ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲ್ಲೂಕಿನ ಅನಗವಾಡಿ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ (Road Accident) ಓರ್ವ ಮಹಿಳೆ ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಹೊನಗನಳ್ಳಿ ಮೂಲದ ನಾಲ್ವರು ಸವದತ್ತಿ ಯಲ್ಲಮ್ಮ ದರ್ಶನಕ್ಕೆ ಹೋಗಿ ಬರುತ್ತಿದ್ದ ವೇಳೆ ಅನಗವಾಡಿ ಗ್ರಾಮದ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ (National Highway) ಘಟನೆ ನಡೆದಿದೆ.
ಚಿಕ್ಕಮಗಳೂರು: ದಟ್ಟ ಮಂಜು ಕವಿದ ವಾತಾವರಣದ ಹಿನ್ನೆಲೆ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಲಾರಿ (Lorry) ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯಲ್ಲಿ ನಡೆದಿದೆ.
ಭದ್ರಾವತಿಯಿಂದ ಭರ್ತಿ ಎಲ್‌ಪಿಜಿ ಸಿಲಿಂಡರ್‌ಗಳನ್ನ (LPG Cylinder) ಹೊತ್ತ ಲಾರಿ ಕಳಸದಿಂದ ಬರುತ್ತಿತ್ತು. ಬೆಳಗ್ಗಿನ ಜಾವ 6:30ರ ಸುಮಾರಿಗೆ ದಟ್ಟ ಮಂಜು ಕವಿದಿದ್ದ ಹಿನ್ನೆಲೆಯಲ್ಲಿ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಲಾರಿ ಪಲ್ಟಿಯಾಗಿದೆ.
ಅಪಘಾತದಲ್ಲಿ ಲಾರಿ ಚಾಲಕ ಆನಂದ್‌ಗೆ ಗಂಭೀರ ಗಾಯವಾಗಿ ಕಳಸ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿಯಲ್ಲಿ ನೂರಕ್ಕೂ ಹೆಚ್ಚು ಭರ್ತಿ ಸಿಲಿಂಡರ್‌ಗಳು ಇದ್ದವು. ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗುತ್ತಿದ್ದಂತೆ ಸಿಲಿಂಡರ್‌ಗಳು ಹೊರಗಡೆ ಚೆಲ್ಲಾಪಿಲ್ಲಿಯಾಗಿದ್ದವು. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.
ಮಂಡ್ಯ: ಇಲ್ಲಿನ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ (Bengaluru Mysuru ExpressWay) ಭೀಕರ ಅಪಘಾತದಲ್ಲಿ ಇಬ್ಬರು ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮದ್ದೂರು (Maddur) ಪಟ್ಟಣದ ಶಿಂಷಾ ನದಿ ಬಳಿ ಬೆಂ-ಮೈ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದೆ. ಮೃತರನ್ನು ಶಂಕರ್, ಮಹದೇವು ಎಂದು ಗುರುತಿಸಲಾಗಿದೆ. ಮತ್ತೋರ್ವ ಕಿಶೋರ್ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು, ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ರಾಮಮಂದಿರ ನಿರ್ಮಾಣವನ್ನು 74% ಮುಸ್ಲಿಮರು ಸಂಭ್ರಮಿಸ್ತಾರೆ: ಮುಸ್ಲಿಂ ರಾಷ್ಟ್ರೀಯ ಮಂಚ್
ಮೃತರು ಬೆಂಗಳೂರಿನ ಐಸಿಐಸಿಐ ಬ್ಯಾಂಕ್ ನಲ್ಲಿ (ICICI Bank) ಕೆಲಸ ನಿರ್ವಹಿಸುತ್ತಿದ್ದರು. ಮೂವರು ಕೆಲಸ ಮುಗಿಸಿ ಮೈಸೂರಿನಿಂದ ಬೆಂಗಳೂರಿಗೆ ತೆರಳಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಶಿಂಷಾ ನದಿ ಸೇತುವೆ ಮೇಲೆಯೇ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ, ಬಳಿಕ ಕ್ಯಾಮೆರಾ ಕಂಬಕ್ಕೂ ಡಿಕ್ಕಿ ಹೊಡೆದು, ಡಿವೈಡರ್ ಪಕ್ಕದ ರಸ್ತೆಗೆ ಮಗುಚಿಕೊಂಡಿದೆ.
