ರಾಯಚೂರು: ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವು ಮುಂದುವರೆದಿದ್ದು, ಇದೀಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿರುವ ಘಟನೆ ರಾಯಚೂರಿನ (Raichuru) ರಿಮ್ಸ್ ಆಸ್ಪತ್ರೆಯಲ್ಲಿ (RIMS Hospital) ನಡೆದಿದೆ.
ಜ.2 ರಂದು ರಿಮ್ಸ್ ಆಸ್ಪತ್ರೆಯಲ್ಲಿ ಸಿಸೇರಿಯನ್ ಹೆರಿಗೆಯಾಗಿತ್ತು. ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಜ.5 ಸಾವನ್ನಪ್ಪಿದ್ದಾರೆ. ಸದ್ಯ ವೆಂಟಿಲೇಟರ್‌ನಲ್ಲಿ ಶಿಶುವಿಗೆ ಚಿಕಿತ್ಸೆ ಮುಂದುವರೆದಿದೆ. ನಾಲ್ಕನೇ ಮಗುವಿಗೆ ಜನ್ಮ ನೀಡಿದ್ದ ತಾಯಿ ಸರಸ್ವತಿ ಸಾವಿನಿಂದ ಕುಟುಂಬಸ್ಥರು ಕಂಗಾಲಾಗಿದ್ದಾರೆ.
ಮಗು ಸಾವನ್ನಪ್ಪಿದ ಎರಡು ಗಂಟೆಗಳ ಬಳಿಕ ತಾಯಿ ಸಾವನ್ನಪ್ಪಿದ್ದಾಳೆ. ಬಾಣಂತಿ ಹಾಗೂ ಮಗುವಿನ ಸಾವಿನಿಂದ ಕುಟುಂಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಕಳೆದ ನಾಲ್ಕು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದ 11ನೇ ಬಾಣಂತಿ ಸಾವು ಇದಾಗಿದೆ. ಬಾಣಂತಿ ಸಾವಿಗೆ ಅಧಿಕ ರಕ್ತದೊತ್ತಡ ಹಾಗೂ ಆರೋಗ್ಯದಲ್ಲಾದ ಏರುಪೇರು ಕಾರಣ ಎಂದು ವೈದ್ಯರು ತಿಳಿಸಿದ್ದಾರೆ.
ಡಿ.27 ರಂದು ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಸಿಸೇರಿಯನ್ ಹೆರಿಗೆಯಾಗಿತ್ತು. ಇಂದು (ಜ.01) ಫಲಕಾರಿಯಾಗದೇ ತಾಯಿ ಹಾಗೂ ಮಗು ಇಬ್ಬರು ಸಾವನ್ನಪ್ಪಿದ್ದಾರೆ. ಸಿಸೇರಿಯನ್ ಹೆರಿಗೆ ಬಳಿಕ ರಕ್ತಸ್ರಾವ, ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಬಾಣಂತಿ ಆರೋಗ್ಯದಲ್ಲಿ ಏರುಪೇರಾಗಿ ಸಾವನ್ನಪ್ಪಿದ್ದಾಳೆ. ಜೊತೆಗೆ ಹುಟ್ಟಿದಾಗಿನಿಂದಲೂ ಇನ್ಫೆಕ್ಷನ್‌ಗೆ ಒಳಗಾಗಿದ್ದ ಶಿಶು ಕೂಡ ಕೊನೆಯುಸಿರೆಳೆದಿದೆ.ಇದನ್ನೂ ಓದಿ: ಹೊಸ ವರ್ಷದ ಆರಂಭದ ತಿಂಗಳಲ್ಲೇ ಬಸ್ ಟಿಕೆಟ್ ದರ ಏರಿಕೆಯಾಗುತ್ತಾ?
ರಾಯಚೂರು: ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವು ಮುಂದುವರೆದಿದ್ದು, ಇದೀಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿರುವುದು (Maternal Death) ಬೆಳಕಿಗೆ ಬಂದಿದೆ. ಈ ಪೈಕಿ ಮೂರು ತಿಂಗಳಲ್ಲಿ ಒಟ್ಟು 10 ಬಾಣಂತಿಯರು ಸಾವನ್ನಪ್ಪಿದ್ದಾರೆ.
ಕಳೆದ ಭಾನುವಾರ (ಡಿ.8) ಈಶ್ವರಿಗೆ ಮಟಮಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಹಜ ಹೆರಿಗೆಯಾಗಿತ್ತು. ಹೆರಿಗೆಯಾಗಿ ಮನೆಗೆ ತೆರಳಿದಾಗ ರಕ್ತಸ್ರಾವ, ಜ್ವರ ಹಾಗೂ ಆಯಾಸದಿಂದಾಗಿ ಮತ್ತೆ ಮಟಮಾರಿ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ಆದರೆ, ಅಲ್ಲಿನ ಸಿಬ್ಬಂದಿ ನಿರ್ಲಕ್ಷ್ಯ ಮಾಡಿದ್ದ ಹಿನ್ನೆಲೆ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಶುಕ್ರವಾರ (ಡಿ.13) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಸದ್ಯ ಮೃತಳ ಕುಟುಂಬಸ್ಥರು ಮಾನ್ವಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಮುಂದಾಗಿದ್ದು, ರಿಮ್ಸ್ (RIMS) ಆಸ್ಪತ್ರೆಗೆ ರವಾನಿಸುವ ಮುನ್ನ ಮಟಮಾರಿ ಆರೋಗ್ಯ ಕೇಂದ್ರದಲ್ಲಿ ವೈದ್ಯಕೀಯ ಸಿಬ್ಬಂದಿ ನಿರ್ಲಕ್ಯ ಮಾಡಿದ್ದಾರೆ. ಸರಿಯಾಗಿ ಸ್ಪಂದಿಸದ ಕಾರಣ ಸಾವನ್ನಪ್ಪಿರುವುದಾಗಿ ಆರೋಪಿಸಿದ್ದಾರೆ.
