Tag: Road Accident

  • ಶಿವನ ದರ್ಶನ ಮುಗಿಸಿ ಬರುತ್ತಿದ್ದ ವೇಳೆ ಭೀಕರ ಅಪಘಾತ – ಮಹಾರಾಷ್ಟ್ರ ಮೂಲದ ನಾಲ್ವರು ಸಾವು

    ಶಿವನ ದರ್ಶನ ಮುಗಿಸಿ ಬರುತ್ತಿದ್ದ ವೇಳೆ ಭೀಕರ ಅಪಘಾತ – ಮಹಾರಾಷ್ಟ್ರ ಮೂಲದ ನಾಲ್ವರು ಸಾವು

    ಬೀದರ್‌: ದೇವರ ದರ್ಶನ ಪಡೆದು ವಾಪಸಾಗುತ್ತಿದ್ದಾಗ ಆಟೋಗೆ ಲಾರಿ ಡಿಕ್ಕಿಯಾಗಿ ಮಹಾರಾಷ್ಟ್ರ (Maharashtra) ಮೂಲದ ನಾಲ್ವರು ಸಾವನ್ನಪ್ಪಿರುವ ಘಟನೆ ಬೀದರ್ (Bidar) ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲಿ ಮನ್ನಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ-65 (National Highway-65) ರಲ್ಲಿ ನಡೆದಿದೆ.

    ಪ್ರಮಿಳಾ (32), ಆಟೋ ಚಾಲಕ ಸುನೀಲ್ ಜಗದಾಳೆ (35), ಅನುಷಾ ಬಾಯಿ (65) ಹಾಗೂ ಪೂಜಾ ಜಾದವ್ (40) ಮೃತ ದುರ್ದೈವಿಗಳು. 8 ಜನ ಪ್ರಯಾಣಿಸುತ್ತಿದ್ದ ಆಟೋದಲ್ಲಿ 4 ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: 15 ದಿನಗಳ ನಿತ್ಯ 5 ಸಾವಿರ ಕ್ಯೂಸೆಕ್‌ ನೀರು ತಮಿಳುನಾಡಿಗೆ ಹರಿಸಿ – ಕರ್ನಾಟಕಕ್ಕೆ CWRC ಆದೇಶ

    ಶ್ರಾವಣ ಸೋಮವಾರ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮೂಲದ 8 ಜನ ಬಸವಕಲ್ಯಾಣ ತಾಲೂಕಿನ ಚಂಡಕಾಪೂರ್ ಗ್ರಾಮದ ಬಳಿಯ ಐತಿಹಾಸಿಕ ಅಮೃತ ಕುಂಡ ಶಿವನ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ದೇವರ ದರ್ಶನ ಮುಗಿಸಿ ವಾಪಸಾಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಈ ಕುರಿತು ಬಸವಕಲ್ಯಾಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ದೇಶದ ಸಾಫ್ಟ್‌ವೇರ್‌ ರಫ್ತಿನಲ್ಲಿ 40% ಕರ್ನಾಟಕದ್ದು, ನಾವೇ ನಂಬರ್‌ 1: ಪ್ರಿಯಾಂಕ್‌ ಖರ್ಗೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಿತ್ರದುರ್ಗದಲ್ಲಿ ರಸ್ತೆ ಅಪಘಾತ- ಸಾವಿನ ಸಂಖ್ಯೆ 5ಕ್ಕೆ ಏರಿಕೆ

    ಚಿತ್ರದುರ್ಗದಲ್ಲಿ ರಸ್ತೆ ಅಪಘಾತ- ಸಾವಿನ ಸಂಖ್ಯೆ 5ಕ್ಕೆ ಏರಿಕೆ

    ಚಿತ್ರದುರ್ಗ: ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

    ಚಿಕಿತ್ಸೆ ಫಲಿಸದೇ ಇದೀಗ ಕೋಲಾರ (Kolar) ಮೂಲದ ಮಧುಸೂದನ್(24) ಮೃತಪಟ್ಟಿದ್ದಾರೆ. ಪಿಎಸ್‍ಐ ಪರೀಕ್ಷೆಗೆ ಕೋಚಿಂಗ್ ಪಡೆಯುತ್ತಿದ್ದ ಮಧುಸೂದನ್, ಸ್ನೇಹಿತ ಭೀಮಾಶಂಕರ ಕುಟುಂಬದ ಜೊತೆ ಟ್ರಿಪ್‍ಗೆ ಬಂದಿದ್ದರು.

    ಚಿತ್ರದುರ್ಗ (Accident in Chitradura) ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ವಿಜಯಪುರದಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಇದನ್ನೂ ಓದಿ: ಭೀಕರ ಅಪಘಾತ- ಒಂದೇ ಕುಟುಂಬದ ನಾಲ್ವರ ದುರ್ಮರಣ

    ನಿದ್ದೆ ಮಂಪರು, ಚಾಲಕನ ಅಜಾಗರೂಕತೆಯಿಂದ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಎಸ್ಪಿ ಕೆ.ಪರಶುರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಟ್ರಕ್‌ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಕಾರು – 22ರ ಯುವತಿ ದುರ್ಮರಣ

    ಟ್ರಕ್‌ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಕಾರು – 22ರ ಯುವತಿ ದುರ್ಮರಣ

    ನವದೆಹಲಿ: ಉತ್ತರ ದೆಹಲಿಯ ಸಿವಿಲ್‌ ಲೈನ್ಸ್‌ ಪ್ರದೇಶದಲ್ಲಿ (Delhi’s Civil Lines Area) ಟ್ರಕ್‌ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 22 ವರ್ಷದ ಯುವತಿ ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವರು ಗಾಯಗೊಂಡಿದ್ದಾರೆ.

