Tag: Road Accident

  • ಚಲಿಸುತ್ತಿದ್ದ ಸ್ಕೂಟಿಗೆ ಹಿಂಬದಿಯಿಂದ ಬಸ್ ಡಿಕ್ಕಿ – 13ರ ಬಾಲಕಿ ಸಾವು

    ಚಲಿಸುತ್ತಿದ್ದ ಸ್ಕೂಟಿಗೆ ಹಿಂಬದಿಯಿಂದ ಬಸ್ ಡಿಕ್ಕಿ – 13ರ ಬಾಲಕಿ ಸಾವು

    ಕಾರವಾರ: ಸ್ಕೂಟಿಯಲ್ಲಿ ಸಂಚರಿಸುತಿದ್ದ ತಂದೆ-ಮಗಳಿಗೆ ಹಿಂಬದಿಯಿಂದ ಸೀಬರ್ಡ್ ಬಸ್ ಡಿಕ್ಕಿ (Road Accident) ಹೊಡೆದು ಸ್ಥಳದಲ್ಲೇ ಬಾಲಕಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ (Karwar) ನಗರದ ಬಿಣಗಾದ ರಾಷ್ಟ್ರೀಯ ಹೆದ್ದಾರಿ-66 (National Highway) ರಲ್ಲಿ ನಡೆದಿದೆ.

    ಲವಿತಾ ಜಾರ್ಜ ಫರ್ನಾಂಡಿಸ್ (13) ಸಾವನ್ನಪ್ಪಿದ ಬಾಲಕಿ. ಆಕೆಯ ತಂದೆ ಜಾರ್ಜ್ ಫರ್ನಾಂಡಿಸ್ ಗಾಯಗೊಂಡಿದ್ದು ಕಾರವಾರದ ಕ್ರಿಮ್ಸ್ ವೈದ್ಯಕೀಯ ಕಾಲೇಜಿನ ಆಸ್ಪತ್ರೆಗೆ (KIMS Medical College Hospital) ದಾಖಲಿಸಲಾಗಿದೆ. ಇದನ್ನೂ ಓದಿ: ಹೊಸ ವರ್ಷದ ಸಂಭ್ರಮಕ್ಕೆ ಕೌಂಟ್‍ಡೌನ್- ರೂಪಾಂತರಿ ಆತಂಕ ಹಿನ್ನೆಲೆ ಸ್ಟ್ರಿಕ್ಟ್ ರೂಲ್ಸ್

    ಬೆಂಗಳೂರಿನಿಂದ (Bengaluru) ಕಾರವಾರಕ್ಕೆ ಬರುತಿದ್ದ ಸೀ ಬರ್ಡ್ ಕಂಪನಿಯ ಬಸ್, ಬಿಣಗಾದಿಂದ ಕಾರವಾರಕ್ಕೆ ಹೋಗುತಿದ್ದ ಸ್ಕೂಟಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಕಾರವಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಸ್ ಚಾಲಕನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: BREAKING: ಕೊನೆಗೂ ಗುಡ್ ನ್ಯೂಸ್ ಕೊಟ್ರು ನರೇಶ್, ಪವಿತ್ರಾ: ಮದುವೆ ಡೇಟ್ ಫಿಕ್ಸ್

    Live Tv
    [brid partner=56869869 player=32851 video=960834 autoplay=true]

