Tag: Road Accident

  • ನಿಯಂತ್ರಣ ತಪ್ಪಿ ಹಳ್ಳಕ್ಕೆ ಇಳಿದ ಟ್ರ್ಯಾಕ್ಟರ್- ಮೂವರ ಸಾವು, 20 ಜನ ಗಂಭೀರ

    ನಿಯಂತ್ರಣ ತಪ್ಪಿ ಹಳ್ಳಕ್ಕೆ ಇಳಿದ ಟ್ರ್ಯಾಕ್ಟರ್- ಮೂವರ ಸಾವು, 20 ಜನ ಗಂಭೀರ

    ರಾಯಚೂರು: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಹಳ್ಳಕ್ಕೆ ಬಿದ್ದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಜಿಲ್ಲೆಯ ಲಿಂಗಸುಗೂರಿನ ಹೆಸರೂರು ಬಳಿ ನಡೆದಿದೆ.

    ಒಂದು ಮಗು ಸೇರಿದಂತೆ ಇಬ್ಬರು ಮಹಿಳೆಯರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. 45 ವರ್ಷ ನರಸಮ್ಮ ಮೃತ ಮಹಿಳೆಯಾಗಿದ್ದು, ಇನ್ನಿಬ್ಬರ ಹೆಸರು ತಿಳಿದು ಬಂದಿಲ್ಲ. ಘಟನೆಯಲ್ಲಿ 20 ಜನರು ಗಾಯಗೊಂಡಿದ್ದು, ಲಿಂಗಸುಗೂರು ತಾಲೂಕಾಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    ದೇವರ ದರ್ಶನಕ್ಕಾಗಿ ಸಿರವಾರದ ನವಲಕಲ್‍ನಿಂದ ಲಿಂಗದಹಳ್ಳಿಗೆ ಭಕ್ತರು ಟ್ರ್ಯಾಕ್ಟರ್ ನಲ್ಲಿ ಹೊರಟಿದ್ದರು. ಈ ವೇಳೆ ಹೆಸರೂರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ಹಳ್ಳಕ್ಕೆ ಬಿದ್ದಿದೆ. ಇದರಿಂದಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳೀಯರು ಹಾಗೂ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕೆಲವರು ಮಾನವೀಯತೆ ಮೆರೆದು ರಕ್ಷಣಾ ಕಾರ್ಯಕ್ಕೆ ಮುಂದಾಗಿ, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಹಾಯ ಮಾಡಿದ್ದಾರೆ.

    ಲಿಂಗಸುಗೂರಿನ ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ಒಂದೇ ವರ್ಷದಲ್ಲಿ 127 ಬಾರಿ ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕೆ ಕಾರು ಮಾಲೀಕನಿಗೆ ಬಿತ್ತು ಲಕ್ಷ ಲಕ್ಷ ದಂಡ!

    ಒಂದೇ ವರ್ಷದಲ್ಲಿ 127 ಬಾರಿ ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕೆ ಕಾರು ಮಾಲೀಕನಿಗೆ ಬಿತ್ತು ಲಕ್ಷ ಲಕ್ಷ ದಂಡ!

    ಹೈದರಾಬಾದ್: ನಗರದ ಹೊಂಡಾ ಜಾಜ್ ಮಾಲೀಕನಿಗೆ ಸಂಚಾರಿ ಪೊಲೀಸರು ಒಂದು ವರ್ಷದಲ್ಲಿ ಸುಮಾರು 1.82 ಲಕ್ಷ ರೂ. ದಂಡ ವಿಧಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

    ಭಾರೀ ಮೊತ್ತದ ದಂಡ ವಿಧಿಸಲು ಪ್ರಮುಖ ಕಾರಣ ಕಾರು ಮಾಲೀಕ ಒಂದು ವರ್ಷದಲ್ಲಿ ಅಂದರೆ 2017 ಏಪ್ರಿಲ್ 4 ರಿಂದ 2018 ಮಾರ್ಚ್ 10 ರ ನಡುವೆ ಸುಮಾರು 127 ಬಾರಿ ವೇಗ ಮಿತಿ ನಿಯಮ ಉಲ್ಲಂಘನೆ ಮಾಡಿದ್ದಾನೆ. ಪ್ರತಿ ಬಾರಿಯೂ ಪೊಲೀಸರು ಕಾರು ಮಾಲೀಕನಿಗೆ ಇ-ಚಲನ್ ಪೋರ್ಟಲ್ ಮೂಲಕ ದಂಡ ವಿಧಿಸಿ ಮಾಹಿತಿ ನೀಡಿದ್ದಾರೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.

