Tag: Road Accident

  • ಕಾರು-ಬಸ್ ನಡ್ವೆ ಭೀಕರ ಅಪಘಾತ; ತಂದೆ-ಮಗ ಸ್ಥಳದಲ್ಲೇ ಸಾವು

    ಕಾರು-ಬಸ್ ನಡ್ವೆ ಭೀಕರ ಅಪಘಾತ; ತಂದೆ-ಮಗ ಸ್ಥಳದಲ್ಲೇ ಸಾವು

    ಕಲಬುರಗಿ: ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ (Road Accident) ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬುರ ಕೆ ಗ್ರಾಮದ ಬಳಿ ಇಂದು ಸಂಜೆ ನಡೆದಿದೆ.

    ಸೋಮಶೇಖರ್ (55), ಪ್ರಕಾಶ್ (28) ಮೃತ ದುರ್ದೈವಿಗಳಾಗಿದ್ದು, ಮೃತರು ಬಾಗಲಕೋಟೆ (Bagalakote) ಜಿಲ್ಲೆಯವರಾಗಿದ್ದು, ಕಾರಿನಲ್ಲಿದ್ದ ತಂದೆ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿದಾರೆ. ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್‌ ಜಾಮ್‌ – ಆಸ್ಪತ್ರೆಗೆ ಸಾಗಿಸಲಾಗದೇ ಅಂಬುಲೆನ್ಸ್‌ನಲ್ಲೇ ಮಹಿಳೆ ಸಾವು

    ಕಲಬುರಗಿ (Kalaburagi) ಕಡೆಯಿಂದ ಬಾಗಲಕೋಟೆಯ ಬಿಳಗಿ ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಎದುರಿಗೆ ಬಂದ ಎನ್‌ಇಕೆಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಅವಘಡ ಸಂಭವಿಸಿದೆ. ಇದನ್ನೂ ಓದಿ: ಮತಗಳ್ಳತನ ಆರೋಪ: ದಾಖಲೆ ಕೊಡುವಂತೆ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್

    ಇನ್ನೂ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಕುಳಿತಿದ್ದ ತಂದೆ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಸೋಮಶೇಖರ್ ಪತ್ನಿ ಗಾಯಗೊಂಡಿದ್ದು, ಕಲಬುರಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಗಾಣಗಾಪುರ ಠಾಣೆಯ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ʻಎಲ್ಲರ ಬಾಸ್‌ ನಾವೇʼ ಅನ್ನೋರು ಭಾರತದ ಬೆಳವಣಿಗೆ ಸಹಿಸುತ್ತಿಲ್ಲ – ಟ್ರಂಪ್‌ಗೆ ರಾಜನಾಥ್‌ ಸಿಂಗ್‌ ಗುದ್ದು

  • ದಾವಣಗೆರೆ | ಸ್ಕೂಟರ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ – ಆರ್‌ಟಿಓ ಅಧೀಕ್ಷಕ ಸಾವು

    ದಾವಣಗೆರೆ | ಸ್ಕೂಟರ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ – ಆರ್‌ಟಿಓ ಅಧೀಕ್ಷಕ ಸಾವು

    ದಾವಣಗೆರೆ: ಸ್ಕೂಟರ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಆರ್‌ಟಿಓ ಅಧೀಕ್ಷಕ ಸ್ಥಳದಲ್ಲೇ ಮೃತಪಟ್ಟ ಘಟನೆ ದಾವಣಗೆರೆ (Davanagere) ನಗರದ ರಿಂಗ್ ರೋಡ್‌ನ ನವೋದಯ ಶಾಲೆ ಎದುರು ನಡೆದಿದೆ.

    ಆರ್‌ಟಿಓ ಕಚೇರಿಯ ಅಧೀಕ್ಷಕರಾಗಿದ್ದ ತಿಪ್ಪೇಸ್ವಾಮಿ (43) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಹೆಂಡತಿಗಾಗಿ ಕಳ್ಳ ಪೊಲೀಸ್ ಆದ, ಕಾನ್‌ಸ್ಟೇಬಲ್ ಸಸ್ಪೆಂಡ್‌ ಆದ!

