Tag: Rishabh Shetty

  • ‘ಕಾಂತಾರ’ ಮೆಚ್ಚಿ ರಿಷಬ್ ಶೆಟ್ಟಿಗೆ ಚಿನ್ನದ ಪೆಂಡೆಂಟ್ ಕೊಟ್ಟ ರಜನಿಕಾಂತ್

    ‘ಕಾಂತಾರ’ ಮೆಚ್ಚಿ ರಿಷಬ್ ಶೆಟ್ಟಿಗೆ ಚಿನ್ನದ ಪೆಂಡೆಂಟ್ ಕೊಟ್ಟ ರಜನಿಕಾಂತ್

    ಸೂಪರ್ ಸ್ಟಾರ್ ರಜನಿಕಾಂತ್ ಎರಡು ಮೂರು ವಾರಗಳ ಹಿಂದೆಯಷ್ಟೇ ಕಾಂತಾರ (Kantara) ಸಿನಿಮಾ ನೋಡಿ, ರಿಷಬ್ ಶೆಟ್ಟಿ ಅವರನ್ನು ತಮ್ಮ ಮನೆಗೆ ಕರೆಯಿಸಿಕೊಂಡಿದ್ದರು. ತಮ್ಮ ಮನೆಯ ಗೇಟ್ ವರೆಗೂ ಬಂದು, ರಿಷಬ್ (Rishabh Shetty) ಅವರನ್ನು ಬರಮಾಡಿಕೊಂಡಿದ್ದರು. ಬರೋಬ್ಬರಿ ಒಂದು ಗಂಟೆಗೂ ಹೆಚ್ಚು ಕಾಲ ರಿಷಬ್ ಜೊತೆ ಮಾತನಾಡಿ, ಹಲವು ವಿಚಾರಗಳನ್ನು ಹಂಚಿಕೊಂಡಿದ್ದರು. ಈ ನಡುವೆ ರಿಷಬ್ ಅವರನ್ನು ಬೀಳ್ಕೊಡುವಾಗ ಚಿನ್ನದ ಸರ ಮತ್ತು ಬಾಬಾ ಇರುವಂತಹ ಲಾಕೆಟ್  (ಪೆಂಡೆಂಟ್) ಕೊಟ್ಟಿದ್ದಾರೆ.

    ರಜನಿ (Rajinikanth) ತಮ್ಮ ಗುರುಗಳಾದ ಬಾಬಾ ಅವರನ್ನು ಅತೀ ಹೆಚ್ಚು ಪೂಜಿಸುತ್ತಾರೆ. ಬಾಬಾ ಅವರ ಕೈ ಬೆರಳಿನ ಸಿಂಬಲ್ ಇರುವಂತಹ ಲಾಕೆಟ್ (Pendant) ಗಳನ್ನು ರೆಡಿ ಮಾಡಿಸಿಕೊಂಡು ತಮ್ಮ ಬಳಿ ಇಟ್ಟುಕೊಂಡಿದ್ದಾರೆ. ಯಾರಾದರೂ ಮೆಚ್ಚುವಂತಹ ಕೆಲಸ ಮಾಡಿದಾಗ, ಅವರನ್ನು ಕರೆದು ಲಾಕೆಟ್ ನೀಡುತ್ತಾರೆ. ಈಗ  ಲಾಕೆಟ್ ಪಡೆಯುವಂತಹ ಅದೃಷ್ಟ ರಿಷಬ್ ಪಾಲಾಗಿದೆ. ಬಾಬಾ ಇರುವಂತಹ ಚಿನ್ನದ ಲಾಕೆಟ್ ರಿಷಬ್ ಕೊರಳನ್ನು  ಅಲಂಕರಿಸಿದೆ. ಇದನ್ನೂ ಓದಿ:ಕೊನೆಗೂ ಮದುವೆ ವಿಚಾರ ರಿವೀಲ್ ಮಾಡಿದ್ರು ತಮಿಳು ನಟ ವಿಶಾಲ್

    ‘ಅದೊಂದು ಅವಿಸ್ಮರಣೀಯ ಗಳಿಗೆ ಆಗಿತ್ತು. ಒಂದು ಗಂಟೆಗಳ ಕಾಲ ರಜನಿಕಾಂತ್ ಅವರೊಂದಿಗೆ ಮಾತನಾಡಲು ಅವಕಾಶ ಸಿಕ್ಕಿತ್ತು. ತುಂಬಾ ದಿನಗಳ ನಂತರ ಒಂದೊಳ್ಳೆ ಸಿನಿಮಾ ನೋಡಿದೆ ಎಂದು ಸ್ವತಃ ಅವರೇ ಹೇಳಿದಾಗ ನನಗಾದ ಸಂಭ್ರಮ  ಅಷ್ಟಿಷ್ಟಲ್ಲ. ರಜನಿ ಅವರ ಜೊತೆ ಹಲವು ವಿಚಾರಗಳನ್ನು ಹಂಚಿಕೊಂಡೆ. ಕಾಂತಾರ ಸಿನಿಮಾದಲ್ಲಿ ಬಿಡಿ ಎಸೆದು ಬಾಯಿಗೆ ಹಾಕಿಕೊಳ್ಳುವ ದೃಶ್ಯವನ್ನು ನಿಮ್ಮನ್ನೇ ನೋಡಿ ಕಲಿತದ್ದು ಎಂದು ಹೇಳಿದಾಗ ಆನಂದದಿಂದ ನಕ್ಕರು’ ಎಂದಿದ್ದಾರೆ ರಿಷಬ್ ಶೆಟ್ಟಿ.

    ಕಾಂತಾರ ಸಿನಿಮಾದ ಬಗ್ಗೆ ಅವರು ಕೂಡ ಹಲವು ವಿಚಾರಗಳನ್ನು ಮಾತನಾಡಿದರು. ಕಾಂತಾರ ಯಾಕೆ ಇಷ್ಟವಾಯಿತು ಎನ್ನುವ ಕುರಿತು ಸುದೀರ್ಘವಾಗಿ ಮಾತನಾಡಿದರು. ರಜನಿಕಾಂತ್ ಅವರು ಹಾಗೆ ಹೇಳಿದ್ದು ನನಗೆ ದೊಡ್ಡ ಗೌರವ ಸಿಕ್ಕಂತಾಗಿದೆ. ಅವರೊಂದಿಗೆ ಕಳೆದ ಕ್ಷಣಗಳನ್ನೂ ನಾನು ಯಾವತ್ತೂ ಮರೆಯುವುದಕ್ಕೆ ಸಾಧ್ಯವಿಲ್ಲ ಎಂದಿದ್ದಾರೆ ರಿಷಬ್ ಶೆಟ್ಟಿ.

    Live Tv
    [brid partner=56869869 player=32851 video=960834 autoplay=true]

  • ‘ಕಾಂತಾರ’ ಚಿತ್ರಕ್ಕಾಗಿ ನಡೆದ ಫೋಟೋ ಶೂಟ್ : ಲೀಲಾ ಮತ್ತು ಶಿವ ಮುದ್ದು ಮುದ್ದು

    ‘ಕಾಂತಾರ’ ಚಿತ್ರಕ್ಕಾಗಿ ನಡೆದ ಫೋಟೋ ಶೂಟ್ : ಲೀಲಾ ಮತ್ತು ಶಿವ ಮುದ್ದು ಮುದ್ದು

    ಕಾಂತಾರ (Kantara) ಸಿನಿಮಾದ ನಂತರ ಈ ಸಿನಿಮಾದ ನಾಯಕಿ ಸಪ್ತಮಿ ಗೌಡಗೆ (Sapthami Gowda) ಸಖತ್ ಡಿಮಾಂಡ್ ಕ್ರಿಯೇಟ್ ಆಗಿದೆ. ಕನ್ನಡದಲ್ಲೇ ಈಗಾಗಲೇ ಎರಡು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ಈ ಹೊತ್ತಲ್ಲಿ ಸಪ್ತಮಿ ಗೌಡ ಕಾಂತಾರ ಸಿನಿಮಾದ ಲೀಲಾ ಪಾತ್ರಕ್ಕಾಗಿ ನಡೆಸಿದ ಫೋಟೋ ಶೂಟ್ (Photoshoot) ಆಚೆ ಬಂದಿದೆ. ಈ ಫೋಟೋದಲ್ಲಿ ಸಪ್ತಮಿ ಗೌಡ ಸಖತ್ ಆಗಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ರಿಷಬ್ ಶೆಟ್ಟಿ (Rishabh Shetty) ಕೂಡ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.

