Tag: RO-KO

  • World Cup 2023: ಹಿಟ್‌ಮ್ಯಾನ್‌ ಸಿಕ್ಸರ್‌ ಹೊಡೆತಕ್ಕೆ ಲೆಜೆಂಡ್‌ ABD ದಾಖಲೆ ಪುಡಿಪುಡಿ

    World Cup 2023: ಹಿಟ್‌ಮ್ಯಾನ್‌ ಸಿಕ್ಸರ್‌ ಹೊಡೆತಕ್ಕೆ ಲೆಜೆಂಡ್‌ ABD ದಾಖಲೆ ಪುಡಿಪುಡಿ

    ಬೆಂಗಳೂರು: ಟೀಂ ಇಂಡಿಯಾ (Team India) ಬ್ಯಾಟರ್‌ಗಳ ಅಬ್ಬರಕ್ಕೆ ವಿಶ್ವದಾಖಲೆಗಳು ನುಚ್ಚುನೂರಾಗುತ್ತಿವೆ. ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ (ODI) ಭಾರತದ ಪರ 300ಕ್ಕೂ ಅಧಿಕ ಸಿಕ್ಸರ್ ಸಿಡಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದ ರೋಹಿತ್ ಶರ್ಮಾ (Rohit Sharma) ಇದೀಗ ಸಿಕ್ಸರ್‌ನಿಂದಲೇ ಮತ್ತೊಂದು ದಾಖಲೆ ಸಿಡಿಸಿದ್ದಾರೆ.

    ಭಾನುವಾರ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆದರ್ಲೆಂಡ್ಸ್‌ ವಿರುದ್ಧ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್‌ ಮಾಡಿತು. ಆರಂಭದಿಂದಲೇ ಸಿಕ್ಸರ್‌, ಬೌಂಡರಿ ಅಬ್ಬರಿಸಿದ ರೋಹಿತ್‌ ಶರ್ಮಾ 54 ಎಸೆತಗಳಲ್ಲಿ 61 ರನ್ ಬಾರಿಸಿದರು. ಈ ವೇಳೆ 8 ಬೌಂಡರಿ, 4 ಸಿಕ್ಸರ್‌ಗಳನ್ನೂ ಸಿಡಿಸಿದರು. ಈ ಮೂಲಕ ಕ್ಯಾಲೆಂಡರ್ ವರ್ಷದಲ್ಲಿ ಅತಿಹೆಚ್ಚು ಸಿಕ್ಸರ್ ಸಿಡಿಸಿದ ವಿಶ್ವದ ನಂ.1 ಬ್ಯಾಟರ್ ಎಂಬ ಖ್ಯಾತಿಯನ್ನು ಗಳಿಸಿದ್ದಾರೆ. ಇದನ್ನೂ ಓದಿ: World Cup 2023: ಮೈಲಿಗಲ್ಲು ಸ್ಥಾಪಿಸಲು RO-KO ವೇಯ್ಟಿಂಗ್‌ – ಸೂಪರ್‌ ಸಂಡೇ ಡಬಲ್‌ ಧಮಾಕ..!

    2015ರಲ್ಲಿ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿಡಿ ವಿಲಿಯರ್ಸ್ (AB de Villiers) 58 ಸಿಕ್ಸರ್‌ ಹಾಗೂ 2019ರ ವರ್ಷದಲ್ಲಿ ವೆಸ್ಟ್ ಇಂಡೀಸ್‌ನ ಮಾಜಿ ಕ್ರಿಕೆಟಿಗ ಕ್ರಿಸ್‌ ಗೇಲ್ 56 ಸಿಕ್ಸರ್ ಸಿಡಿಸಿ ಒಂದು ವರ್ಷದಲ್ಲಿ ಅತಿಹೆಚ್ಚು ಸಿಕ್ಸರ್‌ ಸಿಡಿಸಿದ್ದ ದಾಖಲೆ ಬರೆದಿದ್ದರು. 2023ರಲ್ಲಿ ರೋಹಿತ್ ಶರ್ಮಾ 59 ಸಿಕ್ಸರ್ ಸಿಡಿಸಿ ಇಬ್ಬರು ದಿಗ್ಗಜರ ದಾಖಲೆಗಳನ್ನ ಉಡೀಸ್‌ ಮಾಡಿದ್ದಾರೆ. ಒಟ್ಟು ಈ ವರ್ಷದಲ್ಲಿ ರೋಹಿತ್‌ ಈವರೆಗೆ 60 ಸಿಕ್ಸರ್‌ಗಳನ್ನ ಸಿಡಿಸಿದ್ದಾರೆ. ಇದನ್ನೂ ಓದಿ: ಪಾಕ್‌ ಮುಂದಿರುವ ಘೋರ ಸವಾಲು ಯಾವುದು? – ಎಷ್ಟು ರನ್‌ ಅಂತರದಲ್ಲಿ ಗೆದ್ದರೆ ಸೆಮಿಸ್‌ ತಲುಪಬಹುದು?