    ಮೂಲಗಳ ಪ್ರಕಾರ ನಗರದ ಹೊರ ವರ್ತುಲ ರಸ್ತೆಯು ಹೆಚ್ಚು ಅಪಘಾತ ಸಂಭವಿಸುವ ರಸ್ತೆಯಾಗಿದ್ದು, ಸಾಲು ಸಾಲು ಸರಣಿ ಅಪಘಾತ ಪ್ರಕರಣಗಳಿಂದಾಗಿ ರಸ್ತೆಯ ವೇಗದ ಮಿತಿಯನ್ನು ಗಂಟೆಗೆ 120 ಕಿ.ಮೀ ನಿಂದ 100 ಕಿ.ಮೀ ಇಳಿಸಲಾಗಿತ್ತು. ಆದರೆ ಪ್ರತಿ ಬಾರಿ ಈ ಸ್ಥಳದಲ್ಲೇ ಹೋಂಡ ಜಾಜ್ ಕಾರು ಮಾಲೀಕ ಅತೀ ವೇಗದಿಂದ ಕಾರು ಚಾಲನೆ ಮಾಡಿ ನಿಯಮ ಉಲ್ಲಂಘಿಸಿದ್ದಾನೆ. ಇದರಿಂದ ಪ್ರತಿ ಬಾರಿ ದಂಡ ಪ್ರಮಾಣ 1,435 ರೂ. ಆಗಿದ್ದ ಹಿನ್ನೆಲೆಯಲ್ಲಿ ಈಗ ದಂಡದ ಮೊತ್ತ 1.82 ಲಕ್ಷ ರೂ. ಆಗಿದೆ.

    ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಟ್ರಾಫಿಕ್ ಪೊಲೀಸ್ ಆಧಿಕಾರಿಯೊಬ್ಬರು, ಕಾರು ನೋಂದಣಿ ದಾಖಲಾತಿ ಸಮಯದಲ್ಲಿ ಕೊಟ್ಟ ಫೋನ್ ನಂಬರ್ ಗೆ ಪ್ರತಿ ಬಾರಿ ಉಲ್ಲಂಘನೆಯ ವಿಷಯವನ್ನು ತಕ್ಷಣ ಇ-ಚಲನ್ ಪೋರ್ಟಲ್ ಕಳುಹಿಸಲಾಗುತ್ತದೆ. ಈಗ ಈ ಕಾರು ಎಲ್ಲಿದೆ ಎಂದು ತಿಳಿದು ಬಂದಿಲ್ಲ ಆದರೆ ಎಲ್ಲ ಟೋಲ್ ಗೇಟ್‍ಗಳಿಗೆ ವಾಹನದ ಸಂಖ್ಯೆಯನ್ನು ನೀಡಿ ವಾಹನವನ್ನು ತಡೆ ಹಿಡಿಯುವಂತೆ ಆದೇಶಿಸುತ್ತೇವೆ ಹಾಗೂ ಆದಷ್ಟು ಬೇಗ ದಂಡವನ್ನು ಪಾವತಿಸುವಂತೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇನ್ನು ಮುಂದೆ ನಗರ ಮತ್ತು ಹೈವೇಯಲ್ಲಿ ಕಾರು, ಬೈಕ್‍ಗಳು ಮತ್ತಷ್ಟು ಜಾಸ್ತಿ ವೇಗದಲ್ಲಿ ಹೋಗಬಹುದು!

  • ಕಾರಿಗೆ ಟ್ರಕ್ ಡಿಕ್ಕಿ- ಶಮಿ ತಲೆಗೆ 4 ಹೊಲಿಗೆ, ಪ್ರಾಣಾಪಾಯದಿಂದ ಪಾರು

    ಕಾರಿಗೆ ಟ್ರಕ್ ಡಿಕ್ಕಿ- ಶಮಿ ತಲೆಗೆ 4 ಹೊಲಿಗೆ, ಪ್ರಾಣಾಪಾಯದಿಂದ ಪಾರು

    ನವದೆಹಲಿ: ಭಾರತದ ಕ್ರಿಕೆಟ್ ತಂಡದ ಆಟಗಾರ ಮೊಹಮ್ಮದ್ ಶಮಿ ಭಾನುವಾರ ಡೆಹ್ರಾಡೂನ್‍ನಿಂದ ದೆಹಲಿಗೆ ಹೋಗುವಾಗ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ.

