Tag: Road Accident

  • ರಸ್ತೆ ಅಪಘಾತದಲ್ಲಿ ನಿವೃತ್ತ ಸೈನಿಕ ನಿಧನ – ಪತ್ನಿ, ಪುತ್ರಿಗೆ ಗಾಯ

    ರಸ್ತೆ ಅಪಘಾತದಲ್ಲಿ ನಿವೃತ್ತ ಸೈನಿಕ ನಿಧನ – ಪತ್ನಿ, ಪುತ್ರಿಗೆ ಗಾಯ

    ಶಿವಮೊಗ್ಗ: ಕಾರು (Car) ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಿವೃತ್ತ ಸೈನಿಕರೊಬ್ಬರು (Retired Soldier) ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ಪತ್ನಿ ಹಾಗೂ ಮಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗದ (Shivamogga) ತುಪ್ಪೂರು ಬಳಿ ನಡೆದಿದೆ.

    ಘಟನೆಯಲ್ಲಿ ಮೃತಪಟ್ಟ ನಿವೃತ್ತ ಸೈನಿಕನನ್ನು ಜಿಲ್ಲೆಯ ಹೊಸನಗರ ತಾಲೂಕಿನ ಮಾವಿನಹೊಳೆ ನಿವಾಸಿ ಚಿನ್ನಪ್ಪ(50) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡ ಅವರ ಪತ್ನಿ (Wife) ಹಾಗೂ ಮಗಳನ್ನು (Daughter) ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಉದ್ಘಾಟನೆಗೊಂಡ ನಾಲ್ಕೇ ದಿನಕ್ಕೆ ಗುಂಡಿ ಬಿದ್ದ 18 ಕೋಟಿಯ ಮೇಲ್ಸೇತುವೆ

    ಹೊಸನಗರದ ಶಾಸಕರ ಮಾದರಿ ಶಾಲೆಯ ಸರ್ಕಾರಿ ಹಿರಿಯ ಬಾಲಕಿಯರ ಪಾಠ ಶಾಲೆಯಲ್ಲಿ ಓದುತ್ತಿದ್ದ ಚಿನ್ನಪ್ಪ ಅವರ ಪುತ್ರಿ ದಿಶಾರಾಣಿ ಈ ವರ್ಷ ವಾಲಿಬಾಲ್ ಪಂದ್ಯಾವಳಿಯಲ್ಲಿ (Volleyball)ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಳು. ಶಾಲೆಯಿಂದ ವಿಭಾಗ ಮಟ್ಟದಲ್ಲಿ ವಾಲಿಬಾಲ್ ಆಟವಾಡಲು ವಿದ್ಯಾರ್ಥಿನಿಯರನ್ನು ವಾಹನದ ಮೂಲಕ ಗೌರಿಬಿದನೂರಿಗೆ ಕಳುಹಿಸಿಕೊಡಲಾಗಿತ್ತು. ಚಿನ್ನಪ್ಪ ಅವರ ಮಗಳು ವಾಲಿಬಾಲ್ ಪಂದ್ಯದಲ್ಲಿ ಆಟವಾಡುತ್ತಿದ್ದು, ಮಗಳ ಆಟ ನೋಡಲು ಗೌರಿಬಿದನೂರಿಗೆ ತಮ್ಮ ಸ್ವಂತ ಮಾರುತಿ ಆಲ್ಟೊ 800 ಕಾರಿನಲ್ಲಿ ಕುಟುಂಬ ಸಮೇತರಾಗಿ ತೆರಳಿದ್ದರು. ಇದನ್ನೂ ಓದಿ: ಮೀನು ಹಿಡಿದು, ಬಟ್ಟೆ ಒಗೆಯುವ ಸ್ಥಳವಾದ ರಾಷ್ಟ್ರೀಯ ಹೆದ್ದಾರಿ – ಇದು ನಮ್ಮ ದುಸ್ಥಿತಿ

    ಆಟ ಮುಗಿಸಿಕೊಂಡು ತಮ್ಮ ಮಗಳನ್ನು ಕಾರಿನಲ್ಲಿ ವಾಪಸ್ ಕರೆದುಕೊಂಡು ಬರುತ್ತಿದ್ದಾಗ ಮಧ್ಯರಾತ್ರಿ 2 ಗಂಟೆ ಸಮಯದಲ್ಲಿ ತುಪ್ಪೂರು ಬಳಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಈ ಕುರಿತು ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಕಾರು ಡಿಕ್ಕಿ ಹೊಡೆದ ರಭಸಕ್ಕೆ ಧರೆಗುರುಳಿದ ಮರ – ಬೈಕ್ ಸವಾರ ಸಾವು