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಶಂಕರ್ ಹಾಗೂ ಮಹದೇವು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡಿರುವ ಕಿಶೋರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಇದನ್ನೂ ಓದಿ: ಆಹ್ವಾನ ಬಂದಿದ್ದು, ಜ.22 ರ ಬಳಿಕ ರಾಮಮಂದಿರಕ್ಕೆ ಭೇಟಿ ನೀಡುತ್ತೇನೆ: ಅಖಿಲೇಶ್ ಯಾದವ್
ಸ್ಥಳಕ್ಕೆ ಮದ್ದೂರು ಸಂಚಾರ ಪೊಲೀಸರು (Maddur Traffic Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಮದ್ದೂರು ಸಂಚಾರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್ ಸವಾರರು ದುಬಾರಿ ಬೆಲೆಯ ಬಿಎಂಡಬ್ಲ್ಯೂ ಆರ್‌ಆರ್ 1000 ಸಿಸಿ (BMW RR 1000CC Bike) ಚಲಾಯಿಸುತ್ತಿದ್ದರು. ವ್ಹೀಲಿಂಗ್ ಮಾಡುತ್ತಾ ಅತಿ ವೇಗವಾಗಿ ಬಂದು ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದ್ದರು. ಡಿಕ್ಕಿಯ ಪರಿಣಾಮ ಬೈಕ್ ಚಲಾಯಿಸುತ್ತಿದ್ದ ಶೇಕ್ ನಾಸಿರ್ ಎಂಬ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ.
ಬೈಕ್ ಸವಾರರು ಹೆಲ್ಮೆಟ್ ಕೂಡ ಧರಿಸಿರಲಿಲ್ಲ. ಕುತ್ತಿಗೆಗೆ ತೀವ್ರ ಏಟು ಬಿದ್ದ ಕಾರಣ ಸ್ಥಳದಲ್ಲೇ ನಾಸಿರ್ ಸಾವಿಗೀಡಾಗಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಸವಾರನನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ವಿಲ್ಸನ್ ಗಾರ್ಡನ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ರಿಲೀಫ್ – ಲಂಚ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
ಕಾರವಾರ: ಕಾರು ಮತ್ತು ಸರ್ಕಾರಿ ಬಸ್ಸಿನ ನಡುವೆ ನಡೆದ ಭೀಕರ ಅಪಘಾತದಲ್ಲಿ (Bus Car Accident) ಐವರು ಮೃತಪಟ್ಟಿರುವ ಘಟನೆ ಶುಕ್ರವಾರ (ಇಂದು) ಉತ್ತರ ಕನ್ನಡ ಜಿಲ್ಲೆಯ ಶಿರಸಿ (Shirsi) ತಾಲೂಕಿನ ಬಂಡಲದಲ್ಲಿ ನಡೆದಿದೆ.
ಶಿರಸಿಯಿಂದ ಕುಮಟಾ ಕಡೆಗೆ ಹೋಗುತ್ತಿದ್ದ ಸರ್ಕಾರಿ ಬಸ್ಸು ಹಾಗೂ ಕುಮಟಾ ಕಡೆಯಿಂದ ಶಿರಸಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ.
ಬೆಂಗಳೂರು: ಅಗ್ನಿ ಸಾಕ್ಷಿಯಾಗಿ ಕೈ ಹಿಡಿದು ಜೀವನದುದ್ದಕ್ಕೂ ಜೊತೆ ಜೊತೆಯಾಗಿ ಹೆಜ್ಜೆ ಹಾಕ್ತೀವಿ ಅಂತಾ ಸಪ್ತಪದಿ ತುಳಿದಿದ್ದ ದಂಪತಿಗಳು ಸಾವಿನಲ್ಲೂ ಜೊತೆಯಾಗಿದ್ದಾರೆ. ಗೃಹ ಪ್ರವೇಶ ಮುಗಿಸಿ ವಾಪಸ್ ಮನೆಗೆ ಬರುತ್ತಿದ್ದ ದಂಪತಿ ಭೀಕರ ಅಪಘಾತಕ್ಕೆ (Road Accident) ಬಲಿಯಾಗಿದ್ದಾರೆ.
