Tag: Road Accident

  • ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋರಟವರು ಮಸಣ ಸೇರಿದರು – ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವು!

    ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋರಟವರು ಮಸಣ ಸೇರಿದರು – ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವು!

    ಹಾವೇರಿ: ದೇವರ ದರ್ಶನಕ್ಕೆಂದು ತಿರುಪತಿಗೆ (Tirupati Temple) ಹೋಗುತ್ತಿದ್ದ ಕಾರು ಏಕಾಏಕಿ ನಸುಕಿನಜಾವ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು , 6 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು (Ranebennur )ತಾಲೂಕಿನ ಹಲಗೇರಿ ಬೈಪಾಸ್ ಬಳಿ ನಡೆದಿದೆ.

    ದೇವರ ದರ್ಶನಕ್ಕೆಂದು ತಿರುಪತಿಗೆ ತೆರಳುತ್ತಿದ್ದ ನಗರದ ಸಮಗಂಡಿ ಮತ್ತು ಬಾರ್ಕಿ ಎಂಬ ಎರಡು ಕುಟುಂಬಗಳು ಹೋಗುತ್ತಿದ್ದ ವೇಳೆ ರಾಣೆಬೆನ್ನೂರಿನ ರಾಷ್ಟ್ರೀಯ ಹೆದ್ದಾರಿ-4ರ (NH-4) ಹಲಗೇರಿ ಬ್ರಿಡ್ಜ್‌ಬಳಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ್ದೇ ಅಪಘಾತಕ್ಕೆ (Road Accident) ಕಾರಣ ಎಂದು ಹೇಳಲಾಗಿದೆ. ಮೃತರನ್ನ ಸುರೇಶ ಜಾಡಿ (54), ಐಶ್ವರ್ಯ ಬಾರ್ಕಿ (22), ಚೇತನಾ (7), ಪವಿತ್ರಾ ಸಮಗಂಡಿ (28) ಎಂದು ಗುರುತಿಸಲಾಗಿದೆ. ಮೃತರು ಹಾವೇರಿನಗರದ ನಿವಾಸಿಗಳಾಗಿದ್ದಾರೆ.

    ಗಾಯಗೊಂಡವರನ್ನ ಚನ್ನವೀರಪ್ಪ ಜಾಡಿ, ಸಾವಿತ್ರಾ ಜಾಡಿ, ವಿಕಾಶ ಹೊನ್ನಪ್ಪ ಬಾರ್ಕಿ, ಹೊನ್ನಪ್ಪ ಬಾರ್ಕಿ, ಪ್ರಭುರಾಜ ಸಮಗಂಡಿ, ಗೀತಾ ಬಾರ್ಕಿ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನ ಸದ್ಯ ದಾವಣಗೆರೆ ಮತ್ತು ತಾಲ್ಲೂಕು ಆಸ್ಪತ್ರೆಗೆ (Hospital) ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: ಕಾಂಬೋಡಿಯಾದಲ್ಲಿ ಮೋಸದ ಉದ್ಯೋಗ ಜಾಲಕ್ಕೆ ಸಿಲುಕಿದ್ದ 60 ಮಂದಿ ಭಾರತೀಯರ ರಕ್ಷಣೆ

    ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ರಾಣೆಬೆನ್ನೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಣೆಬೆನ್ನೂರು ಸಂಚಾರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಾಹುಲ್‌ ಗಾಂಧಿಗೆ ಕಸದ ಬುಟ್ಟಿಯ ಬಗ್ಗೆ ಸಾಕಷ್ಟು ಅನುಭವವಿದೆ: ಆಚಾರ್ಯ ಪ್ರಮೋದ್‌ ಕೃಷ್ಣಂ ಮತ್ತೆ ವಾಗ್ದಾಳಿ

  • ಅಪ್ರಾಪ್ತನ ಹುಚ್ಚಾಟಕ್ಕೆ ಇಬ್ಬರು ಟೆಕ್ಕಿಗಳು ಬಲಿ – ಅಪಘಾತದ ಬಗ್ಗೆ ಪ್ರಬಂಧ ಬರೆಯುವಂತೆ ಸೂಚಿಸಿದ ಕೋರ್ಟ್‌

    ಅಪ್ರಾಪ್ತನ ಹುಚ್ಚಾಟಕ್ಕೆ ಇಬ್ಬರು ಟೆಕ್ಕಿಗಳು ಬಲಿ – ಅಪಘಾತದ ಬಗ್ಗೆ ಪ್ರಬಂಧ ಬರೆಯುವಂತೆ ಸೂಚಿಸಿದ ಕೋರ್ಟ್‌

    ಮುಂಬೈ: ಮಹಾರಾಷ್ಟ್ರದ ಪುಣೆಯಲ್ಲಿ (Pune) ಅಪ್ರಾಪ್ತನ ನಿರ್ಲಕ್ಷ್ಯಕ್ಕೆ ಇಬ್ಬರ ಜೀವ ಬಲಿ ಪಡೆದಿದೆ. ಈ ಪ್ರಕರಣದಲ್ಲಿ ಅಪ್ರಾಪ್ತನಿಗೆ ಜಾಮೀನು (Bail) ನೀಡುವ ಸಮಯದಲ್ಲಿ ಕೋರ್ಟ್ (Court) ವಿಧಿಸಿದ ಷರತ್ತು ಚರ್ಚೆಗೆ ಗ್ರಾಸವಾಗಿದೆ.