ರಾಯಚೂರು: ಬೀದಿ ನಾಯಿಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಬಿದ್ದು ತಲೆಗೆ ಪೆಟ್ಟಾದ ಪರಿಣಾಮ ಯುವತಿಯೊಬ್ಬಳು ಕೋಮಾ ಸ್ಥಿತಿಗೆ ತಲುಪಿರುವ ಘಟನೆ ಜಿಲ್ಲೆಯ ಮಡ್ಡಿಪೇಟೆಯಲ್ಲಿ (Maddipete) ನಡೆದಿದೆ. ಯುವತಿಯನ್ನು 20 ವರ್ಷದ ಮಹಾದೇವಿ ಎಂದು ಗುರುತಿಸಲಾಗಿದೆ.
ಇಂದು (ಡಿ.11) ಬೆಳಿಗ್ಗೆ ಯುವತಿ ದೇವಾಲಯಕ್ಕೆ ಹೊರಟಿದ್ದ ವೇಳೆ ನಾಯಿ ದಾಳಿ ನಡೆಸಿದೆ. ನಾಯಿಯಿಂದ ತಪ್ಪಿಸಿಕೊಳ್ಳಲು ಹೋಗಿ ಕೆಳಗೆ ಬಿದ್ದ ಪರಿಣಾಮ ತಲೆಗೆ ಬಲವಾದ ಪೆಟ್ಟಾಗಿದೆ. ಕೆಳಗೆ ಬಿದ್ದ ಯುವತಿಯನ್ನು ನಾಯಿಗಳು ಎಳೆದಾಡಿವೆ. ಯುವತಿಯನ್ನು ರಾಯಚೂರಿನ ರಿಮ್ಸ್ (RIMS) ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾಳೆ.ಇದನ್ನೂ ಓದಿ: ಸೋಮನಹಳ್ಳಿಯ ಕಾಫಿಡೇ ಬಳಿಯೇ ಎಸ್‌ಎಂ ಕೃಷ್ಣ ಅಂತ್ಯಸಂಸ್ಕಾರ ಯಾಕೆ?
ತಲೆಗೆ ಪೆಟ್ಟು ಬಿದ್ದಿದ್ದರಿಂದ ರಕ್ತಹೆಪ್ಪುಗಟ್ಟಿದ್ದು, ಯುವತಿ ಕೋಮಾ ಸ್ಥಿತಿಗೆ ಹೋಗಿದ್ದಾಳೆ. ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇರುವುದರಿಂದ ಬಡ ಕುಟುಂಬ ದಿಕ್ಕು ಕಾಣದಂತಾಗಿದೆ.
ಘಟನೆ ಕುರಿತು ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕೆ ಪ್ರತಿಕ್ರಿಯಿಸಿದ್ದು, ಯುವತಿಯ ಚಿಕಿತ್ಸೆ ಬಗ್ಗೆ ವೈದ್ಯರ ಬಳಿ ಮಾಹಿತಿ ಪಡೆದಿದ್ದೇನೆ. ಈಗಾಗಲೇ ಟೆಂಡರ್ ಕರೆದು ಬೀದಿ ನಾಯಿ ಹಿಡಿಯಲು ಏಜೆನ್ಸಿಗೆ ಒಪ್ಪಿಸಲಾಗಿದೆ. ಇನ್ನೂ ಹೆಚ್ಚಿನ ಏಜೆನ್ಸಿಗಳಿಗೆ ಗುತ್ತಿಗೆ ನೀಡಿ ನಾಯಿಗಳನ್ನ ಹಿಡಿಯುತ್ತೇವೆ. ಬೀದಿನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆಯನ್ನು ಮಾಡಿಸಲಾಗುತ್ತಿದೆ. ಈಗಾಗಲೇ ಹಿಡಿದು ಬಿಟ್ಟಿರುವ ನಾಯಿಗಳು ಇನ್ನೊಂದೆಡೆ ಸೇರಿಕೊಂಡಿರುವ ಸಾಧ್ಯತೆಯಿದೆ. ಕೂಡಲೇ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.ಇದನ್ನೂ ಓದಿ: ಯಾರನ್ನೂ ದ್ವೇಷಿಸಲಿಲ್ಲ – ಎಸ್.ಎಂ ಕೃಷ್ಣ ಅಗಲಿಕೆಯ ಕುರಿತು ನೋವು ಹಂಚಿಕೊಂಡ ನಟಿ ರಮ್ಯಾ
ರಾಯಚೂರು: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣದ ಬಳಿಕ ರಾಯಚೂರಿನಲ್ಲಿ (Raichuru) ಬಾಣಂತಿಯರ ಸಾವು ಪ್ರಕರಣ ತಡವಾಗಿ ಬೆಳಕಿಗೆ ಬರುತ್ತಿದೆ.
ರಾಯಚೂರಿನ ಸಿಂಧನೂರು (Sindhanuru) ತಾಲೂಕಾಸ್ಪತ್ರೆಯಲ್ಲಿ ಅಕ್ಟೋಬರ್ ತಿಂಗಳಲ್ಲಿ ನಾಲ್ವರು ಬಾಣಂತಿಯರು ಸಾವನ್ನಪ್ಪಿದ್ದಾರೆ. ಮೃತ ಬಾಣಂತಿಯರನ್ನು ಚಂದ್ರಕಲಾ(26) , ರೇಣುಕಮ್ಮ(32), ಮೌಸಮಿ ಮಂಡಲ್(22), ಚನ್ನಮ್ಮ ಗುರುತಿಸಲಾಗಿದೆ.ಇದನ್ನೂ ಓದಿ: ಎಸ್.ಎಂ.ಕೃಷ್ಣ ನಿಧನ: ಪ್ರಧಾನಿ ಮೋದಿ ಶೋಕ ಸಂದೇಶ
ಅಕ್ಟೋಬರ್ ತಿಂಗಳಲ್ಲಿ ನಡೆದ 300 ಹೆರಿಗೆಗಳಲ್ಲಿ 7 ಜನರ ಸ್ಥಿತಿ ಗಂಭೀರವಾಗಿತ್ತು. ಆ ಪೈಕಿ 4 ಜನ ಸಾವನ್ನಪ್ಪಿದ್ದಾರೆ. ಅ.21 ರಂದು ಚನ್ನಮ್ಮ ಅವರಿಗೆ ಸಿಜೇರಿಯನ್ ಮೂಲಕ ಹೆರಿಗೆಯಾಗಿತ್ತು. ಅದಾದ 9 ದಿನಗಳ ಬಳಿಕ ಸಾವನ್ನಪ್ಪಿದ್ದರು. ಅ.22 ರಂದು ಆರ್‌ಎಚ್ ಕ್ಯಾಂಪ್-3ರಲ್ಲಿ ಮೌಸಮಿ ಮಂಡಲ್ ಹೆರಿಗೆಯಾಗಿತ್ತು. ಬಳಿಕ ಮಾರನೇ ದಿನ ಸಾವನ್ನಪ್ಪಿದ್ದರು. ಅ.31 ರಂದು ರೇಣುಕಮ್ಮ ಹೆರಿಗೆಯಾಗಿತ್ತು. ಮಾರನೇ ದಿನ ಸಾವನ್ನಪ್ಪಿದ್ದಾರೆ.
ಮೃತ ನಾಲ್ವರದ್ದೂ ಸಿಜೇರಿಯನ್ ಹೆರಿಗೆಯಾಗಿತ್ತು. ಎಲ್ಲಾ ಬಾಣಂತಿಯರನ್ನು ಹೆರಿಗೆ ಬಳಿಕ ರಿಮ್ಸ್ (RIMS) ಆಸ್ಪತ್ರೆಗೆ ರವಾನಿಸಲಾಗಿತ್ತು. ರವಾನಿಸುವಾಗ ಓರ್ವ ಬಾಣಂತಿ ಮಾರ್ಗ ಮಧ್ಯೆ ಸಾವನ್ನಪ್ಪಿದರು, ಮೂವರು ರಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.
ಬಾಣಂತಿಯರ ಕುಟುಂಬಸ್ಥರು, ವೈದ್ಯರು ಸಮಯಕ್ಕೆ ಸರಿಯಾಗಿ ಹೆರಿಗೆ ಮಾಡಲಿಲ್ಲ. ವೈದ್ಯರ ನಿರ್ಲಕ್ಷ್ಯ ಸಾವಿಗೆ ಕಾರಣ ಎಂದು ಆರೋಪಿಸಿದ್ದಾರೆ. ಸಾವಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೃತ ಬಾಣಂತಿಯರ ಕುಟುಂಬಕ್ಕೆ ಪರಿಹಾರ ಒದಗಿಸಿಕೊಡಬೇಕು. ಇಲ್ಲದಿದ್ದರೆ ಚಳಿಗಾಲ ಅಧಿವೇಶನ ವೇಳೆ ಶಿಶುಗಳೊಂದಿಗೆ ಪ್ರತಿಭಟನೆ ಮಾಡುತ್ತೇವೆ ಎಂದ ಎಚ್ಚರಿಕೆ ನೀಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ನಿತೀಶ್ ಕೆ ಮಾತನಾಡಿ, ಬೇರೆ ಬೇರೆ ವೈದ್ಯಕೀಯ ಕಾರಣಕ್ಕೆ ಬಾಣಂತಿಯರ ಸಾವಾಗಿದೆ. ಆರ್‌ಎಲ್ ಐವಿ ಫ್ಲೂಯಿಡ್‌ನಿಂದಲೇ ಸಾವಾಗಿದೆಯಾ? ಇಲ್ಲವಾ? ಎಂದು ಇನ್ನೊಂದು ವಾರದಲ್ಲಿ ಮಾಹಿತಿ ಸಿಗುತ್ತದೆ. ವರದಿ ಬಂದ ಮೇಲೆ ಸರ್ಕಾರದ ಹಂತದಲ್ಲಿ ಸೂಕ್ತ ವ್ಯವಸ್ಥೆ ಮಾಡುತ್ತೇವೆ. ಸಿಂಧನೂರು ತಾಲೂಕು ಆಸ್ಪತ್ರೆಯಲ್ಲಿ ತಿಂಗಳಿಗೆ 300ಕ್ಕೂ ಹೆಚ್ಚು ಹೆರಿಗೆಯಾಗುತ್ತವೆ. ಅಕ್ಟೋಬರ್ ತಿಂಗಳಲ್ಲಿ ಈ ನಾಲ್ಕು ಪ್ರಕರಣ ನಡೆದಿವೆ. ನವೆಂಬರ್ ತಿಂಗಳಲ್ಲಿ ಆರ್‌ಎಲ್ ಪ್ರಕರಣ ಬೆಳಕಿಗೆ ಬಂದಿದೆ. ಆದರೂ ಇಲ್ಲಿನ 0113 ಬ್ಯಾಚ್‌ನ ಆರ್‌ಎಲ್ ಐವಿ ಫ್ಲೂಯಿಡ್ ಅನ್ನು ಎರಡು ಕಡೆ ಟೆಸ್ಟ್ಗೆ ಕಳುಹಿಸಿದ್ದೇವೆ. ಒಂದು ವಾರದಲ್ಲಿ ವರದಿ ಬಂದ ಮೇಲೆ ಕಾರಣ ಗೊತ್ತಾಗುತ್ತದೆ. ನಾಲ್ಕು ಜನರಿಗೂ ಪಶ್ಚಿಮ ಬಂಗಾಳದ ಕಂಪನಿಯ 0113 ಬ್ಯಾZ ನ ಆರ್‌ಎಲ್ ಕೊಡಲಾಗಿತ್ತು, ನಂತರ ಬಳಕೆ ನಿಲ್ಲಿಸಲಾಗಿದೆ ಎಂದು ಪ್ರತಿಕ್ರಿಯಿಸಿದರು.ಇದನ್ನೂ ಓದಿ: ಸಂಭಲ್ ಬಳಿಕ ಮತ್ತೊಂದು ಮಸೀದಿ ವಿವಾದ – ಭಾರತದಲ್ಲಿ ಮಸೀದಿ ಮಂದಿರ ಕಗ್ಗಂಟು ಎಲ್ಲೆಲ್ಲಿ ಏನು?
ರಾಯಚೂರು: ಬಿಸಿಲನಾಡು ರಾಯಚೂರಿನಲ್ಲಿ (Raichur) ದಿನೇ ದಿನೇ ತಾಪಮಾನ ಹೆಚ್ಚಳವಾಗುತ್ತಲೇ ಇದೆ. ತಾಪಮಾನ ಹೆಚ್ಚಳದಿಂದ ಜನ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಹೀಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ (RIMS Hospital) ಹೀಟ್ ಸ್ಟ್ರೋಕ್ ಮ್ಯಾನೇಜ್ಮೆಂಟ್ ವಾರ್ಡ್ ಅನ್ನು ತೆರೆಯಲಾಗಿದೆ. ಬಿಸಿಲಿನ ತಾಪದಿಂದ ಉಂಟಾದ ಕಾಯಿಲೆಗಳ ಚಿಕಿತ್ಸೆಗೆ ರಿಮ್ಸ್ ವೈದ್ಯರು ವಿಶೇಷ ವಾರ್ಡ್ ಆರಂಭಿಸಿದ್ದಾರೆ.
ಇಡೀ ರಾಜ್ಯದಲ್ಲಿ ಈ ಬಾರಿಯ ಬೇಸಿಗೆ (Summer) ಜನರನ್ನ ನಿತ್ರಾಣ ಮಾಡಿದೆ. ಅದರಲ್ಲೂ ಬಿಸಿಲನಾಡು ರಾಯಚೂರಿನಲ್ಲಿ ದಾಖಲೆಯ ತಾಪಮಾನ ಜನರನ್ನ ಮನೆಯಿಂದ ಹೊರ ಬರದಂತೆ ಮಾಡಿದೆ. ಹೀಗಾಗಿ ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ರಾಯಚೂರಿನ ರಿಮ್ಸ್ ವೈದ್ಯಕೀಯ ವಿಜ್ಞಾನಗಳ ಬೋಧಕ ಆಸ್ಪತ್ರೆಯಲ್ಲಿ ಅತಿಯಾದ ಶಾಖ (Heat Wave) ಆರೋಗ್ಯ ಸಮಸ್ಯೆಗಳ ವಿಶೇಷ ವಾರ್ಡನ್ನ ತೆರೆಯಲಾಗಿದೆ. ಸದ್ಯ 8 ಹಾಸಿಗೆಗಳ ವಾರ್ಡನ್ನ ಅಗತ್ಯಕ್ಕೆ ತಕ್ಕಂತೆ 20 ಬೆಡ್‌ವರೆಗೆ ವಿಸ್ತರಿಸಲು ರಿಮ್ಸ್ ಆಡಳಿತ ಮಂಡಳಿ ಮುಂದಾಗಿದೆ.
ವಿಶೇಷ ವಾರ್ಡ್‌ನಲ್ಲಿ ಅಗತ್ಯ ಫ್ಲೂಯಿಡ್ಸ್, ಡಿಫಿಬ್ರಲೇಟರ್ ಸೇರಿದಂತೆ ಅವಶ್ಯಕ ಪರಿಕರಗಳು, ಔಷಧಿ ವ್ಯವಸ್ಥೆ ಮಾಡಲಾಗಿದೆ. ಮಳೆ ಅಭಾವದಿಂದ ಈ ಬಾರಿ ರಣ ಬೇಸಿಗೆ ಇರುವುದರಿಂದ ಮೊದಲ ಬಾರಿಗೆ ಹೀಟ್ ಸ್ಟ್ರೋಕ್ ಮ್ಯಾನೇಜಮೆಂಟ್ ವಾರ್ಡ್‌ನ್ನ ತೆರೆಯಲಾಗಿದೆ. ಬೇಸಿಗೆಯ ಬೇಗೆಯಿಂದ ದೇಹದಲ್ಲಿ ಲವಣಾಂಶಗಳು ಏರುಪೇರಾದರೆ ಕಿಡ್ನಿ, ಹೃದಯ ಸಂಬಂಧಿ ತೊಂದರೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಹಿನ್ನೆಲೆ ವಿಶೇಷ ವಾರ್ಡ್ ತೆರೆಯಲಾಗಿದೆ.
