪಿದ್ದರು. ಈ ವೇಳೆ ಗಜೇಂದ್ರ ಸಿಂಗ್ ತೋಮರ್ ಕುಟುಂಬವು ಗ್ರಾಮದಿಂದ ಪಲಾಯನ ಮಾಡಿತ್ತು.

    ನಂತರ ಎರಡು ಕುಟುಂಬಗಳು ನ್ಯಾಯಾಲಯದ (Court) ಹೊರಗೆ ರಾಜಿ ಮಾಡಿಕೊಂಡಿದ್ದವು. ಶುಕ್ರವಾರ ಗಜೇಂದ್ರ ಸಿಂಗ್ ತೋಮರ್ ಕುಟುಂಬ ಗ್ರಾಮಕ್ಕೆ ಮರಳಿದೆ. ಈ ವೇಳೆ ಧೀರ್ ಸಿಂಗ್ ತೋಮರ್ ಕುಟುಂಬ ಅವರ ಮೇಲೆ ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ.

    ಹತ್ಯೆಯಲ್ಲಿ ಭಾಗಿಯಾಗಿರುವ ಎಂಟು ಮಂದಿಯನ್ನು ಗುರುತಿಸಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸೇನಾ ವಾಹನದ ಮೇಲೆ ದಾಳಿ ಪ್ರಕರಣ – ಉಗ್ರರನ್ನು ಸುತ್ತುವರಿದ ಸೇನೆ, ಇಬ್ಬರು ಯೋಧರು ಸಾವು

  • ಮಲಗಿದ್ದಾಗ ಐಟಿಬಿಪಿ ಶಿಬಿರದಿಂದ ಯೋಧರ ಎರಡು AK-47 ರೈಫಲ್ ಕಳವು – ವಿಶೇಷ ತಂಡದಿಂದ ತಲಾಶ್

    ಮಲಗಿದ್ದಾಗ ಐಟಿಬಿಪಿ ಶಿಬಿರದಿಂದ ಯೋಧರ ಎರಡು AK-47 ರೈಫಲ್ ಕಳವು – ವಿಶೇಷ ತಂಡದಿಂದ ತಲಾಶ್

    ಬೆಳಗಾವಿ: ಜಿಲ್ಲೆಯ ಹಾಲಬಾವಿಯಲ್ಲಿರುವ ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಶಿಬಿರದಿಂದ ಎರಡು ಎಕೆ-47 ರೈಫಲ್‍ಗಳು ಕಳುವಾಗಿರೋದು ಭಾರೀ ಆತಂಕಕ್ಕೆ ಕಾರಣವಾಗಿದೆ.

    ನಕ್ಸಲ್ ನಿಗ್ರಹ ತರಬೇತಿಗೆಂದು ಬಂದಿದ್ದ ಮಧುರೈನ 45ನೇ ಬೆಟಾಲಿಯನ್ ಯೋಧರಾದ ರಾಜೇಶ್ ಕುಮಾರ, ಸಂದೀಪ ಮೀನಾ ಅವರು ತರಬೇತಿ ಕಟ್ಟಡದ ಮೂರನೇ ಮಹಡಿಯ 120 ಮೆನ್ಸ್ ಬ್ಯಾರಕ್‍ನಲ್ಲಿ ಆಗಸ್ಟ್ 17 ರಂದು ರಾತ್ರಿ ಮಲಗಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಎರಡು ಬಂದೂಕುಗಳನ್ನು ಕದ್ದೊಯ್ದಿದ್ದಾರೆ. ವಿಷಯ ತಿಳಿದ ಮೇಲಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಬಿಗಿ ಭದ್ರತೆ ನಡುವೆ ಎಕೆ-47 ರೈಫಲ್‍ಗಳು ಕಳುವಾಗಿದ್ದೇಗೆ ಎಂಬ ಬಗ್ಗೆ ತನಿಖೆ ನಡೆಸಿದ್ದಾರೆ. ಇದನ್ನೂ ಓದಿ: ಮೊಟ್ಟೆಯ ವಿಭಿನ್ನ ಬಳಕೆ: ಕಾಂಗ್ರೆಸ್-ದಾಸೋಹ, ಬಿಜೆಪಿ-ಜನದ್ರೋಹ – ʼಕೈʼ ಟೀಕೆ

    ಐಟಿಬಿಪಿ ಯೋಧರು ನೀಡಿದ ದೂರು ಆಧರಿಸಿ ಕಾಕತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪರಾಧ ವಿಭಾಗದ ಡಿಸಿಪಿ ಪಿ.ವಿ ಸ್ನೇಹಾ ನೇತೃತ್ವದ ವಿಶೇಷ ತಂಡ ಕಳುವಾದ ಬಂದೂಕುಗಳ ಬೆನ್ನತ್ತಿದೆ. ಅದೇ ಕೊಠಡಿಯಲ್ಲಿದ್ದ ಮನೀಶ್ ಪುನೇತಾ, ಮಹ್ಮದ್ ಅಸ್ಲಾಂ ಸೇರಿ ನಾಲ್ವರು ಯೋಧರ ವಿಚಾರಣೆಯನ್ನು ನಡೆಸಿದೆ. ಆದರೂ ಯಾವುದೇ ಸುಳಿವು ಸಿಕ್ಕಿಲ್ಲ. ಇದನ್ನೂ ಓದಿ: 200 ಸಿಬ್ಬಂದಿ ನಿಯೋಜನೆ; ಇನ್ನೂ ಪತ್ತೆಯಾಗಿಲ್ಲ ಚಿರತೆ!

    Live Tv
    [brid partner=56869869 player=32851 video=960834 autoplay=true]