Tag: RishabhPant

  • ಪಾಂಡ್ಯ ಪರಾಕ್ರಮ, ಹಿಟ್‌ಮ್ಯಾನ್‌ ಪವರ್‌ ಫುಲ್‌ ಬ್ಯಾಟಿಂಗ್‌ – T20 ವಿಶ್ವಕಪ್‌ನಲ್ಲಿ ಭಾರತ ಶುಭಾರಂಭ!

    ಪಾಂಡ್ಯ ಪರಾಕ್ರಮ, ಹಿಟ್‌ಮ್ಯಾನ್‌ ಪವರ್‌ ಫುಲ್‌ ಬ್ಯಾಟಿಂಗ್‌ – T20 ವಿಶ್ವಕಪ್‌ನಲ್ಲಿ ಭಾರತ ಶುಭಾರಂಭ!

    ನ್ಯೂಯಾರ್ಕ್‌: ಅಮೆರಿಕ ಮತ್ತು ವೆಸ್ಟ್‌ ಇಂಡೀಸ್‌ ಆತಿಥ್ಯದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ (T20 World Cup) ಟೂರ್ನಿಯಲ್ಲಿ ಭಾರತ (Team India) ಶುಭಾರಂಭ ಕಂಡಿದೆ. ಐರ್ಲೆಂಡ್‌ ವಿರುದ್ಧ ನಡೆದ ಆರಂಭಿಕ ಪಂದ್ಯದಲ್ಲೇ ಹಾರ್ದಿಕ್‌ ಪಾಂಡ್ಯ (Hardik Pandya) ಅವರ ಬೌಲಿಂಗ್‌ ಕಮಾಲ್‌, ರೋಹಿತ್‌ ಶರ್ಮಾ ಅವರ ಬ್ಯಾಟಿಂಗ್‌ ನೆರವಿನಿಂದ ಐರ್ಲೆಂಡ್‌ ವಿರುದ್ಧ ಟೀಂ ಇಂಡಿಯಾ 8 ವಿಕೆಟ್‌ ಗಳ ಭರ್ಜರಿ ಜಯ ಸಾಧಿಸಿದೆ.

    ಇಲ್ಲಿನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಐರ್ಲೆಂಡ್‌ ತಂಡ 20 ಓವರ್‌ಗಳಲ್ಲಿ ಕೇವಲ 96 ರನ್‌ಗಳಿಗೆ ಸರ್ವಪತನ ಕಂಡಿತು. ಅಲ್ಪಮೊತ್ತದ ಗುರಿ ಬೆನ್ನತ್ತಿದ ಟೀಂ ಇಂಡಿಯಾ 12.2 ಓವರ್‌ಗಳಲ್ಲೇ 2 ವಿಕೆಟ್‌ ನಷ್ಟಕ್ಕೆ 97 ರನ್‌ ಗಳಿಸಿ ಗೆದ್ದು ಬೀಗಿತು.

    ಚೇಸಿಂಗ್‌ ಆರಂಭಿಸಿದ ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿದ ರೋಹಿತ್‌ ಶರ್ಮಾ (Rohit Sharma) ಹಾಗೂ ವಿರಾಟ್‌ ಕೊಹ್ಲಿ ಜೋಡಿ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ವಿರಾಟ್‌ ಕೇವಲ 1 ರನ್‌ ಗಳಿಸಿ ಔಟಾದರು. ಬಳಿಕ ಜೊತೆಗೂಡಿದ ರಿಷಭ್‌ ಪಂತ್‌ ಹಾಗೂ ಸೂರ್ಯಕುಮಾರ್‌ ಜೋಡಿ ತಾಳ್ಮೆಯ ಆಟವಾಡಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ನಾಯಕ ರೋಹಿತ್‌ ಶರ್ಮಾ 52 ರನ್‌ (37 ಎಸೆತ, 3 ಸಿಕ್ಸರ್‌, 4 ಬೌಂಡರಿ) ಚಚ್ಚಿದರೆ, ರಿಷಭ್‌ ಪಂತ್‌ 36 ರನ್‌, ಸೂರ್ಯಕುಮಾರ್‌ ಯಾದವ್‌ 2 ರನ್‌ ಗಳಿಸಿದರು.

    ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ್ದ ಐರ್ಲೆಂಡ್‌ ತಂಡ ಟೀಂ ಇಂಡಿಯಾ, ಬೌಲರ್‌ಗಳ ದಾಳಿಗೆ ರನ್‌ ಕಲೆಹಾಕಲು ತಿಣುಕಾಡಿತ್ತು. ಮಾರಕ ದಾಳಿಗೆ ತತ್ತರಿಸಿದ ಐರ್ಲೆಂಡ್‌ ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಆರಂಭದಿಂದಲೇ ಪೆವಿಲಿಯನ್‌ ಪರೇಡ್‌ ನಡೆಸಿದರು. ಇದನ್ನೂ ಓದಿ: T20 World Cup: ಸ್ಕಾಟ್‌ಲೆಂಡ್‌ ಬಳಿಕ ಐರ್ಲೆಂಡ್‌ ಜೆರ್ಸಿಯಲ್ಲಿ ಮಿಂಚಿದ ಕರ್ನಾಟಕದ ‘ನಂದಿನಿ’ ಬ್ರ್ಯಾಂಡ್‌!

    ಗರೆಥ್ ಡೆಲಾನಿ 26 ರನ್‌, ಜೋಶ್ ಲಿಟಲ್ 14 ರನ್‌, ಕರ್ಟಿಸ್ ಕ್ಯಾಂಫರ್ 12 ರನ್‌, ಲೋರ್ಕನ್ ಟಕರ್ 10 ರನ್‌ ಗಳಿಸಿದ್ದು ಬಿಟ್ಟರೆ, ಉಳಿದ ಆಟಗಾರರು ಎರಡಂಕಿಯ ಮೊತ್ತವನ್ನೂ ಗಳಿಸರ ಪರಿಣಾಮ ಐರ್ಲೆಂಡ್‌ ಅಲ್ಪ ಮೊತ್ತಕ್ಕೆ ಆಲೌಟ್‌ ಆಗಿ ಸೋಲು ಎದುರಿಸಬೇಕಾಯಿತು. ಇದನ್ನೂ ಓದಿ: ವಿಶ್ವದ ನಂ.1 ಮ್ಯಾಗ್ನಸ್‌ ಕಾರ್ಲ್‌ಸನ್‌ಗೆ ಸೋಲುಣಿಸಿದ ಗ್ರ್ಯಾಂಡ್‌ಮಾಸ್ಟರ್‌ ಪ್ರಜ್ಞಾನಂದ!

    ಪಾಂಡ್ಯ ಭರ್ಜರಿ ಕಂಬ್ಯಾಕ್‌:
    2024ರ ಐಪಿಎಲ್‌ ಆವೃತ್ತಿಯಲ್ಲಿ ಕಳಪೆ ಬೌಲಿಂಗ್‌ ಪ್ರದರ್ಶನದಿಂದ ಟೀಕೆಗೆ ಗುರಿಯಾಗಿದ್ದ ಹಾರ್ದಿಕ್‌ ಪಾಂಡ್ಯ ಟಿ20 ವಿಶ್ವಕಪ್‌ ಆರಂಭಿಕ ಪಂದ್ಯದಲ್ಲೇ ಭರ್ಜರಿ ಕಂಬ್ಯಾಕ್‌ ಮಾಡಿದ್ದಾರೆ. 4 ಓವರ್‌ಗಳಲ್ಲಿ 27 ರನ್‌ ಬಿಟ್ಟುಕೊಟ್ಟ ಪಾಂಡ್ಯ 3 ಪ್ರಮುಖ ವಿಕೆಟ್‌ ಪಡೆದಿದ್ದಾರೆ. ಇನ್ನೂ ಜಸ್ಪ್ರೀತ್‌ ಬುಮ್ರಾ, ಹರ್ಷ್‌ದೀಪ್‌ ಸಿಂಗ್‌ ತಲಾ 2 ವಿಕೆಟ್‌ ಕಿತ್ತರೆ, ಮೊಹಮ್ಮದ್‌ ಸಿರಾಜ್‌ ಮತ್ತು ಅಕ್ಷರ್‌ ಪಟೇಲ್‌ ತಲಾ ಒಂದು ವಿಕೆಟ್‌ ಪಡೆದು ಮಿಂಚಿದರು. ಇದನ್ನೂ ಓದಿ: ಗೌತಮ್‌ ಗಂಭೀರ್‌ಗೆ ಬ್ಲ್ಯಾಂಕ್‌ ಚೆಕ್‌ ಆಫರ್‌ ಕೊಟ್ಟಿದ್ದೇಕೆ ಶಾರುಖ್‌?