ಇನ್ನೂ ರಿಮ್ಸ್ ಆಸ್ಪತ್ರೆಯ ವಿಶೇಷ ವಾರ್ಡ್‌ಗೆ ಈವರೆಗೆ ಯಾವುದೇ ರೋಗಿಗಳು ದಾಖಲಾಗದಿದ್ದರು, ಬಿಸಿಲಿನ ಅಬ್ಬರಕ್ಕೆ ಉರಿ ಮೂತ್ರ ತೊಂದರೆ, ಕಿಡ್ನಿ ಸಮಸ್ಯೆ, ಕಿಡ್ನಿಯಲ್ಲಿ ಕಲ್ಲು, ಡಿಹೈಡ್ರೇಷನ್, ಹೆಚ್ಚು ಸುಸ್ತಾಗುವುದು ಸೇರಿದಂತೆ ನಾನಾ ಸಮಸ್ಯೆಗಳಿಂದ ಹಲವಾರು ಜನ ಬಳಲುತ್ತಿದ್ದು. ಚಿಕ್ಕಮಕ್ಕಳಲ್ಲಿ ಹೆಚ್ಚಾಗಿ ನಿರ್ಜಲೀಕರಣ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಅನಾರೋಗ್ಯ ಪೀಡಿತರು ಎಡತಾಕುತ್ತಿದ್ದಾರೆ. ಆದ್ದರಿಂದ ಸಾಧ್ಯವಾದಷ್ಟು ಬಿಸಿಲಿನಲ್ಲಿ ಓಡಾಟ ಕಡಿಮೆ ಮಾಡುವಂತೆ, ಶ್ವಾಸಕೋಶ ಹಾಗೂ ಹೃದಯ ಸಂಬಂಧಿ ಕಾಯಿಲೆ ಇರುವವರು ಬಿಸಿಲಿನಲ್ಲಿ ಹೆಚ್ಚು ಓಡಾಡುವುದು ಅಥವಾ ಕೆಲಸ ಮಾಡದಂತೆ ವೈದ್ಯರು ಸಲಹೆ ನೀಡಿದ್ದಾರೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಮುಚ್ಚುಳ ಕ್ಯಾಂಪ್‌ನ ಬಾಲಕ ಶಿವಕುಮಾರ್ (13) ಶಾಲೆಯಲ್ಲಿ ಆಟವಾಡುವಾಗ ಸೂಚನಾ ಫಲಕದ ಗುಂಡುಸೂಜಿಯನ್ನು (Pin) ಆಕಸ್ಮಿಕವಾಗಿ ನುಂಗಿದ್ದ. ಗುಂಡುಸೂಜಿ ಬಲ ಶ್ವಾಸಕೋಶದೊಳಗಡೆ ಸೇರಿತ್ತು. ಇದೀಗ ಬ್ರಾಂಕೋಸ್ಕೋಪ್ ಮೂಲಕ ಗುಂಡುಸೂಜಿಯನ್ನು ಹೊರತೆಗೆಯುವಲ್ಲಿ ರಿಮ್ಸ್ (RIMS) ವೈದ್ಯರು (Doctor) ಯಶಸ್ವಿಯಾಗಿದ್ದಾರೆ.
ಚಿಕಿತ್ಸೆಗಾಗಿ ಬಾಲಕನನ್ನು ರಿಮ್ಸ್ ಬೋಧಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದಾಖಲಾದ ಬಾಲಕನ ಶ್ವಾಸಕೋಶಕ್ಕೆ ಕ್ಷ-ಕಿರಣವನ್ನು ಮಾಡಿಸಿದಾಗ ಬಲ ಶ್ವಾಸಕೋಶದಲ್ಲಿ ಸೂಚನಾ ಫಲಕದ ಗುಂಡುಸೂಜಿ ಇರುವುದು ಖಚಿತಪಡಿಸಿಕೊಂಡು ಬ್ರಾಂಕೋಸ್ಕೋಪ್ ಮೂಲಕ ಗುಂಡು ಸೂಜಿಯನ್ನು ಹೊರತೆಗೆಯಲಾಗಿದ್ದು, ಅಪರೂಪದ ಪ್ರಕರಣದಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಶಸ್ತ್ರಚಿಕಿತ್ಸೆ ಯಶಸ್ವಿಗೊಳಿಸಿದ್ದಕ್ಕೆ ವೈದ್ಯರಿಗೆ ಬಾಲಕನ ಕುಟುಂಬಸ್ಥರು ಕೃತಜ್ಞತೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಭೋಪಾಲ್ ಅನಿಲ ದುರಂತಕ್ಕೆ 39 ವರ್ಷ – ಇನ್ನೂ ಮಾಸಿಲ್ಲ 3,000ಕ್ಕೂ ಹೆಚ್ಚು ಜನರನ್ನ ಬಲಿ ಪಡೆದ ಕಹಿ ನೆನಪು
