Tag: road divider

  • ರಸ್ತೆ ವಿಭಜಕದಲ್ಲಿ ಮಲಗಿದ್ದವರ ಮೇಲೆ ಹರಿದ ಟ್ರಕ್- ನಾಲ್ವರು ಸಾವು

    ರಸ್ತೆ ವಿಭಜಕದಲ್ಲಿ ಮಲಗಿದ್ದವರ ಮೇಲೆ ಹರಿದ ಟ್ರಕ್- ನಾಲ್ವರು ಸಾವು

    ನವದೆಹಲಿ: ರಸ್ತೆ ವಿಭಜಕದಲ್ಲಿ ಮಲಗಿದ್ದವರ ಮೇಲೆ ಟ್ರಕ್‍ವೊಂದು ಹರಿದು ನಾಲ್ವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ದೆಹಲಿಯ (New Delhi) ಸೀಮಾಪುರಿಯಲ್ಲಿ ನಡೆದಿದೆ.

    ಸೀಮಾಪುರಿ ಡಿಟಿಸಿ ಡಿಪೋವನ್ನು ಟ್ರಕ್‌ (Truck) ದಾಟುವಾಗ ಈ ಘಟನೆ ನಡೆದಿದೆ. ಘಟನೆಯಲ್ಲಿ ರಸ್ತೆ ವಿಭಜಕದಲ್ಲಿ (Road Divider) ಮಲಗಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ. ಮೃತ ನಾಲ್ವರಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ ಓರ್ವ ಮಾರ್ಗ ಮಧ್ಯೆ ಮೃತಪಟ್ಟಿದ್ದು, ಇನ್ನೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ದಲಿತ ಬಾಲಕ ದೇವರ ಮೂರ್ತಿ ಮುಟ್ಟಿದ್ದಕ್ಕೆ 60 ಸಾವಿರ ರೂ. ದಂಡ ಹಾಕಿದ ಗ್ರಾಮಸ್ಥರು

    POLICE JEEP

    ಮೃತರನ್ನು ಕರೀಂ(52), ಚೋಟ್ಟೆ ಖಾನ್ಸ್(25), ಶಾ ಆಲಂ(38) ಮತ್ತು ರಾಹುಲ್(45) ಎಂದು ಗುರುತಿಸಲಾಗಿದೆ. ಮನೀಶ್(16) ಮತ್ತು ಪ್ರದೀಪ್(30) ಗಾಯಗೊಂಡವರು. ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ವಾಹನದ ಪತ್ತೆಗೆ ಪೊಲೀಸರು ಹಲವು ತಂಡಗಳನ್ನು ರಚಿಸಿದ್ದಾರೆ. ಇದನ್ನೂ ಓದಿ: ತಿರುಪತಿ ತಿಮ್ಮಪ್ಪನಿಗೆ 1 ಕೋಟಿ ರೂ. ದೇಣಿಗೆ ನೀಡಿದ ಮುಸ್ಲಿಂ ದಂಪತಿ

    Live Tv
    [brid partner=56869869 player=32851 video=960834 autoplay=true]

  • ಮಳೆ ಅಬ್ಬರಕ್ಕೆ ರಸ್ತೆ ಕಾಣದೆ ಡಿವೈಡರ್ ಮೇಲೇರಿ ಪಲ್ಟಿ ಹೊಡೆದ ಕಾರು

    ಮಳೆ ಅಬ್ಬರಕ್ಕೆ ರಸ್ತೆ ಕಾಣದೆ ಡಿವೈಡರ್ ಮೇಲೇರಿ ಪಲ್ಟಿ ಹೊಡೆದ ಕಾರು

    – ಕಾರಿನಲ್ಲಿದ್ದ ಐವರು ಗ್ರೇಟ್ ಎಸ್ಕೇಪ್

    ಮೈಸೂರು: ಮಳೆ ಅಬ್ಬರದಿಂದಾಗಿ ರಸ್ತೆ ಕಾಣದೆ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಮೇಲೇರಿ ಉರುಳಿಬಿದ್ದ ಘಟನೆ ಹುಣಸೂರು ರಸ್ತೆಯಲ್ಲಿರುವ ಕಲಾಮಂದಿರದ ಬಳಿ ನಡೆದಿದೆ.