    ಭಾನುವಾರ ರಾತ್ರಿ ಪ್ರತಿಷ್ಠಿತ ಬಿಲ್ಡರ್‌ನ 17 ವರ್ಷದ ಪುತ್ರನೊಬ್ಬ ಮದ್ಯದ ಅಮಲಿನಲ್ಲಿ ಐಷಾರಾಮಿ ಪೋರ್ಶೆ ಕಾರನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿ ಇಬ್ಬರ ಟೆಕ್ಕಿಗಳನ್ನ ಬಲಿ ಪಡೆದಿದ್ದ.


    ಆರೋಪಿಯನ್ನು ಬಂಧಿಸಿದ ಪೊಲೀಸರು ಕೋರ್ಟ್ ಮುಂದೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಸಂದರ್ಭದಲ್ಲಿ ಅಪಘಾತದ ಬಗ್ಗೆ ಪ್ರಬಂಧ ಬರೆಯಬೇಕು. 15 ದಿನ ಟ್ರಾಫಿಕ್ ಪೊಲೀಸರ ಜೊತೆ ಕೆಲಸ ಮಾಡಬೇಕು. ಮಾನಸಿಕ ತಜ್ಞರಿಂದ ಕೌನ್ಸಿಲಿಂಗ್ ತೆಗೆದುಕೊಳ್ಳಬೇಕು ಎಂಬ ಷರತ್ತುಗಳನ್ನು ವಿಧಿಸಿದೆ. ಇದನ್ನೂ ಓದಿ: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಗೌರವಾರ್ಥ ಮಂಗಳವಾರ ಭಾರತದಲ್ಲಿ ಶೋಕಾಚರಣೆ

    ಇದು ಭಾರೀ ಚರ್ಚೆಗೆ ಗುರಿಯಾಗಿದೆ. ಇಬ್ಬರ ಸಾವಿಗೆ ಇದೇನಾ ನ್ಯಾಯ ಎಂದು ಪ್ರಶ್ನಿಸಿ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

     

  • ನಿಯಂತ್ರಣ ತಪ್ಪಿ ಡಿವೈಡರ್‌ ಡಿಕ್ಕಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್ – ನೆಲಮಂಗಲ ಬಳಿ ತಪ್ಪಿತು ದೊಡ್ಡ ದುರಂತ!

    ನಿಯಂತ್ರಣ ತಪ್ಪಿ ಡಿವೈಡರ್‌ ಡಿಕ್ಕಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್ – ನೆಲಮಂಗಲ ಬಳಿ ತಪ್ಪಿತು ದೊಡ್ಡ ದುರಂತ!

    ನೆಲಮಂಗಲ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ (KSRTC Bus) ಡಿವೈಡರ್‌ಗೆ ಡಿಕ್ಕಿ ಹೊಡೆದು, ಡಿವೈಡರ್ ಮೇಲೆ ಹತ್ತಿದ ಘಟನೆ ನೆಲಮಂಗಲ (Nelamangala) ಬಳಿ ನಡೆದಿದೆ.

    ನೆಲಮಂಗಲದ ಅಡಕಮಾರನಹಳ್ಳಿ ಬಳಿಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು, 6 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 10.76 ಲಕ್ಷ ಪ್ರಯಾಣಿಕರಿಗೆ ದಂಡ – ಬರೋಬ್ಬರಿ 5.38 ಕೋಟಿ ಸಂಗ್ರಹಿಸಿದ BMRCL

    ಏನಿದು ಘಟನೆ?
    ಅಪಘಾತಕ್ಕೀಡಾದ ಬಸ್ ಸೋಮವಾರಪೇಟೆಯಿಂದ ಬೆಂಗಳೂರಿಗೆ ಬರುತ್ತಿತ್ತು. ನೆಲಮಂಗಲ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ (National Highway) ಫ್ಲೈಓವರ್ ರಸ್ತೆಯಲ್ಲಿ ಬರುತ್ತಿದ್ದಾಗ ಚಾಲಕ ಓವರ್ ಟೇಕ್ ಮಾಡಲು ಮುಂದಾಗಿದ್ದಾನೆ. ಈ ವೇಳೆ ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಚಾಲಕ, ನಿರ್ವಾಹಕ ಸೇರಿದಂತೆ 6 ಮಂದಿಗೆ ಗಂಭೀರ ಗಾಯಗಳಾಗಿವೆ. ಉಳಿದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

    ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಬಸ್ ನಲ್ಲಿ 35 ಜನರು ಪ್ರಯಾಣಿಸುತ್ತಿದ್ದರು, ಸಲ್ಪ ಯಾಮಾರಿದ್ದರೂ ಬಸ್ ಫ್ಲೈವರ್‌ನಿಂದ ಕೆಳಗೆ ಬೀಳುವ ಸಾಧ್ಯತೆಯಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಇದನ್ನೂ ಓದಿ: ಮೊದಲ ಬಾರಿಗೆ ED ಜಾಹೀರಾತು ನೋಡುತ್ತಿದ್ದೇವೆ: ಬಾಂದ್ರಾ-ವರ್ಲಿ ಸೀ ಲಿಂಕ್ ಉದಾಹರಿಸಿ ರಶ್ಮಿಕಾಗೆ ಕೇರಳ ಕಾಂಗ್ರೆಸ್‌ ತಿರುಗೇಟು

    ಘಟನೆ ಸಂಬಂಧ ನೆಲಮಂಗಲ ಸಂಚಾರ ಪೋಲಿಸ್ ಠಾಣೆಯಲ್ಲಿ (Nelamangala Traffic Police) ಪ್ರಕರಣ ದಾಖಲಾಗಿದೆ.

  • 6 ವರ್ಷಗಳ ಹಿಂದೆಯೇ ಎಫ್‌ಸಿ ಮುಗಿದಿದ್ದ ಶಾಲಾ ಬಸ್‌ ಪಲ್ಟಿ – 6 ಮಕ್ಕಳ ದಾರುಣ ಸಾವು!

    6 ವರ್ಷಗಳ ಹಿಂದೆಯೇ ಎಫ್‌ಸಿ ಮುಗಿದಿದ್ದ ಶಾಲಾ ಬಸ್‌ ಪಲ್ಟಿ – 6 ಮಕ್ಕಳ ದಾರುಣ ಸಾವು!

    – 20ಕ್ಕೂ ಹೆಚ್ಚು ಮಂದಿಗೆ ಗಾಯ

    ಚಂಡೀಗಢ: ಶಾಲಾ ಬಸ್‌ ಪಲ್ಟಿಯಾಗಿ 6 ಮಕ್ಕಳು (School Childrens) ದಾರುಣ ಸಾವಿಗೀಡಾಗಿದ್ದು, 20ಕ್ಕೂ ಮಂದಿ ಗಾಯಗೊಂಡಿರುವ ಘಟನೆ ಹರಿಯಾಣದ (Haryana) ನರ್ನಾಲ್‌ನಲ್ಲಿ ಇಂದು ಬೆಳಗ್ಗೆ (ಏ.11) ನಡೆದಿದೆ.

    ಜಿ.ಎಲ್ ಪಬ್ಲಿಕ್ ಸ್ಕೂಲ್‌ಗೆ ಸೇರಿದ ಬಸ್ ಕನಿನಾದ ಉನ್ಹಾನಿ ಗ್ರಾಮದ ಬಳಿ ಶಾಲಾ ಬಸ್‌ ಪಲ್ಟಿಯಾಗಿದೆ (School bus Overturns). ಈದ್‌ ಉಲ್‌ ಫ್ರಿತ್‌ (ರಂಜಾನ್‌) ಹೊರತಾಗಿಯೂ ಶಾಲೆಯು ರಜೆ ಘೋಷಿಸಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಇಂದು ಎಲ್ಲೆಲ್ಲಿ ಮದ್ಯ ಸಿಗಲ್ಲ?- ದೇಶದಲ್ಲಿ ಎಣ್ಣೆ ಸಿಗದ ದಿನಗಳ ಸಂಪೂರ್ಣ ಪಟ್ಟಿ ಇಲ್ಲಿದೆ

    ಪ್ರಾಥಮಿಕ ತನಿಖೆಯ ನಂತರ ಚಾಲಕನ (Bus Driver) ನಿಯಂತ್ರಣ ತಪ್ಪಿ ಬಸ್ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವುದಾಗಿ ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಜಿಲ್ಲಾ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ. ಅಲ್ಲದೇ ಚಾಲಕ ಮದ್ಯ ಸೇವಿಸಿ ವಾಹನ ಚಲಾಯಿಸಿದ್ದಾನೆ ಎಂದು ಶಂಕಿಸಿದ್ದಾರೆ.

    ಸದ್ಯ ಗಾಯಗೊಂಡ ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಅಧಿಕಾರಕ್ಕೆ ಬಂದರೆ ಮೊಬೈಲ್‌ ಡೇಟಾಗೆ 500 ರೂ. ಫ್ರೀ – ಅಖಿಲೇಶ್‌ ಯಾದವ್‌ ಘೋಷಣೆ

    6 ವರ್ಷಗಳ ಹಿಂದೆಯೇ ಅಂದ್ರೆ 2018 ರಲ್ಲಿ ಬಸ್‌ನ ಫಿಟ್‌ನೆಸ್ ಪ್ರಮಾಣಪತ್ರದ (Vehicle Fitness Certificate) ಅವಧಿ ಮುಗಿದಿದೆ ಎಂದು ಅಧಿಕೃತ ದಾಖಲೆಗಳು ತೋರಿಸುತ್ತವೆ.

  • ನಿಂತಿದ್ದ ಕಸದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ಟೆಕ್ಕಿ ಸ್ಥಳದಲ್ಲೇ ಸಾವು!

