ಶಿವಮೊಗ್ಗ: ಕಾಂತಾರ ಚಾಪ್ಟರ್-1 ಚಿತ್ರೀಕರಣದ ವೇಳೆ ಮತ್ತೊಂದು ಅವಘಡ ಸಂಭವಿಸಿದೆ. ಮಾಸ್ತಿಕಟ್ಟೆಯ ಮಾಣಿ ಜಲಾಶಯದಲ್ಲಿ ಶೂಟಿಂಗ್ ದೋಣಿಯೇ ಮುಗಿಚಿಹೋಗಿದೆ. ಕ್ಯಾಮೆರಾಮೆನ್, ನಟ ರಿಷಬ್ ಶೆಟ್ಟಿ ಸೇರಿದಂತೆ 30 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ದೋಣಿ ಮಗುಚಿದ ಬಳಿಕ ಕಲಾವಿದರು ಹಾಗೂ ತಂತ್ರಜ್ಞರು ಈಜುತ್ತಲೇ ದಡ ಸೇರಿಕೊಂಡಿದ್ದಾರೆ. ಕಳೆದ ವಾರ ವಿಜು ವಿ.ಕೆ. ನಿಧನದ ಬಳಿಕ ಸಿನಿಮಾದ ಕೊನೆಯ ಹಂತದ ಶೂಟಿಂಗ್ ಮುಂದುವರಿದ್ದು, ಮಾಣಿ ಜಲಾಶಯದ ಬಳಿ 15 ದಿನಗಳ ಕಾಲ ಶೂಟಿಂಗ್ ಮಾಡಲು ಯೋಜನೆ ರೂಪಿಸಲಾಗಿತ್ತು. ಆದರೆ, ಈಗ ಕ್ಯಾಮೆರಾ ಸೇರಿದಂತೆ ಬೋಟ್ ನಲ್ಲಿದ್ದ ಎಲ್ಲಾ ಪ್ರಾಪರ್ಟೀಸ್ ನೀರು ಪಾಲಾಗಿದೆ.
ತೆಲುಗಿನ ಖ್ಯಾತ ನಟ ರಾಣಾ ದಗ್ಗುಬಾಟಿ (Rana Daggubati)ಮತ್ತು ಕನ್ನಡದ ಹೆಸರಾಂತ ನಟ ರಿಷಬ್ ಶೆಟ್ಟಿ (Rishabh Shetty)ಜೊತೆಗಿನ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ. ರಾಣಾ ಏನಾದರೂ ಕನ್ನಡ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟರಾ ಅನ್ನೋ ಅನುಮಾನ ಕೂಡ ಮೂಡಿದೆ. ಆದರೆ, ಕನ್ನಡಕ್ಕೆ ರಾಣಾ ಬಂದಿಲ್ಲ. ತೆಲುಗಿಗೆ ರಿಷಬ್ ಹೋಗಿದ್ದಾರೆ. ಜೈ ಹನುಮಾನ್ ಸಿನಿಮಾದಲ್ಲಿ ಈ ಜೋಡಿ ಒಟ್ಟಾಗಿ ನಟಿಸುತ್ತಿದೆ.
‘ಕಾಂತಾರ’ ಕಣಕ್ಕಿಳಿದಿರುವ ಕಾಡುಬೆಟ್ಟ ಶಿವನ ಲುಕ್ಕು ಕಣ್ತುಂಬಿಕೊಳ್ಳುವುದ್ದಕ್ಕೆ ಅಖಂಡ ಸಿನಿಮಾ ಪ್ರೇಮಿಗಳು ಕಾತರದಿಂದ ಕಾಯ್ತಿದ್ದಾರೆ. ಕುಂದಾಪುರದ ಕೆರಾಡಿ ಹುಡ್ಗ ‘ಕಾಂತಾರ’ ಪ್ರೀಕ್ವೆಲ್ ಮೂಲಕ ಕದಂಬರ ಕಥೆ ಹರವಿಡೋದಿಕ್ಕೆ ರೆಡಿಯಾಗಿರುವುದರ ಜೊತೆಗೆ ಪುರಾತನ ಸಮರ ಕಲೆ ಕಳರಿಪಯಟ್ಟು ಕಲೆಯನ್ನ ಕಟ್ಟಿಕೊಡಲು ಕಸರತ್ತು ನಡೆಸಿದ್ದಾರೆ. ಇದರ ನಡುವೆ ಹನುಮಾನ್ (Hanuman) ಪಾತ್ರದಲ್ಲಿ ಮಿಂಚಲು ರಿಷಬ್ ಶೆಟ್ಟಿ (Rishab Shetty) ರೆಡಿಯಾಗಿದ್ದಾರೆ. ಈ ಮೂಲಕ ತೆಲುಗಿಗೆ ನಟ ಎಂಟ್ರಿ ಕೊಟ್ಟಿದ್ದಾರೆ.
ಟಾಲಿವುಡ್ ಅಂಗಳದಲ್ಲಿ ಮೂಡಿಬಂದಿದ್ದ ‘ಜೈ ಹನುಮಾನ್’ (Jai Hanuman) ಸಿನಿಮಾ ಸಕ್ಸಸ್ ಕಂಡಿತ್ತು. ಗಲ್ಲಾಪೆಟ್ಟಿಗೆಯಲ್ಲಿ ಕಮಾಲ್ ಮಾಡಿದ್ದ ಹನುಮಾನ್ ಸಿನಿಮಾದ ಸೀಕ್ವೆಲ್ ಮೂಡಿಬರುತ್ತಿದ್ದು, ಇದೀಗ ಪ್ಯಾನ್ ಇಂಡಿಯಾ ಹಿಟ್ ಸೀಕ್ವೆಲ್‌ನಲ್ಲಿ ‘ಕಾಂತಾರ’ (Kantara) ಶಿವ ನಟಿಸುವುದು ಅಧಿಕೃತವಾಗಿದೆ. ನಿರ್ದೇಶಕ ಪ್ರಶಾಂತ್ ವರ್ಮಾ ಡೈರೆಕ್ಷನ್ ಅಡಿಯಲ್ಲಿ ಮೂಡಿ ಬರುತ್ತಿರುವ ‘ಹನುಮಾನ್’ ಸಿನಿಮಾದ ಸೀಕ್ವೆಲ್‌ನಲ್ಲಿ ರಿಷಬ್ ಶೆಟ್ಟಿ ಹನುಮಂತನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ದೀಪಾವಳಿಯ ವಿಶೇಷ ಸಂದರ್ಭದಲ್ಲಿ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ.
