Tag: Road Accident

  • ಬೆಂ-ಮೈಸೂರು ಎಕ್ಸ್‌ಪ್ರೆಸ್‌ ಹೈವೇನಲ್ಲಿ ಮತ್ತೊಂದು ಭೀಕರ ಅಪಘಾತ – ಓರ್ವ ಸಾವು

    ಬೆಂ-ಮೈಸೂರು ಎಕ್ಸ್‌ಪ್ರೆಸ್‌ ಹೈವೇನಲ್ಲಿ ಮತ್ತೊಂದು ಭೀಕರ ಅಪಘಾತ – ಓರ್ವ ಸಾವು

    – ಮೂವರಿಗೆ ಗಂಭೀರ ಗಾಯ

    ರಾಮನಗರ: ವೇಗವಾಗಿ ಚಲಿಸುತ್ತಿದ್ದ ಕಾರು ಡಿವೈಡರ್‌ಗೆ ಡಿಕ್ಕಿಹೊಡೆದ ಪರಿಣಾಮ ಚಾಲಕ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ (Bengaluru Mysuru Express Way) ನಡೆದಿದೆ.

    ಚನ್ನಪಟ್ಟಣ ತಾಲೂಕಿನ ಕೋಲೂರು ಗೇಟ್ ಬಳಿಯ ಚಾಮುಂಡೇಶ್ವರಿ ಆಸ್ಪತ್ರೆ ಮುಂಭಾಗ ಅಪಘಾತ (Road Accident) ಸಂಭವಿಸಿದ್ದು, ಮದ್ದೂರು ಮೂಲದ ಚಾಲಕ ಮಂಜೇಶ್ (28) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡು, ಚಾಮುಂಡೇಶ್ವರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಮೈಸೂರು ಮಾರ್ಗದಿಂದ ಬರುತ್ತಿದ್ದ ಟಾಟಾ ಇಂಡಿಕಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಅಳವಡಿಸಿದ್ದ ಡಿವೈಡರ್‌ಗೆ ಡಿಕ್ಕಿಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.  ಇದನ್ನೂ ಓದಿ: ಬೆಂ-ಮೈಸೂರು ಎಕ್ಸ್‌ಪ್ರೆಸ್ ಹೈವೇನಲ್ಲಿ ಭಯಾನಕ ಅಪಘಾತ- 5 ತಿಂಗಳಲ್ಲೇ 55 ಮಂದಿ ಸಾವು!

    ಇನ್ನೂ ರಸ್ತೆ ಅಪಘಾತದ ಹಿನ್ನೆಲೆಯಲ್ಲಿ ಬೆಂ-ಮೈಸೂರು ಎಕ್ಸ್‌ಪ್ರೇಸ್‌ವೇನಲ್ಲಿ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಅಪಘಾತದಿಂದಾಗಿ ಕೆಲಕಾಲ ಟ್ರಾಫಿಕ್‌ಜಾಮ್ ಆಗಿ ಪ್ರಯಾಣಿಕರು ಪರದಾಡುವಂತಾಗಿತ್ತು. ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು (Channapattana Rural Police) ಭೇಟಿ ನೀಡಿ ಸಂಚಾರ ಸುಗಮಗೊಳಿಸಿದರು.

    ಚನ್ನಪಟ್ಟಣ ಸಂಚಾರ ಪೊಲೀಸ್ ಠಾಣೆಯಲ್ಲಿ (Channapattana Traffic Police) ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮುಂಬೈ, ದೆಹಲಿಯಷ್ಟೇ ಅಲ್ಲ ಬೆಂಗ್ಳೂರಲ್ಲೂ ಹೆಚ್ಚಾಗ್ತಿದೆ ಲಿವಿಂಗ್ ರಿಲೇಷನ್ ಕೊಲೆ ಕೇಸ್

  • ಕೊಪ್ಪಳದಲ್ಲಿ ಭೀಕರ ಅಪಘಾತಕ್ಕೆ ಕಾರು ಅಪ್ಪಚ್ಚಿ – ಸ್ಥಳದಲ್ಲೇ 6 ಮಂದಿ ದುರ್ಮರಣ

    ಕೊಪ್ಪಳದಲ್ಲಿ ಭೀಕರ ಅಪಘಾತಕ್ಕೆ ಕಾರು ಅಪ್ಪಚ್ಚಿ – ಸ್ಥಳದಲ್ಲೇ 6 ಮಂದಿ ದುರ್ಮರಣ

    ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

    ಕೊಪ್ಪಳ: ಇಲ್ಲಿನ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಕಾರು ಮತ್ತು ಲಾರಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ 6 ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

    ರಾಜಪ್ಪ ಬನಗೋಡಿ, ರಾಘವೇಂದ್ರ, ಅಕ್ಷಯ ಶಿವಶರಣ, ಜಯಶ್ರೀ, ರಾಖಿ, ರಶ್ಮಿಕಾ ಮೃತ ದುರ್ದೈವಿಗಳು. ಇವರು ವಿಜಯಪುರದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಇದನ್ನೂ ಓದಿ: Manipur Violence: ಮಣಿಪುರದಲ್ಲಿ 40 ಮಂದಿ ದಂಗೆಕೋರರ ಹತ್ಯೆ – ಇಂಟರ್ನೆಟ್ ಸೇವೆ ಬಂದ್

