ರಾಮನಗರ: ರಿಕ್ಕಿ ರೈ (Rikki Rai) ಮೇಲಿನ ಗುಂಡಿನ ದಾಳಿ ಪ್ರಕರಣ (Firing Case) ಕುರಿತು ವಿಚಾರಣೆಗೆ ಹಾಜರಾಗುವಂತೆ ರಿಕ್ಕಿ ರೈಗೆ ನೋಟೀಸ್ ಜಾರಿ ಮಾಡಲಾಗಿದೆ. ವಿಚಾರಣೆಗೆ ಹಾಜರಾಗಲು ರಿಕ್ಕಿ ರೈ 20 ದಿನಗಳ ಕಾಲಾವಕಾಶ ಕೇಳಿದ್ದು, ಮೆಡಿಕಲ್ ರಿಪೋರ್ಟ್ ಕೊಟ್ಟು ಸಮಯಾವಕಾಶ ಕೇಳಿದ್ದಾರೆ ಎಂದು ರಾಮನಗರ ಎಸ್ಪಿ ಶ್ರೀನಿವಾಸ್ ಗೌಡ ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಿಕ್ಕಿ ರೈ ಮೇಲೆ ಫೈರಿಂಗ್ ಪ್ರಕರಣ ಸಂಬಂಧ ಎಲ್ಲಾ ರೀತಿಯಲ್ಲೂ ತನಿಖೆ ನಡೆಯುತ್ತಿದೆ. ಕೆಲವೊಂದು ರಿಪೋರ್ಟ್‌ಗಳು ಬರಬೇಕಾಗಿದೆ, ಅದಕ್ಕಾಗಿ ಕಾಯುತ್ತಿದ್ದೇವೆ. ಈ ಎಲ್ಲಾ ವರದಿಗಳು ಬಂದ ಬಳಿಕ ಚಾರ್ಜ್‌ಶೀಟ್ ಫೈಲ್ ಮಾಡುತ್ತೇವೆ. ಜೊತೆಗೆ ರಿಕ್ಕಿ ರೈಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದೇವೆ. ಅವರು ಬಂದ ನಂತರ ತನಿಖೆ ಮುಂದುವರಿಸುತ್ತೇವೆ ಎಂದರು. ಇದನ್ನೂ ಓದಿ: ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಹುಟ್ಟುಹಬ್ಬ – ಮೋದಿ, ಸಿದ್ದರಾಮಯ್ಯ ಸೇರಿ ಗಣ್ಯರಿಂದ ಶುಭಾಶಯ
ಪ್ರಕರಣದಲ್ಲಿ ವಿಠಲ್ ಪ್ರಮುಖ ಆರೋಪಿಯಾಗಿದ್ದಾನೆ. ಆತನನ್ನು ದಸ್ತಗಿರಿ ಮಾಡಿ ಈಗಾಗಲೇ ಜೈಲಿಗೆ ಬಿಟ್ಟಿದ್ದೇವೆ. ಕೆಲವೊಂದು ಸಾಕ್ಷ್ಯಾಧಾರಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದೇವೆ. ಆ ವರದಿಗಳು ಬಂದ ಮೇಲೆ ಪ್ರಕರಣ ತನಿಖೆ ಚುರುಕುಗೊಳಿಸುತ್ತೇವೆ. ಸದ್ಯಕ್ಕೆ ವಿಠಲ್ ಒಬ್ಬನೇ ಕೇಸ್‌ನಲ್ಲಿ ಆರೋಪಿಯಾಗಿದ್ದಾನೆ. ರಿಕ್ಕಿ ರೈ ವಿಚಾರಣೆಗೆ ಹಾಜರಾದ ಬಳಿಕ ಮತ್ತಷ್ಟು ವಿಚಾರಗಳು ಹೊರಬರಬೇಕಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮಸೀದಿಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ – ಪರಿಶೀಲಿಸುವಂತೆ ಪೊಲೀಸ್ ಆಯುಕ್ತರಿಗೆ ಬೆಲ್ಲದ್ ಪತ್ರ
ಬೆಂಗಳೂರು: ಮಾಜಿ ಡಾನ್ ಮುತ್ತಪ್ಪ ರೈ (Muttappa Rai) ಪುತ್ರ ರಿಕ್ಕಿ ರೈ ಗುಂಡೇಟು ತಿಂದು ಮಣಿಪಾಲ್ ಆಸ್ಪತ್ರೆ (Manipal Hospital) ಸೇರಿದ್ದು, ಚಿಕಿತ್ಸೆ ಪಡೆಯುತ್ತಿರುವ ರಿಕ್ಕಿ ಆರೋಗ್ಯವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ವಿಚಾರಿಸಿದ್ದಾರೆ.