    ಕಾರು ಡಿಕ್ಕಿ ಹೊಡೆದ ರಭಸಕ್ಕೆ ಧರೆಗುರುಳಿದ ಮರ – ಬೈಕ್ ಸವಾರ ಸಾವು

    ಚಿಕ್ಕಬಳ್ಳಾಪುರ: ರಸ್ತೆ ಬದಿಯಲ್ಲಿ ಬೈಕ್ (Bike) ನಿಲ್ಲಿಸಿ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ಸವಾರನ ಪ್ರಾಣವನ್ನು ವೇಗವಾಗಿ ಬಂದ ಕಾರೊಂದು (Car) ಬಲಿ ಪಡೆದಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ಶಿಡ್ಲಘಟ್ಟ ಮಾರ್ಗದ ಪಟ್ಟರೇನಹಳ್ಳಿ ಬಳಿ ನಡೆದಿದೆ. ಗೌರಿಬಿದನೂರು ತಾಲೂಕು ಡಿ ಪಾಳ್ಯ ಗ್ರಾಮದ ವರ್ಷದ ಸುರೇಶ್ (28) ಮೃತ ಬೈಕ್ ಸವಾರ.

    ಚಿಕ್ಕಬಳ್ಳಾಪುರ (Chikkaballapur) ನಗರದ ರಾಮು ಫರ್ನಿಚರ್ ಪ್ಯಾರಡೈಸ್‌ನಲ್ಲಿ ಕೆಲಸ ಮಾಡುತ್ತಿದ್ದ ಸುರೇಶ್ ತನ್ನ ಸಹೋದ್ಯೋಗಿ ಮದನ್ ಜೊತೆ ಪಟ್ಟರೇನಹಳ್ಳಿ ಗ್ರಾಮದಿಂದ ಚಿಕ್ಕಬಳ್ಳಾಪುರದ ಕಡೆಗೆ ಬೈಕ್‌ನಲ್ಲಿ ಹೋಗುತ್ತಿದ್ದ. ಈ ವೇಳೆ ಮೊಬೈಲ್‌ಗೆ ಕರೆ ಬಂದ ಕಾರಣ ರಸ್ತೆ ಬದಿ ಬೈಕ್ ನಿಲ್ಲಿಸಿ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ.

    ಈ ವೇಳೆ ಏಕಾಏಕಿ ಬಂದ ಇಂಡಿಕಾ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ. ತದನಂತರ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಸುರೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಹಿಂಬದಿ ಸವಾರ ಮದನ್ ಗಾಯಗೊಂಡು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾನೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಮರ ಬುಡ ಸಮೇತ ನೆಲಕ್ಕೆ ಉರುಳಿದೆ. ಇದನ್ನೂ ಓದಿ: ಹರ್ಷ ಕೊಲೆ ಪ್ರಕರಣದ 10ನೇ ಆರೋಪಿಗೆ ಜಾಮೀನು ಮಂಜೂರು

    ಕಾರು ಚಾಲಕನ ಅತಿ ವೇಗ ಹಾಗೂ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಕಾರು ಚಾಲಕನ ಮೇಲೆ ಆಕ್ರೋಶ ಹೊರಹಾಕಿ, ಹಲ್ಲೆಗೆ ಯತ್ನಿಸಿದ್ದಾರೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿ, ಕಾರು ಸಮೇತ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸ್ಟೇರಿಂಗ್ ಕಟ್ ಆಗಿ ಬಸ್ ಗದ್ದೆಗೆ ನುಗ್ಗಿದ ರಭಸಕ್ಕೆ ಅರ್ಧಕ್ಕೆ ಮುರಿದ ಕರೆಂಟ್ ಕಂಬ!

    Live Tv
    [brid partner=56869869 player=32851 video=960834 autoplay=true]

  • ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಗೃಹಿಣಿ ಸಾವು

    ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಗೃಹಿಣಿ ಸಾವು

    ರಾಮನಗರ: ರಸ್ತೆ ಅಪಘಾತದಲ್ಲಿ (Road Accident) ಗಂಭೀರವಾಗಿ ಗಾಯಗೊಂಡಿದ್ದ ಗೃಹಿಣಿ ಚಿಕಿತ್ಸೆ ಫಲಕಾರಿಯಾಗದೇ 45 ದಿನಗಳ ಜೀವನ್ಮರಣ ಹೋರಾಟದ ಬಳಿಕ ಭಾನುವಾರ ಮೃತಪಟ್ಟಿದ್ದಾರೆ.