    ಅಪಘಾತ ಹೇಗಾಯ್ತು?
    ವಿಜಯಪುರಿಂದ ಬೆಂಗಳೂರಿಗೆ 6 ಮಂದಿಯಿದ್ದ ಇಂಡಿಕಾ ಕಾರು ಹೊರಟಿತ್ತು. ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಬರುತ್ತಿದ್ದಾಗ ಕಾರಿನ ಟೈರ್‌ ಸ್ಫೋಟಗೊಂಡಿದೆ. ಈ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಮತ್ತೊಂದು ಬದಿಯಲ್ಲಿ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

    ಡಿಕ್ಕಿ ಹೊಡೆದ ರಭಸಕ್ಕೆ ಕಾರು ಅಪ್ಪಚ್ಚಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ 6 ಮಂದಿ ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರಲ್ಲಿ ಎಳೆಯರೂ ಇದ್ದರು ಎನ್ನಲಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸ್‌ ಸಿಬ್ಬಂದಿ ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಟ್ಟರು. ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    ಕೊಪ್ಪಳ ಜಿಲ್ಲೆಯ ಭೀಕರ ಅಪಘಾತಕ್ಕೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಮೃತರ ಕುಟಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಒಂದಲ್ಲ ಎರಡಲ್ಲ.. 40 ಚ್ಯೂಯಿಂಗ್‌ ಗಮ್‌ ನುಂಗಿದ 5 ವರ್ಷದ ಬಾಲಕ – ಮುಂದೇನಾಯ್ತು?

  • ಮೊದಲ ಮತದಾನಕ್ಕೆ ಬಂದು ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ವಿದ್ಯಾರ್ಥಿನಿ

    ಮೊದಲ ಮತದಾನಕ್ಕೆ ಬಂದು ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ವಿದ್ಯಾರ್ಥಿನಿ

    ರಾಯಚೂರು: ತನ್ನ ಮೊದಲ ಮತದಾನ (Voting) ಮಾಡಲು ಉತ್ಸಾಹದಲ್ಲಿ ಸ್ವಗ್ರಾಮಕ್ಕೆ ಬಂದಿದ್ದ ವಿದ್ಯಾರ್ಥಿನಿ ಮತದಾನ ನಂತರ ಅಪಘಾತಕ್ಕೆ ಒಳಗಾಗಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ಲಿಂಗಸುಗೂರಿನ ಮುದಗಲ್ ಬಳಿ ಮೇ 10 ರಂದು ಅಪಘಾತ ನಡೆದಿದೆ.

    ಮತದಾನ ಮಾಡಿ ಬೈಕ್‌ನಲ್ಲಿ ಮನೆಗೆ ಮರಳುವಾಗ ಬೈಕ್ ಹಾಗೂ ಎರಡು ಕಾರುಗಳ ನಡುವೆ ಭೀಕರ ರಸ್ತೆ ಅಪಘಾತ (Road Accident) ನಡೆದಿದ್ದು, 20 ವರ್ಷದ ಸನಾ ಗಂಭೀರವಾಗಿ ಗಾಯಗೊಂಡಿದ್ದಾಳೆ. ಮೊದಲ ಬಾರಿಗೆ ಮತದಾನ ಮಾಡಲು ಧಾರವಾಡದಿಂದ ಹಟ್ಟಿ ಪಟ್ಟಣಕ್ಕೆ ಬಂದಿದ್ದಳು. ಮಸ್ಕಿ ವಿಧಾನಸಭಾ ಕ್ಷೇತ್ರದ ಜಕ್ಕಲುಮರಡಿಯಲ್ಲಿ ಮತದಾನ ಮಾಡಿ ವಾಸವಿರುವ ಹಟ್ಟಿಗೆ ಬೈಕ್‌ನಲ್ಲಿ ಮರಳುವಾಗ ಮುದಗಲ್ ಬಳಿ ಅಪಘಾತ ನಡೆದಿದೆ. ಇದನ್ನೂ ಓದಿ: ಬಿಎಸ್‍ವೈ ಕಣ್ಣೀರು ಹಾಕಿ ರಾಜೀನಾಮೆ ಕೊಟ್ಟು ಬಂದಾಗಿನಿಂದ ಇಂಪ್ಯಾಕ್ಟ್ ಆಯ್ತು: ಶೆಟ್ಟರ್

    ಧಾರವಾಡದಲ್ಲಿ ಬಿಎಸ್‌ಸಿ ನರ್ಸಿಂಗ್ ಓದುತ್ತಿರುವ ವಿದ್ಯಾರ್ಥಿನಿಗೆ (BSC Nursing Student) ಅಪಘಾತದಲ್ಲಿ ಕೈ, ಕಾಲು ಮುರಿತವಾಗಿದ್ದು, ಕಿಡ್ನಿ ಭಾಗದಲ್ಲಿ ಗಂಭೀರ ಗಾಯಗಳಾಗಿವೆ. ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಮಗಳ ಚಿಕಿತ್ಸೆಗೆ ಪರದಾಡುತ್ತಿರುವ ಬಡ ಪೋಷಕರು ಆಘಾತಕ್ಕೊಳಗಾಗಿದ್ದಾರೆ. ಮನೆಗೆ ಆಧಾರವಾಗಬೇಕಿದ್ದ ಮಗಳ ಚಿಕಿತ್ಸಾ ವೆಚ್ಚ ಭರಿಸಲಾಗದೆ ಪೋಷಕರು ಕಂಗಾಲಾಗಿದ್ದಾರೆ. ಇದನ್ನೂ ಓದಿ: ಸಚಿನ್‌ ಪೈಲೆಟ್‌ಗೆ ರಾಹುಲ್‌ ಆರಂಭದಲ್ಲಿ ಮಾತು ಕೊಟ್ಟಿದ್ದರು, ನಂತರ ಏನಾಯ್ತು? – ವೇಣುಗೋಪಾಲ್‌ಗೆ ಉಲ್ಟಾ ಹೊಡೆದ ಡಿಕೆಶಿ