    ಡೆಹ್ರಾಡೂನ್ ನಿಂದ ದೆಹಲಿಗೆ ತೆರಳುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಟ್ರಕ್ ಡಿಕ್ಕಿ ಹೊಡೆದಿದೆ. ಈ ರಸ್ತೆ ಅಪಘಾತದಲ್ಲಿ ಶಮಿ ಪ್ರಾಣಾಪಾಯದಿಂದ ಪಾರಾಗಿದ್ದು, ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ತಲೆಗೆ 4 ಹೊಲಿಗೆ ಹಾಕಲಾಗಿದ್ದು, ಸದ್ಯ ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ.

    ಇತ್ತೀಚಿಗೆ ಪತ್ನಿ ಹಸೀನ್ ಜಹಾನ್ ತನ್ನ ಪತಿ ಶಮಿ ವಿರುದ್ಧ ಹಿಂಸಾಚಾರ ಹಾಗೂ ಲೈಂಗಿಕ ದೌರ್ಜನ್ಯ ಕೇಸನ್ನು ದಾಖಲಿಸಿದ್ದರು. ಅಷ್ಟೇ ಅಲ್ಲದೇ ಕೊಲೆ ಯತ್ನ, ಮ್ಯಾಚ್ ಫಿಕ್ಸಿಂಗ್‍ನಂತಹ ಆರೋಪ ಮಾಡಿದ್ದರು.

    ಶಮಿ ವಿರುದ್ಧ ಪತ್ನಿ ಮಾಡಿದ್ದ ಮ್ಯಾಚ್ ಫಿಕ್ಸಿಂಗ್ ಆರೋಪಕ್ಕೆ ಬಿಸಿಸಿಐ ಕ್ಲೀನ್ ಚಿಟ್ ನೀಡಿತ್ತು. ಹೀಗಾಗಿ ಶಮಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಸಾಮಥ್ರ್ಯವನ್ನು ವೃದ್ಧಿಕೊಳ್ಳಲು ಡೆಹ್ರಾಡೂನ್ ಅಭಿಮನ್ಯು ಕ್ರಿಕೆಟ್ ಅಕಾಡೆಮಿಯಲ್ಲಿ ಅಭ್ಯಾಸ ನಡೆಸುತ್ತಿದ್ದರು.

  • ಅಪಘಾತಕ್ಕೀಡಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಬೀದರ್ ಡಿಸಿ

    ಅಪಘಾತಕ್ಕೀಡಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಬೀದರ್ ಡಿಸಿ

    ಬೀದರ್: ಅಫಘಾತಕ್ಕೀಡಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಜಿಲ್ಲಾಧಿಕಾರಿ ತಮ್ಮ ಕಾರಿನಲ್ಲಿ ಜಿಲ್ಲಾಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಘಟನೆ ಬೀದರ್ ತಾಲೂಕಿನ ಅಮಿಲಾಪೂರ್ ಗ್ರಾಮದ ಬಳಿ ನಡೆದಿದೆ.

    ಶಿವಕುಮಾರ್ (40) ಟ್ರ್ಯಾಕ್ಟರ್ ಡಿಕ್ಕಿಯಾಗಿ ಬಿದ್ದು ರಸ್ತೆಯಲ್ಲಿ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದರು. ಈ ವೇಳೆ ಅದೇ ರಸ್ತೆಯಲ್ಲಿ ಬಂದ ಡಿಸಿ ಎಚ್.ಆರ್ ಮಹದೇವ ಆಂಬುಲೆನ್ಸ್ ಗೆ ಕರೆ ಮಾಡಿದ್ರು. ಆದ್ರೆ ಯಾವುದೇ ಪ್ರಯೋಜನವಾಗಿಲ್ಲ. ನಂತರ ತಮ್ಮ ಕಾರಿನಲ್ಲಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

    ವ್ಯಕ್ತಿಯನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದ್ರೆ ಸಿಬ್ಬಂದಿಗಳು ರೋಗಿಯನ್ನು ಕರೆದುಕೊಂಡು ಹೋಗಲು ಸ್ಟ್ರೆಚರ್ ನೀಡಲಿಲ್ಲ. ಈ ವೇಳೆ ಆಸ್ಪತ್ರೆಯ ಸಿಬ್ಬಂದಿಗಳನ್ನು ಡಿಸಿ ತರಾಟೆ ತೆಗೆದುಕೊಂಡಿದ್ದಾರೆ. ಜಿಲ್ಲಾಧಿಕಾರಿ ತರಾಟೆಯ ಬಳಿಕ ಚಿಕಿತ್ಸೆ ನೀಡಿ ವ್ಯಕ್ತಿಯನ್ನು ಪ್ರಾಣ ಅಪಾಯದಿಂದ ಪಾರು ಮಾಡಲಾಗಿದೆ.