ಕಳೆದ 23 ವರ್ಷಗಳ ವೈವಾಹಿಕ ಜೀವನದ ಕಷ್ಟ ಸುಖಗಳಲ್ಲಿ ಭಾಗಿಯಾಗಿ ಇದೀಗ ಸಾವಲ್ಲೂ ಜೊತೆಯಾಗಿದ್ದಾರೆ. ಹೀಗೆ ರಸ್ತೆಯ ಮೇಲೆ ರಕ್ತದ ಮಡುವಿನಲ್ಲಿ ಬಿದ್ದವರು ನಿರ್ಮಲಾ ಹಾಗೂ ಬೈಯಣ್ಣ. ಗುರುವಾರ ಹಾರಗದ್ದೆಯಲ್ಲಿ ಸಂಬಂಧಿಕರೊಬ್ಬರ ಗೃಹ ಪ್ರವೇಶ ಮುಗಿಸಿ ಹಿಂತಿರುಗುವಾಗ ಮೂರು ಗಂಟೆ ಸುಮಾರಿಗೆ ನೈಸ್ ರಸ್ತೆಯ (NiceRoad) ವಜ್ರಮುನೇಶ್ವರ ಅಂಡರ್ ಪಾಸ್ ಬಳಿ ಇವರ ಬೈಕ್‌ಗೆ ಹಿಂದಿನಿಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ಬದುಕೋ ಸಾಧ್ಯತೆ ಮೊದಲೇ ತೀರಾ ಕಡಿಮೆಯಿತ್ತು – ಹಾಸನ ಮಗು ಸಾವಿನ ಪ್ರಕರಣಕ್ಕೆ ನಿಮ್ಹಾನ್ಸ್ ಸ್ಪಷ್ಟನೆ
ಅತಿವೇಗವಾಗಿ ಕ್ಯಾಂಟರ್ ಚಲಾಯಿಸಿಕೊಂಡು ಬಂದು ಹಿಂಬದಿಯಿಂದ ಬೈಕ್‌ಗೆ ಡಿಕ್ಕಿ ಹೊಡೆದಿದ್ದ ಚಾಲಕ. ಬೈಕ್‌ನಲ್ಲಿದ್ದ ಬೈಯಣ್ಣ ದಂಪತಿ ಹಾರಿ ನೆಲಕ್ಕೆ ಅಪ್ಪಳಿಸಿದ್ರು. ಬೈಯಣ್ಣಗೆ ತಲೆಗೆ ಪೆಟ್ಟು ಬಿದ್ದು ರಕ್ತ ಸ್ರಾವವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಪತ್ನಿಯೂ ಕೂಡ ಬೋರಲಾಗಿ ಬಿದ್ದು ಪ್ರಾಣ ಬಿಟ್ಟರು. ವಿಜಯನಗರದ ಹೊಸಹಳ್ಳಿ ಮೂಲದ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ (ಒಂದು ಗಂಡು, ಒಂದು ಹೆಣ್ಣು). ಇಬ್ಬರೂ ಎಂಜಿನಿಯರಿಂಗ್ ಪದವಿ ಮುಗಿಸಿದ್ದಾರೆ. ಈ ಹಿಂದೆ ಕೂಡ ಎರಡು ಬಾರಿ ಬೈಯ್ಯಣ್ಣ ಅಪಘಾತಕ್ಕೊಳಗಾಗಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಮಕ್ಕಳ ಮಾರಾಟ ಪ್ರಕರಣ- ತರಕಾರಿ ಮಾರುತ್ತಲೇ ಡೀಲ್ ಮಾಡುತ್ತಿದ್ದ ಮಹಾಲಕ್ಷ್ಮಿ
ಬೈಯ್ಯಣ್ಣ ಹಿಂದೆ ಎರಡು ಬಾರಿಯೂ ಗಂಭೀರ ಗಾಯವಾಗಿ ಪ್ರಾಣಾಪಾಯದಿಂದ ಪಾರಾಗಿದ್ದರು. ಒಮ್ಮೆ ಕನಕಪುರ ರಸ್ತೆ, ಮತ್ತೊಮ್ಮೆ ವಿಜಯನಗರದಲ್ಲಿ ಅಪಘಾತವಾಗಿತ್ತು. 3ನೇ ಬಾರಿ ಆಕ್ಸಿಡೆಂಟ್ ಆಗಿ ಪತ್ನಿಯೊಂದಿಗೆ ಕೊನೆಯುಸಿರೆಳೆದಿದ್ದಾರೆ.
ಆಕ್ಸಿಡೆಂಟ್ ಆಗ್ತಿದ್ದಂತೆ ಕ್ಯಾಂಟರ್ ಚಾಲಕ, ಕ್ಯಾಂಟರ್ ಬಿಟ್ಟು ಪರಾರಿಯಾಗಿದ್ದಾನೆ. ಈ ಸಂಬಂಧ ತಲಘಟ್ಟಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬಿಎಂಟಿಸಿ (BMTC) ಬಸ್ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಬಗ್ಗೆ ಎಚ್ಚೆತ್ತುಕೊಂಡ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿದ್ದಾರೆ. ಬಸ್ ಅಪಘಾತ (Bus Accident) ತಡೆಯಲು ಬಿಎಂಟಿಸಿ ಹೊಸ ಟೆಕ್ನಾಲಜಿಯ ಮೊರೆ ಹೋಗಿದೆ.
ಅತ್ಯಾಧುನಿಕ ಟೆಕ್ನಾಲಜಿ ಒಳಗೊಂಡಿರುವ ಈ ಡಿವೈಸ್ ಮುಂಭಾಗದಲ್ಲಿ ಬರುವ ವಾಹನಗಳ ಅಲರ್ಟ್ ಮಾಡುವ ಜೊತೆಗೆ, ಡ್ರೈವರ್ ಅನ್ನು ಸಹ ಮಾನಿಟರ್ ಮಾಡುತ್ತೆ. ಡ್ರೈವರ್ ವಿಭಾಗದಲ್ಲಿ ಅಳವಡಿಸಲಾಗಿರುವ ಐ ವಾಚ್ ಇತರೇ ವಾಹನಗಳ ನಡುವೆ ಅಂತರ ಎಷ್ಟಿದೆ ಎಂಬುದನ್ನ ರೆಡ್ ಸಿಗ್ನಲ್ ಮೂಲಕ ಅಳವಡಿಕೆ ಮಾಡಿದ್ರೆ, ಡ್ರೈವರ್ ಮಾನಿಟರಿಂಗ್ ಸಿಸ್ಟಮ್ ಚಾಲಕ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದರೆ ಅಥವಾ ನಿದ್ರೆಗೆ ಜಾರಿದರೆ ತಕ್ಷಣವೇ ಸಿಗ್ನಲ್ ಮೂಲಕ ಎಚ್ಚರಿಕೆ ನೀಡುತ್ತದೆ.
ಇತ್ತೀಚೆಗೆ ಮಾಲ್, ಮೆಟ್ರೋದಲ್ಲಿ ಮಹಿಳೆಯರ ಮೇಲೆ ನಡೆದ ಲೈಂಗಿಕ ಕಿರುಕುಳದಿಂದ ಎಚ್ಚೆತ್ತ ಬಿಎಂಟಿಸಿ, ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಒತ್ತು ನೀಡಿ ಅವರು ಮಹಿಳೆಯರು ಸೇಫ್ ಆಗಿ ಪ್ರಯಾಣಿಸಲು ಪ್ಯಾನಿಕ್ ಬಟನ್ ಹಾಗೂ 5 ಸಾವಿರ ಬಸ್‌ಗಳಲ್ಲಿ ಸಿಸಿಟಿವಿ ಅಳವಡಿಸಿದೆ. ಇದನ್ನೂ ಓದಿ: ಚೀನಾ ನಿಗೂಢ ವೈರಸ್ ಭೀತಿ – ರಾಜ್ಯದಲ್ಲಿ ನ್ಯೂಮೋನಿಯಾ ನಿಯಂತ್ರಣಕ್ಕೆ ಕ್ರಮ
ಬೆಳಗಾವಿ: ನಗರ ಮತ್ತು ಗ್ರಾಮೀಣ ಭಾಗದ ಪರಿಶೀಲನೆ ಮಾಡಿದ್ದೇನೆ. ಅನೇಕ ವಿಚಾರಗಳು ಗಮನಕ್ಕೆ ಬಂದಿವೆ. ಅಪರಾಧಗಳ (Crime) ಸಂಖ್ಯೆ ಗಂಭೀರವಾಗಿ ಪರಿಗಣಿಸಿದ್ದೇನೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಕಡಿಮೆಯಾಗಿವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G. Parameshwara) ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವರ್ಷ 2,500ಕ್ಕೂ ಅಧಿಕ ರಸ್ತೆ ಅಪಘಾತಗಳು (Road Accident) ಸಂಭವಿಸಿದ್ದು, 550 ಜನ ಸಾವನ್ನಪ್ಪಿದ್ದಾರೆ. ಹಾಗಾಗಿ ಇದನ್ನು ಗಂಭೀರವಾಗಿ ತೆಗೆದುಕೊಳ್ಳುವಂತೆ ತಿಳಿಸಿದ್ದೇನೆ ಎಂದರು.
