Tag: Road Accident

  • ಕೇಂದ್ರ ಸಚಿವ ಅಜಯ್ ಮಿಶ್ರಾ ಥೇನಿ ಸೋದರಳಿಯ ರಸ್ತೆ ಅಪಘಾತದಲ್ಲಿ ದುರ್ಮರಣ

    ಕೇಂದ್ರ ಸಚಿವ ಅಜಯ್ ಮಿಶ್ರಾ ಥೇನಿ ಸೋದರಳಿಯ ರಸ್ತೆ ಅಪಘಾತದಲ್ಲಿ ದುರ್ಮರಣ

    ಲಕ್ನೋ: ಕೇಂದ್ರ ಗೃಹ ಖಾತೆ ಸಚಿವ ಅಜಯ್ ಮಿಶ್ರಾ ಥೇನಿ ಅವರ ಸೋದರಳಿಯ ರಸ್ತೆ ಅಪಘಾತದಲ್ಲಿ ಇಂದು ಮೃತಪಟ್ಟಿದ್ದಾರೆ.

    ಸೋನು ಮಿಶ್ರಾ ಮೃತ ದುರ್ದೈವಿ. ಲಖಿಂಪುರ ಖೇರಿ ಜಿಲ್ಲೆಯಲ್ಲಿ ಸಂಜೆ 5:10ರ ಸುಮಾರಿಗೆ ಬೀಸಿದ ಪ್ರಬಲ ಬಿರುಗಾಳಿಯಿಂದ ಈ ದುರ್ಘಟನೆ ನಡೆದಿದೆ.

    ಸೋನು ಅವರು ಇಂದು ತಮ್ಮ ಮೋಟಾರ್ ಸೈಕಲ್‍ನಲ್ಲಿ ಬನ್ವಾರಿಪುರದಿಂದ ಲಖಿಂಪುರಕ್ಕೆ ಬರುತ್ತಿದ್ದರು. ಈ ವೇಳೆ ಖಂಬರಖೇಡ ಸಕ್ಕರೆ ಕಾರ್ಖಾನೆ ಬಳಿ ಜೋರಾಗಿ ಬಿರುಗಾಳಿ ಬೀಸಿದೆ. ಈ ಸಂದರ್ಭದಲ್ಲಿ ರಸ್ತೆ ಬದಿಯ ಮರವೊಂದು ಸೋನು ಅವರ ಬೈಕ್ ಮೇಲೆ ಬಿದ್ದಿದೆ. ಪರಿಣಾಮ ಬೈಕ್ ಸಮೇತ ಸೋನು ಮರದಡಿ ಅಪ್ಪಚ್ಚಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಜಮ್ಮು-ಕಾಶ್ಮೀರ ಗಡಿಯುದ್ದಕ್ಕೂ ಕಾಡ್ಗಿಚ್ಚು – ನೆಲಬಾಂಬ್‌ಗಳು ಸ್ಫೋಟ

    ಘಟನೆ ನಡೆದ ಕೂಡಲೇ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಹೇಗೋ ಮರವನ್ನು ಕಡಿದು ತೆಗೆದು, ಅವರ ಮೃತ ದೇಹವನ್ನು ತೆಗೆದರು. ಸ್ವಲ್ಪ ಸಮಯದ ನಂತರ ಮೃತಪಟ್ಟಿರುವುದು ಕೇಂದ್ರ ಗೃಹ ಖಾತೆ ಸಚಿವ ಅಜಯ್ ಮಿಶ್ರಾ ಥೇನಿ ಅವರ ಸೋದರಳಿಯ ಸೋನು ಮಿಶ್ರಾ ಎಂದು ಜನರಿಗೆ ತಿಳಿದುಬಂದಿದೆ. ಇದನ್ನೂ ಓದಿ: ಅಸ್ಸಾಂನಲ್ಲಿ ಪ್ರವಾಹ – 4 ಲಕ್ಷಕ್ಕೂ ಅಧಿಕ ಮಂದಿಗೆ ಹಾನಿ, ಕೊಚ್ಚಿಹೋದ ರಸ್ತೆ, ರೈಲು ಹಳಿ

    ಇತ್ತ ಅಜಯ್ ಮಿಶ್ರಾ ಥೇನಿ ಗುರುವಾರ ಪ್ರಯಾಗರಾಜ್‍ಗೆ ಬರಬೇಕಿತ್ತು. ಆದರೆ ಸೋದರಳಿಯನ ಮರಣದ ಸುದ್ದಿ ಕೇಳಿ ತಮ್ಮ ಎಲ್ಲಾ ಕೆಲಸವನ್ನು ಬಿಟ್ಟು ಅಂತಿಮ ಸಂಸ್ಕಾರಕ್ಕಾಗಿ ಅವರು ಲಖಿಂಪುರ ಖೇರಿಗೆ ತೆರಳಿದ್ದಾರೆ.

