Tag: Road Rage

  • ಮಾಜಿ ಸಂಸದ ಅನಂತ್‌ಕುಮಾರ್ ಹೆಗಡೆ ಗನ್ ಮ್ಯಾನ್ ಶ್ರೀಧರ್ ಅಮಾನತು

    ಮಾಜಿ ಸಂಸದ ಅನಂತ್‌ಕುಮಾರ್ ಹೆಗಡೆ ಗನ್ ಮ್ಯಾನ್ ಶ್ರೀಧರ್ ಅಮಾನತು

    ಕಾರವಾರ: ನೆಲಮಂಗಲ ರೋಡ್ ರೇಜ್ (Nelamangala Road Rage) ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಂಸದ ಅನಂತಕುಮಾರ್ ಹೆಗಡೆ (Anantkumar Hegde) ಗನ್‌ಮ್ಯಾನ್ ಶ್ರೀಧರ್‌ರವರನ್ನು ಮುಂದಿನ ಆದೇಶದವರೆಗೂ ಅಮಾನತು ಮಾಡಿ ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ್ ಆದೇಶ ಹೊರಡಿಸಿದ್ದಾರೆ.

    ಮಾಜಿ ಸಂಸದ ಅನಂತಕುಮಾರ್ ಹೆಗಡೆ ಗನ್‌ಮ್ಯಾನ್ ಆಗಿ ಕಳೆದ 10 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದ ಶ್ರೀಧರ್ ಮಾಜಿ ಸಂಸದರ ಆಪ್ತ ಕೂಡ. ಇನ್ನು ನೆಲಮಂಗಲದಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಇವರು ಸಹ ಆರೋಪಿಯಾಗಿದ್ದು, ಇಂದು ಜಾಮೀನು ಪಡೆದಿದ್ದರು. ಇದನ್ನೂ ಓದಿ: ಶಾಸಕರ ಅಸಮಾಧಾನ ಎಲ್ಲವನ್ನೂ ಸಿಎಂ ಹ್ಯಾಂಡಲ್ ಮಾಡ್ತಾರೆ: ಸಚಿವ ಎಂಬಿ ಪಾಟೀಲ್

    ಆದರೇ ಇದೀಗ ಡಿ.ಆರ್ ಪೊಲೀಸ್ ವಿಭಾಗದಲ್ಲಿ ಇವರ ಅಮಾನತು ಜೊತೆ ಗಣ್ಯ ವ್ಯಕ್ತಿಗಳಿಗೆ ಗನ್‌ಮ್ಯಾನ್ ಆಗಿರುವ ಜಿಲ್ಲೆಯ ಐದು ವರ್ಷಕ್ಕಿಂತ ಹೆಚ್ಚು ಸಮಯ ಸೇವೆ ಮಾಡುತ್ತಿರುವ ಗನ್ ಮ್ಯಾನ್‌ಗಳಿಗೆ ಸಹ ಇದೀಗ ಈ ಘಟನೆ ನಂತರ ವರ್ಗಾವಣೆ ಆದೇಶ ಮಾಡಲಾಗಿದ್ದು, ಹತ್ತು ಜನ ಗನ್‌ಮ್ಯಾನ್‌ಗಳಿಗೆ ಇಂದು ವರ್ಗಾವಣೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ್ ಆದೇಶಿಸಿದ್ದಾರೆ.  ಇದನ್ನೂ ಓದಿ:  ನಾಳೆ ಬಾಹ್ಯಾಕಾಶ ಯೋಜನೆಯ ಆಕ್ಸಿಯಮ್ 4 ಉಡಾವಣೆ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲ ಪ್ರಯಾಣ

  • ವಿಕಾಸ್ ಮೇಲೆ ವಿಂಗ್ ಕಮಾಂಡರ್ ಅಟ್ಟಹಾಸ – ಕನ್ನಡಿಗರ ಸ್ವಾಭಿಮಾನ ಕೆಣಕುವ ದುಷ್ಟತನ ಮೆರೆದಿದ್ದಾರೆ: ಸಿಎಂ ಕಿಡಿ

    ವಿಕಾಸ್ ಮೇಲೆ ವಿಂಗ್ ಕಮಾಂಡರ್ ಅಟ್ಟಹಾಸ – ಕನ್ನಡಿಗರ ಸ್ವಾಭಿಮಾನ ಕೆಣಕುವ ದುಷ್ಟತನ ಮೆರೆದಿದ್ದಾರೆ: ಸಿಎಂ ಕಿಡಿ

