ರಾಯಚೂರು: ನಗರದ ಪ್ರತಿಷ್ಠಿತ ರಿಮ್ಸ್ (Rims Hospital Raichur) ವೈದ್ಯಕೀಯ ವಿಜ್ಞಾನಗಳ ಬೋಧಕ ಆಸ್ಪತ್ರೆಯಲ್ಲಿ ನಾಯಿ, ಹಂದಿಗಳ ಬಳಿಕ ಈಗ ಕೋತಿಗಳ ಕಾಟ ಶುರುವಾಗಿದೆ. ಆಸ್ಪತ್ರೆಗೆ ನುಗ್ಗುವ ಕೋತಿಗಳು ಡಸ್ಟ್ ಬಿನ್‍ನ ತ್ಯಾಜ್ಯ ಚೆಲ್ಲಾಪಿಲ್ಲಿ ಮಾಡಿ, ಎಲ್ಲೆಂದರಲ್ಲಿ ಓಡಾಡಿ ರೋಗಿಗಳನ್ನ ಹೆದರಿಸುತ್ತಿವೆ.
ನವಜಾತ ಶಿಶುಗಳು, ಬಾಣಂತಿಯರು ಇರೋ ವಾರ್ಡ್ ಗಳ ಬಳಿಯೂ ಕೋತಿಗಳು ನುಗ್ಗುತ್ತಿರುವುದರಿಂದ ಆತಂಕ ಹೆಚ್ಚಾಗಿದೆ. ವಾರ್ಡ್ ಗಳಿಗೆ ನುಗ್ಗಿ ಜನರನ್ನ ಹೆದರಿಸಿ ಊಟ, ತಿಂಡಿ ಕಿತ್ತಿಕೊಳ್ಳುವುದು ಸಾಮಾನ್ಯವಾಗಿದೆ. ಕೋತಿಗಳ ಕಾಟಕ್ಕೆ ಕಂಗೆಟ್ಟ ರೋಗಿಗಳು, ರೋಗಿಗಳ ಸಂಬಂಧಿಕರು ಆಸ್ಪತ್ರೆ ಆಡಳಿತ ಮಂಡಳಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ.
ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆಗೆ ಹಿಡಿದ ಕೈಗನ್ನಡಿಯಂತೆ ಪರಸ್ಥಿತಿ ಇದ್ದರೂ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿಲ್ಲ. ಕೆಲದಿನಗಳ ಹಿಂದೆ ನಾಯಿ, ಹಂದಿಗಳು ಆಸ್ಪತ್ರೆಯಲ್ಲಿ ನಿರ್ಭೀತಿಯಿಂದ ಓಡಾಡಿ ರೋಗಿಗಳನ್ನ ಹೆದರಿಸಿದ್ದವು ಈಗ ಕೋತಿಗಳ ಕಾಟ ಶುರುವಾಗಿದೆ. ಇದನ್ನೂ ಓದಿ: ಸಿನಿಮಾ ರೀತಿಯಲ್ಲೇ ಮನೆಗೆ ನುಗ್ಗಿದ 50 ಗೂಂಡಾಗಳು- ವೈದ್ಯೆ ಕಿಡ್ನ್ಯಾಪ್
Live Tv
[brid partner=56869869 player=32851 video=960834 autoplay=true]
ರಾಯಚೂರು: ನಗರದ ರಿಮ್ಸ್ (RIMS) ವೈದ್ಯಕೀಯ ವಿಜ್ಞಾನಗಳ ಬೋಧಕ ಆಸ್ಪತ್ರೆ ಈಗ ಬೀದಿನಾಯಿಗಳ ನೆಚ್ಚಿನ ತಾಣವಾಗಿದೆ.
ಆಸ್ಪತ್ರೆಯ ನಾಲ್ಕನೇ ಅಂತಸ್ತಿನವರೆಗೂ ಯಾರ ಭಯವಿಲ್ಲದೇ ನಾಯಿಗಳು ಓಡಾಡಿಕೊಂಡಿವೆ. ನವಜಾತ ಶಿಶು ಕೊಠಡಿ, ಬಾಣಂತಿಯರ ಲೇಬರ್ ರೂಂ ಬಳಿಯೇ ನಾಯಿಗಳು ಮಲಗುವುದರಿಂದ ಆಸ್ಪತ್ರೆಗೆ ಬರುವವರಲ್ಲಿ ಆತಂಕ ಹೆಚ್ಚಾಗಿದೆ. ರಾತ್ರಿಯಾದರೆ ರೋಗಿಗಳ ಹಾಸಿಗೆಯ ಮೇಲೆ ಬಂದು ನಾಯಿಗಳು ಮಲಗುತ್ತಿವೆ ಅಂತ ರೋಗಿಗಳ ಕಡೆಯವರು ಆರೋಪಿಸಿದ್ದಾರೆ.
