Tag: Road Accident

  • ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು

    ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು

    ವಿಜಯಪುರ: ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ (Vijayapura) ನಗರದ ಹೊರವಲಯದ ಇಂಡಿ ಬೈಪಾಸ್ (Indi Bypass) ಬಳಿ ನಡೆದಿದೆ.ಇದನ್ನೂ ಓದಿ: ಮಾರ್ಚ್ ಅಂತ್ಯಕ್ಕೆ ಸುನಿತಾ ವಿಲಿಯಮ್ಸ್ ಭೂಮಿಗೆ ವಾಪಸ್?

    ಮೃತ ಬೈಕ್ ಸವಾರನನ್ನು ಜಿಲ್ಲೆಯ ಗಡಗಿ ಲೇಔಟ್ ನಿವಾಸಿ ಮಾಳು ಗುಂಡಣ್ಣನವರ (38) ಎಂದು ಗುರುತಿಸಲಾಗಿದೆ.

    ಗುಂಡಣ್ಣನವರ ಖಾಸಗಿ ಶಾಲೆಯೊಂದರಲ್ಲಿ ವಾಹನ ಚಾಲಕನಾಗಿ ಕೆಲಸ ಮಾಡುತ್ತಿದ್ದ. ನಗರದ ಹೊರವಲಯದ ಸೊಲಾಪುರ ಬೈಪಾಸ್‌ನಿಂದ ಬರುವಾಗ ಇಂಡಿ ಬೈಪಾಸ್ ಬಳಿ ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ವಿಜಯಪುರ ನಗರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ: ನಾವು ಎಂದಿಗೂ ಅಂಬೇಡ್ಕರ್‌ರನ್ನ ಅವಮಾನಿಸುವುದಿಲ್ಲ.. ನನ್ನ ಹೇಳಿಕೆ ತಿರುಚಲಾಗಿದೆ: ಅಮಿತ್ ಶಾ

  • ಮುಂಬೈ ಬಸ್ ಅಪಘಾತ: ತರಬೇತಿಯಿಲ್ಲದೇ ಬ್ರೇಕ್ ಬದಲು ಎಕ್ಸಲೇಟರ್ ಒತ್ತಿದ್ದ ಚಾಲಕ

    ಮುಂಬೈ ಬಸ್ ಅಪಘಾತ: ತರಬೇತಿಯಿಲ್ಲದೇ ಬ್ರೇಕ್ ಬದಲು ಎಕ್ಸಲೇಟರ್ ಒತ್ತಿದ್ದ ಚಾಲಕ

    ಮುಂಬೈ: ಮುಂಬೈನ (Mumbai) ಕುರ್ಲಾದಲ್ಲಿ (Kurla) ಸೋಮವಾರ (ಡಿ.09) ರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತ ನಡೆದಿದೆ ಎನ್ನಲಾಗಿತ್ತು. ಆದರೆ ತನಿಖೆಯ ಬಳಿಕ ಚಾಲಕನಿಗೆ ತರಬೇತಿ ಇರಲಿಲ್ಲ. ಹಾಗಾಗಿ ಬ್ರೇಕ್ ಬದಲು ಎಕ್ಸಲೇಟರ್‌ನ್ನು ತುಳಿದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಮಾಹಿತಿ ಪ್ರಕಾರ, ಚಾಲಕನಿಗೆ ತರಬೇತಿ ಇರಲಿಲ್ಲ. ಆತ ಬ್ರೇಕ್ ಹಾಕುವ ಬದಲು ಎಕ್ಸ್ಲೇಟರ್ ಒತ್ತಿದ್ದ. ಇದರಿಂದ ವಾಹನದ ವೇಗ ಹೆಚ್ಚಾದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ತನಿಖೆಯಿಂದ ತಿಳಿದು ಬಂದಿದೆ.ಇದನ್ನೂ ಓದಿ: ಜಾತಿ ವ್ಯವಸ್ಥೆಯ ಕ್ರೂರ ಘಟನೆ – ಎಸ್‌ಎಂಕೆ ಕೋಲಾರದ ಕಂಬಾಲಪಲ್ಲಿ ದುರಂತ ನಿಭಾಯಿಸಿದ್ದು ಹೇಗೆ?

    ಚಾಲಕ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದು, ಡಿ.1 ರಿಂದ ಬೃಹತ್ ಮುಂಬೈ ಸರಬರಾಜು ಮತ್ತು ಸಾರಿಗೆ ಸಂಸ್ಥೆಗೆ ಸೇರಿದ್ದನು ಎಂದು ತಿಳಿಸಿದ್ದಾರೆ.