    ಈ ನಡುವೆ ಸಪ್ತಮಿ ಗೌಡ ಅವರಿಗೆ ಪರಭಾಷೆಯಿಂದಲೂ ಅವರಿಗೆ ಅವಕಾಶಗಳು ಹುಡುಕಿಕೊಂಡು ಬರುತ್ತಿವೆ. ಪರಭಾಷೆಯಿಂದ ಆಫರ್ಸ್ ಬರುತ್ತಿವೆ ಎಂದು ಅವರು ಈಗಾಗಲೇ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಅದಕ್ಕೂ ಮುನ್ನ ಕನ್ನಡದ ಮತ್ತೊಂದು ಸಿನಿಮಾದಲ್ಲಿ ಅವರು ನಟಿಸುವ ಸಾಧ್ಯತೆ ಇದ್ದು, ಮಾತುಕತೆ ಕೂಡ ಆಗಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ಪತಿ ರಘು ಮುಖರ್ಜಿ ಮಾತಿಗೆ ಕಣ್ಣೀರಿಟ್ಟ ಅನುಪ್ರಭಾಕರ್

    ಪೈಲ್ವಾನ್ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿರುವ ಕೃಷ್ಣ ಇದೀಗ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಅವರಿಗೆ ಸಿನಿಮಾವೊಂದು ಮಾಡುತ್ತಿದ್ದು, ಈಗಾಗಲೇ ಚಿತ್ರಕ್ಕೆ ಕಾಳಿ ಎಂದು ಹೆಸರಿಡಲಾಗಿದೆ. ಸಿನಿಮಾ ಟೈಟಲ್ ಸೇರಿದಂತೆ ಹಲವು ವಿಚಾರಗಳನ್ನೂ ಕೃಷ್ಣ ಮಾಧ್ಯಮಗಳ ಜೊತೆ ಹಂಚಿಕೊಂಡಿದ್ದಾರೆ. ಇದೇ ಸಿನಿಮಾಗೆ ಸಪ್ತಮಿ ಗೌಡ  ಅವರನ್ನೂ ಕೇಳಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ.

    ಸಪ್ತಮಿ ಗೌಡ ಅವರನ್ನು ಕೃಷ್ಣ  ಭೇಟಿಯಾಗಿ ಸಿನಿಮಾದ ಕಥೆ ಮತ್ತು ಪಾತ್ರದ ಹಿನ್ನೆಲೆಯನ್ನು ಹೇಳಿದ್ದಾರೆ ಎಂದು ಗೊತ್ತಾಗಿದ್ದು, ಬಹುಶಃ ಸಪ್ತಮಿ ಅವರೇ ಈ ಚಿತ್ರದ ನಾಯಕಿ ಎನ್ನುತ್ತಿದೆ ಗಾಂಧಿ ನಗರ ಮೂಲ. ಆದರೆ, ಈ ಕುರಿತು ಕೃಷ್ಣ ಆಗಲಿ ಅಥವಾ ಸಪ್ತಮಿ ಗೌಡ ಆಗಲಿ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ. ಮುಂದಿನ ದಿನಗಳಲ್ಲಿ ಹೇಳುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ.

    ಕಾಳಿ ಸಿನಿಮಾದ ಕಥೆಯೂ ರೋಚಕವಾಗಿದೆ. ಕಾವೇರಿ ನದಿ ಗಲಾಟೆಯಲ್ಲಿ ನಡೆದಂತಹ ನೈಜ ಪ್ರೇಮಕಥೆಯನ್ನು ಈ ಸಿನಿಮಾಗಾಗಿ ನಿರ್ದೇಶಕರು ಅಳವಡಿಸಿಕೊಂಡಿದ್ದಾರೆ. ಅಲ್ಲದೇ, ರೆಬಲ್ ಈ ಸಿನಿಮಾದಲ್ಲಿ ರಗಡ್ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದು, ಈಗಾಗಲೇ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ. ಸದ್ಯ ಅಭಿಷೇಕ್ ಬ್ಯಾಡ್ ಮ್ಯಾನರ್ಸ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಸದ್ಯದಲ್ಲೇ ಕಾಳಿ ಸಿನಿಮಾದ ಶೂಟಿಂಗ್ ನಲ್ಲೂ ಅವರು ಪಾಲ್ಗೊಳ್ಳಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಕಾಂತಾರ’ ಸಿನಿಮಾದ ವರಾಹ ರೂಪಂ ಹಾಡು ಡಿಲಿಟ್: ಕಾಪಿ ವಿವಾದಕ್ಕೆ ಟ್ವಿಸ್ಟ್

    ‘ಕಾಂತಾರ’ ಸಿನಿಮಾದ ವರಾಹ ರೂಪಂ ಹಾಡು ಡಿಲಿಟ್: ಕಾಪಿ ವಿವಾದಕ್ಕೆ ಟ್ವಿಸ್ಟ್

    ಕಾಂತಾರ (Kantara) ಸಿನಿಮಾದ ವರಾಹ ರೂಪಂ (Varaha Rupam) ಹಾಡನ್ನು ಕಾಪಿ ಮಾಡಲಾಗಿದೆ ಎನ್ನುವ ವಿಚಾರ ಹಲವು ದಿನಗಳಿಂದ ಸದ್ದು ಮಾಡುತ್ತಿದೆ. ನಮ್ಮ ಹಾಡನ್ನು ಕಾಪಿ ಮಾಡಲಾಗಿದೆ ಎಂದು ಮಲಯಾಳಂ ತೈಕ್ಕುಡಂ ಬ್ರಿಡ್ಜ್ ಬ್ಯಾಂಡ್ ಕಂಪನಿಯು ಹೇಳಿತ್ತು. ನ್ಯಾಯಾಲಯಕ್ಕೂ ದೂರು ಸಲ್ಲಿಕೆಯಾಗಿತ್ತು. ಆದರೆ, ನಿರ್ದೇಶಕ ರಿಷಬ್ ಶೆಟ್ಟಿ ಅದಕ್ಕೆ ಒಪ್ಪಿರಲಿಲ್ಲ. ನವರಸಮ್ ಆಲ್ಬಂನಿಂದ ಕದ್ದಿಲ್ಲ ಎಂದೇ ಹೇಳುತ್ತಾ ಬಂದಿದ್ದರು. ಆದರೆ, ನಿನ್ನೆಯಿಂದ ನಿರ್ಮಾಣ ಸಂಸ್ಥೆಯ ಯ್ಯೂಟ್ ನಿಂದ ಹಾಡನ್ನು ಡಿಲಿಟ್ (Delete) ಮಾಡಲಾಗಿದೆ.

    ಕಾಂತಾರ ಸಿನಿಮಾದಲ್ಲಿ ಕ್ಲೈಮ್ಯಾಕ್ಸ್ ನಲ್ಲಿ ಬರುವ ವರಾಹ ರೂಪಂ ಹಾಡನ್ನು (Song) ನಾವು ಕದ್ದಿಲ್ಲ. ಸುಖಾಸುಮ್ಮನೆ ಜನರನ್ನು ಹಾದಿ ತಪ್ಪಿಸುವ ಕೆಲಸ ನಡೆಯುತ್ತಿದೆ. ಯಾರೇ ಕೇಳಿದರೂ, ನಾವು ಅದನ್ನು ಕದ್ದ ಹಾಡಲ್ಲ ಎಂದು ಸಾಬೀತು ಪಡಿಸುತ್ತೇವೆ ಎಂದು ರಿಷಬ್ ಶೆಟ್ಟಿ (Rishabh Shetty) ಪ್ರತಿಕ್ರಿಯೆ ನೀಡಿದ್ದರು. ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದ ಅವರು, ಯಾವುದೇ ಕಾರಣಕ್ಕೂ ಅದು ಕದ್ದ ಮ್ಯೂಸಿಕ್ ಅಲ್ಲ ಎಂದು ನುಡಿದಿದ್ದರು. ಇದನ್ನೂ ಓದಿ:ಭಾರತಕ್ಕೆ ಬೈ ಹೇಳಿದ ಬೆನ್ನಲ್ಲೇ ಕ್ರಿಸ್‌ಮಸ್‌ಗೆ ಪ್ರಿಯಾಂಕಾ ಚೋಪ್ರಾ ತಯಾರಿ

    ಕಾಂತಾರ ಸಿನಿಮಾ ಅಂದಾಕ್ಷಣ ಥಟ್ಟನೆ ನೆನಪಾಗುವ ಹಾಡು ‘ವರಾಹ ರೂಪಂ’ ಗೀತೆ. ಚಿತ್ರದ ಕ್ಲೈಮ್ಯಾಕ್ಸ್ ನಲ್ಲಿ ಬರುವ ಈ ಗೀತೆಯು ಸಿನಿಮಾದ ಗಟ್ಟಿತನವನ್ನು ಮತ್ತಷ್ಟು ಹೆಚ್ಚಿಸಿತ್ತು. ಕ್ಲೈಮ್ಯಾಕ್ಸ್ ಜನರ ಮನಸ್ಸಿನಲ್ಲಿ ಉಳಿದುಕೊಳ್ಳಲು ಕಾರಣವೂ ಆಗಿತ್ತು. ಈ ಹಾಡಿನ ವಿರುದ್ಧ ಟ್ಯೂನ್ ಕದ್ದ ಆರೋಪ ಕೇಳಿ ಬಂದಿತ್ತು. ಇತ್ತೀಚೆಗಷ್ಟೇ ತೈಕ್ಕುಡಂ ಬ್ರಿಡ್ಜ್ ಬ್ಯಾಂಡ್‍ ನ ಸದಸ್ಯರು ಕೋರ್ಟಿಗೆ ಮೊರೆ ಹೋಗಿದ್ದರು. ಹಾಗಾಗಿ ಕೋಯಿಕ್ಕೋಡ್ ಕೋರ್ಟ್ ಸಿನಿಮಾದಲ್ಲಿ ಈ ಹಾಡು ಬಳಸದಂತೆ ತಡೆಯಾಜ್ಞೆ ನೀಡಿತ್ತು.