  • ರಸ್ತೆ ಕಾಣದೇ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಮಳೆಯ ಆರ್ಭಟಕ್ಕೆ ಮತ್ತೊಂದು ಬಲಿ

    ರಸ್ತೆ ಕಾಣದೇ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಮಳೆಯ ಆರ್ಭಟಕ್ಕೆ ಮತ್ತೊಂದು ಬಲಿ

    ಮಡಿಕೇರಿ: ಜಿಟಿಜಿಟಿ ಮಳೆಯೊಂದಿಗೆ ಮಂಜು ಕವಿದ ವಾತಾವರಣದ ಹಿನ್ನೆಲೆಯಲ್ಲಿ 2 ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕುಶಾಲನಗರ ತಾಲ್ಲೂಕಿನ ಕೊಡಗರಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಸುಂಟಿಕೊಪ್ಪ ಪನ್ಯದ ಆನಂದ ಬಸಪ್ಪ ತೋಟದ ವ್ಯವಸ್ಥಾಪಕ ಜಾವಮನೆ ಮುಸ್ತಾಫ (47) ಎಂಬವರೇ ಮೃತಪಟ್ಟವರು. ಸುಂಟಿಕೊಪ್ಪದಿಂದ ಕುಶಾಲನಗರ ಕಡೆಗೆ ಇನ್ನೋವಾ ಕಾರು ಹಾಗೂ ಕುಶಾಲನಗರದಿಂದ ಸುಂಟಿಕೊಪ್ಪ ಕಡೆಗೆ ಬರುತ್ತಿದ್ದ ಎಕ್ಸ್-ಯುವಿ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ರಣಮಳೆಗೆ ಇಬ್ಬರು ಕಾರ್ಮಿಕರು ಬಲಿ

    ACCIDENT MDK

    ಡಿಕ್ಕಿ ಹೊಡೆದ ರಭಸಕ್ಕೆ ಎರಡೂ ಕಾರುಗಳು ಜಖಂಗೊಂಡಿವೆ. ಇನ್ನೋವಾ ಕಾರಿನಲ್ಲಿದ್ದ ಜಾವಮನೆ ಮುಸ್ತಫಾ ಅವರ ತಲೆಗೆ ಪೆಟ್ಟಾಗಿ ಮೃತಪಟ್ಟಿದ್ದಾರೆ. ರಸ್ತೆ ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಸಮಸ್ಯೆಯಾಗಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಇದನ್ನೂ ಓದಿ: ಟ್ರ್ಯಾಕ್ಟರ್ ಸ್ಪೀಕರ್‌ ಸೌಂಡ್ ಕಡಿಮೆ ಮಾಡಿ ಎಂದಿದ್ದಕ್ಕೆ ಸ್ವಾಮೀಜಿ ಮೇಲೆಯೇ ಹಲ್ಲೆ

    ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿ ನಿನ್ನೆ ರಾತ್ರಿಯಿಂದ ಸುರಿದ ಭಾರೀ ಮಳೆಗೆ ವಾಹನ ಸವಾರರು ಹೈರಾಣಾಗಿದ್ದಾರೆ.

  • ಕಾರಿನ ಟೈರ್ ಸಿಡಿದು ಇನ್ನೊಂದು ಕಾರಿಗೆ ಡಿಕ್ಕಿ – ನಾಲ್ವರು ಸಾವು

    ಕಾರಿನ ಟೈರ್ ಸಿಡಿದು ಇನ್ನೊಂದು ಕಾರಿಗೆ ಡಿಕ್ಕಿ – ನಾಲ್ವರು ಸಾವು

    ಹಾವೇರಿ: ಕಾರೊಂದರ ಟೈರ್ ಸಿಡಿದು ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ಹೊರವಲಯದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ.

    ಭೀಕರ ಅಪಘಾತದಲ್ಲಿ ಮೃತಪಟ್ಟವರನ್ನು ಗುಜರಾತ್ ಮೂಲದ ದಿನೇಶ್ ಬಾಯ್(38), ಲತೀಶ್ ಬಾಯ್(37), ಸುರೇಶ್ ಬಾಯ್(39) ಹಾಗೂ ಕೇರಳ ಮೂಲದ ಸಾಹಲ್(37) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರಿಗೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ – ಚಾಲಕರಿಬ್ಬರೂ ಸ್ಥಳದಲ್ಲೇ ದುರ್ಮರಣ

    2 ಕಾರುಗಳ ನಡುವಿನ ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಎಸ್ಪಿ ಹನುಮಂತರಾಯ, ಹೆಚ್ಚುವರಿ ಎಸ್ಪಿ ವಿಜಯ್ ಕುಮಾರ್, ಸಿಪಿಐ ಮುತ್ತಪ್ಪ ಗೌಡಪ್ಪಗೌಡರ್ ಹಾಗೂ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ವಹಣೆ ಸಿಬ್ಬಂದಿ ಕೂಡ ಸ್ಥಳಕ್ಕೆ ದೌಡಾಯಿಸಿದ್ದಾರೆ. ಇದನ್ನೂ ಓದಿ: ಡೋಂಗಿ ಬಾಬಾನ ಮೋಹದ ಬಲೆಗೆ ಬಿದ್ದ ವಿವಾಹಿತೆ – ಯಜಮಾನ ಬಲಿ

    4 ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ತಾಲೂಕು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಗಾಯಾಳುಗಳನ್ನು ಕೇರಳ ಮೂಲದ ದಾನೇಶ್, ಜೈನಾಬಿ ಹಾಗೂ ಗುಜರಾತ್ ಮೂಲದ ಅಶ್ವಿನ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಜಖಂಗೊಂಡಿದ್ದ ಕಾರುಗಳನ್ನು ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

    ಅತಿಯಾದ ವೇಗದಿಂದ ಸಾಗುತ್ತಿದ್ದ ಕಾರಿನ ಟೈರ್ ಸಿಡಿದಿದ್ದೇ ಅಪಘಾತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ.

  • ಅಪಘಾತವಾದರೆ ರಸ್ತೆ ಅಗೆದವರೆ ಹೊಣೆ – ಬಿಬಿಎಂಪಿಯಿಂದ ಆದೇಶ

    ಅಪಘಾತವಾದರೆ ರಸ್ತೆ ಅಗೆದವರೆ ಹೊಣೆ – ಬಿಬಿಎಂಪಿಯಿಂದ ಆದೇಶ

    ಬೆಂಗಳೂರು: ಸುಂಕದಕಟ್ಟೆ ದ್ವಿಚಕ್ರ ವಾಹನ ಚಾಲಕಿ ಸಾವು ಪ್ರಕರಣದ ನಂತರ ಎಚ್ಚೆತ್ತುಕೊಂಡ ಬಿಬಿಎಂಪಿ ಇನ್ಮುಂದೆ ರಸ್ತೆ ಅಗೆದವರೇ ರಸ್ತೆ ರಿಪೇರಿ ಮಾಡಿಸುವ ಹೊಣೆಯನ್ನು ಹೊಂದಿರುತ್ತಾರೆ ಎಂದು ಆದೇಶಿಸಿದೆ.

    ಸೋಮವಾರ ಕೆಲಸ ಮುಗಿಸಿಕೊಂಡು ಮನೆಗೆ ಹಿಂತಿರುಗುತ್ತಿದ್ದ ವೇಳೆ ಬಿಬಿಎಂಪಿ ಕಸದ ಲಾರಿ ಹರಿದು ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಕಸದ ಲಾರಿಯಿಂದಾಗಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 3ಕ್ಕೆ ಏರಿಕೆಯಾಗಿರುವ ಹಿನ್ನೆಲೆ ಘನ ತ್ಯಾಜ್ಯ ವಿಲೇವಾರಿ ವಾಹನಗಳ ಕ್ರಮಬದ್ಧ ತಪಾಸಣೆ ಮತ್ತು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ. ಇದನ್ನೂ ಓದಿ: ಸಾಮಾಜಿಕ ಜಾಲತಾಣದಲ್ಲಿ ಮೋದಿ, ಅಮಿತ್ ಶಾರನ್ನು ನಿಂದಿಸಿದ್ದ ವ್ಯಕ್ತಿ ಬಂಧನ