ಯಮಕನಮರಡಿ ಚಿನ್ನ (Gold) ನಾಪತ್ತೆ ಪ್ರಕರಣ ವಿಚಾರಕ್ಕೆ ಪ್ರತಿಕ್ರಿಯಿಸಿ, ಕಳೆದ ಆರು ತಿಂಗಳಲ್ಲಿ ಪೊಲೀಸರ (Police) ಮೇಲೆ ಆರೋಪ ಕೇಳಿ ಬಂದ ಐನೂರು ಪ್ರಕರಣಗಳನ್ನು ವಿಚಾರಣೆಗೆ ಒಳಪಡಿಸಿದ್ದೇನೆ. ಕೆಲವೊಮ್ಮೆ ಅಮಾಯಕ ಪೊಲೀಸ್ ಸಿಬ್ಬಂದಿ ಮೇಲೆ ಆರೋಪ ಕೇಳಿ ಬಂದಿರುತ್ತದೆ. ಅಲ್ಲದೇ ಕೆಲವು ಕಡೆ ಪೊಲೀಸರೇ ತಪ್ಪು ಮಾಡಿರುತ್ತಾರೆ. ಹಾಗಾಗಿ ಪ್ರತಿಯೊಂದು ಕೇಸ್‌ಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತಿದ್ದು, ಆ ಪ್ರಕರಣ ನನ್ನ ಗಮನಕ್ಕೆ ಬಂದಿಲ್ಲ. ಮಾಹಿತಿ ತರಿಸಿಕೊಂಡು ಮುಂದಿನ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಗೃಹ ಸಚಿವರು ತಿಳಿಸಿದರು. ಇದನ್ನೂ ಓದಿ: ಹೆಚ್‍ಡಿಕೆ ಸ್ವಾಮಿಯೇ ಅಯ್ಯಪ್ಪ ಅಂತಿಲ್ಲ, ಅಮಿತ್ ಅಯ್ಯಪ್ಪ ಅಂತಿದ್ದಾರೆ: ಸಿಎಂ ಇಬ್ರಾಹಿಂ ವ್ಯಂಗ್ಯ
ಹಿಂಡಲಗಾ ಜೈಲಿನಲ್ಲಿನ (Hindalga Jail) ಅಕ್ರಮ ಚಟುವಟಿಕೆಗಳ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಾ. ಜಿ.ಪರಮೇಶ್ವರ ಅವರು, ಹಿಂಡಲಗಾ ಜೈಲಿನಲ್ಲಿ ಅಗತ್ಯ ಸಿಸಿಟಿವಿ, ಜಾಮರ್ ಸೇರಿ ಮತ್ತಿತರ ಸಾಮಗ್ರಿಗಳ ಖರೀದಿಗೆ ಹಣ ಮಂಜೂರಾಗಿದೆ. ಜೈಲು ಅಧಿಕ್ಷಕರ ವರ್ಗಾವಣೆಗೆ ನಿರ್ಧರಿಸಿದ್ದೇವೆ. ಯಾವುದೇ ರೀತಿ ನಿರ್ಲಕ್ಷ್ಯ ವಹಿಸುವುದಿಲ್ಲ. ಜೈಲಿನ ಸುಧಾರಣೆಗೆ ಇನ್ನು ಹೆಚ್ಚಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಔರಾದಕರ್ ವರದಿ ಜಾರಿ ವಿಚಾರ ಎಲ್ಲಿಗೆ ಬಂದಿತು ಎಂಬ ಪ್ರಶ್ನೆಗೆ ಎಲ್ಲಿಗೂ ಬಂದಿಲ್ಲ. ಅದು ಅಲ್ಲಿಯೇ ಇದೆ. ಈಗಾಗಲೇ ಕೆಲವೊಂದು ಪ್ರಸ್ತಾವನೆಗಳನ್ನು ಅನುಷ್ಠಾನಕ್ಕೆ ತಂದಿದ್ದೇವೆ. ಆದರೆ ಪ್ರಮುಖವಾಗಿ ವೇತನ ಪರಿಷ್ಕರಣೆ ಮಾಡಿಲ್ಲ. ಇದಕ್ಕೆ ಹೆಚ್ಚುವರಿಯಾಗಿ 800-900 ಕೋಟಿ ರೂ. ಹಣ ಬೇಕಾಗುತ್ತದೆ ಎಂದು ಹಣಕಾಸು ಇಲಾಖೆ ಹಿಂದೆ ಹೇಳಿದ್ದು, ಹಿಂದಿನ ಸರ್ಕಾರ ಇದನ್ನು ಜಾರಿ ತರಲಿಲ್ಲ. ನಾವು ಪರಿಶೀಲಿಸುತ್ತೇವೆ ಎಂದರು.