  • ರಿಷಭ್ ಪಂತ್ ತಾಯಿಗೆ ಕರೆ ಮಾಡಿ ಅಭಯ ನೀಡಿದ ಮೋದಿ

    ರಿಷಭ್ ಪಂತ್ ತಾಯಿಗೆ ಕರೆ ಮಾಡಿ ಅಭಯ ನೀಡಿದ ಮೋದಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತಮ್ಮ ತಾಯಿ ಹೀರಾಬೆನ್ ಕಳೆದುಕೊಂಡ ದುಃಖದಲ್ಲಿದ್ದರೂ ರಿಷಭ್ ಪಂತ್ (Rishabh Pant) ಅವರ ಆರೋಗ್ಯದ ಬಗ್ಗೆ ಕ್ಷಣ-ಕ್ಷಣದ ಮಾಹಿತಿ ಪಡೆಯುತ್ತಿದ್ದಾರೆ. ನಿನ್ನೆಯಷ್ಟೇ ಟ್ವೀಟ್ ಮೂಲಕ ಶೀಘ್ರ ಗುಣಮುಖರಾಗುವಂತೆ ಪ್ರಾರ್ಥಿಸಿದ್ದ ಮೋದಿ ಅವರಿಂದು ಪಂತ್ ಅವರ ಕುಟುಂಬಕ್ಕೆ ಕರೆ ಮಾಡಿ ಅಭಯ ನೀಡಿದ್ದಾರೆ.

    ಇಂದು ಬೆಳಗ್ಗೆ ಪಂತ್ ಅವರ ತಾಯಿಗೆ ಕರೆ ಮಾಡಿ, ರಿಷಭ್ ಅವರ ಆರೋಗ್ಯ ಸ್ಥಿತಿಗತಿಯ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೇ ರಿಷಭ್ ಅವರು ಶೀಘ್ರವೇ ಗುಣಮುಖರಾಗಿ ಬರಲಿದ್ದಾರೆ. ಅದಕ್ಕೆ ಅಗತ್ಯ ರೀತಿಯ ಎಲ್ಲ ಸಹಕಾರಗಳನ್ನು ನೀಡಲಾಗುವುದು ಎಂದು ಅಭಯ ನೀಡಿದ್ದಾರೆ. ಇದನ್ನೂ ಓದಿ: ಮ್ಯಾಂಚೆಸ್ಟರ್ ಯುನೈಟೆಡ್ ತಂಡಕ್ಕೆ ಗುಡ್ ಬೈ – ಸೌದಿ ಅರೇಬಿಯಾ ಪಾಲಾದ ರೊನಾಲ್ಡೊ