ಶಸ್ತ್ರಚಿಕಿತ್ಸೆ ತಂಡದಲ್ಲಿ ಇಎನ್‌ಟಿ ನುರಿತ ತಜ್ಞ ವೈದ್ಯ ಡಾ. ಅರವಿಂದ್ ಸಂಗವಿ, ನುರಿತ ಅರವಳಿಕೆ ತಜ್ಞ ವೈದ್ಯ ಡಾ.ಕಿರಣ್ ನಾಯಕ್, ಡಾ.ಮಲ್ಲಿಕಾರ್ಜುನ್ ಕೆ ಪಾಟೀಲ್, ಡಾ. ಸಿಂಧು ಪಿಜಿ, ಡಾ. ಇಂದುಮಣಿ, ನರ್ಸಿಂಗ್ ಅಧಿಕಾರಿ ಅಮರೇಶ್ ಸಕ್ರಿ, ಓಟಿ ತಂತ್ರಜ್ಞರಾದ ಲಿಂಗರಾಜ್, ಸುಮನ್ ಕ್ಲ್ಯಾರಿ, ನಾರಾಯಣ, ಶಂಕರ ಸೇರಿದಂತೆ ಇನ್ನಿತರರು ಇದ್ದರು. ಇದನ್ನೂ ಓದಿ: ಮಾತಾ ಅಲ್ಲದೇ ಚಾಮುಂಡೇಶ್ವರಿ ಆಸ್ಪತ್ರೆಯಲ್ಲೂ ನಡೀತಿತ್ತು ಭ್ರೂಣ ದಂಧೆ- ಹೆಡ್‌ನರ್ಸ್ ಉಷಾರಾಣಿ ಬಂಧನ
ರಾಯಚೂರು: ಕಳೆದ ಕೆಲ ತಿಂಗಳುಗಳಿಂದ ರಾಯಚೂರಿನ (Raichur) ಪ್ರತಿಷ್ಠಿತ ರಿಮ್ಸ್ (RIMS) ವೈದ್ಯಕೀಯ ವಿಜ್ಞಾನಗಳ ಬೋಧಕ ಆಸ್ಪತ್ರೆಯಲ್ಲಿ ಮಂಗಗಳ (Monkey) ಕಾಟ ಜೋರಾಗಿದೆ. ನಾಯಿ, ಹಂದಿಗಳ ಹಾವಳಿಗೆ ಹೇಗೋ ಬ್ರೇಕ್ ಹಾಕಿರುವ ರಿಮ್ಸ್ ಸಿಬ್ಬಂದಿ ಮಂಗಗಳ ಹಾವಳಿ ತಡೆಯಲು ಮಾತ್ರ ಸಾಧ್ಯವಾಗಿಲ್ಲ.
ಆಹಾರ ಅರಸಿ ಆಸ್ಪತ್ರೆಗೆ ನುಗ್ಗುವ ಕೋತಿಗಳು ಡಸ್ಟ್ ಬಿನ್‌ನ ತ್ಯಾಜ್ಯ ಚಲ್ಲಾಪಿಲ್ಲಿ ಮಾಡಿ, ಎಲ್ಲೆಂದರಲ್ಲಿ ಓಡಾಡಿ ರೋಗಿಗಳನ್ನು ಹೆದರಿಸುತ್ತಿವೆ. ನವಜಾತ ಶಿಶುಗಳು, ಬಾಣಂತಿಯರು ಇರೋ ವಾರ್ಡ್‌ಗಳ ಬಳಿಯೂ ಕೋತಿಗಳು ನುಗ್ಗುತ್ತಿರುವುದರಿಂದ ಆತಂಕ ಹೆಚ್ಚಾಗಿದೆ. ವಾರ್ಡ್‌ಗಳಿಗೆ ನುಗ್ಗಿ ಜನರನ್ನು ಹೆದರಿಸಿ ಊಟ, ತಿಂಡಿ ಕಿತ್ತಿಕೊಳ್ಳುವುದು ಸಾಮಾನ್ಯವಾಗಿದೆ. ಇದನ್ನೂ ಓದಿ: ಊರಿಗೆ ಹೋಗಲು ನಿಲ್ದಾಣದಲ್ಲಿ ಕಾದು ಸುಸ್ತಾಗಿ ತಾನೇ ಸರ್ಕಾರಿ ಬಸ್ ಚಲಾಯಿಸಿದ ಭೂಪ!
ಅರಣ್ಯ ಇಲಾಖೆಗೆ ಮಾಹಿತಿ ನೀಡಿದರೂ ಪ್ರಯೋಜನವಾಗಿಲ್ಲ. ನಗರಸಭೆ ಸಹ ಮಂಗಗಳನ್ನು ಹಿಡಿಯುವ ಕೆಲಸಕ್ಕೆ ಮುಂದಾಗಿಲ್ಲ. ಹೀಗಾಗಿ ಪಟಾಕಿ ಹೊಡೆದು ಸಾಧ್ಯವಾದಷ್ಟು ಮಂಗಗಳನ್ನು ಓಡಿಸುತ್ತಿದ್ದೇವೆ, ಆದರೂ ಬರುತ್ತಲೇ ಇವೆ ಎಂದು ರಿಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ರಾಂಚಿ: ಕಳ್ಳನೊಬ್ಬ (Thief) ಮಹಿಳೆಯ ಕತ್ತಿನಿಂದ ಚಿನ್ನದ ಸರ (Gold Chain) ಕದ್ದು ಪರಾರಿಯಾಗುವಾಗ ಬೆನ್ನಟ್ಟಿದ ಪೊಲೀಸರಿಂದ ತಪ್ಪಿಸಿಕೊಳ್ಳಲು ಸರ ನುಂಗಿ ಅದು ಗಂಟಲಲ್ಲಿ ಸಿಲುಕಿ ನರಳಾಡಿದ ಘಟನೆ ಜಾರ್ಖಂಡ್‌ನ (Jharkhand) ರಾಂಚಿಯಲ್ಲಿ (Ranchi) ನಡೆದಿದೆ.
