ಮೃತ ಬೈಕ್ ಸವಾರನನ್ನು ಗೋನವಾರ ಗ್ರಾಮದ 23 ವರ್ಷದ ತಿಮ್ಮಾರೆಡ್ಡಿ ಎಂದು ಗುರುತಿಸಲಾಗಿದೆ.
ರಾಯಚೂರಿನಿಂದ ಮಂತ್ರಾಲಯಕ್ಕೆ ಹೊರಟಿದ್ದ ರಾಜಹಂಸ ಬಸ್ ಬೈಕ್ಗೆ ಡಿಕ್ಕಿ ಹೊಡೆದಿದೆ. ಬೆಲ್ದಾರ್ ಕೆಲಸ ಮಾಡುತ್ತಿದ್ದ ಯುವಕ ಗ್ರಾಮದಿಂದ ಯರಗೇರಾಕ್ಕೆ ಹೊರಟಿದ್ದ ವೇಳೆ ಈ ಘಟನೆ ನಡೆದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಯರಗೇರಾ (Yargera) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಇದನ್ನೂ ಓದಿ: ಸಂಡೂರು ಅಖಾಡದಲ್ಲಿ ಪ್ರಚಾರ – 15 ದಿನದಲ್ಲಿ ಸಿದ್ದರಾಮಯ್ಯ ರಾಜೀನಾಮೆ : ಬಿಎಸ್ವೈ
ಆನೇಕಲ್: ಆಕ್ಟಿವಾ ಬೈಕ್ಗೆ ಕ್ಯಾಂಟರ್ (Cantor) ಡಿಕ್ಕಿ ಹೊಡೆದಿದ್ದು, ನಿವೃತ್ತ ಪೊಲೀಸ್ ಅಧಿಕಾರಿ ಸಾವನ್ನಪ್ಪಿರುವ ಭೀಕರ ಘಟನೆ ಬೆಂಗಳೂರು ಹೊರವಲಯದ ಅತ್ತಿಬೆಲೆಯ (Attibele) ಟಿವಿಎಸ್ ಕ್ರಾಸ್ ಬಳಿ ನಡೆದಿದೆ.
ಟಿವಿಎಸ್ ಕ್ರಾಸ್ ಬಳಿ ಆಕ್ಟಿವಾ ಬೈಕ್ನಲ್ಲಿ ಪ್ರಕಾಶ್ ತೆರಳುತ್ತಿದ್ದರು. ಈ ವೇಳೆ ಧರ್ಮಪುರಿಯಿಂದ ಮಂಗಳೂರಿಗೆ ಹೊರಟಿದ್ದ ಕ್ಯಾಂಟರ್ ಬೈಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕ್ಯಾಂಟರ್ಗೆ ಸಿಲುಕಿ ಪ್ರಕಾಶ್ ದೇಹ ಛಿದ್ರ ಛಿದ್ರಗೊಂಡಿದೆ. ಅಪಘಾತ ಸಂಭವಿಸಿದ ಬಳಿಕ ಕ್ಯಾಂಟರ್ ಚಾಲಕ ದಿನೇಶ್ ಪಾರಾಗಲು ಯತ್ನಿಸಿದ್ದು, ಪೊಲೀಸರು ಚಾಲಕ ಹಾಗೂ ಕ್ಯಾಂಟರ್ನ್ನು ವಶಕ್ಕೆ ಪಡೆದಿದ್ದಾರೆ.
ರಾಯಚೂರಿನಿಂದ ಕಲ್ಲೂರಿಗೆ ಕಟ್ಟಡ ಕೆಲಸಕ್ಕಾಗಿ ನಿತ್ಯವು ಪ್ರಯಾಣಿಸುತ್ತಿದ್ದರು. ಒಂದೇ ಬೈಕನಲ್ಲಿ ನಾಲ್ವರು ಹೊರಟಿದ್ದಾಗ ಪವರ್ ಗ್ರಿಡ್ ಬಳಿ ಬೈಕ್ಗೆ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ಕಾರು ಸಹಿತ ಚಾಲಕ ಪರಾರಿಯಾಗಿದ್ದಾನೆ.