    ಚಂದಗಿರಾಮ್‌ ಅಖಾರ ಸಿಗ್ನಲ್‌ನಲ್ಲಿ ಚಾಲಕ ಟ್ರಕ್‌ವೊಂದರ ಹಿಂದೆ ಕಾರು ನಿಲ್ಲಿಸಿದ್ದಾನೆ. ಅದೇ ಸಮಯಕ್ಕೆ ವೇಗವಾಗಿ ಬಂದ ಮತ್ತೊಂದು ಟ್ರಕ್‌ (Truck) ಕಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಇದರಿಂದ ಎರಡು ಟ್ರಕ್‌ಗಳ ಮಧ್ಯೆ ಸಿಲುಕಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿ ಯುವತಿ ಸಾವನ್ನಪ್ಪಿದ್ದಾಳೆ. ಮೃತ ಯುವತಿಯನ್ನು ಅಮನ್‌ದೀಪ್‌ ಕೌರ್‌, ಕಾರು ಚಾಲಕನನ್ನು ಹರ್ಮಿಂದರ್‌ ಸಿಂಗ್‌ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಕೊಡಗಿಗೂ ವಿಸ್ತರಿಸಿದ ಮದ್ರಾಸ್ ಐ – ಕಳೆದ 20 ದಿನಗಳಲ್ಲಿ 136 ಪ್ರಕರಣಗಳು ಪತ್ತೆ

    ಅಮನ್‌ದೀಪ್‌ ಕೌರ್‌ ತನ್ನ ಚಿಕ್ಕಮ್ಮ ಮತ್ತು ಅವರ ಸೋದರಸಂಬಂಧಿಗಳೊಂದಿಗೆ ಶಿಶ್‌ಗಂಜ್ ಗುರುದ್ವಾರದಿಂದ ತಿಮಾರ್‌ಪುರದ ನೆಹರು ವಿಹಾರ್‌ಗೆ ಪ್ರಯಾಣಿಸುತ್ತಿದ್ದಳು. ತನ್ನ ಚಿಕ್ಕಮ್ಮ ಪುಷ್ಪಾ ಮತ್ತು ಅವರ ಮಗಳು ಅಮನದೀಪ್ ಕೌರ್ ಹಿಂದಿನ ಸೀಟಿನಲ್ಲಿ ಕುಳಿತಿದ್ದರು. ಅಪಘಾತದಲ್ಲಿ ಅಮನ್‌ದೀಪ್ ಕೌರ್ ಮತ್ತು ಬಂಟಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಟ್ರಾಮಾ ಕೇರ್‌ ಸೆಂಟರ್‌ಗೆ ಕರೆತರಲಾಯಿತು. ಆದ್ರೆ ಅಮನ್‌ದೀಪ್‌ ಕೌರ್‌ ಅಷ್ಟರಲ್ಲಾಗಲೇ ಮೃತಪಟ್ಟಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

    ಅಪಘಾತದ ನಂತರ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ದೆಹಲಿ ಪೊಲೀಸರು (Delhi Police) ಐಪಿಸಿ ಸೆಕ್ಷನ್‌ 279, 337 ಮತ್ತು 304A ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಟ್ರಕ್‌ ಚಾಲಕನಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಇದನ್ನೂ ಓದಿ: ಮಣಿಪುರ ಜನಾಂಗೀಯ ಸಂಘರ್ಷ – ತನಿಖೆಯ ಮೇಲ್ವಿಚಾರಣೆಗೆ ನ್ಯಾಯಾಂಗ ಸಮಿತಿ ರಚನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಸಿ ನಾಲೆಗೆ ಕಾರು ಉರುಳಿ ನಾಲ್ವರ ಸಾವು ಪ್ರಕರಣ – ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಘೋಷಣೆ

    ವಿಸಿ ನಾಲೆಗೆ ಕಾರು ಉರುಳಿ ನಾಲ್ವರ ಸಾವು ಪ್ರಕರಣ – ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಘೋಷಣೆ

    ಮಂಡ್ಯ: ವಿಶ್ವೇಶ್ವರಯ್ಯ ನಾಲೆಗೆ (VC Canal) ಕಾರು ಉರುಳಿ ನಾಲ್ವರು ಸಾವನ್ನಪ್ಪಿದ್ದು, ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ (Chief Minister Relief Fund) ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಇದರೊಂದಿಗೆ ಸಚಿವ ಚಲುವರಾಯಸ್ವಾಮಿ (Cheluvarayaswamy) ವೈಯಕ್ತಿಕವಾಗಿ ತಲಾ 50 ಸಾವಿರ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

