Tag: Road Accident

  • ಪಾಕ್‌-ಚೀನಾ ಯುದ್ಧ, ನಕ್ಸಲರ ದಾಳಿ, ಕೋಮು ಗಲಭೆಗಳಿಗಿಂತ ರಸ್ತೆ ಅಪಘಾತಗಳಲ್ಲಿ ಸಾಯುವವರ ಸಂಖ್ಯೆಯೇ ಹೆಚ್ಚಿದೆ: ಗಡ್ಕರಿ

    ಪಾಕ್‌-ಚೀನಾ ಯುದ್ಧ, ನಕ್ಸಲರ ದಾಳಿ, ಕೋಮು ಗಲಭೆಗಳಿಗಿಂತ ರಸ್ತೆ ಅಪಘಾತಗಳಲ್ಲಿ ಸಾಯುವವರ ಸಂಖ್ಯೆಯೇ ಹೆಚ್ಚಿದೆ: ಗಡ್ಕರಿ

    – ರಸ್ತೆ ಎಂಜಿನಿಯರುಗಳ ತಪ್ಪು ಎದ್ದು ಕಾಣುತ್ತಿದೆ ಎಂದ ಕೇಂದ್ರ ಸಚಿವ

    ನವದೆಹಲಿ: ಪಾಕಿಸ್ತಾನ, ಚೀನಾ ಯುದ್ಧಗಳು, ನಕ್ಸಲರ ದಾಳಿ, ಕೋಮು ಗಲಭೆಗಳಿಗಿಂತ ರಸ್ತೆ ಅಪಘಾತದಲ್ಲೇ ಹೆಚ್ಚಿನ ಭಾರತೀಯರು ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ (Nitin Gadkari) ಅಭಿಪ್ರಾಯಪಟ್ಟಿದ್ದಾರೆ.

    FICCI ರೋಡ್ ಸೇಫ್ಟಿ ಅವಾರ್ಡ್ಸ್ ಮತ್ತು ಕಾನ್ಕ್ಲೇವ್ 2024 ರ ಆರನೇ ಆವೃತ್ತಿಯಲ್ಲಿ ಮಾತನಾಡಿದ ಗಡ್ಕರಿ, ಪ್ರತಿ ವರ್ಷ ಭಾರತದಲ್ಲಿ ರಸ್ತೆ ಅಪಘಾತಗಳಲ್ಲಿ (Road Accident) ಸುಮಾರು 1.5 ಲಕ್ಷ ಸಾವುಗಳು ವರದಿಯಾಗುತ್ತಿವೆ. ಬಲಿಪಶುಗಳಲ್ಲಿ ಸುಮಾರು 65% ಯುವಕರು ಮತ್ತು ಯುವತಿಯರು ಇದ್ದಾರೆ. ಇದರಿಂದ ಜಿಡಿಪಿಯ ಶೇ.3ರಷ್ಟು ನಷ್ಟವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸೋಷಿಯಲ್ ಮೀಡಿಯಾದಲ್ಲಿ ದೇಶ ವಿರೋಧಿ ಪೋಸ್ಟ್ ಹಾಕಿದರೆ ಜೀವಾವಧಿ ಶಿಕ್ಷೆ – ಯುಪಿಯಲ್ಲಿ ಹೊಸ ಸಾಮಾಜಿಕ ಜಾಲತಾಣ ನೀತಿ ಜಾರಿ

    ನೀವು ಲೆಕ್ಕ ಹಾಕಿದರೆ, ಚೀನಾ ಅಥವಾ ಪಾಕಿಸ್ತಾನ ಯುದ್ಧಗಳು, ನಕ್ಸಲರ ದಾಳಿ, ಕೋಮು ಗಲಭೆಗಳು, ಕಾನೂನು ಮತ್ತು ಸುವ್ಯವಸ್ಥೆಯಲ್ಲಿನ ದುರ್ಘಟನೆಗಳಿಗಿಂತ ರಸ್ತೆ ಅಪಘಾತಗಳಲ್ಲಿ ಹೆಚ್ಚಿನ ಸಂಖ್ಯೆಯ ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.

    ಪ್ರತಿ ರಸ್ತೆ ಅಪಘಾತಕ್ಕೂ ಚಾಲಕರನ್ನೇ ಹರಕೆಯ ಕುರಿ ಮಾಡುತ್ತಿದ್ದೇವೆ. ಆದರೆ ರಸ್ತೆ ಎಂಜಿನಿಯರುಗಳ ತಪ್ಪು ಇಲ್ಲಿ ಎದ್ದು ಕಾಣುತ್ತಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: 12 ನೂತನ ಕೈಗಾರಿಕಾ ಸ್ಮಾರ್ಟ್ ಸಿಟಿ, 10 ಲಕ್ಷ ಹೊಸ ಉದ್ಯೋಗ ಸೃಷ್ಟಿ: ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ

    ಹೆದ್ದಾರಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಅವೈಜ್ಞಾನಿಕವಾಗಿ ಸಿದ್ಧಪಡಿಸುವ ವಿಸ್ತೃತ ಯೋಜನಾ ವರದಿಗಳಿಂದ (ಡಿಪಿಆರ್‌) ಹೆದ್ದಾರಿಗಳಲ್ಲಿ ಬ್ಲಾಕ್‌ ಸ್ಪಾಟ್‌ ಸಂಖ್ಯೆ ಹೆಚ್ಚುತ್ತಿದೆ. ಇದರಿಂದ ಅಪಘಾತಗಳ ಸಂಖ್ಯೆಯೂ ಏರಿಕೆಯಾಗುತ್ತಿದೆ ಎಂದು ತಿಳಿಸಿದ್ದಾರೆ.