    ಎಲ್ಲಾ ಕಾಂಪ್ಯಾಕ್ಟರ್, ಟಿಪ್ಪರ್‌ಗಳು ಫಿಟ್ ನೆಸ್ ಸರ್ಟಿಫಿಕೇಟ್ ಹೊಂದಿರಬೇಕು. ಕಸದ ವಾಹನಗಳ ವೇಗ ನಿಯಂತ್ರಕಗಳನ್ನು ಅಳವಡಿಸಿರಬೇಕು. ಘನತ್ಯಾಜ್ಯ ನಿರ್ವಹಣೆ ಅಧಿಕಾರಿಗಳು ಈ ಪ್ರಮಾಣಪತ್ರಗಳನ್ನ ಆಗಿಂದಾಗ್ಗೆ ಪರಿಶೀಲಿಸುವುದು. ಕಾರ್ಯಪಾಲಕ ಅಭಿಯಂತರ (ಸಾರಿಗೆ) ಇವರು ಕಸದ ಲಾರಿಗಳ ರ್ಯಾಂಡಮ್ ಚೆಕ್ಕಿಂಗ್ ಮಾಡಬೇಕು. ಚಾಲಕರ ವಾಹನ ಚಾಲನ ಸಾಮರ್ಥ್ಯವನ್ನು ನಿಗದಿತ ಮಾನದಂಡ ಬಳಸಿ ಪರಿಶೀಲಿಸುವುದು ಹೀಗೆ ಹಲವರು ನಿಯಮಗಳನ್ನು ಜಾರಿಗೊಳಿಸಿದ್ದಾರೆ. ಇದನ್ನೂ ಓದಿ: ನಮ್ಮಿಂದ ತಪ್ಪಾಗಿದೆ: ಕ್ಷಮೆ ಕೇಳಿದ ಶ್ರೀಲಂಕಾ ಅಧ್ಯಕ್ಷ

    ಇದೀಗ ಜಲಮಂಡಳಿ ಪೈಪ್ ಲೈನ್, ಬೆಸ್ಕಾಂ ಕಾಮಗಾರಿ ಹೀಗೆ ಯಾವುದೇ ವಿಚಾರವಾಗಿ ಯಾರೇ ರಸ್ತೆ ಅಗೆದವರೂ ರಸ್ತೆ ರಿಪೇರಿ ಹೊಣೆ ಮತ್ತು ಏನೇ ಅಪಘಾತ, ಅನಾಹುತಗಳಾದರೂ ಸಂಬಂಧಿಸಿದವರೇ ಹೊಣೆಯಾಗಿರುತ್ತಾರೆ ಎಂದು ಬಿಬಿಎಂಪಿ ಸೂಚಿಸಿದೆ.

  • ಒಂದೇ ಕುಟುಂಬದ ನಾಲ್ವರು ಸೇರಿ 5 ಮಂದಿ ರಸ್ತೆ ಅಪಘಾತದಲ್ಲಿ ಸಾವು

    ಒಂದೇ ಕುಟುಂಬದ ನಾಲ್ವರು ಸೇರಿ 5 ಮಂದಿ ರಸ್ತೆ ಅಪಘಾತದಲ್ಲಿ ಸಾವು

    ಲಕ್ನೋ: ಮೀನುಗಾರಿಕೆಗೆ ತೆರಳುತ್ತಿದ್ದ ಟೋಟೋ (ಆಟೋ) ಹಾಗೂ ಟಿಪ್ಪರ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿ ಒಟ್ಟು ಐದು ಮಂದಿ ಮೃತಪಟ್ಟಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ ಬರ್ದ್ವಾನ್‌ನಲ್ಲಿ ನಡೆದಿದೆ.

    ರಾಷ್ಟ್ರೀಯ ಹೆದ್ದಾರಿ 2ಬಿ ನಲ್ಲಿ ಟೋಟೋ ವಾಹನ ಹಾಗೂ ದೊಡ್ಡ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಗಂಗಾ ಸಂತ್ರ, ಮಾಮೋನಿ ಸಂತ್ರ, ಸರಸ್ವತಿ ಸಂತ್ರ, ಸೀಮಾ ಸಂತ್ರ (ಒಂದೇ ಕುಟುಂಬದ ಸದಸ್ಯರು) ಮತ್ತು ಮೊಹಿನುದ್ದೀನ್ ಶೇಖ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ ಮಾರಾಮಾರಿ- ಐವರು ಬಿಜೆಪಿ ಶಾಸಕರು ಅಮಾನತು

    car

    ಸಂತ್ರಾ ಕುಟುಂಬದವರು ಪ್ರತಿದಿನ ಬೆಳಗ್ಗೆ ಮೀನುಗಾರಿಕೆಗೆ ತೆರಳಲು ಮೊಹಿನುದ್ದೀನ್ ಅವರ ವಾಹನವನ್ನು ಬಾಡಿಗೆಗೆ ಪಡೆಯುತ್ತಿದ್ದರು. ಆದರೆ ಇಂದು ಬೆಳಗ್ಗೆ ಸಮೀಪದ ನದಿಗೆ ತೆರಳುತ್ತಿದ್ದ ವೇಳೆ ಮೊಹಿನುದ್ದೀನ್ ಸಹ ಜೊತೆಯಲ್ಲೇ ಇದ್ದನು. ವೇಗವಾಗಿ ಎದುರಿನಿಂದ ಬಂದ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ಮುಖಾಮುಖಿ ಡಿಕ್ಕಿ ಹೊಡೆದಿದೆ. ಆಟೋ ಸಂಪೂರ್ಣ ಜಖಂಗೊಂಡು ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