    ಚನ್ನಪಟ್ಟಣ ತಾಲೂಕಿನ ಕೂಡೂರು ಗ್ರಾಮದ ಸೌಂದರ್ಯ ಅರಸ್ (20) ಮೃತಪಟ್ಟ ಗೃಹಿಣಿ. ಕಳೆದ 6 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ಈಕೆ ಆಗಸ್ಟ್ 24ರಂದು ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಚನ್ನಪಟ್ಟಣದ ಸಿಪಿಟಿ ಗಾರ್ಡನ್ ಮುಂಭಾಗದ ರಸ್ತೆಯಲ್ಲಿ ವೇಗವಾಗಿ ಬಂದ ಬೈಕ್ (Bike) ಡಿಕ್ಕಿ ಹೊಡೆದಿತ್ತು. ಕೆಳಗೆ ಬಿದ್ದ ಸೌಂದರ್ಯ ಅವರ ತಲೆಯ ಹಿಂಭಾಗಕ್ಕೆ ಗಂಭೀರ ಪೆಟ್ಟಾಗಿ, ರಕ್ತಸ್ರಾವವಾಗಿತ್ತು. ಅವರನ್ನು ಬಿಡದಿ ಆರಾಧ್ಯ ಖಾಸಗಿ ಆಸ್ಪತ್ರೆಗೆ (Private Hospital) ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಮೆದುಳು (Brian) ನಿಷ್ಕ್ರಿಯಗೊಂಡಿದ್ದರಿಂದ ಭಾನುವಾರ ಸೌಂದರ್ಯ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಸೀಗೆ ಹುಣ್ಣಿಮೆ ದಿನ ಪುನೀತ್ ರಾಜ್‌ಕುಮಾರ್ ಫೋಟೋ ಇಟ್ಟು ಹೊಲದ ಪೂಜೆ ಮಾಡಿದ ರೈತ

    ಒಂದೂವರೆ ತಿಂಗಳ ಚಿಕಿತ್ಸೆಗೆ ಈಗಾಗಲೇ ಕುಟುಂಬ 7 ಲಕ್ಷ ರೂ. ಬಿಲ್ ಪಾವತಿಸಿತ್ತು. ಆದಾಗ್ಯೂ ಆಸ್ಪತ್ರೆ ಮುಖ್ಯಸ್ಥರು ಬಾಕಿ 9.50 ಲಕ್ಷ ರೂ. ಪಾವತಿಸಿ ಮೃತದೇಹ ಪಡೆಯುವಂತೆ ಸೂಚಿಸಿದ್ದರು. ಇದು ಕುಟುಂಬವನ್ನು ವಿಚಲಿತಗೊಳಿಸಿತ್ತು. ಈ ವಿಚಾರವನ್ನು ಗ್ರಾಮದ ಮುಖಂಡರು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರ ಗಮನಕ್ಕೆ ತಂದಿದ್ದರು. ಕೂಡಲೇ ಹೆಚ್‌ಡಿಕೆ ಆಸ್ಪತ್ರೆ ಮುಖ್ಯಸ್ಥರಿಗೆ ಕರೆ ಮಾಡಿ, ಬಾಕಿ ಹಣ ಪಾವತಿಸುವ ಭರವಸೆ ನೀಡಿದರು. ಬಳಿಕ ಆಸ್ಪತ್ರೆ ಮುಖ್ಯಸ್ಥರು ಸೌಂದರ್ಯ ಅವರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದರು.

    Live Tv
    [brid partner=56869869 player=32851 video=960834 autoplay=true]

  • ಸ್ಕೂಟಿ, ಕಾರಿನ ಮಧ್ಯೆ ಭೀಕರ ಅಪಘಾತ – ಅಣ್ಣ, ತಂಗಿ ದಾರುಣ ಸಾವು

    ಸ್ಕೂಟಿ, ಕಾರಿನ ಮಧ್ಯೆ ಭೀಕರ ಅಪಘಾತ – ಅಣ್ಣ, ತಂಗಿ ದಾರುಣ ಸಾವು

    ಮಂಗಳೂರು: ಸ್ಕೂಟಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ (Accident) ಸಂಭವಿಸಿ, ಸ್ಕೂಟಿಯಲ್ಲಿ ಹೋಗುತ್ತಿದ್ದ ಅಣ್ಣ ಹಾಗೂ ತಂಗಿ (Brother and Sister) ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ (ಜಿಲ್ಲೆ ಸುಳ್ಯ (Sulia) ತಾಲೂಕಿನ ಎಲಿಮಲೆ ಬಳಿ ನಡೆದಿದೆ.

    ಇಂದು ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ಕಡಪಾಲ ಬಾಜಿನಡ್ಕ ಗ್ರಾಮದ ದೇವಿದಾಸ್ ಅವರ ಮಕ್ಕಳಾದ ನಿಶಾಂತ್ ಹಾಗೂ ಮೋಕ್ಷಾ ತೀವ್ರವಾಗಿ ಗಾಯಗೊಂಡಿದ್ದರು. ಅವರಿಬ್ಬರನ್ನು ಸ್ಥಳೀಯರು ತಕ್ಷಣವೇ ಸುಳ್ಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ನಿಶಾಂತ್ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾನೆ. ಮೋಕ್ಷಾಳನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಆಕೆಯೂ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: 873 ಪೊಲೀಸ್‌ ಅಧಿಕಾರಿಗಳಿಗೆ PFI ಜೊತೆ ನಂಟು: NIA

    ಮೃತ ನಿಶಾಂತ್ ಸುಳ್ಯ ಜೂನಿಯರ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಮೋಕ್ಷಾ ದೇವಚಳ್ಳ ಸರ್ಕಾರಿ ಶಾಲೆಯಲ್ಲಿ 5ನೇ ತರಗತಿಯಲ್ಲಿ ಓದುತ್ತಿದ್ದಳು ಎಂಬುದು ತಿಳಿದುಬಂದಿದೆ. ಘಟನೆ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ (Sulya Police Station) ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹಣ ಕೊಡದಿದ್ರೆ ಅಶ್ಲೀಲ ಫೋಟೋ ರಿಲೀಸ್ ಮಾಡೋ ಬೆದರಿಕೆ- ಮನನೊಂದ ಟೆಕ್ಕಿ ಆತ್ಮಹತ್ಯೆ

    Live Tv
    [brid partner=56869869 player=32851 video=960834 autoplay=true]

  • ಬೆಳಗಾವಿಯಲ್ಲಿ ಭೀಕರ ಸರಣಿ ರಸ್ತೆ ಅಪಘಾತ- ASI ಪತ್ನಿ, ಪುತ್ರಿ ಸೇರಿ ನಾಲ್ವರ ದುರ್ಮರಣ

    ಬೆಳಗಾವಿಯಲ್ಲಿ ಭೀಕರ ಸರಣಿ ರಸ್ತೆ ಅಪಘಾತ- ASI ಪತ್ನಿ, ಪುತ್ರಿ ಸೇರಿ ನಾಲ್ವರ ದುರ್ಮರಣ

    ಬೆಳಗಾವಿ: ಭೀಕರ ಸರಣಿ ರಸ್ತೆ ಅಪಘಾತದಲ್ಲಿ (Road Accident) ಕುಡಚಿ ಪೊಲೀಸ್ ಠಾಣೆಯ (Police Station) ಎಎಸ್‌ಐ (ASI) ವೈ.ಎಂ.ಹಲಕಿಯವರ ಪತ್ನಿ, ಪುತ್ರಿ ಹಾಗೂ ಚಾಲಕ, ಅಜ್ಜಿ ಸೇರಿ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುದಿಗೊಪ್ಪ ಕ್ರಾಸ್ ಬಳಿ ನಡೆದಿದೆ.

    CRIME 2

    ಬೆಳಗಾವಿ (Belagavi) ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್ ಬಳಿ ಸ್ವಿಫ್ಟ್ ಡಿಸೈರ್ ಕಾರು, ಬೈಕ್ ಹಾಗೂ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ಸಾವನ್ನಪಿದ್ದಾರೆ. ಗಾಯಗೊಂಡ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ತಾತ್ಕಾಲಿಕವಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಆರೋಗ್ಯ ಇಲಾಖೆಯಿಂದ ಕ್ರಮ: ಸುಧಾಕರ್

    crime

    ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಯರಗಟ್ಟಿಯತ್ತ ತೆರಳುತ್ತಿದ್ದ ಎಎಸ್‌ಐ ಕುಟುಂಬದಲ್ಲಿ (ASI Family) ಮೂವರು ಮೃತರಾಗಿದ್ದಾರೆ. ಬೈಕ್ ನಲ್ಲಿ ಹೋಗುತ್ತಿದ್ದ ಓರ್ವ ಅಜ್ಜಿ ಸಾವನ್ನಪ್ಪಿದ್ದಾರೆ. ಇನ್ನು ಲಾರಿ ಡಿಕ್ಕಿಯ ರಭಸಕ್ಕೆ ಸ್ವಿಫ್ಟ್ ಡಿಸೈರ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಬೆಳಗಾವಿ ಎಸ್‌ಪಿ ಡಾ.ಸಂಜೀವ್ ಪಾಟೀಲ್, ಮುರಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    Live Tv
    [brid partner=56869869 player=32851 video=960834 autoplay=true]