  • ಚಾಲಕನಿಗೆ ಹೃದಯಾಘಾತ – ಬಸ್, ಕಾರು ನಡುವಿನ ಭೀಕರ ಅಪಘಾತದಲ್ಲಿ 9 ಸಾವು, 28 ಮಂದಿಗೆ ಗಾಯ

    ಚಾಲಕನಿಗೆ ಹೃದಯಾಘಾತ – ಬಸ್, ಕಾರು ನಡುವಿನ ಭೀಕರ ಅಪಘಾತದಲ್ಲಿ 9 ಸಾವು, 28 ಮಂದಿಗೆ ಗಾಯ

    ಗಾಂಧೀನಗರ: ನಿನ್ನೆ ತಡರಾತ್ರಿ ಗುಜರಾತ್‌ನ (Gujarat) ನವಸಾರಿ ಜಿಲ್ಲೆಯಲ್ಲಿ ಭೀಕರ ಅಪಘಾತ (Accident) ಸಂಭವಿಸಿದ್ದು, ಘಟನೆಯಲ್ಲಿ 9 ಜನರು ಸಾವನ್ನಪ್ಪಿ 28 ಜನರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಸೂರತ್‌ನಿಂದ ಪ್ರಮುಖ್ ಸ್ವಾಮಿ ಮಹಾರಾಜ್ ಶತಾಬ್ದಿ ಮಹೋತ್ಸವ ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ಒಂದು ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಾಗುತ್ತಿದ್ದ ವೇಳೆ ಟೊಯೊಟಾ ಫಾರ್ಚುನರ್ ಕಾರಿಗೆ ಡಿಕ್ಕಿ ಹೊಡೆದಿದೆ. ಘಟನೆಗೂ ಮುನ್ನ ಚಾಲಕನಿಗೆ ಹೃದಯಾಘಾತವಾಗಿದ್ದು, ಇದರಿಂದ ವಾಹನದ ನಿಯಂತ್ರಣ ತಪ್ಪಿ ಭೀಕರ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಟಿಕೆಟ್‍ಗಾಗಿ ಕಾಂಗ್ರೆಸ್ ಕಾರ್ಯಕರ್ತರ ಸಮರ- ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಭುಗಿಲೆದ್ದ ಆಕ್ರೋಶ

    ಘಟನೆಯಲ್ಲಿ ಕಾರಿನಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ. ಬಸ್‌ನಲ್ಲಿದ್ದ 28 ಜನರು ಗಾಯಗೊಂಡಿದ್ದಾರೆ. 11 ಜನ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿದ್ದು, ಬಳಿಕ ಪೊಲೀಸರು ಕ್ರೇನ್ ಬಳಸಿ ಬಸ್ ಅನ್ನು ರಸ್ತೆಯಿಂದ ತೆರವುಗೊಳಿಸಿದ್ದಾರೆ. ಬಳಿಕ ಸಂಚಾರ ಎಂದಿನಂತೆ ಪುನರಾರಂಭವಾಗಿದೆ. ಇದನ್ನೂ ಓದಿ: ನಾವು ಕೂಗಾಡಿದ್ರೂ ಸಹಾಯಕ್ಕೆ ಯಾರೊಬ್ಬರೂ ಬರಲಿಲ್ಲ- ಪಂತ್ ರಕ್ಷಿಸಿದ ಬಸ್ ಡ್ರೈವರ್‌ ಬಿಚ್ಚಿಟ್ಟ ಸತ್ಯ

    Live Tv
    [brid partner=56869869 player=32851 video=960834 autoplay=true]

  • ಭೀಕರ ರಸ್ತೆ ಅಪಘಾತ- ಶಬರಿಮಲೆಯಿಂದ ಹಿಂದಿರುಗುತ್ತಿದ್ದ 8 ಯಾತ್ರಿಕರು ಸಾವು

    ಭೀಕರ ರಸ್ತೆ ಅಪಘಾತ- ಶಬರಿಮಲೆಯಿಂದ ಹಿಂದಿರುಗುತ್ತಿದ್ದ 8 ಯಾತ್ರಿಕರು ಸಾವು

    ಚೆನ್ನೈ: ರಸ್ತೆ ಅಪಘಾತದಲ್ಲಿ (Road Accident) ಶಬರಿಮಲೆಯಿಂದ (Sabarimala) ಹಿಂದಿರುಗುತ್ತಿದ್ದ 8 ಮಂದಿ ಸಾವನ್ನಪ್ಪಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

    ತಮಿಳುನಾಡಿನ ತೇಣಿ ಜಿಲ್ಲೆಯ ಕುಮುಲಿ ಮೌಂಟೇನ್ ಪಾಸ್‍ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಪರಿಣಾಮ ಕಾರು 40 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ. ಈ ವೇಳೆ ಕಾರಿನಲ್ಲಿದ್ದ 8 ಭಕ್ತರು (Pilgrims) ಸಾವನ್ನಪ್ಪಿದ್ದಾರೆ. ಇನ್ನುಳಿದ ಮಗು ಸೇರಿದಂತೆ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

    crime

    ಘಟನೆಗೆ ಸಂಬಂಧಿಸಿ ಸ್ಥಳಕ್ಕೆ ಧಾವಿಸಿದ ಪೊಲೀಸರು ಕಾರಿನಲ್ಲಿದ್ದ ಇಬ್ಬರನ್ನು ರಕ್ಷಿಸಿ ತಕ್ಷಣ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತಪಟ್ಟ ಎಲ್ಲಾ ಪ್ರಯಾಣಿಕರು ಥೇಣು ಆಂಡಿಪೆಟ್ಟಿಯ ಮೂಲದವರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಕೋವಿಡ್ ಮಾರ್ಗಸೂಚಿ ಪ್ರಕಟ

    ಘಟನೆಗೆ ಸಂಬಂಧಿಸಿ ಕೇಂದ್ರ ವಿದೇಶಾಂಗ ಮತ್ತು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾದ ವಿ ಮುರಳೀಧರನ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಖಾಸಗಿ ಬಸ್ ಪಲ್ಟಿ – ನಾಲ್ವರು ವಿದ್ಯಾರ್ಥಿಗಳು ಸೇರಿ ಏಳು ಮಂದಿಗೆ ಗಾಯ

    Live Tv
    [brid partner=56869869 player=32851 video=960834 autoplay=true]

  • ಐಷಾರಾಮಿ ಕಾರು ಡಿಕ್ಕಿ – ಭೀಕರ ಅಪಘಾತಕ್ಕೆ 24ರ ಯುವತಿ ಸಾವು

    ಐಷಾರಾಮಿ ಕಾರು ಡಿಕ್ಕಿ – ಭೀಕರ ಅಪಘಾತಕ್ಕೆ 24ರ ಯುವತಿ ಸಾವು

    ಲಕ್ನೊ: ಐಷಾರಾಮಿ ಕಾರೊಂದು (Luxury Car) ಯುವತಿಯ ದ್ವಿಚಕ್ರ ವಾಹನಕ್ಕೆ ಗುದ್ದಿ, ಕೆಲ ಮೀಟರ್‌ಗಳ ದೂರ ಎಳೆದೊಯ್ದು ಭೀರಕವಾಗಿ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ (Uttar Pradesh) ನೋಯ್ಡಾದಲ್ಲಿ ನಡೆದಿದೆ.

    ದೀಪಿಕಾ ತ್ರಿಪಾಠಿ (24) ಮೃತಪಟ್ಟ ಯುವತಿ. ನೋಯ್ಡಾದ ಸೆಕ್ಟರ್ 96ನಲ್ಲಿ ಡಿವೈಡರ್ ನಿಂದ ತಮ್ಮ ಕಚೇರಿಗೆ ತಿರುವು ತೆಗೆದುಕೊಳ್ಳುತ್ತಿದ್ದಾಗ ಶರವೇಗದಲ್ಲಿ ಬಂದ ಜಾಗ್ವಾರ್ ಕಾರು (Jaguar Car) ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಅಲ್ಲದೇ ಕೆಲದೂರದ ವರೆಗೆ ಎಳೆದೊಯ್ದರಿಂದ ಆಕೆ ಸಾವನ್ನಪ್ಪಿದ್ದಾಳೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

    ಕಾರಿನ ಚಾಲಕ ಹರಿಯಾಣ ಮೂಲದ ಸ್ಯಾಮ್ಯುಯೆಲ್ ಆಂಡ್ರ‍್ಯೂ ಪೈಸ್ಟರ್ ತನ್ನ ಕಾರನ್ನು ಬಿಟ್ಟು ಪರಾರಿಯಾಗಿದ್ದಾನೆ. ಬಳಿಕ ಪೊಲೀಸರು ಆತನನ್ನು ಪತ್ತೆ ಮಾಡಿ ಬಂಧಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕ ಚುನಾವಣೆಗೆ ಹಿಂದುತ್ವ, ದೇಶಾಭಿಮಾನವೇ ಬಿಜೆಪಿ ತಂತ್ರ- ಸಚಿವರಿಗೆ ಹೈಕಮಾಂಡ್ ಟಾಸ್ಕ್ ಡೆಡ್ ಲೈನ್

    ತೀವ್ರವಾಗಿ ಗಾಯಗೊಂಡಿದ್ದ ಯುವತಿಯನ್ನು ಸ್ಥಳೀಯರು ಆಸ್ಪತ್ರೆಗೆ (Hospital) ಕರೆದೊಯ್ದರು, ಆದರೆ ಆಕೆ ಆಸ್ಪತ್ರೆ ತಲುಪುವಷ್ಟರಲ್ಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ನಂತರ ತಿಳಿಸಿದ್ದಾರೆ. ಇದನ್ನೂ ಓದಿ: ಮೋರ್ಬಿ ಸೇತುವೆ ದುರಂತದ ಬಗ್ಗೆ ಟ್ವೀಟ್ ಮಾಡಿದ TMC ವಕ್ತಾರ ಅರೆಸ್ಟ್ – ಮೋದಿ ವಿರುದ್ಧ ಮಮತಾ ಗರಂ