  • Chikkaballapur | ಭೀಕರ ರಸ್ತೆ ಅಪಘಾತ – ಮದುವೆಗೆಂದು ತೆರಳುತ್ತಿದ್ದ ಅಪ್ಪ-ಅಮ್ಮ-ಮಗನ ದುರ್ಮರಣ

    Chikkaballapur | ಭೀಕರ ರಸ್ತೆ ಅಪಘಾತ – ಮದುವೆಗೆಂದು ತೆರಳುತ್ತಿದ್ದ ಅಪ್ಪ-ಅಮ್ಮ-ಮಗನ ದುರ್ಮರಣ

    ಚಿಕ್ಕಬಳ್ಳಾಪುರ: ಟಿಟಿ ವಾಹನ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ (Road Accident) ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಚಿಂತಾಮಣಿ ತಾಲೂಕಿನ ದಂಡುಪಾಳ್ಯ ಗೇಟ್ ಬಳಿ ನಡೆದಿದೆ.

    ಕಾರಿನಲ್ಲಿದ್ದ ಮಗ ಶ್ರೀಕಾಂತ್ ಈತನ ತಂದೆ ಶ್ರೀನಿವಾಸಲು ಹಾಗೂ ತಾಯಿ ಪುಷ್ಪ ಮೂವರು ಸಹ ದಾರುಣ ಸಾವನ್ನಪ್ಪಿದ್ದಾರೆ. ಇನ್ನೂ ಟಿಟಿ ವಾಹನದಲ್ಲಿದ್ದ 12 ಜನರಿಗೆ ಗಂಭೀರ ಗಾಯಗಳಾಗಿ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: ಸಿಎಂ ಪಾಲಿಗೆ ಗುರುವಾರ ಬಿಗ್‌ಡೇ – ಮುಡಾ ಕೇಸಲ್ಲಿ ತಾತ್ಕಾಲಿಕ ತಡೆ ವಿಸ್ತರಣೆ ಆಗುತ್ತಾ?

    ಅಂದಹಾಗೆ ಟಿಟಿ ವಾಹನ ಆಂಧಪ್ರದೇಶದ ಬಾಯಿಕೊಂಡದಿಂದ ಚಿಂತಾಮಣಿ ಕಡೆಗೆ ಬರುತ್ತಿತ್ತು. ಅಪಘಾತಕ್ಕೀಡಾದ ಕಾರು ಬೆಂಗಳೂರಿನಿಂದ ಕಡಪ ಹೈವೇ ರಸ್ತೆ ಮುಖಾಂತರ ಆಂಧ್ರಪ್ರದೇಶದ ಕಡೆಗೆ ಹೋಗುತ್ತಿತ್ತು. ಎರಡು ವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದುಕೊಂಡಿವೆ. ಕಾರಿನಲ್ಲಿದ್ದವರು ಮೂಲತಃ ಆಂಧ್ರದವರಾದರೂ ಬೆಂಗಳೂರಿನಲ್ಲಿ ನೆಲಸಿದ್ದರು. ಬುಧವಾರ ಸಂಬಂಧಿಕರ ಮದುವೆಗೆ ಅಂತ ಆಂಧ್ರದ ಕಡೆಗೆ ಹೊರಟಿದ್ದ ವೇಳೆ ಅಪಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ.

    ಇನ್ನೂ ಟಿಟಿ ವಾಹನದಲ್ಲಿದ್ದವರು ಸಹ ಬೆಂಗಳೂರಿನವರಾಗಿದ್ದು, ಬಾಯಿಕೊಂಡ ಗಂಗಮ್ಮ ದೇವಾಲಯಕ್ಕೆ ಹೋಗಿ ಬೆಂಗಳೂರಿಗೆ ವಾಪಾಸ್ ಆಗುತ್ತಿದ್ದರು ಅಂತ ತಿಳಿದುಬಂದಿದೆ. ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೋಲ್ಡ್ ಬ್ಲಡೆಡ್ ಕೊಲೆ ಕೇಸ್‌ನಲ್ಲಿ ಪವಿತ್ರಾ ಭಾಗಿ – ಮಹಿಳೆಯರಿಗೇಕೆ ವಿಶೇಷ ಅವಕಾಶ ಕೊಡಬೇಕು?; ಎಸ್‌ಪಿಪಿ ವಾದ 

  • Bengaluru | ಬಿಎಂಟಿಸಿ ವೋಲ್ವೋ ಬಸ್‌ನಿಂದ ಸರಣಿ ಅಪಘಾತ; ನಡುರಸ್ತೆಯಲ್ಲೇ ವಾಹನ ಸವಾರರ ಚೀರಾಟ

    Bengaluru | ಬಿಎಂಟಿಸಿ ವೋಲ್ವೋ ಬಸ್‌ನಿಂದ ಸರಣಿ ಅಪಘಾತ; ನಡುರಸ್ತೆಯಲ್ಲೇ ವಾಹನ ಸವಾರರ ಚೀರಾಟ

    ಬೆಂಗಳೂರು: ಬಿಎಂಟಿಸಿ ವೋಲ್ವೋ ಬಸ್‌ನಿಂದ (BMTC Volvo Bus) ಸರಣಿ ಅಪಘಾತ ಸಂಭವಿಸಿದ ಘಟನೆ ನಗರದ ಹೆಬ್ಬಾಳ ಫ್ಲೈ ಓವರ್ ಮೇಲೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸೋಮವಾರ (ಆ.12) ಬೆಳಿಗ್ಗೆ 9:25ರ ಸುಮಾರಿಗೆ ಘಟನೆ ನಡೆದಿದ್ದು, ಬೆಚ್ಚಿ ಬೀಳಿಸುವ ಸಿಸಿಟಿವಿ ದೃಶ್ಯಾವಳಿಗಳು (CCTV Footage) ಇದೀಗ ಲಭ್ಯವಾಗಿದೆ.