  • ಚೀನಾದಲ್ಲಿ ಭೀಕರ ಬಸ್ ಅಪಘಾತ – 27 ಮಂದಿ ಸಾವು

    ಚೀನಾದಲ್ಲಿ ಭೀಕರ ಬಸ್ ಅಪಘಾತ – 27 ಮಂದಿ ಸಾವು

    ಬೀಜಿಂಗ್: ನೈರುತ್ಯ ಚೀನಾದಲ್ಲಿ(China) ಭಾನುವಾರ ಸಂಭವಿಸಿದ ಬಸ್(Bus) ಅಪಘಾತದಲ್ಲಿ(Accident) 27 ಜನರು ಸಾವನ್ನಪ್ಪಿದ್ದಾರೆ. ಇದು ಈ ವರ್ಷ ಚೀನಾದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಒಟ್ಟು 47 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ ರಸ್ತೆ ಬದಿಗೆ ಪಲ್ಟಿಯಾಗಿದೆ. ಈ ದುರ್ಘಟನೆ ಗ್ರಾಮೀಣ ಗೈಝೌ ಪ್ರಾಂತ್ಯದ ಹೆದ್ದಾರಿಯಲ್ಲಿ ಸಂಭವಿಸಿದೆ ಎಂದು ಪೊಲೀಸರು ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಆಂಧ್ರ, ತೆಲಂಗಾಣದ 23 ಸ್ಥಳಗಳಲ್ಲಿ NIA ರೇಡ್ – PFI ಸದಸ್ಯರ ವಿಚಾರಣೆ

    ಅಪಘಾತ ಸಂಭವಿಸಿದ ಸ್ಥಳ ಅಲ್ಪಸಂಖ್ಯಾತ ಹಾಗೂ ಬಡ ಕುಟುಂಬಗಳಿರುವ ದೂರದ ಪರ್ವತ ಪ್ರದೇಶವಾಗಿದೆ. ಘಟನಾ ಸ್ಥಳಕ್ಕೆ ತುರ್ತು ವೈದ್ಯಕೀಯ ಚಿಕಿತ್ಸೆ ನೀಡುವವರನ್ನು ಕಳುಹಿಸಲಾಗಿದ್ದು, ಬಸ್‌ನಲ್ಲಿದ್ದ ಉಳಿದ 20 ಪ್ರಯಾಣಿಕರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

    ಜೂನ್‌ನಲ್ಲಿ ಗೈಝೌ ಪ್ರಾಂತ್ಯದಲ್ಲಿ ಹೈಸ್ಪೀಡ್ ರೈಲೊಂದು ಹಳಿತಪ್ಪಿ ಚಾಲಕ ಸಾವನ್ನಪ್ಪಿದ್ದ. ಆದರೆ ಆತ ತನ್ನ ಸಾವಿಗೂ 5 ಸೆಕೆಂಡ್ ಮೊದಲು ತುರ್ತು ಬ್ರೇಕ್ ಅನ್ನು ಹಾಕಿ, ರೈಲಿನಲ್ಲಿದ್ದ ನೂರಾರು ಜೀವಗಳನ್ನು ರಕ್ಷಿಸಿದ್ದ. ಇದನ್ನೂ ಓದಿ: ಹಾಸ್ಟೆಲ್ ವಿದ್ಯಾರ್ಥಿನಿಯರ ಖಾಸಗಿ ವೀಡಿಯೋ ಲೀಕ್ – ವಿಶ್ವವಿದ್ಯಾಲಯದಲ್ಲಿ ಭುಗಿಲೆದ್ದ ಪ್ರತಿಭಟನೆ

    Live Tv
    [brid partner=56869869 player=32851 video=960834 autoplay=true]

  • ಹಿಂಬದಿ ಸವಾರರಿಗೂ ಸೀಟ್‌ಬೆಲ್ಟ್ ಕಡ್ಡಾಯ, ತಪ್ಪಿದರೆ ದಂಡ

    ಹಿಂಬದಿ ಸವಾರರಿಗೂ ಸೀಟ್‌ಬೆಲ್ಟ್ ಕಡ್ಡಾಯ, ತಪ್ಪಿದರೆ ದಂಡ

    ನವದೆಹಲಿ: ಕಾರಿನಲ್ಲಿ ಹಿಂದೆ ಕುಳಿತು ಸೀಟ್ ಬೆಲ್ಟ್ ಧರಿಸದೇ ಇರುವವರಿಗೆ ದಂಡ ವಿಧಿಸುವ ಕ್ರಮವನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