    ಘಟನೆ ಏನು?
    ಬೃಹತ್ ಮುಂಬೈ ಸರಬರಾಜು ಮತ್ತು ಸಾರಿಗೆ ಸಂಸ್ಥೆಯ ಬಸ್ ಕುರ್ಲಾ ನಿಲ್ದಾಣದಿಂದ ಅಂಧೇರಿಗೆ ಹೋಗುತ್ತಿತ್ತು. ಈ ವೇಳೆ ಅವಘಡ ಸಂಭವಿಸಿದ್ದು, ಬಳಿಕ 30 ರಿಂದ 40 ವಾಹನಗಳಿಗೆ ಡಿಕ್ಕಿ ಹೊಡೆದಿತ್ತು. ಜೊತೆಗೆ ಪಾದಚಾರಿಗಳ ಮೇಲೆ ಹಾಯ್ದು ಮುಂದಕ್ಕೆ ಸಾಗಿ, ಎದುರಿಗೆ ಇದ್ದ ಗೋಡೆಗೆ ಡಿಕ್ಕಿ ಹೊಡೆದು ಬಳಿಕ ಅಲ್ಲಿಯೇ ನಿಂತಿತ್ತು. ಪರಿಣಾಮ 6 ಜನರು ಸಾವನ್ನಪ್ಪಿದ್ದು, 49 ಜನ ಗಾಯಗೊಂಡಿದ್ದರು.

    ಬಸ್‌ನ ಬ್ರೇಕ್ ಫೇಲ್ ಆದ ಕಾರಣ ಚಾಲಕನಿಗೆ ನಿಯಂತ್ರಣಕ್ಕೆ ಸಿಗದೇ ಅಪಘಾತ ಸಂಭವಿಸಿದೆ ಎನ್ನಲಾಗಿತ್ತು.ಇದನ್ನೂ ಓದಿ: ಇಂದು ಎಸ್‌ಎಂಕೆ ಅಂತ್ಯಕ್ರಿಯೆ – ಭದ್ರತೆಗೆ 1,000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

  • ‌ಆಕ್ಸಿಡೆಂಟ್ ಕೇಸ್‌ – ಅಸಿಸ್ಟೆಂಟ್ ಪ್ರೊಫೆಸರ್ ಬಂಧನ, ಬಿಡುಗಡೆ

    ‌ಆಕ್ಸಿಡೆಂಟ್ ಕೇಸ್‌ – ಅಸಿಸ್ಟೆಂಟ್ ಪ್ರೊಫೆಸರ್ ಬಂಧನ, ಬಿಡುಗಡೆ

    ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಬಳಿ ಇತ್ತೀಚೆಗೆ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಅಪಘಾತವಾದ (Accident) ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಘಾತಕ್ಕೆ ಕಾರಣವಾದ ಅಸಿಸ್ಟೆಂಟ್ ಪ್ರೊಫೆಸರ್ (Assistant Professor) ತ್ರಿನಿಧಿಯನ್ನು ಬಂಧಿಸಿ, ಸ್ಟೇಷನ್‌ ಬೇಲ್‌ ಮೇಲೆ ಬಿಡುಗಡೆ ಮಾಡಲಾಗಿದೆ.

    ನ.6ರಂದು ಆಳಂದ ತಾಲೂಕಿನ ತಡಕಲ್ ಗ್ರಾಮದ ನಿವಾಸಿ ರಂಜಾನ್ ಎಂಬ ವ್ಯಕ್ತಿಯ ಬೈಕ್ ಹಾಗೂ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಅಸಿಸ್ಟೆಂಟ್ ಪ್ರೊಫೆಸರ್ ತ್ರಿನಿಧಿ ಕಾರಿನ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದನು. ಇದನ್ನೂ ಓದಿ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸರಣಿ ಸಾವು – ಮೃತ ಬಾಣಂತಿಯರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ

    ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕನಿಂಧ ಆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ನರೋಣಾ ಪೋಲಿಸ್ ಠಾಣೆ ಪೋಲಿಸರು ಬಂಧಿಸಿ ಕರೆದೊಯ್ದಿದ್ದಾರೆ. ಪಘಾತಕ್ಕೆ ಕಾರಣವಾದ ತ್ರಿನಿಧಿಯನ್ನು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಿಂದಲೇ ಪೋಲಿಸರು ಬಂಧಿಸಿ ಕರೆದುಕೊಂಡು ಹೋಗಿದ್ದು, ಇದೀಗ ಸ್ಟೇಷನ್ ಬೇಲ್‌ ಮೇಲೆ ಬಿಡುಗಡೆ ಮಾಡಲಾಗಿದೆ.