ಡೆಹ್ರಾಡೂನ್: ಉತ್ತರಾಖಂಡದ (Uttarakhand) ಅಲ್ಮೋರಾ ಬಸ್ ಅಪಘಾತದಲ್ಲಿ (Almora Bus Accident) ಮೃತಪಟ್ಟ ಕುಟುಂಬದವರಿಗೆ ಪ್ರಧಾನಿ ಮೋದಿ (PM Modi) ಸಂತಾಪ ಸೂಚಿಸಿದ್ದಾರೆ. ಮೃತಪಟ್ಟವರ ಕುಟುಂಬದಕ್ಕೆ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ಪ್ರಧಾನಿ ಕಚೇರಿ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬದವರಿಗೆ ನನ್ನ ಸಂತಾಪಗಳು ಹಾಗೂ ಗಾಯಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಬಯಸುತ್ತೇನೆ ಎಂದು ಬರೆದುಕೊಂಡಿದ್ದಾರೆ.ಇದನ್ನೂ ಓದಿ: Uttarakhand | ಕಮರಿಗೆ ಉರುಳಿದ ಬಸ್, ಸಾವಿನ ಸಂಖ್ಯೆ 36ಕ್ಕೆ ಏರಿಕೆ, 19 ಮಂದಿಗೆ ಗಾಯ
ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ವೊಂದು ಕಮರಿಗೆ ಬಿದ್ದು 36 ಜನರು ಸಾವನ್ನಪ್ಪಿದ್ದಾರೆ ಹಾಗೂ 19 ಜನ ಗಾಯಗೊಂಡಿದ್ದಾರೆ. ಇಂದು (ನ.4) ಬೆಳಗ್ಗೆ 9 ಗಂಟೆ ಸುಮಾರಿಗೆ ಘಟನೆ ನಡೆಸಿದೆ ಎಂದು ವರದಿಗಳು ತಿಳಿಸಿವೆ.
The Prime Minister has announced an ex-gratia of Rs. 2 lakh from PMNRF for the next of kin of each deceased in the mishap in Almora, Uttarakhand. The injured would be given Rs. 50,000. https://t.co/KAjq9Agj8i
ಸ್ಥಳಕ್ಕೆ ಎನ್ಡಿಆರ್ಎಫ್, ಎಸ್ಡಿಆರ್ಎಫ್ ತಂಡಗಳು, ಸ್ಥಳೀಯ ಪೊಲೀಸರು ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ಅಪಘಾತ ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯಾಚರಣೆ ನಡೆಸಿದರು. ಕೆಲ ಪ್ರಯಾಣಿಕರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಕ್ಷಣಾಕಾರ್ಯ ನಡೆಯುತ್ತಿರುವ ಹೊತ್ತಿನಲ್ಲೇ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸಂತ್ರಸ್ತರಿಗೆ ಪರಿಹಾರ ಘೋಷಣೆ ಮಾಡಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 1 ಲಕ್ಷ ರೂ. ಆರ್ಥಿಕ ನೆರವು ಘೋಷಿಸಿದ್ದಾರೆ. ಅಲ್ಲದೇ ಘಟನೆ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಸುವಂತೆ ಅವರು ಕುಮಾನ್ ವಿಭಾಗದ ಆಯುಕ್ತರಿಗೆ ಸೂಚಿಸಿದ್ದಾರೆ.ಇದನ್ನೂ ಓದಿ: ಉತ್ತರಾಖಂಡದಲ್ಲಿ ಕಮರಿಗೆ ಉರುಳಿದ ಬಸ್ – ಕನಿಷ್ಠ 20 ಮಂದಿ ದಾರುಣ ಸಾವು
ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಆಗಮಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಪಕ್ಕದಲ್ಲೇ ಬರುತ್ತಿದ್ದ ವಾಹನವೊಂದಕ್ಕೆ ಬುಲೆಟ್ ಬೈಕ್ ಟಚ್ ಆಗಿ ಡಿವೈಡರ್ಗೆ ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಕೇಂಪೇಗೌಡ ಏರ್ಪೋರ್ಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: Hyderabad | ಮಗನ ಮೃತದೇಹದೊಂದಿಗೆ ನಾಲ್ಕು ದಿನ ಕಳೆದ ಅಂಧ ದಂಪತಿ
ಚಿಕ್ಕಮಗಳೂರು: ಹಾಸನಾಂಬೆ ದೇವಿ (Hasanamba Devi) ದರ್ಶನಕ್ಕೆ ಹೊರಟ್ಟಿದ್ದ ದಂಪತಿಯ ಕಾರು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಪಲ್ಟಿಯಾಗಿ ಪತ್ನಿ ಸಾವನ್ನಪ್ಪಿರುವ ಘಟನೆ ಹಾಸನ (Hassan) ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ನಡೆದಿದೆ.