    ನಿಂತಿದ್ದ ಕಸದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ಟೆಕ್ಕಿ ಸ್ಥಳದಲ್ಲೇ ಸಾವು!

    – ಹೊಸಕೋಟೆ ಹೊರವಲಯದಲ್ಲಿ ಸರಣಿ ಅಪಘಾತ – ಆಟೋ ಚಾಲಕನ ದುರ್ಮರಣ

    ಬೆಂಗಳೂರು: ನಿಂತಿದ್ದ ಕಸದ ಲಾರಿಗೆ ಹಿಂಬದಿಯಿಂದ ಬಂದು ಕಾರು ಡಿಕ್ಕಿ (Road Accident) ಹೊಡೆದ ಪರಿಣಾಮ ಸ್ಥಳದಲ್ಲೇ ಟೆಕ್ಕಿ ಸಾವನ್ನಪ್ಪಿರುವ ಘಟನೆ ವೈಟ್ ಫೀಲ್ಡ್ ಪೊಲೀಸ್ ಠಾಣಾ (Whitefield Police Station)  ವ್ಯಾಪ್ತಿಯ ಬಾಲಗತ್ತ್ ಜಂಕ್ಷನ್‌ನಲ್ಲಿ ನಡೆದಿದೆ.

    ಭಾನುವಾರ ರಾತ್ರಿ 10:30 ಸುಮಾರಿಗೆ ಘಟನೆ ನಡೆದಿದ್ದು, ಒಡಿಶಾ ಮೂಲದ ಸಾಗರ್ (23) ಎಂಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನುಳಿದ ನಾಲ್ವರು ಟೆಕ್ಕಿಗಳಿಗಳಿಗೆ (Techie) ಸಣ್ಣಪುಟ್ಟ ಗಾಯಗಳಾಗಿವೆ. ನಾಲ್ವರೂ ಸಹ ಒಡಿಶಾ ಮೂಲದವರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸಾಕ್ಷಿಗೆ ಸಂಗ್ರಹಿಸಿದ್ದ 10 ಕೆಜಿ ಗಾಂಜಾ, 9 ಕೆಜಿ ಭಾಂಗ್‌ ಇಲಿಗಳೇ ತಿಂದಿವೆ – ಕೋರ್ಟ್‌ಗೆ ವರದಿ ಸಲ್ಲಿಕೆ!

    ಸದ್ಯ ಅಪಘಾತದಲ್ಲಿ ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದು, ವೈಟ್‌ಫೀಲ್ಡ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಹೊಸಕೋಟೆ ಹೊರವಲಯದಲ್ಲಿ ಸರಣಿ ಅಪಘಾತ:
    ಹೊಸಕೋಟೆಯ ಹೊರವಲಯದಲ್ಲಿ ಕಾರು ಚಾಲಕನ ಅಜಾಗ್ರಕತೆ ಹಾಗೂ ಬೇಜವಾಬ್ದಾರಿ ಚಾಲನೆಯಿಂದ ಸರಣಿ ಅಪಘಾತ ಸಂಭವಿಸಿದೆ. ಎರಡು ಕಾರು ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆಟೋ ಚಾಲಕ ಕಲಂದರ್ (36) ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: 9 ಸಾವಿರ ಲಂಚಕ್ಕೆ ಬೇಡಿಕೆ – ಲೋಕಾಯುಕ್ತಕ್ಕೆ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್

    ಹೊಸಕೋಟೆ ಹಾಗೂ ಕಾಡುಗೋಡಿ ರಸ್ತೆಯ ಗೊರವಗೆರೆ ಗೇಟ್ ಬಳಿ ಘಟನೆ ನಡೆದಿದ್ದು, ಆಟೋದಲ್ಲಿ ಪ್ರಯಾಣಿಸುತ್ತಿದ್ದ ಇತರ ಪ್ರಯಾಣಿಕರು ಹಾಗೂ ಮಹಿಳೆಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಹೊಸಕೋಟೆ ನಗರದ ಸಿಲಿಕಾನ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹೊಸಕೋಟೆ ಸಂಚಾರಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ, ಬಳಿಕ ಪ್ರಕರಣ ದಾಖಲಿಸಿದ್ದಾರೆ.

  • KSRTC ನೌಕರರಿಗೆ ಗುಡ್‌ನ್ಯೂಸ್ – ಡಬಲ್ ಡ್ಯೂಟಿಯಿಂದ ಮುಕ್ತಿ

    KSRTC ನೌಕರರಿಗೆ ಗುಡ್‌ನ್ಯೂಸ್ – ಡಬಲ್ ಡ್ಯೂಟಿಯಿಂದ ಮುಕ್ತಿ

    – ಇನ್ಮುಂದೆ 8 ಗಂಟೆಗಿಂತ ಹೆಚ್ಚು ಸಮಯ ಕರ್ತವ್ಯ ಮಾಡಿಸುವಂತಿಲ್ಲ
    – ವಾರದಲ್ಲಿ 48 ಗಂಟೆ ಮೀರುವಂತಿಲ್ಲ

    ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ತನ್ನ ನೌಕರರಿಗೆ ಗುಡ್‌ನ್ಯೂಸ್ ಕೊಟ್ಟಿದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ತಪ್ಪಿಸುವ ಉದ್ದೇಶದಿಂದ ನೌಕರರಿಗೆ ಡಬಲ್ ಡ್ಯೂಟಿಯಿಂದ ಮುಕ್ತಿ ನೀಡಿದೆ.