    `ಖ್ಯಾತ ಕ್ರಿಕೆಟಿಗ ಪಂತ್ ಅಪಘಾತಕ್ಕೀಡಾಗಿ ಆಸ್ಪತ್ರೆ ಸೇರಿರುವುದನ್ನು ಅರಿತು ಪಂತ್‌ಗೆ ಅಪಘಾತವಾಗಿರುವ ಸುದ್ದಿ ಕೇಳಿ ದುಃಖವಾಗಿದೆ. ಆದಷ್ಟು ಬೇಗ ಆರೋಗ್ಯ ಸುಧಾರಿಸಲಿ, ಚೇತರಿಕೆ ಕಾಣಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ನಿನ್ನೆಯಷ್ಟೇ ಟ್ವೀಟ್ ಮಾಡಿದ್ದರು. ಇದನ್ನೂ ಓದಿ: ತಾಯಿ ಮಡಿದ ನೋವಿನಲ್ಲೂ ಪಂತ್ ಆರೋಗ್ಯ ಚೇತರಿಕೆಗಾಗಿ ಹಾರೈಸಿದ ಮೋದಿ

    ಕ್ರಿಕೆಟ್ ನೋಡಬೇಡಿ: ರಿಷಭ್ ಪಂತ್ ಅವರನ್ನು ಅಪಘಾತ ಸ್ಥಳದಿಂದ ರಕ್ಷಿಸಿದ ಬಸ್ ಡ್ರೈವರ್ ಸುಶೀಲ್ ಕುಮಾರ್ ಘಟನೆಯ ಸನ್ನಿವೇಶವನ್ನು ಎಳೆ-ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಅಲ್ಲದೇ ಅವರನ್ನು ಗುರುತಿಸದಿದ್ದ ಮೇಲೆ ಕ್ರಿಕೆಟ್ ನೋಡಬೇಡಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಭಯೋತ್ಪಾದನೆಯಿಂದ ಭಾರತ ನೊಂದಷ್ಟು ಬೇರಾವ ದೇಶವೂ ನೊಂದಿಲ್ಲ: ಜೈಶಂಕರ್

    ರಿಷಭ್ ಪಂತ್ ಅವರನ್ನು ನೋಡಿದಾಗ ಮುಖವೆಲ್ಲಾ ರಕ್ತದ ಮಡುವಿನಲ್ಲಿತ್ತು. ಬಟ್ಟೆ ಚಿಂದಿಯಾಗಿ ಅವರ ಬೆನ್ನೆಲ್ಲಾ ತರಚಿದ ಗಾಯಗಳಾಗಿತ್ತು. ಅತೀವ ನೋವಿನಿಂದ ಬಳಲಿದ್ದ ಅವರು ಕುಂಟುತ್ತಿದ್ದರು, ಎಂದು ಸುಶೀಲ್ ಕುಮಾರ್ ಸಂದರ್ಶನದಲ್ಲಿ ಘಟನೆಯ ವಿವರಗಳನ್ನು ತೆರೆದಿಟ್ಟಿದ್ದಾರೆ. ನಾವು ಸಹಾಯಕ್ಕಾಗಿ ಕೂಗಿದರೂ ಯಾರೊಬ್ಬರೂ ಬರಲಿಲ್ಲ. ರಾಷ್ಟ್ರೀಯ ಹೈದಾರಿ ಸಹಾಯವಾಣಿಗೆ ಕರೆ ಮಾಡಿದೆವು. ಯಾವ ಅಧಿಕಾರಿಗಳಿಂದಲೂ ಸ್ಪಂದನೆ ಸಿಗಲಿಲ್ಲ. ಬಳಿಕ ನಾನು ಪೊಲೀಸ್‌ಗೆ ಮಾಹಿತಿ ನೀಡಿದೆ. ಬಸ್ ಕಂಡಕ್ಟರ್ ಅಂಬುಲೆನ್ಸ್ಗೆ ಕರೆ ಮಾಡಿದರು. ಅವರ ಸ್ಥಿತಿ ಬಗ್ಗೆ ನಾವು ಕೇಳುತ್ತಲೇ ಇದ್ದೆವು. ನೀರು ಕೂಡ ಕೊಟ್ಟೆವು. ಕೊಂಚ ಸುಧಾರಿಸಿದ ಬಳಿಕ ಅವರೇ `ನಾನು ರಿಷಭ್ ಪಂತ್’ ಎಂದು ಹೇಳಿಕೊಂಡಿರುವುದಾಗಿ ತಿಳಿಸಿದ್ದಾರೆ.