  • ಕ್ರೇಜ್‌ಗಾಗಿ 300km ವೇಗದಲ್ಲಿ ಸೂಪರ್‌ ಬೈಕ್‌ ರೈಡಿಂಗ್‌ – ಯೂಟ್ಯೂಬರ್‌ ಸಾವು

    ಕ್ರೇಜ್‌ಗಾಗಿ 300km ವೇಗದಲ್ಲಿ ಸೂಪರ್‌ ಬೈಕ್‌ ರೈಡಿಂಗ್‌ – ಯೂಟ್ಯೂಬರ್‌ ಸಾವು

    ಲಕ್ನೋ: ತನ್ನ ಯೂಟ್ಯೂಬ್‌ ಚಾನೆಲ್‌ಗೆ ವೀಡಿಯೋ ಮಾಡುವ ಸಲುವಾಗಿ 300 ಕಿಮೀ ವೇಗದಲ್ಲಿ ಬೈಕ್‌ (SuperBike) ಚಲಿಸುತ್ತಿದ್ದಾಗ ಭೀಕರ ಅಪಘಾತಕ್ಕೀಡಾಗಿ ಯೂಟ್ಯೂಬರ್‌ (YouTuber) ಸಾನ್ನಪ್ಪಿರುವ ಘಟನೆ ಉತ್ತರಪ್ರದೇಶದ (UttarPradesh) ಯಮುನಾ ಎಕ್ಸ್‌ಪ್ರೆಸ್‌ವೇ ನಲ್ಲಿ ನಡೆದಿದೆ.

    ಯೂಟ್ಯೂಬರ್‌ ಅಗಸ್ತೆ ಚೌಹಾಣ್‌ ಕವಾಸಕಿ ನಿಂಜಾ ZX10R – 1,000CC ಸೂಪರ್ ಬೈಕ್ ನಲ್ಲಿ ಆಗ್ರಾದಿಂದ ದೆಹಲಿಗೆ ಬರುತ್ತಿದ್ದ ವೇಳೆ ತನ್ನ ಚಾನೆಲ್‌ಗಾಗಿ ವೀಡಿಯೋ ಮಾಡುತ್ತಿದ್ದನು. ಅದಕ್ಕಾಗಿ 300 ಕಿಮೀ ವೇಗದಲ್ಲಿ ಬೈಕ್‌ ಚಾಲನೆ ಮಾಡುತ್ತಿದ್ದಾಗ ಭೀಕರ ಅಪಘಾತಕ್ಕೀಡಾಗಿದ್ದಾನೆ. ಸ್ನೇಹಿತರು ಸಾವಿನ ಸುದ್ದಿ ಕೇಳಿ ಆತಂಕಗೊಂಡಿದ್ದಾರೆ. ಇದನ್ನೂ ಓದಿ: ಸೇನಾ ವಾಹನದ ಮೇಲೆ ದಾಳಿ ಪ್ರಕರಣ – ಉಗ್ರರನ್ನು ಸುತ್ತುವರಿದ ಸೇನೆ, ಇಬ್ಬರು ಯೋಧರು ಸಾವು

    ಮೂಲಗಳ ಪ್ರಕಾರ, ಯೂಟ್ಯೂಬರ್‌ ಬೈಕ್‌ ನಿಯಂತ್ರಣ ತಪ್ಪಿ ಯಮುನಾ ಎಕ್ಸ್‌ಪ್ರೆಸ್‌ವೇ ಡಿವೈಡರ್‌ಗೆ ಡಿಕ್ಕಿ ಹೊಡೆದ್ದಾನೆ. ಬೈಕ್‌ ಡಿಕ್ಕಿ ಹೊಡೆದ ರಭಸಕ್ಕೆ ಹೆಲ್ಮೆಟ್‌ ತುಂಡುತುಂಡಾಗಿದೆ, ತಲೆಗೆ ಗಂಭೀರ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಅಲಿಘರ್‌ನ ತಪ್ಪಲ್ ಪೊಲೀಸ್ ಠಾಣೆ ವ್ಯಾಪ್ತಿಯ 47 ಮೈಲ್ ಪಾಯಿಂಟ್‌ನಲ್ಲಿ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಒಂದು ಸೆಕೆಂಡ್‌ನಲ್ಲಿ ನಿನ್ನನ್ನು ಭಯೋತ್ಪಾದಕ ಅಂತ ಘೋಷಿಸುತ್ತೇನೆ – ಶಿಕ್ಷಕನಿಗೆ ಬಿಹಾರ ಪೊಲೀಸ್ ಬೆದರಿಕೆ