    ಇಂದಿನಿಂದಲೇ (ಮಾ.28) ರಾತ್ರಿ ಮತ್ತು ದೂರ ಪ್ರಯಾಣದಲ್ಲಿ ವಿಶ್ರಾಂತಿ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೇ ಕೆಲಸದ ಅವಧಿ ದಿನದಲ್ಲಿ 8 ಗಂಟೆ, ವಾರದಲ್ಲಿ 48 ಗಂಟೆ ಮೀರದಂತೆ ಸೂಚಿಸಿದೆ. ಇದನ್ನೂ ಓದಿ: ನನ್ನಲ್ಲಿ ಸಾಕಷ್ಟು ಹಣವಿಲ್ಲ.. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ: ಕೇಂದ್ರ ಹಣಕಾಸು ಸಚಿವೆ

    ಇತ್ತೀಚಿನ ದಿನಗಳಲ್ಲಿ ಬಸ್‌ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅಪಘಾತಕ್ಕೆ ಕಾರಣ ತಿಳಿಯಲು ಕೆಎಸ್‌ಆರ್‌ಟಿಸಿ ಪ್ರತ್ಯೇಕ ಸಮಿತಿ ಮೂಲಕ ತನಿಖೆ ನಡೆಸಿತ್ತು. ಇದಕ್ಕೆ ಕಾರಣಗಳನ್ನು ಹುಡುಕಿದಾಗ ಡಬಲ್ ಡ್ಯೂಟಿ ಮತ್ತು ರಾತ್ರಿ ವೇಳೆ ವಿಶ್ರಾಂತಿ ನೀಡದಿರುವುದೇ ಕಾರಣ ಅನ್ನೋದು ತಿಳಿದುಬಂದಿತು. ಸರಿಯಾಗಿ ನಿದ್ರೆ ಇಲ್ಲದೇ, ಬಸ್ ಚಾಲನೆ ಮಾಡಲು ಸಾಧ್ಯವಾಗದೇ, ಅಪಘಾತಗಳು ಸಂಭವಿಸುತ್ತಿವೆ ಎಂದು ಸಮಿತಿ ನೀಡಿದ ವರದಿಯಲ್ಲಿ ತಿಳಿದುಬಂದಿತು ಎಂದು ಸಾರಿಗೆ ನಿಗಮ ತಿಳಿಸಿದೆ. ಅಪಘಾತಗಳನ್ನು ತಡೆಗಟ್ಟುವ ಸಲುವಾಗಿ ತನ್ನ ನೌಕರರಿಗೆ ಡಬಲ್ ಡ್ಯೂಟಿಯಿಂದ ಮುಕ್ತಿ ನೀಡಿದೆ ಎಂದು ಹೇಳಿದೆ. ಇದನ್ನೂ ಓದಿ: ‘ಲೋಕ’ಸಮರಕ್ಕೆ ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಬಿಕ್ಕಟ್ಟು – ಸಿಎಂ, ಡಿಸಿಎಂ ನೇತೃತ್ವದಲ್ಲಿ ಸಂಧಾನ ಸಭೆ

    ಕೆಎಸ್‌ಆರ್‌ಟಿಸಿ ಆದೇಶದಲ್ಲಿ ಏನಿದೆ?
    * ಕೆಎಸ್‌ಆರ್‌ಟಿಸಿ ಡ್ರೈವರ್‌ಗಳಿಗೆ ವಿಶ್ರಾಂತಿ ಕಡ್ಡಾಯ
    * ಇಂದಿನಿಂದ ಡಬಲ್ ಡ್ಯೂಟಿ ಮಾಡಿಸುವಂತಿಲ್ಲ
    * ದಿನದಲ್ಲಿ 8 ಗಂಟೆಗಿಂತ ಹೆಚ್ಚು ಕರ್ತವ್ಯ ಮಾಡಿಸುವಂತಿಲ್ಲ
    * 8 ಗಂಟೆ ಮತ್ತು ರಾತ್ರಿ ವೇಳೆಯಲ್ಲಿ ಹೆಚ್ಚು ಡ್ಯೂಟಿ ಮಾಡಿದರೆ, ಅಂತಹ ಡ್ರೈವರ್‌ಗಳಿಗೆ ನಿದ್ರೆ ಮತ್ತು ವಿಶ್ರಾಂತಿ ಮಾಡಲು 4-5 ಗಂಟೆ ಅವಕಾಶ ನೀಡಬೇಕು.
    * ಇದರಿಂದ ಕೆಎಸ್‌ಆರ್‌ಟಿಸಿ ಬಸ್‌ಗಳ ಅಪಘಾತಗಳು ತಪ್ಪುತ್ತದೆ.