    ಈ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ನರೋಣಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಇದನ್ನೂ ಓದಿ: Mysuru | ಬೈಕ್ ಓಡಿಸುತ್ತಿರುವಾಗಲೇ ಹೃದಯಾಘಾತ – ತಡೆಗೋಡೆಗೆ ಗುದ್ದಿ ವ್ಯಕ್ತಿ ಸಾವು!

  • ಕಾರು, ಕಬ್ಬು ಕಟಾವು ಮಿಷಿನ್ ನಡುವೆ ಭೀಕರ ಅಪಘಾತ; ಐವರು ದುರ್ಮರಣ

    ಕಾರು, ಕಬ್ಬು ಕಟಾವು ಮಿಷಿನ್ ನಡುವೆ ಭೀಕರ ಅಪಘಾತ; ಐವರು ದುರ್ಮರಣ

    ವಿಜಯಪುರ: ಕಾರು ಮತ್ತು ಕಬ್ಬು ಕಟಾವು ಮಿಷಿನ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ (Vijayapura) ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಿಳೇಭಾವಿ (Bilebhavi) ಕ್ರಾಸ್ ಬಳಿ ನಡೆದಿದೆ.

    ಮೃತರನ್ನು ವಿಜಯಪುರ ತಾಲೂಕಿನ ಅಲಿಯಾಬಾದ್ ನಿವಾಸಿಗಳೆಂದು ಗುರುತಿಸಲಾಗಿದ್ದು, ಇಬ್ಬರು ಮಹಿಳೆಯರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ.ಇದನ್ನೂ ಓದಿ: ಶಾಸಕರೊಂದಿಗೆ ಅನುಚಿತ ವರ್ತನೆ – ಆರ್‌ಟಿಓ ಇನ್ಸ್‌ಪೆಕ್ಟರ್ ಅಮಾನತು

    ಹುಣಸಗಿಯಿಂದ ತಾಳಿಕೋಟೆಗೆ ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಕಾರು ಮತ್ತು ಕಬ್ಬು ಕಟಾವು ಮಷಿನ್ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

    ಘಟನಾ ಸ್ಥಳಕ್ಕೆ ತಾಳಿಕೋಟೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.ಇದನ್ನೂ ಓದಿ: ಡಿವೋರ್ಸ್ ವದಂತಿಗೆ ಫುಲ್ ಸ್ಟಾಪ್- ಜೊತೆಯಾಗಿ ಕಾಣಿಸಿಕೊಂಡ ಅಭಿಷೇಕ್, ಐಶ್ವರ್ಯಾ ರೈ

     

  • ಉತ್ತರ ಪ್ರದೇಶದ ಪಿಲಿಭಿತ್, ಚಿತ್ರಕೂಟ್‌ನಲ್ಲಿ ರಸ್ತೆ ಅಪಘಾತ – 10 ಸಾವು, 12 ಮಂದಿ ಸ್ಥಿತಿ ಗಂಭೀರ

    ಉತ್ತರ ಪ್ರದೇಶದ ಪಿಲಿಭಿತ್, ಚಿತ್ರಕೂಟ್‌ನಲ್ಲಿ ರಸ್ತೆ ಅಪಘಾತ – 10 ಸಾವು, 12 ಮಂದಿ ಸ್ಥಿತಿ ಗಂಭೀರ

    ಲಕ್ನೋ: ಉತ್ತರ ಪ್ರದೇಶದ (Uttar Pradesh) ಪಿಲಿಭಿತ್ (Pilibhit) ಹಾಗೂ ಚಿತ್ರಕೂಟ್ (Chitrakoot) ಜಿಲ್ಲೆಯಲ್ಲಿ 2 ಭೀಕರ ರಸ್ತೆ ಅಪಘಾತಗಳು ಸಂಭವಿಸಿದೆ. ಈ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದು, 12 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

    ಪಿಲಿಭಿತ್ ಜಿಲ್ಲೆಯಲ್ಲಿ 11 ಜನರಿರುವ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ 5 ಜನರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದವರನ್ನು ಉತ್ತರಾಖಂಡದ ಖತಿಮಾ ಮೂಲದವರು ಎಂದು ಗುರುತಿಸಲಾಗಿದೆ.ಇದನ್ನೂ ಓದಿ:

    ಮದುವೆಗೆಂದು ತೆರಳಿದ್ದವರು ಮರಳಿ ಮನೆಗೆ ಹೋಗುವಾಗ ಈ ಅವಘಡ ಸಂಭವಿಸಿದೆ. ಮಾರುತಿ ಕಾರಿನಲ್ಲಿ 11 ಮಂದಿ ಪ್ರಯಾಣಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆಯ ಬದಿಗಿದ್ದ ಮರಕ್ಕೆ ಡಿಕ್ಕಿಯಾಗಿದೆ.