ಶ್ವಾನಗಳು ನೇರವಾಗಿ ಆಸ್ಪತ್ರೆ ಒಳಗಡೆ ಬಂದು ಅಲ್ಲಲ್ಲಿ ಬೀಸಾಡಿರುವ ವಸ್ತುಗಳಲ್ಲಿ ಆಹಾರ ಹುಡುಕಾಟ ನಡೆಸುತ್ತವೆ. ಕೊನೆಗೆ ಅಲ್ಲಿಯೇ ಮಲಗುತ್ತಿವೆ. ಒಂದು ವೇಳೆ ನಾಯಿ ಕಚ್ಚಿದರೆ ಕೊಡಲು ಔಷಧಿಯ ಕೊರತೆಯೂ ಇದೆ. ಪರಿಸ್ಥಿತಿ ಹೀಗಿದ್ದರೂ ರಿಮ್ಸ್‌ನ ಅಧಿಕಾರಿಗಳು, ಸಿಬ್ಬಂದಿ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಸಾರ್ವಜನಿಕರು ಕಿಡಿಕಾರಿದ್ದಾರೆ. ಇದನ್ನೂ ಓದಿ: ಗ್ರಾಹಕರ ಸೋಗಿನಲ್ಲಿ ಬಂದ ಕಳ್ಳರು – ಅಂಗಡಿಯಲ್ಲಿದ್ದ ವೃದ್ಧೆಯ ಚಿನ್ನದ ಸರ ಕಿತ್ತು ಎಸ್ಕೇಪ್
Live Tv
[brid partner=56869869 player=32851 video=960834 autoplay=true]
ರಾಯಚೂರು: ನಗರದ ರಿಮ್ಸ್ ವೈದ್ಯಕೀಯ ವಿಜ್ಞಾನಗಳ ಬೋಧಕ ಆಸ್ಪತ್ರೆಯಲ್ಲಿ ಚೆನ್ನಾಗಿದ್ದ ನವಜಾತ ಶಿಶು ಏಕಾಏಕಿ ಸಾವನ್ನಪ್ಪಿದ ಹಿನ್ನೆಲೆ ಶಿಶುವಿನ ಪೋಷಕರು ಹಾಗೂ ಸಂಬಂಧಿಕರು ಆಸ್ಪತ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ರೋಗಿಗಳು ಸಾವನ್ನಪ್ಪುತ್ತಿದ್ದಾರೆ. ಬೆಳಿಗ್ಗೆ ಎಲ್ಲಾ ಚೆನ್ನಾಗಿದ್ದ ಮಗು ರಾತ್ರಿ ವೇಳೆಗೆ ಏಕಾಏಕಿ ಸಾವನ್ನಪ್ಪಿರುವುದಕ್ಕೆ ವೈದ್ಯರ ಹಾಗೂ ನರ್ಸ್‍ಗಳ ನಿರ್ಲಕ್ಷ್ಯವೇ ಕಾರಣ ಅಂತ ಆರೋಪಿಸಲಾಗಿದೆ. ನಾಲ್ಕು ದಿನಗಳ ಕೆಳಗೆ ತಾಯಿ ರೇಣುಕಾಗೆ ನಾರ್ಮಲ್ ಡೆಲಿವರಿಯಾಗಿತ್ತು. ನಾಲ್ಕು ದಿನದಿಂದ ಆರೋಗ್ಯವಾಗಿದ್ದ ಮಗು ಏಕಾಏಕಿ ಸಾವನ್ನಪ್ಪಿದೆ. ಮಗುವಿನ ಸಮಸ್ಯೆ ಬಗ್ಗೆ ಮೊದಲೇ ಹೇಳಿದ್ದರೆ ಬೇರೆ ಆಸ್ಪತ್ರೆಗೆ ಹೋಗುತ್ತಿದ್ದೇವು ಎಂದು ಪೋಷಕರು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕೋರ್ಟ್‍ಗೆ ಹಾಜರಾಗಲು ಮಲ್ಯಗೆ ಸುಪ್ರೀಂ ಕೊನೆಯ ಅವಕಾಶ
ಮಗುವಿನ ಸಾವಿನ ಬಗ್ಗೆ ವೈದ್ಯರು ನಿಖರ ಕಾರಣ ಹೇಳಿಲ್ಲ. ಹೀಗಾಗಿ ಆಸ್ಪತ್ರೆಯಲ್ಲಿ ಶಿಶು ಪೋಷಕರ ಕಡೆಯವರಿಂದ ಆಕ್ರೋಶ ವ್ಯಕ್ತವಾಗಿದೆ. ತಾಯಿಗೆ ಮದುವೆಯಾಗಿ ಒಂಭತ್ತು ವರ್ಷಗಳ ಬಳಿಕ ಮಗುವಾಗಿದ್ದು, ತಾಯಿ ರಕ್ತದೊತ್ತಡ ಸಮಸ್ಯೆ ಎದುರಿಸುತ್ತಿದ್ದರು. ಹೀಗಾಗಿ ಹೆರಿಗೆ ಬಳಿಕ ಆಸ್ಪತ್ರೆಯಲ್ಲಿ ಉಳಿದಿದ್ದರು. ತಾಯಿ ಮಗುವಿಗೆ ಹಾಲುಣಿಸುವಾಗ ಸಮಸ್ಯೆಯಾಗಿರಬಹುದು. ಇಲ್ಲವಾದಲ್ಲಿ ಸಡನ್ ಇನ್ಫಾಂಟ್ ಡೆತ್ ಸಿಂಡ್ರೋಮ್‍ಗೆ ಮಗು ಬಲಿಯಾಗಿರಬಹುದು ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಬುರ್ಕಾ ಧರಿಸದೇ ಧೈರ್ಯ ಪ್ರದರ್ಶಿಸಿ: ಕಂಗನಾ ರಣಾವತ್
ರಾಯಚೂರು: ಸರ್ಕಾರಿ ಆಸ್ಪತ್ರೆಗಳು ಅಂದ್ರೆ ಅದೊಂದು ರೀತಿಯ ಅನುಮಾನ, ಆತಂಕ ಜನರಲ್ಲಿ ಇದೆ. ಹೀಗಾಗಿ ಎಷ್ಟೇ ದುಡ್ಡು ಖರ್ಚಾದರೂ ಪರವಾಗಿಲ್ಲ ಎಂದು ಖಾಸಗಿ ಆಸ್ಪತ್ರೆಗಳ ಮೊರೆ ಹೋಗ್ತಾರೆ. ಆದ್ರೆ ರಾಯಚೂರಿನ ರಿಮ್ಸ್ ಆಸ್ಪತ್ರೆ ವೈದ್ಯರು ಖಾಸಗಿ ಆಸ್ಪತ್ರೆಗಳು ಕೈ ಚೆಲ್ಲಿದ ರೋಗಿಯ ಜೀವ ಉಳಿಸಿದ್ದಾರೆ. ಇವನು ಬದುಕಲು ಸಾಧ್ಯವೇ ಇಲ್ಲ ಅಂತ ಖಾಸಗಿ ಆಸ್ಪತ್ರೆ ವೈದ್ಯರು ಹೇಳಿದ್ದ ರೋಗಿ ಸರ್ಕಾರಿ ಆಸ್ಪತ್ರೆಯಲ್ಲಿ ಈಗ ಸಂಪೂರ್ಣ ಗುಣಮುಖನಾಗಿದ್ದಾನೆ.