ನಿರ್ದೇಶಕ ಪ್ರಶಾಂತ್ ವರ್ಮಾ ‘ಜೈ ಹನುಮಾನ್’ ಚಿತ್ರದ ಸೀಕ್ವೆಲ್‌ನಲ್ಲಿ ಹನುಮಾನ್ ಪಾತ್ರಧಾರಿಗೆ ಬಹಳಷ್ಟು ಅಳೆದೂ ತೂಗಿ ರಿಷಬ್ ಶೆಟ್ಟಿ ಅವರನ್ನು ಆಯ್ಕೆ ಮಾಡಿದ್ದಾರೆ. ಕಾಂತಾರ ಸೀಕ್ವೆಲ್‌ಗಾಗಿ ನ್ಯಾಷನಲ್ ಅವಾರ್ಡ್ ಮುಡಿಗೇರಿಸಿಕೊಂಡಿರುವ ಡಿವೈನ್ ಸ್ಟಾರ್ ಕೇವಲ ನಟರಾಗಿ ಅಷ್ಟೇ ಅಲ್ಲದೆ, ನಿರ್ದೇಶಕರಾಗಿಯೂ ಪ್ಯಾನ್ ಇಂಡಿಯಾದಾದ್ಯಂತ ಮೋಡಿ ಮಾಡಿದ್ದಾರೆ. ಇದೇ ಕಾರಣಕ್ಕೆ ಯಾವುದೇ ಪಾತ್ರವನ್ನಾದರೂ ರಿಷಬ್ ನಿಭಾಯಿಸಬಲ್ಲರು. ಜೊತೆಗೆ ಕಥೆ-ಚಿತ್ರಕಥೆ ಹಾಗೂ ಸಂಭಾಷಣೆ ವಿಭಾಗಗಳಲ್ಲೂ ರಿಷಬ್ ಶೆಟ್ಟಿಗೆ ಕಂಟ್ರೋಲ್ ಇರೋದ್ರಿಂದ ‘ಹನುಮಾನ್’ ಸಿನಿಮಾದ ಸೀಕ್ವೆಲ್‌ಗೆ ಪ್ಲಸ್ ಪಾಯಿಂಟ್ಸ್ ಆಗಲಿದೆ.
ಕೈಯಲ್ಲಿ ರಾಮನ ವಿಗ್ರಹ ಹಿಡಿದು ರಿಷಬ್ ಶೆಟ್ಟಿ ಹನುಮಾನ್ ಪಾತ್ರದಲ್ಲಿ ಪವರ್‌ಫುಲ್ ಪೋಸ್ಟ್ ಕೊಟ್ಟಿದ್ದಾರೆ. ಫಸ್ಟ್ ಲುಕ್ ಪೋಸ್ಟರ್ ಬಹಳ ಆಕರ್ಷಕವಾಗಿದೆ. ‘ಜೈ ಹನುಮಾನ್’ ಸಿನಿಮಾವನ್ನು ಪ್ರಶಾಂತ್ ವರ್ಮಾ ಸಿನಿಮಾಟಿಕ್ ಯೂನಿವರ್ಸ್‌ನ ಭಾಗವಾಗಿ ತಯಾರಾಗಲಿದೆ. ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡಲಿದ್ದಾರೆ.
ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸುತ್ತಿರುವ ಕಾಂತಾರ (Kantara) ಪ್ರಿಕ್ವೆಲ್ ಚಿತ್ರಕ್ಕೆ ಒಬ್ಬೊಬ್ಬರೆ ಜೊತೆಯಾಗುತ್ತಿದ್ದಾರೆ. ಅದರಲ್ಲೂ ಹಾಲಿವುಡ್ ನ ಖ್ಯಾತ ಸ್ಟಂಟ್ ಮಾಸ್ಟರ್ ಕಾಂತಾರಗಾಗಿ ಕೆಲಸ ಮಾಡಲಿದ್ದಾರೆ. ಆರ್.ಆರ್.ಆರ್ ಚಿತ್ರಕ್ಕೆ ಸಾಹಸ ನಿರ್ದೇಶನ ಮಾಡಿದ್ದ ಆಕ್ಷನ್ ಡೈರೆಕ್ಟರ್ ಟೊಡರ್ ಲ್ಯಾಜರೋವ್ (Todar Lazarov), ಇದೀಗ ಕಾಂತಾರ ಚಿತ್ರಕ್ಕೂ ಸಾಹಸ ನಿರ್ದೇಶನ ಮಾಡಲಿದ್ದಾರೆ. ಆ ನಿಮಿತ್ತ ಬಲ್ಗೇರಿಯಾದಿಂದ ಕುಂದಾಪುರಕ್ಕೆ ಆಗಮಿಸಿದ್ದಾರೆ. ರಿಷಬ್ ಶೆಟ್ಟಿಯನ್ನೂ ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ.
ಈ ಹಿಂದೆ ‘ಕಾಂತಾರ’ ಪ್ರೀಕ್ವೆಲ್ ಟೀಮ್ ನಿಂದ ಮತ್ತೊಂದು ಹೊಸ ಸುದ್ದಿ ಬಂದಿತ್ತು. ಸದ್ದಿಲ್ಲದೇ ರಿಷಬ್ ಆಯಾ ಹಂತದ ಚಿತ್ರೀಕರಣದಲ್ಲಿ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದು, ಈ ಸಿನಿಮಾದ ಮಹತ್ವದ ಪಾತ್ರವೊಂದನ್ನು ಮಾಲಿವುಡ್ ನಟ ಜಯರಾಮ್ (Jayaram) ನಿರ್ವಹಿಸುತ್ತಿದ್ದಾರೆ. ಈ ಹಿಂದೆ ಇವರು ಶಿವರಾಜ್ ಕುಮಾರ್ ನಟನೆಯ ಘೋಸ್ಟ್ ಸಿನಿಮಾದಲ್ಲೂ ನಟಿಸಿದ್ದರು.
‘ಕಾಂತಾರ’ ಸಕ್ಸಸ್ ನಂತರ ಮೊದಲಿಗಿಂತ ಜವಾಬ್ದಾರಿ ಹೆಚ್ಚಾಗಿದೆ. ನಮ್ಮ ಸಿನಿಮಾಗಾಗಿ ದೊಡ್ಡ ತಂಡ ಕೆಲಸ ಮಾಡುತ್ತಿದೆ ಎಂದಿದ್ದರು ರಿಷಬ್. ಹೊಂಬಾಳೆ ಸಂಸ್ಥೆ ಸಿಕ್ಕಿರುವುದು ಫಿಲ್ಮ್ ಮೇಕರ್‌ಗೆ ಒಂದು ಪುಣ್ಯ ಎಂದು ರಿಷಬ್ ಖುಷಿಯಿಂದ ಮಾತನಾಡಿದ್ದರು. ಕಾಂತಾರಗಾಗಿ ಅದ್ಭುತವಾದ ಟೆಕ್ನಿಷಿಯನ್ಸ್‌ಗಳು ಕೆಲಸ ಮಾಡುತ್ತಿದ್ದಾರೆ. ನಿರಂತರವಾಗಿ ಪಾರ್ಟ್ ಬೈ ಪಾರ್ಟ್ ಚಿತ್ರೀಕರಣ ನಡೆಯುತ್ತದೆ ಎಂದು ರಿಷಬ್ ಹೇಳಿದ್ದರು.
ಜನ ‘ಕಾಂತಾರ’ ಚಿತ್ರವನ್ನು ಗೆಲ್ಲಿಸಿದ್ದಾರೆ ಬಾಯಲ್ಲಿ ಏನು ಹೇಳಲ್ಲ. ಕೆಲಸದ ಮೂಲಕ ಮಾಡಿ ತೋರಿಸಬೇಕು ಎಂದು ಅಂದುಕೊಂಡಿದ್ದೇನೆ. ನನಗೆ ಯಾವ ಒತ್ತಡವು ಇಲ್ಲ. ಆಗ ನನಗೆ ಬಹಳ ದೊಡ್ಡ ಚಿತ್ರವಾಗಿತ್ತು. ಸಿನಿಮಾ ಯಾವಾಗಲೂ ಕಲಿಯುವ ಪ್ರೊಸೆಸ್ ಅದನ್ನು ಮಾಡುತ್ತಿದ್ದೇನೆ ಎಂದಿದ್ದರು ರಿಷಬ್.
ಕಾಂತಾರ (Kantara) ಪ್ರೀಕ್ವೆಲ್ ಸಿನಿಮಾದ ಕುರಿತಂತೆ ಅಂತೆಕಂತೆ ಸುದ್ದಿಗಳೇ ಜಾಸ್ತಿ ಹರಿದಾಡುತ್ತಿವೆ. ಇದೇ ಮೊದಲ ಬಾರಿಗೆ ನಿರ್ದೇಶಕ, ನಟ ರಿಷಬ್ ಶೆಟ್ಟಿ (Rishabh Shetty) ಸಿನಿಮಾ ಕುರಿತಂತೆ ಹಲವಾರು ವಿಷಯಗಳನ್ನು ಪಬ್ಲಿಕ್ ಟಿವಿ ಡಿಜಿಟಲ್ ಜೊತೆ ಎಕ್ಸ್‌ಕ್ಲೂಸಿವ್ ಆಗಿ ಮಾತನಾಡಿದ್ದಾರೆ.
ಈಗಾಗಲೇ ಮೊದಲ ಹಂತದ ಚಿತ್ರೀಕರಣವನ್ನು ಮುಗಿಸಿರುವ ರಿಷಬ್ ಶೆಟ್ಟಿ, ಬೆಂಗಳೂರಿಗೆ ಆಗಮಸಿದ್ದಾರೆ. ಅವರ ನಿರ್ಮಾಣದ ಶಿವಮ್ಮ ಸಿನಿಮಾ ರಿಲೀಸ್ ಹೊತ್ತಲ್ಲಿ ಕಾಣಿಸಿಕೊಂಡಿರುವ ಅವರು ಸಿನಿಮಾ ಕುರಿತಂತೆ ಹತ್ತು ಹಲವಾರು ವಿಷಯಗಳನ್ನು ಹಂಚಿಕೊಂಡಿದ್ದಾರೆ.
ಮೊದಲ ಹಂತದ ಬಹುತೇಕ ಚಿತ್ರೀಕರಣ ಕಾಂತಾರಕ್ಕಾಗಿ ಹಾಕಿರುವ ಬಹೃತ್ ಸೆಟ್‌ನಲ್ಲೇ ಮುಗಿಸಿದ್ದಾರೆ. ಸ್ಥಳೀಯ ಕಲಾವಿದರು ಮತ್ತು ಕೆಲವು ಪ್ರಮುಖ ಪಾತ್ರಧಾರಿಗಳ ಜೊತೆ ಮೊದಲ ಹಂತದ ಚಿತ್ರೀಕರಣ ಮುಗಿಸಿದ್ದಾರೆ. ರಿಷಬ್ ಶೆಟ್ಟಿ, ಮಲಯಾಳಂ ನಟ ಜಯರಾಮ್ ಸೇರಿದಂತೆ ಹಲವು ಕಲಾವಿದರು ಈ ಭಾಗದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.
ನಾಯಕಿಯ ಕುರಿತಂತೆ ಮಾತನಾಡಿದ ರಿಷಬ್, ಇನ್ನೂ ನಾಯಕಿ ಫಿಕ್ಸ್ ಆಗಿಲ್ಲ. ಹಲವು ನಾಯಕಿಯರನ್ನು ಶೂಟಿಂಗ್ ಸೆಟ್ ನಲ್ಲಿ ಕರೆಯಿಸಿಕೊಂಡು ಲುಕ್ ಟೆಸ್ಟ್ ಮಾಡಿದ್ದೇವೆ. ಸಿನಿಮಾದಲ್ಲಿ ಖಂಡಿತಾ ನಾಯಕಿ ಇರುತ್ತಾಳೆ. ಆದರೆ, ಇನ್ನೂ ನಾಯಕಿಯ ಚಿತ್ರೀಕರಣದ ಹಂತಕ್ಕೆ ಬಂದಿಲ್ಲ. ಮುಂದಿನ ದಿನಗಳಲ್ಲಿ ನಾಯಕಿಯ ಆಯ್ಕೆ ನಡೆಯಲಿದೆ ಅಂದಿದ್ದಾರೆ ರಿಷಬ್.
ಈ ನಡುವೆ ತಮ್ಮೂರಿನ ಶಾಲೆಯನ್ನು ಸುಂದರಗೊಳಿಸಿದ್ದಾರೆ ರಿಷಬ್. ಅಲ್ಲದೇ, ಕಟ್ಟಡದ ವಿನ್ಯಾಸವನ್ನೇ ಬದಲಾಯಿಸಿದ್ದಾರೆ. ಅವರೇ ಶಾಲೆಗೆ ಶಿಕ್ಷಕರನ್ನೂ ಒದಗಿಸಿದ್ದಾರೆ. ಈಗಾಗಲೇ 40ಕ್ಕೂ ಹೆಚ್ಚು ಮಕ್ಕಳು ಶಾಲೆಗೆ ಪ್ರವೇಶಾತಿ ಪಡೆದಿದ್ದಾರಂತೆ. ಕಾಂತಾರದ ಜೊತೆ ಜೊತೆ ಆ ಕೆಲಸವನ್ನೂ ಮಾಡಿದ ತೃಪ್ತಿ ನನಗಿದೆ ಅಂತಾರೆ ರಿಷಬ್.
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡುತ್ತಿರುವ ‘ಕಾಂತಾರ’ ಪ್ರೀಕ್ವೆಲ್ ಟೀಮ್ ನಿಂದ ಮತ್ತೊಂದು ಹೊಸ ಸುದ್ದಿ ಬಂದಿದೆ. ಸದ್ದಿಲ್ಲದೇ ರಿಷಬ್ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದು, ಈ ಸಿನಿಮಾದ ಮಹತ್ವದ ಪಾತ್ರವೊಂದನ್ನು ಮಾಲಿವುಡ್ ನಟ ಜಯರಾಮ್ (Jayaram) ನಿರ್ವಹಿಸುತ್ತಿದ್ದಾರೆ. ಈ ಹಿಂದೆ ಇವರು ಶಿವರಾಜ್ ಕುಮಾರ್ ನಟನೆಯ ಘೋಸ್ಟ್ ಸಿನಿಮಾದಲ್ಲೂ ನಟಿಸಿದ್ದರು.
ರಿಷಬ್ ಶೆಟ್ಟಿ (Rishab Shetty) ಸದ್ಯ ‘ಕಾಂತಾರ’ (Kantara 1) ಪ್ರೀಕ್ವೆಲ್ ಚಿತ್ರದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಮೇ.7 ರಂದು ಬೈಂದೂರಿನ ಕೆರಾಡಿಯಲ್ಲಿ ರಿಷಬ್ ಮತದಾನ ಮಾಡಿ, ಈ ವೇಳೆ ಕಾಂತಾರ ಪಾರ್ಟ್ 1 ಬಗ್ಗೆ ರಿಷಬ್ ಮಾಹಿತಿ ನೀಡಿದ್ದರು.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದ ರಿಷಬ್, ಜನ ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡಿದ್ರೆ ಒಳ್ಳೆಯದು. ಕಾಂತಾರ ಚಿತ್ರದ ಕುರಿತು ಅಧಿಕೃತವಾಗಿ ಹೊಂಬಾಳೆ ಸಂಸ್ಥೆ ಎಲ್ಲವನ್ನೂ ಘೋಷಣೆ ಮಾಡುತ್ತದೆ. ಈಗಾಗಲೇ ‘ಕಾಂತಾರ’ ಪ್ರೀಕ್ವೆಲ್ ಚಿತ್ರೀಕರಣ ಆರಂಭವಾಗಿದೆ. ಸಿನಿಮಾದ ಕೆಲಸ ಬಹಳ ಚೆನ್ನಾಗಿ ನಡೆಯುತ್ತಿದೆ ಎಂದು ಮಾಹಿತಿ ಹಂಚಿಕೊಂಡಿದ್ದರು.