    ನನ್ನ ಹಾಗೂ ಸಚಿವ ಮಹದೇವಪ್ಪ (HC Mahadevappa) ಅವರ ಮನವಿ ಮೇರೆಗೆ ಪರಿಹಾರ ನೀಡಲು ಸಿಎಂ ಸೂಚನೆ ನೀಡಿದ್ದಾರೆ. ಮಂಡ್ಯ ಹಾಗೂ ಮೈಸೂರು ಡಿಸಿಗಳು ಪರಿಹಾರಕ್ಕೆ ವರದಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

    ಇನ್ನೂ ಈ ಪ್ರಕರಣಕ್ಕೆ ಸಂಬಂಧಿದಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್‌.ಸಿ ಮಹದೇವಪ್ಪ ಮಾತನಾಡಿದ್ದು, ಘಟನೆಯಲ್ಲಿ ಸಾವನ್ನಪ್ಪಿರುವ ಮೂವರು ಟಿ.ನರಸಿಪುರ ತಾಲೂಕಿನ ಗೊರವನಹಳ್ಳಿ ಗ್ರಾಮದವರು. ಈ‌ ಘಟನೆ ಜರುಗಬಾರದಿತ್ತು, ಈ ಘಟನೆ ತುಂಬಾ ದುಃಖ ತಂದಿದೆ ಎಂದಿದ್ದಾರೆ. ಇದನ್ನೂ ಓದಿ: ವಿಸಿ ನಾಲೆಗೆ ಬಿತ್ತು ಕಾರು – ನಾಲ್ವರು ಮಹಿಳೆಯರು ಸ್ಥಳದಲ್ಲೇ ಸಾವು

    ಘಟನೆ ನಡೆದ ಸ್ಥಳದಲ್ಲಿ ರಸ್ತೆ ಚೆನ್ನಾಗಿದೆ. ಆದ್ರೆ ಇದಕ್ಕೆ ಅತಿವೇಗ ಕಾರಣ ಇರಬಹುದು ಅನ್ನಿಸುತ್ತೆ. ವಾಹನ ಸವಾರರು ಜಾಗರೂಕತೆಯಿಂದ ಚಾಲನೆ ಮಾಡಬೇಕು. ಸದ್ಯ ಮುಖ್ಯಮಂತ್ರಿಗಳು ಮೃತರ ಕುಟುಂಬಕ್ಕೆ ಪರಿಹಾರ ನೀಡಲು ಸೂಚಿಸಿದ್ದು, ಮೈಸೂರು ಹಾಗೂ ಮಂಡ್ಯ ಜಿಲ್ಲಾಧಿಕಾರಿಗಳು ಇದರ ಫಾಲೋಅಪ್‌ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಎಕ್ಸ್‌ಪ್ರೆಸ್‌ವೇಯಲ್ಲಿ AI ಕ್ಯಾಮೆರಾ – ಇಷ್ಟಬಂದಂತೆ ವಾಹನ ಚಲಾಯಿಸಿದ್ರೆ ಬೀಳುತ್ತೆ ದಂಡ

    ಏನಿದು ಘಟನೆ?
    ಮೂರೇ ದಿನಗಳ ಅಂತರದಲ್ಲಿ ಸಂಭವಿಸಿದ ಎರಡು ಅಪಘಾತಗಳಲ್ಲಿ ಐವರು ಜಲ ಸಮಾಧಿಯಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಶನಿವಾರ ತಡರಾತ್ರಿಯೂ ಇಲ್ಲಿನ ವಿಶ್ವೇಶ್ವರಯ್ಯ ನಾಲೆಗೆ ಕಾರು ಉರುಳಿಬಿದ್ದು ಗಾಮನಹಳ್ಳಿ ಗ್ರಾಮದ ಮಹದೇವಮ್ಮ, ಗೊರವನಹಳ್ಳಿ ಗ್ರಾಮದ ಸಂಜನಾ, ಮಮತಾ, ರೇಖಾ ಮಹಿಳೆಯರು ಸಾವನ್ನಪ್ಪಿದ್ದಾರೆ. ಇದಕ್ಕೂ ಮುನ್ನ ಕಳೆದ ಮೂರು ದಿನಗಳ ಹಿಂದೆಯಷ್ಟೇ ತಿಬ್ಬನಹಳ್ಳಿ ಬಳಿಯ ವಿಸಿ ನಾಲೆಗೆ ಕಾರು ಉರುಳಿಬಿದ್ದು ಚಾಲಕನೊಬ್ಬ ಸಾವನ್ನಪ್ಪಿದ್ದ ಘಟನೆ ನಡೆದಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಂಡ್ಯದ ವಿಸಿ ನಾಲೆಗೆ ಕಾರು ಪಲ್ಟಿ – ಚಾಲಕ ನಾಪತ್ತೆ

    ಮಂಡ್ಯದ ವಿಸಿ ನಾಲೆಗೆ ಕಾರು ಪಲ್ಟಿ – ಚಾಲಕ ನಾಪತ್ತೆ

    ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿಸಿ ನಾಲೆ (VC Canal) ಪಲ್ಟಿಯಾಗಿದ್ದು, ಚಾಲಕ ನಾಪತ್ತೆಯಾಗಿರುವ ಘಟನೆ ಮಂಡ್ಯ (Mandya) ತಾಲೂಕಿನ ತಿಬ್ಬನಹಳ್ಳಿಯಲ್ಲಿ ನಡೆದಿದೆ.