    ಬೆಂಗಳೂರು: ಕನ್ನಡಿಗ ವಿಕಾಸ್ ಕುಮಾರ್ ಮೇಲೆ ವಿಂಗ್ ಕಮಾಂಡರ್ ಅಟ್ಟಹಾಸ ಮೆರೆದು ಹಲ್ಲೆ ನಡೆಸಿದ ಕುರಿತು ಸಿಎಂ ಸಿದ್ದರಾಮಯ್ಯ ( CM Siddaramaiah) ಖಂಡಿಸಿದ್ದು, ಕಠಿಣ ಕ್ರಮ ಜರುಗಿಸುವಂತೆ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

    ಈ ಕುರಿತು ಎಕ್ಸ್‌ನಲ್ಲಿ (X) ಪೋಸ್ಟ್ ಹಂಚಿಕೊಂಡಿರುವ ಸಿಎಂ, ಕನ್ನಡಿಗರ ಮೇಲಿನ ಆರೋಪವನ್ನು ಖಂಡಿಸಿ, ಕನ್ನಡಿಗ ವಿಕಾಸ್ ಕುಮಾರ್ ಪರ ನಿಂತಿದ್ದಾರೆ. ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆಯಲ್ಲಿ ಕನ್ನಡಿಗ ವಿಕಾಸ್ ಕುಮಾರ್ ಮೇಲೆ ಹಲ್ಲೆ ನಡೆಸಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್, ನಂತರ ಜಾಲತಾಣದಲ್ಲಿ ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಈ ಮೂಲಕ ಕನ್ನಡಿಗರ ಸ್ವಾಭಿಮಾನ ಕೆಣಕುವ ದುಷ್ಟತನ ಮೆರೆದಿದ್ದಾರೆ.ಇದನ್ನೂ ಓದಿ: ಕ್ಕಿ ರೈ ಮೇಲೆ ಫೈರಿಂಗ್ ಪ್ರಕರಣ – ಗನ್ ಮ್ಯಾನ್ ವಿಠ್ಠಲ್ ಪೊಲೀಸರ ವಶಕ್ಕೆ

    ಕನ್ನಡಿಗರು ಮಾತೃ ಭಾಷೆಯ ಬಗ್ಗೆ ಅಭಿಮಾನ ಹೊಂದಿರುವವರೇ ಹೊರತು ದುರಭಿಮಾನಿಗಳಲ್ಲ. ಭಾಷೆಯ ವಿಚಾರಕ್ಕೆ ವಿನಾಕರಣ ಇತರರ ಮೇಲೆ ಹಲ್ಲೆ ಮಾಡುವ ಅಥವಾ ನಿಂದಿಸುವ ಸಣ್ಣತನ ಕನ್ನಡಿಗರದ್ದಲ್ಲ. ದೇಶದ ಮೂಲೆ ಮೂಲೆಗಳಿಂದ ಬಂದು ಇಲ್ಲಿ ನೆಲೆಸಿರುವ ಪ್ರತಿಯೊಬ್ಬರನ್ನು ಗೌರವದಿಂದ ಕಾಣುತ್ತಿರುವ, ಅವರನ್ನೂ ಕನ್ನಡಿಗರೇ ಎಂದು ಪ್ರೀತಿಸುವ ಸಂಸ್ಕೃತಿ ಕನ್ನಡ ಮಣ್ಣಿನದ್ದು. ಇದಕ್ಕೆ ಇತಿಹಾಸವೇ ಸಾಕ್ಷಿ ಎಂದು ಹೇಳಿದ್ದಾರೆ.

    ರಾಷ್ಟ್ರೀಯ ಮಾಧ್ಯಮಗಳು ತಮ್ಮ ಜವಾಬ್ದಾರಿ ಮತ್ತು ವೃತ್ತಿಧರ್ಮ ಮರೆತು ಯಾರೋ ಒಬ್ಬ ಮಾಡಿದ ಆಧಾರ ರಹಿತ ಆರೋಪವನ್ನು ಹಿಡಿದುಕೊಂಡು ಇಡೀ ಕರ್ನಾಟಕದ ಘನತೆಗೆ ಮಸಿಬಳಿಯುವ ಕೆಲಸವನ್ನು ಮಾಡಿದ್ದು, ನಿಜಕ್ಕೂ ವಿಷಾದನೀಯ. ಇದರಿಂದ ಪ್ರತಿಯೊಬ್ಬ ಕನ್ನಡಿಗನ ಮನಸಿಗೆ ಘಾಸಿಯಾಗಿದೆ ಎಂದು ಖಂಡಿಸಿದ್ದಾರೆ.