ಮಾಜಿ ಸಿಎಂ ಕುಮಾರಸ್ವಾಮಿ ದತ್ತು ಮಾಲೆ ಹಾಕುವೆ ಎಂಬ ಹೇಳಿಕೆ ವಿಚಾರಕ್ಕೆ, ಅವರು ಹಾಕಿಕೊಂಡರೆ ನಾನು ಏನು ಮಾಡಲಿ. ನಾನೂ ಹಾಕೋಬೇಕಾ ಎಂದು ಪ್ರಶ್ನಿಸಿದ ಪರಮೇಶ್ವರ, ಅದು ಅವರ ವೈಯಕ್ತಿಕ ವಿಚಾರ. ಅವರಿಗ ಎನ್‌ಡಿಎ ಮೈತ್ರಿಕೂಟದಲ್ಲಿದ್ದು, ಅವರಿಗೆ ಹೊಂದಾಣಿಕೆ ಆಗಲು ಈ ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ ಎಂದು ಛೇಡಿಸಿದರು.
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಬಸ್ ಹಳ್ಳಕ್ಕೆ ಉರುಳಿದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು ಐವರು ಗಂಭೀರ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ.
ಕಳೆದ ರಾತ್ರಿ ಬೆಂಗಳೂರಿನಿಂದ ಹೊರಟಿದ್ದ ಬಸ್ (Bus) ಶನಿವಾರ (ನ.4) ಬೆಳಗ್ಗಿನ ಜಾವ 4.45ಕ್ಕೆ ಚೀಕನಹಳ್ಳಿ ಬಳಿ ಬರುತ್ತಿದ್ದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದಿದೆ. ಈ ಬಸ್ಸು ಬೆಂಗಳೂರಿನಿಂದ ಧರ್ಮಸ್ಥಳ (Dharmastala), ಸುಬ್ರಹ್ಮಣ್ಯ, ಹೊರನಾಡು, ಶೃಂಗೇರಿಗೆ ಪ್ರವಾಸಕ್ಕೆ ಹೊರಟಿತ್ತು ಎನ್ನಲಾಗಿದೆ. ಇದನ್ನೂ ಓದಿ: ಜನವಸತಿ ಪ್ರದೇಶದಲ್ಲೇ ಅಕ್ರಮ ಗಣಿಗಾರಿಕೆ- ಕಟ್ಟಡಗಳು ಬಿರುಕು, ಬೆಚ್ಚಿದ ಅಂಗನವಾಡಿ ಮಕ್ಕಳು
ಬಸ್ಸಿನಲ್ಲಿ ರಾಜನಗುಂಟೆ ಹಾಗೂ ಕೆ.ಆರ್.ಪುರಂನ 48ಕ್ಕೂ ಹೆಚ್ಚು ಜನ ಪ್ರಯಾಣಿಕರಿದ್ದು, ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ. ಬಸ್ಸಿನಲ್ಲಿದ್ದ 10ಕ್ಕೂ ಹೆಚ್ಚು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನ ಹಾಸನ ಜಿಲ್ಲೆಯ ಬೇಲೂರು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಸ್ಕೆಬೈಲು-ಚೀಕನಹಳ್ಳಿ ಈ ತಿರುವಿನಲ್ಲಿ ಸಾಕಷ್ಟು ಅಪಘಾತಗಳು ಸಂಭವಿಸಿವೆ. ಕಳೆದ 10 ತಿಂಗಳಲ್ಲಿ 70ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ. ಚೀಕನಹಳ್ಳಿಯ ಕ್ರಾಸ್‍ಗೆ ತಡೆಗೋಡೆ ನಿರ್ಮಿಸಿ ಎಂದು ಸ್ಥಳಿಯರು ಸರ್ಕಾರಕ್ಕೆ ಮನವಿ ಮಾಡಿದ್ದರೂ ಸರ್ಕಾರ ಕಿವಿಗೊಡುತ್ತಿಲ್ಲ. ಈ ತಿರುವಿನಲ್ಲಿ ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿದ್ದು ಅಮಾಯಕ ಜೀವಗಳು ಪ್ರಾಣ ಕಳೆದುಕೊಳ್ಳುತ್ತಿವೆ ಎಂದು ಸ್ಥಳಿಯರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: Nepal Earthquake: ಭೀಕರ ಭೂಕಂಪನಕ್ಕೆ ಬೆಚ್ಚಿಬಿದ್ದ ನೇಪಾಳ- 70 ಮಂದಿ ದುರ್ಮರಣ
ವಿಜಯಪುರ: ನಗರದ ಹೊರಭಾಗದಲ್ಲಿ ತಡರಾತ್ರಿ ಭೀಕರ ಅಪಘಾತ (Accident) ಸಂಭವಿಸಿದೆ. ದುರ್ಘಟನೆಯಲ್ಲಿ ಸ್ಥಳದಲ್ಲೇ ನಾಲ್ವರು ಸಾವಿಗೀಡಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 50 ರಲ್ಲಿನ ಟೋಲ್ ಗೇಟ್ ಬಳಿಯ ಟ್ರಕ್ ಬೈಲೈನ್ ಬಳಿ ದುರ್ಘಟನೆ ನಡೆದಿದೆ. ಟ್ರಕ್ ಬೈಲ್ ಬಳಿಯ ಸರ್ವಿಸ್ ರಸ್ತೆಯ ಡಿವೈಡರ್ (Divider) ಮೇಲೆ ಕುಳಿತಿದ್ದ ನಾಲ್ವರ ಮೇಲೆ ಅಪರಿಚಿತ ವಾಹನ ಹರಿದು ಪರಾರಿಯಾಗಿದೆ.
ಅಪರಿಚಿತ ವಾಹನ ನಾಲ್ವರ ಮೇಲಲ್ಲದೇ ಅವರ ಬೈಕ್‌ಗಳ ಮೇಲೂ ಹರಿದಿದೆ. ಇದರಿಂದ 2 ಬೈಕ್‌ಗಳು ನಜ್ಜುಗುಜ್ಜಾಗಿವೆ. ಸ್ಥಳಕ್ಕೆ ವಿಜಯಪುರ (Vijaypur) ಗ್ರಾಮೀಣ ವಿಭಾಗದ ಡಿವೈಎಸ್‌ಪಿ ಗಿರಿನಲ್ಲ ತಳಕಟ್ಟಿ ಹಾಗೂ ಇತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಗಾಜಾ ಆಸ್ಪತ್ರೆಯ ಮೇಲೆ ರಾಕೆಟ್ ದಾಳಿಗೆ 500 ಬಲಿ – ದಾಳಿ ಮಾಡಿದವರು ಯಾರು?