  • ನಡು ರಸ್ತೆಯಲ್ಲೇ ಹೊತ್ತಿ ಉರಿದ ಸ್ಪಿರಿಟ್ ಟ್ಯಾಂಕರ್ – ತಪ್ಪಿದ ಭಾರೀ ದುರಂತ

    ನಡು ರಸ್ತೆಯಲ್ಲೇ ಹೊತ್ತಿ ಉರಿದ ಸ್ಪಿರಿಟ್ ಟ್ಯಾಂಕರ್ – ತಪ್ಪಿದ ಭಾರೀ ದುರಂತ

    ವಿಜಯಪುರ: ನಡು ರಸ್ತೆಯಲ್ಲೇ ಉರುಳಿ ಬಿದ್ದ ಸ್ಪಿರಿಟ್ ತುಂಬಿದ ಟ್ಯಾಂಕರ್ ಧಗ ಧಗನೆ ಹೊತ್ತಿ ಉರಿದಿರುವ (Spirit Tanker Fire) ಘಟನೆ ವಿಜಯಪುರದಲ್ಲಿ ನಡೆದಿದ್ದು, ಭಾರೀ ಅನಾಹುತ ತಪ್ಪಿದೆ.

    ವಿಜಯಪುರ (Vijaypura) ಜಿಲ್ಲೆಯ ಸಿಂದಗಿ ಪಟ್ಟಣದ ಹೊರಭಾಗದ ಕಲಬುರಗಿ ಬೈ ಪಾಸ್‌ ಬಳಿ ಚಾಲಕನ ನಿಯಂತ್ರಣ ತಪ್ಪಿದ್ದರಿಂದಾಗಿ ಟ್ಯಾಂಕರ್‌ ಉರುಳಿಬಿದ್ದಿದೆ. ರಸ್ತೆ ಪಕ್ಕದಲ್ಲಿ ಉರುಳಿ ಬೀಳುತ್ತಲೇ ಭಾರೀ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಇದನ್ನೂ ಓದಿ: ವಾಣಿಜ್ಯೋದ್ಯಮಿ ಪಲ್ಲವಿ ಡೆಂಪೊಗೆ ಟಿಕೆಟ್‌ – ಗೋವಾ ಇತಿಹಾಸದಲ್ಲೇ ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಮೊದಲ ಮಹಿಳೆ

    ಟ್ಯಾಂಕರ್ ಉರುಳಿ ಬೀಳುತ್ತಲೇ ಚಾಲಕ ಕ್ಲೀನರ್ ಎಸ್ಕೇಪ್ ಆಗಿದ್ದಾರೆ. ಬೆಂಕಿಯ ಕೆನ್ನಾಲಿಗೆ ನಂದಿಸಲು ಅಗ್ನಿ ಶಾಮಕ ದಳದ ಸಿಬ್ಬಂದಿಯ ಹರಸಾಹಸ ಪಟ್ಟಿದ್ದಾರೆ. ಸದ್ಯ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಘಟನೆ ಬಳಿಕ ರಸ್ತೆಯಲ್ಲೇ ನಿಂತಿದ್ದ ಸ್ಥಳೀಯರು ಈ ದೃಶ್ಯವನ್ನು ಮೊಬೈಲ್‌ನಲ್ಲಿ ವೀಡಿಯೋ ಮಾಡಿದ್ದಾರೆ.

    ಸಿಂದಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ: ‘ಕರ್ನಾಟಕ Love’s ಕೇರಳ’ ವೆಬ್ ಸಿರೀಸ್: ಬಸ್ ಮೆಕಾನಿಕಲ್ ಹೀರೋ

  • ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ – ಐದು ಮಂದಿ ಸಜೀವ ದಹನ

    ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ – ಐದು ಮಂದಿ ಸಜೀವ ದಹನ

    ಲಕ್ನೋ: ಉತ್ತರ ಪ್ರದೇಶದ ಮಥುರಾದ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ (Yamuna Expressway) ಕಾರ್-ಬಸ್ ನಡುವೆ ಡಿಕ್ಕಿಯಾಗಿ ಕನಿಷ್ಠ ಐವರು ಸಜೀವ ದಹನ ದಹನವಾಗಿರುವ ಘಟನೆ ನಡೆದಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

    ಮಥುರಾದ ಮಹಾವನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ (Divider) ಡಿಕ್ಕಿ ಹೊಡೆದ ಕಾರು, ನಂತರ ಅದೇ ಮಾರ್ಗವಾಗಿ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಕಾರಿನಲ್ಲಿದ್ದ ಐವರು ಸುಟ್ಟು ಕರಕಲಾಗಿದ್ದಾರೆ. ಆದ್ರೆ ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಅಪಘಾತ (Accident) ಸಂಭವಿಸುತ್ತಿದ್ದಂತೆ ಬೆಂಕಿ ಹೊತ್ತಿಕೊಂಡಿದ್ದು, ಎರಡೂ ವಾಹನಗಳು ಅಗ್ನಿಗೆ ಆಹುತಿಯಾಗಿವೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದೆ. ಇದನ್ನೂ ಓದಿ: ಪಾಕಿಸ್ತಾನಿಯರು ಭಾರತದ ಅತಿದೊಡ್ಡ ಆಸ್ತಿ – ಕಾಂಗ್ರೆಸ್‌ ಮಾಜಿ ಸಚಿವ