ಆಸ್ಪತ್ರೆಗೆ ಭೇಟಿ ನೀಡುವ ಮೊದಲೇ ರಿಕ್ಕಿ ರೈಗೆ (Rikki Rai) ಕರೆ ಮಾಡಿ ಘಟನೆ ಹೇಗಾಯ್ತು ಎಂದು ಮಾಹಿತಿ ಪಡೆದಿದ್ದಾರೆ. ಆರೋಪಿಗಳು ಯಾರೇ ಆಗಿದ್ದರೂ ಪೊಲೀಸರು ಪತ್ತೆ ಹಚ್ಚುತ್ತಾರೆ. ನಾನು ಗೃಹ ಇಲಾಖೆ ಜೊತೆಗೆ ಪ್ರಕರಣದ ಬಗ್ಗೆ ಮಾತನಾಡುತ್ತೇನೆ. ಪೊಲೀಸರು ಆರೋಪಿಗಳನ್ನ ಪತ್ತೆ ಮಾಡುತ್ತಾರೆ. ನೀನು ಆರೋಗ್ಯದ ಕಡೆ ಗಮನ ಕೊಡು ಎಂದು ಡಿಕೆಶಿ ಪೋನ್ ಮೂಲಕ ಸಾಂತ್ವನ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: Exclusive | ರಿಕ್ಕಿ ರೈಗಿದ್ದ ಭದ್ರತೆ ನೋಡಿದ್ರೆ ಎದುರಾಳಿಗಳು ಹತ್ತಿರ ಸುಳಿಯೋಕು ನಡುಗುತ್ತಾರೆ!
ಶನಿವಾರ ಸಂಜೆ ಡಿಕೆಶಿ ರಿಕ್ಕಿ ರೈ ಜೊತೆ ಮಾತನಾಡಿ ಆರೋಗ್ಯ ವಿಚಾರಿಸಿದ್ದಾರೆ. ಇತ್ತ ಪೊಲೀಸರ ತನಿಖೆ ನಡುವೆ ಡಿಸಿಎಂ ಆರೋಗ್ಯ ವಿಚಾರಿಸಿರುವುದು ಆತ್ಮಬಲ ಹೆಚ್ಚಿಸಿದೆ ಎಂದು ರಿಕ್ಕಿ ರೈ ಹೇಳಿದ್ದಾರೆ.
ಏನಿದು ಘಟನೆ?
ರಿಕ್ಕಿ ರೈ ತಮ್ಮ ಫಾರ್ಚೂನರ್ ಕಾರಿನಲ್ಲಿ ಡ್ರೈವರ್ ಮತ್ತು ಗನ್‌ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ಮನೆಯ ಕಾಂಪೌಂಡ್ ಬಳಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ರಿಕ್ಕಿ ರೈ ಅವರಿಗೆ ಗಾಯಗಳಾಗಿವೆ.