ಇಂದು (ಅ.30) ಬೆಳಗಿನ ಜಾವ ನಾಲ್ಕು ಗಂಟೆಗೆ ಚಿಕ್ಕಮಗಳೂರಿನಿಂದ ಹಾಸನದ ಹಾಸನಾಂಬೆ ದೇವಿ ದರ್ಶನಕ್ಕೆ ಹೊರಟಿದ್ದ ಮಂಜು-ವನಿತಾ ದಂಪತಿಯ ಕಾರು ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಪಲ್ಟಿಯಾಗಿದೆ.
ಕೂಡಲೇ ಗ್ರಾಮಸ್ಥರು ಇಬ್ಬರನ್ನು ಬದುಕಿಸಲು ಹರಸಾಹಸಪಟ್ಟಿದ್ದಾರೆ. ಬೆಳಗಿನ ಜಾವದ ಕತ್ತಲಲ್ಲು ಕೂಡ ಕಲ್ಕೆರೆ ಗ್ರಾಮಸ್ಥರು ಕೆರೆಗೆ ಇಳಿದು ಕಾರಿಗೆ ಹಗ್ಗ ಕಟ್ಟಿ ಎಳೆದಿದ್ದಾರೆ. ಕಾರಿನ ಚಾಲಕ ಮಂಜು ಪ್ರಾಣಾಪಾಯದಿಂದ ಪಾರಾಗಿದ್ದು, ಮಂಜು ಪತ್ನಿ ವನಿತಾ ಸಾವನ್ನಪ್ಪಿದ್ದಾರೆ. ಕಾರಿನಿಂದ ಮಹಿಳೆಯನ್ನು ಹೊರತಂತ ಗ್ರಾಮಸ್ಥರು ಅವರನ್ನ ಬದುಕಿಸಲು ತೀವ್ರ ಹರಸಾಹಸಪಟ್ಟಿದ್ದಾರೆ. ಎದೆ ಬಡಿದು, ಬಾಯಿಗೆ ಉಸಿರು ನೀಡಿ, ಕೈಕಾಲು ಉಜ್ಜಿ ಜೀವ ಉಳಿಸಲು ಪ್ರಯತ್ನಿಸಿದ್ದಾರೆ. ಆದರೆ, ಕಾರು ಕೆರೆಯಲ್ಲಿ ಮುಳುಗಿ ನೀರು ಕುಡಿದಿದ್ದ ವನಿತಾ ಉಸಿರುಗಟ್ಡಿ ಸಾವನ್ನಪ್ಪಿದ್ದಾರೆ.
ಬೆಂಗಳೂರು-ಮೈಸೂರು (Bengaluru-Mysuru) ಹೆದ್ದಾರಿಯಲ್ಲಿ ಕೇರಳಕ್ಕೆ ಹೊರಟಿದ್ದ ಕೇರಳ ಸಾರಿಗೆ ಸಂಸ್ಥೆಯ ಬಸ್ಸು ತಡೆಗೋಡೆಗೆ ಡಿಕ್ಕಿ ಹೊಡೆದಿದ್ದು, ಬೆಳಗ್ಗಿನ ಜಾವ 5:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಚಾಲಕ ನಿದ್ರೆಯ ಮಂಪರಿನಲ್ಲಿ ಬಸ್ ಚಲಾಯಿಸಿದ್ದು, ಈ ಅವಘಡಕ್ಕೆ ಕಾರಣವಾಗಿದೆ. ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೈಕ್ಗೆ ಕಾರು ಡಿಕ್ಕಿ ಹೊಡೆದಿದ್ದು, ಬಳಿಕ ಕಾರಿನ ಹಿಂಬದಿಯಿಂದ ಮತ್ತೆರಡು ಕಾರುಗಳು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಸೇರಿದಂತೆ, ಕಾರಿನಲ್ಲಿದ್ದ ಮೂವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಯಚೂರು: ಜಿಲ್ಲೆಯ ಮಸ್ಕಿ (Maski) ತಾಲೂಕಿನ ಗುಡದೂರು ಬಳಿ ಸರ್ಕಾರಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದಾನೆ. ಇನ್ನೋರ್ವನ ಸ್ಥಿತಿ ಚಿಂತಾಜನಕವಾಗಿದೆ.
ಡಿಕ್ಕಿ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ. ಬಸ್ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾರಿನಲ್ಲಿದ್ದ ಇನ್ನೋರ್ವ ಗಾಯಾಳು ಶಿವರಾಜ್ ಸ್ಥಿತಿ ಗಂಭೀರವಾಗಿದ್ದು, ಸಿಂಧನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ಮುಂದುವರೆದಿದೆ.