    ಅಗಸ್ತೆ ಉತ್ತರಾಖಂಡದ ಡೆಹ್ರಾಡೂನ್ ನಿವಾಸಿಯಾಗಿದ್ದು, ʻಪ್ರೊ ರೈಡರ್ 1000ʼ ಎಂಬ ಶೀರ್ಷಿಕೆಯ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ. ಸುಮಾರು 12 ಲಕ್ಷ ಚಂದಾದಾರರನ್ನ ಹೊಂದಿದ್ದ. ತಾನು ದೆಹಲಿಗೆ ಹೋಗುತ್ತಿರುವುದಾಗಿ ತನ್ನ ಚಾನೆಲ್‌ಗೆ ಕೊನೆಯ ವೀಡಿಯೋ ಅಪ್ಲೋಡ್‌ ಮಾಡಿದ್ದ. ದೆಹಲಿಗೆ ಮತ್ತೆ ಮರಳುವಾಗ ನಾನು 300 ಕಿಮೀ ವೇಗದಲ್ಲಿ ಬೈಕ್‌ ಓಡಿಸುವುದನ್ನ ತೋರಿಸುತ್ತೇನೆ ಎಂದು ಹೇಳಿದ್ದ. ಅದಕ್ಕಾಗಿ ವೀಡಿಯೋ ಮಾಡಲು ಹೋಗಿ ಬೈಕ್‌ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಯೂಟ್ಯೂಬರ್‌ ಸಾವಿನ ಸುದ್ದಿ ಕೇಳಿದ ನೆಟ್ಟಿಗರು ಹೆದ್ದಾರಿ ಅಥವಾ ಎಕ್ಸ್‌ಪ್ರೆಸ್‌ ವೇಗಳಲ್ಲಿ ಬೈಕ್‌ ಓಡಿಸುವ ಮುನ್ನ ಎಚ್ಚರಿಕೆ ವಹಿಸಬೇಕು. ಬೈಕ್‌ ಸ್ಟಂಟ್‌ ಮಾಡುವುದು, ಅತೀ ವೇಗವಾಗಿ ಚಲಿಸುವುದು ಹಾಗೂ ಬೈಕ್‌ ಚಾಲನೆ ಮಾಡುವಾಗ ಮೊಬೈಲ್‌ ಬಳಕೆ ಮಾಡುವುದನ್ನು ಮಾಡಬಾರದು ಎಂದು ಸಲಹೆ ನೀಡಿದ್ದಾರೆ.

  • ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ – 11 ಜನ ಸ್ಥಳದಲ್ಲೇ ಸಾವು

    ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ – 11 ಜನ ಸ್ಥಳದಲ್ಲೇ ಸಾವು

    ರಾಯ್ಪುರ: ಪಿಕಪ್ ವಾಹನಕ್ಕೆ (Pickup Vehicle) ಟ್ರಕ್ (Truck) ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಕ್ಕಳು ಸೇರಿದಂತೆ 11 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ಛತ್ತೀಸ್‌ಗಢದ (Chhattisgarh) ಬುಲೋದಬಜಾರ್-ಭಟಪರಾ ರಸ್ತೆಯಲ್ಲಿ ನಡೆದಿದೆ.

    ರಾಜಧಾನಿ ರಾಯ್ಪುರದಿಂದ ಸುಮಾರು 70 ಕಿ.ಮೀ ದೂರಲ್ಲಿರುವ ಬಲೋದಬಜಾರ್-ಭಟಪರಾ ರಸ್ತೆಯಲ್ಲಿ ಗುರುವಾರ ತಡರಾತ್ರಿ ಭೀಕರ ಅಪಘಾತ (Accident) ಸಂಭವಿಸಿದೆ. ಘಟನೆಯಲ್ಲಿ 11 ಜನರು ಸ್ಥಳದಲ್ಲೇ ಸಾವನ್ನಪ್ಪಿದರೆ, 12 ಜನರು ಗಾಯಗೊಂಡಿದ್ದಾರೆ.

    ಸಂತ್ರಸ್ತರು ಸಿಮ್ಗಾ ಪ್ರದೇಶದ ಖಿಲೋರಾ ಗ್ರಾಮದವರಾಗಿದ್ದು, ಅರ್ಜುನಿ ಪ್ರದೇಶದಲ್ಲಿ ಕುಟುಂಬದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದರು. ಈ ವೇಳೆ ಪಿಕಪ್ ವಾಹನ ಹಾಗೂ ಟ್ರಕ್ ಮುಖಾಮುಖಿ ಡಿಕ್ಕಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಬಾಬಾಬುಡನ್‌ ಗಿರಿ ಉರುಸ್‍ನಲ್ಲಿ ನಾವು ಪಾಲ್ಗೊಳ್ಳಲ್ಲ – ವ್ಯವಸ್ಥಾಪನಾ ಸಮಿತಿ ವಿರುದ್ಧ ಮುಸ್ಲಿಮರ ಕಿಡಿ

    ಸಾವನ್ನಪ್ಪಿದವರ ಪೈಕಿ ನಾಲ್ವರು ಮಕ್ಕಳು ಸೇರಿದ್ದಾರೆ. 12 ಮಂದಿ ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅವರಿಬ್ಬರನ್ನು ರಾಯ್ಪುರದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಇತರ 10 ಗಾಯಾಳುಗಳನ್ನು ಬುಲೋದಬಜಾರ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

    ಅಪಘಾತದ ಬಳಿಕ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಆತನನ್ನು ಪತ್ತೆ ಹಚ್ಚಲು ಪ್ರಯತ್ನಿಸಲಾಗುತ್ತಿದೆ. ಭೀಕರ ಅಪಘಾತದ ಬಗ್ಗೆ ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ಎಲ್ಲಾ ನೆರವು ಹಾಗೂ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಿಂದ ಹಣದ ಹೊಳೆ- ಶ್ರೀನಿವಾಸ್ ವಿರುದ್ಧ ವ್ಯಾಪಕ ಆಕ್ರೋಶ