ಡ್ರೈವಿಂಗ್ ಸೀಟ್ ಟಾರ್ಗೆಟ್ ಮಾಡಿ ಫೈರಿಂಗ್:
ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಮೇಲೆ ನಡೆದ ಶೂಟೌಟ್‌ನಲ್ಲಿ ದುಷ್ಕರ್ಮಿಗಳು ಡ್ರೈವಿಂಗ್ ಸೀಟ್‌ನನ್ನೇ ಗುರಿಯಾಗಿಸಿ 2 ಸುತ್ತು ಗುಂಡುಗಳನ್ನು ಹಾರಿಸಿದ್ದಾರೆ. ರಿಕ್ಕಿ ರೈ ಸಾಮಾನ್ಯವಾಗಿ ತಾನೇ ಕಾರು ಚಾಲನೆ ಮಾಡುತ್ತಿದ್ದ ಕಾರಣ, ದಾಳಿಕೋರರು ಡ್ರೈವಿಂಗ್ ಸೀಟ್‌ನ ಮೇಲೆ ಗುರಿ ಇಟ್ಟಿದ್ದರು. ಆದರೆ, ಈ ಬಾರಿ ಕಾರನ್ನು ಚಾಲಕ ರಾಜು ಚಲಾಯಿಸುತ್ತಿದ್ದು, ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದ. ಆದರೆ, ಪಕ್ಕದ ಸೀಟ್‌ನಲ್ಲಿದ್ದ ರಿಕ್ಕಿ ರೈ ಅವರ ಮೂಗು ಮತ್ತು ಕೈಗೆ ಗುಂಡು ತಾಕಿದ್ದು, ಗಂಭೀರ ಗಾಯಗೊಂಡಿದ್ದರು.
ಘಟನೆಯ ಸ್ಥಳಕ್ಕೆ ರಾಮನಗರ ಎಸ್ಪಿ ಶ್ರೀನಿವಾಸ್ ಗೌಡ ಮತ್ತು ಡಿವೈಎಸ್‌ಪಿ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ದಾಳಿಯ ಹಿಂದಿನ ಕಾರಣ, ದುಷ್ಕರ್ಮಿಗಳ ಗುರುತು ಮತ್ತು ಈ ಘಟನೆಯ ಹಿನ್ನೆಲೆಯನ್ನು ಪತ್ತೆಹಚ್ಚಲು ತೀವ್ರ ಪ್ರಯತ್ನ ನಡೆಯುತ್ತಿದೆ.ಇದನ್ನೂ ಓದಿ: ಗೆಳತಿಯೊಂದಿಗೆ ಲಿವ್ ಇನ್‌ನಲ್ಲಿರಲು ಮನೆಯವರ ವಿರೋಧ – ರೈಲ್ವೆ ಹಳಿಗೆ ಹಾರಿ ಯುವಕ ಆತ್ಮಹತ್ಯೆ
– ರಿಕ್ಕಿ ರೈ ಮೇಲೆ ಶೂಟೌಟ್ ಕೇಸ್; ಔಟ್ ಆಫ್ ಡೇಂಜರ್ ಎಂದ ಗೃಹಸಚಿವ
ಬೆಂಗಳೂರು: ಜನಿವಾರ ತೆಗೆಸಿ ಪರೀಕ್ಷೆ ಬರೆಸಿರುವುದು ಬಹಳ ದೊಡ್ಡ ತಪ್ಪು. ನಾನು ಕೂಡ ಇದನ್ನು ಖಂಡಿಸುತ್ತೇನೆ ಎಂದು ಗೃಹಸಚಿವ ಜಿ.ಪರಮೇಶ್ವರ್ (J Parameshwar) ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಿಕ್ಕಿ ರೈ ಮೇಲೆ ಗುಂಡಿನ ದಾಳಿ ವಿಚಾರವಾಗಿ ಪ್ರತಿಕ್ರಿಯಿಸಿ, ನನಗೆ ವಿಷಯ ಗೊತ್ತಾಗಿದೆ. ನಾನು ಮಾಹಿತಿ ಕೇಳಿದ್ದೇನೆ. ರಾತ್ರಿ 1 ಗಂಟೆಗೆ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ಕೇಳಿದ್ದೇನೆ. ಔಟ್ ಆಫ್ ಡೇಂಜರ್ ಅಂತ ಹೇಳಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಮುತ್ತಪ್ಪ ರೈ ಕುಟುಂಬದ ಮೇಲೆ ಸಾಕಷ್ಟು ಜನರಿಗೆ ದ್ವೇಷ ಇದೆ: ಪ್ರಕಾಶ್ ರೈ