    ಸೂಪರ್‌ ಸಂಡೇ ಮ್ಯಾಚ್‌ನಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಸ್ಫೋಟಕ ಆರಂಭ ಪಡೆಯಿತು. ಆರಂಭದಲ್ಲೇ ಡಚ್ಚರನ್ನು ಬೆಂಡೆತ್ತಲು ಶುರು ಮಾಡಿದ ರೋಹಿತ್‌ ಶರ್ಮಾ ಹಾಗೂ ಶುಭಮನ್‌ ಗಿಲ್‌ ಜೋಡಿ ಮೊದಲ ವಿಕೆಟ್‌ಗೆ 71 ಎಸೆತಗಳಲ್ಲಿ 100 ರನ್‌ಗಳ ಜೊತೆಯಾಟ ನೀಡಿತು. ಶುಭಮನ್‌ ಗಿಲ್‌ 32 ಎಸೆತಗಳಲ್ಲಿ 51 ರನ್‌ (4 ಸಿಕ್ಸರ್‌, 3 ಬೌಂಡರಿ) ಗಳಿಸಿದ್ರೆ, ರೋಹಿತ್‌ ಶರ್ಮಾ ಒಟ್ಟು 54 ಎಸೆತಗಳಲ್ಲಿ 61 ರನ್‌ (2 ಸಿಕ್ಸರ್‌, 8 ಬೌಂಡರಿ) ಚಚ್ಚಿ ಔಟಾದರು. ಇದನ್ನೂ ಓದಿ: ವಿಶ್ವಕಪ್‌ ಪವರ್‌ ಪ್ಲೇನಲ್ಲಿ ವಿಶೇಷ ಸಾಧನೆ ನಿರ್ಮಿಸಿದ ರೋಹಿತ್‌ ಶರ್ಮಾ

    14,000 ರನ್‌ ಕಂಪ್ಲೀಟ್‌: ನದರ್ಲೆಂಡ್ಸ್‌ ವಿರುದ್ಧ ಸ್ಫೋಟಕ ಇನ್ನಿಂಗ್ಸ್‌ ಕಟ್ಟಿದ ರೋಹಿತ್‌ ಶರ್ಮಾ ಆರಂಭಿಕನಾಗಿಯೇ 14 ಸಾವಿರ ರನ್‌ ಪೂರೈಸಿದ ಸಾಧನೆ ಮಾಡಿದ್ದಾರೆ. ಇದನ್ನೂ ಓದಿ: World Cup 2023: ಗೆದ್ದು ಆಟ ಮುಗಿಸಿದ ಇಂಗ್ಲೆಂಡ್‌ – ಹೀನಾಯ ಸೋಲಿನೊಂದಿಗೆ ಪಾಕ್‌ ಮನೆಗೆ

  • World Cup 2023: ಮೈಲಿಗಲ್ಲು ಸ್ಥಾಪಿಸಲು RO-KO ವೇಯ್ಟಿಂಗ್‌ – ಸೂಪರ್‌ ಸಂಡೇ ಡಬಲ್‌ ಧಮಾಕ..!

    World Cup 2023: ಮೈಲಿಗಲ್ಲು ಸ್ಥಾಪಿಸಲು RO-KO ವೇಯ್ಟಿಂಗ್‌ – ಸೂಪರ್‌ ಸಂಡೇ ಡಬಲ್‌ ಧಮಾಕ..!