  • ಮಲೈಕಾ ಅರೋರಾ ಪ್ರಯಾಣಿಸುತ್ತಿದ್ದ ಕಾರು ಅಪಘಾತ

    ಮಲೈಕಾ ಅರೋರಾ ಪ್ರಯಾಣಿಸುತ್ತಿದ್ದ ಕಾರು ಅಪಘಾತ

    ಮುಂಬೈ: ನಟಿ, ರೂಪದರ್ಶಿ ಮಲೈಕಾ ಅರೋರಾ ಶನಿವಾರ ಕಾರು ಅಪಘಾತದಲ್ಲಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಶನಿವಾರ ಮಧ್ಯಾಹ್ನ ಪುಣೆಯಲ್ಲಿ ನಡೆದ ಫ್ಯಾಶನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ ಕಾರು ಅಪಘಾತವಾಗಿದೆ. ಅಪಘಾತದಲ್ಲಿ ಮಲೈಕಾ ಕಣ್ಣಿಗೆ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಅಪ್ಸರಾ ರಾಣಿ ಮೇಲೆ ರಾಮ್ ಗೋಪಾಲ್ ವರ್ಮಾಗೆ ಅಷ್ಟೊಂದು ಪ್ರೀತಿಯಾ?

    ಅಪಘಾತದಲ್ಲಿ ಗಾಯಗೊಂಡ ನಟಿಯನ್ನು ಮುಂಬೈನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ನಟಿಗೆ ಹೆಚ್ಚಿನ ತೊಂದರೆಗಳಾಗಿಲ್ಲ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮಲೈಕಾ ಸಹೋದರಿ ಅಮೃತಾ ಅರೋರಾ ತಿಳಿಸಿದ್ದಾರೆ. ಇದನ್ನೂ ಓದಿ: RK ಹೌಸ್‌ನಲ್ಲಿ ರಣಬೀರ್-ಆಲಿಯಾ ಮದುವೆ : ಆ ಸ್ಥಳದ ಹಿಂದಿದೆ ಇಂಟ್ರಸ್ಟಿಂಗ್ ಕಹಾನಿ

    ಮಲೈಕಾ ಪುಣೆಯಲ್ಲಿ ನಡೆದ ಫ್ಯಾಶನ್ ಕಾರ್ಯಕ್ರಮ ಮುಗಿಸಿ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಮುಂಬೈ-ಪುಣೆ ಎಕ್ಸ್ಪ್ರೆಸ್ ವೇಯಲ್ಲಿ ಘಟನೆ ಸಂಭವಿಸಿದೆ. ಕಾರು ಚಲಿಸುತ್ತಿದ್ದ ಸಂದರ್ಭ ಎರಡು ಕಾರುಗಳ ನಡುವೆ ಸಿಲುಕಿ ಅಪಘಾತ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ.

  • ಭೀಕರ ರಸ್ತೆ ಅಪಘಾತ ತಾಯಿ, ಮಗಳು ಸ್ಥಳದಲ್ಲೆ ಸಾವು – ತಂದೆ ಸ್ಥಿತಿ ಚಿಂತಾಜನಕ!

    ಭೀಕರ ರಸ್ತೆ ಅಪಘಾತ ತಾಯಿ, ಮಗಳು ಸ್ಥಳದಲ್ಲೆ ಸಾವು – ತಂದೆ ಸ್ಥಿತಿ ಚಿಂತಾಜನಕ!

    ಚಿಕ್ಕೋಡಿ: ರಸ್ತೆ ಬದಿ ನಿಂತಿದ್ದ ಕ್ಯಾಂಟರ್‌ಗೆ ಇನ್ನೊವಾ ಕಾರು ಡಿಕ್ಕಿಯಾದ ಪರಿಣಾಮ ತಾಯಿ ಹಾಗೂ ಮಗಳು ಸ್ಥಳದಲ್ಲಿಯೇ ಮೃತ ಪಟ್ಟಿರುವ ಧಾರುಣ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

    ಹುಕ್ಕೇರಿ ತಾಲೂಕಿನ ನರಸಿಂಗಪೂರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಬದಿ ನಿಂತಿದ್ದ ಕ್ಯಾಂಟರ್‌ಗೆ ಇನೋವಾ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಸ್ಥಳದಲ್ಲೆ ತಾಯಿ ಹಾಗೂ ಮಗಳು ಸಾವನ್ನಪ್ಪಿದ್ದು, ತಂದೆಯ ಸ್ಥಿತಿ ಚಿಂತಾಜನಕವಾಗಿದೆ. ಇದನ್ನೂ ಓದಿ: ಸೈಕಲ್ ವಿಚಾರಕ್ಕೆ ಕಾಲೇಜು ವಿದ್ಯಾರ್ಥಿ ಕಿಡ್ನಾಪ್ 

    ಮೃತರು ಸಂಕೇಶ್ವರ ಪಟ್ಟಣದ ಖ್ಯಾತ ವೈದ್ಯೆ ಶ್ವೇತಾ ಮುರಗೋಡ(41), ಶಿಯಾ(7)ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಕಾರು ಚಲಾಯಿಸುತ್ತಿದ್ದ ವೈದ್ಯ ಸಚೀನ್ ಮುರಗೋಡೆ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳು ವೈದ್ಯ ಸಚೀನ್ ಮುರಗೋಡೆ ಅವರನ್ನು ಚಿಕಿತ್ಸೆಗಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

    ಬೆಳಗಾವಿ ಕಡೆಯಿಂದ ಸಂಕೇಶ್ವರ ಕಡೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಸ್ಥಳಕ್ಕೆ ಯಮಕನಮರಡಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಖ್ಯಾತ ಉದ್ಯಮಿ ಪತ್ನಿ ಜೊತೆ ಸೆಕ್ಸ್ ಎಂಜಯ್ ಮಾಡಿದ್ದೆ – ಪ್ರೀಯಾಂಕಾ ಅಳಿಯನ ವಿವಾದಾತ್ಮಕ ಹೇಳಿಕೆ 

  • ರಸ್ತೆ ಅಪಘಾತದಲ್ಲಿ ಎಎಪಿ ಶಾಸಕ ಅಖಿಲೇಶ್ ಪತಿ ತ್ರಿಪಾಠಿಗೆ ಗಾಯ

    ರಸ್ತೆ ಅಪಘಾತದಲ್ಲಿ ಎಎಪಿ ಶಾಸಕ ಅಖಿಲೇಶ್ ಪತಿ ತ್ರಿಪಾಠಿಗೆ ಗಾಯ

    ಲಕ್ನೋ: ಉತ್ತರ ಪ್ರದೇಶದ ಉನ್ನಾವೊದಲ್ಲಿ ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ವಿಧಾನಸಭಾ ಚುನಾವಣಾ ಪ್ರಚಾರದಿಂದ ಹಿಂದಿರುಗುತ್ತಿದ್ದ ವೇಳೆ ಎಎಪಿ ಶಾಸಕ ಅಖಿಲೇಶ್ ಪತಿ ತ್ರಿಪಾಠಿ ಅವರ ಕಾರು ಪಲ್ಟಿಯಾದ ಕಾರಣ ಗಂಭೀರವಾಗಿ ಗಾಯಗೊಂಡಿದ್ದಾರೆ.

    ಈ ವಿಚಾರವಾಗಿ ಮಾತನಾಡಿದ ಎಎಪಿಯ ಉತ್ತರ ಪ್ರದೇಶ ಘಟಕದ ವಕ್ತಾರ ಮಹೇಂದ್ರ ಸಿಂಗ್ ಅವರು, ಅಖಿಲೇಶ್ ಪತಿ ತ್ರಿಪಾಠಿ ಅವರು ತಮ್ಮ ಸಹಚರರೊಂದಿಗೆ ಪಕ್ಷದ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಗೋರಖ್‍ಪುರದಿಂದ ಹಿಂತಿರುಗುತ್ತಿದ್ದ ವೇಳೆ ಬೆಹ್ತಾ ಮುಜಾವರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಅಖಿಲೇಶ್ ಪತಿ ತ್ರಿಪಾಠಿ ಅವರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡೇಟು- ಆಸ್ಪತ್ರೆಗೆ ದಾಖಲು

    ಇದ್ದಕ್ಕಿಂತದ್ದಂತೆ ಕಾರಿನ ಒಂದು ಚಕ್ರವು ಹೊರಬಂದಿದ್ದರಿಂದ ಕಾರು ಪಲ್ಟಿಯಾಗಿದೆ. ಇನ್ನೂ ಕಾರಿನ ಮುಂಭಾಗದ ಸೀಟಿನಲ್ಲಿ ಅಖಿಲೇಶ್ ಪತಿ ತ್ರಿಪಾಠಿ ಕುಳಿತಿದ್ದರಿಂದ ಅಪಘಾತವಾಗಿದ್ದು, ಶಾಸಕರಿಗೆ ಗಂಭೀರ ಗಾಯಗಳಾಗಿವೆ. ಇದೀಗ ಅವರನ್ನು ಲಕ್ನೋದ ಮೇದಾಂತ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ವೈದ್ಯರು ತ್ರಿಪಾಠಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾನೇನು ಕಚ್ಚುವುದಿಲ್ಲ, ಮತ್ತೇಕೆ ನಿಮಗೆ ಭಯ? – ಪುಟೀನ್‍ಗೆ ವ್ಯಂಗ್ಯ ಮಾಡಿದ ಉಕ್ರೇನ್ ಅಧ್ಯಕ್ಷ