ಕಾನೂನು ಸುವ್ಯವಸ್ಥೆ ಸರಿಯಾಗಿದೆ ಎಂದು ಎಲ್ಲಾ ಪ್ಯಾರಾ ಮೀಟರ್ಸ್ ಹೇಳುತ್ತಿವೆ. ಕ್ರೈಂ ಪ್ರಕರಣಗಳು ಕಡಿಮೆಯಾಗಿವೆ. ಪೊಲೀಸ್ ಕಮಿಷನರ್ ಬ್ರೀಫ್ ಮಾಡಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕಡಿಮೆಯಾಗಿದೆ. ಸೈಬರ್ ಕೇಸ್ ಕಡಿಮೆಯಾಗಿದೆ. ಕಾನೂನು ಸುವ್ಯವಸ್ಥೆ ಎಲ್ಲಾ ಸರಿಯಾಗಿದೆ ಎಂದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿಲ್ಲ ಎಂಬ ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದರು. ಇದನ್ನೂ ಓದಿ: ರಿಕ್ಕಿ ರೈ ಮೇಲೆ 2 ಸುತ್ತು ಗುಂಡಿನ ದಾಳಿ – ಡ್ರೈವಿಂಗ್ ಸೀಟ್ ಟಾರ್ಗೆಟ್ ಮಾಡಿ ಫೈರಿಂಗ್ ಮಾಡಿದ್ದು ಏಕೆ?
ಒಳಮೀಸಲಾತಿಗೆ ಜಾತಿಗಣತಿ ವರದಿ ಬಳಸುವ ಚರ್ಚೆ ವಿಚಾರವಾಗಿ ಮಾತನಾಡಿ, ನ್ಯಾ. ನಾಗಮೋಹನ್ ದಾಸ್ (Nagamohan Das) ಅವರಿಗೆ ಈಗಾಗಲೇ ಕೊಟ್ಟಿದ್ದೇವೆ. ಈ ಜಾತಿಗಣತಿ ವರದಿಯನ್ನು ಅದರೊಂದಿಗೆ ಹೋಲಿಸುತ್ತಾರೆ. ಡಬಲ್ ಆದರೆ ಒಳ್ಳೆಯದಲ್ವಾ. ಕಮಿಷನ್ ಡಾಟಾ ಕಲೆಕ್ಟ್ ಮಾಡಲು ಶುರು ಮಾಡಿದೆ. ಈಗ ನಿಲ್ಲಿಸಿ ಅಂತ ಹೇಳೋದು ಸರಿಯಲ್ಲ ಎಂದು ಹೇಳಿದರು.
ಬೆಂಗಳೂರು: ಉದ್ಯಮಿ ಶ್ರೀನಿವಾಸ್ ನಾಯ್ಡು ಅವರ ಕೋಟಿ ರೂ. ಬೆಳೆಬಾಳುವ ರೇಂಜ್ ರೋವರ್ (Range Rover) ಕಾರಿಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಾನ್ ದಿ.ಮುತ್ತಪ್ಪ ರೈ (Muthappa Rai) ಪುತ್ರ ಸೇರಿದಂತೆ 9 ಜನರ ವಿರುದ್ಧ ಸದಾಶಿವನಗರ ಪೊಲೀಸರು 188 ಪುಟಗಳ ಚಾರ್ಜ್‌ಶೀಟ್ (Chargesheet) ಸಲ್ಲಿಸಿದ್ದಾರೆ.