    ಬಸ್‌ ಅಪಘಾತದ (Bus Accident) ದೃಶ್ಯಗಳು ಸಾರ್ವಜನಿಕರು ಹಾಗೂ ಇತರ ವಾಹನ ಸವಾರರಲ್ಲಿ ಆತಂಕ ಹುಟ್ಟಿಸಿದೆ. ಬಸ್ ಸರಣಿ ವಾಹನಗಳನ್ನ ಗುದ್ದುತ್ತಿದ್ದಂತೆ ನಡುರಸ್ತೆಯಲ್ಲಿ ವಾಹನ ಸವಾರರ ಚೀರಾಟ – ಕೂಗಾಟ ಜೋರಾಗಿ ಕೇಳಿಬಂದಿದೆ. ಚೂರು ಹೆಚ್ಚು ಕಡಿಮೆಯಾಗಿದ್ದರೂ ಪ್ರಾಣಕ್ಕೆ ಕುತ್ತುತರುವಂತಿತ್ತು ಎನ್ನುವ ರೀತಿ ದೃಶ್ಯಾವಳಿ ಇದೆ. ಇದನ್ನೂ ಓದಿ: ನಾನು ತುಂಬಾ ಅದೃಷ್ಟವಂತೆ: ಜೈಲಿನಲ್ಲಿರುವ ಪವಿತ್ರಾ ನೆನೆದು ಮಗಳು ಭಾವುಕ ಪೋಸ್ಟ್

    ಬಿಎಂಟಿಸಿ ವೋಲ್ವೋ ಬಸ್ ಬೆಂಗಳೂರು ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಿಂದ ಎಚ್ಎಸ್ಆರ್ ಲೇಔಟ್ ಕಡೆ ಸಂಚಾರ ಮಾಡುತ್ತಿತ್ತು. ಹೆಬ್ಬಾಳದ ಎಸ್.ಟಿ ಮಾಲ್ ಬಳಿ ಬಿಎಂಟಿಸಿ ಚಾಲಕ ರಾಜ ಕುಮಾರ್ 4 ದ್ವಿಚಕ್ರ ವಾಹನಗಳು, 4 ಕಾರುಗಳಿಗೆ ಗುದ್ದಿಸಿದ್ದರು. ಬಿಎಂಟಿಸಿ ವೋಲ್ವೋ ಬಸ್ ನಂ- KA57F-1794 ಇದಾಗಿದೆ. ಘಟನೆಯಲ್ಲಿ ಓರ್ವ ವಾಹನ ಸವಾರನ ಕಾಲಿಗೆ ತೀವ್ರವಾಗಿ ಗಾಯವಾಗಿದೆ. ಘಟನೆಗೆ ನಿಖರ ಕಾರಣ ಏನೆಂಬುದರ ಕುರಿತು ತನಿಖೆ ನಡೆಯುತ್ತಿದೆ.

    ಸದ್ಯ ಘಟನೆ ಕುರಿತು ಬಿಎಂಟಿಸಿ ಅಧಿಕಾರಿಗಳು ತನಿಖೆಗೆ ಮುಂದಾಗಿದ್ದಾರೆ. ಇದನ್ನೂ ಓದಿ: ಬಾಬಾ ರಾಮ್‍ದೇವ್, ಆಚಾರ್ಯ ಬಾಲಕೃಷ್ಣಗೆ ಬಿಗ್ ರಿಲೀಫ್ – ನ್ಯಾಯಾಂಗ ನಿಂದನೆ ಆರೋಪ ಕೈಬಿಟ್ಟ ಸುಪ್ರೀಂ

  • ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟಾಗಿದ್ದ ಯುವಕನಿಗೆ ಫೋರ್ಟಿಸ್ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ

    ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟಾಗಿದ್ದ ಯುವಕನಿಗೆ ಫೋರ್ಟಿಸ್ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ

    ಬೆಂಗಳೂರು: ರಸ್ತೆ ಅಪಘಾತದಲ್ಲಿ (Road Accident) ತಲೆಗೆ ತೀವ್ರ ಪೆಟ್ಟಾಗಿ ಮೆದುಳಿನ ಕೋಶಗಳ ನಡುವೆ ರಕ್ತಸ್ರಾವದಿಂದ ಜೀವನ್ಮರಣದ ನಡುವೆ ಹೋರಾಡುತ್ತಿದ್ದ 19 ವರ್ಷದ ಕಾಲೇಜು ಯುವಕನಿಗೆ ಫೋರ್ಟಿಸ್ ಆಸ್ಪತ್ರೆ (Fortis Hospital) ವೈದ್ಯರ ತಂಡ ಯಶಸ್ವಿ ಚಿಕಿತ್ಸೆ ನೀಡಿದೆ.

    ಈ ಕುರಿತು ಮಾತನಾಡಿರುವ ಆಸ್ಪತ್ರೆಯ ನರಶಸ್ತ್ರಚಿಕಿತ್ಸಾ ವಿಭಾಗದ ಹೆಚ್ಚುವರಿ ನಿರ್ದೇಶಕ ರಘುರಾಮ್ ಜಿ, ರಾಜ್ ಎಂಬುವವರು ಹುಳಿಮಾವು ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಫುಟ್‍ಪಾತ್‍ಗೆ ಕಾರು ಡಿಕ್ಕಿಯಾದ ಪರಿಣಾಮ ಹಿಂಬದಿ ಕುಳಿತಿದ್ದ ಇವರ ತಲೆ, ಕೈಗೆ ತೀವ್ರವಾಗಿ ಪೆಟ್ಟಾಗಿತ್ತು. ಅಪಘಾತದ ತೀವ್ರತೆಯಿಂದಾಗಿ ಇವರ ಬಲಗೈ ಮೂಳೆ ಮುರಿದು, ತಲೆಗೆ ತೀವ್ರವಾಗಿ ಗಾಯವಾಗಿ ಕಿವಿಯಿಂದ ರಕ್ತಸ್ತ್ರಾವವಾಗಿತ್ತು. ಇದರಿಂದ ಅವರು ಪ್ರಜ್ಞೆ ಕಳೆದುಕೊಂಡಿದ್ದರು. ಕೂಡಲೇ ಅವರನ್ನು ಫೋರ್ಟಿಸ್ ಆಸ್ಪತ್ರೆಯ ತುರ್ತು ನಿಗಾ ಘಟಕಕ್ಕೆ ಕರೆತರಲಾಯಿತು. ಕೂಡಲೇ ನಮ್ಮ ವೈದ್ಯರ ತಂಡ ಅವರನ್ನು ಎಂಆರ್‍ಐಗೆ ಒಳಪಡಿಸಿ, ಅವರಿಗೆ ಮೆದುಳಿನ ಕೋಶಗಳ ನಡುವೆ ಸಂಪರ್ಕ ಕಲ್ಪಿಸುವ ನರಗಳಲ್ಲಿ ರಕ್ತಸ್ರಾವ ಆಗಿರುವುದನ್ನು ಪತ್ತೆಮಾಡಿತ್ತು ಎಂದು ತಿಳಿಸಿದ್ದಾರೆ.