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕಾರು, ಟ್ಯಾಂಕರ್ ನಡುವೆ ಭೀಕರ ಅಪಘಾತ – ಪ್ರವಾಸಕ್ಕೆ ತೆರಳುತ್ತಿದ್ದ ಮೂವರು ಮಸಣಕ್ಕೆ

    ಕಾರು, ಟ್ಯಾಂಕರ್ ನಡುವೆ ಭೀಕರ ಅಪಘಾತ – ಪ್ರವಾಸಕ್ಕೆ ತೆರಳುತ್ತಿದ್ದ ಮೂವರು ಮಸಣಕ್ಕೆ

    ಹುಬ್ಬಳ್ಳಿ: ಕಾರು (Car) ಮತ್ತು ಟ್ಯಾಂಕರ್ (Tanker) ನಡುವೆ ಭೀಕರ ಅಪಘಾತ (Accident) ಸಂಭವಿಸಿದ ಪರಿಣಾಮ ಪ್ರವಾಸಕ್ಕೆ ತೆರಳುತ್ತಿದ್ದ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಧಾರವಾಡ (Dharwad) ಜಿಲ್ಲೆಯಲ್ಲಿ ನಡೆದಿದೆ.

    ಕಲಘಟಗಿ (Kalaghatgi) ತಾಲೂಕಿನ ಸಂಗಟಿಕೊಪ್ಪ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಪ್ರವಾಸಕ್ಕೆ ಹೊರಟಿದ್ದ ಮೊಹಮ್ಮದ್ ಇಶಾನ್, ಮೊಹಮ್ಮದ್ ಸೈಫ್ ಹಾಗೂ ಇಸ್ಮಾಯಿಲ್ ಸಾವನ್ನಪ್ಪಿದ್ದಾರೆ. ಮೃತ ಯುವಕರನ್ನು ಹುಬ್ಬಳ್ಳಿ ನಿವಾಸಿಗಳೆಂದು ಗುರುತಿಸಲಾಗಿದೆ.

    ಒಟ್ಟು 6 ಯುವಕರು ಹುಬ್ಬಳ್ಳಿಯಿಂದ ತಮ್ಮ ಕಾರಿನಲ್ಲಿ ಕಾರವಾರದ ಕಡೆ ಪ್ರವಾಸಕ್ಕೆ ತೆರಳುತ್ತಿದ್ದರು. ಈ ವೇಳೆ ಸಂಗಟಿಕೊಪ್ಪದಲ್ಲಿ ಟ್ಯಾಂಕರ್ ಹಾಗೂ ಕಾರಿನ ನಡುವೆ ಅಪಘಾತ ಉಂಟಾಗಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಓರ್ವ ಯುವಕ ಚಿಕಿತ್ಸೆ ಫಲಕಾರಿಯಾಗದೇ ಕಿಮ್ಸ್‌ನಲ್ಲಿ ಕೊನೆಯುಸಿರೆಳೆದ್ದಾನೆ. ಇದನ್ನೂ ಓದಿ: ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಘಟನೆ – ಮೃತದೇಹವನ್ನು ಹಲವು ಕಿ.ಮೀ ಎಳೆದೊಯ್ದ ಕಾರು

    ಯುವಕರು ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದಾಗ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋಗಳನ್ನು ಕೂಡಾ ಅಪ್ಲೋಡ್ ಮಾಡಿದ್ದರು. ಘಟನೆ ಬಗ್ಗೆ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 13ರ ಬಾಲಕಿಗೆ 114 ಬಾರಿ ಇರಿದು ಕೊಂದ ಸಹಪಾಠಿ ತಪ್ಪೊಪ್ಪಿಗೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಾಯಿಬಾಬಾ ದರ್ಶನಕ್ಕೆ ತೆರಳ್ತಿದ್ದ ಬಸ್ ಭೀಕರ ಅಪಘಾತ – 10 ಮಂದಿ ಸಾವು, 34 ಮಂದಿಗೆ ಗಾಯ

    ಸಾಯಿಬಾಬಾ ದರ್ಶನಕ್ಕೆ ತೆರಳ್ತಿದ್ದ ಬಸ್ ಭೀಕರ ಅಪಘಾತ – 10 ಮಂದಿ ಸಾವು, 34 ಮಂದಿಗೆ ಗಾಯ

    ಮುಂಬೈ: ಶಿರಡಿ ಸಾಯಿ ಬಾಬಾ ದರ್ಶನಕ್ಕೆ ತರಳುತ್ತಿದ್ದ ಬಸ್‌ವೊಂದು ಬೆಳ್ಳಂಬೆಳಗ್ಗೆ ಭೀಕರ ಅಪಘಾತಕ್ಕೀಡಾಗಿದ್ದು (Accident), 10 ಮಂದಿ ಸಾವನ್ನಪ್ಪಿದ್ದು 34 ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ (Maharashtra) ನಡೆದಿದೆ.