    ಅಪಘಾತಕ್ಕೀಡಾದ ಬಸ್ ಆಗ್ರಾದಿಂದ ನೋಯ್ಡಾಗೆ ತೆರಳುತ್ತಿತ್ತು. ಇದನ್ನೂ ಓದಿ: ಆಂಧ್ರ ಸಿಎಂ ಜಗನ್‌ ತಮ್ಮ ಚಿಕ್ಕಪ್ಪನನ್ನೇ ಹತ್ಯೆಗೈದಿದ್ದಾರೆ – ಎನ್.ಚಂದ್ರಬಾಬು ನಾಯ್ಡು ಪುತ್ರ ಗಂಭೀರ ಆರೋಪ

  • ಹೊಸಕೋಟೆ ಸಮೀಪ ಸರಣಿ ಅಪಘಾತ – ಸ್ಥಳದಲ್ಲೇ ಯುವತಿ ದಾರುಣ ಸಾವು!

    ಹೊಸಕೋಟೆ ಸಮೀಪ ಸರಣಿ ಅಪಘಾತ – ಸ್ಥಳದಲ್ಲೇ ಯುವತಿ ದಾರುಣ ಸಾವು!

    ಬೆಂಗಳೂರು: ಭೀಕರ ಸರಣಿ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ದಾರುಣ ಸಾವಿಗೀಡಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸಮೀಪ ನಡೆದಿದೆ.

    ರಾಷ್ಟ್ರೀಯ ಹೆದ್ದಾರಿ-75ರ ಹೊಸಕೋಟೆ ಪೊಲೀಸ್ ಠಾಣೆಯ ಕೋರ್ಟ್ ಸರ್ಕಲ್ ಬಳಿ ಕ್ಯಾಂಟರ್, ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಈ ವೇಳೆ ಕ್ಯಾಂಟರ್ ಡಿಕ್ಕಿಯಾಗಿ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಮೃತ ಯುವತಿಯನ್ನು ಬನ್ನೇರುಘಟ್ಟ ಮೂಲದ ಸುಧಾ (20) ಎಂದು ಗುರುತಿಸಲಾಗಿದೆ.

    ಕೋರ್ಟ್ ವೃತ್ತದ ಬಳಿ ತಾಯಿಮಗಳಿಬ್ಬರು ರಸ್ತೆ ದಾಟುತ್ತಿದ್ದ ವೇಳೆ ಡಿಕ್ಕಿ ಹೊಡೆದ ಕ್ಯಾಂಟರ್ ಬಳಿಕ ಯುವತಿ ಮೇಲೆಯೇ ಹರಿದಿದೆ. ನಂತರ ಕೆಎಸ್‌ಆರ್‌ಟಿಸಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿಯೊಡೆದಿದೆ. ಸದ್ಯ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

    ಕ್ಯಾಂಟರ್ ಚಾಲಕ ಕೋಲ್ಕತ್ತಾ ಮೂಲದ ಷರೀಫ್‌ ಉಲ್ಲಾ (30), ಮುಳಬಾಗಿಲಿನ ಬೈಕ್ ಸವಾರ ನಜೀರ್ ಖಾನ್ (65) ಗಂಭೀರವಾಗಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಹುಳುಕುಗಳು ಶ್ವೇತಪತ್ರದಲ್ಲಿ ಬಯಲು; ಯುಪಿಎ ಅವಧಿ ಕಿಕ್‌ಬ್ಯಾಕ್, ಹಗರಣಗಳ ಕಾಲ: ಅಶ್ವಥ್ ನಾರಾಯಣ್

    ಯುವತಿಯ ಮೃತದೇಹವನ್ನು ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಹೊಸಕೋಟೆ ಸಿಲಿಕಾನ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹೊಸಕೋಟೆ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್ ತಯಾರಿಸಲು ಐಸಿಎಂಆರ್ ಒಪ್ಪಿಗೆ ಸೂಚಿಸಿದೆ: ದಿನೇಶ್ ಗುಂಡೂರಾವ್

  • ಶಾಲಾ ಬಸ್-ಟ್ರ್ಯಾಕ್ಟರ್‌ ನಡುವೆ ಭೀಕರ ಅಪಘಾತ – ನಾಲ್ವರು ವಿದ್ಯಾರ್ಥಿಗಳ ದುರ್ಮರಣ

    ಶಾಲಾ ಬಸ್-ಟ್ರ್ಯಾಕ್ಟರ್‌ ನಡುವೆ ಭೀಕರ ಅಪಘಾತ – ನಾಲ್ವರು ವಿದ್ಯಾರ್ಥಿಗಳ ದುರ್ಮರಣ

    ಬಾಗಲಕೋಟೆ: ಶಾಲಾ ಬಸ್ ಹಾಗೂ ಟ್ಯಾಕ್ಟರ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ನಾಲ್ವರು ವಿದ್ಯಾರ್ಥಿಗಳು ದುರ್ಮರಣಕ್ಕೀಡಾಗಿರುವ ಘಟನೆ ಬಾಗಲಕೋಟೆಯ (Bagalkot) ಜಿಲ್ಲೆ ಜಮಖಂಡಿ ತಾಲ್ಲೂಕಿನ ಅಲಗೂರು ಗ್ರಾಮದಲ್ಲಿ ನಡೆದಿದೆ.

