Tag: Rishabh Shetty

  • Exclusive details- ಮೋದಿ ಔತಣಕೂಟ : ಸಿನಿಮಾ ರಂಗದಿಂದ ಯಾರೆಲ್ಲ ಭಾಗಿ, ಆದ ಮಾತುಕತೆ ಏನು?

    Exclusive details- ಮೋದಿ ಔತಣಕೂಟ : ಸಿನಿಮಾ ರಂಗದಿಂದ ಯಾರೆಲ್ಲ ಭಾಗಿ, ಆದ ಮಾತುಕತೆ ಏನು?

    ನಿನ್ನೆ ನಡೆದ ಪ್ರಧಾನಿ ನರೇಂದ್ರ ಮೋದಿ (Narendra Modi) ಜೊತೆಗಿನ ಔತಣಕೂಟದಲ್ಲಿ ಪ್ರಮುಖ ಆಕರ್ಷಣೆಯಾಗಿದ್ದು ಸ್ಯಾಂಡಲ್ ವುಡ್ ಸಿಲೆಬ್ರಿಟಿಗಳು. ರಾತ್ರಿ 8.20 ರಿಂದ ರಾಜಭವನದಲ್ಲಿ ನಡೆದ ಔತಣಕೂಟದಲ್ಲಿ ಯಾರೆಲ್ಲ ಭಾಗಿ ಆಗಲಿದ್ದಾರೆ ಎನ್ನುವುದು ಸಂಜೆವರೆಗೂ ಸ್ವತಃ ರಾಜ್ಯ ಸರಕಾರಕ್ಕೂ ಮಾಹಿತಿ ಇರಲಿಲ್ಲ. ಆ ಮಟ್ಟದಲ್ಲಿ ಗೌಪ್ಯತೆಯನ್ನು ಕಾಪಾಡಿಕೊಳ್ಳಲಾಗಿತ್ತು. ಸಂಜೆ 8.30ರ ನಂತರ ನಡೆದ ಔತಣಕೂಟದಲ್ಲಿ ನಟ ಯಶ್ (Yash), ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ (Rishabh Shetty), ನಿರ್ಮಾಪಕರಾದ ವಿಜಯ್ ಕಿರಗಂದೂರು (Vijay Kirgandur) ಮತ್ತು ಅಶ್ವಿನಿ ಪುನೀತ್ ರಾಜ್ ಕುಮಾರ್ (Puneeth rajkumar, ಹಾಗೂ   ಶ್ರದ್ಧಾ ಜೈನ್ ಅವರು ಭಾಗಿಯಾಗಿದ್ದರು.

     

    ಕನ್ನಡ ಚಿತ್ರೋದ್ಯಮದ ಬಗ್ಗೆ ಮೋದಿ ಪ್ರಂಶಸೆ 

    ನಿನ್ನೆ ನಡೆದ ಔತಣಕೂಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡ ಚಿತ್ರೋದ್ಯಮದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಉತ್ತರ ಭಾರತದ ಚಿತ್ರಗಳಿಗಿಂತ ಹೆಚ್ಚು ಖ್ಯಾತಿ ಗಳಿಸುತ್ತಿರುವುದಕ್ಕೆ ಪ್ರಧಾನಿ ಮೆಚ್ಚುಗೆಯನ್ನೂ ಈ ಸಂದರ್ಭದಲ್ಲಿ ವ್ಯಕ್ತಪಡಿಸಿದ್ದಾರೆ. ನಾಡಿನ ಸಾಂಸ್ಕೃತಿಕ ಪರಂಪರೆಗೆ ಕನ್ನಡ ಚಿತ್ರೋದ್ಯಮವು ಒತ್ತು ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಹಾಡಿಹೊಗಳಿದ್ದಾರೆ. ದೇಶ-ವಿದೇಶಗಳಿಗೆ ನಮ್ಮ ಪರಂಪರೆಯನ್ನು ಕನ್ನಡ ಚಿತ್ರರಂಗದ ಮೂಲಕ ಪರಿಚಯಿಸುತ್ತಿರುವುದಕ್ಕೆ ಅಭಿನಂದನೆ ವ್ಯಕ್ತ ಪಡಿಸಿದ್ದಾರೆ. ಕನ್ನಡ ಚಿತ್ರೋದ್ಯಮದ ಯಾವುದೇ ಸಮಸ್ಯೆಗಳಿದ್ದರೂ ಗಮನಕ್ಕೆ ತನ್ನಿ ಎಂದು ಹೇಳಿದ್ದಾರೆ.

    ಪುನೀತ್ ಸ್ಮರಿಸಿದ ಪ್ರಧಾನಿ 

    ಕನ್ನಡ ಸಿನಿಮಾ ರಂಗದ ಹೆಸರಾಂತ ನಟ ಪುನೀತ್ ರಾಜ್ ಕುಮಾರ್ ಅವರ ಜನಪ್ರಿಯತೆಯನ್ನು ಪ್ರಧಾನಿ ಮೋದಿ ಇದೇ ಸಂದರ್ಭದಲ್ಲಿ ಸ್ಮರಿಸಿದ್ದಾರೆ. ಅಶ್ವಿನಿ ಕುಮಾರ್ ಜೊತೆ ಕೆಲ ಸಮಯ ಮಾತನಾಡಿದ ಪ್ರಧಾನಿ, ಪುನೀತ್ ಅವರು ಈ ನಾಡಿಗೆ ನೀಡಿದ ಕೊಡುಗೆಯನ್ನು ಕೊಂಡಾಡಿದ್ದಾರೆ. ಪುನೀತ್ ಅವರ ಸೇವೆಯನ್ನು ಈ ದೇಶ ಯಾವತ್ತೂ ಮರೆಯುವುದಿಲ್ಲ ಎಂದು ಸ್ಮರಿಸಿದ್ದಾರೆ.

    ಯಶ್ ಮತ್ತು ರಿಷಬ್ ಗೆ ಶಹಬ್ಬಾಶ್ ಎಂದ ಮೋದಿ 

    ಕನ್ನಡ ಸಿನಿಮಾಗಳ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬೆಳೆದಿರುವ ನಟ ಯಶ್ ಮತ್ತು ರಿಷಬ್ ಶೆಟ್ಟಿ ಜೊತೆಯೂ ಪ್ರಧಾನಿ ಮೋದಿ ವೈಯಕ್ತಿಕವಾಗಿ ಭೇಟಿ ಮಾಡಿದ್ದಾರೆ. ಇಬ್ಬರ ಕಲಾಪ್ರೌಢಿಮೆಯನ್ನು ಮೆಚ್ಚಿ ಮಾತನಾಡಿದ್ದಾರೆ. ಇನ್ನಷ್ಟು ಕೀರ್ತಿಗಳಿಸುವಂತೆ ಇಬ್ಬರಿಗೂ ಬೆನ್ನು ತಟ್ಟಿ ಶುಭ ಹಾರಿಸಿದ್ದಾರೆ. ಜೊತೆಗೆ ಹೊಂಬಾಳೆ ಫಿಲ್ಮ್ಸ್ ಬಗ್ಗೆಯೂ ಮೆಚ್ಚಿಕೊಂಡ ಮೋದಿ, ಯುವ ನಿರ್ಮಾಪಕ ವಿಜಯ್ ಕಿರಗಂದೂರು ಬೆನ್ನು ತಟ್ಟಿದ್ದಾರೆ. ಮಾಜಿ ರೆಡಿಯೋ ಜಾಕಿ ಶ್ರದ್ಧಾ ಜೈನ್ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪ್ರಧಾನಿ ಮೋದಿ ಜೊತೆ ಔತಣಕೂಟದಲ್ಲಿ ಯಶ್, ರಿಷಬ್ ಶೆಟ್ಟಿ ಭಾಗಿ?

    ಪ್ರಧಾನಿ ಮೋದಿ ಜೊತೆ ಔತಣಕೂಟದಲ್ಲಿ ಯಶ್, ರಿಷಬ್ ಶೆಟ್ಟಿ ಭಾಗಿ?