    ಆದರೂ, ಕಾಂತರ ಸಿನಿಮಾದ ತಂಡ ನಾವು ಯಾವುದೇ ರೀತಿಯಲ್ಲಿ ಹಾಡನ್ನು ಕಾಪಿ ಮಾಡಿಲ್ಲ. ಹಾಗಾಗಿ ಚಿತ್ರದಲ್ಲಿ ಆ ಹಾಡು ಇರತ್ತೆ ಎಂದು ಈವರೆಗೂ ಥಿಯೇಟರ್ ನಲ್ಲಿ ಅದನ್ನು ಮುಂದುವರೆಸಿಕೊಂಡು ಬಂದಿದ್ದರು. ಇದೀಗ ಮತ್ತೊಂದು ಕೇಸ್ ದಾಖಲಾಗಿದ್ದು, ಮಾತೃಭೂಮಿ ಮ್ಯೂಸಿಕ್ ಸಂಸ್ಥೆಯು ಮತ್ತೆ ಕೋರ್ಟ್ ಮೊರೆ ಹೋಗಿದೆ. ಹಾಗಾಗಿ ಅರ್ಜಿಯ ವಿಚಾರಣೆ ನಡೆಸಿರುವ ಪಾಲಕ್ಕಾಡ್ ಕೋರ್ಟ್ ಮುಂದಿನ ಆದೇಶ ಬರುವವರೆಗೂ ಈ ಹಾಡನ್ನು ಎಲ್ಲಿಯೂ ಹಂಚಿಕೆ ಮಾಡುವಂತಿಲ್ಲ ಎಂದು ತಡೆಯಾಜ್ಞೆ ನೀಡಿತ್ತು.

    ಇನ್ನೂ ಕೋರ್ಟ್ ಆದೇಶದ ಪ್ರತಿ ಚಿತ್ರತಂಡಕ್ಕೆ ಸಿಗದೇ ಇರುವ ಕಾರಣದಿಂದಾಗಿ ಥಿಯೇಟರ್ ನಲ್ಲಿ ಈ ಹಾಡು ಕೇಳಿ ಬರುತ್ತಿದೆ. ಆದೇಶ ಪ್ರತಿ ಸಿಕ್ಕ ನಂತರ ಯಾವ ನಿರ್ಧಾರ ತಗೆದುಕೊಳ್ಳುತ್ತಾರೋ ಕಾದು ನೋಡಬೇಕು. ಅಷ್ಟೇ ಅಲ್ಲದೇ, ಮೊನ್ನೆಯಷ್ಟೇ ಬ್ಯಾಂಡ್ ನ ಸದಸ್ಯರೊಬ್ಬರು ಫೇಸ್ ಬುಕ್ ನಲ್ಲಿ ಬರೆದುಕೊಂಡು, ‘ಕ್ರೆಡಿಟ್ ಕೊಟ್ಟು ಈ ಹಾಡನ್ನು ಬಳಸಿಕೊಳ್ಳಬಹುದು ಎಂದು ಹೇಳಿದ್ದರು. ಆದರೆ, ಮ್ಯೂಸಿಕ್ ಸಂಸ್ಥೆ ಆ ರೀತಿಯ ಯಾವುದೇ ಹೇಳಿಕೆ ನೀಡಿಲ್ಲ.

    ಎರಡೆರಡು ಕೋರ್ಟಿನಿಂದ ಈ ಹಾಡಿಗೆ ತಡೆಯಾಜ್ಞೆ ನೀಡಿದೆ. ಆದರೂ, ಕನ್ನಡವೂ ಸೇರಿದಂತೆ ನಾನಾ ಭಾಷೆಗಳಲ್ಲಿ ಈ ಸಿನಿಮಾ ಪ್ರದರ್ಶನವಾಗುತ್ತಿದೆ. ಮುಂದಿನ ದಿನಗಳಲ್ಲಿ ಕೋರ್ಟ್ ಮಾತಿಗೆ ಚಿತ್ರತಂಡ ಯಾವ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತದೆಯೋ ಕಾದು ನೋಡಬೇಕು. ಅಷ್ಟರಲ್ಲಿ ಸಂಧಾನ ಏನಾದರೂ ನಡೆದರೂ ಅಚ್ಚರಿ ಪಡಬೇಕಿಲ್ಲ ಎನ್ನಲಾಗುತ್ತಿದೆ. ಆದರೆ, ಹಾಡನ್ನೇ ಹೊಂಬಾಳೆ ಸಂಸ್ಥೆ ತಗೆದುಹಾಕಿದೆ.

    Live Tv
    [brid partner=56869869 player=32851 video=960834 autoplay=true]

  • ‘ಕಾಂತಾರ’ ಸಿನಿಮಾದಲ್ಲಿ ದಲಿತ ಸಮುದಾಯಕ್ಕೆ ಅವಹೇಳನ: ಪ್ರದರ್ಶನ ನಿಲ್ಲಿಸಲು ಆಗ್ರಹ

    ‘ಕಾಂತಾರ’ ಸಿನಿಮಾದಲ್ಲಿ ದಲಿತ ಸಮುದಾಯಕ್ಕೆ ಅವಹೇಳನ: ಪ್ರದರ್ಶನ ನಿಲ್ಲಿಸಲು ಆಗ್ರಹ

    ಕೆಲವೇ ದಿನಗಳಲ್ಲೇ ಸಿನಿಮಾ ರಿಲೀಸ್ ಆಗಿ 50 ದಿನಗಳು ಕಳೆಯುತ್ತಿರುವ ಸಂದರ್ಭದಲ್ಲಿ ಕಾಂತಾರ ಸಿನಿಮಾದ ಬಗ್ಗೆ ಆರೋಪವೊಂದು ಕೇಳಿ ಬಂದಿದೆ. ಈ ಸಿನಿಮಾದಲ್ಲಿ ದಲಿತ ಸಮುದಾಯ ಮತ್ತು ಮಹಿಳೆಯರನ್ನು ಅವಹೇಳನ ಮಾಡಲಾಗಿದೆ ಎಂದು ಸಮತಾ ಸೈನಿಕ ದಳ ಮಂಗಳೂರು, ಜಿಲ್ಲಾ ಮ್ಯಾಜಿಸ್ಟ್ರೇಟ್ ಗೆ ಮನವಿ ಮಾಡಿಕೊಂಡಿದೆ. ಮಹಿಳೆ ಮತ್ತು ದಲಿತರನ್ನು ಅವಹೇಳನ ಮಾಡಿರುವ ದೃಶ್ಯಗಳಿಗೆ ಕತ್ತರಿ ಹಾಕಬೇಕು ಎಂದು ಅದು ಒತ್ತಾಯಿಸಿದೆ.

    ಈ ಕುರಿತು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿರುವ ಸಮತಾ ಸೈನಿಕ ದಳ, ‘ಇದೊಂದು ಉತ್ತಮ ಸಿನಿಮಾ ಮತ್ತು ಕಲಾವಿದರು ಚೆನ್ನಾಗಿ ಅಭಿನಯಿಸಿದ್ದಾರೆ. ಆದರೆ, ಈ ಸಿನಿಮಾದಲ್ಲಿ ಕೆಲವು ತಪ್ಪುಗಳು ಆಗಿವೆ. ಅವುಗಳನ್ನು ಸರಿಪಡಿಸಿಕೊಳ್ಳಬೇಕು. ಮಹಿಳೆಯರನ್ನು ಅವಮಾನಿಸಲಾಗಿದೆ, ಯುವಕರನ್ನು ಪೋಲಿಗಳು ಎನ್ನುವಂತೆ ತೋರಿಸಲಾಗಿದೆ. ದಲಿತ ಸಮುದಾಯಕ್ಕೆ ಅಪಮಾನ ಮಾಡಲಾಗಿದೆ. ದೈವರಾಧಾನೆ ಹೆಸರಿನಲ್ಲಿ ಹಿಂಸೆಯನ್ನೂ ಪ್ರಚೋದಿಸಲಾಗಿದೆ’ ಎಂದು ಆರೋಪ ಮಾಡಿದರು. ಇದನ್ನೂ ಓದಿ:ಗಡಿನಾಡ ಕನ್ನಡಿಗ ಎಂದ ರೂಪೇಶ್‌ ಶೆಟ್ಟಿಗೆ ಬೆದರಿಕೆ, ದೂರು ದಾಖಲಿಸಿದ ಕುಟುಂಬದವರು

    ಸೆನ್ಸಾರ್ ಮಂಡಳಿಯ ವಿರುದ್ಧವೂ ಆರೋಪ ಮಾಡಿರುವ ಸಮತಾ ಸೈನಿಕದಳ, ಸೆನ್ಸಾರ್ ಮಂಡಳಿಯು ಬೇಕಾಬಿಟ್ಟಿ ಕೆಲಸ ಮಾಡಿದಂತೆ ತೋರಿತ್ತಿದೆ. ಇತರರ ಭಾವನೆಗಳಿಗೆ ಘಾಸಿಗೊಳಿಸುವಂತ ದೃಶ್ಯಗಳನ್ನು ಸೆನ್ಸಾರ್ ಮಂಡಳಿಯು ತಗೆದು ಹಾಕುವಂತೆ ಸೂಚಿಸಬೇಕಿತ್ತು. ಆದರೆ ಇದ್ಯಾವ ಕೆಲಸವನ್ನೂ ಅದು ಮಾಡಿಲ್ಲ. ಹಾಗಾಗಿಯೇ ಅಪಮಾನ ಮಾಡಿದ ದೃಶ್ಯಗಳನ್ನು ಜಗತ್ತು ನೋಡುವಂತಾಯಿತು ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಾಂತಾರ 1 ಕೋಟಿ ಟಿಕೆಟ್ಸ್ ಮಾರಾಟ: ದಾಖಲೆಗಳು ಪುಡಿಪುಡಿ