    ಮುಂಬೈನಲ್ಲಿ ನಡೆದ ಕಾರು ಅಪಘಾತದಲ್ಲಿ ಟಾಟಾ ಸನ್ಸ್ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಮೃತಪಟ್ಟ ಎರಡು ದಿನಗಳ ನಂತರ ಈ ಕ್ರಮಕ್ಕೆ ಕೇಂದ್ರ ಸಚಿವರು ಮುಂದಾಗಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮಳೆ ಹಾವಳಿ: ನಾಳೆ ಸಾಫ್ಟ್‌ವೇರ್ ಕಂಪನಿಗಳ ಜತೆ ಸಭೆ

    ಸಾಂದರ್ಭಿಕ ಚಿತ್ರ

    ಈಗಾಗಲೇ ಹಿಂದಿನ ಸೀಟಿನಲ್ಲಿರುವವರೂ ಸೀಟ್‌ಬೆಲ್ಟ್ ಧರಿಸುವುದು ಕಡ್ಡಾಯವಾಗಿದೆ. ಆದರೆ ಜನರು ಅದನ್ನು ಅನುಸರಿಸುತ್ತಿಲ್ಲ. ಹಾಗಾಗಿ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಹಿಂಬದಿ ಸೀಟಿನಲ್ಲಿರುವವರು ಕಡ್ಡಾಯವಾಗಿ ಬೆಲ್ಟ್ ಧರಿಸದೇ ಇದ್ದಲ್ಲಿ ದಂಡ ವಿಧಿಸಲಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

    ದಂಡ ವಸೂಲಿ ಮಾಡುವುದು ಸರ್ಕಾರದ ಉದ್ದೇಶವಲ್ಲ. ಜಾಗೃತಿ ಮೂಡಿಸುವುದು ನಮ್ಮ ಉದ್ದೇಶ. ಈ ನೀತಿಯ ಹಿಂದೆ 2024ರ ವೇಳೆಗೆ ರಸ್ತೆ ಅಪಘಾತಗಳನ್ನು ಶೇ.50 ರಷ್ಟು ಕಡಿಮೆ ಮಾಡುವ ಗುರಿಯೂ ಇದೆ. ಹಾಗಾಗಿ ನಿಗಾ ವಹಿಸಲು ಹೆಚ್ಚುವರಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ. ಕನಿಷ್ಠ ದಂಡ 1 ಸಾವಿರ ರೂಪಾಯಿ ಇರುತ್ತದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಮಳೆ; ನಾಳೆ ಬೆಂಗಳೂರು ಪೂರ್ವ ಭಾಗದ ಶಾಲೆಗಳಿಗೆ ರಜೆ

    ಇದೇ ವೇಳೆ ಕಳೆದ 5 ವರ್ಷಗಳಲ್ಲಿ ಮಹಾರಾಷ್ಟ್ರದಲ್ಲಿ ನಡೆದ ರಸ್ತೆ ಅಪಘಾತಗಳಲ್ಲಿ 59 ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 80 ಸಾವಿರದಷ್ಟು ಜನ ಗಂಭೀರ ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ಹೆದ್ದಾರಿ ಪೊಲೀಸರು ಇಂದು ಬಿಡುಗಡೆ ಮಾಡಿದ ಅಂಕಿ-ಅಂಶಗಳನ್ನು ಬಹಿರಂಗಪಡಿಸಿದ್ದಾರೆ.

    ಅಲ್ಲದೇ `ಭಾರತದಲ್ಲಿ ರಸ್ತೆ ಅಪಘಾತಗಳು – 2020′ ಎಂಬ ಶೀರ್ಷಿಕೆಯ ವರದಿಯ ಪ್ರಕಾರ, ರಸ್ತೆ ಅಪಘಾತದಲ್ಲಿ ಉಂಟಾದ ಶೇ.11ಕ್ಕಿಂತ ಹೆಚ್ಚು ಸಾವುಗಳು ಸೀಟ್ ಬೆಲ್ಟ್ ಬಳಸದ ಕಾರಣದಿಂದ ಸಂಭವಿಸಿದ್ದರೇ, ಹೆಲ್ಮೆಟ್ ಧರಿಸದ ಕಾರಣದಿಂದ ಶೇ.30.1 ರಷ್ಟು ಸಾವುಗಳು ಸಂಭವಿಸಿದೆ. ಶೇ.26 ರಷ್ಟು ಮಂದಿ ಗಾಯಗೊಂಡಿದ್ದಾರೆ ಎಂದು ಅವರು ವರದಿಯನ್ನು ವಿವರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಾನವೀಯತೆ ಮೆರೆದ ಸಚಿವ ಬೈರತಿ ಬಸವರಾಜ್‌, ಸಿ.ಟಿ ರವಿ