    ಪೊಲೀಸ್ ವರಿಷ್ಠಾಧಿಕಾರಿ ಅವಿನಾಶ್ ಕುಮಾರ್ ಪಾಂಡೆ ಮಾತನಾಡಿ, ಕೂಡಲೇ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಮಾರ್ಗ ಮಧ್ಯೆ ಮೂವರು ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ದಾಖಲಾದ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನುಳಿದವರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ ಎಂದು ತಿಳಿಸಿದ್ದಾರೆ.

    ಇನ್ನೂ ಚಿತ್ರಕೂಟ್ ಜಿಲ್ಲೆಯಲ್ಲಿ 11 ಜನರಿರುವ ಬುಲೆರೋ, ಟಕ್ರ‍್ಗೆ ಮುಖಾಮುಖಿ ಡಿಕ್ಕಿಯಾಗಿದ್ದು, ಐವರು ಸಾವನ್ನಪ್ಪಿದ್ದಾರೆ.

    ರಾಯಪುರ (Raipura) ಪೊಲೀಸ್ ಠಾಣೆಯ ಬಳಿ ಬೆಳಗ್ಗೆ 5:30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಪ್ರಯಾಗ್ರಾಜ್‌ನಿಂದ ಬರುತ್ತಿದ್ದ ಬುಲೆರೋ ಹಾಗೂ ರಾಯಪುರದಿಂದ ಬರುತ್ತಿದ್ದ ಟ್ರಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ ಐದು ಜನ ಸಾವನ್ನಪ್ಪಿದ್ದು, ಇನ್ನುಳಿದವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ನಿದ್ದೆಯ ಮಂಪರಿನಲ್ಲಿ ಕಾರು ಚಲಾಯಿಸಿದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ತಿಳಿಸಿದ್ದಾರೆ.ಇದನ್ನೂ ಓದಿ:

  • ರಸ್ತೆ ದಾಟುವಾಗ ಭೀಕರ ಅಪಘಾತ – ಚಿಕಿತ್ಸೆ ಫಲಿಸದೇ ವಿದ್ಯಾರ್ಥಿ ಸಾವು

    ರಸ್ತೆ ದಾಟುವಾಗ ಭೀಕರ ಅಪಘಾತ – ಚಿಕಿತ್ಸೆ ಫಲಿಸದೇ ವಿದ್ಯಾರ್ಥಿ ಸಾವು

    ಬೀದರ್: ರಸ್ತೆ ದಾಟುವಾಗ ಭೀಕರ ಅಪಘಾತದಲ್ಲಿ ಗಾಯಗೊಂಡು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ವಿದ್ಯಾರ್ಥಿ ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ.

    ಮೃತ ವಿದ್ಯಾರ್ಥಿಯನ್ನು 16 ವರ್ಷದ ವಿಕಾಸ್ ಸೋಪಾನ್ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಚಿಕ್ಕೋಡಿ| ಪ್ರೀತಿಗೆ ವಿರೋಧ; ಪ್ರಿಯಕರನಿಂದ ಡಬಲ್ ಮರ್ಡರ್

    ಜಿರ್ಗಾ ಕ್ರಾಸ್ (Jirga Cross) ಬಳಿ ರಾಜ್ಯ ಹೆದ್ದಾರಿ ದಾಟುವಾಗ ರಸ್ತೆ ಅಪಘಾತ ನಡೆದಿತ್ತು. ಈ ವೇಳೆ ಕಾರೊಂದು ವಿದ್ಯಾರ್ಥಿಗೆ ಡಿಕ್ಕಿ ಹೊಡೆದಿತ್ತು. ಭೀಕರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸ್ಥಿತಿ ಚಿಂತಾಜನಕವಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಸದ್ಯ ಸಂತಪೂರ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.