    ಅದೃಷ್ಟವಶಾತ್ ಕಾರಿನಲ್ಲಿದ್ದ ಐವರು ಪವಾಡ ರೀತಿ ಬದುಕುಳಿದಿದ್ದಾರೆ. ಐವರಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ವೇಳೆ ವಾಹನ ಸಂಚಾರ ದಟ್ಟಣೆ ಇರದಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಇದನ್ನೂ ಓದಿ: ಎಣ್ಣೆ ಮತ್ತಲ್ಲಿ ಭಯಾನಕ ಅಪಘಾತ- ಕಾರಿನಲ್ಲಿದ್ದ ಐವರು ಗ್ರೇಟ್ ಎಸ್ಕೇಪ್


    ಮೈಸೂರು ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಸೋಮವಾರ ರಾತ್ರಿ ಗುಡುಗು, ಸಿಡಿಲು ಸಮೇತ ಭಾರೀ ಮಳೆಯಾಗಿದೆ. ಪರಿಣಾಮ ಕೆಲವೆಡೆ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ರಸ್ತೆ ಕಾಣದೆ ಕಾರು ರಸ್ತೆ ಮಧ್ಯದಲ್ಲಿದ್ದ ಡಿವೈಡರ್ ಮೇಲೇರಿ ಪಲ್ಟಿ ಹೊಡೆದಿದೆ.

    ಅಪಘಾತದ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀರು ಕಾರು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ವರುಣನ ಅಬ್ಬರಕ್ಕೆ ನಗರದ ಹಲವೆಡೆ ಮರ, ವಿದ್ಯುತ್ ಕಂಬಗಳು ಧರೆಗುರುಳಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

  • ಕಾರ್ಮಿಕರನ್ನ ಕರೆದೊಯ್ಯುತ್ತಿದ್ದ ಬಸ್ ಪಲ್ಟಿ – 30 ಮಂದಿ ಆಸ್ಪತ್ರೆಗೆ ದಾಖಲು

    ಕಾರ್ಮಿಕರನ್ನ ಕರೆದೊಯ್ಯುತ್ತಿದ್ದ ಬಸ್ ಪಲ್ಟಿ – 30 ಮಂದಿ ಆಸ್ಪತ್ರೆಗೆ ದಾಖಲು

    ಚಿಕ್ಕಬಳ್ಳಾಪುರ: ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ 30 ಮಂದಿ ಕಾರ್ಮಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಪಟ್ಟಣದಲ್ಲಿ ನಡೆದಿದೆ.

    ಗೌರಿಬಿದನೂರು ನಗರ ಹೊರವಲಯದ ನೂತನ ಸರ್ಕಾರಿ ತಾಯಿ ಮಕ್ಕಳ ಆಸ್ಪತ್ರೆ ಎದುರು ಘಟನೆ ನಡೆದಿದ್ದು, ಗಾಯಾಳುಗಳನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಗೌರಿಬಿದನೂರು ತಾಲೂಕಿನ ಶ್ರಾವಂಡಹಳ್ಳಿ, ಚಂದನದೂರು, ಮಧುಗಿರಿ ತಾಲೂಕಿನ ಯಾಕರ್ಲಹಳ್ಳಿ, ಕೊಡಗೇನಹಳ್ಳಿ ಕಡೆಯವರು ಎಂದು ತಿಳಿದುಬಂದಿದೆ.

    ದೊಡ್ಡಬಳ್ಳಾಪುರದ ಎವರ್ ಬ್ಲೂ ಗಾರ್ಮೆಂಟ್ಸ್ ಗೆ ಕೆಲಸಕ್ಕೆ ತೆರಳಿದ್ದ ಕಾರ್ಮಿಕರು ಕೆಲಸ ಮುಗಿಸಿ ಫ್ಯಾಕ್ಟರಿಗೆ ಸೇರಿದ ಖಾಸಗಿ ಬಸ್ಸಿನಲ್ಲೇ ಮನೆಗೆ ವಾಪಾಸ್ಸಾಗುತ್ತಿದ್ದರು. ಆದರೆ ಗೌರಿಬಿದನೂರು ನಗರಕ್ಕೆ ಎಂಟ್ರಿ ಕೊಡುವ ಆರಂಭದಲ್ಲೇ ನೂತನ ರಸ್ತೆ ನಿರ್ಮಾಣ ಮಾಡಿದ್ದು, ರಸ್ತೆ ಮಧ್ಯೆ ಭಾಗ ಹೊಸದಾಗಿ ರಸ್ತೆ ವಿಭಜಕ ಆಳವಡಿಸಲಾಗಿದೆ. ಈ ರಸ್ತೆ ವಿಭಜಕದ ಬಗ್ಗೆ ಅರಿವಿಲ್ಲದ ಚಾಲಕ ರಸ್ತೆ ವಿಭಜಕದ ಮೇಲೆ ಬಸ್ ಹರಿಬಿಟ್ಟಿದ್ದಾನೆ.