ಡೊರಾಂಡಾ ಪೊಲೀಸ್ ಠಾಣಾ ವ್ಯಾಪ್ತಿಯ ದುಬಾದಿ ಸೇತುವೆ ಬಳಿ ಸಲ್ಮಾನ್ ಮತ್ತು ಜಾಫರ್ ಎಂಬ ಇಬ್ಬರು ಕಳ್ಳರು ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡಿದ್ದಾರೆ. ಸರ ಕಸಿದುಕೊಂಡ ನಂತರ ಇಬ್ಬರು ದ್ವಿಚಕ್ರವಾಹನದಲ್ಲಿ ಪರಾರಿಯಾಗಿದ್ದಾರೆ. ಈ ವೇಳೆ ಪೊಲೀಸರು ಕಳ್ಳರನ್ನು ಬೆನ್ನಟ್ಟಿದ್ದಾರೆ. ಈ ವೇಳೆ ಸಲ್ಮಾನ್ ಸರವನ್ನು ನುಂಗಿದ್ದಾನೆ. ಇದನ್ನು ಪೊಲೀಸರು ನೋಡಿದ್ದು ನುಂಗದಂತೆ ಕೂಗಿ ಹೇಳಿದ್ದಾರೆ. ಇದನ್ನೂ ಓದಿ: ಅನ್ಯಕೋಮಿನ ಯುವತಿಯನ್ನು ಬೈಕ್‌ನಲ್ಲಿ ಡ್ರಾಪ್ ಮಾಡಿದ್ದಕ್ಕೆ ಹಲ್ಲೆ
ಬಳಿಕ ಸ್ವಲ್ಪ ಹೊತ್ತಿನಲ್ಲೇ ಪೊಲೀಸರು ಸಲ್ಮಾನ್ ಮತ್ತು ಜಾಫರ್‌ನನ್ನು ಬಂಧಿಸಿದ್ದಾರೆ. ಈ ವೇಳೆ ಗಂಟಲಿನ ಕೆಳಭಾಗದಲ್ಲಿ ಚೈನ್ ಸಿಲುಕಿಕೊಂಡು ಎದೆ ನೋವಿನಿಂದ ಸಲ್ಮಾನ್ ನರಳಾಡಿದ್ದಾನೆ. ತಕ್ಷಣವೇ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಎಕ್ಸ್ ರೇ ಮೂಲಕ ಆರೋಪಿಯ ಎದೆಯಲ್ಲಿ ಸುರುಳಿಯಾಗಿ ಸಿಲುಕಿದ್ದ ಚಿನ್ನದ ಸರವನ್ನು ಪತ್ತೆ ಹಚ್ಚಿದ ವೈದ್ಯರು, ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ. ಸರವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ ಆರೋಪಿಗೆ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ರೈಲಿನ ರೇಕ್ ಹರಿದು ಗುತ್ತಿಗೆ ಕಾರ್ಮಿಕ ಸಾವು
ರಾಯಚೂರು: ಕೋವಿಡ್ (COVID 19) ನಾಲ್ಕನೇ ಅಲೆ ಆತಂಕ ಹಿನ್ನೆಲೆ ರಾಯಚೂರಿನಲ್ಲಿ ರಿಮ್ಸ್ ಆಸ್ಪತ್ರೆ ಅಗತ್ಯ ಸಿದ್ಧತೆಗಳನ್ನ ಮಾಡುಕೊಳ್ಳುತ್ತಿದೆ. ಆಡಳಿತ ಅಧಿಕಾರಿಗಳು ಈಗಾಗಲೇ ಮಾಕ್ ಡ್ರಿಲ್ ನಡೆಸಿ ಸಿಬ್ಬಂದಿಯನ್ನ ಚುರುಕುಗೊಳಿಸಿದ್ದಾರೆ. ಆದರೆ ಪ್ರತಿಷ್ಠಿತ ರಿಮ್ಸ್ (RIMS Hospital) ಹಾಗೂ ಓಪೆಕ್ ಆಸ್ಪತ್ರೆ (Opec Rajivgandhi Memorial Hospital) ಗೆ ಬರಲು ಸಾಮಾನ್ಯ ರೋಗಿಗಳು ಹೆದರುತ್ತಿದ್ದಾರೆ.