    ಘಟನೆ ಏನು?
    ನ.26 ರಂದು ಬೀದರ್ (Bidar) ಜಿಲ್ಲೆಯ ಔರಾದ್ (Aurad) ತಾಲೂಕಿನ ಜಿರ್ಗಾ ಕ್ರಾಸ್ ಬಳಿ ರಾಜ್ಯ ಹೆದ್ದಾರಿ ದಾಟುವಾಗ ವಿದ್ಯಾರ್ಥಿಗೆ ಕಾರೊಂಡು ಡಿಕ್ಕಿ ಹೊಡೆದಿತ್ತು.

    ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಶಾಲಾ ವಾಹನದ ಎದುರಿನಿಂದ ವಿದ್ಯಾರ್ಥಿ ಓಡಿಕೊಂಡು ಬರುತ್ತಿದ್ದ. ಈ ವೇಳೆ ಅದೇ ಶಾಲಾ ವಾಹನದ ಪಕ್ಕದಿಂದ ವೇಗವಾಗಿ ಕಾರೊಂದು ಬಂದು ವಿದ್ಯಾರ್ಥಿಗೆ ಡಿಕ್ಕಿ ಹೊಡೆದಿತ್ತು. ಡಿಕ್ಕಿ ಹೊಡೆದ ರಭಸಕ್ಕೆ ಗಾಳಿಯಲ್ಲಿ ಮೇಲಿಂದ ಹಾರಿ ಮುಂದೆ ಹೋಗಿ ಬಿದ್ದಿದ್ದ. ಈ ಅಪಘಾತದ ಭೀಕರ ದೃಶ್ಯಗಳು ಅಲ್ಲಿಯೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

    ತಕ್ಷಣವೇ ವಿದ್ಯಾರ್ಥಿಯನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿತ್ತು. ಇನ್ನೂ ಭೀಕರ ರಸ್ತೆ ಅಪಘಾತದಿಂದಾಗಿ ರೋಸಿ ಹೋಗಿದ್ದ ಗ್ರಾಮಸ್ಥರು, ರಸ್ತೆಯಲ್ಲಿಯೇ ಕುಳಿತು ಪ್ರತಿಭಟನೆ ನಡೆಸಿದ್ದರು. ರಸ್ತೆ ಕಾಮಗಾರಿ ಅವೈಜ್ಞಾನಿಕವಾಗಿ ಮಾಡಲಾಗಿದೆ. ಇದರಿಂದಾಗಿ ಅಪಘಾತಗಳು ಹೆಚ್ಚಾಗುತ್ತಿವೆ ಎಂದು ಆರೋಪಿಸಿದ್ದರು. ಜೊತೆಗ ವಿದ್ಯಾರ್ಥಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದರು. ಸಂತಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಇದನ್ನೂ ಓದಿ: ಕಚ್ಚಾಡುವುದರಿಂದ ಯಾರಿಗೂ ಲಾಭವಿಲ್ಲ: ಯತ್ನಾಳ್ ವಿಚಾರಕ್ಕೆ ಬಿಎಸ್‍ವೈ ಪ್ರತಿಕ್ರಿಯೆ

  • ಓವರ್‌ಟೆಕ್ ಮಾಡಲು ಹೋಗಿ ಬೈಕ್‌ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

    ಓವರ್‌ಟೆಕ್ ಮಾಡಲು ಹೋಗಿ ಬೈಕ್‌ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

    ಯಾದಗಿರಿ: ಓವರ್‌ಟೆಕ್ ಮಾಡಲು ಹೋಗಿ ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ (Yadagiri) ಜಿಲ್ಲೆಯ ಶಹಾಪುರ ತಾಲೂಕಿನ ಮದ್ರಿಕಿ ಗ್ರಾಮದ ಬಳಿ ನಡೆದಿದೆ.

    ಮೃತರನ್ನು ಹಳ್ಳೆಪ್ಪ (45) ಹಾಗೂ ಮಲ್ಲಯ್ಯ (35) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಹಾಸನದಲ್ಲಿ ಹಮ್ಮಿಕೊಂಡಿರುವ ಸಿದ್ದರಾಮಯ್ಯ ಸ್ವಾಭಿಮಾನಿ ಸಮಾವೇಶದ ವಿರುದ್ಧ ಎಐಸಿಸಿಗೆ ದೂರು

    ಜೇವರ್ಗಿ ತಾಲೂಕಿನ ಚಿಕ್ಕಮುದವಾಳ ಗ್ರಾಮದ ಬಳಿಯಿರುವ ಜಮೀನು ನೋಡಿಕೊಂಡು ಬರಲು ಬೈಕ್‌ನಲ್ಲಿ ತೆರಳಿದ್ದರು. ವಾಪಸ್ ಊರಿಗೆ ಬರುವಾಗ, ಕಾರು ಚಾಲಕ ಬೈಕ್‌ನ್ನು ಓವರ್‌ಟೆಕ್ ಮಾಡಲು ಹೋಗಿ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಕಾರು ಚಾಲಕ ಕಾರನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ.

    ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದು, ಸದ್ಯ ಭೀಮರಾಯನ ಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಅಕ್ರಮವಾಗಿ ಸಾಗಿಸುತ್ತಿದ್ದ 16 ಲಕ್ಷ ಮೌಲ್ಯದ ಶ್ರೀಗಂಧ ಜಪ್ತಿ – ಓರ್ವ ಬಂಧನ

  • ಬೈಕ್‌ ಸ್ಕಿಡ್‌ ಆಗಿ ಕೆಳಗೆ ಬಿದ್ದ ದಂಪತಿ ಮೇಲೆ ಹರಿದ ಕೆಎಸ್‌ಆರ್‌ಟಿಸಿ ಬಸ್‌ – ಸ್ಥಳದಲ್ಲೇ ಸಾವು

    ಬೈಕ್‌ ಸ್ಕಿಡ್‌ ಆಗಿ ಕೆಳಗೆ ಬಿದ್ದ ದಂಪತಿ ಮೇಲೆ ಹರಿದ ಕೆಎಸ್‌ಆರ್‌ಟಿಸಿ ಬಸ್‌ – ಸ್ಥಳದಲ್ಲೇ ಸಾವು

    ಚಿಕ್ಕಬಳ್ಳಾಪುರ: ಕೆಎಸ್‌ಆರ್‌ಟಿಸಿ ಬಸ್ (KSRTC Bus) ಹರಿದು ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಆದರ್ಶ ಚಿತ್ರಮಂದಿರದ ಬಳಿ ನಡೆದಿದೆ.

    ಕೊಮ್ಮಸಂದ್ರ ಗ್ರಾಮದ 40 ವರ್ಷದ ವೆಂಕಟೇಶ್ ಹಾಗೂ ಪತ್ನಿ 34 ವರ್ಷದ ಸರಸತ್ವತಮ್ಮ ಮೃತರು. ಮೃತ ಸರಸ್ವತಮ್ಮ ಸ್ವಗ್ರಾಮದ ನಾರಾಯಣಹಳ್ಳಿಯಲ್ಲಿ ಇರುಮುಡಿ ಕಾರ್ಯಕ್ರಮ ನಿಮಿತ್ತ ದಂಪತಿ ಬೈಕ್ ಮೂಲಕ ತೆರಳುತ್ತಿದ್ದರು. ಈ ವೇಳೆ ಬೈಕ್ ಸ್ಕಿಡ್ ಆಗಿ ದಂಪತಿ ಕೆಳಗೆ ಬಿದ್ದಿದ್ದಾರೆ. ಹಿಂಬದಿಯಿಂದ ಬರುತ್ತಿದ್ದ ಬಸ್ ಇಬ್ಬರ ತಲೆ ಮೇಲೆ ಹರಿದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ (Chintamani Town Police Staion) ಪ್ರಕರಣ ದಾಖಲಾಗಿದೆ.

    ಬೈಕ್‌ಗೆ ಕಾರು ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು:
    ಮತ್ತೊಂದು ಪ್ರಕರಣದಲ್ಲಿ ಬೈಕ್‌ಗೆ ಕಾರು ಡಿಕ್ಕಿಯಾಗಿ (Car-Bike Accident) ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ನೆರಗನಹಳ್ಳಿ ಗೇಟ್ ಬಳಿ ನಡೆದಿದೆ. ಇದನ್ನೂ ಓದಿ: ಅದಾನಿ ತಮ್ಮ ಮೇಲಿನ ಆರೋಪ ಒಪ್ಪಿಕೊಳ್ಳಲ್ಲ, ಕೇಂದ್ರ ಸರ್ಕಾರವೇ ರಕ್ಷಿಸುತ್ತಿದೆ: ರಾಗಾ ಕಿಡಿ