    ಮಾನವೀಯತೆ ಮೆರೆದ ಸಚಿವ ಬೈರತಿ ಬಸವರಾಜ್‌, ಸಿ.ಟಿ ರವಿ

    ಹಾಸನ: ಅಪಘಾತದಲ್ಲಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದವರನ್ನು ಸಚಿವ ಬೈರತಿ ಬಸವರಾಜ್ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಆಸ್ಪತ್ರೆಗೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

    ಹಾಸನ ಜಿಲ್ಲೆ ಚನ್ನರಾಯಪಟ್ಟಣದ ತಾಲ್ಲೂಕಿನ ಸಕಟಹಗೆರೆ ಗ್ರಾಮದ ಬಳಿ ಅಪರಿಚಿತ ವಾಹನ ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿತ್ತು. ಇದೇ ವೇಳೆ ಬೆಂಗಳೂರಿನಿಂದ ಚನ್ನರಾಯಪಟ್ಟಣ ಮಾರ್ಗವಾಗಿ ಚಿಕ್ಕಮಗಳೂರು ಜಿಲ್ಲೆಯ ದೇವನೂರು ಕೆರೆಗೆ ಬಾಗಿನ ಅರ್ಪಿಸಲು ಸಚಿವ ಬೈರತಿ ಬಸವರಾಜ್‌ ತೆರಳುತ್ತಿದ್ದರು. ಸಚಿವರೊಂದಿಗೆ ಸಿ.ಟಿ.‌ರವಿ ಕೂಡ ಇದ್ದರು. ಇದನ್ನೂ ಓದಿ: ಮುಂಬೈ ತಾಜ್ ಹೋಟೆಲ್ ಮಾದರಿಯಲ್ಲೇ ಭೀಕರ ಗುಂಡಿನ ದಾಳಿ – 8 ನಾಗರಿಕರ ಬಲಿ

    ರಸ್ತೆಯಲ್ಲಿ ಅಪಘಾತ ನಡೆದಿರುವುದನ್ನು ಕಂಡ ಕೂಡಲೇ ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲು ತಮ್ಮ ಬೆಂಗಾವಲು ವಾಹನ ಕಳುಹಿಸಿಕೊಟ್ಟರು. ಗಾಯಾಳುಗಳನ್ನು ಚನ್ನರಾಯಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದರು.

    ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    Live Tv
    [brid partner=56869869 player=32851 video=960834 autoplay=true]

  • ಭೀಕರ ರಸ್ತೆ ಅಪಘಾತದಲ್ಲಿ 6 ಸಾವು, 20 ಮಂದಿಗೆ ಗಾಯ

    ಭೀಕರ ರಸ್ತೆ ಅಪಘಾತದಲ್ಲಿ 6 ಸಾವು, 20 ಮಂದಿಗೆ ಗಾಯ

    ಜೈಪುರ: ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭಾರೀ ರಸ್ತೆ ಅಪಘಾತದಲ್ಲಿ 6 ಜನರು ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಜಿಲ್ಲೆಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರ‍್ಯಾಕ್ಟರ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಜೀವ ಕಳೆದುಕೊಂಡಿದ್ದಾರೆ ಎಂದು ಸುಮೇರ್‌ಪುರ ಪೊಲೀಸ್ ಠಾಣೆ ಪ್ರಭಾರಿ ರಾಮೇಶ್ವರ ಭಾಟಿ ತಿಳಿಸಿದ್ದಾರೆ. ಇದನ್ನೂ ಓದಿ: ರಂಭಾಪುರಿ ಶ್ರೀ ಬಳಿ ನೋವು ತೋಡಿಕೊಂಡಿಲ್ಲ, ಆಗಿದ್ದು ಹೇಳಿದ್ದೇನೆ ಅಷ್ಟೇ: ಸಿದ್ದರಾಮಯ್ಯ ಸ್ಪಷ್ಟನೆ

    ಯಾತ್ರಾರ್ಥಿಗಳು ಜೈಸಲ್ಮೇರ್‌ನ ರಾಮದೇವ್ರಾದ ಬಾಬಾ ರಾಮ್‌ದೇವ್ ದೇವಾಲಯದಿಂದ ಹಿಂದಿರುಗುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಶೋಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹತ್ಯೆ ಸಂಚು ಆರೋಪ ಬೆನ್ನಲ್ಲೇ ಖಾಕಿ ಅಲರ್ಟ್- ಸಿದ್ದರಾಮಯ್ಯಗೆ SPಯಿಂದ ಫುಲ್ ಎಸ್ಕಾರ್ಟ್