    ನಗರದ ರಿಂಗ್ ರೋಡ್ ಬಳಿ ತಿಪ್ಪೇಸ್ವಾಮಿ ಅವರು ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ವೇಗವಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ತಿಪ್ಪೇಸ್ವಾಮಿ ಅವರು ರಸ್ತೆಗೆ ಬಿದ್ದಿದ್ದರು. ಅವರು ಹೆಲ್ಮೆಟ್ ಧರಿಸಿದ್ದರೂ ಬಸ್‌ನ ಟೈಯರ್ ಅವರ ತಲೆಯ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: Dharmasthala‌ Case | ಅಸ್ಥಿ ರಹಸ್ಯ ಭೇದಿಸಲು ಹೊರಟ ಎಸ್‌ಐಟಿ – 13ರ ಬದಲು 15ನೇ ಪಾಯಿಂಟ್‌ನಲ್ಲಿ ಶೋಧ

    ಮೂಲತ: ಚಿಕ್ಕಮಗಳೂರು ಜಿಲ್ಲೆಯ ತರಿಕೆರೆ ತಾಲೂಕಿ ಶಿವಣಿ ನಿವಾಸಿಯಾಗಿದ್ದ ತಿಪ್ಪೇಸ್ವಾಮಿ ಅವರು ದಾವಣಗೆರೆಯಲ್ಲಿ ಆರ್‌ಟಿಓ ಕಚೇರಿಯ ಅಧೀಕ್ಷಕರಾಗಿದ್ದರು.

    ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಜಿಎಂ ಗಂಗಾಧರಸ್ವಾಮಿ, ನಗರ ಡಿವೈಎಸ್ಪಿ ಶರಣಬಸವೇಶ್ವರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ತಂಗಿಯ ಸೀಮಂತಕ್ಕೆ ಬಂದಿದ್ದ ಅಕ್ಕನಿಗೆ ಬಸ್ಸಿನಿಂದ ಇಳಿಯುವಾಗ ಕಾರು ಡಿಕ್ಕಿ – ರಕ್ತಸ್ರಾವದಿಂದ ಸಾವು

    ತಂಗಿಯ ಸೀಮಂತಕ್ಕೆ ಬಂದಿದ್ದ ಅಕ್ಕನಿಗೆ ಬಸ್ಸಿನಿಂದ ಇಳಿಯುವಾಗ ಕಾರು ಡಿಕ್ಕಿ – ರಕ್ತಸ್ರಾವದಿಂದ ಸಾವು

    ನೆಲಮಂಗಲ: ತಂಗಿಯ ಸೀಮಂತಕ್ಕೆಂದು ಬಂದಿದ್ದ ಅಕ್ಕನಿಗೆ ಬಸ್ಸಿನಿಂದ ಇಳಿಯುವಾಗ ಕಾರು ಡಿಕ್ಕಿಯಾಗಿ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿರುವ ಘಟನೆ ಬೆಂಗಳೂರು (Bengaluru) ಹೊರವಲಯ ನೆಲಮಂಗಲದ (Nelamangala) ಮಾದವಾರ ಬಸ್ ನಿಲ್ದಾಣದ ಬಳಿ ನಡೆದಿದೆ.

    ಹಾಲಗೇರಿ ಗ್ರಾಮದ ಕುಷ್ಠಿಗಿ ತಾಲೂಕಿನ ಜಯಶ್ರೀ (42) ಮೃತ ಮಹಿಳೆ. ಗುರುವಾರ ಬೆಳಿಗ್ಗೆ ಬಸ್ಸಿನಿಂದ ಇಳಿಯುವಾಗ ಈ ಅವಘಡ ಸಂಭವಿಸಿದೆ.ಇದನ್ನೂ ಓದಿ:ಮೋದಿಯಿಂದ ಯೆಲ್ಲೋ ಮೆಟ್ರೋ ಲೈನ್ ಲೋಕಾರ್ಪಣೆ; ಪ್ರಧಾನಿ ಸ್ವಾಗತಕ್ಕೆ ಬಿಜೆಪಿ ಭರ್ಜರಿ ಸಿದ್ಧತೆ

    ಮೃತ ಜಯಶ್ರೀ ತಂಗಿಯ ಸೀಮಂತಕ್ಕೆಂದು ಮಾದಾವರಕ್ಕೆ ಬಂದಿದ್ದರು. ಮಾದಾವರ ಬಸ್ ನಿಲ್ದಾಣದಲ್ಲಿ ಬಸ್ಸಿಂದ ಇಳಿಯುವಾಗ ಕಾರೊಂದು ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ತೀವ್ರ ರಕ್ತಸ್ರಾವವಾಗಿ ಜಯಶ್ರೀ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

    ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಶವಗಾರಕ್ಕೆ ಕಳುಹಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಪೊಲೀಸರು ಕಾರು ಚಾಲಕ ಹಾಗೂ ಕಾರನ್ನು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ.ಇದನ್ನೂ ಓದಿ: ಕಾರವಾರ| ಧಾರಾಕಾರ ಮಳೆಗೆ ಕುಸಿದ 2 ಮನೆಗಳು

  • ಕಂದಕಕ್ಕೆ ಬಿದ್ದ ಸಿಆರ್‌ಪಿಎಫ್ ವಾಹನ – ಮೂವರು ಹುತಾತ್ಮ, 16 ಮಂದಿಗೆ ಗಾಯ

    ಕಂದಕಕ್ಕೆ ಬಿದ್ದ ಸಿಆರ್‌ಪಿಎಫ್ ವಾಹನ – ಮೂವರು ಹುತಾತ್ಮ, 16 ಮಂದಿಗೆ ಗಾಯ

    ಶ್ರೀನಗರ: ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ವಾಹನ ಅಪಘಾತಕ್ಕೀಡಾಗಿ ಕಂದಕಕ್ಕೆ ಉರುಳಿದ ಪರಿಣಾಮ ಮೂವರು ಹುತಾತ್ಮರಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಬಸಂತ್‌ಗಢದ (Basantgarh) ಕಾಂಡ್ವಾ (Kadwa) ಬಳಿ ನಡೆದಿದೆ.

    ಗುರುವಾರ ಬೆಳಗ್ಗೆ 10:30ರ ಸುಮಾರಿಗೆ ಬಸಂತ್‌ಗಢದಿಂದ ಕಾರ್ಯಾಚರಣೆ ಮುಗಿಸಿ ಸಿಬ್ಬಂದಿ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. 187ನೇ ಬೆಟಾಲಿಯನ್‌ಗೆ ಸೇರಿದ ವಾಹನದಲ್ಲಿ 23 ಸಿಬ್ಬಂದಿ ಇದ್ದರು. ಇದನ್ನೂ ಓದಿ: ಸುಧಾಕರ್ ಹೆಸರು ಬರೆದಿಟ್ಟು ಚಾಲಕ ಆತ್ಮಹತ್ಯೆ – ರಾಜಕೀಯ ಒತ್ತಡ ಇಲ್ಲದೆ ತನಿಖೆ: ಎಂ.ಸಿ ಸುಧಾಕರ್

    ಅಪಘಾತದಲ್ಲಿ ಮೂವರು ಸಿಆರ್‌ಪಿಎಫ್ ಸಿಬ್ಬಂದಿ ಮೃತಪಟ್ಟಿದ್ದು 16 ಮಂದಿ ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಎಂದು ಹೆಚ್ಚುವರಿ ಎಸ್‌ಪಿ ಉಧಂಪುರ ಸಂದೀಪ್ ಭಟ್ ಅವರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅನಾಮಿಕ ಉಜಿರೆಯ ವ್ಯಕ್ತಿಯ ಮನೆಯಲ್ಲಿ ಉಳಿಯುತ್ತಿದ್ದಾನೆ, ನಿಮ್ಮ ವಶಕ್ಕೆ ಪಡೆಯಿರಿ: SITಗೆ ಮನವಿ

    ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಸಿಆರ್‌ಪಿಎಫ್ ಸಿಬ್ಬಂದಿಯ ಸಾವಿಗೆ ದುಃಖ ವ್ಯಕ್ತಪಡಿಸಿದ್ದಾರೆ. ಎಲ್‌ಜಿ ಕಚೇರಿಯ ಎಕ್ಸ್ ಪೋಸ್ಟ್‌ನಲ್ಲಿ, ಉಧಮ್‌ಪುರ ಬಳಿ ಅಪಘಾತದಲ್ಲಿ ಸಿಆರ್‌ಪಿಎಫ್ ಸಿಬ್ಬಂದಿಯ ಸಾವಿನಿಂದ ದುಃಖಿತನಾಗಿದ್ದೇನೆ. ರಾಷ್ಟ್ರಕ್ಕೆ ಅವರ ಅನುಕರಣೀಯ ಸೇವೆಯನ್ನು ನಾವು ಎಂದಿಗೂ ಮರೆಯುವುದಿಲ್ಲ. ಹುತಾತ್ಮರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಅಲ್ಲದೇ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಸಾಧ್ಯವಾದಷ್ಟು ಉತ್ತಮ ಆರೈಕೆ ಮತ್ತು ಸಹಾಯವನ್ನು ಖಚಿತಪಡಿಸಿಕೊಳ್ಳಲು ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದಿದ್ದಾರೆ.

    ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಕಾಂಡ್ವಾ-ಬಸಂತ್‌ಗಢ ಪ್ರದೇಶದಲ್ಲಿ ಸಿಆರ್‌ಪಿಎಫ್ ವಾಹನಕ್ಕೆ ಅಪಘಾತ ಸಂಭವಿಸಿದ ಸುದ್ದಿ ಕೇಳಿ ಬೇಸರವಾಯಿತು. ವಾಹನದಲ್ಲಿ ಹಲವಾರು ಧೈರ್ಯಶಾಲಿ ಸಿಆರ್‌ಪಿಎಫ್ ಯೋಧರು ಇದ್ದರು. ನಾನು ಇದೀಗ ಜಿಲ್ಲಾಧಿಕಾರಿ ಸಲೋನಿ ರೈ ಅವರೊಂದಿಗೆ ಮಾತನಾಡಿದ್ದೇನೆ, ಅವರು ಪರಿಸ್ಥಿತಿಯನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಮತ್ತು ನನಗೆ ಮಾಹಿತಿ ನೀಡುತ್ತಿದ್ದಾರೆ. ರಕ್ಷಣಾ ಕ್ರಮಗಳನ್ನು ತಕ್ಷಣವೇ ಪ್ರಾರಂಭಿಸಲಾಗಿದೆ. ಸ್ಥಳೀಯರು ಸ್ವಯಂಪ್ರೇರಣೆಯಿಂದ ಸಹಾಯ ಮಾಡಲು ಮುಂದೆ ಬಂದಿದ್ದಾರೆ. ಸಾಧ್ಯವಿರುವ ಎಲ್ಲ ಸಹಾಯವನ್ನು ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

  • ಬಿಹಾರ | ಕನ್ವರ್‌ ಯಾತ್ರಾರ್ಥಿಗಳಿದ್ದ ವ್ಯಾನ್ ಕಂದಕಕ್ಕೆ ಪಲ್ಟಿ – ಐವರ ದುರ್ಮರಣ

    ಬಿಹಾರ | ಕನ್ವರ್‌ ಯಾತ್ರಾರ್ಥಿಗಳಿದ್ದ ವ್ಯಾನ್ ಕಂದಕಕ್ಕೆ ಪಲ್ಟಿ – ಐವರ ದುರ್ಮರಣ

    ಪಾಟ್ನಾ: ಕನ್ವರ್‌ ಯಾತ್ರಾರ್ಥಿಗಳಿದ್ದ (Kanwariyas) ವ್ಯಾನ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ಬಿಹಾರದ (Bihar) ಭಗಲ್ಪುರ ಜಿಲ್ಲೆಯ ಶಹಕುಂಡ್‌ನಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

    ಪುರಾನಿ ನಿವಾಸಿಗಳಾದ ಸಂತೋಷ್ ಕುಮಾರ್ (18), ಮನೋಜ್ ಕುಮಾರ್ (24), ವಿಕ್ರಮ್ ಕುಮಾರ್ (23), ಅಂಕುಶ್ ಕುಮಾರ್ (18) ಹಾಗೂ ರವೀಶ್ ಕುಮಾರ್ (18) ಮೃತರೆಂದು ಗುರುತಿಸಲಾಗಿದೆ. ಇದನ್ನೂ ಓದಿ: ಬೆಂಗಳೂರು | Forgive Me ಅಂತ ಡೆತ್‌ ನೋಟ್‌ ಬರೆದಿಟ್ಟು 13ರ ಬಾಲಕ ಆತ್ಮಹತ್ಯೆ

    ಯಾತ್ರಾರ್ಥಿಗಳು ಶಹಕುಂಡ್‌ನ ಪುರಾನಿ ಖರೈನಿಂದ ಸುಲ್ತಾನಗಂಜ್‌ಗೆ ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಿ, ನಂತರ ನಂತರ ಜೆಥೌರ್ ನಾಥ್ ದೇವಾಲಯದಲ್ಲಿ ಪೂಜೆ ಮಾಡಲು ಹೊರಟ್ಟಿದ್ದರು ಎನ್ನಲಾಗಿದೆ. ವಾಹನದಲ್ಲಿ ಒಟ್ಟು 9 ಮಂದಿ ಪ್ರಯಾಣಿಸುತ್ತಿದ್ದರು. ಈ ಪೈಕಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಸ್ಥಿತಿ ಗಂಭೀರವಾಗಿದ್ದು, ಇನ್ನುಳಿದವರು ಸಣ್ಣ-ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯಾಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ವಿಧಿವಶ

    ಶಹಕುಂಡ್ ಸುಲ್ತಾನಗಂಜ್ ಮುಖ್ಯ ರಸ್ತೆಯಲ್ಲಿರುವ ಮಹತೋ ಸ್ಥಾನದ ಬಳಿ ಆಟೋ ರಿಕ್ಷಾವನ್ನು ಓವರ್‌ಟೇಕ್ ಮಾಡುವ ಭರದಲ್ಲಿ ವ್ಯಾನ್‌ಗೆ ವಿದ್ಯುತ್ ತಂತಿಗೆ ತಗುಲಿತ್ತು. ಚಾಲಕನಿಗೆ ವಿದ್ಯುತ್ ಸ್ಪರ್ಶಿಸಿ ವ್ಯಾನ್ ನಿಯಂತ್ರಣ ತಪ್ಪಿ ಕಂದಕ್ಕೆ ಉರುಳಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

  • ನಂದಿಬೆಟ್ಟದ ರಸ್ತೆಯಲ್ಲಿ ಅಪಘಾತ – Friendship Day ದಿನವೇ ಪ್ರಾಣ ಬಿಟ್ಟ ಸ್ನೇಹಿತರು

    ನಂದಿಬೆಟ್ಟದ ರಸ್ತೆಯಲ್ಲಿ ಅಪಘಾತ – Friendship Day ದಿನವೇ ಪ್ರಾಣ ಬಿಟ್ಟ ಸ್ನೇಹಿತರು

    ಚಿಕ್ಕಬಳ್ಳಾಪುರ: ಸ್ನೇಹಿತರ ದಿನದ ಹಿನ್ನೆಲೆ ಬೈಕಿನಲ್ಲಿ ನಂದಿಬೆಟ್ಟಕ್ಕೆ ತೆರಳಿದ್ದ ಇಬ್ಬರು ಫ್ರೆಂಡ್ಸ್‌ ಅಪಘಾತಕ್ಕೆ ಬಲಿಯಾಗಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲ್ಲೂಕಿನ ನಂದಿಬೆಟ್ಟದ ರಸ್ತೆಯ 15ನೇ ತಿರುವಿನ ಬಳಿ ಸಂಭವಿಸಿದೆ.

    ಚಿಕ್ಕಬಳ್ಳಾಪುರ ತಾಲ್ಲೂಕಿನ ಕಣಿತಹಳ್ಳಿ ಗ್ರಾಮದ ಅರವಿಂದ್ (21) ಹಾಗೂ ಶ್ರೀಕಾಂತ್ (21) ಮೃತರು. ಇಬ್ಬರು ಸ್ನೇಹಿತರಾಗಿದ್ದು Friendship Day ಅಂಗವಾಗಿ ಪ್ಲ್ಯಾನ್‌ ಮಾಡಿಕೊಂಡು ಒಂದೇ ಬೈಕಿನಲ್ಲಿ‌ ಬೆಟ್ಟಕ್ಕೆ ಹೋಗಿ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಕಲಬುರಗಿ ಕೇಂದ್ರಿಯ ವಿವಿ ಆವರಣದಲ್ಲಿ ಗೋರಿ – ರಾತ್ರೋರಾತ್ರಿ ಕಾಂಪೌಂಡ್‌ ನಿರ್ಮಾಣ

    ರಸ್ತೆ ಬದಿಯ ದೊಡ್ಡ ಬಂಡೆಗಲ್ಲಿಗೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ತಲೆಗಳಿಗೆ ಗಂಭೀರ ಗಾಯಗಾಳಾಗಿ ಇಬ್ಬರೂ ಮೃತಪಟ್ಟಿದ್ದಾರೆ. ಮೃತದೇಹಗಳನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಕೊಪ್ಪಳ| ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ ಕೊಲೆ

  • ಸರಯೂ ನದಿಗೆ ಬಿದ್ದ ಕಾರು – ದೇವಸ್ಥಾನಕ್ಕೆ ಹೊರಟ್ಟಿದ್ದ 11 ಜನ ಮಸಣಕ್ಕೆ; ಮೋದಿ ಸಂತಾಪ

    ಸರಯೂ ನದಿಗೆ ಬಿದ್ದ ಕಾರು – ದೇವಸ್ಥಾನಕ್ಕೆ ಹೊರಟ್ಟಿದ್ದ 11 ಜನ ಮಸಣಕ್ಕೆ; ಮೋದಿ ಸಂತಾಪ

    – ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

    ಲಕ್ನೋ: ಬೊಲೆರೊ ಕಾರು ಸರಯೂ ನದಿಗೆ (Saryu canal) ಬಿದ್ದು 11 ಜನರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ಸಂಭವಿಸಿದೆ. ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ .

    ಉತ್ತರ ಪ್ರದೇಶದ ಗೊಂಡಾಯಲ್ಲಿ (Gonda) ಘಟನೆ ನಡೆದಿದೆ. ಮೃತರು ಸಿಹಗಾಂವ್‌ನಿಂದ ಖರ್ಗುಪುರದ ಪೃಥ್ವಿನಾಥ ದೇವಸ್ಥಾನದಲ್ಲಿ (Prithvi Nath Temple) ಪ್ರಾರ್ಥನೆ ಸಲ್ಲಿಸಲು ಹಾಗೂ ಪವಿತ್ರ ನೀರು ಅರ್ಪಿಸಲು ಬೊಲೆರೊ ಕಾರಿನಲ್ಲಿ ಹೊರಟಿದ್ದರು. ಬೆಲ್ವಾ ಬಹುತಾ ಬಳಿ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿ ಚಾಲಕ ಸೇರಿದಂತೆ 15 ಜನರಿದ್ದ ಕಾರು ಸರಯೂ ನದಿಗೆ ಬಿದ್ದಿದೆ. ಇದನ್ನೂ ಓದಿ: ಜಾಮೀನಿನ ಮೇಲೆ ಹೊರಗೆ ಬಂದು ಸಂತ್ರಸ್ತೆಗೆ ಗುಂಡು ಹಾರಿಸಿದ ರೇಪ್‌ ಆರೋಪಿ

    ಕಾರು ನದಿಗೆ ಬೀಳುತ್ತಿದ್ದಂತೆ ಗ್ರಾಮಸ್ಥರು ಕೂಡಲೇ ಪೊಲೀಸರಿಗೆ ಕರೆ ಮಾಡಿ ವಿಷಯ ಮುಟ್ಟಿಸಿದ್ದಾರೆ. ಆನಂತರ ಗ್ರಾಮಸ್ಥರು ಮತ್ತು ರಕ್ಷಣಾ ತಂಡದ ಸಹಾಯದಿಂದ 11 ಮೃತದೇಹಗಳನ್ನ ಹೊರತೆಗೆದಿದ್ದಾರೆ. ಇನ್ನುಳಿದ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೊತೆಗೆ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಘಟನೆಯ ತನಿಖೆ ಪ್ರಾರಂಭವಾಗಿದೆ.

    ಪಿಎಂ, ಸಿಎಂ ಸಂತಾಪ
    ಘಟನೆ ಕುರಿಯು ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಪ್ರಧಾನಿ ಮೋದಿ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಇದನ್ನೂ ಓದಿ: 77ನೇ ವಸಂತಕ್ಕೆ ಕಾಲಿಟ್ಟ ಸಿದ್ದರಾಮಯ್ಯಗೆ ಕನ್ನಡದಲ್ಲೇ ಶುಭ ಹಾರೈಸಿದ ತಮಿಳುನಾಡು ಸಿಎಂ

  • ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಸವಾರರ ದಾರುಣ ಸಾವು

    ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಸವಾರರ ದಾರುಣ ಸಾವು

    ಚಿಕ್ಕಬಳ್ಳಾಪುರ: ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ (Bike Accident) ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ಕನಗಾನಕೊಪ್ಪ ಗ್ರಾಮದ ಬಳಿ ನಡೆದಿದೆ.

    ಶನಿವಾರ ಘಟನೆ ನಡೆದಿದೆ. ಹೊನ್ನಪ್ಪನಹಳ್ಳಿ ಗ್ರಾಮದ ಒಬಳೇಷ್ (45) ಹಾಗೂ ಮಂಚೇನಹಳ್ಳಿಯ ಮೆಕ್ಯಾನಿಕ್ ಅಜ್ಗರ್ (35) ಮೃತರು. ಇದನ್ನೂ ಓದಿ: ರಾಜ್ಯದಲ್ಲಿ ರಸಗೊಬ್ಬರ ಕೊರತೆಗೆ ಕಳ್ಳದಂಧೆ ಕಾರಣ – ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ

    ಅಂದಹಾಗೆ ಎರಡು ಸ್ಪ್ಲೆಂಡರ್‌ ಬೈಕ್ ಗಳು ಮುಖಾಮುಖಿಯಾಗಿ ಡಿಕ್ಕಿಯಾಗಿದೆ. ಪರಿಣಾಮ ಇಬ್ಬರು ಸಹ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: 162 ಬಾರಿ ಫಾರಿನ್‌ ಟ್ರಿಪ್‌, 300 ಕೋಟಿ ಹಗರಣ – ನಕಲಿ ರಾಯಭಾರ ಕಚೇರಿ ರಹಸ್ಯ ಕಂಡು ಬೆಚ್ಚಿಬಿದ್ದ ಅಧಿಕಾರಿಗಳು

    ಇನ್ನೂ ಒಂದು ಬೈಕ್‌ನಲ್ಲಿದ್ದ ಇಬ್ಬರು ಹಿಂಬದಿ ಸವಾರರು ಗಾಯಗೊಂಡು ಆಸ್ಪತ್ರೆ ಪಾಲಾಗಿದ್ದಾರೆ. ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಗಾಯಾಳುಗಳಲ್ಲಿ ಒರ್ವನ ಸ್ಥಿತಿ ಗಂಭೀರ ಅಂತ ತಿಳಿದುಬಂದಿದೆ.

  • ಬಾಗಲಕೋಟೆ | ಬೈಕ್ ತಪ್ಪಿಸಲು ಹೋಗಿ ಕಾರಿನ ಮೇಲೆ ಲಾರಿ ಪಲ್ಟಿ – ಇಬ್ಬರು ದುರ್ಮರಣ

    ಬಾಗಲಕೋಟೆ | ಬೈಕ್ ತಪ್ಪಿಸಲು ಹೋಗಿ ಕಾರಿನ ಮೇಲೆ ಲಾರಿ ಪಲ್ಟಿ – ಇಬ್ಬರು ದುರ್ಮರಣ

    ಬಾಗಲಕೋಟೆ: ಬೈಕ್‌ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಕಾರಿನ ಮೇಲೆ ಲಾರಿ (Lorry) ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ 218ರ ಸೀಮಿಕೇರಿ (Simikeri) ಬಳಿ ನಡೆದಿದೆ.

    ಬಾಗಲಕೋಟೆ (Bagalkote) ತಾಲೂಕಿನ ಕೇಸನೂರು ಗ್ರಾಮದ ನಿವಾಸಿ ರಮೇಶ್ ಹೂಗಾರ(45) ಹಾಗೂ ಗದ್ದನಕೇರಿ ನಿವಾಸಿ ಅಕ್ಬರ್ ನಬಿಸಾಬ್ ಚೇರ್ಮನ್ (33) ಮೃತರೆಂದು ಗುರುತಿಸಲಾಗಿದೆ. ಇದನ್ನೂ ಓದಿ: ಉದಯಪುರದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ – ಶಿಕ್ಷಕರಿಂದ ಕಿರುಕುಳ ಆರೋಪ

    ಎದುರಿಗೆ ಬಂದ ಬೈಕ್ ಡಿಕ್ಕಿಯಾಗುವುದನ್ನೂ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಲಾರಿ, ಕಾರಿನ ಮೇಲೆ ಪಲ್ಟಿಯಾಗಿ ಬೈಕ್‌ಗೂ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ದುರ್ಮರಣಕ್ಕಿಡಾಗಿದ್ದು, ಕಾರು ಸಂಪೂರ್ಣ ಅಪ್ಪಚ್ಚಿಯಾಗಿದೆ. ಬೈಕ್‌ನಲ್ಲಿದ್ದ ಓರ್ವನಿಗೆ ಗಂಭೀರ ಗಾಯಗಳಾಗಿವೆ. ಇದನ್ನೂ ಓದಿ: ತೆಲಂಗಾಣ | ಡಿವೈಡರ್‌ಗೆ ಪೊಲೀಸ್ ವಾಹನ ಡಿಕ್ಕಿ – ಇಬ್ಬರು ಡಿಎಸ್ಪಿ ಸಾವು