    ದೀಪಿಕಾ ಅವರ ಸಹೋದರ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಅಪಘಾತವಾದ್ರೂ ಆಸ್ಪತ್ರೆಗೆ ಸೇರಿಸಲು ಹಿಂದೇಟು – ನಿನ್ಯಾವ ಸೀಮೆ MLC ಎಂದು ರವಿಕುಮಾರ್‌ಗೆ ಕ್ಲಾಸ್

    ಅಪಘಾತವಾದ್ರೂ ಆಸ್ಪತ್ರೆಗೆ ಸೇರಿಸಲು ಹಿಂದೇಟು – ನಿನ್ಯಾವ ಸೀಮೆ MLC ಎಂದು ರವಿಕುಮಾರ್‌ಗೆ ಕ್ಲಾಸ್

    ಕೋಲಾರ: ವಿಧಾನ ಪರಿಷತ್ ಸದಸ್ಯ (MLC) ಹಾಗೂ ಬಿಜೆಪಿ (BJP) ರಾಜ್ಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ರವಿಕುಮಾರ್ (Ravikumar) ಅವರ ಕಾರು ಬೈಕ್‌ವೊಂದಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಕೋಲಾರದ (Kolar) ತಾಲ್ಲೂಕಿನ ಲಕ್ಷ್ಮೀ ಸಾಗರ ಗೇಟ್ ರಾಷ್ಟ್ರೀಯ ಹೆದ್ದಾರಿ-75 (National Highway) ರಲ್ಲಿ ನಡೆದಿದೆ.

    ಘಟನೆಯಲ್ಲಿ ಹೊಸಕೋಟೆ ತಾಲ್ಲೂಕಿನ ಗೋಪಾಲ್(45) ಗಾಯಗೊಂಡಿದ್ದಾರೆ. ಆದ್ರೆ, ಗಾಯಳುವನ್ನು ಆಸ್ಪತ್ರೆಗೆ ಸೇರಿಸಲು ಹಿಂದೇಟು ಹಾಕಿದ್ದರಿಂದ ರೊಚ್ಚಿಗೆದ್ದ ಸ್ಥಳೀಯರು ಎಂಎಲ್‌ಸಿ ರವಿಕುಮಾರ್‌ಗೆ ಫುಲ್‌ಕ್ಲಾಸ್ ತೆಗೆದುಕೊಂಡಿದ್ದಾರೆ. ನೀನ್ಯಾವ ಸೀಮೆ ಎಂಎಲ್‌ಸಿ ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ: ರೂಪೇಶ್ ಶೆಟ್ಟಿ ಮನೆಯಿಂದ ಮದುವೆ ಪ್ರಪೋಸಲ್ ಬಂದರೆ ಸಾನ್ಯ ಉತ್ತರವೇನು?

    ಹೊಸಕೋಟೆ ತಾಲ್ಲೂಕಿನ ಶಿವನಾಪುರ ಗ್ರಾಮದ ಗೋಪಾಲ್, ಬೈಕ್‌ನಲ್ಲಿ ಕೋಲಾರಕ್ಕೆ ತೆರಳುತ್ತಿದ್ದರು. ಅದೇ ಮಾರ್ಗವಾಗಿ ಎಂಎಲ್‌ಸಿ ರವಿಕುಮಾರ್ ಕೋಲಾರಕ್ಕೆ ಆಗಮಿಸುತ್ತಿದ್ದ ವೇಳೆ ಅಪಘಾತ (Road Accident) ಸಂಭವಿಸಿದೆ. ಬಳಿಕ ಗಾಯಾಳುವನ್ನು ಆಸ್ಪತ್ರೆಗೆ (Hospital) ಸೇರಿಸಲು ಹಿಂದೇಟು ಹಾಕಿದ್ದರಿಂದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಪರಿಚಿತ ವ್ಯಕ್ತಿ ನೀಡಿದ ಚಾಕ್ಲೆಟ್ ಸೇವಿಸಿ 17 ವಿದ್ಯಾರ್ಥಿಗಳು ಅಸ್ವಸ್ಥ- ಆರೋಪಿಗಾಗಿ ಹುಡುಕಾಟ

    ಸ್ಥಳೀಯರ ಆಕ್ರೋಶ ಕಂಡು ಎಂಎಲ್‌ಸಿ ರವಿಕುಮಾರ್ ದಂಗಾಗಿದ್ದಾರೆ. ನಂತರ ಸ್ಥಳಕ್ಕೆ ವೇಮಗಲ್ ಪೋಲೀಸರು ಭೇಟಿ ನೀಡಿ ಸ್ಥಳೀಯರನ್ನ ಸಮಾಧಾನಪಡಿಸಿದ್ದಾರೆ. ಗಾಯಾಳುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೇಮಗಲ್ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ

    Live Tv
    [brid partner=56869869 player=32851 video=960834 autoplay=true]

  • ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯೋಧ ಸಾವು

    ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯೋಧ ಸಾವು

    ಹಾಸನ: ರಸ್ತೆ ಅಪಘಾತದಲ್ಲಿ (Road Accident) ಗಂಭೀರವಾಗಿ ಗಾಯಗೊಂಡಿದ್ದ ಹಾಸನ (Hassan) ಜಿಲ್ಲೆಯ ಯೋಧ (Soldier) ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹೆಚ್.ಬಿ ಚನ್ನಬಸಪ್ಪ (54) ಮೃತ ಯೋಧ.

    ಚನ್ನಬಸಪ್ಪ ಹಾಸನ ಜಿಲ್ಲೆ, ಆಲೂರು ತಾಲೂಕಿನ ಚಿಕ್ಕಕಣಗಾಲು-ಹೊಸಳ್ಳಿ ಗ್ರಾಮದವರು. ನವೆಂಬರ್ 19 ರಂದು ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದಾಗ ಬೆಂಗಳೂರಿನ ಹುಣಸಮಾರನಹಳ್ಳಿಯಲ್ಲಿ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚನ್ನಬಸಪ್ಪ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ:ಗುಜರಾತ್‍ನಲ್ಲಿ ಇಂದು ಮೊದಲ ಹಂತದ ಮತದಾನ – ತವರು ರಾಜ್ಯದಲ್ಲಿ ಮೋದಿ, ಶಾ ಜೋಡಿಗೆ ಅಗ್ನಿ ಪರೀಕ್ಷೆ

    1968 ರಲ್ಲಿ ಭಾರತೀಯ ಸೇನೆಗೆ ಸೇರಿದ್ದ ಚನ್ನಬಸಪ್ಪ ಭಾರತೀಯ ಸೇನೆ, ಭೂಸೇನೆ, ವಾಯುಸೇನೆ, ಜಲಸೇನೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಇತ್ತೀಚೆಗೆ ಚನ್ನಬಸಪ್ಪ ಬೆಂಗಳೂರಿನ ಯಲಹಂಕದಲ್ಲಿರುವ ಏರ್‌ಫೋರ್ಸ್ನಲ್ಲಿ ಡಿಎಸ್‌ಸಿ ಯೂನಿಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ತಮ್ಮ ಹುಟ್ಟೂರಿನಲ್ಲಿ ಮೃತ ಯೋಧನ ಅಂತ್ಯಕ್ರಿಯೆ ನೆರವೇರಲಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಡ್ರಗ್ಸ್‌ ಸೇವನೆ ಆರೋಪ – NCB ಅಧಿಕಾರಿಗಳಿಂದ 3 ಯುವತಿಯರು ವಶಕ್ಕೆ

    Live Tv
    [brid partner=56869869 player=32851 video=960834 autoplay=true]

  • ಕೆನಡಾದಲ್ಲಿ ಟ್ರಕ್‌ನಿಂದ ಎಳೆಯಲ್ಪಟ್ಟು ಭಾರತ ಮೂಲದ ವಿದ್ಯಾರ್ಥಿ ಸಾವು

    ಕೆನಡಾದಲ್ಲಿ ಟ್ರಕ್‌ನಿಂದ ಎಳೆಯಲ್ಪಟ್ಟು ಭಾರತ ಮೂಲದ ವಿದ್ಯಾರ್ಥಿ ಸಾವು

    ಒಟ್ಟಾವಾ: ಕೆನಡಾದಲ್ಲಿ (Canada) ಸೈಕಲ್‌ನಲ್ಲಿ ಪ್ರಯಾಣಿಸುತ್ತಿದ್ದ ಭಾರತ ಮೂಲದ ವಿದ್ಯಾರ್ಥಿಯೊಬ್ಬ (Indian student) ಪಿಕಪ್ ಟ್ರಕ್‌ಗೆ (Pickup Truck) ಡಿಕ್ಕಿ ಹೊಡೆದು, ಎಳೆಯಲ್ಪಟ್ಟು ಭೀಕರವಾಗಿ ಸಾವನ್ನಪಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