    ನಾಪತ್ತೆಯಾಗಿರುವ ಕಾರು ಚಾಲಕ (Car Driver) ಲೋಕೇಶ್‌ಗಾಗಿ ತೀವ್ರ ಶೋಧ ನಡೆದಿದೆ. ಕಾಲುವೆಗೆ ತಡೆಗೋಡೆ ಇಲ್ಲದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಕಾರು ವಿಸಿ ನಾಲೆಗೆ ಪಲ್ಟಿ ಹೊಡೆದಿದೆ. ಮಳೆಯಿಂದ ಹೆಚ್ಚಾಗಿ ನೀರು ತುಂಬಿದ್ದ ಕಾರಣ ಕಾರು ಸಂಪೂರ್ಣ ಮುಳುಗಡೆಯಾಗಿದೆ. ಕಾರಿನಲ್ಲಿದ್ದ ಓರ್ವ ಪ್ರಾಣಾಪಾಯದಿಂದ ಪಾರಾಗಿದ್ದು, ಚಾಲಕ ನಾಪತ್ತೆಯಾಗಿದ್ದಾನೆ.

    ಚಾಲಕ ಲೋಕೇಶ್ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದ್ದು ಕಾಲುವೆಯ ನೀರು ನಿಲ್ಲಿಸುವಂತೆ ಅಧಿಕಾರಿಗಳು ಸೂಚನೆ ನಿಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದು, ಕಾಲುವೆಗೆ ಬಿದ್ದಿರುವ ಕಾರನ್ನ ಮೇಲೆತ್ತಲು ಪ್ರಯತ್ನ ನಡೆಸಿದ್ದಾರೆ. ಈ ಸಂಬಂಧ ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಇನ್‍ಸ್ಪೆಕ್ಟರ್, ಮೇಲಧಿಕಾರಿಗಳಷ್ಟೇ ಡ್ರಂಕ್ & ಡ್ರೈವ್ ತಪಾಸಣೆ ಮಾಡ್ಬೇಕು – ಸುಲಿಗೆ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಕ್ರಮ

    2017ರಲ್ಲಿ ಕಾಲುವೆಗೆ ತಡೆಗೊಡೆ ಇಲ್ಲದೇ ದೊಡ್ಡ ಬಸ್ ದುರಂತ ನಡೆದಿತ್ತು. ಈ ಘಟನೆಯ ಬಳಿಕ ಕಾಲುವೆಯ ಉದ್ದಕ್ಕೂ ತಡೆಗೊಡೆ ನಿರ್ಮಿಸುವುದಾಗಿ ಹೇಳಿದ್ದ ಸರ್ಕಾರ, ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದರಿಂದಾಗಿ ಆಗಾಗ್ಗೆ ಅಪಘಾತಗಳು ನಡೆಯುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನೂ ಓದಿ: ರೈಲ್ವೇ ಹಳಿ ಮೇಲೆ ಕುಸಿದ ಮಣ್ಣು – ಗೋವಾ, ಕರ್ನಾಟಕ ರೈಲು ಸಂಚಾರದಲ್ಲಿ ಇನ್ನೆರಡು ದಿನ ವ್ಯತ್ಯಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶಿಕ್ಷಣ ಸಚಿವರ ಬೆಂಗಾವಲು ವಾಹನ ಡಿಕ್ಕಿ – ರಸ್ತೆಯಲ್ಲೇ ಅಂಬುಲೆನ್ಸ್ ಪಲ್ಟಿ, ರೋಗಿ ಪಾರು!

    ಶಿಕ್ಷಣ ಸಚಿವರ ಬೆಂಗಾವಲು ವಾಹನ ಡಿಕ್ಕಿ – ರಸ್ತೆಯಲ್ಲೇ ಅಂಬುಲೆನ್ಸ್ ಪಲ್ಟಿ, ರೋಗಿ ಪಾರು!