    ಕಾಂತಾರ 1 ಕೋಟಿ ಟಿಕೆಟ್ಸ್ ಮಾರಾಟ: ದಾಖಲೆಗಳು ಪುಡಿಪುಡಿ

    ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ (Kantara) ಸಿನಿಮಾ ಕರ್ನಾಟಕದಲ್ಲಿರುವ ಬಹುತೇಕ ದಾಖಲೆಗಳನ್ನು ಬ್ರೇಕ್ ಮಾಡುತ್ತಾ ಮುಂದೆ ಸಾಗುತ್ತಿದೆ. ಈಗಾಗಲೇ ಗಳಿಕೆಯ ಲೆಕ್ಕದಲ್ಲಿ ಕೆಜಿಎಫ್ 2 ಸಿನಿಮಾವನ್ನೂ ಹಿಂದಿಕ್ಕೆ ಮುಂದೆ ಸಾಗುತ್ತಿದೆ. ಇದೀಗ ಸಿಕ್ಕಿರುವ ಮತ್ತೊಂದು ಮಾಹಿತಿ ಅಂದರೆ, ಈವರೆಗೂ ಕರ್ನಾಟಕದಲ್ಲಿ ಈ ಸಿನಿಮಾದ ಟಿಕೆಟ್ಸ್ (Tickets) ಬರೋಬ್ಬರು ಒಂದು ಕೋಟಿ ಮಾರಾಟವಾಗಿವೆಯಂತೆ. ಈ ಮೂಲಕ ಬಹುತೇಕ ದಾಖಲೆಗಳನ್ನು ಕಾಂತಾರ ಪುಡಿಪುಡಿ ಮಾಡಿ ಮುನ್ನುಗ್ಗುತ್ತಿದೆ.

    ಕಾಂತಾರ ಸಿನಿಮಾದ ಯಶಸ್ಸು ರಿಷಬ್ ಶೆಟ್ಟಿಯನ್ನು ಮತ್ತಷ್ಟು ಎತ್ತರಕ್ಕೆ ಕರೆದುಕೊಂಡು ಹೋಗಿದೆ. ಕೇವಲ ಕನ್ನಡ ಸಿನಿಮಾ ರಂಗದಲ್ಲಿ ನಟ ಹಾಗೂ ನಿರ್ದೇಶಕರಾಗಿ ಹೆಸರು ಮಾಡಿದ್ದವರು, ಇಂದು ಜಾಗತಿಕ ಮಟ್ಟದಲ್ಲಿ ತಮ್ಮದೇ ಆದ ಹವಾ ಸೃಷ್ಟಿಸಿದ್ದಾರೆ. ಹಾಗಾಗಿ ನಾನಾ ಸಿನಿಮಾ ರಂಗದಿಂದ ಅವರಿಗೆ ಅವಕಾಶಗಳು ಹುಡುಕಿಕೊಂಡು ಬರುತ್ತಿವೆ. ಮೊನ್ನೆಯಷ್ಟೇ ತೆಲುಗಿನಲ್ಲಿ ಸಿನಿಮಾ ಮಾಡುವಂತೆ ಅಲ್ಲು ಅರ್ಜುನ್ ತಂದೆ ಕೇಳಿಕೊಂಡಿದ್ದರು. ಇದೀಗ ಬಾಲಿವುಡ್ ನಿಂದಲೂ ಅವಕಾಶ ಬಂದಿದೆ.

    ಈ ಕುರಿತು ಮಾತನಾಡಿರುವ ರಿಷಬ್ ಶೆಟ್ಟಿ (Rishabh Shetty), ‘ನನಗೆ ಬಾಲಿವುಡ್ ಮತ್ತು ತೆಲುಗು ಸಿನಿಮಾ ರಂಗದಿಂದ ಆಫರ್ ಬಂದಿದ್ದು ನಿಜ. ಆದರೆ, ಸದ್ಯಕ್ಕೆ ನಾನು ಎಲ್ಲಿಯೂ ಹೋಗುತ್ತಿಲ್ಲ. ಕನ್ನಡದಲ್ಲೇ ಮಾಡುವುದಕ್ಕೆ ತುಂಬಾ ಕೆಲಸಗಳಿವೆ. ಹಾಗಾಗಿ ಇಲ್ಲಿಯೇ ಇದ್ದುಕೊಂಡು ಸಿನಿಮಾ ಮಾಡುತ್ತೇನೆ. ಆ ಸಿನಿಮಾವನ್ನೇ ವಿವಿಧ ಸಿನಿಮಾ ರಂಗದ ಪ್ರೇಕ್ಷಕರು ನೋಡಲಿ ಎನ್ನುವುದು ನನ್ನಾಸೆ ಅಂದಿದ್ದಾರೆ. ಇದನ್ನೂ ಓದಿ:ಬಹಿರಂಗವಾಗಿ ನೋವು ಹಂಚಿಕೊಂಡ ರಶ್ಮಿಕಾ: ನೋವು ಕೊಟ್ಟೋರು ಉದ್ದಾರಾಗ್ತಾರಾ ಎಂದ ಫ್ಯಾನ್ಸ್

    ಹಿಂದಿ ಸಿನಿಮಾ ರಂಗದ ಬಗ್ಗೆಯೂ ಮಾತನಾಡಿರುವ ಅವರು, ತಾವು ಯಾವಾಗಲೂ ಅಮಿತಾಭ್ ಬಚ್ಚನ್ ಅವರನ್ನು ಕೊಂಡಾಡುವುದಾಗಿಯೂ ತಿಳಿಸಿದ್ದಾರೆ. ಈ ಹೊತ್ತಿನ ನಟರಾದ ಶಾಹಿದ್ ಕಪೂರ್ ಮತ್ತು ಈಗಾಗಲೇ ಸಿನಿಮಾ ರಂಗಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡಿದ ಶಾರುಖ್ ಖಾನ್ ಕುರಿತಾಗಿಯೂ ಅವರು ಮಾತನಾಡಿದ್ದಾರೆ. ಎಲ್ಲ ಸಿನಿಮಾ ರಂಗದ ಬಗ್ಗೆಯೂ ತಮಗೆ ಅಭಿಮಾನವಿದ್ದು, ಕನ್ನಡದಲ್ಲೇ ಸಿನಿಮಾ ಮಾಡುವ ಮೂಲಕ ಇತರ ಚಿತ್ರರಂಗವನ್ನೂ ಗೌರವಿಸುವುದಾಗಿ ಅವರು ತಿಳಿಸಿದ್ದಾರೆ.

    ಕಾಂತಾರ ಸಿನಿಮಾ ಬಾಲಿವುಡ್ ನಲ್ಲೂ ಸಖತ್ ಸದ್ದು ಮಾಡುತ್ತಿದೆ. ಈವರೆಗೂ 65 ಕೋಟಿಗೂ ಅಧಿಕ ಹಣವನ್ನು ಗಳಿಕೆ ಮಾಡಿದೆ. ಇನ್ನೂ ಹಲವು ಕಡೆ ಹೌಸ್ ಫುಲ್ ಪ್ರದರ್ಶನ ಕಂಡಿದೆ. ದೇಶದಾದ್ಯಂತ ಒಟ್ಟು 300 ಕೋಟಿಗೂ ಅಧಿಕ ಹಣ ಬಾಕ್ಸ್ ಆಫೀಸಿಗೆ ಹರಿದು ಬಂದಿದೆ. ಹೀಗಾಗಿಯೇ ರಿಷಬ್ ಶೆಟ್ಟಿ ಅವರಿಗೆ ಡಿಮಾಂಡ್ ಕ್ರಿಯೇಟ್ ಆಗಿದೆ. ವಿವಿಧ ಸಿನಿಮಾ ರಂಗದಿಂದ ಅವಕಾಶಗಳು ಹುಡುಕಿಕೊಂಡು ಬರುತ್ತಿವೆ.