    ಈ ರೀತಿ ರಕ್ತಸ್ರಾವವನ್ನು ಆಕ್ಸಾನಲ್ ಗಾಯ ಎನ್ನಲಾಗುತ್ತದೆ. ಈ ಗಾಯದಿಂದ ಅವರು ಮಾತನಾಡುವ ಹಾಗೂ ಚಲಿಸುವ ಸಾಮಥ್ರ್ಯವನ್ನು ಕಳೆದುಕೊಳ್ಳುವ ಸಂಭವವಿರುತ್ತದೆ. ಹೀಗಾಗಿ ಅವರಿಗೆ ಕೂಡಲೇ ತುರ್ತು ಚಿಕಿತ್ಸೆಯನ್ನು ನೀಡಲಾಯಿತು. ನ್ಯೂರೋ ತಂಡವು ಅವರ ಮಾತಿನ ತೊಂದರೆ, ಮೆಮೊರಿ ಸಮಸ್ಯೆಯನ್ನು ಸರಿಪಡಿಸುವ ನಿಟ್ಟಿನಲ್ಲಿ ಚಿಕಿತ್ಸೆ ನೀಡಿದರು. ಆರಂಭಿಕ ಚಿಕಿತ್ಸೆಯ ನಂತರ, ಫಿಸಿಯೋಥೆರಪಿ ಮತ್ತು ಸ್ಪೀಚ್ ಥೆರಪಿ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

    ನಗರದ ಬನ್ನೇರುಘಟ್ಟ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಯ ಮೂಳೆಚಿಕಿತ್ಸಾ ವಿಭಾಗದ ನಿರ್ದೇಶಕ ಡಾ. ನಾರಾಯಣ್ ಹುಲ್ಸೆ, ಅಪಘಾತದಿಂದ ರಾಜ್ ಅವರ ಬಲಗೈ ಮೇಲ್ಭಾಗದ ಮೂಳೆ ಮುರಿದ ಕಾರಣಾದವರಿಗೆ ತೆಳವಾದ ತಂತಿಯನ್ನು ಬಳಸಿಕೊಂಡು, ಪ್ಲೇಟ್ ಹಾಗೂ ಸ್ಕ್ರೂಗಳನ್ನು ಬಲಗೊಳಿಸಲಾಗಿದೆ. ಜೊತೆಗೆ, ಮೊಣಕೈ ಕೀಲಿನ ಒಂದು ಭಾಗವನ್ನು ತೆಗೆದುಹಾಕಲಾಗಿದ್ದು, ರೋಗಿಯು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

  • ಭೀಕರ ರಸ್ತೆ ಅಪಘಾತ – ಬಿಬಿಎಂಪಿ ಕಸದ ಲಾರಿಗೆ ಎರಡು ಜೀವ ಬಲಿ

    ಭೀಕರ ರಸ್ತೆ ಅಪಘಾತ – ಬಿಬಿಎಂಪಿ ಕಸದ ಲಾರಿಗೆ ಎರಡು ಜೀವ ಬಲಿ

    ಬೆಂಗಳೂರು: ಬಿಬಿಎಂಪಿ ತ್ಯಾಜ್ಯ ವಿಲೇವಾರಿ ವಾಹನ (BBMP Garbage Truck )ಹಾಗೂ ದ್ಬಿಚಕ್ರ ವಾಹನದ ನಡುವೆ ಡಿಕ್ಕಿ (Road Accident) ಸಂಭವಿಸಿ, ವಾಹನ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆ.ಆರ್ ಸರ್ಕಲ್ ಬಳಿ ನಡೆದಿದೆ. ಭಾನುವಾರ (ಜು.28) ರಾತ್ರಿ 8.45 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.

    ಮೃತರನ್ನ ಪ್ರಶಾಂತ್‌ (25), ಬಯ್ಯಣ್ಣಗಿರಿ ಶಿಲ್ಪ ಎಂದು ಗುರುತಿಸಲಾಗಿದೆ. ಬೆಂಗಳೂರಿನ ನಿವಾಸಿಯೇ ಆಗಿರುವ ಪ್ರಶಾಂತ್‌, ಶಿಲ್ಪಾ ಇಬ್ಬರೂ ಸ್ನೇಹಿತರಾಗಿದ್ದು, ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

    ಇಬ್ಬರೂ ಮೆಜೆಸ್ಟಿಕ್‌ನಿಂದ ಕೆ.ಆರ್‌ ಸರ್ಕಲ್‌ ಮಾರ್ಗವಾಗಿ ಬೈಕ್‌ನಲ್ಲಿ ಬರುತ್ತಿದ್ದರು. ಇದೇ ವೇಳೆ ಸಿಐಡಿ ಸಿಗ್ನಲ್‌ ಮಾರ್ಗದಿಂದ ಕೆ.ಆರ್‌ ವೃತ್ತದ ಮಾರ್ಗವಾಗಿ ಬಿಬಿಎಂಪಿ ಕಸದ ಲಾರಿ ವೇಗವಾಗಿ ಬರುತ್ತಿತ್ತು. ತಿರುವಿನ ಮಾರ್ಗದಲ್ಲೂ ವೇಗವಾಗಿ ಬಂದ ಲಾರಿ ಬೈಕ್‌ಗೆ ಡಿಕ್ಕಿಯೊಡೆದು ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ.