    ಪಂತ್ ಉತ್ತರಾಖಂಡದಿಂದ ದೆಹಲಿಗೆ ಹಿಂದಿರುಗುತ್ತಿದ್ದ ವೇಳೆ ರೂರ್ಕಿಯ ನರ್ಸನ್ ಗಡಿಯಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಕೆಲ ಕ್ಷಣಗಳಲ್ಲೇ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ಕೂಡಲೇ ಕಾರಿನಲ್ಲಿದ್ದ ಪಂತ್ ಗಾಜನ್ನು ಹೊಡೆದುಕೊಂಡು ಹೊರ ಬಂದು ಗ್ರೇಟ್ ಎಸ್ಕೇಪ್ ಆಗಿದ್ದರು. ಸದ್ಯ ರಿಷಭ್ ಆರೋಗ್ಯ ಸ್ಥಿರವಾಗಿದ್ದು, ಆತಂಕ ಪಡಬೇಕಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಿಷಭ್ ಪಂತ್‌ನ ಆ ಆಟ ಅಗತ್ಯವಿರಲಿಲ್ಲ – ಗೌತಮ್ ಗಂಭೀರ್ ಅಸಮಾಧಾನ

    ರಿಷಭ್ ಪಂತ್‌ನ ಆ ಆಟ ಅಗತ್ಯವಿರಲಿಲ್ಲ – ಗೌತಮ್ ಗಂಭೀರ್ ಅಸಮಾಧಾನ

    ಮುಂಬೈ: ಏಷ್ಯಾಕಪ್ ಟೂರ್ನಿಯ ಸೂಪರ್ ಫೋರ್ ಲೀಗ್‌ನಲ್ಲಿ ಭಾರತ, ಪಾಕಿಸ್ತಾನದ ಎದುರು ಸೋಲನ್ನು ಅನುಭವಿಸಿತು.

    ಟಾಸ್ ಸೋತು ಮೊದಲು ಕ್ರೀಸ್‌ಗಿಳಿದ ಟೀಂ ಇಂಡಿಯಾ 10 ಓವರ್‌ಗಳವರೆಗೂ ಉತ್ತಮ ರನ್‌ಗಳನ್ನೇ ಕಲೆಹಾಕಿತ್ತು. 9.4 ಓವರ್‌ಗಳಿದ್ದಾಗ ತಂಡದ ಮೊತ್ತ 3 ವಿಕೆಟ್‌ಗೆ 91 ರನ್‌ಗಳಿತ್ತು. ಈ ವೇಳೆ ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ರಿಷಭ್ ಪಂತ್ 12 ಎಸೆತಗಳಲ್ಲಿ 2 ಬೌಂಡರಿಯೊಂದಿಗೆ ಕೇವಲ 14 ರನ್ ಗಳಿಸಿದರು. ರಿವರ್ಸ್ ಸ್ವೀಪ್ ಶಾಟ್ ಮೂಲಕ ಮತ್ತೊಂದು ಬೌಂಡರಿ ಎತ್ತುವ ಪ್ರಯತ್ನ ಮಾಡಿದ ಪಂತ್ ಎದುರಾಳಿ ತಂಡದ ಆಸಿಫ್ ಅಲಿ ಕೈಗೆ ಸುಲಭ ಕ್ಯಾಚ್ ನೀಡಿದರು. ಇದನ್ನೂ ಓದಿ: ವಿದೇಶಿ ಲೀಗ್‌ನತ್ತ ಕಣ್ಣು – ಐಪಿಎಲ್‌ಗೆ ರೈನಾ ಗುಡ್‌ಬೈ