    Live Tv
    [brid partner=56869869 player=32851 video=960834 autoplay=true]

  • ಬಾಲಿವುಡ್ ನಲ್ಲಿ ಆಫರ್ ಬಂದಿದ್ದು ನಿಜ ಎಂದು ಒಪ್ಪಿಕೊಂಡ ರಿಷಬ್ ಶೆಟ್ಟಿ

    ಬಾಲಿವುಡ್ ನಲ್ಲಿ ಆಫರ್ ಬಂದಿದ್ದು ನಿಜ ಎಂದು ಒಪ್ಪಿಕೊಂಡ ರಿಷಬ್ ಶೆಟ್ಟಿ

    ಕಾಂತಾರ (Kantara) ಸಿನಿಮಾದ ಯಶಸ್ಸು ರಿಷಬ್ ಶೆಟ್ಟಿಯನ್ನು (Rishabh Shetty) ಮತ್ತಷ್ಟು ಎತ್ತರಕ್ಕೆ ಕರೆದುಕೊಂಡು ಹೋಗಿದೆ. ಕೇವಲ ಕನ್ನಡ ಸಿನಿಮಾ ರಂಗದಲ್ಲಿ ನಟ ಹಾಗೂ ನಿರ್ದೇಶಕರಾಗಿ ಹೆಸರು ಮಾಡಿದ್ದವರು, ಇಂದು ಜಾಗತಿಕ ಮಟ್ಟದಲ್ಲಿ ತಮ್ಮದೇ ಆದ ಹವಾ ಸೃಷ್ಟಿಸಿದ್ದಾರೆ. ಹಾಗಾಗಿ ನಾನಾ ಸಿನಿಮಾ ರಂಗದಿಂದ ಅವರಿಗೆ ಅವಕಾಶಗಳು ಹುಡುಕಿಕೊಂಡು ಬರುತ್ತಿವೆ. ಮೊನ್ನೆಯಷ್ಟೇ ತೆಲುಗಿನಲ್ಲಿ ಸಿನಿಮಾ ಮಾಡುವಂತೆ ಅಲ್ಲು ಅರ್ಜುನ್ ತಂದೆ ಕೇಳಿಕೊಂಡಿದ್ದರು. ಇದೀಗ ಬಾಲಿವುಡ್ ನಿಂದಲೂ ಅವಕಾಶ ಬಂದಿದೆ.

    ಈ ಕುರಿತು ಮಾತನಾಡಿರುವ ರಿಷಬ್ ಶೆಟ್ಟಿ, ‘ನನಗೆ ಬಾಲಿವುಡ್ (Bollywood) ಮತ್ತು ತೆಲುಗು ಸಿನಿಮಾ ರಂಗದಿಂದ ಆಫರ್ ಬಂದಿದ್ದು ನಿಜ. ಆದರೆ, ಸದ್ಯಕ್ಕೆ ನಾನು ಎಲ್ಲಿಯೂ ಹೋಗುತ್ತಿಲ್ಲ. ಕನ್ನಡದಲ್ಲೇ ಮಾಡುವುದಕ್ಕೆ ತುಂಬಾ ಕೆಲಸಗಳಿವೆ. ಹಾಗಾಗಿ ಇಲ್ಲಿಯೇ ಇದ್ದುಕೊಂಡು ಸಿನಿಮಾ ಮಾಡುತ್ತೇನೆ. ಆ ಸಿನಿಮಾವನ್ನೇ ವಿವಿಧ ಸಿನಿಮಾ ರಂಗದ ಪ್ರೇಕ್ಷಕರು ನೋಡಲಿ ಎನ್ನುವುದು ನನ್ನಾಸೆ ಅಂದಿದ್ದಾರೆ. ಇದನ್ನೂ ಓದಿ:`ಅವತಾರ್ 2′ ಟ್ರೈಲರ್‌ ಟ್ರೆಂಡಿಂಗ್‌ ಬೆನ್ನಲ್ಲೇ ಚಿತ್ರತಂಡದ ವಿರುದ್ಧ ಕನ್ನಡಿಗರು ಗರಂ

    ಹಿಂದಿ ಸಿನಿಮಾ ರಂಗದ ಬಗ್ಗೆಯೂ ಮಾತನಾಡಿರುವ ಅವರು, ತಾವು ಯಾವಾಗಲೂ ಅಮಿತಾಭ್ ಬಚ್ಚನ್ (Amitabh Bachchan) ಅವರನ್ನು ಕೊಂಡಾಡುವುದಾಗಿಯೂ ತಿಳಿಸಿದ್ದಾರೆ. ಈ ಹೊತ್ತಿನ ನಟರಾದ ಶಾಹಿದ್ ಕಪೂರ್ ಮತ್ತು ಈಗಾಗಲೇ ಸಿನಿಮಾ ರಂಗಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡಿದ ಶಾರುಖ್ ಖಾನ್ ಕುರಿತಾಗಿಯೂ ಅವರು ಮಾತನಾಡಿದ್ದಾರೆ. ಎಲ್ಲ ಸಿನಿಮಾ ರಂಗದ ಬಗ್ಗೆಯೂ ತಮಗೆ ಅಭಿಮಾನವಿದ್ದು, ಕನ್ನಡದಲ್ಲೇ ಸಿನಿಮಾ ಮಾಡುವ ಮೂಲಕ ಇತರ ಚಿತ್ರರಂಗವನ್ನೂ ಗೌರವಿಸುವುದಾಗಿ ಅವರು ತಿಳಿಸಿದ್ದಾರೆ.

    ಕಾಂತಾರ ಸಿನಿಮಾ ಬಾಲಿವುಡ್ ನಲ್ಲೂ ಸಖತ್ ಸದ್ದು ಮಾಡುತ್ತಿದೆ. ಈವರೆಗೂ 50 ಕೋಟಿಗೂ ಅಧಿಕ ಹಣವನ್ನು ಗಳಿಕೆ ಮಾಡಿದೆ. ಇನ್ನೂ ಹಲವು ಕಡೆ ಹೌಸ್ ಫುಲ್ ಪ್ರದರ್ಶನ ಕಂಡಿದೆ. ದೇಶದಾದ್ಯಂತ ಒಟ್ಟು 300 ಕೋಟಿಗೂ ಅಧಿಕ ಹಣ ಬಾಕ್ಸ್ ಆಫೀಸಿಗೆ ಹರಿದು ಬಂದಿದೆ. ಹೀಗಾಗಿಯೇ ರಿಷಬ್ ಶೆಟ್ಟಿ ಅವರಿಗೆ ಡಿಮಾಂಡ್ ಕ್ರಿಯೇಟ್ ಆಗಿದೆ. ವಿವಿಧ ಸಿನಿಮಾ ರಂಗದಿಂದ ಅವಕಾಶಗಳು ಹುಡುಕಿಕೊಂಡು ಬರುತ್ತಿವೆ.

    Live Tv
    [brid partner=56869869 player=32851 video=960834 autoplay=true]

  • ರಿಷಬ್ ಶೆಟ್ಟಿ ವಿಚಾರವಾದಿ ಆಗದಿದ್ದರೆ ಮೂರ್ಖ ಜನ ಸುಮ್ಮನೆ ಬಿಡ್ತಿರ್ಲಿಲ್ಲ: ಸಾಹಿತಿ ಬಿ.ಟಿ.ಲಲಿತಾ ನಾಯಕ್

    ರಿಷಬ್ ಶೆಟ್ಟಿ ವಿಚಾರವಾದಿ ಆಗದಿದ್ದರೆ ಮೂರ್ಖ ಜನ ಸುಮ್ಮನೆ ಬಿಡ್ತಿರ್ಲಿಲ್ಲ: ಸಾಹಿತಿ ಬಿ.ಟಿ.ಲಲಿತಾ ನಾಯಕ್

    ಕಾಂತಾರ (Kantara) ಸಿನಿಮಾ ವಿಚಾರವಾಗಿ ನಟ ಚೇತನ್ ಸೇರಿದಂತೆ ಹಲವರು, ಹಲವು ರೀತಿಯಲ್ಲಿ ವ್ಯಾಖ್ಯಾನಿಸಿದ್ದಾರೆ. ಆದರೆ, ವಿಚಾರವಾದಿ, ಸಾಹಿತಿ ಬಿ.ಟಿ.ಲಲಿತಾ ನಾಯಕ್ (B.T Lalitha Naik) ಈ ಸಿನಿಮಾವನ್ನು ಮತ್ತೊಂದು ದೃಷ್ಟಿಕೋನದಿಂದ ವಿಶ್ಲೇಷಿಸಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿರುವ ಅವರು, ರಿಷಬ್ ಶೆಟ್ಟಿ (Rishabh Shetty) ಅವರನ್ನು ವಿಚಾರವಾದಿ ಎಂದು ಕರೆದಿದ್ದಾರೆ. ದೈವ ನರ್ತಕರಿಗೆ ಸರಕಾರ ಎರಡು ಸಾವಿರ ರೂಪಾಯಿ ನೀಡಬಾರದಿತ್ತು ಎಂದು ಮಾತನಾಡಿದ್ದಾರೆ.

    ರಿಷಬ್ ಶೆಟ್ಟಿ ಅವರು ಹಿಂದೂತ್ವವಾದಿ ಎಂದು ಒಂದು ಗುಂಪು ಮಾತನಾಡುತ್ತಿದ್ದರೆ, ಬಿ.ಟಿ ಲಲಿತಾ ನಾಯಕ್, ರಿಷಬ್ ಅವರನ್ನು ವಿಚಾರವಾದಿ ಲಿಸ್ಟ್ ಗೆ ಸೇರಿಸಿದ್ದಾರೆ. ಅಲ್ಲದೇ, ರಿಷಬ್ ಮಾಡಿರುವ ಕಾಂತಾರ ಸಿನಿಮಾದ ಬಗ್ಗೆಯೂ ಮಾತನಾಡಿರುವ ಅವರು, ‘ಭೂತಾರಾಧನೆ ಸಮಯದಲ್ಲಿ ದೇವರು ಬರೋದು ಸತ್ಯ ಅಲ್ಲವೇ ಅಲ್ಲ. ದೈವ ನರ್ತಕರು ಓಹೋ ಅಂತ ಚಿರಾಡುವುದು, ಕುಣಿಯುವುದು, ದೇವರು ಮೈಮೇಲೆ ಬರುವುದರಿಂದ ಅಲ್ಲ. ಅದಕ್ಕೆ ಬೇರೆ ಕಾರಣವಿದೆ’ ಎಂದು ಹೇಳಿದ್ದಾರೆ. ಇದನ್ನೂ ಓದಿ:ಶೂಟಿಂಗ್‌ಗೆ ಬ್ರೇಕ್, ತಾಂಜಾನಿಯಾ ಕಾಡಿನಲ್ಲಿ ಪತ್ನಿ ಜೊತೆ ರಾಮ್‌ಚರಣ್

    ರಿಷಬ್ ಶೆಟ್ಟಿ ಬಗ್ಗೆ ಅನುಕಂಪವನ್ನೂ ತೋರಿಸಿರುವ ಲಲಿತಾ ನಾಯಕ್, ‘ರಿಷಬ್ ತನ್ನ ವಿಚಾರವನ್ನು ನೇರವಾಗಿ ಹೇಳಿ ಹೊಡಿಸಿಕೊಳ್ಳಲು ತಯಾರಿಲ್ಲ. ಹೀಗಾಗಿ ಈ ಮಾರ್ಗ ಅನುಸರಿಸಿದ್ದಾನೆ. ಆತ ತನ್ನ ವಿಚಾರವನ್ನು ನೇರವಾಗಿ ಹೇಳಿದ್ರೆ ಈ ಮೂರ್ಖ ಜನರು ಆತನನ್ನು ಹಿಡಿದು ಹೊಡೆಯುತ್ತಾರೆ, ಪರದೆಗೆ ಬೆಂಕಿ ಹಚ್ಚುತ್ತಾರೆ. ಕೆಲವು ಜನರ ತಲೆ ಅಷ್ಟರಮಟ್ಟಿಗೆ ಕೆಟ್ಟಿದೆ. ಸತ್ಯವನ್ನು ನೇರವಾಗಿ ಹೇಳಿದರೇ ಆತನನ್ನು ಕೊಂದ ಹಾಕುತ್ತಾರೆ. ಇದು ಆತನಿಗೆ ಬೇಕಿಲ್ಲ. ಆತ ಇನ್ನೂ ಬದುಕು ಬೇಕು ಅಂತ ಬಹಳಷ್ಟು ಬುದ್ದಿವಂತಿಕೆಯಿಂದ ಸಿನಿಮಾ ಮಾಡಿದ್ದಾನೆ’ ಎಂದಿದ್ದಾರೆ.

    ಕಾಂತಾರ ಸಿನಿಮಾ ನೋಡಲು ಬಹಳಷ್ಟು ಬುದ್ಧಿವಂತಿಕೆ ಬೇಕು. ಕಾಂತಾರ ಕಾಡಿನ ಜನರ ನೋವಿನ ಕಥೆ. ಅವರಿಗೆ ಜಮೀನ್ದಾರಿ ಪದ್ಧತಿಯ ಮೂಲಕ ಒಕ್ಕಲೆಬ್ಬಿಸಲು ನೋಡಿದರು. ಅವರಿಗೆ ಬಹಳಷ್ಟು ಚಿತ್ರಹಿಂಸೆ ನೀಡಿದರು. ಹೀಗಾಗಿ ಅವರು ತಮ್ಮ ಉಳಿವಿಗಾಗಿ ಪೊಲೀಸರ ಮತ್ತು ಸರ್ಕಾರದ ಮೊರೆ ಹೋದರು. ಅವರಿಂದ ನ್ಯಾಯ ಸಿಗದೆ  ಚಿರಾಡಿ ಚಿರಾಡಿ ತಮ್ಮ ನೋವು ಹೊರಹಾಕಿದರು. ಅದನ್ನೇ ದೈವ ಅಂತ ನಂಬಲಾಗುತ್ತಿದೆ ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಕಾಂತಾರ’ ತುಳುವಿನಲ್ಲಿ ಬಿಡುಗಡೆ ಆಗುವುದು ಪಕ್ಕಾ ಎಂದ ರಿಷಬ್ ಶೆಟ್ಟಿ

    ‘ಕಾಂತಾರ’ ತುಳುವಿನಲ್ಲಿ ಬಿಡುಗಡೆ ಆಗುವುದು ಪಕ್ಕಾ ಎಂದ ರಿಷಬ್ ಶೆಟ್ಟಿ

    ನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ಕಾಂತಾರ (Kantara) ಸಿನಿಮಾ ರಿಲೀಸ್ ಆಗಿದೆ. ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲಿ ಡಬ್ (Dubbed) ಆಗಿ ಸಿನಿಮಾ ಬಿಡುಗಡೆ ಆಗಿದ್ದು, ಬಹುತೇಕ ಕಡೆ ಹೌಸ್ ಫುಲ್ ಪ್ರದರ್ಶನ ಕಂಡಿದೆ. ತುಳುನಾಡಿನ ಆರಾದ್ಯ ದೈವದ ಕುರಿತಾದ ಸಿನಿಮಾ ಇದಾಗಿದ್ದರಿಂದ, ಈ ಸಿನಿಮಾವನ್ನು ತುಳುವಿಗೂ ಡಬ್ ಮಾಡಬೇಕು ಎನ್ನುವುದು ನಿರ್ಮಾಪಕ ವಿಜಯ್ ಕಿರಗಂದೂರು ಆಸೆಯಂತೆ. ಹಾಗಾಗಿ ಈ ಸಿನಿಮಾವನ್ನು ತುಳುವಿಗೂ ಡಬ್ ಮಾಡುತ್ತಾರಂತೆ ಚಿತ್ರತಂಡ.

    ಈ ಕುರಿತು ಧರ್ಮಸ್ಥಳದಲ್ಲಿ ಮಾತನಾಡಿದ ರಿಷಬ್ ಶೆಟ್ಟಿ (Rishabh Shetty), ‘ಕಾಂತಾರ ಸಿನಿಮಾವನ್ನು ತುಳು ಭಾಷೆಗೆ ಡಬ್ ಮಾಡಬೇಕು ಎನ್ನುವುದು ನಿರ್ಮಾಪಕರ ಆಸೆ. ಹಾಗಾಗಿ ಈ ಚಿತ್ರವನ್ನು ತುಳುಗೆ (Tulu) ಡಬ್ ಮಾಡಲಾಗುತ್ತದೆ. ಈಗಾಗಲೇ ಸಿನಿಮಾ ಎಲ್ಲ ಕಡೆ ಪ್ರದರ್ಶನ ಕಂಡಿದೆ. ದಾಖಲೆ ರೀತಿಯಲ್ಲಿ ಗೆಲುವು ಸಾಧಿಸಿದೆ. ಇದೆಲ್ಲ ಸಾಧ್ಯವಾಗಿದ್ದು ದೈವದ ಕಾರಣದಿಂದ. ಹಾಗಾಗಿ ಈ ಸಿನಿಮಾವನ್ನು ತುಳುವಿನಲ್ಲೂ ಡಬ್ ಮಾಡಲ ಯೋಚನೆ ಮಾಡಿದ್ದೇವೆ. ಆದಷ್ಟು ಬೇಗ ಮಾಡಲಾಗುವುದು’ ಎಂದಿದ್ದಾರೆ. ಇದನ್ನೂ ಓದಿ:ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ರು ವಿಜಯ್ ದೇವರಕೊಂಡ- ರಶ್ಮಿಕಾ

    ಕಾಂತಾರ ಸಿನಿಮಾದಲ್ಲಿ ಕ್ಲೈಮ್ಯಾಕ್ಸ್ ನಲ್ಲಿ ಬರುವ ವರಾಹ ರೂಪಂ ಹಾಡಿನ ವಿವಾದ ಕುರಿತು ಈ ಸಂದರ್ಭದಲ್ಲಿ ಮಾತನಾಡಿರುವ ರಿಷಬ್, ‘ನಾವು ಕದ್ದಿಲ್ಲ. ಸುಖಾಸುಮ್ಮನೆ ಜನರನ್ನು ಹಾದಿ ತಪ್ಪಿಸುವ ಕೆಲಸ ನಡೆಯುತ್ತಿದೆ. ಯಾರೇ ಕೇಳಿದರೂ, ನಾವು ಅದನ್ನು ಕದ್ದ ಹಾಡಲ್ಲ ಎಂದು ಸಾಬೀತು ಪಡಿಸುತ್ತೇವೆ ಎಂದು ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ಧರ್ಮಸ್ಥಳದ ಮಂಜುನಾಥನ ದರ್ಶನಕ್ಕೆ ಆಗಮಿಸಿದ್ದ ರಿಷಬ್ ಶೆಟ್ಟಿ ದಂಪತಿ, ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿ, ಯಾವುದೇ ಕಾರಣಕ್ಕೂ ಅದು ಕದ್ದ ಮ್ಯೂಸಿಕ್ ಅಲ್ಲ ಎಂದು ನುಡಿದಿದ್ದಾರೆ.

    ಕಾಂತಾರ ಸಿನಿಮಾ ಅಂದಾಕ್ಷಣ ಥಟ್ಟನೆ ನೆನಪಾಗುವ ಹಾಡು ‘ವರಾಹ ರೂಪಂ’ ಗೀತೆ. ಚಿತ್ರದ ಕ್ಲೈಮ್ಯಾಕ್ಸ್ ನಲ್ಲಿ ಬರುವ ಈ ಗೀತೆಯು ಸಿನಿಮಾದ ಗಟ್ಟಿತನವನ್ನು ಮತ್ತಷ್ಟು ಹೆಚ್ಚಿಸಿತ್ತು. ಕ್ಲೈಮ್ಯಾಕ್ಸ್ ಜನರ ಮನಸ್ಸಿನಲ್ಲಿ ಉಳಿದುಕೊಳ್ಳಲು ಕಾರಣವೂ ಆಗಿತ್ತು. ಈ ಹಾಡಿನ ವಿರುದ್ಧ ಟ್ಯೂನ್ ಕದ್ದ ಆರೋಪ ಕೇಳಿ ಬಂದಿತ್ತು. ಇತ್ತೀಚೆಗಷ್ಟೇ ತೈಕ್ಕುಡಂ ಬ್ರಿಡ್ಜ್ ಬ್ಯಾಂಡ್‍ ನ ಸದಸ್ಯರು ಕೋರ್ಟಿಗೆ ಮೊರೆ ಹೋಗಿದ್ದರು. ಹಾಗಾಗಿ ಕೋಯಿಕ್ಕೋಡ್ ಕೋರ್ಟ್ ಸಿನಿಮಾದಲ್ಲಿ ಈ ಹಾಡು ಬಳಸದಂತೆ ತಡೆಯಾಜ್ಞೆ ನೀಡಿತ್ತು.

    ಆದರೂ, ಕಾಂತರ ಸಿನಿಮಾದ ತಂಡ ನಾವು ಯಾವುದೇ ರೀತಿಯಲ್ಲಿ ಹಾಡನ್ನು ಕಾಪಿ ಮಾಡಿಲ್ಲ. ಹಾಗಾಗಿ ಚಿತ್ರದಲ್ಲಿ ಆ ಹಾಡು ಇರತ್ತೆ ಎಂದು ಈವರೆಗೂ ಥಿಯೇಟರ್ ನಲ್ಲಿ ಅದನ್ನು ಮುಂದುವರೆಸಿಕೊಂಡು ಬಂದಿದ್ದರು. ಇದೀಗ ಮತ್ತೊಂದು ಕೇಸ್ ದಾಖಲಾಗಿದ್ದು, ಮಾತೃಭೂಮಿ ಮ್ಯೂಸಿಕ್ ಸಂಸ್ಥೆಯು ಮತ್ತೆ ಕೋರ್ಟ್ ಮೊರೆ ಹೋಗಿದೆ. ಹಾಗಾಗಿ ಅರ್ಜಿಯ ವಿಚಾರಣೆ ನಡೆಸಿರುವ ಪಾಲಕ್ಕಾಡ್ ಕೋರ್ಟ್ ಮುಂದಿನ ಆದೇಶ ಬರುವವರೆಗೂ ಈ ಹಾಡನ್ನು ಎಲ್ಲಿಯೂ ಹಂಚಿಕೆ ಮಾಡುವಂತಿಲ್ಲ ಎಂದು ತಡೆಯಾಜ್ಞೆ ನೀಡಿದೆ.

    Live Tv
    [brid partner=56869869 player=32851 video=960834 autoplay=true]

  • ‘ವರಾಹ ರೂಪಂ’ ಮ್ಯೂಸಿಕ್ ಕದ್ದಿಲ್ಲ: ಧರ್ಮಸ್ಥಳದಲ್ಲಿ ರಿಷಬ್ ಶೆಟ್ಟಿ ಪ್ರತಿಕ್ರಿಯೆ

    ‘ವರಾಹ ರೂಪಂ’ ಮ್ಯೂಸಿಕ್ ಕದ್ದಿಲ್ಲ: ಧರ್ಮಸ್ಥಳದಲ್ಲಿ ರಿಷಬ್ ಶೆಟ್ಟಿ ಪ್ರತಿಕ್ರಿಯೆ

    ಕಾಂತಾರ (Kantara) ಸಿನಿಮಾದಲ್ಲಿ ಕ್ಲೈಮ್ಯಾಕ್ಸ್ ನಲ್ಲಿ ಬರುವ ವರಾಹ ರೂಪಂ ಮ್ಯೂಸಿಕ್ ನಾವು ಕದ್ದಿಲ್ಲ. ಸುಖಾಸುಮ್ಮನೆ ಜನರನ್ನು ಹಾದಿ ತಪ್ಪಿಸುವ ಕೆಲಸ ನಡೆಯುತ್ತಿದೆ. ಯಾರೇ ಕೇಳಿದರೂ, ನಾವು ಅದನ್ನು ಕದ್ದಿಲ್ಲ ಎಂದು ಸಾಬೀತು ಪಡಿಸುತ್ತೇವೆ ಎಂದು ರಿಷಬ್ ಶೆಟ್ಟಿ (Rishabh Shetty) ಪ್ರತಿಕ್ರಿಯೆ ನೀಡಿದ್ದಾರೆ. ಧರ್ಮಸ್ಥಳದ ಮಂಜುನಾಥನ ದರ್ಶನಕ್ಕೆ ಆಗಮಿಸಿದ್ದ ರಿಷಬ್ ಶೆಟ್ಟಿ ದಂಪತಿ, ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿ, ಯಾವುದೇ ಕಾರಣಕ್ಕೂ ಅದು ಕದ್ದ ಮ್ಯೂಸಿಕ್ ಅಲ್ಲ ಎಂದು ನುಡಿದಿದ್ದಾರೆ.

    ಕಾಂತಾರ ಸಿನಿಮಾ ಅಂದಾಕ್ಷಣ ಥಟ್ಟನೆ ನೆನಪಾಗುವ ಹಾಡು ‘ವರಾಹ ರೂಪಂ’ (Varaha Rupam) ಗೀತೆ. ಚಿತ್ರದ ಕ್ಲೈಮ್ಯಾಕ್ಸ್ ನಲ್ಲಿ ಬರುವ ಈ ಗೀತೆಯು ಸಿನಿಮಾದ ಗಟ್ಟಿತನವನ್ನು ಮತ್ತಷ್ಟು ಹೆಚ್ಚಿಸಿತ್ತು. ಕ್ಲೈಮ್ಯಾಕ್ಸ್ ಜನರ ಮನಸ್ಸಿನಲ್ಲಿ ಉಳಿದುಕೊಳ್ಳಲು ಕಾರಣವೂ ಆಗಿತ್ತು. ಈ ಹಾಡಿನ ವಿರುದ್ಧ ಟ್ಯೂನ್ ಕದ್ದ ಆರೋಪ ಕೇಳಿ ಬಂದಿತ್ತು. ಇತ್ತೀಚೆಗಷ್ಟೇ ತೈಕ್ಕುಡಂ ಬ್ರಿಡ್ಜ್ ಬ್ಯಾಂಡ್‍ ನ ಸದಸ್ಯರು ಕೋರ್ಟಿಗೆ ಮೊರೆ ಹೋಗಿದ್ದರು. ಹಾಗಾಗಿ ಕೋಯಿಕ್ಕೋಡ್ ಕೋರ್ಟ್ ಸಿನಿಮಾದಲ್ಲಿ ಈ ಹಾಡು ಬಳಸದಂತೆ ತಡೆಯಾಜ್ಞೆ ನೀಡಿತ್ತು.

    ಆದರೂ, ಕಾಂತರ ಸಿನಿಮಾದ ತಂಡ ನಾವು ಯಾವುದೇ ರೀತಿಯಲ್ಲಿ ಹಾಡನ್ನು ಕಾಪಿ ಮಾಡಿಲ್ಲ. ಹಾಗಾಗಿ ಚಿತ್ರದಲ್ಲಿ ಆ ಹಾಡು ಇರತ್ತೆ ಎಂದು ಈವರೆಗೂ ಥಿಯೇಟರ್ ನಲ್ಲಿ ಅದನ್ನು ಮುಂದುವರೆಸಿಕೊಂಡು ಬಂದಿದ್ದರು. ಇದೀಗ ಮತ್ತೊಂದು ಕೇಸ್ ದಾಖಲಾಗಿದ್ದು, ಮಾತೃಭೂಮಿ ಮ್ಯೂಸಿಕ್ ಸಂಸ್ಥೆಯು ಮತ್ತೆ ಕೋರ್ಟ್ ಮೊರೆ ಹೋಗಿದೆ. ಹಾಗಾಗಿ ಅರ್ಜಿಯ ವಿಚಾರಣೆ ನಡೆಸಿರುವ ಪಾಲಕ್ಕಾಡ್ ಕೋರ್ಟ್ (Palakkad Court) ಮುಂದಿನ ಆದೇಶ ಬರುವವರೆಗೂ ಈ ಹಾಡನ್ನು ಎಲ್ಲಿಯೂ ಹಂಚಿಕೆ ಮಾಡುವಂತಿಲ್ಲ ಎಂದು ತಡೆಯಾಜ್ಞೆ (Injunction) ನೀಡಿದೆ.