    ತಿರುವನಂತಪುರಂ: ಕೇರಳ ಶಿಕ್ಷಣ ಸಚಿವರ (Kerala Education Minister) ಬೆಂಗಾವಲು ಪಡೆ ವಾಹನ ಅಂಬುಲೆನ್ಸ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಅಂಬುಲೆನ್ಸ್‌ (Ambulance) ನಡುರಸ್ತೆಯಲ್ಲೇ ಎರಡು ಪಲ್ಟಿ ಹೊಡೆದು ಬಿದ್ದಿದೆ. ಈ ವೇಳೆ ರಸ್ತೆಯಲ್ಲಿ ಕರ್ತವ್ಯ ನಿರತರಾಗಿದ್ದ ಇಬ್ಬರು ಪೊಲೀಸರು ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾಗಿರುವ ಘಟನೆ ಕೇರಳದ ತಿರುನಂತರಪುರಂನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಬುಧವಾರ ಘಟನೆ ನಡೆದಿದ್ದು ರಸ್ತೆ ಅಪಘಾತದಲ್ಲಿ (Road Accident) ರೋಗಿಯೂ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ. ಬೆಂಗಾವಲು ಪಡೆ ವಾಹನ ಚಾಲಕ ಹಾಗೂ ಅಂಬುಲೆನ್ಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಕೇರಳ ಶಿಕ್ಷಣ ಸಚಿವ ವಿ ಶಿವನ್‌ಕುಟ್ಟಿ (V Sivankutty) ಅವರ ಬೆಂಗಾವಲು ಪಡೆಯ ವಾಹನ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ವೇಳೆ ಡಿಕ್ಕಿ ಹೊಡೆದಿದೆ. ನಂತರ ಅಂಬುಲೆನ್ಸ್‌ ಎರಡು ಪಲ್ಟಿ ಹೊಡೆದು ಬಿದ್ದಿದೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಚಂದ್ರಯಾನ-3 ಭಾರತದ ಭರವಸೆ, ಕನಸುಗಳನ್ನ ಹೊತ್ತೊಯ್ಯಲಿದೆ – ಪ್ರಧಾನಿ ಶುಭಹಾರೈಕೆ

    ಸಚಿವರು ಬರುತ್ತಿದ್ದ ಕಾರಣಕ್ಕಾಗಿ ಟ್ರಾಫಿಕ್ ದಟ್ಟಣೆ ನಿಯಂತ್ರಿಸಲು ಪೊಲೀಸರು ಮುಂದಾಗಿದ್ದರು. ಆದ್ರೆ ಸಚಿವರ ಬೆಂಗಾವಲು ವಾಹನ ಪ್ರವೇಶಿಸುವ ಸಮಯಕ್ಕೆ ಅಂಬುಲೆನ್ಸ್ ಮಧ್ಯೆ ನುಗ್ಗಿದ್ದರಿಂದ ಡಿಕ್ಕಿ ಹೊಡೆದಿದೆ. ಕೂಡಲೇ ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಘಟನೆ ಬಗ್ಗೆ ಸಚಿವ ಶಿವನಕುಟ್ಟಿ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದನ್ನೂ ಓದಿ: ಮೂರೇ ದಿನದ ಅಂತರದಲ್ಲಿ ಮತ್ತೊಂದು ಚೀತಾ ಸಾವು – 4 ತಿಂಗಳಲ್ಲಿ 8ನೇ ಘಟನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 80 ಅಡಿ ಆಳದ ಕಂದಕಕ್ಕೆ ಉರುಳಿದ ಬಸ್‌ – 27 ಮಂದಿ ದಾರುಣ ಸಾವು, 17 ಮಂದಿಗೆ ಗಾಯ

    80 ಅಡಿ ಆಳದ ಕಂದಕಕ್ಕೆ ಉರುಳಿದ ಬಸ್‌ – 27 ಮಂದಿ ದಾರುಣ ಸಾವು, 17 ಮಂದಿಗೆ ಗಾಯ

    ಮೆಕ್ಸಿಕೋ: ವೇಗವಾಗಿ ಚಲಿಸುತ್ತಿದ್ದ ಬಸ್‌ 80 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಪರಿಣಾಮ 27 ಮಂದಿ ಸಾವನ್ನಪ್ಪಿದ್ದು, 17 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಅಮೆರಿಕದ (North America) ಮೆಕ್ಸಿಕೋ ನಗರದಲ್ಲಿ (Mexico City) ನಡೆದಿದೆ. ಉರುಳಿಬಿದ್ದ ರಭಸಕ್ಕೆ ಬಸ್‌ ಸಂಪೂರ್ಣ ಬಸ್‌ ಛಿದ್ರ ಛಿದ್ರವಾಗಿದೆ.

    ಘಟನೆಯಲ್ಲಿ ಗಾಯಗೊಂಡ 17 ಮಂದಿಯನ್ನ ವೈದ್ಯಕೀಯ ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ಕನಿಷ್ಠ 6 ಮಂದಿ ಪ್ರಜ್ಞಾಹೀನರಾಗಿದ್ದರು, ಅವರನ್ನ ಆಸ್ಪತ್ರೆಗೆ ಸಾಗಿಸಿದಾಗ ಗಂಭೀರ ಸ್ಥಿತಿಯಲ್ಲಿರುವುದು ಕಂಡುಬಂದಿದೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ಸ್ಥಳೀಯ ಸಾರಿಗೆ ಸಂಸ್ಥೆಯೊಂದು ನಿರ್ವಹಿಸುತ್ತಿದ್ದ ಬಸ್ ರಾಜಧಾನಿ ಮೆಕ್ಸಿಕೋ ನಗರದಿಂದ ಹೊರಟು ಸ್ಯಾಂಟಿಯಾಗೊ ಡಿ ಯೊಸೊಂಡುವಾ ಪಟ್ಟಣಕ್ಕೆ ತೆರಳುತ್ತಿದ್ದ ವೇಳೆ ಮ್ಯಾಗ್ಡಲೇನಾ ಪೆನಾಸ್ಕೋ ಪಟ್ಟಣದಲ್ಲಿ ಅಪಘಾತ ಸಂಭವಿಸಿದೆ. ವಾಹನ ಚಾಲಕ ನಿಯಂತ್ರಣ ಕಳೆದುಕೊಂಡಿದ್ದರಿಂದಾಗಿ ಬಸ್‌ ಅಪಘಾತಕ್ಕೀಡಾಗಿದೆ (Mexico Bus Accident) ಹಿರಿಯ ಅಧಿಕಾರಿ ಜೀಸಸ್ ರೊಮೆರೊ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಭಾರತೀಯ-ಅಮೆರಿಕನ್‌ ಸಂಸದೆ ಚುಡಾಯಿಸಿದ ವ್ಯಕ್ತಿಗೆ 364 ದಿನಗಳ ಜೈಲು ಶಿಕ್ಷೆ