    ವರದಿಗಳ ಪ್ರಕಾರ, ಭೀಕರ ಅಪಘಾತ ಬುಧವಾರ ಸಂಭವಿಸಿದೆ. ಬಲಿಯಾದ ವಿದ್ಯಾರ್ಥಿಯ ಸೋದರಸಂಬಂಧಿ ಆತನ ಮೃತದೇಹವನ್ನು ಕಾರ್ತಿಕ್ ಎಂದು ಗುರುತಿಸಿದ್ದಾರೆ. ಕಾರ್ತಿಕ್ 2021ರಲ್ಲಿ ವಿದ್ಯಾಭ್ಯಾಸಕ್ಕಾಗಿ ಭಾರತದಿಂದ ಕೆನಡಾಗೆ ತೆರಳಿದ್ದ ಎನ್ನಲಾಗಿದೆ. ಇದನ್ನೂ ಓದಿ: ಹಳ್ಳಕ್ಕೆ ಉರುಳಿದ KSRTC ಬಸ್ – 12 ಜನರಿಗೆ ಗಾಯ, ಮೂವರ ಸ್ಥಿತಿ ಗಂಭೀರ

    ಕಾರ್ತಿಕ್ ಶೆರಿಡನ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಆತನ ಸಾವಿಗೆ ಕಾಲೇಜು ಸಂತಾಪ ವ್ಯಕ್ತಪಡಿಸಿದೆ. ಆತನ ಕುಟುಂಬ, ಸ್ನೇಹಿತರು, ಗೆಳೆಯರು ಮತ್ತು ಪ್ರಾಧ್ಯಾಪಕರು ಕಂಬನಿ ಮಿಡಿದಿದ್ದಾರೆ. ಕಾರ್ತಿಕ್‌ನ ಮೃತದೇಹವನ್ನು ಆದಷ್ಟು ಬೇಗ ಭಾರತಕ್ಕೆ ಕಳುಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಡೌನ್‌ ವಿತ್‌ ಕ್ಸಿ ಜಿನ್‌ಪಿಂಗ್‌.. ಲಾಕ್‌ಡೌನ್‌ ತೆಗೆಯಿರಿ – ಚೀನಾದಲ್ಲಿ ಭುಗಿಲೆದ್ದ ಜನಾಕ್ರೋಶ

    Live Tv
    [brid partner=56869869 player=32851 video=960834 autoplay=true]

  • ಆಯತಪ್ಪಿ ಬಿದ್ದ ವಿದ್ಯಾರ್ಥಿನಿ – ಬಸ್ ಚಕ್ರ ಹರಿದು ಕಾಲು ಮುರಿತ

    ಆಯತಪ್ಪಿ ಬಿದ್ದ ವಿದ್ಯಾರ್ಥಿನಿ – ಬಸ್ ಚಕ್ರ ಹರಿದು ಕಾಲು ಮುರಿತ

    ರಾಮನಗರ: ಬಸ್ ಹತ್ತುವ ವೇಳೆ ಆಯತಪ್ಪಿ ಬಿದ್ದ ವಿದ್ಯಾರ್ಥಿನಿ (Student) ಕಾಲಿನ ಮೇಲೆ ಬಸ್ ಚಕ್ರ ಹರಿದು (Bus Accident), ಕಾಲು ಮುರಿತವಾಗಿರುವ ಘಟನೆ ರಾಮನಗರದಲ್ಲಿ (Ramanagar) ನಡೆದಿದೆ.

    ಜಿಲ್ಲೆಯ ಬಿಡದಿಯ ಭೈರಮಂಗಲ ಕ್ರಾಸ್‌ನಲ್ಲಿ ವಿದ್ಯಾರ್ಥಿನಿ ವಿದ್ಯಾ (19) ಬಸ್ ಹತ್ತುವ ವೇಳೆ ಆಯತಪ್ಪಿ ಬಿದ್ದಾಗ ದುರಂತ ಸಂಭವಿಸಿದೆ. ಇದನ್ನೂ ಓದಿ: ಝಾಕೀರ್‌ ನಾಯ್ಕ್‌ The Real Inspiration – ಐಸಿಸ್‌ ಉಗ್ರರಂತೆ ಪೋಸ್‌ ನೀಡಿ ಪ್ರತೀಕಾರದ ಪ್ರತಿಜ್ಞೆ