    ನಂತರದಲ್ಲಿ ಬಂದ ಆಟಗಾರರು ಸ್ಥಿರವಾಗಿ ನಿಲ್ಲದ ಕಾರಣ ಟೀಂ ಇಂಡಿಯಾ 7 ವಿಕೆಟ್‌ಗಳ ನಷ್ಟಕ್ಕೆ 181 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಈ ರನ್‌ಗಳ ಗುರಿ ಬೆನ್ನತ್ತಿದ್ದ ಪಾಕಿಸ್ತಾನ 19.5 ಓವರ್‌ಗಳಲ್ಲಿ 182 ರನ್ ಗಳಿಸಿ ಟೀಂ ಇಂಡಿಯಾ ವಿರುದ್ಧ ಗೆಲುವು ಸಾಧಿಸಿತು.

    ಸೂಪರ್ ಲೀಗ್‌ನಲ್ಲಿ ರಿಷಭ್ ಪಂತ್ ಅವರ ಬ್ಯಾಟಿಂಗ್ ಬಗ್ಗೆ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ಅಸಮಾಧಾನ ಹೊರಹಾಕಿದ್ದಾರೆ. ಪಾಕಿಸ್ತಾನದ ಮಾಜಿ ವೇಗಿ ವಾಸಿಂ ಅಕ್ರಮ್ ಕೂಡ ಗಂಭೀರ್ ಅಭಿಪ್ರಾಯವನ್ನು ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ: ಸುಷ್ಮಿತಾ ಸೇನ್ ಜೊತೆ ಬ್ರೇಕ್ ಅಪ್ ಘೋಷಿಸಿಕೊಂಡ ಐಪಿಎಲ್ ಸಂಸ್ಥಾಪಕ ಲಲಿತ್ ಮೋದಿ

    `ಸೂಪರ್ ಫೋರ್ ಲೀಗ್‌ನ ಆ ಹಂತದಲ್ಲಿ ಪಂತ್ ಅಂತಹ ಶಾಟ್ ಆಡುವ ಅಗತ್ಯವಿರಲಿಲ್ಲ. ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ ರಿವರ್ಸ್ ಸ್ವೀಪ್ ಆಡುತ್ತಾರೆ ಎಂಬುದು ನನಗೆ ತಿಳಿದಿದೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನ ಅಗ್ರ ಆಟಗಾರರಲ್ಲಿ ಒಬ್ಬರಾಗಿದ್ದಾರೆ ಎಂಬುದೂ ಗೊತ್ತಿದೆ. ಆದರೆ ಈ ಹಂತದಲ್ಲಿ ಆ ಹೊಡೆತ ಅಗತ್ಯವಿರಲಿಲ್ಲ ಎಂದು ಹೇಳಿದ್ದಾರೆ.

    ರಿವರ್ಸ್ ಸ್ವೀಪ್ ಹೊಡೆಯುವುದು ಪಂತ್ ಅವರ ಶಾಟ್ ಅಲ್ಲ. ಲಾಂಗ್ ಆನ್ ಅಥವಾ ಡೀಪ್ ಮಿಡ್‌ವಿಕೆಟ್ ಅವರ ಪಕ್ಕಾ ಶಾಟ್. ಅದೇ ಅವರ ಶಕ್ತಿ. ಆ ಸಂದರ್ಭದಲ್ಲಿ ರಿವರ್ಸ್ ಸ್ವೀಪ್ ಅಗತ್ಯವಿರಲಿಲ್ಲ. ಅದು ಅವರ ಶಕ್ತಿಯೂ ಅಲ್ಲ ಎಂದು ಗಂಭೀರ್ ಅಸಮಾಧಾನ ಹೊರಹಾಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]