    ರೋ ಇಂಡಿಯಾ 2023 ಕಾರ್ಯಕ್ರಮದಲ್ಲಿ ಭಾಗಿಯಾಗಲು ನಿನ್ನೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಬಂದಿಳಿದಿದ್ದಾರೆ. ರಾತ್ರಿ ಅವರಿಗಾಗಿ ರಾಜಭವನದಲ್ಲಿ ವಿಶೇಷ ಔತಣಕೂಟವನ್ನು ರಾಜ್ಯಪಾಲರು ಏರ್ಪಡಿಸಿದ್ದರು. ಈ ಔತಣ ಕೂಟದಲ್ಲಿ ಸಿನಿಮಾ ರಂಗದ ನಾಲ್ವರು ಗಣ್ಯರು ಭಾಗಿಯಾಗಿದ್ದರು ಎಂದು ಹೇಳಲಾಗುತ್ತಿದೆ. ಕೇವಲ ಸಿನಿಮಾ ಗಣ್ಯರು ಮಾತ್ರವಲ್ಲ, ಕ್ರಿಕೆಟ್ ರಂಗದ ದಿಗ್ಗಜರು ಮತ್ತು ಕೆಲ ಯುವ ಉದ್ಯಮಿಗಳನ್ನು ಆಹ್ವಾನಿಸಲಾಗಿತ್ತು ಎನ್ನುವ ಸುದ್ದಿಯಿದೆ.

    ಸ್ಯಾಂಡಲ್ ವುಡ್ ಸಿನಿಮಾ ರಂಗದಿಂದ ನಟ ಯಶ್, ನಿರ್ದೇಶಕ, ನಟ ರಿಷಬ್ ಶೆಟ್ಟಿ ಹಾಗೂ ನಿರ್ಮಾಪಕರಾದ ಅಶ್ವಿನಿ ಪುನೀತ್ ರಾಜ್ ಕುಮಾರ್ ಮತ್ತು ವಿಜಯ್ ಕಿರಗಂದೂರು, ನಿರ್ದೇಶಕ ಪ್ರಶಾಂತ್ ನೀಲ್  ಔತಣಕೂಟದಲ್ಲಿ ಭಾಗಿಯಾಗಿದ್ದರು ಎಂದು ಹೇಳಲಾಗುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಕೆಲವು ಫೋಟೋಗಳು ಕೂಡ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಕೆಜಿಎಫ್ 2 ಹಾಗೂ ಕಾಂತಾರ ಸಿನಿಮಾದ ಯಶಸ್ಸಿನ ಕಾರಣದಿಂದಾಗಿ ಇವರಿಗಷ್ಟೇ ಆಹ್ವಾನ ನೀಡಲಾಗಿದೆ ಎನ್ನುವ ಸುದ್ದಿಯಿದೆ. ಇದನ್ನೂ ಓದಿ: ಆನಂದ್ ಮಹಿಂದ್ರಾ ಜೊತೆ `ನಾಟು ನಾಟು’ ಹಾಡಿಗೆ ಹೆಜ್ಜೆ ಹಾಕಿದ ರಾಮ್ ಚರಣ್

    ಇಂದು ಬೆಳಗ್ಗೆ 9.30ಕ್ಕೆ ಪ್ರಧಾನಿಗಳು ಏರೋ ಇಂಡಿಯಾ ಕಾರ್ಯಕ್ರಮವನ್ನು ಉದ್ಘಾಟನೆ ಮಾಡುತ್ತಿದ್ದಾರೆ. ಅದಕ್ಕೂ ಮುನ್ನ ಅವರು ನಿನ್ನೆಯೇ ಬೆಂಗಳೂರಿಗೆ ಬಂದಿಳಿದಿದ್ದರು. ಔತಣಕೂಟದ ನೆಪದಲ್ಲಿ ಕರ್ನಾಟಕದ ಗಣ್ಯರನ್ನು ಪ್ರಧಾನಿಯವರೊಂದಿಗೆ ಮುಖಾಮುಖಿ ಮಾಡಿಸಲಾಗಿದೆ. ಸಿನಿಮಾ ರಂಗದ ಗಣ್ಯರ ಜೊತೆ ಕ್ರಿಕೆಟಿಗರಾದ ಜಾವಗಲ್ ಶ್ರೀನಾಥ್, ಮನೀಶ್ ಪಾಂಡೆ, ಅನಿಲ್ ಕುಂಬ್ಳೆ, ಮರ್ಯಾಂಕ್ ಅಗರ್ವಾಲ್ ಮುಂತಾದವರು ಭಾಗಿಯಾಗಿದ್ದರು.

     

    ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಈ ಔತಣಕೂಟ ಕೂಡ ಮಹತ್ವ ಪಡೆದುಕೊಂಡಿದೆ. ಯಶ್ ಮತ್ತು ರಿಷಬ್ ಶೆಟ್ಟಿ ಈಗ ಕೇವಲ ಸ್ಯಾಂಡಲ್ ವುಡ್ ನಟರಾಗಿ ಮಾತ್ರ ಉಳಿದುಕೊಂಡಿಲ್ಲ. ಪ್ಯಾನ್ ಇಂಡಿಯಾ ಸ್ಟಾರ್ ಆಗಿಯೂ ಬೆಳೆದಿದ್ದಾರೆ. ಅವರ ಸಿನಿಮಾಗಳು ಬಾಕ್ಸ್ ಆಫೀಸಿನಲ್ಲಿ ಕೋಟಿ ಕೋಟಿ ಹಣವನ್ನು ಸಂಪಾದನೆ ಮಾಡಿವೆ. ಈ ಕಾರಣದಿಂದಾಗಿಯೇ ಪ್ರಧಾನಿಯ ಭೇಟಿ ಮಹತ್ವ ಪಡೆದುಕೊಂಡಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ವಿಧಾನಸಭೆ ಚುನಾವಣೆಯಲ್ಲಿ ಭಾಗಿ ಆಗ್ತೀನಿ: ವಿಭಿನ್ನ ಉತ್ತರ ಕೊಟ್ಟ ರಿಷಬ್ ಶೆಟ್ಟಿ

    ವಿಧಾನಸಭೆ ಚುನಾವಣೆಯಲ್ಲಿ ಭಾಗಿ ಆಗ್ತೀನಿ: ವಿಭಿನ್ನ ಉತ್ತರ ಕೊಟ್ಟ ರಿಷಬ್ ಶೆಟ್ಟಿ

    ಕಾಂತಾರ ಸಿನಿಮಾ ಸೂಪರ್ ಹಿಟ್ ಆಗುತ್ತಿದ್ದಂತೆಯೇ ನಿರ್ದೇಶಕ, ನಟ ರಿಷಬ್ ಶೆಟ್ಟಿ ಹೆಸರು ರಾಜಕಾರಣದ ಪಡಸಾಲೆಯಲ್ಲಿ ಹೆಚ್ಚು ಸದ್ದು ಮಾಡುತ್ತಿದೆ. ಅದರಲ್ಲೂ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಿಷಬ್ ಸ್ಪರ್ಧಿಸಲಿದ್ದಾರೆ ಎನ್ನುವ ಮಾತೂ ಸ್ಯಾಂಡಲ್ ವುಡ್ ನಲ್ಲಿ ಹರಿದಾಡುತ್ತಿತ್ತು. ಎರಡು ಪ್ರಮುಖ ರಾಜಕೀಯ ಪಕ್ಷಗಳು ಅವರೊಂದಿಗೆ ಚರ್ಚೆ ಮಾಡಿವೆ ಎಂದೂ ಹೇಳಲಾಗಿತ್ತು. ಈ ಎಲ್ಲ ಪ್ರಶ್ನೆಗಳಿಗೂ ಸ್ವತಃ ರಿಷಬ್ ಶೆಟ್ಟಿ ಅವರೇ ಉತ್ತರಿಸಿದ್ದಾರೆ.

    ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘ ಆಯೋಜನೆ ಮಾಡಿದ್ದ ‘ಮುಖಾಮುಖಿ’ ಕಾರ್ಯಕ್ರಮದಲ್ಲಿ ‘ಪಬ್ಲಿಕ್ ಟಿವಿ ಡಿಜಿಟಲ್’ ಕೇಳಿದ ಪ್ರಶ್ನೆಗೆ ಉತ್ತರಿಸಿದ ರಿಷಬ್, ‘ಸದ್ಯ ಸಿನಿಮಾದಲ್ಲಿ ಬ್ಯುಸಿಯಾಗಿದ್ದೇನೆ. ಸಮಾಜಸೇವೆಗೆ ರಾಜಕಾರಣವೇ ಆಗಬೇಕಿಲ್ಲ’ ಎಂದು ಉತ್ತರಿಸಿದ್ದಾರೆ. ಈ ಮೂಲಕ ರಾಜಕಾರಣದ ಒಲವಿನ ಬಗ್ಗೆ ರಿಷಬ್ ಅಲ್ಲಗಳೆದಿದ್ದಾರೆ. ರಾಜಕಾರಣಕ್ಕೆ ಸಂಬಂಧಿಸಿದ ವಿಷಯಗಳು ತಮಗೂ ತಲುಪಿರುವ ಕುರಿತೂ ಅವರು ಮಾತನಾಡಿದರು.

    ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ನೀವು ಎಲ್ಲಿರುತ್ತೀರಿ? ಎಂದು ಕೇಳಲಾದ ಪ್ರಶ್ನೆಗೂ ಅವರು ಉತ್ತರಿಸಿದ್ದು, ‘ಕಾಂತಾರ ಸಿನಿಮಾದ ಕೆಲಸದಲ್ಲಿ ಇರುವೆ. ಮತದಾನ ನಮ್ಮೆಲ್ಲರ ಹಕ್ಕು. ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗುವೆ’ ಎಂದರು ರಿಷಬ್. ಈ ಮೂಲಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಇದೆಲ್ಲ ಕಪೋಕಲ್ಪಿತ ಮಾತು ಎಂದು ಅವರು ಹೇಳಿದರು. ಈ ಕಾರ್ಯಕ್ರಮವನ್ನು ಹಿರಿಯ ಪತ್ರಕರ್ತ ಮುರಳೀಧರ್ ಖಜಾನ್ ನಡೆಸಿಕೊಟ್ಟರೆ, ಕರ್ನಾಟಕ ಚಲನಚಿತ್ರ ಪರ್ತಕರ್ತರ ಸಂಘದ ಅಧ್ಯಕ್ಷ ಬಾ.ನಾ.ಸುಬ್ರಮಣ್ಯ ವೇದಿಕೆ ಮೇಲಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ವರಾಹ ರೂಪಂ ವಿವಾದ : ರಿಷಬ್ ಶೆಟ್ಟಿ ಮತ್ತು ತಂಡಕ್ಕೆ ಸುಪ್ರೀಂಕೋರ್ಟ್ ನಿಂದ ಬಿಗ್ ರಿಲೀಫ್

    ವರಾಹ ರೂಪಂ ವಿವಾದ : ರಿಷಬ್ ಶೆಟ್ಟಿ ಮತ್ತು ತಂಡಕ್ಕೆ ಸುಪ್ರೀಂಕೋರ್ಟ್ ನಿಂದ ಬಿಗ್ ರಿಲೀಫ್

    ‘ವರಾಹ ರೂಪಂ’ (Varaha Rupam) ಹಾಡಿಗೆ (Song) ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ವಿಧಿಸಿದ್ದ ಷರತ್ತನ್ನು ಇಂದು ಸುಪ್ರೀಂ ಕೋರ್ಟ್ ಸಡಿಲಿಸಿದೆ. ಕೆಲವು ಷರತ್ತುಗಳನ್ನು ಹಾಕುವ ಮೂಲಕ ‘ಕಾಂತಾರ’ (Kantara) ಸಿನಿಮಾದ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishabh Shetty) ಹಾಗೂ ನಿರ್ಮಾಪಕ ವಿಜಯ್ ಕಿರಗಂದೂರು (Vijay Kirgandur) ಅವರಿಗೆ ಕೇರಳ ಹೈಕೋರ್ಟ್ ಮೊನ್ನೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ‘ವರಾಹ ರೂಪಂ’ ಹಾಡಿಗೆ ಸಂಬಂಧಿಸಿದಂತೆ ಕೇರಳದ ಹೈಕೋರ್ಟ್ ನ್ಯಾಯಮೂರ್ತಿ ಎ.ಬದ್ರುದ್ದೀನ್ ಅವರು ‘ಕಾಪಿರೈಟ್ ಪ್ರಕರಣದಲ್ಲಿ ಸಿವಿಲ್ ಕೋರ್ಟ್ ನಿಂದ ಆದೇಶ ಬರೋವರೆಗೂ ವರಾಹ ರೂಪಂ ಹಾಡನ್ನು ಬಳಕೆ ಮಾಡುವಂತಿಲ್ಲ’ ಎನ್ನುವ ಷರತ್ತೂ ಸೇರಿದಂತೆ ಹಲವು ಷರತ್ತುಗಳು ಹಾಕಿತ್ತು.

    ಎರಡು ದಿನಗಳ ಕಾಲ ಅಂದರೆ ಫೆ.12 ಮತ್ತು 13 ರಂದು ವಿಚಾರಣೆಗಾಗಿ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ತನಿಖಾಧಿಕಾರಿಯು ಅವರನ್ನು ವಿಚಾರಣೆಗೆ ಒಳಪಡಿಸಿ, ಒಂದು ವೇಳೆ ಬಂಧಿಸಿದರೆ ನ್ಯಾಯವ್ಯಾಪ್ತಿಯ ನ್ಯಾಯಾಲಯಕ್ಕೆ ಹಾಜರು ಪಡಿಸಬೇಕು. ನಂತರ  50 ಸಾವಿರ ಬಾಂಡ್  ಹಾಗೂ ಇಬ್ಬರ ಶ್ಯೂರಿಟಿ ಮೇಲೆ ಕೋರ್ಟ್ ಜಾಮೀನು ನೀಡಬೇಕು. ಆರೋಪಿಗಳು ಅರ್ಜಿದಾರರನ್ನು ಹಾಗೂ ಸಾಕ್ಷಿಗಳನ್ನು ಬೆದರಿಸಬಾರದು ಮತ್ತು ಸಾಕ್ಷ್ಯ ನಾಶ ಮಾಡುವಂತಹ ಕೆಲಸಕ್ಕೆ ಕೈ ಹಾಕಬಾರದು. ಹಾಗೂ ತನಿಖೆಗೆ ಸಹಕರಿಸಬೇಕು. ನ್ಯಾಯಾಲಯದ ಪೂರ್ವಾನುಮತಿಯಿಲ್ಲದೇ ಆರೋಪಿಗಳು ಭಾರತವನ್ನು ತೊರೆಯುವಂತಿಲ್ಲ. ಜಾಮೀನು ಪಡೆದ ಸಮಯದಲ್ಲಿ ಆರೋಪಿಗಳು ಯಾವುದೇ ಅಪರಾಧದ ಕೃತ್ಯದಲ್ಲಿ ಭಾಗಿಯಾಗುವಂತಿಲ್ಲ. ಅಂತಹ ಘಟನೆಗಳು ನಡೆದಿರುವುದು ಕೋರ್ಟ್ ಗಮನಕ್ಕೆ ಬಂದರೆ, ಜಾಮೀನನ್ನು ರದ್ದುಗೊಳಿಸಲಾಗುವುದು ಎಂದು ಕೋರ್ಟ್ ತಿಳಿಸಿತ್ತು. ಇದೀಗ ಸುಪ್ರೀಂ ಕೋರ್ಟ್, ನಟ ನಿರ್ದೇಶಕ ರಿಷಬ್ ಶೆಟ್ಟಿ, ನಿರ್ಮಾಪಕ ವಿಜಯ್ ಕಿರ್ಗಂದೂರ್ ಗೆ ಮಧ್ಯಂತರ ರಕ್ಷಣೆ ನೀಡಿದೆ. ತನಿಖೆ ವೇಳೆ ಬಂಧಿಸದಂತೆ ಸುಪ್ರೀಂ ಸೂಚಿಸಿದೆ. ಇದನ್ನೂ ಓದಿ: ಕ್ರಶ್ ಮದುವೆ ಆಗಿದ್ದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಬೇಸರ ಹೊರಹಾಕಿದ ಸುದೀಪ್ ಪುತ್ರಿ