    ವಿದ್ಯಾ ಬಿಡದಿಯ ಜ್ಞಾನವಿಕಾಸ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಅಪಘಾತ ನಡೆದ ತಕ್ಷಣ ಸ್ಥಳೀಯ ಆಸ್ಪತ್ರೆಗೆ (Hospital) ದಾಖಲಿಸಲಾಗಿತ್ತು. ಪರಿಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಬಿಡದಿ ಪೊಲೀಸ್ ಠಾಣೆಯಲ್ಲಿ (Bidadi Police Station) ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ತಿಹಾರ್ ಜೈಲಿನ ಬಳಿಯೇ ಕೈ ನಾಯಕಿಯ ಕಾರು ಕಳ್ಳತನ – ವೀಡಿಯೋ ಪೋಸ್ಟ್ ಮಾಡಿ ಪಂಖೂರಿ ಪಾಠಕ್ ಕಿಡಿ

    Live Tv
    [brid partner=56869869 player=32851 video=960834 autoplay=true]

  • 15 ವರ್ಷಗಳಿಂದ ಮಕ್ಕಳಿಲ್ಲದೇ ಹರಕೆ ಹೊತ್ತು ಹಿಂದಿರುಗುವಾಗಲೇ ದುರಂತ – ದಂಪತಿ ಸಾವು

    15 ವರ್ಷಗಳಿಂದ ಮಕ್ಕಳಿಲ್ಲದೇ ಹರಕೆ ಹೊತ್ತು ಹಿಂದಿರುಗುವಾಗಲೇ ದುರಂತ – ದಂಪತಿ ಸಾವು

    ಗದಗ: 15 ವರ್ಷಗಳಿಂದ ಮಕ್ಕಳಿಲ್ಲದೇ, ತಮಗೆ ಮಕ್ಕಳನ್ನು ಕರುಣಿಸುವಂತೆ ದೇವರಿಗೆ ಹರಕೆ ಹೊತ್ತು ಹಿಂದಿರುಗಿ ಬರುತ್ತಿರುವಾಗಲೇ ಭೀಕರ ಅಪಘಾತಕ್ಕೀಡಾಗಿ (Accident) ದಂಪತಿ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.

    ಹುಬ್ಬಳ್ಳಿ (Hubballi) ಮೂಲದ ಬೈಕ್ ಸವಾರ ಸಹದೇವಪ್ಪ ದೇವರಮನಿ (45) ಹಾಗೂ ದೀಪಾ ದೇವರಮನೆ (36) ಮೃತ ದಂಪತಿ. ಜಿಲ್ಲೆಯ ನರಗುಂದ ತಾಲ್ಲೂಕಿನ ಬೈರನಹಟ್ಟಿ ಬಳಿ, ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಡಿಕ್ಕಿ ರಭಸಕ್ಕೆ ಕಾರು ಮತ್ತು ಬೈಕು ಸುಟ್ಟು ಭಸ್ಮವಾಗಿದೆ. ಇದನ್ನೂ ಓದಿ: ಕುಕ್ಕರ್ ಬಾಂಬ್ ಬ್ಲಾಸ್ಟ್‌ – ತಮಿಳುನಾಡು, ಕೇರಳದಲ್ಲೂ ತನಿಖೆ ಚುರುಕು : ಪ್ರವೀಣ್ ಸೂದ್

    ಮದುವೆಯಾಗಿ (Marriage) 15 ವರ್ಷವಾದ್ರೂ ಮಕ್ಕಳಾಗಿರಲಿಲ್ಲ. ಮಕ್ಕಳಿಗಾಗಿ ಹರಕೆ ಹೊತ್ತು ಬಾದಾಮಿ ತಾಲೂಕಿನ ಹೆಬ್ಬಳ್ಳಿ ಗ್ರಾಮದ ದೇವರಿಗೆ ಪ್ರತಿ ಅಮವಾಸ್ಯೆಗೆ ಹೋಗುತ್ತಿದ್ದರು. ಇಂದು ಬಾಗಲಕೋಟೆ ಜಿಲ್ಲೆ ಮುಧೋಳ ಪಟ್ಟಣದ ಮಹಿಂದ್ರಾ TUV-300 ಕಾರು ಸರ್ವಿಸ್‌ಗಾಗಿ ಹುಬ್ಬಳ್ಳಿಗೆ ಹೊರಟಿತ್ತು. ಇದೇ ಮಾರ್ಗದಲ್ಲಿ ದಂಪತಿ ಬೈಕ್‌ನಲ್ಲಿ ಬರುತ್ತಿದ್ದಾಗ ಅಪಘಾತ (Road Accident) ಸಂಭವಿಸಿದೆ. ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬರಲು ತಿರುಕನ ಕನಸು ಕಾಣುತ್ತಿದೆ: ಯಡಿಯೂರಪ್ಪ