    ಒಟ್ಟಿನಲ್ಲಿ ಸರಿಯಾದ ಸಮಯಕ್ಕೆ ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ಮೂಲಕ ಮಾನವೀಯತೆ ಮೆರೆದ ಜಿಲ್ಲಾಧಿಕಾರಿಗೆ ಜಿಲ್ಲೆಯ ಜನರು ಸಲಾಂ ಹಾಕುತ್ತಿದ್ದಾರೆ.

  • ಡಿವೈಡರ್ ಗೆ ಡಿಕ್ಕಿ ಹೊಡೆದು-10 ಅಡಿ ಚಿಮ್ಮಿ ಮತ್ತೊಂದು ಕಾರಿಗೆ ಡಿಕ್ಕಿ

    ಡಿವೈಡರ್ ಗೆ ಡಿಕ್ಕಿ ಹೊಡೆದು-10 ಅಡಿ ಚಿಮ್ಮಿ ಮತ್ತೊಂದು ಕಾರಿಗೆ ಡಿಕ್ಕಿ

    ಹೈದರಾಬಾದ್: ಅತಿ ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿ ಹೊಡೆದು, ಎದುರಿಗೆ ಬರುತ್ತಿದ್ದ ಮತ್ತೊಂದು ಕಾರ್‍ಗೆ ಡಿಕ್ಕಿ ಹೊಡೆದಿರುವ ಘಟನೆ ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

    ಹೈದರಾಬಾದ್- ನಿಜಾಮಾಬಾದ್ ನಡುವಿನ ಮೆದಕ್ ಜಿಲ್ಲೆ ನಾರ್ಸಿಂಗ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಘಟನೆ ನಡೆದಿದೆ. ನಿಜಾಮಾಬಾದ್ ನಿಂದ ಹೈದರಾಬಾದ್ ಗೆ ಹೋಗುತ್ತಿದ್ದ ಕಾರು ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ 10 ಅಡಿ ಮೇಲಕ್ಕೆ ಚಿಮ್ಮಿ, ಮತ್ತೊಂದು ಬದಿಯಲ್ಲಿ ಎದುರಿಗೆ ಬರುತ್ತಿದ್ದ ಕಾರ್ ಮೇಲೆ ಬಿದ್ದಿದೆ.

    ಅತಿ ವೇಗವಾಗಿ ಕಾರು ಚಾಲನೆ ಮಾಡಿರುವುದು ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

  • ಲಾರಿ ಹರಿದು ಮಹಿಳೆ ಸಾವು – ಉದ್ರಿಕ್ತರಿಂದ ಕಲ್ಲು ತೂರಾಟ

    ಲಾರಿ ಹರಿದು ಮಹಿಳೆ ಸಾವು – ಉದ್ರಿಕ್ತರಿಂದ ಕಲ್ಲು ತೂರಾಟ

    ಹಾವೇರಿ: ವೇಗವಾಗಿ ಬಂದ ಲಾರಿ ಪಾದಚಾರಿ ಮಹಿಳೆಗೆ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ಪಟ್ಟಣದ ಅಂಚೆ ಕಚೇರಿ ಬಳಿ ನಡೆದಿದೆ.