‘ಕಾಂತಾರ’ ಸಕ್ಸಸ್ ನಂತರ ಮೊದಲಿಗಿಂತ ಜವಾಬ್ದಾರಿ ಹೆಚ್ಚಾಗಿದೆ. ನಮ್ಮ ಸಿನಿಮಾಗಾಗಿ ದೊಡ್ಡ ತಂಡ ಕೆಲಸ ಮಾಡುತ್ತಿದೆ ಎಂದಿದ್ದರು. ಹೊಂಬಾಳೆ ಸಂಸ್ಥೆ ಸಿಕ್ಕಿರುವುದು ಫಿಲ್ಮ್ ಮೇಕರ್‌ಗೆ ಒಂದು ಪುಣ್ಯ ಎಂದು ರಿಷಬ್ ಖುಷಿಯಿಂದ ಮಾತನಾಡಿದ್ದರು. ಕಾಂತಾರಗಾಗಿ ಅದ್ಭುತವಾದ ಟೆಕ್ನಿಷಿಯನ್ಸ್‌ಗಳು ಕೆಲಸ ಮಾಡುತ್ತಿದ್ದಾರೆ. ನಿರಂತರವಾಗಿ ಪಾರ್ಟ್ ಬೈ ಪಾರ್ಟ್ ಚಿತ್ರೀಕರಣ ನಡೆಯುತ್ತದೆ ಎಂದು ರಿಷಬ್ ಹೇಳಿದ್ದರು.
ಜನ ‘ಕಾಂತಾರ’ ಚಿತ್ರವನ್ನು ಗೆಲ್ಲಿಸಿದ್ದಾರೆ ಬಾಯಲ್ಲಿ ಏನು ಹೇಳಲ್ಲ. ಕೆಲಸದ ಮೂಲಕ ಮಾಡಿ ತೋರಿಸಬೇಕು ಎಂದು ಅಂದುಕೊಂಡಿದ್ದೇನೆ. ನನಗೆ ಯಾವ ಒತ್ತಡವು ಇಲ್ಲ. ಆಗ ನನಗೆ ಬಹಳ ದೊಡ್ಡ ಚಿತ್ರವಾಗಿತ್ತು. ಸಿನಿಮಾ ಯಾವಾಗಲೂ ಕಲಿಯುವ ಪ್ರೊಸೆಸ್ ಅದನ್ನು ಮಾಡುತ್ತಿದ್ದೇನೆ ಎಂದಿದ್ದರು ರಿಷಬ್.
ಈ ವೇಳೆ, ಸಿನಿಮಾಗೋಸ್ಕರ ಒಂದು ವರ್ಷದಿಂದ ಗಡ್ಡ ಕೂದಲು ಬಿಟ್ಟಿರೋದಾಗಿ ತಿಳಿಸಿದ್ದರು. ಇನ್ನೂ ‘ಕಾಂತಾರ 1’ ಚಿತ್ರೀಕರಣ ಪೂರ್ತಿ ಮುಗಿದ ಮೇಲೆ ಅಭಿಮಾನಿಗಳಿಗೆ, ಮಾಧ್ಯಮದವರಿಗೆ ಚಿತ್ರೀಕರಣ ಸ್ಥಳಕ್ಕೆ ಕರೆಯುತ್ತೇವೆ ಎಂದು ರಿಷಬ್ ತಿಳಿಸಿದ್ದಾರೆ. ಚಿತ್ರೀಕರಣ ಮುಗಿಯುವವರೆಗೆ ಬಹಳ ಗೌಪ್ಯತೆಯನ್ನು ಕಾಪಾಡಬೇಕಾಗುತ್ತದೆ ಎಂದು ಹೇಳಿದ್ದಾರೆ. ನಮ್ಮ ಸಿನಿಮಾ ಪೂರ್ತಿ ಕರಾವಳಿ ಭಾಗದಲ್ಲಿ ಚಿತ್ರೀಕರಣ ಮಾಡುತ್ತೇವೆ ಎಂದು ರಿಷಬ್ ಮಾತನಾಡಿದ್ದರು.
ಕಾಂತಾರ ಸಿನಿಮಾ ಯಶಸ್ಸಿನ ನಂತರ ಕಾಂತಾರ 1 ಬಗ್ಗೆ ಸಾಕಷ್ಟು ತಲೆ ಕೆಡಿಸಿಕೊಂಡಿದ್ದಾರೆ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishabh Shetty). ಕಾಂತರ ಯಶಸ್ಸನ್ನು ಮೀರಿಸುವಂತಹ ಮತ್ತೊಂದು ಕಾತಾರ ಕೊಡಲು ರಿಷಬ್ ಏನೆಲ್ಲ ಕಸರತ್ತು ಮಾಡುತ್ತಿದ್ದಾರೆ. ಈ ಸಿನಿಮಾಗಾಗಿ ಅವರು ಕೇರಳದ ಹೆಸರಾಂತ ಸಮರ ಕಲೆ ಕಳರಿಪಯಟ್ಟು (Kalaripayattu) ಕಲಿಯುತ್ತಿದ್ದಾರಂತೆ. ಜೊತೆಗೆ ಕುದುರೆ ಸವಾರಿ ಕೂಡ ಶುರು ಮಾಡಿದ್ದಾರೆ. ಚಿತ್ರಕ್ಕಾಗಿ ಹಾಕಲಾದ ಸೆಟ್ ನಲ್ಲೇ ಈ ಕರಸತ್ತು ನಡೆದಿದೆ.
ಕಾಂತಾರ 1 (Kantara 1) ಸಿನಿಮಾ ಟೀಮ್ ನಿಂದ ಮತ್ತೊಂದು ಸುದ್ದಿ ಹೊರಬಿದ್ದಿದೆ. ಈ ಸಿನಿಮಾಗೆ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಮೂಲಕ ಫೇಮಸ್ ಆದ ರುಕ್ಮಿಣಿ ವಸಂತ್ (Rukmini Vasanth) ನಾಯಕಿ ಎಂದು ಹೇಳಲಾಗುತ್ತಿದೆ. ಆದರೆ, ಅಧಿಕೃತವಾಗಿ ಘೋಷಣೆ ಆಗಿಲ್ಲ. ಮುಂದಿನ ದಿನಗಳಲ್ಲಿ ಆಗಬಹುದು ಎನ್ನುವುದು ಆಪ್ತರ ಹೇಳಿಕೆ.
ಈ ನಡುವೆ ಚಿತ್ರೀಕರಣಕ್ಕಾಗಿ ಕುಂದಾಪುರದಲ್ಲಿ (Kundapur) ಬೃಹತ್ ಆಧುನಿಕ ಸೆಟ್ ವೊಂದನ್ನು ನಿರ್ಮಾಣ ಮಾಡಿದೆ ಹೊಂಬಾಳೆ ಫಿಲ್ಮ್ಸ್. ರಾಮೋಜಿರಾವ್ ಫಿಲ್ಮ್ಸ್ ಬಿಟ್ಟರೆ, ಈ ಪ್ರಮಾಣದಲ್ಲಿ ತಯಾರಾದ ಸೆಟ್ ಇದಾಗಲಿದೆ. 200 x 200 ಅಡಿ ಒಳಾಂಗಣ ಹೊಂದಿರುವ ಸೆಟ್ ಇದಾಗಿದೆಯಂತೆ.
ಕಾಡಿನ ಮಧ್ಯ ಕೆಲವು ದೃಶ್ಯಗಳನ್ನು ರಿಷಬ್ ಚಿತ್ರೀಕರಿಸಿದರೆ ಒಳಾಗಂಣದ ಬಹುತೇಕ ಚಿತ್ರೀಕರಣ ಇದೇ ಸೆಟ್ ನಲ್ಲೇ ನಡೆಯಲಿದೆಯಂತೆ. ಕುದುರೆ ಸವಾರಿ ಸೇರಿದಂತೆ ಹಲವಾರು ಕಸರತ್ತುಗಳನ್ನು ಈ ಸೆಟ್ ನಲ್ಲೇ ಮಾಡುವಷ್ಟು ದೊಡ್ಡದಾಗಿ ಅದು ನಿರ್ಮಾಣವಾಗಿದೆ. ಅಲ್ಲಿಯೇ ಡಬ್ಬಿಂಗ್, ಎಡಿಟಂಗ್ ಸ್ಟುಡಿಯೋ ಕೂಡ ನಿರ್ಮಾಣವಾಗಿದೆಯಂತೆ.
ಈಗಾಗಲೇ ಚಿತ್ರೀಕರಣವನ್ನು ಆರಂಭಿಸಿರುವ ರಿಷಬ್, 20 ದಿನಗಳ ಕಾಲ ಮೊದಲನೇ ಹಂತದ ಶೂಟಿಂಗ್ ಇರಲಿದೆಯಂತೆ. ಈಗಾಗಲೇ ಕಾಡಿನ ಕೆಲವು ದೃಶ್ಯಗಳನ್ನು ಸೆರೆ ಹಿಡಿಯಲಾಗಿದ್ದು, ಸೆಟ್ ನಲ್ಲೂ ಮುಂದಿನ ದಿನಗಳಲ್ಲಿ ಚಿತ್ರೀಕರಣ ಮುಂದುವೆಯಲಿದೆ. ಕುಂದಾಪುರದಲ್ಲೇ ಬಹುತೇಕ ಟೀಮ್ ವಾಸ್ತವ್ಯ ಹೂಡಿದೆ.
ಕಥೆಯ ಸಾರಾಂಶವನ್ನು ಹೇಳುವಂತ ದೃಶ್ಯಗಳು ಈಗಾಗಲೇ ಚಿತ್ರೀಕರಣವಾಗಿದ್ದು, ಮುಂದಿನ ದಿನಗಳಲ್ಲಿ ಒಂದೊಂದೇ ಪ್ರಮುಖ ಪಾತ್ರಗಳು ಜೊತೆಯಾಗುತ್ತವೆಯಂತೆ. ಅಂದಹಾಗೆ ಸೆಟ್ ಫೋಟೋಗಳು ಸೋರಿಕೆಯಾಗದಂತೆ ಮುತುವರ್ಜಿ ವಹಿಸಿದ್ದಾರೆ ರಿಷಬ್ ಅಂಡ್ ಟೀಮ್.
ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸುತ್ತಿರುವ ಕಾಂತಾರ 1 (Kantara 1) ಸಿನಿಮಾದ ಚಿತ್ರೀಕರಣಕ್ಕಾಗಿ ಕುಂದಾಪುರದಲ್ಲಿ (Kundapur) ಬೃಹತ್ ಆಧುನಿಕ ಸೆಟ್ ವೊಂದನ್ನು ನಿರ್ಮಾಣ ಮಾಡಿದೆ ಹೊಂಬಾಳೆ ಫಿಲ್ಮ್ಸ್. ರಾಮೋಜಿರಾವ್ ಫಿಲ್ಮ್ಸ್ ಬಿಟ್ಟರೆ, ಈ ಪ್ರಮಾಣದಲ್ಲಿ ತಯಾರಾದ ಸೆಟ್ ಇದಾಗಲಿದೆ. 200 x 200 ಅಡಿ ಒಳಾಂಗಣ ಹೊಂದಿರುವ ಸೆಟ್ ಇದಾಗಿದೆಯಂತೆ.
ಕಾಡಿನ ಮಧ್ಯ ಕೆಲವು ದೃಶ್ಯಗಳನ್ನು ರಿಷಬ್ ಚಿತ್ರೀಕರಿಸಿದರೆ ಒಳಾಗಂಣದ ಬಹುತೇಕ ಚಿತ್ರೀಕರಣ ಇದೇ ಸೆಟ್ ನಲ್ಲೇ ನಡೆಯಲಿದೆಯಂತೆ. ಕುದುರೆ ಸವಾರಿ ಸೇರಿದಂತೆ ಹಲವಾರು ಕಸರತ್ತುಗಳನ್ನು ಈ ಸೆಟ್ ನಲ್ಲೇ ಮಾಡುವಷ್ಟು ದೊಡ್ಡದಾಗಿ ಅದು ನಿರ್ಮಾಣವಾಗಿದೆ. ಅಲ್ಲಿಯೇ ಡಬ್ಬಿಂಗ್, ಎಡಿಟಂಗ್ ಸ್ಟುಡಿಯೋ ಕೂಡ ನಿರ್ಮಾಣವಾಗಿದೆಯಂತೆ.
ಈಗಾಗಲೇ ಚಿತ್ರೀಕರಣವನ್ನು ಆರಂಭಿಸಿರುವ ರಿಷಬ್, 20 ದಿನಗಳ ಕಾಲ ಮೊದಲನೇ ಹಂತದ ಶೂಟಿಂಗ್ ಇರಲಿದೆಯಂತೆ. ಈಗಾಗಲೇ ಕಾಡಿನ ಕೆಲವು ದೃಶ್ಯಗಳನ್ನು ಸೆರೆ ಹಿಡಿಯಲಾಗಿದ್ದು, ಸೆಟ್ ನಲ್ಲೂ ಮುಂದಿನ ದಿನಗಳಲ್ಲಿ ಚಿತ್ರೀಕರಣ ಮುಂದುವೆಯಲಿದೆ. ಕುಂದಾಪುರದಲ್ಲೇ ಬಹುತೇಕ ಟೀಮ್ ವಾಸ್ತವ್ಯ ಹೂಡಿದೆ.
ಕಥೆಯ ಸಾರಾಂಶವನ್ನು ಹೇಳುವಂತ ದೃಶ್ಯಗಳು ಈಗಾಗಲೇ ಚಿತ್ರೀಕರಣವಾಗಿದ್ದು, ಮುಂದಿನ ದಿನಗಳಲ್ಲಿ ಒಂದೊಂದೇ ಪ್ರಮುಖ ಪಾತ್ರಗಳು ಜೊತೆಯಾಗುತ್ತವೆಯಂತೆ. ಅಂದಹಾಗೆ ಸೆಟ್ ಫೋಟೋಗಳು ಸೋರಿಕೆಯಾಗದಂತೆ ಮುತುವರ್ಜಿ ವಹಿಸಿದ್ದಾರೆ ರಿಷಬ್ ಅಂಡ್ ಟೀಮ್.