    ‘ಕಾಂತಾರ’ ಸಿನಿಮಾದ ಸೂಪರ್ ಹಿಟ್ ‘ವರಾಹ ರೂಪಂ’ ಹಾಡಿನ ಟ್ಯೂನ್ ಅನ್ನು ಕದಿಯಲಾಗಿದೆ ಎಂದು ಮಲಯಾಳಂನ ತೈಕ್ಕುಡಂ ಬ್ರಿಡ್ಜ್ ಆರೋಪಿಸಿ ದೂರು ನೀಡಿತ್ತು.  ಅದು ತಮ್ಮ ‘ನವರಸಂ’ ಹಾಡಿನದ್ದು ಎನ್ನುವುದನ್ನು ಸಾಕ್ಷ್ಯ ಸಮೇತ ಕೋಯಿಕ್ಕೋಡ್ ನ ಠಾಣೆಯಲ್ಲಿ ದೂರು ದಾಖಲಿಸಿತ್ತು.  ಈ ದೂರಿಗೆ ಸಂಬಂಧಿಸಿದಂತೆ ಮೊನ್ನೆ ಹೊಂಬಾಳೆ ಫಿಲ್ಮ್ಸ್ ನ ವಿಜಯ್ ಕಿರಗಂದೂರು ಮತ್ತು ರಿಷಬ್ ಶೆಟ್ಟಿ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ.

    ರವಿವಾರವಷ್ಟೇ ‘ಕಾಂತಾರ’ ಸಿನಿಮಾದ ಶತದಿನೋತ್ಸವ ಆಚರಿಸಿದೆ ಚಿತ್ರತಂಡ. ಈ ವೇಳೆಯಲ್ಲಿ ‘ಕಾಂತಾರ 1’ ಸಿನಿಮಾದ ವಿಷಯವನ್ನೂ ಹಂಚಿಕೊಂಡಿದೆ. ಏಪ್ರಿಲ್ ಹೊತ್ತಿಗೆ ‘ಕಾಂತಾರ 1’ ಸಿನಿಮಾದ ಕೆಲವು ವಿಷಯಗಳನ್ನೂ ನಿರ್ದೇಶಕರು ಹಂಚಿಕೊಳ್ಳಲಿದ್ದಾರೆ. ಈಗಾಗಲೇ ಸ್ಕ್ರಿಪ್ಟ್ ಕೆಲಸದಲ್ಲಿ ಚಿತ್ರತಂಡ ತೊಡಗಿಕೊಂಡಿದೆ. ಆದರೂ, ವರಾಹ ರೂಪಂ ಹಾಡಿನ ಸಮಸ್ಯೆ ಬಗೆಹರಿದಿಲ್ಲ. ಮುಂದಿನ ದಿನಗಳಲ್ಲಿ ಯಾರ ಪರ ತೀರ್ಪು ಬರಬಹುದು ಎನ್ನುವುದು ಸದ್ಯಕ್ಕಿರುವ ಕುತೂಹಲವಷ್ಟೇ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ವರಾಹ ರೂಪಂ ವಿವಾದ : ನಿರೀಕ್ಷಣಾ ಜಾಮೀನು ಪಡೆದ ರಿಷಬ್, ವಿಜಯ್ ಕಿರಗಂದೂರು

    ವರಾಹ ರೂಪಂ ವಿವಾದ : ನಿರೀಕ್ಷಣಾ ಜಾಮೀನು ಪಡೆದ ರಿಷಬ್, ವಿಜಯ್ ಕಿರಗಂದೂರು

    ಕೆಲವು ಷರತ್ತುಗಳನ್ನು ಹಾಕುವ ಮೂಲಕ ‘ಕಾಂತಾರ’ (Kantara) ಸಿನಿಮಾದ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishabh Shetty) ಹಾಗೂ ನಿರ್ಮಾಪಕ ವಿಜಯ್ ಕಿರಗಂದೂರು (Vijay Kirgandur) ಅವರಿಗೆ ಕೇರಳ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ‘ವರಾಹ ರೂಪಂ’ (Varaha Rupam) ಹಾಡಿಗೆ (Song) ಸಂಬಂಧಿಸಿದಂತೆ ಕೇರಳದ ಹೈಕೋರ್ಟ್ ನ್ಯಾಯಮೂರ್ತಿ ಎ.ಬದ್ರುದೀನ್ ಅವರು ‘ಕಾಪಿರೈಟ್ ಪ್ರಕರಣದಲ್ಲಿ ಸಿವಿಲ್ ಕೋರ್ಟ್ ನಿಂದ ಆದೇಶ ಬರೋವರೆಗೂ ವರಾಹ ರೂಪಂ ಹಾಡನ್ನು ಬಳಕೆ ಮಾಡುವಂತಿಲ್ಲ’ ಎಂದು ಷರತ್ತು ಹಾಕಿದ್ದಾರೆ.  ಅಲ್ಲದೇ, ಮರುವಿಚಾರಣೆಗೆ ಕೋರಲು ಅರ್ಜಿದಾರರಿಗೆ ಅವಕಾಶವಿದೆ ಎಂದು ಹೇಳಿದ್ದಾರೆ.

    ‘ಕಾಂತಾರ’ ಸಿನಿಮಾದ ಸೂಪರ್ ಹಿಟ್ ‘ವರಾಹ ರೂಪಂ’ ಹಾಡಿನ ಟ್ಯೂನ್ ಅನ್ನು ಕದಿಯಲಾಗಿದೆ ಎಂದು ಮಲಯಾಳಂನ ತೈಕ್ಕುಡಂ ಬ್ರಿಡ್ಜ್ ಆರೋಪಿಸಿ ದೂರು ನೀಡಿತ್ತು.  ಅದು ತಮ್ಮ ‘ನವರಸಂ’ ಹಾಡಿನದ್ದು ಎನ್ನುವುದನ್ನು ಸಾಕ್ಷ್ಯ ಸಮೇತ ಕೋಯಿಕ್ಕೋಡ್ ನ ಠಾಣೆಯಲ್ಲಿ ದೂರು ದಾಖಲಿಸಿತ್ತು.  ಈ ದೂರಿಗೆ ಸಂಬಂಧಿಸಿದಂತೆ ನಿನ್ನೆ ಹೊಂಬಾಳೆ ಫಿಲ್ಮ್ಸ್ ನ ವಿಜಯ್ ಕಿರಗಂದೂರು ಮತ್ತು ರಿಷಬ್ ಶೆಟ್ಟಿ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ. ಇದನ್ನೂ ಓದಿ: ಸಾಲು ಸಾಲು ಸಿನಿಮಾಗಳ ನಡುವೆ ಕಾವಿತೊಟ್ಟು ಅಚ್ಚರಿ ಮೂಡಿಸಿದ ಮಿಲ್ಕಿ ಬ್ಯೂಟಿ

    ರವಿವಾರವಷ್ಟೇ ‘ಕಾಂತಾರ’ ಸಿನಿಮಾದ ಶತದಿನೋತ್ಸವ ಆಚರಿಸಿದೆ ಚಿತ್ರತಂಡ. ಈ ವೇಳೆಯಲ್ಲಿ ‘ಕಾಂತಾರ 1’ ಸಿನಿಮಾದ ವಿಷಯವನ್ನೂ ಹಂಚಿಕೊಂಡಿದೆ. ಏಪ್ರಿಲ್ ಹೊತ್ತಿಗೆ ‘ಕಾಂತಾರ 1’ ಸಿನಿಮಾದ ಕೆಲವು ವಿಷಯಗಳನ್ನೂ ನಿರ್ದೇಶಕರು ಹಂಚಿಕೊಳ್ಳಲಿದ್ದಾರೆ. ಈಗಾಗಲೇ ಸ್ಕ್ರಿಪ್ಟ್ ಕೆಲಸದಲ್ಲಿ ಚಿತ್ರತಂಡ ತೊಡಗಿಕೊಂಡಿದೆ. ಆದರೂ, ವರಾಹ ರೂಪಂ ಹಾಡಿನ ಸಮಸ್ಯೆ ಬಗೆಹರಿದಿಲ್ಲ. ಮುಂದಿನ ದಿನಗಳಲ್ಲಿ ಯಾರ ಪರ ತೀರ್ಪು ಬರಬಹುದು ಎನ್ನುವುದು ಸದ್ಯಕ್ಕಿರುವ ಕುತೂಹಲವಷ್ಟೇ.