    ಅಪಘಾತದಲ್ಲಿ ಮೃತಪಟ್ಟ ಮಹಿಳೆಯನ್ನು ಶಾಂತಮ್ಮ ಬಾಣಾಪುರ (48) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮಹಿಳೆ ಮೃತಪಟ್ಟ ವಿಷಯದ ತಿಳಿದ ಸಂಬಂಧಿಕರು ಲಾರಿ ಮೇಲೆ ಕಲ್ಲು ತೂರಾಟ ನಡೆಸಿದ್ದು, ರಸ್ತೆ ಇಡೀ ಕಲ್ಲು ಅಡ್ಡ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

    ಅಪಘಾತ ಸಂಭವಿಸಿದ ಕೂಡಲೇ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಬ್ಯಾಡಗಿ ಪೊಲೀಸರು ಭೇಟಿ ನೀಡಿ ಪ್ರತಿಭಟನಾಕಾರರನ್ನ ಮನವೊಲಿಸಲು ಹರಸಹಾಸ ಪಟ್ಟಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

  • ಸೇತುವೆಗೆ ಡಿಕ್ಕಿ ಹೊಡೆದ ಕ್ರೂಸರ್ – ಸ್ಥಳದಲ್ಲೇ ಇಬ್ಬರ ಸಾವು

    ಸೇತುವೆಗೆ ಡಿಕ್ಕಿ ಹೊಡೆದ ಕ್ರೂಸರ್ – ಸ್ಥಳದಲ್ಲೇ ಇಬ್ಬರ ಸಾವು

    ತುಮಕೂರು: ಕ್ರೂಸರ್ ವಾಹನ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ತುಮಕೂರು ಜಿಲ್ಲೆ ಶಿರಾ ಪಟ್ಟಣದಲ್ಲಿ ಭಾನುವಾರ ಮಧ್ಯರಾತ್ರಿ ನಡೆದಿದೆ.

    ಮಂಜುನಾಥ್(35), ಮೊಹಮ್ಮದ್ ನೇಮತ್ ಉಲ್ಲಾ (42) ಮೃತ ದುರ್ದೈವಿಗಳಾಗಿದ್ದು, ಮೂಲತಃ ಶಿವಮೊಗ್ಗ ಮೂಲದವರು ಎಂದು ತಿಳಿದು ಬಂದಿದೆ.

    ಹಿರಿಯೂರು ಕಡೆಯಿಂದ ಬರುತ್ತಿದ್ದ ಕ್ರೂಸರ್ ವಾಹನ ಶಿರಾ ಪಟ್ಟಣ ಆಂಜನೇಯ ದೇವಾಲಯದ ಬಳಿ ಇರುವ ಸೇತುವೆಗೆ ಡಿಕ್ಕಿ ಹೊಡೆದಿದೆ. ಕ್ರೂಸರ್ ಚಾಲಕನ ಅತಿ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕ್ರೂಸರ್ ವಾಹನದಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

    ಈ ವೇಳೆ ಕ್ರೂಸರ್ ನಲ್ಲಿ ಐದು ಜನ ಪ್ರಯಾಣಿಸುತ್ತಿದ್ದು, ಶೇಖ್ ಅಬ್ದುಲ್ಲಾ, ಅಫ್ರಿದ್, ಖಲಂದರ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಕುರಿತು ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

  • ಟ್ರಾಕ್ಟರ್ ಹಿಂಬದಿಗೆ ಕಾರು ಡಿಕ್ಕಿ:ಇಬ್ಬರು ವಕೀಲರು ಸೇರಿ ಮೂವರ ಸಾವು

    ಟ್ರಾಕ್ಟರ್ ಹಿಂಬದಿಗೆ ಕಾರು ಡಿಕ್ಕಿ:ಇಬ್ಬರು ವಕೀಲರು ಸೇರಿ ಮೂವರ ಸಾವು

    ಕಲಬುರಗಿ: ಟ್ರಾಕ್ಟರ್ ನ ಹಿಂಬದಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಲ್ಲಾಬಾದ ಬಳಿ ನಡೆದಿದೆ.

    ನಗರದ ನಿವಾಸಿ ಶ್ರೀರಂಗ್ ಶೇಡಕರ್ (42) ಮಲ್ಲಾಬಾದ್ ಗ್ರಾಮದ ನಿವಾಸಿ ರಮೇಶ್ ದೊಡ್ಮನಿ (40) ಮೃತಪಟ್ಟ ವಕೀಲರು. ಅಪಘಾತ ನಡೆದ ವೇಳೆ ಕಾರಿನಲ್ಲಿ ಮೂವರು ಪ್ರಯಾಣ ಮಾಡುತ್ತಿದ್ದರು ಎಂದು ತಿಳಿದು ಬಂದಿದ್ದು, ಅಪಘಾತ ಸಂಭವಿಸಲು ಕಾರ್ ಟಯರ್ ಸ್ಫೋಟ ಆಗಿದ್ದೇ ಕಾರಣ ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.

    ವಕೀಲರಾದ ಶ್ರೀರಂಗ್ ಮತ್ತು ರಮೇಶ್ ಇಬ್ಬರು ಅಫಜಲಪುರ್ ಪಟ್ಟಣದಲ್ಲಿರುವ ನ್ಯಾಯಾಲಯಕ್ಕೆ ಪ್ರಕರಣವೊಂದರ ಸಂಬಂಧ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಮಲ್ಲಾಬಾದ್ ಗ್ರಾಮದ ಬಳಿ ಟಯರ್ ಸ್ಫೋಟಗೊಂಡಿದೆ. ಪರಿಣಾಮವಾಗಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಟ್ರಾಕ್ಟರಿಗೆ ಡಿಕ್ಕಿ ಹೊಡೆದಿದೆ. ಅಪಘಾತ ಸಂಭವಿಸಿದ ರಭಸಕ್ಕೆ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, ಆಸ್ಪತ್ರೆಗೆ ಸಾಗಿಸುವ ವೇಳೆ ಕಾರು ಚಾಲಕ ಮೃತ ಪಟ್ಟಿದ್ದಾರೆ. ಅಫಜಲಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ರಸ್ತೆ ಅಪಘಾತದಲ್ಲಿ ಮಾಜಿ ಸಂಸದರ ಪುತ್ರ ಪಾರು

    ರಸ್ತೆ ಅಪಘಾತದಲ್ಲಿ ಮಾಜಿ ಸಂಸದರ ಪುತ್ರ ಪಾರು

    ಮೈಸೂರು: ರಸ್ತೆ ಅಪಘಾತದಲ್ಲಿ ಮಾಜಿ ಸಂಸದ ಅಡಗೂರು ಎಚ್.ವಿಶ್ವನಾಥ್ ಪುತ್ರ ಅಪಾಯದಿಂದ ಪಾರಾಗಿದ್ದಾರೆ.

    ಮಂಗಳವಾರ ತಡರಾತ್ರಿ ಕಾರ್ ಕಾಗೂ ಆಟೋ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಮಾಜಿ ಸಂಸದರ ಪುತ್ರ ಪೂರ್ವಜ್ ವಿಶ್ವನಾಥ್ ಅಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಕೆ.ಆರ್.ನಗರ ಪಟ್ಟಣ ಹೊರವಲಯದ ಬಸವೇಶ್ವರ ದೇವಾಲಯ ಬಳಿ ಸಂಭವಿಸಿದೆ.

    ಕಾರ್ಯನಿಮಿತ್ತ ಚಾಂದಗಾಲು ಗ್ರಾಮಕ್ಕೆ ಪೂರ್ವಜ್ ತಮ್ಮ ಕಾರಿನಲ್ಲಿ ಹೊರಟಿದ್ದ ವೇಳೆ ಆಲೂಗಡ್ಡೆ ತುಂಬಿದ್ದ ಗೂಡ್ಸ್ ಆಟೋಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಎರಡೂ ವಾಹನಗಳು ಸಂಪೂರ್ಣ ಜಖಂ ಆಗಿದೆ. ಅರಕಲಗೂಡು ಮಂಜುನಾಥ್ ಎಂಬವರಿಗೆ ಸೇರಿದ ಆಟೋ ಇದಾಗಿದೆ. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿದ್ದು, ಸದ್ಯ ಗಾಯಾಳುಗಳು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಈ ಬಗ್ಗೆ ಕೆಆರ್ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

    https://www.youtube.com/watch?v=LH0pNdW7o3U

     

  • ಭೀಕರ ರಸ್ತೆ ಅಪಘಾತಕ್ಕೆ ನಾಲ್ವರು ಟೆಕ್ಕಿಗಳು ಸ್ಥಳದಲ್ಲೇ ಸಾವು

    ಭೀಕರ ರಸ್ತೆ ಅಪಘಾತಕ್ಕೆ ನಾಲ್ವರು ಟೆಕ್ಕಿಗಳು ಸ್ಥಳದಲ್ಲೇ ಸಾವು

    ಥಾಣೆ: ಕಾರು ಮತ್ತು ಬಸ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ಕು ಮಂದಿ ಸಾಫ್ಟ್ ವೇರ್ ಉದ್ಯೋಗಿಗಳು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಮುಂಬೈ ಸಮೀಪದ ಭಿವಾಂಡಿಯಲ್ಲಿ ಬುಧವಾರ ಮುಂಜಾನೆ ನಡೆದಿದೆ.