    ಇನ್ನೂ ಕೋರ್ಟ್ ಆದೇಶದ ಪ್ರತಿ ಚಿತ್ರತಂಡಕ್ಕೆ ಸಿಗದೇ ಇರುವ ಕಾರಣದಿಂದಾಗಿ ಥಿಯೇಟರ್ ನಲ್ಲಿ ಈ ಹಾಡು ಕೇಳಿ ಬರುತ್ತಿದೆ. ಆದೇಶ ಪ್ರತಿ ಸಿಕ್ಕ ನಂತರ ಯಾವ ನಿರ್ಧಾರ ತಗೆದುಕೊಳ್ಳುತ್ತಾರೋ ಕಾದು ನೋಡಬೇಕು. ಅಷ್ಟೇ ಅಲ್ಲದೇ, ಮೊನ್ನೆಯಷ್ಟೇ ಬ್ಯಾಂಡ್ ನ ಸದಸ್ಯರೊಬ್ಬರು ಫೇಸ್ ಬುಕ್ ನಲ್ಲಿ ಬರೆದುಕೊಂಡು, ‘ಕ್ರೆಡಿಟ್ ಕೊಟ್ಟು ಈ ಹಾಡನ್ನು ಬಳಸಿಕೊಳ್ಳಬಹುದು ಎಂದು ಹೇಳಿದ್ದರು. ಆದರೆ, ಮ್ಯೂಸಿಕ್ ಸಂಸ್ಥೆ ಆ ರೀತಿಯ ಯಾವುದೇ ಹೇಳಿಕೆ ನೀಡಿಲ್ಲ.

    ಎರಡೆರಡು ಕೋರ್ಟಿನಿಂದ ಈ ಹಾಡಿಗೆ ತಡೆಯಾಜ್ಞೆ ನೀಡಿದೆ. ಆದರೂ, ಕನ್ನಡವೂ ಸೇರಿದಂತೆ ನಾನಾ ಭಾಷೆಗಳಲ್ಲಿ ಈ ಸಿನಿಮಾ ಪ್ರದರ್ಶನವಾಗುತ್ತಿದೆ. ಮುಂದಿನ ದಿನಗಳಲ್ಲಿ ಕೋರ್ಟ್ ಮಾತಿಗೆ ಚಿತ್ರತಂಡ ಯಾವ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತದೆಯೋ ಕಾದು ನೋಡಬೇಕು. ಅಷ್ಟರಲ್ಲಿ ಸಂಧಾನ ಏನಾದರೂ ನಡೆದರೂ ಅಚ್ಚರಿ ಪಡಬೇಕಿಲ್ಲ.

    Live Tv
    [brid partner=56869869 player=32851 video=960834 autoplay=true]

  • ಕಾಂತಾರದ ‘ವರಾಹ ರೂಪಂ’ ಹಾಡಿಗೆ ಮತ್ತೊಂದು ತಡೆಯಾಜ್ಞೆಯ ಸಂಕಷ್ಟ

    ಕಾಂತಾರದ ‘ವರಾಹ ರೂಪಂ’ ಹಾಡಿಗೆ ಮತ್ತೊಂದು ತಡೆಯಾಜ್ಞೆಯ ಸಂಕಷ್ಟ

    ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಿರುವ ಕಾಂತಾರ (Kantara) ಸಿನಿಮಾ ಅಂದಾಕ್ಷಣ ಥಟ್ಟನೆ ನೆನಪಾಗುವ ಹಾಡು ‘ವರಾಹ ರೂಪಂ’ (Varaha Rupam) ಗೀತೆ. ಚಿತ್ರದ ಕ್ಲೈಮ್ಯಾಕ್ಸ್ ನಲ್ಲಿ ಬರುವ ಈ ಗೀತೆಯು ಸಿನಿಮಾದ ಗಟ್ಟಿತನವನ್ನು ಮತ್ತಷ್ಟು ಹೆಚ್ಚಿಸಿತ್ತು. ಕ್ಲೈಮ್ಯಾಕ್ಸ್ ಜನರ ಮನಸ್ಸಿನಲ್ಲಿ ಉಳಿದುಕೊಳ್ಳಲು ಕಾರಣವೂ ಆಗಿತ್ತು. ಈ ಹಾಡಿನ ವಿರುದ್ಧ ಟ್ಯೂನ್ ಕದ್ದ ಆರೋಪ ಕೇಳಿ ಬಂದಿತ್ತು. ಇತ್ತೀಚೆಗಷ್ಟೇ ತೈಕ್ಕುಡಂ ಬ್ರಿಡ್ಜ್ ಬ್ಯಾಂಡ್‍ ನ ಸದಸ್ಯರು ಕೋರ್ಟಿಗೆ ಮೊರೆ ಹೋಗಿದ್ದರು. ಹಾಗಾಗಿ ಕೋಯಿಕ್ಕೋಡ್ ಕೋರ್ಟ್ ಸಿನಿಮಾದಲ್ಲಿ ಈ ಹಾಡು ಬಳಸದಂತೆ ತಡೆಯಾಜ್ಞೆ  ನೀಡಿತ್ತು.

    ಆದರೂ, ಕಾಂತರ ಸಿನಿಮಾದ ತಂಡ ನಾವು ಯಾವುದೇ ರೀತಿಯಲ್ಲಿ ಹಾಡನ್ನು ಕಾಪಿ ಮಾಡಿಲ್ಲ. ಹಾಗಾಗಿ ಚಿತ್ರದಲ್ಲಿ ಆ ಹಾಡು ಇರತ್ತೆ ಎಂದು ಈವರೆಗೂ ಥಿಯೇಟರ್ ನಲ್ಲಿ ಅದನ್ನು ಮುಂದುವರೆಸಿಕೊಂಡು ಬಂದಿದ್ದರು. ಇದೀಗ ಮತ್ತೊಂದು ಕೇಸ್ ದಾಖಲಾಗಿದ್ದು, ಮಾತೃಭೂಮಿ ಮ್ಯೂಸಿಕ್ ಸಂಸ್ಥೆಯು ಮತ್ತೆ ಕೋರ್ಟ್ ಮೊರೆ ಹೋಗಿದೆ. ಹಾಗಾಗಿ ಅರ್ಜಿಯ ವಿಚಾರಣೆ ನಡೆಸಿರುವ ಪಾಲಕ್ಕಾಡ್ ಕೋರ್ಟ್ (Palakkad Court) ಮುಂದಿನ ಆದೇಶ ಬರುವವರೆಗೂ ಈ ಹಾಡನ್ನು ಎಲ್ಲಿಯೂ ಹಂಚಿಕೆ ಮಾಡುವಂತಿಲ್ಲ ಎಂದು ತಡೆಯಾಜ್ಞೆ  (Injunction)ನೀಡಿದೆ. ಇದನ್ನೂ ಓದಿ:`ಬಾಹುಬಲಿ’ ಪ್ರಭಾಸ್‌ಗೆ ಶಾಕ್ ಕೊಟ್ಟ ಜಿಎಸ್‌ಟಿ ಅಧಿಕಾರಿಗಳು

    ಇನ್ನೂ ಕೋರ್ಟ್ ಆದೇಶದ ಪ್ರತಿ ಚಿತ್ರತಂಡಕ್ಕೆ ಸಿಗದೇ ಇರುವ ಕಾರಣದಿಂದಾಗಿ ಥಿಯೇಟರ್ ನಲ್ಲಿ ಈ ಹಾಡು ಕೇಳಿ ಬರುತ್ತಿದೆ. ಆದೇಶ ಪ್ರತಿ ಸಿಕ್ಕ ನಂತರ ಯಾವ ನಿರ್ಧಾರ ತಗೆದುಕೊಳ್ಳುತ್ತಾರೋ ಕಾದು ನೋಡಬೇಕು. ಅಷ್ಟೇ ಅಲ್ಲದೇ, ಮೊನ್ನೆಯಷ್ಟೇ ಬ್ಯಾಂಡ್ ನ ಸದಸ್ಯರೊಬ್ಬರು ಫೇಸ್ ಬುಕ್ ನಲ್ಲಿ ಬರೆದುಕೊಂಡು, ‘ಕ್ರೆಡಿಟ್ ಕೊಟ್ಟು ಈ ಹಾಡನ್ನು ಬಳಸಿಕೊಳ್ಳಬಹುದು ಎಂದು ಹೇಳಿದ್ದರು. ಆದರೆ, ಮ್ಯೂಸಿಕ್ ಸಂಸ್ಥೆ ಆ ರೀತಿಯ ಯಾವುದೇ ಹೇಳಿಕೆ ನೀಡಿಲ್ಲ.

    ಎರಡೆರಡು ಕೋರ್ಟಿನಿಂದ ಈ ಹಾಡಿಗೆ ತಡೆಯಾಜ್ಞೆ ನೀಡಿದೆ. ಆದರೂ, ಕನ್ನಡವೂ ಸೇರಿದಂತೆ ನಾನಾ ಭಾಷೆಗಳಲ್ಲಿ ಈ ಸಿನಿಮಾ ಪ್ರದರ್ಶನವಾಗುತ್ತಿದೆ. ಮುಂದಿನ ದಿನಗಳಲ್ಲಿ ಕೋರ್ಟ್ ಮಾತಿಗೆ ಚಿತ್ರತಂಡ ಯಾವ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತದೆಯೋ ಕಾದು ನೋಡಬೇಕು. ಅಷ್ಟರಲ್ಲಿ ಸಂಧಾನ ಏನಾದರೂ ನಡೆದರೂ ಅಚ್ಚರಿ ಪಡಬೇಕಿಲ್ಲ.

    Live Tv
    [brid partner=56869869 player=32851 video=960834 autoplay=true]