    ಮೆಕ್ಸಿಕೋ ನಗರದಲ್ಲಿ ರಸ್ತೆ ಅಪಘಾತಗಳು ಸಾಮಾನ್ಯವಾಗಿಬಿಟ್ಟಿದೆ. ಅತಿಯಾದ ವೇಗ, ವಾಹನಗಳ ಕಳಪೆ ಗುಣಮಟ್ಟ ಹಾಗೂ ಚಾಲಕ ಮೇಲಿನ ಅತಿಯಾದ ಒತ್ತಡಗಳು ಅಪಘಾತಕ್ಕೆ ಕಾರಣವಾಗುತ್ತಿದೆ. ಬಹುತೇಕ ಕೆಲಸಕ್ಕೆ ಹೋಗುವ ಮಂದಿ ಬಸ್‌ ಮೇಲೆ ಅವಲಂಬಿತರಾಗಿದ್ದಾರೆ ಎಂದು ಸ್ಥಳೀಯ ಆಡಳಿತ ತಿಳಿಸಿದೆ. ಇದನ್ನೂ ಓದಿ: ಟೈಟಾನಿಕ್ ಅವಶೇಷ ನೋಡಲು ತೆರಳಿದ್ದ ಸಬ್‌ಮರ್ಸಿಬಲ್ ದುರಂತ ಅಂತ್ಯ – ಅಂದು ಏನಾಗಿರಬಹುದು?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Maharashtra Accident: ಮತ್ತೊಂದು ಭೀಕರ ಅಪಘಾತದಲ್ಲಿ 10 ಮಂದಿ ಸಾವು

    Maharashtra Accident: ಮತ್ತೊಂದು ಭೀಕರ ಅಪಘಾತದಲ್ಲಿ 10 ಮಂದಿ ಸಾವು

    – 20ಕ್ಕೂ ಹೆಚ್ಚು ಮಂದಿಗೆ ಗಾಯ

    ಮುಂಬೈ: ಮಹಾರಾಷ್ಟ್ರದ (Maharashtra) ಧುಲೆ ಜಿಲ್ಲೆಯ ಹೆದ್ದಾರಿಯಲ್ಲಿ ಟ್ರಕ್‌ವೊಂದು (Truck) ಹೋಟೆಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

    ಮಹಾರಾಷ್ಟ್ರದಲ್ಲಿ ಕಳೆದ ನಾಲ್ಕೇ ದಿನಗಳಲ್ಲಿ 36 ಮಂದಿ ಸಾವನ್ನಪ್ಪಿದ್ದು, ಸುಮಾರು 30 ಮಂದಿ ಗಾಯಗೊಂಡಿದ್ದಾರೆ. ಇತ್ತೀಚೆಗಷ್ಟೇ ಬಸ್‌ನಲ್ಲಿ ಬೆಂಕಿ ಹೊತ್ತಿಕೊಂಡು ಮೂರು ಮಕ್ಕಳು ಸೇರಿದಂತೆ 25 ಜನರು ಸಾವನ್ನಪ್ಪಿರುವ ದಾರುಣ ಘಟನೆ ಮಹಾರಾಷ್ಟ್ರದ ಎಕ್ಸ್‌ಪ್ರೆಸ್‌ವೇಯಲ್ಲಿ (Maharashtra Expressway)  ನಡೆದಿತ್ತು. ಆ ನಂತರ ಇದು ಈ ತಿಂಗಳ ಆರಂಭದಲ್ಲೇ ನಡೆದ 2ನೇ ದುರಂತವಾಗಿದೆ.

    ರಾಜ್ಯ ರಾಜಧಾನಿಯಿಂದ 300 ಕಿಮೀ ದೂರದಲ್ಲಿರುವ ಧುಲೆಯ ಮುಂಬೈ-ಆಗ್ರಾ ಹೆದ್ದಾರಿಯ ಪಲಾಸ್ನರ್ ಗ್ರಾಮದ ಬಳಿ ಬೆಳಗ್ಗೆ 10.45 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಭೀಕರ ಬಸ್‌ ದುರಂತ – 25 ಮಂದಿ ಸಜೀವ ದಹನ