    ಅಲ್ಲದೇ ಬೈಕ್‌ಗೆ ಡಿಕ್ಕಿ ಹೊಡೆದರೂ ಲಾರಿ ನಿಲ್ಲಿಸದೇ ಸುಮಾರು 10 ಮೀಟರ್‌ನಷ್ಟು ದೂರಕ್ಕೆ ಬೈಕ್‌ ಸವಾರರನ್ನ ಎಳೆದೊಯ್ದಿದೆ. ಇದರಿಂದ ರಕ್ತ ಹೆಚ್ಚಿನ ಪ್ರಮಾಣದಲ್ಲಿ ಹರಿದಿದೆ. ಕೂಡಲೇ ಅಪಘಾತಕ್ಕೀಡಾದವರನ್ನ ಆಸ್ಪತ್ರೆಗೆ ಸಾಗಿಸಲು ಮುಂದಾದರೂ ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾರೆ. ಸದ್ಯ ಮೃತದೇಹಗಳನ್ನ ಸೆಂಟ್ ಮಾರ್ಥಸ್ ಶವಗಾರಕ್ಕೆ ರವಾನಿಸಲಾಗಿದೆ. ಸ್ಥಳಕ್ಕೆ ಉಪ್ಪಾರಪೇಟೆ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

  • ಅಧಿಕಾರಿಗಳ ಉದಾಸೀನದಿಂದ ಜನರ ಪ್ರಾಣ ಹೋದರೆ ಸಹಿಸಲ್ಲ: ಸಿಎಂ

    ಅಧಿಕಾರಿಗಳ ಉದಾಸೀನದಿಂದ ಜನರ ಪ್ರಾಣ ಹೋದರೆ ಸಹಿಸಲ್ಲ: ಸಿಎಂ

    ಬೆಂಗಳೂರು: ನಿಮ್ಮ ಉದಾಸೀನದಿಂದ ಜನರ ಅಮೂಲ್ಯ ಪ್ರಾಣ ಹೋದರೆ ಸಹಿಸಲ್ಲ. ನೀವು ರಸ್ತೆಗಳಿದು ಸುರಕ್ಷತೆ ಪರೀಕ್ಷಿಸಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಸೂಚನೆ ನೀಡಿದ್ದಾರೆ.

    ವಿಧಾನಸೌಧದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಆಗುತ್ತಿರುವ ರಸ್ತೆ ಅಪಘಾತಗಳ (Road Accident) ಬಗ್ಗೆ ಗರಂ ಆಗಿದ್ದಾರೆ. ಅಧಿಕಾರಿಗಳ ಉದಾಸೀನದಿಂದ ಜನರ ಅಮೂಲ್ಯ ಪ್ರಾಣ ಹೋದರೆ ಸಹಿಸಲ್ಲ. ನೀವು ರಸ್ತೆಗಳಿದು ಸುರಕ್ಷತೆ ಪರೀಕ್ಷಿಸಬೇಕು. ಅಪಘಾತಗಳ ನಿಯಂತ್ರಣಕ್ಕೆ ಸಮನ್ವಯ ಅಗತ್ಯ ಅಪಘಾತ ವಲಯ ಮತ್ತು ಬ್ಲಾಕ್ ಸ್ಪಾಟ್ ಗುರುತಿಸಿ ಕೈಕಟ್ಟಿ ಕುಳಿತರೆ ನಿಮ್ಮ ಜವಾಬ್ದಾರಿ ಮುಗಿತಾ ಎಂದು ಸಿಎಂ ಪ್ರಶ್ನಿಸಿದರು. ಇದನ್ನೂ ಓದಿ: ಕನಕಪುರ, ರಾಮನಗರದಲ್ಲಿ ಮೆಡಿಕಲ್‌ ಕಾಲೇಜ್‌ ಇಲ್ಲ – ಮೂರು ಪ್ರಸ್ತಾಪಕ್ಕೆ ಒಪ್ಪಿಗೆ

     

    ರಾಜ್ಯದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 34,916 ಅಪಘಾತಗಳು ಸಂಭವಿಸಿದ್ದು, 9943 ಜನರು ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿರುವ ರಸ್ತೆ ಸುರಕ್ತಾ ಸಮಿತಿಗಳು ಜಿಲ್ಲೆಯಲ್ಲಿ ಅಪಘಾತ ಪ್ರಮಾಣ ತಡೆಯಲು ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಬೇಕು. ಕಂದಾಯ, ಪೊಲೀಸ್‌, ಸಾರಿಗೆ, ನಗರ ಪಾಲಿಕೆ ಎಲ್ಲರೂ ಸಮನ್ವಯದಿಂದ ಕಾರ್ಯ ನಿರ್ವಹಿಸಿದರೆ ಅಪಘಾತಗಳನ್ನು ನಿಯಂತ್ರಿಸಲು ಸಾಧ್ಯ ಎಂದರು. ಇದನ್ನೂ ಓದಿ: ಗೌತಮ್‌ ಗಂಭೀರ್‌ ಟೀಂ ಇಂಡಿಯಾದ ಕೋಚ್‌ : ಜಯ್‌ ಶಾ ಅಧಿಕೃತ ಘೋಷಣೆ

    ರಸ್ತೆ ಸುರಕ್ಷತಾ ಸಪ್ತಾಹಗಳು ಕಾಟಾಚಾರಕ್ಕೆ ನಡೆಯಬಾರದು. ಮುಂಜಾಗರೂಕತಾ ಕ್ರಮಗಳನ್ನು ಕೈಗೊಂಡರೆ ಹಲವು ಅಪಘಾತಗಳನ್ನು ತಡೆಯಬಹುದಾಗಿದೆ. ನಮ್ಮ ನಿರ್ಲಕ್ಷ್ಯದಿಂದ ಜನರ ಪ್ರಾಣ ಹಾನಿ ಉಂಟಾಗುವುದನ್ನು ಸಹಿಸಲು ಸಾಧ್ಯವಿಲ್ಲ. ಹಾಟ್‌ಸ್ಟಾಟ್‌ಗಳನ್ನು ಗುರುತಿಸಿ ಹೆದ್ದಾರಿಗಳಲ್ಲಿ ಅಂಬುಲೆನ್ಸ್‌ ವ್ಯವಸ್ಥೆ, ಟ್ರಾಮಾ ಸೆಂಟರ್‌ ನೆಟ್‌ವರ್ಕ್‌ ಮಾಡಬೇಕು ಎಂದು ಸೂಚನೆ ನೀಡಿದರು.