    50 ವರ್ಷದ ವೆಂಕಟೇಶ್, 30 ವರ್ಷದ ಮಹೇಶ್ ಮೃತರು. ಅಪಘಾತದ ರಭಸಕ್ಕೆ ಬೈಕ್ ನಜ್ಜುಗುಜ್ಜಾಗಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿ ನಂಜುಂಡಯ್ಯ ಎಂಬುವವರಿಗೆ ಡಿಕ್ಕಿಯಾಗಿ ಗಾಯಗೊಂಡಿದ್ದಾರೆ. ಅಪಘಾತ ನಂತರ ಕಾರು ಬಿಟ್ಟು ಚಾಲಕ ಎಸ್ಕೇಪ್ ಆಗಿದ್ದಾನೆ. ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಾಶಪ್ಪನವರ್ ಆಯ್ತು ಈಗ ಜಯ ಮೃತ್ಯುಂಜಯ ಶ್ರೀ ವಿರುದ್ಧ ಹೆಬ್ಬಾಳ್ಕರ್ ಅಸಮಾಧಾನ

  • ರಸ್ತೆ ದಾಟುವಾಗ ಸಿನಿಮೀಯ ರೀತಿಯಲ್ಲಿ ಭೀಕರ ಅಪಘಾತ – ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

    ರಸ್ತೆ ದಾಟುವಾಗ ಸಿನಿಮೀಯ ರೀತಿಯಲ್ಲಿ ಭೀಕರ ಅಪಘಾತ – ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

    ಬೀದರ್: ರಸ್ತೆ ದಾಟುವಾಗ ಕಾರು ಡಿಕ್ಕಿಯಾದ ರಭಸಕ್ಕೆ ಸಿನಿಮೀಯ ರೀತಿಯಲ್ಲಿ ವಿದ್ಯಾರ್ಥಿ ಮೇಲಕ್ಕೆ ಹಾರಿ ಬಿದ್ದ ಭಯಾನಕ ಘಟನೆ ಬೀದರ್ (Bidar) ಜಿಲ್ಲೆಯ ಔರಾದ್ (Aurad) ತಾಲೂಕಿನ ಜಿರ್ಗಾ ಕ್ರಾಸ್ ಬಳಿ ನಡೆದಿದೆ.

    ಅಪಘಾತಕ್ಕೊಳಗಾದ ವಿದ್ಯಾರ್ಥಿಯನ್ನು ವಿಕಾಸ್ ಸೋಪಾನ್ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಸಾವಿನಲ್ಲೂ ಒಂದಾದ ದಂಪತಿ – ಪತಿಯ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದು ಪತ್ನಿ ಸಾವು

    ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಶಾಲಾ ವಾಹನದ ಎದುರಿನಿಂದ ವಿದ್ಯಾರ್ಥಿ ಓಡಿಕೊಂಡು ಬಂದಿದ್ದಾನೆ. ಈ ವೇಳೆ ಅದೇ ಶಾಲಾ ವಾಹನದ ಪಕ್ಕದಿಂದ ವೇಗವಾಗಿ ಕಾರೊಂದು ಬಂದು ವಿದ್ಯಾರ್ಥಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸಿನಿಮೀಯ ರೀತಿಯಲ್ಲಿ ಮೇಲಿಂದ ಹಾರಿ ಮುಂದೆ ಹೋಗಿ ಬಿದ್ದಿದ್ದಾನೆ. ಈ ಅಪಘಾತದ ಭೀಕರ ದೃಶ್ಯಗಳು ಅಲ್ಲಿಯೇ ಇದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

    ತಕ್ಷಣವೇ ವಿದ್ಯಾರ್ಥಿಯನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ. ಸ್ಥಿತಿ ಚಿಂತಾಜನಕವಾಗಿದ್ದು, ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾನೆ.

    ಇನ್ನೂ ಭೀಕರ ರಸ್ತೆ ಅಪಘಾತದಿಂದಾಗಿ ರೋಸಿ ಹೋದ ಗ್ರಾಮಸ್ಥರು, ರಸ್ತೆಯಲ್ಲಿಯೇ ಕುಳಿತು ಪ್ರತಿಭಟನೆ ಮಾಡುತ್ತಿದ್ದು, ರಸ್ತೆ ಕಾಮಗಾರಿ ಅವೈಜ್ಞಾನಿಕವಾಗಿ ಮಾಡಲಾಗಿದೆ. ಇದರಿಂದಾಗಿ ಅಪಘಾತಗಳು ಹೆಚ್ಚಾಗುತ್ತಿವೆ ಎಂದು ಆರೋಪಿಸಿದ್ದಾರೆ. ಇನ್ನೂ ಸಾವು-ಬದುಕಿನ ಮಧ್ಯೆ ಹೋರಾಡುತ್ತಿರುವ ವಿದ್ಯಾರ್ಥಿಗೆ ಸೂಕ್ತ ಪರಿಹಾರ ನೀಡಬೇಕು ಎಂದಿದ್ದಾರೆ.