    ಕಾರ್ ನಲ್ಲಿದ್ದ ಇಬ್ಬರು ಸಹ ಗಾಯಗೊಂಡಿದ್ದು, ಅವರನ್ನ ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿ ರಭಸಕ್ಕೆ ಸ್ಪೋಟಗೊಂಡು ಹೊತ್ತಿ ಉರಿದ ವಾಹನಗಳ ಬೆಂಕಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ನಂದಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗದಗ ಜಿಲ್ಲೆ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ (FIR) ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ – ಒಟ್ಟಿಗೆ 48 ವಾಹನಗಳು ಜಖಂ

    ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ – ಒಟ್ಟಿಗೆ 48 ವಾಹನಗಳು ಜಖಂ

    ಮುಂಬೈ: ಪುಣೆಯಲ್ಲಿರುವ ಬೆಂಗಳೂರು ಹೆದ್ದಾರಿಯ (Pune Bengaluru National Highway) ನವಲೆ ಸೇತುವೆಯಲ್ಲಿ (Fire Brigade) ಭೀಕರ ಅಪಘಾತ ಸಂಭವಿಸಿದ್ದು, ಒಟ್ಟಿಗೆ 48 ವಾಹನಗಳು ಜಖಂಗೊಂಡಿವೆ. ಟ್ಯಾಂಕರ್‌ವೊಂದರ ಬ್ರೇಕ್ ವೈಫಲ್ಯದಿಂದಾಗಿ ಕನಿಷ್ಠ 48 ವಾಹನಗಳು ಅಪಘಾತಕ್ಕೀಡಾಗಿವೆ.

    ರಾತ್ರಿ 8:30ರ ಸುಮಾರಿಗೆ ಘಟನೆ ನಡೆದಿದ್ದು, ಹಲವರು ಗಾಯಗೊಂಡಿರುವ ಶಂಕೆ ವ್ಯಕ್ಯವಾಗಿದೆ. ಸದ್ಯ ಪುಣೆ ಅಗ್ನಿಶಾಮಕ ದಳ ಮತ್ತು ಪುಣೆ ಮೆಟ್ರೋಪಾಲಿಟನ್ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ (PMRDA) ರಕ್ಷಣಾ ತಂಡಗಳು ಸ್ಥಳಕ್ಕೆ ಭೇಟಿ ನೀಡಿ ಕಾರ್ಯಾಚರಣೆ ನಡೆಸುತ್ತಿವೆ. ಸಾರ್ವಜನಿಕರ ಸುರಕ್ಷತೆಗಾಗಿ ಅಂಬುಲೆನ್ಸ್‌ಗಳ ವ್ಯವಸ್ಥೆಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕಾಡಾನೆ ದಾಳಿಗೆ ಮಹಿಳೆ ಬಲಿ – ಮೃತದೇಹ ನೋಡಲು ಬಂದ ಶಾಸಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ

    ಪಿಎಂಆರ್‌ಡಿಎ (PMRDA) ಅಗ್ನಿಶಾಮಕ ದಳದ ಅಧಿಕಾರಿ ಸುಜಿತ್ ಪಾಟೀಲ್ ಮಾತನಾಡಿ, ಪ್ರಾಥಮಿಕ ಮಾಹಿತಿಯ ಪ್ರಕಾರ ಟ್ಯಾಂಕರ್ ಬ್ರೇಕ್ ವೈಫಲ್ಯದ ನಂತರ ಕನಿಷ್ಠ 48 ವಾಹನಗಳು ಅಪಘಾತಕ್ಕೀಡಾಗಿವೆ. ಹಾನಿಗೊಳಗಾದ ವಾಹನಗಳಿಂದ ಗಾಯಗೊಂಡ ಕೆಲ ನಾಗರಿಕರನ್ನ ಹತ್ತಿರದ ಆಸ್ಪತ್ರೆಗಳಿಗೆ (Hospital) ಕರೆದೊಯ್ಯಲಾಗಿದೆ. ಸದ್ಯಕ್ಕೆ ಗಾಯಗೊಂಡವರ ಸಂಖ್ಯೆ ಮತ್ತು ಅವರ ಗಾಯಗಳ ಸ್ವರೂಪದ ನಮಗೆ ತಿಳಿದಿಲ್ಲ. ಅಗ್ನಿಶಾಮಕ ದಳದ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಉಗ್ರರ ಅಡಗುತಾಣವಾಗ್ತಿದ್ಯಾ ಮಂಗಳೂರು – ಕರಾವಳಿ ಜಿಲ್ಲೆಯಾದ್ಯಂತ ಹೈ ಅಲರ್ಟ್

    Live Tv
    [brid partner=56869869 player=32851 video=960834 autoplay=true]