    ವಿಭಜಕದ ಮೇಲೆ ಬಸ್ ಹತ್ತಿದ ಪರಿಣಾಮ ಬಸ್ ಉರುಳಿದೆ. ಹೀಗಾಗಿ 30 ಮಂದಿ ಗಾಯಗೊಂಡು ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಗೌರಿಬಿದನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಬೊಲೆರೋ ಪಲ್ಟಿ – ಓರ್ವ ಸಾವು

    ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಬೊಲೆರೋ ಪಲ್ಟಿ – ಓರ್ವ ಸಾವು

    ಬಾಗಲಕೋಟೆ: ರಸ್ತೆ ವಿಭಜಕಕ್ಕೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜಿಲ್ಲೆಯ ಹುನಗುಂದ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

    ವಿಜಯಪುರ ಜಿಲ್ಲೆಯ ಡವಳಗಿ ನಿವಾಸಿ ನಿಂಗಪ್ಪ ಬೀರಗೊಂಡ (48) ಮೃತಪಟ್ಟ ವ್ಯಕ್ತಿ. ಇಳಕಲ್ ಪಟ್ಟಣದಿಂದ ವಿಜಯಪುರಕ್ಕೆ ಗ್ರಾನೈಟ್ ಸಾಗಿಸುತ್ತಿದ್ದ ವೇಳೆ ಘಟನೆ ಸಂಭವಿಸಿದೆ.

    ಚಾಲಕನ ನಿಯಂತ್ರ ತಪ್ಪಿದ ಜೀಪ್, ರೋಡ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಪಲ್ಟಿ ಹೊಡೆದಿದ್ದು, ಸ್ಥಳದಲ್ಲಿಯೇ ನಿಂಗಪ್ಪ ಅವರು ಮೃತಪಟ್ಟಿದ್ದಾರೆ. ಚಾಲಕ ರವಿ ಹಾಗೂ ಸೇರಿದಂತೆ ಮತ್ತೊಬ್ಬರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಹುನಗುಂದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೊಲೆರೋದಲ್ಲಿದ್ದ ಮೂವರು ವಿಜಯಪುರ ಜಿಲ್ಲೆಯ ಡವಳಗಿ ನಿವಾಸಿಗಳಾಗಿದ್ದಾರೆ. ಘಟನಾ ಸ್ಥಳಕ್ಕೆ ಹುನಗುಂದ ಠಾಣೆ ಪೊಲೀಸರು ಭೇಟಿ ನೀಡಿ ಪರಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಡಿವೈಡರ್ ಗೆ ಡಿಕ್ಕಿ ಹೊಡೆದ ಖಾಸಗಿ ಬಸ್- 17 ಮಂದಿ ದುರ್ಮರಣ

    ಡಿವೈಡರ್ ಗೆ ಡಿಕ್ಕಿ ಹೊಡೆದ ಖಾಸಗಿ ಬಸ್- 17 ಮಂದಿ ದುರ್ಮರಣ

    ಲಕ್ನೋ: ಖಾಸಗಿ ಬಸ್ಸೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ 17 ಮಂದಿ ಮೃತಪಟ್ಟು, 35ಕ್ಕೂ ಹೆಚ್ಚು ಮಂದಿಗೆ ಗಾಯಗಳಾದ ಘಟನೆ ಉತ್ತರಪ್ರದೇಶದ ಮೇನ್ಪುರಿ ಜಿಲ್ಲೆಯಲ್ಲಿ ಇಂದು ನಡೆದಿದೆ.

    ಘಟನೆಯಲ್ಲಿ ಮೃತರ ಸಂಖ್ಯೆ ಹೆಚ್ಚುವ ಸಾಧ್ಯತೆಗಳಿವೆ ಎಂಬುದಾಗಿ ವರದಿಯಾಗಿದೆ. ಇನ್ನು ಘಟನೆಗೆ ಕಾರಣವೇನೆಂದು ತಿಳಿದುಬಂದಿಲ್ಲ.

    ಪ್ರಾಥಮಿಕ ತನಿಖೆಯಲ್ಲಿ ಘಟನೆಗೆ ಚಾಲಕನ ಅಜಾಗರೂಕತೆ ಮತ್ತು ಅತಿವೇಗವೇ ಕಾರಣ ಎನ್ನಲಾಗುತ್ತಿದೆ. ವೇಗವಾಗಿ ಬಂದ ಬಸ್ ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ಬಳಿಕ ಪಲ್ಟಿಯಾಗಿದೆ. ಗಾಯಾಳುಗಳಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಚಾಲಕನಿಗೂ ಗಾಯಗಳಾಗಿವೆ. ಸದ್ಯ ಚಾಲಕ ಸ್ಥಳೀಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪೊಲೀಸರು ಚಾಲಕನಿಂದ ಹೇಳಿಕೆ ಪಡೆಯುತ್ತಿದ್ದಾರೆ.

    ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರಿಗೆ ಸಂತಾಪ ಸೂಚಿಸಿದ್ದು, ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಅಂತ ಸಾಂತ್ವಾನ ಹೇಳಿದ್ದಾರೆ.

    ಸ್ಥಳೀಯ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಗೂ ಗಾಯಾಳುಗಳನ್ನು ಕೂಡಲೇ ಸ್ಥಳಕ್ಕೆ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ತನಿಖೆ ಮುಂದುವರೆದಿದೆ.