ರಾಯಚೂರು ತಾಲೂಕಿನ ದೇವಸುಗೂರು ಗ್ರಾಮದ 12 ವರ್ಷದ ಬಾಲಕ ರಾಮು ಶಾಲೆಯಲ್ಲಿ ಆಟವಾಡುವಾಗ ಬಿದ್ದು ಪೆಟ್ಟು ಮಾಡಿಕೊಂಡಿದ್ದ ಅಷ್ಟೇ. ಆದ್ರೆ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಒಂದೆರಡು ದಿನಗಳಲ್ಲಿ ಪರಿಸ್ಥಿತಿ ಗಂಭೀರವಾಗಿತ್ತು. ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದರು ಯಾವುದೇ ಪ್ರಯೋಜನವಾಗಲಿಲ್ಲ. ಐದು ದಿನಗಳಲ್ಲಿ ಈ ಬಾಲಕ ಉಳಿಯುವುದು ಕಷ್ಟ ಹೈದ್ರಾಬಾದ್, ಇಲ್ಲಾ ಬೆಂಗಳೂರಿನ ದೊಡ್ಡ ಆಸ್ಪತ್ರೆಗಳಿಗೆ ಕರೆದುಕೊಂಡು ಹೋಗಿ ಅಂತ ವೈದ್ಯರು ಹೇಳಿದ್ದರು. ಆದ್ರೆ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿರುವ ಬಾಲಕನ ತಂದೆ ಹನುಮಂತ ದಿಕ್ಕುಕಾಣದಾಗಿ ರಿಮ್ಸ್ ಆಸ್ಪತ್ರೆಗೆ ಮಗನನ್ನ ದಾಖಲಿಸಿದ್ದರು. ಇದನ್ನೂ ಓದಿ: ಹುಬ್ಬಳ್ಳಿ ವ್ಯಕ್ತಿಯ ದೇಹದಿಂದ 156 ಕಿಡ್ನಿ ಸ್ಟೋನ್ಸ್ ತೆಗೆದ ವೈದ್ಯರು
ಉಸಿರಾಟ ತೊಂದರೆ, ಜ್ವರ, ಸಂಧಿ ನೋವಿನಿಂದ ಬಳಲುತ್ತಿದ್ದ ಬಾಲಕನಿಗೆ ಡಿಸೆಮ್ನಿಟಿ ಸ್ಟಿಪ್ನಫೋಕಲ್ ಸೆಪ್ಟಿಸಿವಿಯಾ ಅನ್ನೊ ವಿಚಿತ್ರ ಕಾಯಿಲೆಯಿದೆ ಅಂತ ರಿಮ್ಸ್ ವೈದ್ಯರು ಪತ್ತೆಹಚ್ಚಿ ಪಕ್ಕೆ, ಹೃದಯ, ಸಂಧಿಯಲ್ಲಿ ತುಂಬಿದ್ದ ಕೀವು ತೆಗೆದು ಚಿಕಿತ್ಸೆ ನೀಡಿ ಸತತ 24 ದಿನಗಳ ಚಿಕಿತ್ಸೆ ಬಳಿಕ ಗುಣಮುಖ ಮಾಡಿದ್ದಾರೆ.
ಚೆಸ್ಟ್ ಎಕ್ಸ್ ರೇ, ಸಿ ಟಿ ಸ್ಕ್ಯಾನ್, 2ಡಿ ಎಕೋ, ರಕ್ತ ಪರೀಕ್ಷೆ ಮೂಲಕ ಸಮಸ್ಯೆ ತಿಳಿದು ಸೂಕ್ತ ಚಿಕಿತ್ಸೆ ನೀಡಲಾಗಿದೆ. ಅತೀ ಗಂಭೀರ ಸ್ವರೂಪದ ಈ ಕಾಯಿಲೆಗೆ ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ಸಿಗದಿದ್ದಕ್ಕೆ ರೋಗಿಗಳು ಬದುಕುಳಿಯುವುದು ಅಸಾಧ್ಯ. ಖಾಸಗಿ ಆಸ್ಪತ್ರೆಗಳಲ್ಲಿ ಈ ರೋಗಕ್ಕೆ ಚಿಕಿತ್ಸೆ ಸಿಕ್ಕರೂ ಕನಿಷ್ಠ 8 ರಿಂದ 10 ಲಕ್ಷ ರೂ. ಖರ್ಚಾಗುತ್ತದೆ. ಆದರೆ ರಿಮ್ಸ್ ವೈದ್ಯಕೀಯ ಬೋಧಕ ಆಸ್ಪತ್ರೆಯಲ್ಲಿ ಸಂಪೂರ್ಣ ಉಚಿತವಾಗಿ ಚಿಕಿತ್ಸೆ ನೀಡಿ ಬಾಲಕನನ್ನ ಗುಣಪಡಿಸಲಾಗಿದೆ. ಮಗನನ್ನ ಕಳೆದುಕೊಂಡೆವು ಅಂತ ಕಣ್ಣೀರಿಡುತ್ತಿದ್ದ ಪೋಷಕರು ಇಲ್ಲಿನ ವೈದ್ಯರು ನಮ್ಮ ಪಾಲಿನ ದೇವರು ಅಂತ ಸ್ಮರಿಸುತ್ತಿದ್ದಾರೆ.
ಒಟ್ನಲ್ಲಿ, ನಾನಾ ಆರೋಪಗಳನ್ನ ಎದುರಿಸುತ್ತಿರುವ ರಾಯಚೂರಿನ ರಿಮ್ಸ್ ಆಸ್ಪತ್ರೆ ಈ ರೋಗಿಯ ವಿಷಯದಲ್ಲಿ ಮಾತ್ರ ನಿಜಕ್ಕೂ ವೃತ್ತಿಪರತೆಯನ್ನ ಮೆರೆದಿದೆ. ಆಸ್ಪತ್ರೆಯಲ್ಲಿ ಲಭ್ಯವಿರುವ ಅತ್ಯಾಧುನಿಕ ಉಪಕರಣಗಳನ್ನ ಸಮರ್ಪಕವಾಗಿ ಬಳಸಿಕೊಂಡು ಬಾಲಕನ ಪ್ರಾಣವನ್ನ ಉಳಿಸಿದ್ದಾರೆ. ರಿಮ್ಸ್ ಆಸ್ಪತ್ರೆ ಜಿಲ್ಲೆಯ ಜನತೆಗೆ ಇದೇ ರೀತಿ ವರದಾನವಾಗಲಿ ಅನ್ನೋದೆ ಎಲ್ಲರ ಆಶಯ. ಇದನ್ನೂ ಓದಿ: 16.8 ಕೆಜಿ ತೂಕದ ಗೆಡ್ಡೆಯನ್ನ ಹೊರತೆಗೆದ ವೈದ್ಯರು
ರಾಯಚೂರು: ದೇಶದಲ್ಲಿ ವಾಕ್ ಸ್ವಾತಂತ್ರ್ಯವಿದೆ ಎಂದು ಬಾಯಿಗೆ ಬಂದಂತೆ ಮಾತನಾಡ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಸಚಿವ ಹಾಲಪ್ಪ ಆಚಾರ್ ತಿರುಗೇಟು ನೀಡಿದ್ದಾರೆ.
ರಾಯಚೂರು ಜಿಲ್ಲಾ ನೂತನ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡಿದ್ದಾರೆ. ರಿಮ್ಸ್ ಆಸ್ಪತ್ರೆಯಲ್ಲಿ ಶಿಶು ತೀವ್ರ ಚಿಕಿತ್ಸಾ ಘಟಕ ಹಾಗೂ 20 ಕೆ.ಎಲ್ ಆಕ್ಸಿಜನ್ ಉತ್ಪಾದನಾ ಘಟಕ ಉದ್ಘಾಟನೆ ಮಾಡಿದರು. ಇದನ್ನೂ ಓದಿ: ಹೊಸ ಸಂಸತ್ ಭವನ ನಿರ್ಮಾಣದ ಸ್ಥಳಕ್ಕೆ ರಾತ್ರಿ ದಿಢೀರ್ ಭೇಟಿ ಕೊಟ್ಟ ಮೋದಿ
ಬಿಜೆಪಿ ಕೋಮುವಾದಿಗಳು ಅನ್ನೋ ಸಿದ್ದರಾಮಯ್ಯ ಅವರ ಹೇಳಿಕೆಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಒಬ್ಬ ಜವಾಬ್ದಾರಿಯುತ ಮುಖ್ಯಮಂತ್ರಿಗಳಾಗಿದ್ದವರು. ದೇಶದಲ್ಲಿ ವಾಕ್ ಸ್ವಾತಂತ್ರ್ಯವಿದೆ ಎಂದು ಬಾಯಿಗೆ ಬಂದಂತೆ ಮಾತನಾಡ್ತಾರೆ. ಅವರು ಏನೂ ಮಾತನಾಡ್ತಾರೆ ಎಂದು ನಾವು ಮಾತನಾಡೋಕೆ ಆಗಲ್ಲ ಎಂದು ತಿರುಗೇಟು ನೀಡಿದ್ದಾರೆ.
ಶೀಘ್ರದಲ್ಲಿ ಹೊಸ ಮರಳು ನೀತಿ ಜಾರಿಗೆ ತಂದು ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕುತ್ತೇವೆ. ಮರಳು ಸರಳೀಕರಣ ನೀತಿ ಅಧಿವೇಶನದ ಮುಂದಿದೆ. ಒಪ್ಪಿಗೆ ಸಿಕ್ಕ ಕೂಡಲೇ ಜಾರಿಯಾಗುತ್ತೆ. ನೀತಿ ಜಾರಿಯಾದ ಕೂಡಲೇ ಬಹಳ ಸುಧಾರಣೆಯಾಗಿ ಅಕ್ರಮಗಳಿಗೆ ಕಡಿವಾಣ ಬೀಳುತ್ತದೆ ಎಂದು ಭರವಸೆ ನೀಡಿದರು. ಅದು ಅಲ್ಲದೇ ನೇರವಾಗಿ ಗ್ರಾಹಕರಿಗೆ ಮರಳು ಕೊಡುವ ವ್ಯವಸ್ಥೆ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಎಸಿಬಿ ಬಲೆಗೆ ಬಿದ್ದ ಗುಡಸ ಗ್ರಾಮ ಪಂಚಾಯತ್ ಗುಮಾಸ್ತ
ರಾಯಚೂರು: ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಹೊಟ್ಟೆ ನೋವಿನಿಂದ ದಾಖಲಾಗಿದ್ದ ರೋಗಿಯೊಬ್ಬ ನಿನ್ನೆ ತಡರಾತ್ರಿ ಸಾವನ್ನಪ್ಪಿದ್ದರು. ಬಳಿಕ ರೋಗಿಯ ಕಡೆಯವರು ವೈದ್ಯರ ಮೇಲೆ ಹಲ್ಲೆ ಮಾಡಿದ್ದರು. ಇಂದು ರೋಗಿಯ ಕಡೆಯವರು ಹಲ್ಲೆ ಮಾಡಿರುವುದನ್ನು ಖಂಡಿಸಿ ಆಸ್ಪತ್ರೆಯ ತರಬೇತಿ ವೈದ್ಯರು ಕರ್ತವ್ಯಕ್ಕೆ ಗೈರಾಗಿ ಹೋರಾಟ ನಡೆಸಿದ್ದಾರೆ.
ರಿಮ್ಸ್ ಆಸ್ಪತ್ರೆಯಲ್ಲಿ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದ ಹಿನ್ನೆಲೆ ರೋಗಿ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ತರಬೇತಿ ವೈದ್ಯರ ಮೇಲೆ ರೋಗಿ ಸಂಬಂಧಿಕರು ಹಲ್ಲೆ ಮಾಡಿದ್ದರು. ಹಲ್ಲೆ ಖಂಡಿಸಿ ರಿಮ್ಸ್ ಆಸ್ಪತ್ರೆ ಎದುರು ತರಬೇತಿ ವೈದ್ಯರು ಪ್ರತಿಭಟನೆ ನಡೆಸಿದ್ದಾರೆ. ರೋಗಿಗೆ ಚಿಕಿತ್ಸೆ ನೀಡುವಾಗಲೇ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವಂತೆ ಆಗ್ರಹಿಸಿದ್ದಾರೆ.
ಹಲ್ಲೆ ಮಾಡಿದವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಕೈಗಳಿಗೆ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ಮಾಡುತ್ತಿದ್ದ ವೈದ್ಯರನ್ನು ಸಮಾಧಾನ ಪಡಿಸಲು ಬಂದ ರಿಮ್ಸ್ ನಿರ್ದೇಶಕ ಡಾ.ಬಸವರಾಜ್ ಪೀರಾಪುರ ಜೊತೆ ವೈದ್ಯರು ವಾಗ್ವಾದ ನಡೆಸಿ, ಆಸ್ಪತ್ರೆಯಲ್ಲಿ ವೈದ್ಯರಿಗೆ ರಕ್ಷಣೆ ಇಲ್ಲದಂತೆ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವೈದ್ಯರಿಗೆ ಕೋವಿಡ್ ಕರ್ತವ್ಯ ನೆಪ – ಚಿಕಿತ್ಸೆ ಸಿಗದೆ ವಂಚಿತರಾಗುತ್ತಿರೋ ರೋಗಿಗಳು
ತರಬೇತಿ ವೈದ್ಯರ ಒತ್ತಾಯಕ್ಕೆ ಮಣಿದ ರಿಮ್ಸ್ ಆಸ್ಪತ್ರೆಯ ನಿರ್ದೇಶಕ ಬಸವರಾಜ್ ಪೀರಾಪುರ ಹಲ್ಲೆ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪೊಲೀಸ್ ಠಾಣೆ ದೂರು ನೀಡಲು ತೀರ್ಮಾನಿಸಿದ್ದಾರೆ. ಈ ಹಿನ್ನೆಲೆ ವೈದ್ಯರು ತಾತ್ಕಾಲಿಕವಾಗಿ ಹೋರಾಟ ಹಿಂಪಡೆದಿದ್ದಾರೆ.
ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ರೋಡಲಬಂಡಾ ಗ್ರಾಮದಲ್ಲಿ ಕೊಲೆ ಆರೋಪಿಯಾಗಿರುವ ಯುವತಿಯ ಮೇಲೆ ಅಪ್ರಾಪ್ತ ಬಾಲಕರು ಮಾರಣಾಂತಿಕ ಹಲ್ಲೆ ನಡೆದಿದೆ.
ರೋಡಲಬಂಡಾ ಗ್ರಾಮದ ಖಾಜಾಬಿ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಗಾಯಗೊಂಡ ಯುವತಿಯನ್ನು ಇದೀಗ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿರವಾರ ಪಟ್ಟಣದ ಅಪ್ರಾಪ್ತ ಸಹೋದರರಿಂದ ಯುವತಿ ಮನೆಯಲ್ಲಿ ಮಾರಣಾಂತಿಕ ಹಲ್ಲೆ ನಡೆದಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ.
2020 ನವೆಂಬರ್ ತಿಂಗಳಲ್ಲಿ ಸಿರವಾರದ ಮೆಹಬೂಬ್ ಜೊತೆ ಖಾಜಾಬಿ ಮದುವೆ ನಿಶ್ಚಯವಾಗಿತ್ತು. ತನ್ನ ಪ್ರಿಯಕರ ಶಬ್ಬೀರ್‍ನ ಜೊತೆಗೂಡಿ ಮೆಹಬೂಬ್ ನನ್ನು ಕೊಲೆ ಮಾಡಿದ ಆರೋಪದ ಮೇಲೆ ಖಾಜಾಬಿ ಜೈಲು ಪಾಲಾಗಿದ್ದಳು. ಆದರೆ ಖಾಜಾಬಿ ಒಂದು ತಿಂಗಳ ಹಿಂದೆ ಜಾಮೀನಿನ ಮೇಲೆ ಹೊರಬಂದಿದ್ದಳು.
ಹಳೇ ದ್ವೇಷ ಹಿನ್ನೆಲೆ ಮೆಹಬೂಬ್ ಸಂಬಂಧಿಕರಾದ ಇಬ್ಬರು ಅಪ್ರಾಪ್ತರು ಖಾಜಾಬಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎಂದು ಖಾಜಾಬಿ ಪೋಷಕರು ಆರೋಪಿಸಿದ್ದಾರೆ. ಅಲ್ಲದೇ ತೀವ್ರವಾಗಿ ಗಾಯಗೊಂಡಿರುವ ಯುವತಿಯನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಘಟನೆ ಹಿನ್ನೆಲೆ ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ವಾರಾಂತ್ಯದ ಕರ್ಫ್ಯೂ ಸಮಯದಲ್ಲಿ ಬಿಎಂಟಿಸಿ ಸೇವೆಗಳ ಕಾರ್ಯಾಚರಣೆ ಕಡಿತ
ರಾಯಚೂರು: ಜಿಲ್ಲಾ ಪೊಲೀಸರಿಗೆ ತಲೆನೋವಾಗಿದ್ದ ರಿಮ್ಸ್ ಆಸ್ಪತ್ರೆ ಮುಂದೆ ಬೈಕ್ ಕಳ್ಳತನ ಮಾಡುತ್ತಿದ್ದ ಖದೀಮರು ಕೊನೆಗೂ ಸಿಕ್ಕಿಬಿದ್ದಿದ್ದಾರೆ. ರಾಯಚೂರು ಗ್ರಾಮೀಣ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ 17 ಬೈಕ್ ಜಪ್ತಿಯಾಗಿದ್ದು, ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ.
ರಾಮು, ಬಸವರಾಜ್ ಬಂಧಿತ ಆರೋಪಿಗಳಾಗಿದ್ದು, ಇವರಿಂದ 5,02,000 ಮೌಲ್ಯದ ಒಟ್ಟು 17 ಬೈಕ್ ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ರಿಮ್ಸ್ ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸುತ್ತಿದ್ದ ಬೈಕುಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದರು. ಅದರಲ್ಲೂ ಹೀರೋ ಹೊಂಡಾ ಕಂಪನಿಯ ಬೈಕ್‍ಗಳನ್ನೇ ಈ ಖದೀಮರು ಹೊಂಚು ಹಾಕಿ ಕದ್ದಿದ್ದಾರೆ. ಆರೋಪಿಗಳಿಬ್ಬರು ಆರ್.ಟಿ.ಪಿ.ಎಸ್ ನಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ರಾಯಚೂರಿನಲ್ಲಿ ಕಳ್ಳತನ ಮಾಡಿದ ಬೈಕ್‍ಗಳನ್ನು ಲಿಂಗಸುಗೂರು, ಸಿಂಧನೂರಿನಲ್ಲಿ ಮಾರಾಟ ಮಾಡುತ್ತಿದ್ದರು. ಇದೇ ಮೊದಲ ಬಾರಿಗೆ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಕಳ್ಳರು ಬೇರೆಲ್ಲೂ ಕೈಚಳಕ ತೋರಿಲ್ಲ. ಕೇವಲ ರಿಮ್ಸ್ ಆಸ್ಪತ್ರೆ ಪಾರ್ಕಿಂಗ್ ಸ್ಥಳವನ್ನೇ ಟಾರ್ಗೆಟ್ ಮಾಡಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.