    ಟ್ರಕ್‌ನ ಬ್ರೇಕ್ ವಿಫಲವಾಗಿದ್ದರಿಂದ ನಿಯಂತ್ರಣ ಕಳೆದುಕೊಂಡಿದೆ. ಇದರಿಂದ ಅತೀ ವೇಗದಲ್ಲಿ ಚಲಿಸುತ್ತಿದ್ದ ಟ್ರಕ್‌ ಹಿಂಬದಿಯಿಂದ ಎರಡು ದ್ವಿಚಕ್ರವಾಹನ, ಒಂದು ಕಾರು ಹಾಗೂ ಇನ್ನೊಂದು ಕಂಟೈನರ್‌ಗೆ ಡಿಕ್ಕಿ ಹೊಡೆದಿದೆ. ನಂತರ ಟ್ರಕ್ ಹೆದ್ದಾರಿಯಲ್ಲಿ ಬಸ್ ನಿಲ್ದಾಣದ ಬಳಿ ಹೋಟೆಲ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆಯಲ್ಲಿ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಅಪಘಾತಕ್ಕೀಡಾದ ಟ್ರಕ್‌ ಮಧ್ಯಪ್ರದೇಶದಿಂದ ಧುಲೆ ಕಡೆಗೆ ಹೋಗುತ್ತಿತ್ತು. ಇದೇ ಮಾರ್ಗದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಕೆಲವರು ಅಪಘಾತಕ್ಕೀಡಾಗಿದ್ದಾರೆ. ಇದನ್ನೂ ಓದಿ: ಹಂತ ಹಂತವಾಗಿ ಮೀಸಲಾತಿ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ – 25,000 ರೂ. ದಂಡ ವಿಧಿಸಿದ ಸುಪ್ರೀಂ ಕೋರ್ಟ್

    ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಗಾಯಾಳುಗಳನ್ನ ಶಿರ್‌ಪುರ ಮತ್ತು ಧುಲೆ ಆಸ್ಪತ್ರೆಗಳಿಗೆ ಸಾಗಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡಾ.ರಾಜ್ ಸಂಬಂಧಿ ಧ್ರುವನ್ ತೀವ್ರ ಅಪಘಾತ : ಶಿವರಾಜ್ ಕುಮಾರ್ ಹಾಗೂ ಮತ್ತಿತರರು ಆಸ್ಪತ್ರೆಗೆ ಭೇಟಿ

    ಡಾ.ರಾಜ್ ಸಂಬಂಧಿ ಧ್ರುವನ್ ತೀವ್ರ ಅಪಘಾತ : ಶಿವರಾಜ್ ಕುಮಾರ್ ಹಾಗೂ ಮತ್ತಿತರರು ಆಸ್ಪತ್ರೆಗೆ ಭೇಟಿ

    ಪಾರ್ವತಮ್ಮ ರಾಜ್ ಕುಮಾರ್ (Parvathamma Rajkumar) ಸಹೋದರ, ನಿರ್ಮಾಪಕ ಎಸ್. ಎ ಶ್ರೀನಿವಾಸ್ ಪುತ್ರ ಹಾಗೂ ನಟ ಧ್ರುವನ್ (Dhruvan) ಅಲಿಯಾಸ್ ಸೂರಜ್ (Suraj) ನಿನ್ನೆ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದಾರೆ. ಬಲಗಾಲಿಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಮೊದಲ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಕಾಲು ಕತ್ತರಿಸುವ ಅನಿವಾರ್ಯತೆ ವೈದ್ಯರಿಗೆ ಬಂದಿರುವ ಕಾರಣದಿಂದಾಗಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

     

    ಅಪಘಾತ (Road Accident) ನಡೆದ ಸ್ಥಳದಲ್ಲೇ ಧ್ರುವನ್ ಬಲಗಾಲಿನ ಕೆಳ ಭಾಗ ಟ್ವಿಸ್ಟ್ ಆಗಿತ್ತು. ಅಲ್ಲದೇ ಮುಕ್ಕಾಲು ಭಾಗ ತುಂಡರಿಸಿತ್ತು. ಮಂಡಿಯ ಮೇಲ್ಭಾಗದಲ್ಲೂ ತೀವ್ರ ಪೆಟ್ಟಾಗಿತ್ತು. ಹಾಗಾಗಿ ಮಣಿಪಾಲ್ ಆಸ್ಪತ್ರೆಯ (Manipal Hospital) ವೈದ್ಯರು ಮಂಡಿಯ ಕೆಳಭಾಗವನ್ನು ಕತ್ತರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆಯೇ ನಟ ಶಿವರಾಜ್ ಕುಮಾರ್ (Shivraj Kumar), ನಿರ್ಮಾಪಕ ಚಿನ್ನೇಗೌಡ ಮತ್ತು ಧ್ರುವನ್ ಸಿನಿಮಾದ ನಿರ್ದೇಶಕರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

    ಘಟನೆ ವಿವರ :