– ಶಿವಣ್ಣ, ರಿಷಭ್, ರಕ್ಷಿತ್ ಹಾಗೂ ಅನುಶ್ರೀ ಹೇಳಿದ್ದು ಹೀಗೆ..
ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಹತ್ಯೆ ಪ್ರಕರಣ ಸಂಬಂಧ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ. ಈ ಬೆನ್ನಲ್ಲೇ ಕನ್ನಡ ಚಿತ್ರರಂಗ ಕೂಡ ವಿದ್ಯಾರ್ಥಿನಿ ಸಾವಿಗೆ ಮರುಕ ವ್ಯಕ್ತಪಡಿಸಿದೆ. ನಟ- ನಟಿಯರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಳ್ಳುವ ಮೂಲಕ ನೇಹಾ ಹತ್ಯೆಯನ್ನು ಖಂಡಿಸಿದ್ದಾರೆ.
ಇದೀಗ ಪ್ರಕರಣ ಸಂಬಂಧ ನಟ ದರ್ಶನ್ (Darshan) ಅವರು ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಳ್ಳುವ ಮೂಲಕ “ಜಸ್ಟೀಸ್ ಫಾರ್ ನೇಹಾ” ಅಭಿಯಾನಕ್ಕೆ ನಟ ಸಾಥ್ ನೀಡಿದ್ದಾರೆ. ಪ್ರೀತಿಯ ಹೆಸರಲ್ಲಿ ಇಂತ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ. ಇನ್ನು ಬಾಳಿ ಬದುಕಬೇಕಿದ್ದ 23 ವಯಸ್ಸಿನ ನೇಹಾ ಹಿರೇಮಠ್ ರವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ದೇವರು ನೀಡಲಿ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಇಂಥ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಜನಸಾಮಾನ್ಯರ ಕೈಗೆ ಒಪ್ಪಿಸಿ: ನೇಹಾ ಕೊಲೆ ಬಗ್ಗೆ ನಟಿ ರಚಿತಾ ರಾಮ್ ಪ್ರತಿಕ್ರಿಯೆ
ಈ ರೀತಿಯ ಅಮಾನುಷ ಘಟನೆ ಮತ್ತೆಂದೂ ಮರುಕಳಿಸದಿರಲಿ. ಮಗಳನ್ನು ಕಳೆದುಕೊಂಡ ಆ ತಂದೆ ತಾಯಿಯ ಆಕ್ರಂದನ ನೋಡಲಾಗದು. ನಮ್ಮ ಸರ್ಕಾರ, ನ್ಯಾಯಾಂಗ ವ್ಯವಸ್ಥೆ, ಹಾಗೂ ಪೊಲೀಸ್ ಆದಷ್ಟು ಬೇಗ ನೇಹಾ ಹಿರೇಮಠ್ ಸಾವಿಗೆ ನ್ಯಾಯ ದೊರಕುವಂತೆ ಮಾಡಲಿ ಎನ್ನುವುದು ನನ್ನ ಕಳಕಳಿಯ ವಿನಂತಿ. #NehaHiremath
ಸಾವಿಗೆ ನ್ಯಾಯ ದೊರಕಲಿ: ಈ ರೀತಿಯ ಅಮಾನುಷ ಘಟನೆ ಮತ್ತೆಂದೂ ಮರುಕಳಿಸದಿರಲಿ. ಮಗಳನ್ನು ಕಳೆದುಕೊಂಡ ಆ ತಂದೆ-ತಾಯಿಯ ಆಕ್ರಂದನ ನೋಡಲಾಗದು. ನಮ್ಮ ಸರ್ಕಾರ, ನ್ಯಾಯಾಂಗ ವ್ಯವಸ್ಥೆ, ಹಾಗೂ ಪೊಲೀಸ್ ಆದಷ್ಟು ಬೇಗ ನೇಹಾ ಹಿರೇಮಠ್ ಸಾವಿಗೆ ನ್ಯಾಯ ದೊರಕುವಂತೆ ಮಾಡಲಿ ಎನ್ನುವುದು ನನ್ನ ಕಳಕಳಿಯ ವಿನಂತಿ ಎಂದು ನಟ ಶಿವರಾಜ್ ಕುಮಾರ್ (Shivaraj Kumar) ಅವರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ತಪ್ಪಿತಸ್ಥರ ಮೇಲೆ ಕ್ರಮಕ್ಕೆ ವಿನಂತಿ: ನೇಹಾ ಹಿರೇಮಠ್ (Neha Hiremath) ಅವರ ಘಟನೆ ಅಮಾನವೀಯವಾಗಿದೆ. ಇಂತಹ ಘಟನೆ ಮರುಕಳಿಸದಂತೆ ಕಾನೂನು ಕ್ರಮಗಳನ್ನು ತಪ್ಪಿತಸ್ಥರ ಮೇಲೆ ಕೈಗೊಳ್ಳಬೇಕೆಂದು ವಿನಂತಿಸುತ್ತಾ, ನೇಹಾ ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ದೇವರು ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂಬುದಾಗಿ ನಟ ರಿಷಬ್ ಶೆಟ್ಟಿ (Rishabh Shetty) ಹಾಗೂ ರಕ್ಷಿತ್ ಶೆಟ್ಟಿ (Rakshit Shetty) ತಮ್ಮ ಎಕ್ಸ್‌ನಲ್ಲಿ ಬರೆದುಕೊಳ್ಳುವ ಮೂಲಕ #JusticeForNeha ಅಭಿಯಾನಕ್ಕೆ ಕೈಜೋಡಿಸಿದ್ದಾರೆ.
ಉತ್ತರ ಒಂದೇ ನ್ಯಾಯ: ಒಳ್ಳೇ ಬುದ್ದಿ ಹೇಳಿಕೊಡುವ ವಿದ್ಯಾ ದೇಗುಲವೇ ಕಲುಷಿತವಾಯ್ತು. ಸಮಾಜದಲ್ಲಿ ಬಾಳಿ ಬದುಕಬೇಕಾದ ಒಂದು ಹೆಣ್ಣಿನ ಜೀವ ಮಣ್ಣಾಯ್ತು. ಇದಕ್ಕೆ ಉತ್ತರ ಒಂದೇ …. ” ನ್ಯಾಯ “, ಆ ಕಣ್ಣಿರಿಗೆ ಉತ್ತರ ” ನ್ಯಾಯ ” ಎಂದು ನಟಿ ಕಂ Anchor ಅನುಶ್ರೀ (Anushree) ಬೇಸರ ವ್ಯಕ್ತಪಡಿಸಿದ್ದಾರೆ.
ಪ್ರಕರಣದ ವಿವರ: ಏ.18 ರ ಗುರುವಾರ ಸಂಜೆ 4.45ರ ಸುಮಾರಿಗೆ ಆರೋಪಿ ಫಯಾಜ್ (Fayaz) ತನ್ನ ಕೈಯಲ್ಲಿ ಚಾಕು ಹಿಡಿದು, ಮಾಸ್ಕ್ ಧರಿಸಿಕೊಂಡು ಹುಬ್ಬಳ್ಳಿ ಬಿವಿಬಿ ಕಾಲೇಜು ಕ್ಯಾಂಪಸ್ ಒಳಗೆ ಎಂಟ್ರಿ ಕೊಟ್ಟಿದ್ದನು. ಇತ್ತ ವಿದ್ಯಾರ್ಥಿನಿ ನೇಹಾ ಹಿರೇಮಠ ಕಾಲೇಜಿನಿಂದ ಹೊರಬರುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಆಕೆಯ ಕುತ್ತಿಗೆ, ಹೊಟ್ಟೆ ಹಾಗೂ ಬೆನ್ನಿನ ಭಾಗಕ್ಕೆ ಮನಬಂದಂತೆ ಚಾಕುವಿನಿಂದ ಇರಿದು ಗಂಭೀರ ಗಾಯಗೊಳಿಸಿದ್ದಾನೆ. ನೇಹಾಳನ್ನು ಕಾಲೇಜು ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿನಿಯರು ಕೂಡಲೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅದಾಗಲೇ ನೇಹಾ ಮೃತಪಟ್ಟಿದ್ದಾಳೆ.