2021ರ ಅಕ್ಟೋಬರ್‌ನಲ್ಲಿ ಸದಾಶಿವನಗರದ (Sadashiva Nagara) ಸಪ್ತಗಿರಿ ಅಪಾರ್ಟ್ಮೆಂಟ್‌ನಲ್ಲಿ ಉದ್ಯಮಿ ಶ್ರೀನಿವಾಸ್ ನಾಯ್ಡು ಅವರ ರೇಂಜ್ ರೋವರ್ ಕಾರನ್ನು ಆರೋಪಿಗಳು ಸುಟ್ಟುಹಾಕಿದ್ದರು. ಈ ಕುರಿತು ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಒಟ್ಟು 10 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ರಿಕ್ಕಿ ರೈ (Rikki Rai) ಸೂಚನೆಯಂತೆ ಕಾರು ಸುಟ್ಟಿರುವುದಾಗಿ ಆರೋಪಿಗಳು ಹೇಳಿಕೆ ನೀಡಿದ್ದಾರೆ. ಘಟನೆ ಕುರಿತು ತನಿಖೆ ನಡೆಸಿದ ಸದಾಶಿವನಗರ ಪೊಲೀಸರು 33ನೇ ಎಸಿಎಂಎಂ ಕೋರ್ಟ್‌ಗೆ 188 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದಾರೆ. ಇದನ್ನೂ ಓದಿ: ಟ್ರಕ್‍ಗೆ ಬಸ್ ಡಿಕ್ಕಿ – ಏಳು ಸಾವು, 13 ಮಂದಿಗೆ ಗಾಯ
ದಿವಗಂತ ಮಾಜಿ ಡಾನ್ ಮುತ್ತಪ್ಪ ರೈ ಅವರ ಮಗ ರಿಕ್ಕಿ ರೈ ಮತ್ತು ಉದ್ಯಮಿ ಶ್ರೀನಿವಾಸ್ ನಾಯ್ಡು ಒಂದು ಕಾಲದಲ್ಲಿ ಆತ್ಮೀಯ ಗೆಳೆಯರಾಗಿದ್ದರು. ಮುತ್ತಪ್ಪ ರೈ ಅವರ ನಿಧನದ ಬಳಿಕ ಶ್ರೀನಿವಾಸ್ ನಾಯ್ಡು ರೈ ಗ್ರೂಪಿನಿಂದ ಹೊರಬಂದಿದ್ದರು. ನಾಯ್ಡು ಹೊರ ಬಂದಿದಕ್ಕೆ ರಿಕ್ಕಿ ರೈ ದ್ವೇಷ ಸಾಧಿಸಿ ಈ ಕೃತ್ಯ ಎಸಗಿದ್ದಾರಾ ಎಂಬ ಶಂಕೆ ಈಗ ವ್ಯಕ್ತವಾಗಿದೆ. ಇದನ್ನೂ ಓದಿ: ಇಂದಿನಿಂದ 2,000 ಮುಖಬೆಲೆ ನೋಟು ವಿನಿಮಯ ಪ್ರಕ್ರಿಯೆ ಆರಂಭ
ಚಾರ್ಜ್‌ಶೀಟ್‌ನಲ್ಲಿ ಏನಿದೆ?
ಈ ಘಟನೆ ನಡೆಯುವ 3 ತಿಂಗಳಿಗೂ ಮೊದಲು ರಿಕ್ಕಿ ರೈ ಶ್ರೀನಿವಾಸ್ ನಾಯ್ಡು ಅವರ ಕಾರನ್ನು ನೋಡಿ ನೈಸ್ ಕಾರ್ ಡ್ಯೂಡ್ ಎಂದು ಅದನ್ನು ಬೂದಿ ಮಾಡುವ ಸವಾಲು ಹಾಕಿದ್ದಾರೆ. ಈ ಕಾರಲ್ಲಿ ಓಡಾಡಿಕೊಂಡು ನನ್ನ ಮುಂದೆ ಎಷ್ಟು ದಿನ ಮೆರೆಯುತ್ತೀಯಾ ಮೆರಿ. ಎಷ್ಟು ದಿನ ಈ ಕಾರಲ್ಲಿ ಓಡಾಡುತ್ತೀಯಾ ನೋಡುತ್ತೇನೆ. ಈ ಕಾರನ್ನು ಬೂದಿ ಮಾಡುತ್ತೇನೆ ಎಂದು ರಿಕ್ಕಿ ರೈ ನಾಯ್ಡು ಅವರಿಗೆ ವಾರ್ನಿಂಗ್ ಕೊಟ್ಟಿದ್ದ ಅಂಶಗಳಿವೆ. ಇದನ್ನೂ ಓದಿ: ಮುಖ್ಯಮಂತ್ರಿ ಆಯ್ಕೆಗಿಂತಲೂ ಕಗ್ಗಂಟಾದ ವಿಪಕ್ಷ ನಾಯಕನ ಆಯ್ಕೆ