    ಕನ್ನಡಿಗರು ಉದ್ವೇಗ ಅಥವಾ ಪ್ರಚೋದನೆಗಳಿಗೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬಾರದು. ಕನ್ನಡಿಗರಿಂದ ಆಯ್ಕೆಯಾದ ಕನ್ನಡದ್ದೇ ಸರ್ಕಾರ ಕರ್ನಾಟಕದಲ್ಲಿದೆ. ಸೋಮವಾರ ನಡೆದ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಆಗಿರಲಿ, ಯಾವ ಹುದ್ದೆಯಲ್ಲೇ ಇರಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಕಮಿಷನರ್ ಅವರಿಗೆ ಆದೇಶಿಸಿದ್ದೇನೆ. ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಅನ್ಯಾಯಕ್ಕೊಳಗಾದ ವ್ಯಕ್ತಿಗೆ ನ್ಯಾಯ ಕೊಡಿಸಲು ಬದ್ಧವಾಗಿದೆ ಎಂದು ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.ಇದನ್ನೂ ಓದಿ: ಡಿವೋರ್ಸ್ ಆಗಿ 2 ತಿಂಗಳಲ್ಲಿ ಖ್ಯಾತ ಕಿರುತೆರೆ ನಟಿಯ ಮಾಜಿ ಪತಿ ವಿಧಿವಶ

  • ಬೈಕ್‌ಗೆ ಡಿಕ್ಕಿ ಹೊಡೆದು 10 ಮೀಟರ್‌ ಎಳೆದೊಯ್ದ ದುಷ್ಕರ್ಮಿಗಳು – ಕರ್ತವ್ಯನಿರತ ಪೊಲೀಸ್‌ ಸಾವು

    ಬೈಕ್‌ಗೆ ಡಿಕ್ಕಿ ಹೊಡೆದು 10 ಮೀಟರ್‌ ಎಳೆದೊಯ್ದ ದುಷ್ಕರ್ಮಿಗಳು – ಕರ್ತವ್ಯನಿರತ ಪೊಲೀಸ್‌ ಸಾವು

    – ನಿಧಾನಕ್ಕೆ ಹೋಗಿ ಎಂದಿದ್ದಕ್ಕೆ ಕೋಪಗೊಂಡು ಕಾರಿನಿಂದ ಡಿಕ್ಕಿ

    ನವದೆಹಲಿ: ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದು 10 ಮೀಟರ್‌ ವರೆಗೂ ಎಳೆದೊಯ್ದ ಪರಿಣಾಮ ಕರ್ತವ್ಯನಿರತ ಪೊಲೀಸ್‌ ಪೇದೆ ದಾರುಣ ಸಾವಿಗೀಡಾಗಿರುವ ಘಟನೆ ದೆಹಲಿಯಲ್ಲಿ (New Delhi) ನಡೆದಿದೆ.

    ಪೊಲೀಸ್‌ ಸಂದೀಪ್ ಮೃತ ದುರ್ದೈವಿ. ಈ ಪ್ರದೇಶದಲ್ಲಿ ಕಳ್ಳತನ ಪ್ರಕರಣಗಳು ತೀವ್ರವಾಗಿ ಏರಿಕೆಯಾಗುತ್ತಿರುವುದರ ಹಿಂದೆ ಏನಿದೆ ಎಂದು ತನಿಖೆ ಮಾಡಲು ಕರ್ತವ್ಯದಲ್ಲಿದ್ದರು. ಅವರು ಬೈಕ್‌ನಲ್ಲಿ ಹೋಗುತ್ತಿದ್ದಾಗ ವ್ಯಾಗನಾರ್ ಕಾರು ಅವರನ್ನು ಹಿಂದಿಕ್ಕಲು ಪ್ರಯತ್ನಿಸಿತು. ನಿಧಾನವಾಗಿ ಹೋಗುವಂತೆ ಕಾರು ಚಾಲಕನಿಗೆ ಸಂದೀಪ್‌ ತಿಳಿಸಿದ್ದಾರೆ. ಏಕಾಏಕಿ ಕಾರಿನ ವೇಗ ಹೆಚ್ಚಿಸಿ ಹಿಂದಿನಿಂದ ಸಂದೀಪ್ ಅವರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ತಮಿಳುನಾಡು ಡಿಸಿಎಂ ಆಗಿ ಉದಯನಿಧಿ ಸ್ಟಾಲಿನ್ ಇಂದು ಪ್ರಮಾಣವಚನ