     

  • ಬೈಕ್‌ಗೆ ಲಾರಿ ಡಿಕ್ಕಿ – ಪತಿಯೊಂದಿಗೆ ದೇವರ ದರ್ಶನ ಮುಗಿಸಿ ಬರುತ್ತಿದ್ದ ಪತ್ನಿ ಸಾವು!

    ಬೈಕ್‌ಗೆ ಲಾರಿ ಡಿಕ್ಕಿ – ಪತಿಯೊಂದಿಗೆ ದೇವರ ದರ್ಶನ ಮುಗಿಸಿ ಬರುತ್ತಿದ್ದ ಪತ್ನಿ ಸಾವು!

    ಚಿಕ್ಕೋಡಿ: ಪತಿಯೊಂದಿಗೆ ದೇವರ ದರ್ಶನ ಮುಗಿಸಿ ವಾಪಸ್‌ ಬರುತ್ತಿದ್ದ ವೇಳೆ ಬೈಕ್‌ಗೆ ಲಾರಿ ಡಿಕ್ಕಿಯೊಡೆದ ಪರಿಣಾಮ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ (Chikkodi) ತಾಲೂಕಿನ ಮಜಲಟ್ಟಿ ಕ್ರಾಸ್ ಬಳಿ ನಡೆದಿದೆ.

    ಮೃತ ಮಹಿಳೆಯನ್ನು (Women) ಹುಕ್ಕೇರಿ ತಾಲೂಕಿನ ಕೋಚರಿ ಗ್ರಾಮದ ರೇವತಿ ಬಸಗೌಡ ಅರಳಿಕಟ್ಟಿ (25), ಗಾಯಾಳು ಪತಿ ಬಸಗೌಡ ಶಿವಲಿಂಗ ಅರಳಿಕಟ್ಟಿ (35) ಎಂದು ಗುರುತಿಸಲಾಗಿದೆ. ಪತಿ-ಪತ್ನಿ ಇಬ್ಬರೂ ಚಿಕ್ಕೋಡಿ ತಾಲೂಕಿನ ಯಡೂರಿಗೆ ದೇವರ ದರ್ಶನಕ್ಕೆ ತೆರಳಿದ್ದರು. ಇದನ್ನೂ ಓದಿ: ಮಣಿಪುರದಲ್ಲಿ ಸಿಎಂ ಬೆಂಗಾವಲು ಪಡೆ ಮೇಲೆ ಬಂಡುಕೋರರಿಂದ ಗುಂಡಿನ ದಾಳಿ!

    KA23 EI-8338 ಸಂಖ್ಯೆಯ ದ್ವಿಚಕ್ರ ವಾಹನದಲ್ಲಿ ಗ್ರಾಮಕ್ಕೆ ಹಿಂತಿರುಗುತ್ತಿದ್ದಾಗ ಮಜಲಟ್ಟಿ ಕ್ರಾಸ್ ಬಳಿ ಎದುರಿಗೆ ಬರುತ್ತಿದ್ದ KA32 B 7422 ಲಾರಿ ಡಿಕ್ಕಿ ಹೊಡೆದಿದೆ, ಪರಿಣಾಮ ವಿವಾಹಿತ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತಿ ಬಸಗೌಡ ಶಿವಲಿಂಗ ಅರಳಿಕಟ್ಟಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಅಪಘಾತದ ಬಳಿಕ ಲಾರಿ ಚಾಲಕ (Lorry Driver) ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ಬಳಿಕ ಸ್ಥಳಕ್ಕೆ ಚಿಕ್ಕೋಡಿ ಸಿಪಿಐ ಕಡದೇವರ, ಪಿಎಸ್‌ಐ ಸಚಿನ್ ದಾಸರೆಡ್ಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಂಬಂಧ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ (Chikkodi Police Station) ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೆಟ್ಟಿಂಗ್ ಭೂತಕ್ಕೆ ಕಾಂಗ್ರೆಸ್ ಕಾರ್ಯಕರ್ತ ಬಲಿ – ಲಾಡ್ಜ್ ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ!

  • ನಿದ್ರೆಗೆ ಜಾರಿದ ಚಾಲಕ, ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಕಾರು – ಮೂವರ ದುರ್ಮರಣ!

    ನಿದ್ರೆಗೆ ಜಾರಿದ ಚಾಲಕ, ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಕಾರು – ಮೂವರ ದುರ್ಮರಣ!

    ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ (Gauribidanur Police Station) ನಗರಗೆರೆ ಬಳಿಯ‌ ತಿರುವಿನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ತಗ್ಗು ಪ್ರದೇಶಕ್ಕೆ ನುಗ್ಗಿದ ಪರಿಣಾಮ ಕಾರಿನಲ್ಲಿದ್ದ ನಾಲ್ವರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

    ಗುರುವಾರ ತಡರಾತ್ರಿ ನಡೆದ ಘಟನೆಯಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಗೌರಿಬಿದನೂರು ತಾಲ್ಲೂಕು ವಾಟದಹೊಸಹಳ್ಳಿ ಬೆಸ್ಕಾಂ ಶಾಖೆಯ ಲೈನ್‌‌ಮ್ಯಾನ್‌ಗಳಾದ (BESCOM Lineman) ಶ್ರೀಧರ್, ವೇಣು ಗೋಪಾಲ್, ಮಂಜುನಾಥ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಸಾವಿನ ಕೂಪದಂತಿದ್ದ ಸಹಸ್ರತಾಲ್‌ ಹಿಮದ ಹೊದಿಕೆಯಿಂದ ಬದುಕುಳಿದವರು ಬೆಂಗಳೂರಿಗೆ ವಾಪಸ್‌

    ಅಷ್ಟಕ್ಕೂ ಆಗಿದ್ದೇನು?
    ಕಳೆದ ರಾತ್ರಿ ಗೌರಿಬಿದನೂರು ತಾಲ್ಲೂಕು ನಗರಗೆರೆ-ವಾಟದಹೊಸಹಳ್ಳಿ ರಸ್ತೆಯಲ್ಲಿ ವೇಣುಗೋಪಾಲ್ KA40-N-5668 ಬ್ರಿಜಾ ಕಾರಿನಲ್ಲಿ ಬರುವಾಗ, ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಪಕ್ಕದ ತಗ್ಗು ಪ್ರದೇಶಕ್ಕೆ ಉರುಳಿದೆ. ಇದರಿಂದ ಶ್ರೀಧರ್ (28) ವೇಣುಗೋಪಾಲ (38), ಮಂಜುನಾಥ (37), ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನೂ ಕಾರಿನಲ್ಲಿದ್ದ ಶಿವಕುಮಾರ್‌ ಎಂಬಾತ ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದ್ರೆ ನಗರಗೆರೆ ಬಳಿ ತಿರುವು ಇರುವುದರಿಂದ ಮುಂಜಾನೆ ಸಮಯದಲ್ಲಿ ಚಾಲಕ ನಿದ್ರೆಗೆ ಜಾರಿದ್ದು ಅಪಘಾತಕ್ಕೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

    ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತಪಟ್ಟವರ ಶವಗಳನ್ನ ಗೌರಿಬಿದನೂರು ಸಾರ್ವಜನಿಕ ಆಸ್ಪತ್ರಗೆ ರವಾನಿಸಿದ್ದಾರೆ. ಇದನ್ನೂ ಓದಿ: ಉಪ ಚುನಾವಣೆಗೆ ಬಿಜೆಪಿ, ಜೆಡಿಎಸ್ ಮೈತ್ರಿ ಫಿಕ್ಸ್ – ಟಿಕೆಟ್ ಪಡೆಯಲು ಯೋಗೇಶ್ವರ್ ಕಸರತ್ತು

  • ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಪುತ್ರನ ಬೆಂಗಾವಲು ವಾಹನ ಬೈಕ್‌ಗೆ ಡಿಕ್ಕಿ – ಇಬ್ಬರು ಯುವಕರ ದುರ್ಮರಣ

    ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಪುತ್ರನ ಬೆಂಗಾವಲು ವಾಹನ ಬೈಕ್‌ಗೆ ಡಿಕ್ಕಿ – ಇಬ್ಬರು ಯುವಕರ ದುರ್ಮರಣ

    ಲಕ್ನೋ: ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಅವರ ಪುತ್ರ ಕರಣ್‌ ಭೂಷಣ್‌ ಸಿಂಗ್‌ (Karan Bhushan Singh) ಅವರ ಬೆಂಗಾವಲು ಪಡೆಗೆ ಸೇರಿದ ಟೊಯೊಟಾ ಫಾರ್ಚುನರ್ ಎಸ್‌ಯುವಿ (Toyota Fortuner SUV) ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 17 ವರ್ಷದ ಓರ್ವ ಸೇರಿದಂತೆ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಗೋಂಡಾದಲ್ಲಿ ನಡೆದಿದೆ.

    ಬುಧವಾರ (ಇಂದು) ಬೆಳಗ್ಗೆ 9 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ರೇಹಾನ್‌ (17) ಮತ್ತು ಶಹಜಾನ್‌ (24) ಎಂಬ ಯುವಕರು ಔಷಧಿ ಖರೀದಿಸಲು ಬೈಕ್‌ ನಲ್ಲಿ ಹೋಗುತ್ತಿದ್ದರು. ಈ ವೇಳೆ ಎದುರಿನಿಂದ ವೇಗವಾಗಿ ಬಂದ ಎಸ್‌ಯುವಿ ಡಿಕ್ಕಿ ಹೊಡೆದಿದೆ. ಬಳಿಕ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತ ಸಂಭವಿಸಿದ ಕೂಡಲೇ ಜನರು ಜಮಾಯಿಸಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಮೃತರ ತಾಯಿ ಚಂದಾ ಬೇಗಂ ಎಂಬವರು ದೂರು ದಾಖಲಿಸಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.

    ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು (UP Police) ಚಾಲಕನನ್ನ ಬಂಧಿಸಿ, ಎಸ್‌ಯುವಿ ಅನ್ನು ವಶಪಡಿಸಿಕೊಂಡಿದ್ದಾರೆ. ಆದ್ರೆ ಅಪಘಾತ ಸಂದರ್ಭದಲ್ಲಿ ಕರಣ್‌ ಭೂಷಣ್‌ ಸಿಂಗ್‌ ಪ್ರಯಾಣಿಸುತ್ತಿದ್ದರೇ ಅನ್ನೂ ಬಗ್ಗೆ ಸ್ಪಷ್ಟನೆ ಇಲ್ಲ. ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ರಾಧೇಶ್ಯಾಮ್ ರೈ ತಿಳಿಸಿದ್ದಾರೆ. ಇದನ್ನೂ ಓದಿ: ಬಸವಕಲ್ಯಾಣ ತೆಗೆದು ಎಲ್ಲಾ ಬಸ್‌ಗಳ ಮೇಲೆ ಕ್ರೈಸ್ತ ಕಲ್ಯಾಣ ಅಂತಾ ಮಾಡುತ್ತೇನೆ: ಯಾದಗಿರಿಯಲ್ಲಿ ವ್ಯಕ್ತಿ ಕಿರಿಕ್‌