    ಸಿನ್ನಾರ್ ಬಳಿಯ ನಾಸಿಕ್-ಶಿರಡಿ ಹೆದ್ದಾರಿಯ (Nashik Shirdi highway) ಪತ್ತಾರೆ ಗ್ರಾಮದ ಬಳಿ ಘಟನೆ ನಡೆದಿದೆ. ಮಹಾರಾಷ್ಟ್ರದಲ್ಲಿ ಶಿರಡಿ ಸಾಯಿಬಾಬಾ ದೇವರ ದರ್ಶನಕ್ಕಾಗಿ ತೆರಳುತ್ತಿದ್ದ ಬಸ್, ಟ್ರಕ್‌ವೊಂದಕ್ಕೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದ್ದು, 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: BJP ನೀತಿಗಳಿಂದ ಭಾರತದಲ್ಲೂ ತಾಲಿಬಾನ್‌ನಂಥ ಭಯಾನಕ ಪರಿಸ್ಥಿತಿ ಎದುರಾಗುತ್ತೆ: KCR

    ಉಲ್ಲಾಸ ನಗರದಿಂದ ಸಾಯಿಬಾಬಾ ದರ್ಶನಕ್ಕೆ ಹೊರಟಿದ್ದ 15 ಬಸ್‌ಗಳಲ್ಲಿ ಇದು ಸಹ ಒಂದಾಗಿತ್ತು. ಮೃತ 10 ಮಂದಿಯಲ್ಲಿ ಐವರು ಮಹಿಳೆಯರು, ಮೂವರು ಪುರುಷರು ಹಾಗೂ ಇಬ್ಬರು ಮಕ್ಕಳಿದ್ದಾರೆ. ಇನ್ನೂ ಗಾಯಗೊಂಡಿರುವ 34 ಮಂದಿ ನಾಸಿಕ್‌ನ ಜಿಲ್ಲಾ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಹೆದ್ದಾರಿಯನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಇದನ್ನೂ ಓದಿ: ಒಂಟಿಸಲಗ ಕಂಡು ಮೊಪೆಡ್ ನಿಲ್ಲಿಸಿ ಓಡಿದ ಸವಾರ – ಕಾಲಿನಿಂದ ಒದ್ದು ಮುನ್ನಡೆದ ಗಜರಾಜ

    ನಾಸಿಕ್-ಶಿರಡಿ ಹೆದ್ದಾರಿಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಯ ಬಗ್ಗೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಘಟನೆಯ ಕುರಿತು ತನಿಖೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಿಎಂ ಆದೇಶಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಚೀನಾದಲ್ಲಿ ಭೀಕರ ರಸ್ತೆ ಅಪಘಾತ – 19 ಮಂದಿ ಬಲಿ

    ಚೀನಾದಲ್ಲಿ ಭೀಕರ ರಸ್ತೆ ಅಪಘಾತ – 19 ಮಂದಿ ಬಲಿ

    ಬೀಜಿಂಗ್: ದಟ್ಟ ಮಂಜಿನ (Fog) ಪರಿಣಾಮವಾಗಿ ಪೂರ್ವ ಚೀನಾದ (China) ಜಿಯಾಂಗ್‌ಕ್ಸಿ ಪ್ರಾಂತ್ಯದಲ್ಲಿ ಭಾನುವಾರ ಭೀಕರ ಅಪಘಾತ (Road Accident) ಸಂಭವಿಸಿದ್ದು, 19 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 20 ಜನರು ಗಾಯಗೊಂಡಿದ್ದಾರೆ.

    ಮೃತ ವ್ಯಕ್ತಿಯ ಅಂತ್ಯಕ್ರಿಯೆಗೆ ಹೊರಟಿದ್ದ ಮೆರವಣಿಗೆಗೆ ಟ್ರಕ್‌ ಡಿಕ್ಕಿ ಹೊಡೆದಿದೆ. ಅಂತ್ಯಕ್ರಿಯೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರ ಪೈಕಿ 19 ಮಂದಿ ಮೃತಪಟ್ಟಿದ್ದಾರೆ. ಗಾಂಗ್ ಎಂಬ ಸ್ಥಳೀಯ ವ್ಯಕ್ತಿಯೊಬ್ಬರ ಪತ್ನಿಯ ಅಂತ್ಯಕ್ರಿಯೆಗೆ ಮೆರವಣಿಗೆ ಸಾಗುತ್ತಿತ್ತು. ಇದನ್ನೂ ಓದಿ: ಶಾಲೆ ಬಿಟ್ಟು ಬೀಡಿ ಕಟ್ಟುವ ಕೆಲಸ ಮಾಡುತ್ತಿದ್ದ ವ್ಯಕ್ತಿ ಅಮೆರಿಕದ ಜಡ್ಜ್

    ರಸ್ತೆಯಲ್ಲಿ ಮುಂದೆ ಮೆರವಣಿಗೆ ವಾಹನ ಸಾಗಿತ್ತು. ವಾಹನವನ್ನು ಹಿಂಬಾಲಿಸಿ ಜನರು ಸಾಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಟ್ರಕ್‌ಗೆ ಜನರ ಗುಂಪಿಗೆ ನುಗ್ಗಿದೆ. ದಟ್ಟ ಮಂಜಿನ ಕಾರಣದಿಂದ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

    ಕಟ್ಟುನಿಟ್ಟಿನ ಸುರಕ್ಷತಾ ಸಂಚಾರಿ ನಿಯಮಗಳ ಸಮಸ್ಯೆಯಿಂದಾಗಿ ಚೀನಾದಲ್ಲಿ ರಸ್ತೆ ಅಪಘಾತಗಳು ಸಾಮಾನ್ಯವಾಗಿದೆ. ಸೆಪ್ಟೆಂಬರ್‌ನಲ್ಲಿ ನೈಋತ್ಯ ಗೈಝೌ ಪ್ರಾಂತ್ಯದ ಬಳಿ ಬಸ್ ಪಲ್ಟಿಯಾದ ನಂತರ 27 ಪ್ರಯಾಣಿಕರು ಸಾವನ್ನಪ್ಪಿದ್ದರು. ಇದನ್ನೂ ಓದಿ: ಆರ್ಥಿಕ ಬಿಕ್ಕಟ್ಟು – ಪಾಕ್‌ನಲ್ಲಿ ಅಗತ್ಯ ವಸ್ತುಗಳ ಕೊರತೆ, ಚಿಕನ್ ಬೆಲೆಯೂ ಗಗನಕ್ಕೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ದೆಹಲಿ ಯುವತಿ ಹತ್ಯೆ ಕೇಸ್ – ಬಂಧಿತ ಐವರಲ್ಲಿ ಓರ್ವ ಬಿಜೆಪಿ ಸದಸ್ಯ: ಎಎಪಿ ಆರೋಪ

    ದೆಹಲಿ ಯುವತಿ ಹತ್ಯೆ ಕೇಸ್ – ಬಂಧಿತ ಐವರಲ್ಲಿ ಓರ್ವ ಬಿಜೆಪಿ ಸದಸ್ಯ: ಎಎಪಿ ಆರೋಪ

    ನವದೆಹಲಿ: ಹೊಸ ವರ್ಷದ ದಿನದಂದೇ ದೆಹಲಿಯಲ್ಲಿ (Newdelhi) ನಡೆದ ಯುವತಿಯ ಭೀಕರ ಹತ್ಯೆ ಪ್ರಕರಣದಲ್ಲಿ ಸಿಕ್ಕ ಐವರು ಆರೋಪಿಗಳಲ್ಲಿ ಒಬ್ಬರು ಬಿಜೆಪಿ (BJP) ಸದಸ್ಯ ಎಂದು ಆಮ್ ಆದ್ಮಿ ಪಕ್ಷ (AAP) ಆರೋಪಿಸಿದೆ.

    ಸುಲ್ತಾನ್‌ಪುರಿಯಲ್ಲಿ ಯುವತಿ ಅಂಜಲಿ ಚಲಿಸುತ್ತಿದ್ದ ಸ್ಕೂಟಿಗೆ ಕಾರು ಡಿಕ್ಕಿ ಹೊಡೆದು ಸುಮಾರು 12 ಕಿಮೀ ಎಳೆದೊಯ್ದು ಆಕೆ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ಮುಖ್ಯ ವಕ್ತಾರ ಸೌರಭ್ ಭಾರದ್ವಾಜ್ (Saurabh Bhardwaj) ಮಾತನಾಡಿದ್ದಾರೆ. ಇದನ್ನೂ ಓದಿ: ನಾಟಕದಲ್ಲಿ ಸಿದ್ದರಾಮಯ್ಯಗೆ ಅವಮಾನ- ರಂಗಾಯಣದ ವಿರುದ್ಧ ಅಭಿಮಾನಿಗಳ ಆಕ್ರೋಶ

    ಪ್ರಕರಣದಲ್ಲಿ ಬಂಧಿರಾಗಿರುವ ಐವರು ಆರೋಪಿಗಳಲ್ಲಿ ಒಬ್ಬರಾದ ಮನೋಜ್ ಮಿತ್ತಲ್ ಬಿಜೆಪಿ (BJP) ಸದಸ್ಯನಾಗಿದ್ದಾನೆ. ಆದ್ರೆ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ (Vinai Kumar Saxena) ಹಾಗೂ ಪೊಲೀಸ್ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಈ ಮಾಹಿತಿಯನ್ನ ಮರೆಮಾಚಿದ್ದಾರೆ. ಪೊಲೀಸ್ ಠಾಣೆಯ (Police Station) ಪಕ್ಕದಲ್ಲೇ ಇರುವ ಭಾವಚಿತ್ರದ ಬೋರ್ಡಿಂಗ್ ಸಹ ಮಿತ್ತಲ್ ಬಿಜೆಪಿ ಸದಸ್ಯ ಎಂಬುದನ್ನ ಸ್ಪಷ್ಟಪಡಿಸುತ್ತದೆ ಎಂದು ಹೇಳಿದ್ದಾರೆ.

    ಕಾರಿನಲ್ಲಿ ಸಿಕ್ಕಿಕೊಂಡಿದ್ದ ಮಹಿಳೆಯನ್ನು ಬೀದಿಯಲ್ಲಿ ಎಳೆದೊಯ್ಯುತ್ತಿರುವ ಬಗ್ಗೆ ಪ್ರತ್ಯಕ್ಷದರ್ಶಿಯೊಬ್ಬರು 22 ಬಾರಿ ಪೊಲೀಸರಿಗೆ ಕರೆ ಮಾಡಿದ್ದಾರೆ. ಆದರೂ ಪೊಲೀಸರು ಆರೋಪಿಯನ್ನ ರೆಡ್‌ಹ್ಯಾಂಡಾಗಿ ಬಂಧಿಸುವಲ್ಲಿ ವಿಫಲರಾಗಿದ್ದಾರೆ. ಅಲ್ಲದೇ ಮಾಧ್ಯಮಗಳಿಗೆ ಹೇಳಿಕೆ ನೀಡುವಾಗ, ಅವರು ತಮ್ಮ ಕಾರು ಅಪಘಾತಕ್ಕೀಡಾಗಿದೆ ಎಂದು ಆರೋಪಿಗಳು ಹೇಳಿದ್ದರು. ಆದ್ರೆ ಮಹಿಳೆಯನ್ನು ಎಳೆದೊಯ್ದಿರುವುದು ತಿಳಿದಿರಲಿಲ್ಲವೆಂಬುದಾಗಿ ಹೇಳಿದ್ದಾರೆ.