  • ರಜೆಯಲ್ಲಿ ಊರಿಗೆ ಬಂದಿದ್ದ ಯೋಧ ಅಪಘಾತದಲ್ಲಿ ಸಾವು

    ರಜೆಯಲ್ಲಿ ಊರಿಗೆ ಬಂದಿದ್ದ ಯೋಧ ಅಪಘಾತದಲ್ಲಿ ಸಾವು

    ವಿಜಯಪುರ: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯೋಧ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

    ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದ ಬಸವರಾಜ್ ಡೂಂಗರಗಾವಿ ಸಾವನ್ನಪ್ಪಿದ್ದಾರೆ. ಕೆಲ ದಿನಗಳ ಹಿಂದೆ ಬಸವರಾಜ್ ರಜೆಯ ಮೇಲೆ ಊರಿಗೆ ಬಂದಿದ್ದರು. ಎರಡು ದಿನಗಳ ಹಿಂದೆ ಆಲಮಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಅವರು ಅಪಘಾತಕ್ಕೊಳಗಾಗಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಬಸವರಾಜ್ ಚಿಕಿತ್ಸೆ ಫಲಿಸದೇ ಬುಧವಾರ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ನೆಲಮಂಗಲದಲ್ಲಿ ಪೆಡ್ಲರ್‌ಗಳ ಬಂಧನ – 53 ಕೆ.ಜಿ ಗಾಂಜಾ ವಶ

    ಬಸವರಾಜ್ 8 ವರ್ಷಗಳ ಹಿಂದೆ ಸೇನೆಗೆ ನೇಮಕಗೊಂಡಿದ್ದರು. ಬಿಹಾರ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಸವರಾಜ್ ಊರಿಗೆ ಬಂದಾಗ ದುರ್ಘಟನೆ ನಡೆದಿದೆ. ಇದನ್ನೂ ಓದಿ: 21 ಲಕ್ಷ ರೂ. ಮೌಲ್ಯದ ಆಕ್ಸಿಟೋಸಿನ್ ಚುಚ್ಚುಮದ್ದು ವಶ

  • ಸಮನ್ವಿ ಮುಂದೆ ದೊಡ್ಡ ಸ್ಟಾರ್‌ ಆಗುತ್ತಿದ್ದಳು: ಸೃಜನ್‌ ಲೋಕೇಶ್‌ ಭಾವುಕ

    ಸಮನ್ವಿ ಮುಂದೆ ದೊಡ್ಡ ಸ್ಟಾರ್‌ ಆಗುತ್ತಿದ್ದಳು: ಸೃಜನ್‌ ಲೋಕೇಶ್‌ ಭಾವುಕ

    ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ನನ್ನಮ್ಮ ಸೂಪರ್‌ ಸ್ಟಾರ್‌ ಶೋನ ಸ್ಪರ್ಧಿ ಸಮನ್ವಿ ನೆನೆದು ನಟ ಸೃಜನ್‌ ಲೋಕೇಶ್‌ ಭಾವುಕರಾದರು.

    ಪುಟಾಣಿ ಸಾವಿನ ಸುದ್ದಿ ಕೇಳಿ ಮನಸ್ಸು ತುಂಬಾ ಡಿಸ್ಟರ್ಬ್‌ ಆಗಿದೆ. ರಾತ್ರಿ ಕೂಡ ನಿದ್ರೆ ಮಾಡಲಾಗಲಿಲ್ಲ. ಕಣ್ಣು ಮುಚ್ಚಿದರೂ ಆ ಮಗುವಿನ ಬಿಂಬವೇ ಬರುತ್ತಿತ್ತು. ಇಂತಹ ಸನ್ನಿವೇಶಗಳನ್ನು ನೋಡಿದಾಗ ನಮ್ಮ ಮಕ್ಕಳ ವಿಚಾರದಲ್ಲೂ ನಾವು ಜಾಗೃತರಾಗಬೇಕು ಎನಿಸುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಲಾರಿ ಚಾಲಕನ ಅಜಾಗರೂಕತೆಯಿಂದಲೇ ಸಮನ್ವಿ ಸಾವು

    ಮುದ್ದಾದ ಮಗು ಅದು. ಕಾರ್ಯಕ್ರಮದಲ್ಲಿ ಬಹಳ ಖುಷಿ ಖುಷಿಯಾಗಿ ಇರುತ್ತಿದ್ದಳು. ಅಂಥ ಮಗು ಅಪಘಾತದಲ್ಲಿ ಸಾವನ್ನಪ್ಪಿದ್ದು ನಿಜಕ್ಕೂ ಘೋರ. ಶತ್ರುಗಳಿಗೂ ಇಂತಹ ಪರಿಸ್ಥಿತಿ ಬರಬಾರದು ಎಂದು ದುಃಖಿಸಿದರು.