ರಾಯಚೂರು: ಕೊರೊನಾ ವಿರುದ್ಧ ಆರೋಗ್ಯ ಇಲಾಖೆ, ವೈದ್ಯಕೀಯ ಸಿಬ್ಬಂದಿ ಜೀವದ ಹಂಗು ತೊರೆದು ಹೋರಾಟ ಮಾಡುತ್ತಿದ್ದಾರೆ. ಆದರೆ ರಾಯಚೂರಿನಲ್ಲಿ ಇವರ ಸೇವೆಗೆ ಬೆಲೆಕಟ್ಟುವುದಿರಲಿ ಸರಿಯಾಗಿ ಸಂಬಳವನ್ನೇ ನೀಡುತ್ತಿಲ್ಲ ಎಂಬ ವಿಚಾರವೊಂದು ಬೆಳಕಿಗೆ ಬಂದಿದೆ.
ಹೌದು. ವೈದ್ಯಕೀಯ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ಕೋವಿಡ್ ಆಸ್ಪತ್ರೆಗಳಾದ ರಾಯಚೂರಿನ ಓಪೆಕ್ ಹಾಗೂ ರಿಮ್ಸ್ ಸಿಬ್ಬಂದಿಗೆ ಮೂರು ತಿಂಗಳಿನಿಂದ ಸಂಬಳವನ್ನೇ ನೀಡಿಲ್ಲ. ವೇತನವಿಲ್ಲದೆ ಸಾವಿರಕ್ಕೂ ಅಧಿಕ ಸಿಬ್ಬಂದಿ ನಿತ್ಯ ದುಡಿಯುತ್ತಿದ್ದಾರೆ. ರಿಮ್ಸ್‍ನಲ್ಲಿ ಬಹುತೇಕ ಸಿ ಹಾಗೂ ಡಿ ಗ್ರೂಪ್ ನೌಕರರಿಗೆ ವೇತನವಾಗಿಲ್ಲ.
ರಿಮ್ಸ್ ಒಂದರಲ್ಲಿ ಪ್ರತಿ ತಿಂಗಳು 5 ಕೋಟಿ ರೂಪಾಯಿ ವೇತನಕ್ಕಾಗಿ 1.5 ಕೋಟಿ ಆಸ್ಪತ್ರೆಯ ನಿರ್ವಹಣೆಗಾಗಿ ಅನುದಾನ ಬೇಕಾಗಿದೆ. 2019-20ರ ಕೊನೆಯ ತ್ರೈಮಾಸಿಕದಲ್ಲಿ ಅನುದಾನದ ಕೊರತೆಯಾಗಿದೆ. ಅನುದಾನ ನೀಡಿ ಎಂದು ರಿಮ್ಸ್ ಆಡಳಿತಾಧಿಕಾರಿಗಳು ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ. ಇಷ್ಟರಲ್ಲಿ ಅನುದಾನ ಬಿಡುಗಡೆಯಾಗುವ ಸಾಧ್ಯತೆ ಬಗ್ಗೆ ಆಶಾಭಾವನೆಯಲ್ಲಿದ್ದಾರೆ. ಸಿಬ್ಬಂದಿ ಮಾತ್ರ ದುಡಿದು ದುಡಿದು ಸಾಲಗಾರರಾಗಿದ್ದಾರೆ ಎಂದು ರಿಮ್ಸ್ ಆಡಳಿತಾಧಿಕಾರಿ ನೂರ್ ಜಾನ್ ಖಾನ್ ತಿಳಿಸಿದ್ದಾರೆ.
ಒಟ್ಟಿನಲ್ಲಿ ರಾಯಚೂರಿನ ಓಪೆಕ್ ಹಾಗೂ ರಿಮ್ಸ್ ಸಿಬ್ಬಂದಿಯನ್ನ ಸರ್ಕಾರ ನಿರ್ಲಕ್ಷ್ಯಿಸಿದೆ. ಇಂತಹ ವಿಷಮ ಸ್ಥಿತಿಯಲ್ಲಿ ಪ್ರಾಣದ ಹಂಗು ತೊರೆದು ಸೇವೆ ಸಲ್ಲಿಸುತ್ತಿರೋ ಈ ಸಿಬ್ಬಂದಿಗೆ ಆದಷ್ಟು ಬೇಗ ಸಂಬಳ ಬಿಡುಗಡೆ ಮಾಡಬೇಕಿದೆ.