    ನ್ಯಾಯಾಲಯ ಹಾಕಿದ ಷರತ್ತುಗಳು :

    1. ಎರಡು ದಿನಗಳ ಕಾಲ ಅಂದರೆ ಫೆ.12 ಮತ್ತು 13 ರಂದು ವಿಚಾರಣೆಗಾಗಿ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ತನಿಖಾಧಿಕಾರಿಯು ಅವರನ್ನು ವಿಚಾರಣೆಗೆ ಒಳಪಡಿಸಿ, ಒಂದು ವೇಳೆ ಬಂಧಿಸಿದರೆ ನ್ಯಾಯವ್ಯಾಪ್ತಿಯ ನ್ಯಾಯಾಲಯಕ್ಕೆ ಹಾಜರು ಪಡಿಸಬೇಕು. ನಂತರ 50 ಸಾವಿರ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಮೇಲೆ ಕೋರ್ಟ್ ಜಾಮೀನು ನೀಡಬೇಕು.
    2. ಆರೋಪಿಗಳು ಅರ್ಜಿದಾರರನ್ನು ಹಾಗೂ ಸಾಕ್ಷಿಗಳನ್ನು ಬೆದರಿಸಬಾರದು ಮತ್ತು ಸಾಕ್ಷ್ಯ ನಾಶ ಮಾಡುವಂತಹ ಕೆಲಸಕ್ಕೆ ಕೈ ಹಾಕಬಾರದು. ಹಾಗೂ ತನಿಖೆಗೆ ಸಹಕರಿಸಬೇಕು.
    3. ನ್ಯಾಯಾಲಯದ ಪೂರ್ವಾನುಮತಿಯಿಲ್ಲದೇ ಆರೋಪಿಗಳು ಭಾರತವನ್ನು ತೊರೆಯುವಂತಿಲ್ಲ.
    4. ಜಾಮೀನು ಪಡೆದ ಸಮಯದಲ್ಲಿ ಆರೋಪಿಗಳು ಯಾವುದೇ ಅಪರಾಧದ ಕೃತ್ಯದಲ್ಲಿ ಭಾಗಿಯಾಗುವಂತಿಲ್ಲ. ಅಂತಹ ಘಟನೆಗಳು ನಡೆದಿರುವುದು ಕೋರ್ಟ್ ಗಮನಕ್ಕೆ ಬಂದರೆ, ಜಾಮೀನನ್ನು ರದ್ದುಗೊಳಿಸಲಾಗುವುದು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಇಂಗ್ಲಿಷಿನಲ್ಲೂ ‘ಕಾಂತಾರ’ ರಿಲೀಸ್ : ಮಾರ್ಚ್ 1ರಿಂದ ಲಭ್ಯ

    ಇಂಗ್ಲಿಷಿನಲ್ಲೂ ‘ಕಾಂತಾರ’ ರಿಲೀಸ್ : ಮಾರ್ಚ್ 1ರಿಂದ ಲಭ್ಯ

    ರಿಷಬ್ ಶೆಟ್ಟಿ ನಿರ್ದೇಶನ ಮಾಡಿ, ನಟಿಸಿರುವ ‘ಕಾಂತಾರ’ ಸಿನಿಮಾ ಇದೀಗ ಇಂಗ್ಲಿಷ್ ನಲ್ಲೂ ಸಿದ್ಧವಾಗಿದೆ. ಈಗಾಗಲೇ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿಯಲ್ಲೂ ಈ ಸಿನಿಮಾ ರಿಲೀಸ್ ಆಗಿದ್ದು, ಈಗ ಇಂಗ್ಲಿಷ್ ನಲ್ಲೂ ಚಿತ್ರವನ್ನು ಡಬ್ ಮಾಡಲಾಗಿದೆ. ಮಾರ್ಚ್ 1 ರಿಂದ ಓಟಿಟಿಯಲ್ಲಿ ಚಿತ್ರವನ್ನು ಬಿಡುಗಡೆ ಮಾಡಲಾಗುತ್ತಿದೆ. ಮೊನ್ನೆಯಷ್ಟೇ ಸಿನಿಮಾ ಶತದಿನೋತ್ಸವ ಕಂಡಿದೆ. ಈ ವೇಳೆಯಲ್ಲಿ ಇಂಥದ್ದೊಂದು ನಿರ್ಧಾರ ಕೈಗೊಳ್ಳಲಾಗಿದೆ.

    ಕಡಿಮೆ ವೆಚ್ಚದಲ್ಲಿ ತಯಾರಾದ ಈ ಸಿನಿಮಾ ನಾಲ್ಕುನೂರಕ್ಕೂ ಅಧಿಕ ಕೋಟಿ ಹಣವನ್ನು ಗಳಿಸಿದೆ. ನೂರು ದಿನಗಳ ಪ್ರದರ್ಶನ ಕಂಡಿದೆ. ಹಲವು ಭಾಷೆಗಳಲ್ಲಿ ಡಬ್ ಆಗಿ, ಅಷ್ಟೂ ಭಾಷೆಗಳಲ್ಲೂ ಯಶಸ್ವಿ ಪ್ರದರ್ಶನ ಕಂಡಿದೆ. ಈಗ ಇಂಗ್ಲಿಷಿನವರಿಗೂ ಈ ಸಿನಿಮಾವನ್ನು ತೋರಿಸಲು ನೆಟ್ ಫ್ಲಿಕ್ಸ್ ಸಿದ್ಧತೆ ಮಾಡಿಕೊಂಡಿದೆ. ಮಾರ್ಚ್ ಮೊದಲ ವಾರದಲ್ಲೇ ನೋಡಲು ಲಭ್ಯವಿದೆ. ಇದನ್ನೂ ಓದಿ: ರಾಮ್ ಚರಣ್ ಅದೃಷ್ಟವನ್ನೇ ಬದಲಿಸಿದ ಆರ್.ಆರ್.ಆರ್ ಚಿತ್ರ

    ಕಾಂತಾರ ನಂತರ ಕಾಂತಾರ 2 ಸಿನಿಮಾ ಬರಲಿದೆ ಎಂದು ಹೇಳಲಾಗಿತ್ತು. ಆದರೆ, ರಿಷಬ್ ಶೆಟ್ಟಿ ಬೇರೆಯದ್ದೇ ಅಚ್ಚರಿಯನ್ನು ನೀಡಿದ್ದಾರೆ. ಈಗಾಗಲೇ ನೋಡಿದ್ದು ಕಾಂತಾರ 2, ಮುಂದಿನ ದಿನಗಳಲ್ಲಿ ಬರುವುದು ಕಾಂತಾರ 1 ಎಂದು ಅವರು ಹೇಳಿಕೆ ನೀಡಿದ್ದಾರೆ. ಈಗಾಗಲೇ ನೋಡಿರುವ ಕಥೆಯ ಮುಂಚಿನ ಕಥೆಯನ್ನು ಮುಂದಿನ ಕಾಂತಾರ ಚಿತ್ರದಲ್ಲಿ ನೋಡಲಿದ್ದೀರಿ ಎಂದು ರಿಷಬ್ ತಿಳಿಸಿದ್ದಾರೆ. ಈ ಮೂಲಕ ಮತ್ತಷ್ಟು ಕುತೂಹಲ ಮೂಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಕಾಂತಾರ’ ಶತದಿನೋತ್ಸವ : ಮುಂದೆ ಬರಲಿದೆ ‘ಕಾಂತಾರ 1’