    ಬೆಂಗಳೂರು: 2023ರ ವಿಶ್ವಕಪ್‌ ಟೂರ್ನಿಯಲ್ಲಿ ಯಶಸ್ವಿಯಾಗಿ ಟೀಂ ಇಂಡಿಯಾವನ್ನ ಮುನ್ನಡೆಸುತ್ತಿರುವ ನಾಯಕ ರೋಹಿತ್‌ ಶರ್ಮಾ (Rohit Sharma) ಹಾಗೂ ಚೇಸ್‌ ಮಾಸ್ಟರ್‌ ಖ್ಯಾತಿಯ ವಿರಾಟ್‌ ಕೊಹ್ಲಿ ಭಾನುವಾರ ನೆದರ್ಲೆಂಡ್ಸ್‌ (Netherlands) ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಮಹತ್ವದ ಮೈಲಿಗಲ್ಲು ಸ್ಥಾಪಿಸಲು ಎದುರುನೋಡುತ್ತಿದ್ದಾರೆ.

    ಈಗಾಗಲೇ 8 ಪಂದ್ಯಗಳಲ್ಲೂ ಗೆಲುವು ಸಾಧಿಸಿರುವ ಭಾರತ ಭಾನುವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ತನ್ನ ಕೊನೆಯ ಲೀಗ್‌ ಪಂದ್ಯವನ್ನಾಡಲಿದೆ. ಇದು ಈ ಆವೃತ್ತಿಯಲ್ಲಿ ಕೊನೆಯ ಲೀಗ್‌ ಪಂದ್ಯವಾಗಿದೆ. ಇದನ್ನೂ ಓದಿ: ಆರ್‌ಸಿಬಿಯಲ್ಲಿ ಆಡಲು ರಚಿನ್ ಉತ್ಸಾಹ – ಟ್ವೀಟ್ ವೈರಲ್

    ವಿಶೇಷವೆಂದರೆ ಈ ಪಂದ್ಯದಲ್ಲಿ ನಾಯಕ ರೋಹಿತ್‌ ಶರ್ಮಾ ಮತ್ತು ವಿರಾಟ್‌ ಕೊಹ್ಲಿ (Virat Kohli) ಮಹತ್ವದ ಮೈಲುಗಲ್ಲು ಸ್ಥಾಪಿಸಲು ಕಾಯುತ್ತಿದ್ದಾರೆ. ಈಗಾಗಲೇ ತಮ್ಮ ವೃತ್ತಿ ಜೀವನದಲ್ಲಿ 18 ಸಾವಿರ ಅಂತಾರಾಷ್ಟ್ರೀಯ ರನ್‌ಗಳನ್ನು ಪೂರೈಸಿರುವ ರೋಹಿತ್‌ ಶರ್ಮಾ ಆರಂಭಿಕನಾಗಿ, ಟಾಪ್‌ ಆರ್ಡರ್‌ ಮತ್ತು 7ನೇ ಕ್ರಮಾಂಕದಲ್ಲೂ ಬ್ಯಾಟಿಂಗ್‌ ಮಾಡಿದ್ದಾರೆ.

    ಇದೀಗ ಆರಂಭಿಕನಾಗಿಯೇ 14 ಸಾವಿರ ಅಂತಾರಾಷ್ಟ್ರೀಯ ರನ್‌ಗಳನ್ನು (International Runs) ಪೂರೈಸುವ ಸನಿಹದಲ್ಲಿದ್ದಾರೆ. 8 ಪಂದ್ಯಗಳಲ್ಲಿ 1 ಶತಕ, 2 ಅರ್ಧ ಶತಕಗಳು ಸೇರಿದಂತೆ 442 ರನ್‌ ಬಾರಿಸಿರುವ ಶರ್ಮಾ ಇನ್ನೂ 14 ರನ್‌ ಗಳಿಸಿದ್ರೆ, ಆರಂಭಿಕನಾಗಿಯೇ 14,000 ಅಂತಾರಾಷ್ಟ್ರೀಯ ರನ್‌ಗಳನ್ನು ಪೂರೈಸಿದ ಖ್ಯಾತಿ ತಮ್ಮದಾಗಿಸಿಕೊಳ್ಳಲಿದ್ದಾರೆ. ಇದನ್ನೂ ಓದಿ: ವಿಶ್ವಕಪ್‌ ಪವರ್‌ ಪ್ಲೇನಲ್ಲಿ ವಿಶೇಷ ಸಾಧನೆ ನಿರ್ಮಿಸಿದ ರೋಹಿತ್‌ ಶರ್ಮಾ