    ಇದಕ್ಕೆ ಪ್ರತಿಕ್ರಿಯಿಸಿರುವ ದೆಹಲಿ ಬಿಜೆಪಿ ಮಾಧ್ಯಮ ಘಟಕದ ಮುಖ್ಯಸ್ಥ ಹರೀಶ್ ಖುರಾನಾ, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ತಪ್ಪಿತಸ್ಥರು ಯಾವುದೇ ಪಕ್ಷಕ್ಕೆ ಸೇರಿದ್ದರೂ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನೋಟು ನಿಷೇಧದ ಅಧಿಸೂಚನೆಯೇ ಕಾನೂನುಬಾಹಿರ: ನ್ಯಾ.ನಾಗರತ್ನ

    ಏನಿದು ಘಟನೆ?
    ದೆಹಲಿಯಲ್ಲಿ ಯುವತಿ ಅಮನ್ ವಿಹಾರ್ ನಿವಾಸಿ ಅಂಜಲಿ (20) ಚಲಿಸುತ್ತಿದ್ದ ಸ್ಕೂಟಿಯು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿಯಲ್ಲಿದ್ದ ಯುವತಿಯನ್ನ 12 ಕಿಮೀ ಎಳೆದೊಯ್ದು ಆಕೆ ಸಾವನ್ನಪ್ಪಿದ್ದಳು. ಬಳಿ ನೋಂದಾಯಿತ ಕಾರಿನ ಸಂಖ್ಯೆಯ ಆಧಾರದ ಮೇಳೆ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ, ಘಟನೆಗೆ ಸಂಬಂಧಿಸಿ ಮಾರುತಿ ಸುಜಕಿ ಬಲೆನೊ ಕಾರಿನಲ್ಲಿದ್ದ ಐವರನ್ನು ಪೊಲೀಸರು ಬಂಧಿಸಿದ್ದರು. ಬಂಧಿತರಲ್ಲಿ ಕ್ರೆಡಿಟ್ ಕಾರ್ಡ್ ಸಂಗ್ರಹ ಏಜೆಂಟ್, ಚಾಲಕ ಹಾಗೂ ಪಡಿತರ ಅಂಗಡಿ ಮಾಲೀಕರಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಹೊಸ ವರ್ಷದಂದೇ ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಸಾವು

    ಹೊಸ ವರ್ಷದಂದೇ ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಸಾವು

    ಜೈಪುರ: ಹೊಸ ವರ್ಷಾಚರಣೆಯಂದು (New Year) ರಾಜಸ್ಥಾನದಲ್ಲಿ (Rajasthan) ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದ್ದು, 8 ಮಂದಿ ದಾರುಣ ಸಾವಿಗೀಡಾಗಿದ್ದಾರೆ.

    ರಾಜ್ಯದ ಸಿಕಾರ್‌ನ ಪಲ್ಸಾನಾ ರಸ್ತೆಯಲ್ಲಿ ಮೋಟಾರ್‌ಸೈಕಲ್ ಮತ್ತು ಟ್ರಕ್‌ಗೆ ಪಿಕಪ್ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಆಂಧ್ರದ ಮಾಜಿ ಸಿಎಂ ರ‍್ಯಾಲಿ ವೇಳೆ ಕಾಲ್ತುಳಿತಕ್ಕೆ ಮತ್ತೆ 3 ಬಲಿ

    ಸುಮಾರು 14 ಪ್ರಯಾಣಿಕರಿದ್ದ ಪಿಕಪ್ ವಾಹನ ಮಧ್ಯಾಹ್ನ 3:30ರ ಸುಮಾರಿಗೆ ಅಪಘಾತಕ್ಕೀಡಾಗಿದೆ. ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

    ಸುಮಾರು 14 ಪ್ರಯಾಣಿಕರಿದ್ದ ಪಿಕಪ್ ಟ್ರಕ್‌ ತನಗೆ ಎದುರು ಬರುತ್ತಿದ್ದ ಟ್ರಕ್ ಮತ್ತು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಐವರು ಪುರುಷರು ಮತ್ತು ಮೂರು ಹೆಣ್ಣುಮಕ್ಕಳು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಒಂಭತ್ತು ಮಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಿಕರ್ ಎಎಸ್‌ಪಿ ರತನ್ ಲಾಲ್ ಭಾರ್ಗವ ತಿಳಿಸಿದ್ದಾರೆ. ಇದನ್ನೂ ಓದಿ: ಭೀಕರ ಅಪಘಾತ- ಡಿಕ್ಕಿ ಹೊಡೆದು 12 ಕಿ.ಮೀ ಎಳೆದೊಯ್ದ ಕಾರು, ಯುವತಿ ದುರ್ಮರಣ

    ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಇದೊಂದು ದೊಡ್ಡ ದುರಂತ. ಗಾಯಗೊಂಡವರನ್ನು ಉಳಿಸುವ ಪ್ರಯತ್ನ ನಡೆಯುತ್ತಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಕುಟುಂಬಗಳಿಗೆ ಪರಿಹಾರ ಸಿಗುವಂತೆ ಮಾಡುವುದು ನಮ್ಮ ಪ್ರಯತ್ನ ಎಂದು ಎಎಸ್‌ಪಿ ಮಾಹಿತಿ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]