    ಸ್ನೇಹಿತನ ಹುಟ್ಟು ಹಬ್ಬದ ಸಂಭ್ರಮದ ಪಾರ್ಟಿಯನ್ನು ಮುಗಿಸಿಕೊಂಡು ಏಳು ಮಂದಿ ಎಂಜಿನಿಯರುಗಳು ಕಾರಿನಲ್ಲಿ ಮನೆಗೆ ಹಿಂದಿರುಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದ್ದು, ಡಿಕ್ಕಿ ರಭಸಕ್ಕೆ ಸ್ಥಳದಲ್ಲೇ ನಾಲ್ವರು ಮೃತ ಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

    ಅಪಘಾತದಲ್ಲಿ ಮೃತಪಟ್ಟವರನ್ನು ಡೊಂಬಿವಿಲಿ ನಿವಾಸಿ ವಿಕ್ರಾಂತ್ ಸಿಂಗ್, ಮೀರಾ ರಸ್ತೆಯ ನಿವಾಸಿಗಳಾದ ನಿರಾಜ್ ಪಂಚಾಲ್ ಮತ್ತು ಮೀಹಿರ್ ಉತೇಕರ್, ಬೊರಿವಿಲಿ ನಿವಾಸಿಗಳಾದ ನಿರಾವ್ ಮೆಹ್ತಾ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ವೈಬಾವ್ ಚೆಡ್ಡಾ, ರಮೇಶ್ ಪಾಟೀಲ್ ಮತ್ತು ಸಂತೋಷ್ ಮಿಶ್ರಾ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಸ್ನೇಹಿತರೆಲ್ಲರು ಸ್ಪೇಸ್.ಕಾಮ್ ಸಂಸ್ಥೆಯ ಉದ್ಯೋಗಿಗಳಾಗಿದ್ದರು. ಸೆಪ್ಟೆಂಬರ್ 12 ರಂದು ನಿರಾಜ್‍ನ ಹುಟ್ಟು ಹಬ್ಬದ ಪಾರ್ಟಿಯನ್ನು ಮಾಡಲು 10 ಜನರ ತಂಡವು ಸ್ನೇಹಿತ ಸಂಕೇತ್‍ನ ಡೊಂಬಿವಿಲಿಯಲ್ಲಿರುವ ಫ್ಲಾಟ್‍ಗೆ ಹೋಗಿದ್ದರು. ಪಾರ್ಟಿಯನ್ನು ಮುಗಿಸಿ ನಂತರ ಎಲ್ಲರು ಒಂದೇ ಕಾರಿನಲ್ಲಿ ಆಫಿಸ್‍ಗೆ ತೆರಳಲು ನಿರ್ಧರಿಸಿದ್ದರು ಎಂದು ಮೃತ ಪಟ್ಟವರ ಸ್ನೇಹಿತ ರೋಹಿತ್ ಷಾ ತಿಳಿಸಿದ್ದಾರೆ.

    ಪಾರ್ಟಿ ಮುಗಿಸಿ ಮುಂಜಾನೆ 3 ಗಂಟೆಗೆ ಅಲ್ಲಿಂದ ನಾನು ಹೊರಟೆ, ಕಾರನ್ನು ಡ್ರೈವ್ ಮಾಡುತ್ತಿದ್ದ ವಿಕ್ರಾಂತ್ ಸಿಂಗ್ ಪಾರ್ಟಿಯಲ್ಲಿ ಭಾಗವಹಿಸಿರಲಿಲ್ಲ, ಉಳಿದವರನ್ನು ಆಫಿಸ್‍ಗೆ ಡ್ರಾಪ್ ಮಾಡಲು ತೆರಳಿದ್ದ ಎಂದು ಷಾ ವಿವರಿಸಿದರು.

    ಕಾರ್ ಅನ್ನು ಡ್ರೈವ್ ಮಾಡುತ್ತಿದ್ದ ಸಿಂಗ್ ಬಸ್‍ಗೆ ಡಿಕ್ಕಿ ಹೊಡೆದ ನಂತರ ನಿಯಂತ್ರಣ ಕಳೆದುಕೊಂಡು ಈ ದುರ್ಘಟನೆ ಸಂಭವಿಸಿದೆ ಎಂದು ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ ಪೊಲೀಸರಿಗೆ ತಿಳಿಸಿದ್ದಾರೆ.