    ಇನ್ನೂ ಏಕದಿನ ಕ್ರಿಕೆಟ್‌ನಲ್ಲಿ ದಕ್ಷಿಣ ಆಫ್ರಿಕಾ (South Africa) ವಿರುದ್ಧ 49ನೇ ಏಕದಿನ ಶತಕ ಸಿಡಿಸಿ ಕ್ರಿಕೆಟ್‌ ದೇವರು ಸಚಿನ್‌ ಶತಕ ದಾಖಲೆ ಸರಿಗಟ್ಟಿರುವ ಕೊಹ್ಲಿ 50ನೇ ಶತಕ ಸಿಡಿಸಿ ನಂ.1 ಪಟ್ಟಕ್ಕೇರುವ ತವಕದಲ್ಲಿದ್ದಾರೆ. ಕೊಹ್ಲಿ ಈಗಾಗಲೇ ಟೆಸ್ಟ್‌ ಕ್ರಿಕೆಟ್‌ನಲ್ಲಿ 29, ಟಿ20 ಕ್ರಿಕೆಟ್‌ನಲ್ಲಿ 1 ಹಾಗೂ ಏಕದಿನ ಕ್ರಿಕೆಟ್‌ನಲ್ಲಿ 49 ಶತಕ ಸಿಡಿಸಿರುವ ಕೊಹ್ಲಿ, ಅತಿಹೆಚ್ಚು ಶತಕ ಸಿಡಿಸಿದ ವಿಶ್ವದ 2ನೇ ಆಟಗಾರನಾಗಿದ್ದಾರೆ. ನೆದರ್ಲೆಂಡ್ಸ್‌ ವಿರುದ್ಧ ಭಾನುವಾರ ನಡೆಯಲಿರುವ ಪಂದ್ಯದಲ್ಲಿ 50ನೇ ಶತಕ ಸಿಡಿಸಿ ವೃತ್ತಿ ಜೀವನದ ಮಹತ್ವದ ಹೆಜ್ಜೆಯನ್ನಿಡಲು ಎದುರು ನೋಡುತ್ತಿದ್ದಾರೆ. ಅದು ಯಾವ ರೀತಿ ಸಕ್ಸಸ್‌ ಆಗುತ್ತೆ ಅನ್ನೋದನ್ನ ಕಾದುನೋಡಬೇಕಿದೆ.

    2023ರ ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ‘ಅಷ್ಟ’ಜಯ!
    ಮ್ಯಾಚ್ 1: ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್ ಗೆಲುವು
    ಮ್ಯಾಚ್ 2: ಆಫ್ಘಾನಿಸ್ತಾನ ವಿರುದ್ಧ 8 ವಿಕೆಟ್ ಗೆಲುವು
    ಮ್ಯಾಚ್ 3: ಪಾಕಿಸ್ತಾನ ವಿರುದ್ಧ 7 ವಿಕೆಟ್ ಗೆಲುವು
    ಮ್ಯಾಚ್ 4: ಬಾಂಗ್ಲಾದೇಶದ ವಿರುದ್ಧ 7 ವಿಕೆಟ್ ಗೆಲುವು
    ಮ್ಯಾಚ್ 5: ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್ ಗೆಲುವು
    ಮ್ಯಾಚ್ 6: ಇಂಗ್ಲೆಂಡ್ ವಿರುದ್ಧ 100 ರನ್ ಗೆಲುವು
    ಮ್ಯಾಚ್ 7: ಶ್ರೀಲಂಕಾ ವಿರುದ್ಧ 302 ರನ್ ಗೆಲುವು
    ಮ್ಯಾಚ್ 8: ದಕ್ಷಿಣ ಆಫ್ರಿಕಾ ವಿರುದ್ಧ 243 ರನ್ ಗೆಲುವು