    ನಟ ಸೂರಜ್ (ಧ್ರುವನ್) ನಿನ್ನೆ ಬುಲೆಟ್ ನಲ್ಲಿ ಊಟಿಗೆ ಪ್ರವಾಸಕ್ಕೆ ಹೋಗುತ್ತಿದ್ದರು. ಮಾರ್ಗಮಧ್ಯೆ ಟ್ರ್ಯಾಕ್ಟರ್ ಅನ್ನು ಹಿಂದಿಕ್ಕಿ ಹೋಗುತ್ತಿದ್ದಾಗ ಮುಂದಿನಿಂದ ಬಂದ ಟಿಪ್ಪರ್ ಸೂರಜ್ ಮೇಲೆ ಹರಿದಿದೆ ಎಂದು ಹೇಳಲಾಘುತ್ತಿದೆ. ಚಾಮರಾಜನಗರ ಬೇಗೂರು (ಗುಂಡ್ಲುಪೇಟೆ) ಸಮೀಪದ ಹಿರಿಕಾಟಿ ಗೇಟ್ ಬಳಿ ಈ ಘಟನೆ ನಡೆದಿದ್ದು, ಬೈಕ್ ಸವಾರ ಸೂರಜ್ ತೀವ್ರವಾಗಿ ಗಾಯಗೊಂಡಿದ್ದರು

    ಬೇಗೂರಿನಿಂದ ಹಿರಿಕಾಟಿ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ಅದಾಗಿದ್ದು, ಮೈಸೂರು ಕಡೆಯಿಂದ ಬರುತ್ತಿದ್ದ ಸೂರಜ್ ಬುಲೆಟ್ ಬೈಕ್ ಗೆ ಡಿಕ್ಕಿ  ಹೊಡೆದಿದೆ. ವಿಷಯ ತಿಳಿದ ಬೇಗೂರು ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಗಾಯಾಳವನ್ನು ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಇದನ್ನೂ ಓದಿ:ಕಾಸ್ಟಿಂಗ್ ಕೌಚ್ ಬಗ್ಗೆ ಕಿಡಿಕಾರಿದ ನಟ ರಾಜೀವ್ ಖಂಡೇಲ್ವಾಲ್

    ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಸೂರಜ್ ಆಪ್ತರು ನೀಡಿದ ಮಾಹಿತಿಯಂತೆ ನಿನ್ನೆಯೇ ಅವರಿಗೆ ಶಸ್ತ್ರ ಚಿಕಿತ್ಸೆ ನೀಡಲಾಗಿದ್ದು, ಕಾಲಿಗೆ ತೀವ್ರವಾಗಿ ಪೆಟ್ಟಾಗಿದ್ದರಿಂದ ಒಂದು ಕಾಲು ಕತ್ತರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನೂ ಅವರಿಗೆ ಪ್ರಜ್ಞೆ ಬಾರದೇ ಇರುವ ಹಿನ್ನೆಲೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆಯಂತೆ.

     

    ಮೂಲ ಸೂರಜ್ ಅಂತಿದ್ದ ಹೆಸರನ್ನು ಧ್ರುವನ್ ಅಂತ ಬದಲಾಯಿಸಿಕೊಂಡು ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದ್ದರು. ಭಗವಾನ್ ಶ್ರೀಕೃಷ್ಣ ಪರಮಾತ್ಮ ಸಿನಿಮಾ ಸೇರಿದಂತೆ ಹಲವು ಚಿತ್ರಗಳಲ್ಲಿ ಇವರು ನಟಿಸಿದ್ದಾರೆ.

  • ಮೈಸೂರಿನಲ್ಲಿ ಭೀಕರ ರಸ್ತೆ ಅಪಘಾತ – ಗ್ರಾಪಂ ಸದಸ್ಯ ಸ್ಥಳದಲ್ಲೇ ಸಾವು

    ಮೈಸೂರಿನಲ್ಲಿ ಭೀಕರ ರಸ್ತೆ ಅಪಘಾತ – ಗ್ರಾಪಂ ಸದಸ್ಯ ಸ್ಥಳದಲ್ಲೇ ಸಾವು

    ಮೈಸೂರು: ಸಾರಿಗೆ ಬಸ್ (Bus) ಹಾಗೂ ಸ್ವಿಫ್ಟ್ ಕಾರಿನ (Swift Car) ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಗ್ರಾಮ ಪಂಚಾಯಿತಿ ಸದಸ್ಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

    ಮೈಸೂರು (Mysuru) ಜಿಲ್ಲೆ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಗ್ರಾಮದ ಬಳಿ ಘಟನೆ ನಡೆದಿದ್ದು, ನಿಲುವಾಗಿಲು ಗ್ರಾಪಂ ಸದಸ್ಯ ಭಾಸ್ಕರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಬೆಂ-ಮೈಸೂರು ಎಕ್ಸ್‌ಪ್ರೆಸ್‌ ಹೈವೇನಲ್ಲಿ ಮತ್ತೊಂದು ಭೀಕರ ಅಪಘಾತ – ಓರ್ವ ಸಾವು

    ಭಾಸ್ಕರ್ ಸ್ವಿಫ್ಟ್ ಕಾರಿನಲ್ಲಿ ತನ್ನ ಪತ್ನಿ, ಪುತ್ರ ಹಾಗೂ ತಾಯಿಯೊಂದಿಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸದ್ಯ ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ (Bilikere Police Station) ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪ್ರೀತಿ ಹೆಸರಲ್ಲಿ ದೋಖಾ – ಲವ್ ಜಿಹಾದ್‌ಗೆ ಯತ್ನಿಸಿದ ಮುಸ್ಲಿಂ ಯುವಕನಿಂದ ಯುವತಿ ಬಚಾವ್