    ‘ಕಾಂತಾರ’ ಶತದಿನೋತ್ಸವ : ಮುಂದೆ ಬರಲಿದೆ ‘ಕಾಂತಾರ 1’

    ಳೆದವರ್ಷ ತೆರೆಕಂಡು ಕರ್ನಾಟಕ, ಭಾರತ ಮಾತ್ರವಲ್ಲದೆ ಭಾರತದಾಚೆಗೂ ಜನಪ್ರಿಯವಾದ, ಹೊಂಬಾಳೆ ಫಿಲಂಸ್ ನಿರ್ಮಾಣದ ಚಿತ್ರ “ಕಾಂತಾರ” ಕ್ಕೆ ಈಗ ಶತದಿನದ ಸಡಗರ.  ಇತ್ತೀಚೆಗೆ ಈ ಚಿತ್ರದ ಶತದಿನೋತ್ಸವ ಸಮಾರಂಭವನ್ನು ಬೆಂಗಳೂರಿನ ಬಂಟರ ಸಂಘದಲ್ಲಿ ನಿರ್ಮಾಪಕ ವಿಜಯ್ ಕಿರಗಂದೂರು ಅದ್ದೂರಿಯಾಗಿ ಆಯೋಜಿಸಿದ್ದರು.

    ಕಲಾವಿದರು, ತಂತ್ರಜ್ಞರು, ವಿತರಕರು, ಪ್ರದರ್ಶಕರು, ಚಿತ್ರಮಂದಿರ ಮಾಲೀಕರಿಗೆ ಈ ಸಮಯದಲ್ಲಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಕರ್ನಾಟಕ ಚಲನಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ.ಚಂದ್ರಶೇಖರ್ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ಪೊಲೀಸ್‌ ಲಾಠಿ ಏಟಿನಿಂದ ತಪ್ಪಿಸಿಕೊಳ್ಳಲು ರ‍್ಯಾಪರ್‌ನನ್ನು ತಳ್ಳಿ ಬೀಳಿಸಿದ ಫ್ಯಾನ್‌

    ಈ ಸಂದರ್ಭದಲ್ಲಿ ಮಾತನಾಡಿದ್ದ ನಾಯಕ, ನಿರ್ದೇಶಕ ರಿಷಭ್ ಶೆಟ್ಟಿ, “ಕಾಂತಾರ”ದ ಗೆಲುವು ಖುಷಿ ಕೊಟ್ಟಿದೆ. ಈ ಕಥೆಯನ್ನು ಮೊದಲು ಕಾರ್ತಿಕ್ ಗೌಡ ಅವರ ಹತ್ತಿರ, ಆನಂತರ ವಿಜಯ್ ಸರ್ ಅವರ ಬಳಿ ಕಥೆ ಹೇಳಿದೆ. ತಕ್ಷಣ ಒಪ್ಪಿಗೆ ನೀಡಿ ನಿರ್ಮಾಣಕ್ಕೆ ಮುಂದಾದರು. ಚಿತ್ರವನ್ನು ನಾನು ಅಂದುಕೊಂಡಂತೆ ತರಲು ಸಂಪೂರ್ಣ ಸಹಕಾರ ನೀಡಿದ ನಿರ್ಮಾಪಕ ವಿಜಯ್ ಕಿರಗಂದೂರು ಅವರಿಗೆ ನಾನು ಆಭಾರಿ.  ಯಶಸ್ಸಿಗೆ ಕಾರಣರಾದ ನನ್ನ ಚಿತ್ರತಂಡ, ಮಾಧ್ಯಮದ ಮಿತ್ರರಿಗೆ ಹಾಗೂ ಸಮಸ್ತ ಜನತೆಗೆ ನನ್ನ ಧನ್ಯವಾದ. ನನ್ನ ಮಡದಿ ಪ್ರಗತಿ ಅವರಿಗೆ ವಿಶೇಷ ಧನ್ಯವಾದ. ಎಲ್ಲರೂ ಕೇಳುತ್ತಿದ್ದಾರೆ?. ‘ಕಾಂತಾರ ಭಾಗ 2’ ಯಾವಾಗ ಎಂದು? ಆದರೆ ನೀವು ನೋಡಿರುವುದೇ ‘ಭಾಗ 2’. ಮುಂದೆ ಬರುವುದು ‘ಭಾಗ 1’ ಎಂದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಗರ ಭಾಗದಲ್ಲೂ ಕಂಬಳ ಕಹಳೆ- ಕಾಂತಾರದಿಂದ ಮತ್ತಷ್ಟು ರಂಗೇರಿದ ಹವಾ

    ನಗರ ಭಾಗದಲ್ಲೂ ಕಂಬಳ ಕಹಳೆ- ಕಾಂತಾರದಿಂದ ಮತ್ತಷ್ಟು ರಂಗೇರಿದ ಹವಾ

    ಮಂಗಳೂರು: ಕರಾವಳಿಯ ಜಾನಪದ ಕ್ರೀಡೆ ಕಂಬಳ ಒಂದು ಕಾಲದಲ್ಲಿ ಗ್ರಾಮೀಣ ಪ್ರದೇಶಕ್ಕೆ ಮಾತ್ರ ಸೀಮಿತವಾಗಿತ್ತು. ಆದರೆ ಇದೀಗ ನಗರ ಪ್ರದೇಶದಲ್ಲೂ ಕಂಬಳ (Kambala) ದ ಕಹಳೆ ಮೊಳಗಿದೆ. ಕಾಂತಾರ (Kantara) ಸಿನಿಮಾದ ಬಳಿಕವಂತೂ ಕಂಬಳ ಪ್ರೇಮಿಗಳ ಸಂಖ್ಯೆ ಜಾಸ್ತಿಯಾಗಿದೆ. ನಗರದೊಳಗೆ ನಡೆದ ಮಂಗಳೂರು ಕಂಬಳಕ್ಕೆ ಲಕ್ಷಾಂತರ ಮಂದಿ ಸೇರಿರೋದೇ ಇದಕ್ಕೆ ಸಾಕ್ಷಿ.

    ಹೌದು. ಹಿಂದೆಲ್ಲ ಗ್ರಾಮೀಣ ಪ್ರದೇಶದಲ್ಲಿ ಮಾತ್ರ ಕಂಬಳ ನಡೆಯುತ್ತಿದ್ದು, ಅದಕ್ಕೆ ಪುರುಷರು ಮಾತ್ರ ಹೋಗೋದು ವಾಡಿಕೆಯಾಗಿತ್ತು. ನಗರವಾಸಿಗಳು ಗ್ರಾಮೀಣ ಪ್ರದೇಶಕ್ಕೆ ಕಂಬಳ ವೀಕ್ಷಿಸಲು ಹೋಗುತ್ತಿರಲಿಲ್ಲ. ಹೀಗಾಗಿ ನಗರವಾಸಿಗಳು ಕಂಬಳದಿಂದ ವಂಚಿತರಾಗುತ್ತಿದ್ದರು. ಈ ಕಾರಣಕ್ಕಾಗಿಯೇ ಕಳೆದ ಆರು ವರ್ಷದ ಹಿಂದೆ ನಿವೃತ್ತ ಸೈನಿಕ ಬ್ರಿಜೇಶ್ ಚೌಟ ನೇತೃತ್ವದ ಯುವಕರ ತಂಡ ಮಂಗಳೂರಿನ ಬಂಗ್ರ ಕೂಳೂರು ಗೋಲ್ಡ್ ಫಿಂಚ್ ಸಿಟಿ (Gold Finch City) ಯಲ್ಲಿ ಕಂಬಳವನ್ನು ಆರಂಭಗೊಳಿಸಿದ್ದು, ಇದೀಗ ಲಕ್ಷಾಂತರ ಮಂದಿ ಸೇರೋ ಅದ್ದೂರಿ ಕಂಬಳವಾಗಿದೆ.