    ಬ್ರಿಜ್‌ ಭೂಷಣ್‌ ವಿರುದ್ಧ ಮಹಿಳೆ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳ ಆರೋಪದ ಕೇಳಿಬಂದ ಬಳಿಕ ಅವರನ್ನ ಅವರನ್ನ ಡಬ್ಲ್ಯೂಎಫ್‌ಒ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ಅವರ ವಿರುದ್ಧ ಚಾರ್ಜ್‌ ಶೀಟ್‌ ಸಲ್ಲಿಸಲು ದೆಹಲಿ ಕೋರ್ಟ್‌ ಪೊಲೀಸರಿಗೆ ಆದೇಶಿಸಿತ್ತು. ಈ ಬೆಳವಣಿಗೆ ನಂತರ ಬ್ರಿಜ್‌ ಭೂಷಣ್‌ ಅವರಿಗೆ ಬಿಜೆಪಿ ಟಿಕೆಟ್‌ ಸಹ ನಿರಾಕರಿಸಿತು, ಅವರ ಪುತ್ರ ಕರಣ್‌ ಭೂಷಣ್‌ ಸಿಂಗ್‌ನನ್ನ ಕಣಿಕ್ಕಿಳಿತು. ಬ್ರಿಜ್‌ ಭೂಷಣ್‌ ಅವರ ಮತ್ತೋಬ್ಬ ಪುತ್ರ ಪ್ರತೀಕ್ ಭೂಷಣ್ ಸಿಂಗ್ ಗೊಂಡಾ ಕ್ಷೇತ್ರದಿಂದ ಶಾಸಕರಾಗಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ಸಲೂನ್‌ಗೆ ಹೋಗಿ ಕ್ಲೀನ್ ಆಗಿ ಬಂದಿದ್ದಾರೆ, ಇದಕ್ಕೆ ಅಮಿತ್ ಶಾ ಡೈರೆಕ್ಟರ್: ಪ್ರಿಯಾಂಕ್‌ ಖರ್ಗೆ ವಾಗ್ದಾಳಿ 

  • ರಾಜ್ಯದಲ್ಲಿ ಅಪಘಾತಕ್ಕೆ ಒಂದೇ ದಿನ 51 ಬಲಿ- ಸಂಚಾರಿ ನಿಯಮ ಪಾಲನೆಗೆ ಅಲೋಕ್ ಕುಮಾರ್ ಮನವಿ

    ರಾಜ್ಯದಲ್ಲಿ ಅಪಘಾತಕ್ಕೆ ಒಂದೇ ದಿನ 51 ಬಲಿ- ಸಂಚಾರಿ ನಿಯಮ ಪಾಲನೆಗೆ ಅಲೋಕ್ ಕುಮಾರ್ ಮನವಿ

    ಬೆಂಗಳೂರು: ರಾಜ್ಯದಲ್ಲಿ ಭಾನುವಾರ (ಮೇ 26) ಒಂದೇ ದಿನ 51 ಜನ ಅಪಘಾತಕ್ಕೆ (Road Accident) ಬಲಿಯಾಗಿದ್ದು, ಈ ಬಗ್ಗೆ ಸಂಚಾರ ಹಾಗೂ ರಸ್ತೆ ಸುರಕ್ಷತೆ (Road safety) ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ (ADGP Alok Kumar) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

    ಅಪಘಾತದ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಕಳೆದ 24 ಗಂಟೆಯಲ್ಲಿ ನಡೆದ ಪ್ರತ್ಯೇಕ ಅಪಘಾತಗಳಲ್ಲಿ 51 ಜನ ಸಾವಿಗೀಡಾಗಿದ್ದಾರೆ. ಸಂಚಾರಿ ನಿಯಮಗಳ ಉಲ್ಲಂಘನೆಯೇ ಅಪಘಾತಕ್ಕೆ ಕಾರಣವಾಗಿದ್ದು, ದಯವಿಟ್ಟು ಸಂಚಾರಿ ನಿಯಮ ಪಾಲಿಸಿ ಎಂದು ಅವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಆಟವಾಡುತ್ತಾ ಸಂಪ್‍ಗೆ ಬಿದ್ದು 2 ವರ್ಷದ ಮಗು ದುರ್ಮರಣ

    ಇತ್ತೀಚಿನ ದಿನಗಳಲ್ಲಿ ನಡೆದ ಅಪಘಾತಗಳಲ್ಲಿ ಭಾನುವಾರ ಅತಿ ಹೆಚ್ಚು ಜನರ ಸಾವಾಗಿದೆ. ಅತಿವೇಗ ಹಾಗೂ ಅಜಾಗರೂಕತೆ ಚಾಲನೆಯಿಂದ ಅಪಘಾತಗಳು ಹೆಚ್ಚಾಗಿವೆ ಎಂದು ಅವರು ಪೋಸ್ಟ್‍ನಲ್ಲಿ ಬರೆದುಕೊಂಡಿದ್ದಾರೆ.

    ಚಿಕ್ಕೋಡಿ, ಹಾಸನ, ಕಾರವಾರ, ರಾಮನಗರ ಸೇರಿ ರಾಜ್ಯದ ಹಲವೆಡೆ ಭಾನುವಾರ ಭಿಕರ ಅಪಘಾತಗಳು ನಡೆದಿದ್ದವು. ಬಹುತೇಕ ಅಪಘಾತಗಳಿಗೆ ಸಂಚಾರಿ ನಿಯಮಗಳ ಉಲ್ಲಂಘನೆಯೇ ಪ್ರಮುಖ ಕಾರಣ ಎನ್ನಲಾಗಿತ್ತು. ಇದನ್ನೂ ಓದಿ: ಕರಾವಳಿಯಲ್ಲಿ ಮಳೆ ಸಂಭವ- ಬೆಂಗಳೂರಿನಲ್ಲಿ ಮುಂದಿನ 3 ದಿನ ಮಳೆಗೆ ಬ್ರೇಕ್