    ಪ್ರತಿಭಟನೆ ಮಾಡುತ್ತಿರುವ ಗ್ರಾಮಸ್ಥರನ್ನು ಮನವೊಲಿಸಲು ಪೊಲೀಸರು ಹರಸಾಹಸಪಡುತ್ತಿದ್ದು, ಸಂತಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಸ್ವಪ್ರತಿಷ್ಠೆಯಿಂದ ಹೋರಾಟ ಮಾಡ್ತಿರೋದು ಅವ್ರಿಗೆ ಶೋಭೆ ತರಲ್ಲ: ಯತ್ನಾಳ್ ವಿರುದ್ಧ ಬಿಎಸ್‌ವೈ ಬೇಸರ

  • ಓವರ್‌ಲೋಡ್‌ನಿಂದ ಕಬ್ಬು ತುಂಬಿದ್ದ ಟ್ರ್ಯಾಕ್ಟರ್‌ ಪಲ್ಟಿ – ಓರ್ವ ಸಾವು

    ಓವರ್‌ಲೋಡ್‌ನಿಂದ ಕಬ್ಬು ತುಂಬಿದ್ದ ಟ್ರ್ಯಾಕ್ಟರ್‌ ಪಲ್ಟಿ – ಓರ್ವ ಸಾವು

    ಬೆಳಗಾವಿ: ಚಲಿಸುತ್ತಿದ್ದ ಕಾರಿನ ಮೇಲೆ ಕಬ್ಬು ತುಂಬಿದ್ದ ಟ್ರ್ಯಾಕ್ಟರ್‌ ಪಲ್ಟಿಯಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿ (Belagavi) ಹೊರವಲಯದ ಸುವರ್ಣಸೌಧದ ಬಳಿ ನಡೆದಿದೆ.

    ಮೃತ ವ್ಯಕ್ತಿಯನ್ನು ಹುಬ್ಬಳ್ಳಿಯ (Hubballi) ಲಕ್ಷ್ಮಿನಗರದ ನಿವಾಸಿ ಗಿರೀಶ್ ಕುಲಕರ್ಣಿ(24) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: PUBLiC TV Impact | ಕತ್ತಲಲ್ಲಿ ವಾಸಿಸುತ್ತಿದ್ದ 30 ಕುಟುಂಬಗಳಿಗೆ ಬೆಳಕಿನ ಭಾಗ್ಯ

    ಬೆಳಗಾವಿ ಹೊರವಲಯದ ಸುವರ್ಣಸೌಧದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಧ್ಯರಾತ್ರಿ ಈ ಘಟನೆ ನಡೆದಿದೆ. ಬೆಳಗಾವಿಗೆ ಬರ್ತ್ಡೇ ಪಾರ್ಟಿಗೆಂದು ಮೂವರು ಯುವಕರು ಬಂದಿದ್ದರು. ಪಾರ್ಟಿ ಮುಗಿಸಿ ಮರಳಿ ಹುಬ್ಬಳ್ಳಿಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಪಕ್ಕದಲ್ಲಿ ಚಲಿಸುತ್ತಿದ್ದ ಕಬ್ಬು ತುಂಬಿದ ಟ್ರ್ಯಾಕ್ಟರ್‌ ಏಕಾಏಕಿ ಕಾರಿನ ವಾಲಿ ಪಲ್ಟಿ ಹೊಡೆದಿದೆ.

    ಪಲ್ಟಿ ಹೊಡೆದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪ್ರಥಮ್ ಎಂಬಾತ ಗಂಭೀರ ಗಾಯಗೊಂಡಿದ್ದಾನೆ. ಸದ್ಯ ಯುವಕನ ಸ್ಥಿತಿ ಗಂಭೀರ, ಮತ್ತೋರ್ವನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

    ಟ್ರ್ಯಾಕ್ಟರ್‌ನಲ್ಲಿ ಓವರ್ ಲೋಡ್ ಆಗಿ ಕಬ್ಬು ತುಂಬಿದ್ದ ಪರಿಣಾಮ ಈ ಅವಘಡ ಸಂಭವಿಸಿದ್ದು, ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ: MUDA Case | ಮುಡಾ ಬ್ರಹ್ಮಾಂಡ ಭ್ರಷ್ಟಾಚಾರಕ್ಕಿತ್ತಾ ಐಎಎಸ್ ಅಧಿಕಾರಿಯ ಶ್ರೀರಕ್ಷೆ?