    ಆರನೇ ವರ್ಷದ ರಾಮ-ಲಕ್ಷ್ಮಣ ಜೋಡುಕರೆ ಕಂಬಳ ಈ ಬಾರಿಯೂ ಅದ್ದೂರಿಯಾಗಿ ನಡೆದಿದ್ದು, ದೇಶ ವಿದೇಶಗಳಿಂದ ಬಂದ ಲಕ್ಷಾಂತರ ಮಂದಿ ಕಂಬಳವನ್ನು ಪ್ರಶಂಸಿಸಿದರು. ತುಳುನಾಡಿನ ಜಾನಪದ ಕ್ರೀಡೆಯನ್ನು ಉಳಿಸಿ ಬೆಳೆಸಬೇಕು ಜೊತೆಗೆ ನಗರವಾಸಿಗಳೂ ಕಂಬಳದಿಂದ ವಂಚಿತರಾಗಬಾರದು ಅನ್ನೋದು ಆಯೋಜಕರ ಆಶಯವಾಗಿದೆ. ಇದನ್ನೂ ಓದಿ: ಜೈಪುರಕ್ಕೆ ಹೋಗಿ ಕೈ ಮುರಿದುಕೊಂಡಿದ್ದೆ – ಕಬಡ್ಡಿ ಆಡಿ ನೆನಪು ಹಂಚಿಕೊಂಡ ಹೊರಟ್ಟಿ

    ಕಂಬಳ ಅನ್ನೋದು ಅದು ವಯಸ್ಸಾದವರಿಗೆ, ಪುರುಷರಿಗೆ ಮಾತ್ರ ಅಂದು ಕೊಂಡಿದ್ದವರಿಗೆ ಈ ಬಾರಿ ತೆರೆಕಂಡ ಕಾಂತಾರ ಚಿತ್ರ ಹೊಸ ನಿರೀಕ್ಷೆ ಮೂಡಿಸಿದೆ. ಕಂಬಳ ಅಂದರೆ ಏನು ಅನ್ನೋದನ್ನು ಕಾಂತಾರ ಚಿತ್ರ ಇಡೀ ಜಗತ್ತಿಗೆ ತೋರಿಸಿಕೊಟ್ಟಿದೆ. ರಿಷಬ್ ಶೆಟ್ಟಿ (Rishab Shetty) ಅಷ್ಟೊಂದು ಕಷ್ಟಕರವಾದ ಕೋಣಗಳನ್ನು ಓಡಿಸೋದನ್ನು ಕರಗತ ಮಾಡಿ ಕೋಣ ಓಡಿಸಿದ್ದು ಸ್ವತಃ ಅವರಿಗೆ ಟ್ರೈನಿಂಗ್ ಕೊಟ್ಟ ಬೈಂದೂರು ಮಹೇಶ್ ಪೂಜಾರಿಯೂ ಇಂದಿಗೂ ಸ್ಮರಿಸುತ್ತಾರೆ.

    ಕಂಬಳ ಅಂದ್ರೆ ಸಿನಿಮಾದಲ್ಲೋ, ಮೊಬೈಲ್ ನಲ್ಲೋ ನೋಡುತ್ತಿದ್ದ ನಗರವಾಸಿಗಳೂ ಕಂಬಳವನ್ನು ಕಣ್ಣಾರೆ ಕಾಣಬೇಕೆಂಬ ಆಸೆಯಿಂದ ನಗರದೊಳಗಾದ ಕಂಬಳವನ್ನು ವೀಕ್ಷಿಸಲು ಬಂದಿದ್ದರು. ಯುವಕ -ಯುವತಿಯರೇ ಅತೀ ಹೆಚ್ಚು ಸಂಖ್ಯೆಯಲ್ಲಿ ಬಂದು ಈ ಕಂಬಳವನ್ನು ವೀಕ್ಷಿಸಿದರು.

    ಈ ಕಂಬಳ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದಿದ್ದು ಎಲ್ಲಾ ವಿಭಾಗಗಳಲ್ಲೂ ಪ್ರಥಮ ಸ್ಥಾನಕ್ಕೆ 2 ಪವನ್ ಚಿನ್ನ, ಎರಡನೇ ಸ್ಥಾನಕ್ಕೆ ಒಂದು ಪವನ್ ಚಿನ್ನವನ್ನು ಬಹುಮಾನವನ್ನಾಗಿ ಕೊಡಲಾಗುತ್ತದೆ. ಸದ್ಯ ಕಂಬಳ ನಗರ ಪ್ರದೇಶದ ಜನರನ್ನೂ ಹೆಚ್ಚು ಹೆಚ್ಚು ಆಕರ್ಷಿಸುತ್ತಿದೆ ಅನ್ನೋದಕ್ಕೆ ಇಲ್ಲಿ ಸೇರಿದ ಅಪಾರ ಜನಸ್ತೋಮವೇ ಸಾಕ್ಷಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • Kantara 2 : ಜೂನ್ ನಿಂದ ಶೂಟಿಂಗ್, ಏಪ್ರಿಲ್ 2024ಕ್ಕೆ ರಿಲೀಸ್ ಎಂದ ವಿಜಯ್ ಕಿರಗಂದೂರು

    Kantara 2 : ಜೂನ್ ನಿಂದ ಶೂಟಿಂಗ್, ಏಪ್ರಿಲ್ 2024ಕ್ಕೆ ರಿಲೀಸ್ ಎಂದ ವಿಜಯ್ ಕಿರಗಂದೂರು

    ರಿಷಬ್ ಶೆಟ್ಟಿ (Rishabh Shetty) ನಿರ್ದೇಶನ ಹಾಗೂ ನಟನೆಯಲ್ಲಿ ಮೂಡಿ ಬಂದ ‘ಕಾಂತಾರ’ ಸಿನಿಮಾ ದೊಡ್ಡ ಗೆಲುವು ಕಂಡ ಬೆನ್ನಲ್ಲೇ ‘ಕಾಂತಾರ 2’ ಸಿನಿಮಾ ಬಗ್ಗೆ ಭಾರೀ ಚರ್ಚೆ ನಡೆದಿತ್ತು. ಕೆಲ ದಿನಗಳ ಹಿಂದೆಯೇ ಕಾಂತಾರ 2 ಚಿತ್ರದ ಬಗ್ಗೆ ಸುದ್ದಿ ಆಗಿತ್ತು. ಆದರೆ, ಇನ್ನೂ ಆ ಕುರಿತು ಯೋಚಿಸಿಯೇ ಇಲ್ಲವೆಂದು ರಿಷಬ್ ಶೆಟ್ಟಿ ಹೇಳಿದ್ದರು. ಈ ಕುರಿತು ಅವರನ್ನು ಏನೇ ಕೇಳಿದರೂ, ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಉತ್ತರಿಸುತ್ತಿದ್ದರು.