ಇತ್ತ ಕೊಲೆ ಮಾಡಿ ಪರಾರಿಯಾಗಲು ಯತ್ನಿಸಿ ಕಿಮ್ಸ್ ಆಸ್ಪತ್ರೆಯ ಹಿಂಬಂದಿ ಅವಿತಿದ್ದ ಫಯಾಜ್‍ನನ್ನು ಬಂಧಿಸಲಾಗಿದೆ. ಸುದ್ದಿ ಹಬ್ಬುತ್ತಿದ್ದಂತೆಯೇ ಹುಬ್ಬಳ್ಳಿಯಾದ್ಯಂತ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಇಳಿದವು. ಆರೋಪಿಯನ್ನು ಎನ್ ಕೌಂಟರ್ ಮಾಡಿ ಇಲ್ಲವೇ ಗಲ್ಲಿಗೇರಿಸಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಇಂದು ಕೂಡ ಪ್ರತಿಭಟನೆ ಮುಂದುವರಿದಿದೆ. ಜೊತೆಗೆ #JusticeForNeha ಎಂಬ ಅಭಿಯಾನ ಕೂಡ ಸಾಮಾಜಿಕ ಜಾಲತಾಣದಲ್ಲಿ ಆರಂಭಿಸಲಾಗಿದೆ.
ಕಾಂತಾರ ಸಿನಿಮಾದ ಮೂಲಕ ಸ್ಟಾರ್ ನಟಿಯಾಗಿ ಗುರುತಿಸಿಕೊಂಡಿರುವ ಸಪ್ತಮಿ ಗೌಡ (Sapthami Gowda) ಅವರಿಗೆ ಕಾಂತಾರ ಪ್ರೀಕ್ವೆಲ್ ಸಿನಿಮಾದಲ್ಲಿ ನಟಿಸುತ್ತಿಲ್ಲ. ಕಾರಣ, ಅವರಿಗೆ ಪಾತ್ರವಿಲ್ಲ. ಈ ಕುರಿತು ಮಾತನಾಡಿರುವ ಸಪ್ತಮಿ ಗೌಡ, ‘ಸಿನಿಮಾದಲ್ಲಿ ನನ್ನ ಪಾತ್ರವಿಲ್ಲ. ಹಾಗಾಗಿ ಹೇಗೆ ನಟಿಸೋಕೆ ಸಾಧ್ಯ? ನಾನು ಪ್ರೀಕ್ವೆಲ್ ನಲ್ಲಿ ನಟಿಸುತ್ತಿಲ್ಲ ಎಂದಿದ್ದಾರೆ.
ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸುತ್ತಿರುವ ಕಾಂತಾರ ಪ್ರೀಕ್ವೆಲ್ ಚಿತ್ರದ ಶೂಟಿಂಗ್ ಇಂದಿನಿಂದ (ಏ.15) ನಡೆಯಲಿದೆ. ಈಗಾಗಲೇ ಶೂಟಿಂಗ್ (Shooting) ಸ್ಥಳದಲ್ಲಿ ಚಿತ್ರತಂಡ ಬೀಡು ಬಿಟ್ಟಿದ್ದು, ಚಿತ್ರೀಕರಣಕ್ಕಾಗಿ ಬಹೃತ್ ಸೆಟ್ ಅನ್ನು ರಿಷಬ್ ಊರಿನಲ್ಲಿ ನಿರ್ಮಾಣವಾಗಿದೆ. ಅಲ್ಲಿಯೇ ಬಹುತೇಕ ಚಿತ್ರೀಕರಣ ನಡೆಯಲಿದೆ.
ಕಾಂತಾರ 1 (Kantara) ಚಿತ್ರದ ಶೂಟಿಂಗ್ ಇನ್ನೂ ಪ್ರಾರಂಭವೇ ಆಗಿಲ್ಲ. ಆಗಲೇ ಒಟಿಟಿಗೆ ಚಿತ್ರವನ್ನು ಮಾರಿಕೊಂಡಿದ್ದಾರೆ ನಿರ್ಮಾಪಕ ವಿಜಯ ಕಿರಗಂದೂರು. ಕಾಂತಾರ ಚಿತ್ರದ ಒಟಿಟಿ (OTT) ಹಕ್ಕನ್ನು ಪ್ರೈಮ್ ವಿಡಿಯೋ ಖರೀದಿಸಿದ್ದು, ಭಾರೀ ಮೊತ್ತಕ್ಕೆ ಸೇಲ್ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಅಂದಾಜಿನ ಪ್ರಕಾರ, ಸಿನಿಮಾದ ಬಜೆಟ್ ನ ಅರ್ಧದಷ್ಟು ದುಡ್ಡು ಒಟಿಟಿಯಿಂದಲೇ ಬಂದಿದೆ ಎನ್ನುವುದು ಸಿಕ್ಕಿರುವ ಮಾಹಿತಿ.
ಈ ನಡುವೆ ‘ಕಾಂತಾರ’ ಸಿನಿಮಾದ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ. ಅದರಲ್ಲೂ ರಿಷಬ್ ಸಿನಿಮಾದಲ್ಲಿ ಜ್ಯೂ.ಎನ್‌ಟಿಆರ್ (Jr.Ntr) ನಟಿಸುತ್ತಾರೆ ಎಂಬ ಸುದ್ದಿ ದೊಡ್ಡ ಮಟ್ಟದಲ್ಲೇ ವೈರಲ್ ಆಗಿದೆ. ರಿಷಬ್ ಶೆಟ್ಟಿ ಸೈಲೆಂಟಾಗಿದ್ದಾರೆ. ಕಾರಣ ಕರಾವಳಿಯಲ್ಲಿ ‘ಕಾಂತಾರ’ ಚಿತ್ರೀಕರಣದ ಸಿದ್ಧತೆ ನಡೆಯುತ್ತಿದೆ. ಹಾಗಾಗಿ ಕಾಣಿಸುತ್ತಿಲ್ಲ ಶಿವ. ಆದರೆ ಮೊನ್ನೆ ಅವರು ಜ್ಯೂ.ಎನ್‌ಟಿಆರ್ ಜೊತೆ ದಿಢೀರ್ ಎಂದು ಪೋಸ್ ಕೊಟ್ಟರು. ಅಲ್ಲಿಂದ ಆರಂಭ ತಲೆಗೊಂದು ಲೆಕ್ಕಾಚಾರ. ಹಾಗಾಗಿ ರಿಷಬ್ ಜೊತೆ ತಾರಕ್ ನಟಿಸುತ್ತಾರೆ ಎಂಬ ಗುಸು ಗುಸು ಶುರುವಾಗಿದೆ.
ರಿಷಬ್ ಶೆಟ್ಟಿ ಈಗ ಎಲ್ಲೂ ಕಾಣುತ್ತಿಲ್ಲ. ಅದನ್ನು ಅವರೇ ಹೇಳಿದ್ದರು. ಶೂಟಿಂಗ್ ಆರಂಭವಾದ ಮೇಲೆ ನಾಟ್ ರೀಚೆಬಲ್ ಎಂದಿದ್ದರು. ಅದನ್ನು ಮಾಡಿ ತೋರಿಸುತ್ತಿದ್ದಾರೆ. ಈ ನಡುವೆ ಟಾಲಿವುಡ್ ಯಂಗ್ ಟೈಗರ್ ಜ್ಯೂ.ಎನ್‌ಟಿಆರ್ ಜೊತೆ ಪತ್ನಿ ಪ್ರಗತಿ ಸಮೇತ ಕಾಣಿಸಿಕೊಂಡಿದ್ದಾರೆ. ಆಗ ಎಲ್ಲರೂ ಸೇರಿ ಫೋಟೊ ತೆಗೆಸಿಕೊಂಡರು. ಆಗ ಆಕಾಶಕ್ಕೇರಿದ ಗಾಳಿಪಟದ ಹಾರಾಟ ಈಗಲೂ ನಿಂತಿಲ್ಲ. ಇದರ ಪರಿಣಾಮ, ಕಾಂತಾರದಲ್ಲಿ ಜ್ಯೂ.ಎನ್‌ಟಿಆರ್ ಕೂಡ ಬಣ್ಣ ಹಚ್ಚಲಿದ್ದಾರೆ. ಹಿಂದೆಂದೂ ಕಾಣದ ರೀತಿಯಲ್ಲಿ ಕಾಣಿಸಲಿದ್ದಾರೆ. ಇದು ನಿಜವಾ ಸುಳ್ಳಾ? ಗೊತ್ತಿಲ್ಲ. ಈ ಸುದ್ದಿ ಮಾತ್ರ ಈಗ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿದೆ.
ಕನ್ನಡದ ಎರಡು ಭಾರೀ ಬಜೆಟ್ ಸಿನಿಮಾಗಳು ಒಂದೇ ದಿನ ಶೂಟಿಂಗ್ ಆರಂಭಿಸುತ್ತಿವೆ. ಯಶ್ (Yash) ನಟನೆಯ ಟಾಕ್ಸಿಕ್ (Toxic) ಮತ್ತು ರಿಷಬ್ ಶೆಟ್ಟಿ (Rishabh Shetty) ನಟಿಸಿ, ನಿರ್ದೇಶನ ಮಾಡುತ್ತಿರುವ ಕಾಂತಾರ (Kantara) ಪ್ರೀಕ್ವೆಲ್ ಚಿತ್ರಗಳು ಏಪ್ರಿಲ್ 15ರಿಂದ ಚಿತ್ರೀಕರಣ ಆರಂಭಿಸುತ್ತಿವೆ. ಕಾಂತಾರ ಚಿತ್ರೀಕರಣ ಕುಂದಾಪುರದಿಂದ ಶುರುವಾದರೆ, ಟಾಕ್ಸಿಕ್ ಶೂಟಿಂಗ್ ಬೆಂಗಳೂರಿನಲ್ಲೇ ನಡೆಯಲಿದೆ.
ಕುಂದಾಪುರದಲ್ಲಿ ಕಾಂತಾರ ಚಿತ್ರಕ್ಕಾಗಿ ಬೃಹತ್ ಸೆಟ್ ಹಾಕಲಾಗಿದ್ದು, ಅಲ್ಲಿಯೇ ಬಹುತೇಕ ಒಳಾಂಗದ ಚಿತ್ರೀಕರಣ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರಂತೆ. ನಂತರ ಕಾಡು, ಮೇಡುಗಳಲ್ಲಿ ಶೆಟ್ಟರ ಕ್ಯಾಮೆರಾ ಹಿಡಿದು ಹೊರಡಲಿದ್ಧಾರೆ. ಈ ಹಿಂದೆಯೇ ಚಿತ್ರೀಕರಣ ಶುರುವಾಗಿತ್ತು ಎನ್ನುವ ಸುದ್ದಿ ಹರಿದಾಡುತ್ತಿತ್ತು. ಆದರೆ, ಏಪ್ರಿಲ್ 15ರಿಂದ ಪ್ರಾರಂಭವಾಗುತ್ತಿದೆ.
ಇತ್ತ ಟಾಕ್ಸಿಕ್ ಸಿನಿಮಾದ ಚಿತ್ರೀಕರಣಕ್ಕಾಗಿ ಬೆಂಗಳೂರಿನ ಎಚ್.ಎಂ.ಟಿ ಫ್ಯಾಕ್ಟರಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ ಯಶ್. ಈ ಆವರಣದಲ್ಲೇ ಬೃಹತ್ ಸೆಟ್ ಹಾಕಲಾಗಿದೆ. ಒಳಾಂಗಣದ ಬಹುತೇಕ ಚಿತ್ರೀಕರಣ ಇದೇ ಸೆಟ್ ನಲ್ಲೇ ನಡೆಯಲಿದೆ. ನಂತರ ಮುಂಬೈಗೆ ಚಿತ್ರೀಕರಣ ತಂಡ ಶಿಫ್ಟ್ ಆಗಲಿದೆ ಎನ್ನುವ ಮಾಹಿತಿ ಇದೆ.
ಕಾಂತಾರ ಪ್ರೀಕ್ವೆಲ್ ಒಟ್ಟು ಬಜೆಟ್ 60 ಕೋಟಿ ಎಂದು ಹೇಳಲಾಗುತ್ತಿದೆ. ಈ ಹಿಂದಿನ ಕಾಂತಾರ ಚಿತ್ರಕ್ಕೆ ರಿಷಬ್ ಖರ್ಚು ಮಾಡಿದ್ದು ಕೇವಲ 18 ಕೋಟಿ ರೂಪಾಯಿ. ಈಗ ಅದು 60 ಕೋಟಿ ರೂಪಾಯಿಗೆ ಹಿಗ್ಗಿದೆ. ಕಾರಣ ಸ್ಕ್ರಿಪ್ಟ್ ಆ ರೀತಿಯಲ್ಲೇ ರೆಡಿ ಆಗಿದೆ. ಮತ್ತು ದೊಡ್ಡ ಮಟ್ಟದಲ್ಲಿ ಮೇಕಿಂಗ್ ಮಾಡಲಾಗುತ್ತಿದೆ.
ಗಾಂಧಿನಗರದಲ್ಲಿ ಹರಿದಾಡುತ್ತಿರುವ ತಾಜಾ ಸುದ್ದಿಯ ಪ್ರಕಾರ ಟಾಕ್ಸಿಕ್ ಬಜೆಟ್ 150 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಆದರೆ, ಈವರೆಗೂ ಬಜೆಟ್ ಕುರಿತಾಗಿ ಚಿತ್ರತಂಡವಾಗಲಿ ಅಥವಾ ನಿರ್ಮಾಪಕರಾಗಲಿ ಅಧಿಕೃತವಾಗಿ ಹೇಳಿಲ್ಲ. ಯಶ್ ಸಿನಿಮಾ ಬಜೆಟ್ ನೂರು ಕೋಟಿ ಇರಲೇಬೇಕು ಎಂದು ವಿಶ್ಲೇಷಿಸಲಾಗುತ್ತಿದೆ.