    ಕಾರು ಮತ್ತು ಬೈಕ್ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದು, ವಿಜಯಪುರದ ಕಡೆಗೆ ಪ್ಲಾಸ್ಟಿಕ್ ಚೀಲಗಳಿರುವ ಬ್ಯಾಗ್ ಹೊತ್ತುಕೊಂಡು ಲಾರಿ ಹೊರಟಿತ್ತು. ಸ್ಥಳಕ್ಕೆ ಕಲಾದಗಿ ಪೊಲೀಸರು ಭೇಟಿ ನೀಡಿದ್ದು, ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ತೆಲಂಗಾಣ | ಡಿವೈಡರ್‌ಗೆ ಪೊಲೀಸ್ ವಾಹನ ಡಿಕ್ಕಿ – ಇಬ್ಬರು ಡಿಎಸ್ಪಿ ಸಾವು

    ತೆಲಂಗಾಣ | ಡಿವೈಡರ್‌ಗೆ ಪೊಲೀಸ್ ವಾಹನ ಡಿಕ್ಕಿ – ಇಬ್ಬರು ಡಿಎಸ್ಪಿ ಸಾವು

    ಹೈದರಾಬಾದ್: ತೆಲಂಗಾಣದ ಯಾದಾದ್ರಿಯಲ್ಲಿ (Yadadri) ಪೊಲೀಸ್ ವಾಹನವೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಡಿಎಸ್ಪಿ (Deputy Superintendent of Police) ಅಧಿಕಾರಿಗಳು ಸಾವನ್ನಪ್ಪಿದ್ದು, ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ.

    ಡಿಎಸ್ಪಿಗಳಾದ ಚಂದ್ರಕರ್ ರಾವ್ ಮತ್ತು ಶಾಂತಾ ರಾವ್‌ರನ್ನು ಮೃತರೆಂದು ಗುರುತಿಸಲಾಗಿದೆ. ಎಎಸ್ಪಿ ಪ್ರಸಾದ್ ಮತ್ತು ಹೆಡ್ ಕಾನ್‌ಸ್ಟೇಬಲ್ ನರಸಿಂಗ್ ರಾವ್ ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಹೈದ್ರಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಅಂಗಡಿ ಬಳಿ ಕುಳಿತವನ ಮೇಲೆ ಡೆಡ್ಲಿ ಅಟ್ಯಾಕ್ – ಚಿಕಿತ್ಸೆ ಫಲಿಸದೇ ಯುವಕ ಸಾವು

    ಪೊಲೀಸ್ ಅಧಿಕಾರಿಗಳು ಕೆಲಸದ ನಿಮಿತ್ತ ವಿಜಯವಾಡದಿಂದ ಹೈದರಾಬಾದ್‌ಗೆ (Hyderabad) ತೆರಳುತ್ತಿದ್ದ ವೇಳೆ ಯಾದಾದ್ರಿ ಜಿಲ್ಲೆಯ ಖೈತಪುರಂನಲ್ಲಿ ಬೆಳಗ್ಗೆ 5 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ಇದನ್ನೂ ಓದಿ: Rajasthan | ಶಾಲಾ ಮೇಲ್ಛಾವಣಿ ಕುಸಿದು 7 ವಿದ್ಯಾರ್ಥಿಗಳು ಸಾವು – ಐವರು ಶಿಕ್ಷಕರ ಅಮಾನತು

    ಚಾಲಕ ಅತಿ ವೇಗದಿಂದ ವಾಹನ ಚಲಾಯಿಸಿದ್ದರಿಂದ ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಕಾರು ರಸ್ತೆಯ ಇನ್ನೊಂದು ಬದಿಗೆ ಹಾರಿ ಬಿದ್ದು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಲಾರಿ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ಮದ್ಯಪಾನ ಮಾಡಿ ಶಾಲಾ ಅಡುಗೆ ಕೋಣೆ ಮುಂದೆ ಮಲಗಿದ್ದ ಮುಖ್ಯ ಶಿಕ್ಷಕ ಅಮಾನತು

    ಭೀಕರ ಅಪಘಾತದಲ್ಲಿ ಡಿಎಸ್ಪಿ ಚಂದ್ರಕರ್ ರಾವ್ ಮತ್ತು ಶಾಂತಾ ರಾವ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಾಲಕ ನರಸಿಂಗ್ ರಾವ್ ಮತ್ತು ಎಎಸ್‌ಪಿ ಪ್ರಸಾದ್‌ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಘಟನಾ ಸ್ಥಳಕ್ಕೆ ವಿಜಯವಾಡ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ರಾಚಕೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.