    ತಡರಾತ್ರಿ ನಡೆದ ಘಟನೆಯಲ್ಲಿ ಓರ್ವ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳು (Students) ಸಾವನ್ನಪ್ಪಿದ್ದು, 8ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಸಾಗರ ಕಡಕೋಳ (17), ಶ್ವೇತಾ (13), ಗೋವಿಂದ(13), ಬಸವರಾಜ (17) ಮೃತ ವಿದ್ಯಾರ್ಥಿಗಳು. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯಗೆ ಹಿಂದೂಗಳ ನಂಬಿಕೆ ಮೇಲೆ ಯಾಕಿಷ್ಟು ತಾತ್ಸಾರ? – ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಕ್ರೋಶ

    ಮೃತರು ವರ್ಧಮಾನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಾಗಿದ್ದು, ಇಬ್ಬರು ಪಿಯುಸಿ, ಮತ್ತಿಬ್ಬರು 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ.

    ಭಾನುವಾರ ಸ್ನೇಹಿತರೊಟ್ಟಿಗೆ ಕಾರ್ಯಕ್ರಮ ಮುಗಿಸಿಕೊಂಡು ಕವಟಗಿ ಗ್ರಾಮದ ಕಡೆಗೆ ಸ್ಕೂಲ್‌ಬಸ್ ಹೊರಟಿತ್ತು. ರಾತ್ರಿ 12 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಸದ್ಯ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

    ಇನ್ನೋವಾ ಕಾರ್ ಟೈಯರ್ ಬ್ಲಾಸ್ಟ್: ಅತೀ ವೇಗವಾಗಿ ಬರುತ್ತಿದ್ದ ಇನ್ನೋವಾ ಕಾರಿನ ಟಯರ್ ಬ್ಲಾಸ್ಟ್ ಆಗಿದ್ದು, ನೋಡನೋಡ್ತಿದ್ದಂತೆ ಆಟೋಗೆ ಡಿಕ್ಕಿಯೊಡೆದಿದೆ. ಇನ್ನೋವಾ ಕಾರ್ ಗುದ್ದಿದ ರಭಸಕ್ಕೆ ಮನೆಯ ಕಾಂಪೌಂಡ್ ಉಡೀಸ್ ಆಗಿರೋ ಘಟನೆ ಬೆಂಗಳೂರಿನ ಲಾಲ್‌ಬಾಗ್ ರಸ್ತೆಯಲ್ಲಿ ನಡೆದಿದೆ. ಇದನ್ನೂ ಓದಿ: ರಾಷ್ಟ್ರಪತಿಗೆ ತುಚ್ಛವಾಗಿ ಸಂಬೋಧಿಸಿದ ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ವಜಾ ಮಾಡಿ: ಹೆಚ್‍ಡಿಕೆ ಆಗ್ರಹ

    ಅಪಘಾತದ ಭಯನಕ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ. ಖಾಲಿ ರಸ್ತೆಯಲ್ಲಿ ಅತಿ ವೇಗವಾಗಿ ಲಾಲ್‌ಬಾಗ್ ರಸ್ತೆ ಮೂಲಕ ಜಯ ನಗರದ ಕಡೆ ಹೋಗುತ್ತಿದ್ದ ಕಾರ್‌ನ ಟಯರ್ ಇದ್ದಕ್ಕಿದ್ದಂತೆ ಬ್ಲಾಸ್ಟ್ ಆಗಿದೆ. ಬ್ಲಾಸ್ಟ್ ಆದ ಕ್ಷಣದಲ್ಲೇ ಯಮ ಸ್ವರೂಪಿಯಂತೆ ಕಾರು ನುಗ್ಗಿದ್ದು, ಕೂದಲೆಳೆ ಅಂತರಲ್ಲಿ ವೃದ್ಧ ಪಾರಾಗಿದ್ದಾರೆ. ಘಟನೆಯಲ್ಲಿ ಕಾಂಪೌಂಡ್ ನೆಲಕ್ಕುರುಳಿದ್ದು, ಆಟೋ ಹಾಗೂ ಕಾರು ಜಖಂಗೊಂಡಿದೆ. ಘಟನೆ ಸಂಬಂಧ ವಿವಿಪುರಂ ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಇದನ್ನೂ ಓದಿ: ಹೆಚ್‍ಡಿಕೆ ಸಹವಾಸ ಮಾಡಿದವರು ಉದ್ಧಾರ ಆದ ಇತಿಹಾಸವಿಲ್ಲ: ವೀರಪ್ಪ ಮೊಯ್ಲಿ