    ಕೆಳಗೆ ಬಿದ್ದ ಸಂದೀಪ್‌ರನ್ನು ಬೈಕ್‌ ಸಮೇತ ಸುಮಾರು 10 ಮೀಟರ್ ವರೆಗೂ ಕಾರು ಎಳೆದೊಯ್ದಿದೆ.‌ ತೀವ್ರವಾಗಿ ಗಾಯಗೊಂಡಿದ್ದ ಪೊಲೀಸ್ ಸಂದೀಪ್ ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ನಂತರ ಮತ್ತೊಂದು ಆಸ್ಪತ್ರೆಗೆ ಶಿಫಾರಸು ಮಾಡಲಾಯಿತು. ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

    ಆ ಪ್ರದೇಶದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಘಟನೆ ದೃಶ್ಯ ಸೆರೆಯಾಗಿದೆ. ಕಾರಿನಲ್ಲಿ ಇಬ್ಬರು ಪ್ರಯಾಣಿಕರಿದ್ದರು. ಕಾರು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ. ಪೊಲೀಸರು ವಾಹನವನ್ನು ವಶಪಡಿಸಿಕೊಂಡು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಈ ಸಂಬಂಧ ಕೊಲೆ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಗುಜರಾತ್‌ನ ಸೋಮನಾಥದಲ್ಲಿ 9 ಅಕ್ರಮ ಮಸೀದಿಗಳ ತೆರವು

    ಪೊಲೀಸ್‌ ಸಂದೀಪ್ ತಾಯಿ, ಪತ್ನಿ ಮತ್ತು ಐದು ವರ್ಷದ ಮಗನನ್ನು ಅಗಲಿದ್ದಾರೆ.‌ ಕಾರಿನಲ್ಲಿದ್ದ ಒಬ್ಬ ಅಕ್ರಮ ಮದ್ಯದ ದಂಧೆಯಲ್ಲಿ ಭಾಗಿಯಾಗಿದ್ದಾನೆ ಎಂದು ಕೆಲವು ಮೂಲಗಳು ಹೇಳಿವೆ. ಆದರೆ ಪೊಲೀಸರು ಇದನ್ನು ಖಚಿತಪಡಿಸಿಲ್ಲ. ರಾಷ್ಟ್ರ ರಾಜಧಾನಿಯಲ್ಲಿ ರೋಡ್‌ ರೇಜ್ ಪ್ರಕರಣಗಳಲ್ಲಿ ಆತಂಕಕಾರಿ ಏರಿಕೆ ಕಂಡುಬಂದಿದೆ. ಈ ಕೇಸ್‌ಗಳಲ್ಲಿ ಅಪಾರ ಸಾವು-ನೋವುಗಳಾಗಿವೆ.

  • ಬೆಂಗಳೂರಿನಲ್ಲಿ ಹೆಚ್ಚಾದ ರೋಡ್ ರೇಜ್ – ಶಾಲಾ ಬಸ್ ಮೇಲೆ ಪುಂಡರ ಅಟ್ಟಹಾಸ

    ಬೆಂಗಳೂರಿನಲ್ಲಿ ಹೆಚ್ಚಾದ ರೋಡ್ ರೇಜ್ – ಶಾಲಾ ಬಸ್ ಮೇಲೆ ಪುಂಡರ ಅಟ್ಟಹಾಸ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Silicon City) ರೋಡ್ ರೇಜ್ ಪ್ರಕರಣಗಳು ಹೆಚ್ಚಾಗಿದ್ದು, ಶಾಲಾ ಬಸ್ ಮೇಲೆ ಅಟ್ಯಾಕ್ ಮಾಡಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ.

    ನಿನ್ನೆ (ಸೆ.16) ಸಂಜೆ ವೇಳೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ (Electronic City) ಶಾಲಾ ಬಸ್ ಮೇಲೆ ಅಟ್ಯಾಕ್ ಮಾಡಿ ಪುಂಡರು ಅಟ್ಟಹಾಸ ಮೆರೆದಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಇದನ್ನೂ ಓದಿ: ಕೊಲೆ ಆರೋಪಿ ದರ್ಶನ್ ಸೆಲ್‌ಗೆ ಬರಲಿದೆ 32 ಇಂಚಿನ ಟಿವಿ