    ಪರದೆಯ ಮುಂದೆ ಚೆನ್ನಾಗಿ ಅಭಿನಯಿಸುತ್ತಿದ್ದ ಸಮನ್ವಿ, ತುಂಬಾ ಪ್ರತಿಭಾವಂತೆ. ಮುಗ್ದತೆ, ಪ್ರೀತಿ ಎಲ್ಲವನ್ನೂ ತುಂಬಿಕೊಂಡಿದ್ದ ಮಗು. ಮುಂದೆ ದೊಡ್ಡ ಸ್ಟಾರ್‌ ಆಗುತ್ತಾಳೆ ಎನ್ನುತ್ತಿದ್ದೆವು. ಕಾರ್ಯಕ್ರಮ ಮುಗಿಸಿ ಹೊರಬಂದಾಗ ನನ್ನನ್ನು ಜಡ್ಜ್‌ ಬಾಯ್‌ ಅಂತ ಪ್ರೀತಿಯಿಂದ ಕರೆಯುತ್ತಿದ್ದಳು ಎಂದು ನೆನೆದರು. ಇದನ್ನೂ ಓದಿ: ನಟಿ ಅಮೃತಾ ನಾಯ್ಡು ಬಾಳಲ್ಲಿ ಪದೇ ಪದೇ ವಿಧಿಯಾಟ

    ನಮ್ಮ ಜೀವನ ನಮ್ಮ ಕೈಯಲ್ಲಿಲ್ಲ ಎನ್ನುವಂತಹ ಪರಿಸ್ಥಿತಿಯಲ್ಲಿ ಬದುಕುತ್ತಿದ್ದೇವೆ. ಕೊರೊನಾ ವೈರಸ್‌ ಬಂದಾಗಲೂ ನಮ್‌ ಜೀವನ ನಮ್ಮ ಕೈಯಲ್ಲಿಲ್ಲ. ವಾಹನ ಓಡಿಸುತ್ತಿದ್ದಾಗಲೂ ಹೀಗೆಯೇ ಅಂದುಕೊಳ್ಳಬೇಕು. ಅಪ್ಪು ಅವರು ತೀರಿಕೊಂಡ ಸುದ್ದಿಯನ್ನು ಇನ್ನೂ ಅರಗಿಸಿಕೊಳ್ಳಲು ಆಗಿಲ್ಲ. ಇದರ ಮಧ್ಯೆಯೇ ಮಗು ಸಾವನ್ನಪ್ಪಿದ ಸುದ್ದಿ ಬಂದು, ಬರೆ ಮೇಲೆ ಬರೆ ಹಾಕಿದಂತಾಗಿದೆ ಎಂದು ವಿಷಾದಿಸಿದರು.

    ಇಂತಹ ಸಂದರ್ಭದಲ್ಲಿ ಸಮನ್ವಿ ತಾಯಿ ಅಮೃತಾ ನಾಯ್ಡು ಪರಿಸ್ಥಿತಿ ನೆನೆದರೆ ನೋವಾಗುತ್ತದೆ. ಅಮೃತಾ ಮೊದಲು ಒಂದು ಮಗುವನ್ನು ಕಳೆದುಕೊಂಡಿದ್ದರು. ನಂತರ ಸಮನ್ವಿಯನ್ನು ತುಂಬಾ ಪ್ರೀತಿಯಿಂದ ಬೆಳೆಸಿದ್ದರು. ಸಮನ್ವಿ ಒಂಟಿಯಾಗುತ್ತಾಳೆ ಎಂಬ ಕಾರಣಕ್ಕೆ ಮತ್ತೊಂದು ಮಗು ಹೊಂದಲು ಯೋಜಿಸಿದ್ದೇವೆ ಅಂತ ಅಮೃತ ಹೇಳುತ್ತಿದ್ದಳು. ಆ ದಂಪತಿ ಈ ನೋವನ್ನು ಹೇಗೆ ಸಹಿಸಿಕೊಳ್ಳುತ್ತಾರೋ ಎಂದು ನೊಂದು ನುಡಿದರು.