    ಆದರೆ, ಈ ಕುರಿತು ನಿರ್ಮಾಪಕ ವಿಜಯ್ ಕಿರಗಂದೂರು (Vijay Kirgandur) ಸಾಕಷ್ಟು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಕಾಂತಾರ 2 ಸಿನಿಮಾ ಮಾಡುವ ಕುರಿತಾಗಿ ಮಾತನಾಡಿದ್ದಲ್ಲದೇ, ಸಿನಿಮಾ ಶೂಟಿಂಗ್ ಮತ್ತು ರಿಲೀಸ್ ದಿನಾಂಕವನ್ನೂ ಅವರು ಘೋಷಿಸಿ ಬಿಟ್ಟಿದ್ದಾರೆ. ಜೊತೆಗೆ ಈಗಾಗಲೇ ರಿಷಬ್ ಮತ್ತು ಟೀಮ್ ಕಥೆ ಮಾಡುವುದರಲ್ಲಿ ತೊಡಗಿದೆ ಎನ್ನುವ ವಿಷಯವನ್ನೂ ಬಹಿರಂಗ ಪಡಿಸಿದ್ದಾರೆ. ಚಿತ್ರೀಕರಣದ ಸ‍್ಥಳ ಹುಡುಕಲು ಕಾಡು ಮೇಡು ಅಲೆಯುತ್ತಿರುವುದಾಗಿಯೂ ತಿಳಿಸಿದ್ದಾರೆ. ಇದನ್ನೂ ಓದಿ: ರಶ್ಮಿಕಾ ಬೀಚ್ ಫೋಟೋ: ದೇವರಕೊಂಡ ಕ್ಲಿಕ್ಕಿಸಿದ್ದಾ ಎಂದ ನೆಟ್ಟಿಗರು

    ವಿಜಯ್ ಕಿರಗಂದೂರು ಅವರೇ ಹೇಳಿದಂತೆ ಈ ವರ್ಷ ಜೂನ್ ನಿಂದ ಚಿತ್ರೀಕರಣ ಶುರುವಾಗಲಿದೆ. ಏಪ್ರಿಲ್ ಅಥವಾ ಮೇ 2024ರಂದು ಕಾಂತಾರ 2 ಚಿತ್ರ ತೆರೆಗೆ ಬರಲಿದೆಯಂತೆ. ಪಕ್ಕಾ ಪ್ಲ್ಯಾನ್ ಜೊತೆಯೇ ಈ ಬಾರಿ ಚಿತ್ರೀಕರಣಕ್ಕೆ ಇಳಿಯಲಿದೆ ಚಿತ್ರತಂಡ. ಕಾಂತಾರ ಸಿನಿಮಾ ಶೂಟ್ ಮಾಡುವಾಗ ಹಲವು ತೊಂದರೆಗಳನ್ನು ಅವರು ಎದುರಿಸಬೇಕಾಯಿತು. ಹಾಗಾಗಿ ಬಜೆಟ್ ಕೂಡ ಹೆಚ್ಚಾಯಿತು. ಈ ಬಾರಿ ಎಲ್ಲ ಮುನ್ನೆಚ್ಚರಿಕೆಗಳನ್ನು ತಗೆದುಕೊಂಡು ಶೂಟಿಂಗ್ ಗೆ ಇಳಿಯುವುದಾಗಿ ನಿರ್ಮಾಪಕರು ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.

    ಕಾಂತಾರ 2 ಕಥೆ ಏನು, ಯಾರೆಲ್ಲ ಇರುತ್ತಾರೆ, ಯಾವ ಸ್ಥಳದಲ್ಲಿ ಶೂಟ್ ಮಾಡುತ್ತಾರೆ, ಅಚ್ಚರಿ ಎನ್ನುವಂತಹ ಕಲಾವಿದರು ಇರುತ್ತಾರಾ ಈ ಕುರಿತು ಅವರು ಯಾವುದೇ ಮಾಹಿತಿಯನ್ನೂ ಹಂಚಿಕೊಂಡಿಲ್ಲ. ಆದರೆ, ಕಾಂತಾರ 2 ಸೆಟ್ಟೇರುವ ಮತ್ತು ಚಿತ್ರೀಕರಣ ಹಾಗೂ ಬಿಡುಗಡೆ ದಿನಾಂಕವನ್ನೂ ಈಗಲೇ ಘೋಷಿಸುವ ಮೂಲಕ ಕುತೂಹಲ ಮೂಡಿಸಿದ್ದಾರೆ ಹೊಂಬಾಳೆ ಫಿಲ್ಮ್ಸ್ ಮಾಲೀಕ ವಿಜಯ ಕಿರಗಂದೂರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಜೂಮ್ ಕಾಲ್’ ಸಿನಿಮಾದಲ್ಲಿ ರೇಣುಕಾ ಟೀಚರ್

    ‘ಜೂಮ್ ಕಾಲ್’ ಸಿನಿಮಾದಲ್ಲಿ ರೇಣುಕಾ ಟೀಚರ್

    ಹೊಸಬರು ಸೇರಿಕೊಂಡು ಮಾಡುತ್ತಿರುವ “ಜೂಮ್ ಕಾಲ್” (Zoom call) ಚಿತ್ರದಲ್ಲಿ ಆನ್ ಲೈನ್ ಶಿಕ್ಷಕಿಯಾಗಿ ರೇಣುಕಾ (Renuka) ಅಭಿನಯಿಸಿದ್ದಾರೆ. ವಿಷ್ಣುವರ್ಧನ್, ಗಣೇಶ್ (Ganesh), ರಿಷಬ್ ಶೆಟ್ಟಿ (Rishabh Shetty) ಸೇರಿದಂತೆ ಅನೇಕ ಖ್ಯಾತ ನಟರ ಚಿತ್ರಗಳಲ್ಲಿ ನಟಿಸಿರುವ ರೇಣುಕಾ ಈಗ ಹೊಸಬರ ಈ ಚಿತ್ರದಲ್ಲಿ ನಟಿಸಿದ್ದಾರೆ.

    ಪ್ರತಿ ಸಿನಿಮಾದಲ್ಲಿ ಸಹನಟರ ಜೊತೆ ನಟಿಸುತ್ತಿದೆ. ಆದರೆ ಈ ಚಿತ್ರದಲ್ಲಿ ಒಬ್ಬಳೆ ನಟಿಸಿದ್ದೇನೆ. ಈ ಅನುಭವ ಹೊಸದಾಗಿತ್ತು ಮತ್ತು ವಿಶೇಷವಾಗಿತ್ತು. “ಜೂಮ್ ಕಾಲ್” ಪ್ರಯೋಗಾತ್ಮಕ ಚಿತ್ರವಾಗಿದ್ದು, ಮೇಕಿಂಗ್ ವಿಭಿನ್ನವಾಗಿದೆ. ಈ ಸಿನಿಮಾದಲ್ಲಿ ನಟಿಸಿದ್ದು ನನಗೆ ಖುಷಿಯಾಗಿದೆ ಎಂದು ರೇಣುಕಾ ತಿಳಿಸಿದ್ದಾರೆ. ಇದನ್ನೂ ಓದಿ: ಸತತ ಸೋಲಿನಿಂದ ಬೇಸತ್ತ ಪೂಜಾಗೆ ನಿರ್ದೇಶಕ ತ್ರಿವಿಕ್ರಮ್ ಸಲಹೆ

    ಮಹೇಶ್ ಹೆಚ್ ಎಂ (Mahesh. H. M) ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ  ಚಿತ್ರ ಪೋಸ್ಟ್ ಪ್ರೊಡಕ್ಷನ್ ನಲ್ಲಿ ಬ್ಯುಸಿಯಾಗಿದೆ. ಚಿತ್ರೀಕರಣ ಮುಕ್ತಾಯವಾಗಿದೆ.  ಶ್ರೀವಾರಿ ಪಿಕ್ಚರ್ಸ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಮಂಜು ಕೊಪ್ಪಳ್ ಛಾಯಾಗ್ರಹಣ ಹಾಗೂ ಸಂಕಲನ, ವಿಜಯ್ ರಾಜ್ ಅವರ ಸಂಗೀತ ನಿರ್ದೇಶನವಿದೆ.  ರೇಣುಕಾ, ಲಕ್ಷ್ಮೀ ಅರಸ್, ರೂಪ ಮನಕೂರ್, ಅರ್ಜುನ್, ಮಹೇಂದ್ರ, ಪರಮ್ ಮುಂತಾದವರು “ಜೂಮ್ ಕಾಲ್” ನಲ್ಲಿ ಅಭಿನಯಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k