ಇಡೀ ರಾಜ್ಯದಲ್ಲಿ ವೈದ್ಯಕೀಯ ವಿಜ್ಞಾನಗಳ ಬೋಧಕ ಆಸ್ಪತ್ರೆಗಳಲ್ಲಿ ಟಾಪ್ 10 ನಲ್ಲಿರೋ ರಾಯಚೂರಿನ ರಿಮ್ಸ್ ಆಸ್ಪತ್ರೆ ಅಂದ್ರೆ ಇತ್ತೀಚಿಗೆ ರೋಗಿಗಳಿಗೆ ಭಯ ಹುಟ್ಟುತ್ತಿದೆ. ನಮ್ಮಲ್ಲಿ ಎಲ್ಲಾ ಸೌಲಭ್ಯಗಳಿವೆ, ಕೋವಿಡ್ ನಾಲ್ಕನೇ ಅಲೆ ಎದುರಿಸಲು ಸಹ ಸನ್ನದ್ದರಾಗಿದ್ದೇವೆ ಅಂತ ಇಲ್ಲಿನ ಆಡಳಿತ ಮಂಡಳಿ ಹೇಳಿಕೊಳ್ಳುತ್ತಿದೆ. ಆದರೆ ಇಲ್ಲಿಗೆ ಬರುವ ರೋಗಿಗಳಿಗೆ ನಾಯಿ, ಕೋತಿ, ಹಂದಿಗಳ ಕಾಟ ವಿಪರೀತವಾಗಿದೆ. ಇಲ್ಲಿನ ಸಮಸ್ಯೆ ಕುರಿತು ನಿಮ್ಮ ಪಬ್ಲಿಕ್ ಟಿವಿ ಸಹ ಈಗಾಗಲೇ ವರದಿಯನ್ನೂ ಮಾಡಿತ್ತು. ಆದ್ರೆ ಓಪೆಕ್ ಹಾಗೂ ರಿಮ್ಸ್ ಆಡಳಿತ ಮಂಡಳಿ ಮಾತ್ರ ಎಚ್ಚೆತ್ತುಕೊಂಡಿಲ್ಲ. ಹಂದಿಗಳಂತೂ ರಿಮ್ಸ್ ಆಸ್ಪತ್ರೆ ಆವರಣವನ್ನೇ ಆವಾಸಸ್ಥಾನ ಮಾಡಿಕೊಂಡಿವೆ. ಆಗಾಗ ಆಸ್ಪತ್ರೆ ವಾರ್ಡ್‍ಗಳಿಗೆ ವಿಸಿಟ್ ನೀಡುತ್ತವೆ.
ನಾಯಿ ಕೋತಿಗಳಂತು ನೇರವಾಗಿ ಆಸ್ಪತ್ರೆಗೆ ನುಗ್ಗಿ ರೋಗಿಗಳನ್ನ, ರೋಗಿಗಳ ಕಡೆಯವರನ್ನ ಹೆದರಿಸುತ್ತವೆ. ಇಲ್ಲಿ ನಾಯಿ ಕಚ್ಚಿದರೆ ಆರೋಗ್ಯವಾಗಿದ್ದವರೂ ಸಹ ಪುನಃ ಆಸ್ಪತ್ರೆಗೆ ದಾಖಲಾಗಬೇಕಾದ ಪರಸ್ಥಿತಿಯಿದೆ. ಚಿಕ್ಕಮಕ್ಕಳು, ನವಜಾತ ಶಿಶುಗಳ, ಬಾಣಂತಿಯರ ವಾರ್ಡ್‍ಗಳ ಬಳಿ ನಾಯಿ, ಕೋತಿಗಳು ಓಡಾಡುವುದರಿಂದ ಆತಂಕ ಹೆಚ್ಚಾಗಿದೆ. ಸಾರ್ವಜನಿಕರು ಎಷ್ಟೇ ಬಾರಿ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಇದನ್ನೂ ಓದಿ: ಪತ್ನಿ ಕಿರುಕುಳಕ್ಕೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ!
ಒಟ್ಟು 520 ಬೆಡ್‍ಗಳ ರಿಮ್ಸ್ ಆಸ್ಪತ್ರೆಗೆ ಪ್ರತಿನಿತ್ಯ ಜಿಲ್ಲೆ ಹೊರಜಿಲ್ಲೆ, ತೆಲಂಗಾಣ ಆಂಧ್ರಪ್ರದೇಶದ ಗಡಿಭಾಗದಿಂದ ಸಾವಿರಾರು ರೋಗಿಗಳು ಬರುತ್ತಾರೆ. ಆದರೆ ಈ ಆಸ್ಪತ್ರೆ ಸಮಸ್ಯೆಯೇ ಬೇರೆಯಾಗಿದೆ. ಇಲ್ಲಿನ ಆಡಳಿತ ಮಂಡಳಿ ಮಾತ್ರ ನಗರಸಭೆ, ಅರಣ್ಯ ಇಲಾಖೆಗೆ ಪತ್ರ ಬರೆದಿದ್ದೇವೆ, ಶಾಸಕರ ಗಮನಕ್ಕೂ ತಂದಿದ್ದೇವೆ ಅಂತಿದ್ದಾರೆ. ಆದ್ರೆ ಹಂದಿ, ನಾಯಿ, ಕೋತಿಗಳ ನಿಯಂತ್ರಣ ಮಾತ್ರ ಅಸಾಧ್ಯವಾಗಿದೆ.
ಈ ಆಸ್ಪತ್ರೆಯಲ್ಲಿನ ವಾಸ್ತವ ಚಿತ್ರೀಕರಣ ಮಾಡಲು ಮಾಧ್ಯಮದವರು ಇಲ್ಲಿನ ಅಧಿಕಾರಿಗಳ ಅನುಮತಿ ಪಡೆದು ಒಳಗೆ ಹೋಗಬೇಕು. ಆದರೆ ಹಂದಿ, ನಾಯಿ, ಕೋತಿಗಳ ಪ್ರವೇಶಕ್ಕೆ ಮಾತ್ರ ಯಾವ ಅನುಮತಿಯೂ ಇಲ್ಲಾ, ನಿಯಂತ್ರಣವೂ ಇಲ್ಲಾ. ಇದು ಇಲ್ಲಿನ ಅವ್ಯವಸ್ಥೆ ಹಿಡಿದ ಕನ್ನಡಿಯಾಗಿದೆ. ಈಗಲಾದ್ರೂ ಸಂಬಂಧಪಟ್ಟವರು ಎಚ್ಚೆತ್ತುಕೊಳ್ಳಬೇಕಿದೆ.
Live Tv
[brid partner=56869869 player=32851 video=960834 autoplay=true]