    ರಾಜಸ್ಥಾನದ ಪಾಲಿಯಲ್ಲಿ ಸಂಭವಿಸಿದ ಅಪಘಾತ ದುಃಖಕರವಾಗಿದೆ. ಈ ಸಮಯದಲ್ಲಿ, ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇದೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬಸ್, ತೈಲ ಟ್ಯಾಂಕರ್ ನಡುವೆ ಡಿಕ್ಕಿ – ಸುಟ್ಟು ಕರಕಲಾದ 20 ಜನ

    ಬಸ್, ತೈಲ ಟ್ಯಾಂಕರ್ ನಡುವೆ ಡಿಕ್ಕಿ – ಸುಟ್ಟು ಕರಕಲಾದ 20 ಜನ

    ಇಸ್ಲಾಮಾಬಾದ್: ಪ್ರಯಾಣಿಕರ ಬಸ್ ಹಾಗೂ ತೈಲ ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿ 20 ಮಂದಿ ಸಜೀವ ದಹನವಾಗಿರುವ ಘಟನೆ ಮಂಗಳವಾರ ಪಾಕಿಸ್ತಾನದ ಪಂಜಾಬ್‌ನಲ್ಲಿ ನಡೆದಿದೆ. ಇದು ಕೇವಲ 3 ದಿನಗಳಲ್ಲಿ ಈ ಪ್ರದೇಶದಲ್ಲಿ ನಡೆದ 2ನೇ ದೊಡ್ಡ ರಸ್ತೆ ಅವಘಡವಾಗಿದೆ.

    ಲಾಹೋರ್‌ನಿಂದ ಸುಮಾರು 350 ಕಿ.ಮೀ ದೂರದಲ್ಲಿರುವ ಮುಲ್ತಾನ್‌ನ ಮೋಟಾರು ಮಾರ್ಗದಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ಹಲವು ಗಂಟೆಗಳ ಕಾಲ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿತ್ತು. ಅಗ್ನಿಶಾಮಕ ದಳ ಹಾಗೂ ರಕ್ಷಣಾ ತಂಡಗಳು ಪರಿಸ್ಥಿತಿಯನ್ನು ಹತೋಟಿಗೆ ತರಲು ಹರಸಾಹಸ ಪಟ್ಟಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಮತ್ತೆ ಪಂಡಿತರು ಟಾರ್ಗೆಟ್ – ಓರ್ವನ ಹತ್ಯೆ, ಮತ್ತೋರ್ವ ಗಂಭೀರ

    ಲಾಹೋರ್‌ನಿಂದ ಕರಾಚಿಗೆ ಹೋಗುತ್ತಿದ್ದ ಬಸ್ ಹಾಗೂ ತೈಲದ ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿ 20 ಜನರು ಸಾವನ್ನಪ್ಪಿದ್ದಾರೆ. ಡಿಕ್ಕಿಯ ರಭಸಕ್ಕೆ ಬಸ್ ಮತ್ತು ಟ್ಯಾಂಕರ್ ಎರಡೂ ಹೊತ್ತಿ ಉರಿದಿವೆ. ಪ್ರಯಾಣಿಕರು ಸುಟ್ಟು ಕರಕಲಾಗಿದ್ದಾರೆ. ಹಲವರಿಗೆ ತೀವ್ರವಾದ ಸುಟ್ಟ ಗಾಯಗಳಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯೂ ಇದೆ. ಗಾಯಾಳುಗಳನ್ನು ಮುಲ್ತಾನ್‌ನ ನಿಶ್ತಾರ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ನದಿ ಕಣಿವೆಗೆ ಉರುಳಿದ ಬಸ್- 6 ಮಂದಿ ಯೋಧರು ಹುತಾತ್ಮ

    ಹಲವು ಮೃತದೇಹಗಳು ಸಂಪೂರ್ಣವಾಗಿ ಸುಟ್ಟು ಹೋಗಿರುವುದರಿಂದ ಗುರುತು ಪತ್ತೆ ಹಚ್ಚಲು ಕಷ್ಟವಾಗುತ್ತಿದೆ. ಮೃತದೇಹಗಳ ಡಿಎನ್‌ಎ ಪರೀಕ್ಷೆಯ ಬಳಿಕ ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗುವುದು ಎಂದು ಹೇಳಿದ್ದಾರೆ.

    ಶನಿವಾರ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಪ್ರಯಾಣಿಕ ಬಸ್‌ಗೆ ಲೋಡ್ ಟ್ರಕ್ ಡಿಕ್ಕಿ ಹೊಡೆದು 12 ಜನರು ಸಾವನ್ನಪ್ಪಿದ್ದರು.

    Live Tv
    [brid partner=56869869 player=32851 video=960834 autoplay=true]