ರಿಕ್ಕಿ ವಾರ್ನಿಂಗ್‌ಗೆ ಶ್ರೀನಿವಾಸ್ ನಾಯ್ಡು ತಲೆಕೆಡಿಸಿಕೊಳ್ಳದೇ ಸುಮ್ಮನಾಗಿದ್ದರು. ಇದಾದ ನಂತರ ನಾರಾಯಣಸ್ವಾಮಿ ಎಂಬವರಿಂದ ಕಾರಿಗೆ ಬೆಂಕಿ ಹಚ್ಚುವ ಪ್ಲಾನ್ ನಡೆದಿತ್ತು. ಆರೋಪಿಗಳ ಹೇಳಿಕೆ ಪ್ರಕಾರ ಆರೋಪಿ ನಾರಾಯಣ ಸ್ವಾಮಿ ಬೆಂಕಿ ಹಚ್ಚುವ ಪ್ಲಾನ್ ಮಾಡಿದ್ದು, ಮೊದಲಿಗೆ ಶ್ರೀನಿವಾಸ್ ನಾಯ್ಡು ಅವರ ಸ್ನೇಹಿತ ಸುಪ್ರೀತ್‌ಗೂ ಹಲ್ಲೆ ನಡೆಸಿದ್ದಾರೆ. ಬಳಿಕ ಶ್ರೀನಿವಾಸ್ ನಾಯ್ಡು ಅವರ ಫ್ಲ್ಯಾಟ್‌ಗೂ ನುಗ್ಗಿ ಹಲ್ಲೆ ನಡೆಸುವ ಯತ್ನ ವಿಫಲವಾದ್ದರಿಂದ ಕಾರಿಗೆ ಬೆಂಕಿ ಹಚ್ಚುವ ಪ್ಲಾನ್ ಮಾಡಿದ್ದಾರೆ. ಇದನ್ನೂ ಓದಿ: ಜನನ, ಮರಣ ಮಾಹಿತಿ ಮತದಾರರ ಪಟ್ಟಿಗೆ ಜೋಡಣೆ – ಶೀಘ್ರವೇ ಮಸೂದೆ ಮಂಡನೆ
ಮಧ್ಯರಾತ್ರಿ ಬುಲೆಟ್ ಮತ್ತು ಕಾರಿನಿಂದ ಎರಡು ಲೀಟರ್‌ನ ಎರಡು ಬಾಟಲ್‌ನಲ್ಲಿ ಪೆಟ್ರೋಲ್ ಎಳೆದು ಕಾರಿಗೆ ಸುರಿದಿದ್ದಾರೆ. ಬಳಿಕ ಲೈಟರ್‌ನಿಂದ ಬೆಂಕಿ ಹಚ್ಚಿ ಅಲ್ಲಿಂದ ಪರಾರಿಯಾಗಿದ್ದಾರೆ. ಸದ್ಯ ಘಟನೆ ಸಂಬಂಧ ನಾರಾಯಣಸ್ವಾಮಿ, ಅಭಿನಂದನ್, ಮುನಿಯಪ್ಪ, ಗಣೇಶ್, ಶಶಾಂಕ್, ನಿರ್ಮಲ್, ರೋಹಿತ್, ರಾಕೇಶ್ ಹಾಗೂ ರಿಕ್ಕಿ ರೈ ಮೇಲೆ ಸದಾಶಿವ ನಗರ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಎ1 ಆರೋಪಿ ನಾರಾಯಣಸ್ವಾಮಿ ಹಾಗೂ ಎ8 ಆರೋಪಿ ರಿಕ್ಕಿ ರೈ ಹೇಳಿಕೆ ಇನ್ನೂ ಬಾಕಿ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸರ್ಕಾರದ ಬಳಿ ಅಂಕಿ ಅಂಶಗಳೇ ಇಲ್ಲ – ಶೀಘ್ರವೇ ಗ್ಯಾರಂಟಿ ಯೋಜನೆ ಜಾರಿ ಅನುಮಾನ