    KA 01 MB 5796 ವಾಹನ ನೋಂದಣಿ ಸಂಖ್ಯೆಯ ಸ್ಕಾರ್ಪಿಯೋದಲ್ಲಿದ್ದ 6-8 ಕ್ಕೂ ಹೆಚ್ಚು ದುಷ್ಕರ್ಮಿಗಳು ಶಾಲಾ ಬಸ್ ಮೇಲೆ ಅಟ್ಯಾಕ್ ಮಾಡಿದ್ದಾರೆ. ಬಸ್ ಕಿಟಕಿಯನ್ನು ಒಡೆಯುವ ಮೂಲಕ ಬಸ್‌ನಲ್ಲಿದ್ದ ಮಕ್ಕಳಿಗೆ ತೀವ್ರ ತೊಂದರೆ ನೀಡಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಶಾಲಾ ಬಸ್‌ಗಳ ಮೇಲೆಯೂ ರೋಡ್ ರೇಜ್ ಮಾಡುತ್ತಾರಾ? ಶಾಲಾ ಮಕ್ಕಳಿಗೂ ಬೆಂಗಳೂರು ಸುರಕ್ಷಿತವಾಗಿಲ್ವಾ ಎಂದು ಪೋಷಕರು ಹಾಗೂ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ಘಟನೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ದಿವಾಳಿಯಾಗಿರುವ ಪಾಕಿಸ್ತಾನಕ್ಕೆ ಐಎಂಎಫ್‌ನಿಂದ ಸಿಗುತ್ತಾ ಬೂಸ್ಟರ್‌ ಡೋಸ್‌!

  • ನವಜೋತ್‌ ಸಿಂಗ್‌ ಸಿಧುಗೆ 1 ವರ್ಷ ಜೈಲು ಶಿಕ್ಷೆ

    ನವಜೋತ್‌ ಸಿಂಗ್‌ ಸಿಧುಗೆ 1 ವರ್ಷ ಜೈಲು ಶಿಕ್ಷೆ

    ನವದೆಹಲಿ: 34 ವರ್ಷದ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ, ಪಂಜಾಬ್‌ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ನವಜೋತ್‌ ಸಿಂಗ್‌ ಸಿಧು ಒಂದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.

    1988ರಲ್ಲಿ ವೃದ್ಧರೊಬ್ಬರ ಮೇಲೆ ರಸ್ತೆಯಲ್ಲಿ ದಾಂಧಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್‌ ಶಿಕ್ಷೆ ನೀಡಿದೆ.

    supreme court 12

    ಏನಿದು ಪ್ರಕರಣ?
    1988ರಲ್ಲಿ ವೃದ್ಧರೊಬ್ಬರ ಮೇಲೆ ರಸ್ತೆಯಲ್ಲಿ ದಾಂಧಲೆ ನಡೆಸಿ ಹಲ್ಲೆ ಮಾಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಗುರ್ನಮ್ ಮೃತಪಟ್ಟಿದ್ದರು. ಸ್ಥಳೀಯ ಕೋರ್ಟ್‌, ಹೈಕೋರ್ಟ್‌ ಬಳಿಕ ಈ ಪ್ರಕರಣ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಇದನ್ನೂ ಓದಿ: ಶಿವಲಿಂಗದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ AIMIM ನಾಯಕ ಅರೆಸ್ಟ್

    ಸುಪ್ರೀಂ ನ್ಯಾಯಮೂರ್ತಿಗಳಾದ ಜೆ.ಚೆಲಮೇಶ್ವರ ಮತ್ತು ಸಂಜಯ್ ಕಿಶನ್ ಕೌಲ್ ಅವರನ್ನೊಳಗೊಂಡ ನ್ಯಾಯಪೀಠ 2018ರಲ್ಲಿ ಭಾರತೀಯ ದಂಡ ಸಂಹಿತೆ ಸೆಕ್ಷನ್ 323ರಡಿಯಲ್ಲಿ ಅಪರಾಧಿ ಎಂದು ತೀರ್ಪು ನೀಡಿ 1000 ರೂಪಾಯಿ ದಂಡ ವಿಧಿಸಿತ್ತು. ಆದರೆ ಜೈಲು ಶಿಕ್ಷೆಯಿಂದ ಸಿಧುಗೆ ವಿನಾಯಿತಿ ನೀಡಲಾಗಿತ್ತು.

    ಜೈಲು ಶಿಕ್ಷೆಯಿಂದ ವಿನಾಯಿತಿ ನೀಡಿದ್ದನ್ನು ಪ್ರಶ್ನಿಸಿ ಸಂತ್ರಸ್ತನ ಕುಟುಂಬದ ಸದಸ್ಯರು ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ.