Tag: road work

  • ರಾತ್ರೋರಾತ್ರಿ ಡಿಕೆಶಿ ಸಿಟಿ ರೌಂಡ್ಸ್ – ರಸ್ತೆ ಗುಂಡಿಗಳ ಕಾಮಗಾರಿ ಪರಿಶೀಲನೆ

    ರಾತ್ರೋರಾತ್ರಿ ಡಿಕೆಶಿ ಸಿಟಿ ರೌಂಡ್ಸ್ – ರಸ್ತೆ ಗುಂಡಿಗಳ ಕಾಮಗಾರಿ ಪರಿಶೀಲನೆ

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚುವ ಕಾರ್ಯಕ್ಕೆ ಬಿಬಿಎಂಪಿ (BBMP) ಪಣ ತೊಟ್ಟಿದ್ದು, ಕಳೆದ ಹಲವು ದಿನಗಳಿಂದ ಗುಂಡಿ ಮುಚ್ಚುವ ಕಾರ್ಯ ಮಾಡುತ್ತಿದೆ. ಈ ನಡುವೆ ಸೋಮವಾರ ತಡರಾತ್ರಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಕಾಮಗಾರಿ ಪರಿಶೀಲನೆ ಮಾಡಿದ್ದಾರೆ.

    ಯಲಹಂಕದ ಬಾಗಲೂರು ಮುಖ್ಯರಸ್ತೆ, ಎಂಎಸ್ ಪಾಳ್ಯದ ಸಂದೀಪ್ ಉಣ್ಣೀಕೃಷ್ಣನ್ ರೋಡ್ ಮತ್ತು ಈಜಿಪುರದ ಪ್ಲೈಓವರ್ ಕಾಮಗಾರಿಯ ವೀಕ್ಷಣೆ ಮಾಡಿದ ಡಿಕೆಶಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಇದನ್ನೂ ಓದಿ: ಬಿಕ್ಲು ಶಿವ ಹತ್ಯೆ ಕೇಸ್ – ಎ1 ಆರೋಪಿ ಜಗ್ಗ ಅರೆಸ್ಟ್

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಸ್ತೆ ಗುಂಡಿಗಳನ್ನು ಮುಚ್ಚುವ ವಿಚಾರವಾಗಿ ನಗರದ ಶಾಸಕರೆಲ್ಲರೂ ಗಮನಕ್ಕೆ ತಂದಿದ್ದರು. ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಸಲುವಾಗಿ ರಸ್ತೆ ಗುಂಡಿ ಗಮನ ತಂತ್ರಾಂಶ ಸಿದ್ದಪಡಿಸಿದ್ದೇವೆ. ಪೊಲೀಸರಿಗೂ ಅವರ ಠಾಣೆಗಳ ವ್ಯಾಪ್ತಿಯಲ್ಲಿ ಗುಂಡಿಗಳಿರುವ ಪಟ್ಟಿ ಕೊಡಲು ತಿಳಿಸಲಾಗಿತ್ತು. ಆಪ್‌ನಲ್ಲಿ ನಾಗರೀಕರು ದೂರುಗಳನ್ನು ಸಲ್ಲಿಸುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಬೆಳ್ಳಂಬೆಳಗ್ಗೆ 5 ಗಂಟೆಗೆ ಆಗಮಿಸಿ ಎಸ್‌ಐಟಿ ಅಧಿಕಾರಿಗಳಿಗೆ ಶಾಕ್‌ ಕೊಟ್ಟ ಸುಜಾತ ಭಟ್‌!

    ಇತ್ತೀಚೆಗೆ ಬಾಗಲೂರು ರಸ್ತೆಯಲ್ಲಿ ಹೋದಾಗ ರಸ್ತೆ ಸ್ಥಿತಿ ನೋಡಿ ಬೇಸರವಾಗಿತ್ತು. ನಗರದ ಎಲ್ಲಾ ಕಡೆ ರಸ್ತೆ ಗುಂಡಿ ಮುಚ್ಚುವ ಕೆಲಸ ಮಾಡಲಾಗುತ್ತಿದೆ. 5000ಕ್ಕೂ ಹೆಚ್ಚು ಗುಂಡಿಗಳನ್ನು ಗುರುತಿಸಲಾಗಿದ್ದು, ಅದರಲ್ಲಿ 4400 ರಸ್ತೆ ಗುಂಡಿಗಳನ್ನು ಆದ್ಯತೆ ಮೇಲೆ ಮುಗಿಸಲು ಸೂಚನೆ ನೀಡಲಾಗಿದೆ. ಅದರಂತೆ ಕಳೆದ 4 ದಿನಗಳಿಂದ 2200 ಗುಂಡಿಗಳನ್ನು ಮುಚ್ಚಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಈ ಗಣೇಶೋತ್ಸವಕ್ಕೆ ವಿಘ್ನ ವಿನಾಶಕನ ಮೂರ್ತಿಯನ್ನು ಮನೆಯಲ್ಲೇ ತಯಾರಿಸಿ…

    ನಗರದಲ್ಲಿ ಸ್ವಚ್ಛತೆ ಕಾಪಾಡುವ ಕೆಲಸ ಮಾಡಲಾಗುತ್ತಿದ್ದು, ಸ್ಕೈವಾಕ್‌ಗಳನ್ನು ಸ್ವಚ್ಛ ಮಾಡಲಾಗಿದೆ. ರಸ್ತೆ ಗುಂಡಿಗಳನ್ನು ಮುಚ್ಚಿ ಹೋಗುವುದು ಮಾತ್ರವಲ್ಲ, ಗುಣಮಟ್ಟದ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ಹಾಟ್ ಮಿಕ್ಸ್, ಕೋಲ್ಡ್ ಮಿಕ್ಸ್ ಹಾಗೂ ಇಕೋಫಿಕ್ಸ್ ಸೇರಿದಂತೆ ಮೂರೂ ಮಾದರಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡಲಾಗುತ್ತಿದೆ ಎಂದರು. ಇದನ್ನೂ ಓದಿ: ಮಟ್ಟಣ್ಣನವರ್‌ನಿಂದ ಹೋರಾಟ ಹಳ್ಳ ಹಿಡಿಯಿತು – ಸೌಜನ್ಯ ಪರ ಹೋರಾಟಗಾರರಲ್ಲೇ ಒಡಕು!

    ರಸ್ತೆ ನಿರ್ಮಾಣ ಮಾಡುವಾಗ ಉತ್ತಮ ಗುಣಮಟ್ಟ ಕಾಯ್ದುಕೊಳ್ಳಬೇಕಲ್ಲವೇ ಎಂಬ ಪ್ರಶ್ನೆಗೆ, ಭಾರೀ ವಾಹನಗಳ ಓಡಾಟ, ಮಳೆಗಾಲ ಸೇರಿದಂತೆ ಇನ್ನಿತರೆ ಸಮಸ್ಯೆಗಳು ಇರುತ್ತವೆ. ಅದಕ್ಕಾಗಿ ಹಂತ-ಹಂತವಾಗಿ ಕಾಂಕ್ರಿಟ್ ರಸ್ತೆ ಮಾಡಲಾಗುತ್ತಿದೆ. ಇದು 30 ವರ್ಷ ಬಾಳಿಕೆ ಬರಲಿದೆ ಎಂದು ಹೇಳಿದರು. ಇದನ್ನೂ ಓದಿ: ನಾಡಿನಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ – ಗಗನಕ್ಕೇರಿದ ಹೂವುಗಳ ದರ

    ಗುಂಡಿಗಳಿಂದಲೇ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿ, ‘ಹೆಣ್ಣು ಮಕ್ಕಳನ್ನು, ಚಿಕ್ಕ ಮಕ್ಕಳನ್ನು ಕರೆದೊಯ್ಯುವಾಗ ತೊಂದರೆಗಳಾಗುವುದನ್ನು ನಾನು ಗಮನಿಸಿದ್ದೇನೆ. ಅದಕ್ಕಾಗಿ ರಸ್ತೆ ಗುಂಡಿಗಳನ್ನು ಮುಚ್ಚಲಾಗುತ್ತಿದೆ. ರಸ್ತೆ ಗುಂಡಿಗಳ ಮೇಲ್ಚಿಚಾರಣೆಗಾಗಿಯೇ ರಸ್ತೆ ಗುಂಡಿ ಗಮನ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ’ ಎಂದರು. ಇದನ್ನೂ ಓದಿ: ಮೋದಿ ಸರ್ಕಾರದ ಕ್ರಾಂತಿಕಾರಿ ನಡೆ – ರಾಜಕಾರಣ ಶುದ್ಧೀಕರಣಕ್ಕೆ ಹೊಸ ಮಸೂದೆ!

  • ಇಂದಿನಿಂದ 5 ದಿನ 3 ಗಂಟೆಗಳ ಕಾಲ ಹೆಬ್ಬಾಳ ಫ್ಲೈಓವರ್ ಬಂದ್

    ಇಂದಿನಿಂದ 5 ದಿನ 3 ಗಂಟೆಗಳ ಕಾಲ ಹೆಬ್ಬಾಳ ಫ್ಲೈಓವರ್ ಬಂದ್

    ಬೆಂಗಳೂರು: ಕೆಆರ್ ಪುರ ಕಡೆಯಿಂದ ಮೇಖ್ರಿ ವೃತ್ತದ ಕಡೆಗೆ ತೆರಳುವ ಹೆಬ್ಬಾಳ ಮೇಲ್ಸೇತುವೆಗೆ (Hebbal Flyover) ಹೆಚ್ಚುವರಿ ರ‍್ಯಾಂಪ್ ಅಳವಡಿಕೆ ಹಿನ್ನೆಲೆ ಇಂದಿನಿಂದ 5 ದಿನ ನಿತ್ಯ 3 ಗಂಟೆಗಳ ಕಾಲ ಹೆಬ್ಬಾಳ ಮೇಲ್ಸೇತುವೆ ಬಂದ್ ಆಗಲಿದೆ.

    ಕಾಮಗಾರಿಯ (Road Work) ಭಾಗವಾಗಿ ರೈಲ್ವೆ ಹಳಿಗಳ ಮೇಲೆ 33.5 ಮೀಟರ್ ಉದ್ದದ 7 ಉಕ್ಕಿನ ಗಾರ್ಡರ್‌ಗಳನ್ನು ಅಳವಡಿಕೆ ಮಾಡಲಾಗುತ್ತದೆ. ಈ ಹಿನ್ನೆಲೆ ಇಂದಿನಿಂದ ಮೇ 21ರವರೆಗೆ ಪ್ರತಿದಿನ 3 ಗಂಟೆಗಳ ಕಾಲ ಹೆಬ್ಬಾಳ ಮೇಲ್ಸೇತುವೆ ಬಂದ್ ಆಗಲಿದೆ. ರಾತ್ರಿ 12 ರಿಂದ ಬೆಳಗಿನ ಜಾವ 3 ಗಂಟೆಯವರೆಗೆ ಕಾಮಗಾರಿ ನಡೆಯಲಿದೆ. ಈ ಸಮಯದಲ್ಲಿ ಎಸ್ಟೀಮ್ ಮಾಲ್‌ನಿಂದ ಮೇಖ್ರಿ ವೃತ್ತದ ಕಡೆಗೆ ವಾಹನ ಸಂಚಾರ ಬಂದ್ ಆಗಲಿದೆ. ಏರ್ಪೋರ್ಟ್‌ನಿಂದ ಮೇಖ್ರಿ ವೃತ್ತದ ಕಡೆಗೆ ತೆರಳುವವರಿಗೆ ಪರ್ಯಾಯ ಮಾರ್ಗ ಸೂಚಿಸಲಾಗಿದೆ. ಇದನ್ನೂ ಓದಿ: ಮತ್ಸ್ಯ 6000 – ಆಳ ಸಮುದ್ರದ ರಹಸ್ಯಗಳನ್ನು ಭೇದಿಸಲು ಭಾರತ ಸಜ್ಜು

    ಪರ್ಯಾಯ ಮಾರ್ಗ ಯಾವುದು?
    – ಎಸ್ಟೀಮ್ ಮಾಲ್‌ನಲ್ಲಿರುವ ಸರ್ವಿಸ್ ರಸ್ತೆಯನ್ನು ಪ್ರವೇಶಿಸಿ.
    – ಹೆಬ್ಬಾಳ ವೃತ್ತದಲ್ಲಿ ಹೊರ ವರ್ತುಲಕ್ಕೆ ಬಲ ತಿರುವು ಪಡೆದು ತುಮಕೂರು ಮಾರ್ಗವಾಗಿ ಚಲಿಸಿ.
    – ಕುವೆಂಪು ವೃತ್ತದಲ್ಲಿ ಎಡ ತಿರುವು ಪಡೆದು ನ್ಯೂ ಬಿಇಎಲ್ ರಸ್ತೆ ಮೂಲಕ ಮೇಖ್ರಿ ವೃತ್ತವನ್ನು ತಲುಪಲು ಸೂಚನೆ ನೀಡಲಾಗಿದೆ.

  • ಟ್ರಾಫಿಕ್‌ಗೆ ಮುಕ್ತಿ ಹಾಡಲು ಮುಂದಾದ ಬಿಬಿಎಂಪಿ – 10,000 ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿ

    ಟ್ರಾಫಿಕ್‌ಗೆ ಮುಕ್ತಿ ಹಾಡಲು ಮುಂದಾದ ಬಿಬಿಎಂಪಿ – 10,000 ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿ

    – ಮುಂದಿನ 25 ವರ್ಷ ಗುರಿಯಾಗಿಸಿ ಪಾಲಿಕೆ ಪ್ಲ್ಯಾನ್

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಟ್ರಾಫಿಕ್‌ನಿಂದ (Traffic) ಮುಕ್ತಿ ಯಾವಾಗಪ್ಪ ಅಂತ ದೇವರತ್ತ ಮುಖ ಮಾಡುವ ಸ್ಥಿತಿ ವಾಹನ ಸವಾರರದ್ದು. ಇತ್ತ ಬೆಂಗಳೂರಿನ ಅಭಿವೃದ್ಧಿ ಸಚಿವ, ಡಿಸಿಎಂ ಡಿಕೆ ಶಿವಕುಮಾರ್ ದೇವರೇ ಧರೆಗೆ ಇಳಿದು ಬಂದ್ರೂ ಮುಂದಿನ ಮೂರು ವರ್ಷದಲ್ಲಿ ಟ್ರಾಫಿಕ್ ಸಮಸ್ಯೆ ಬಗೆಹರಿಸೋಕೆ ಆಗಲ್ಲ ಎಂದು ಹೇಳಿದ್ದಾರೆ. ಈ ಹೇಳಿಕೆ ಸಾಕಷ್ಟು ಟೀಕೆಗೆ ಗುರಿಯಾಗಿದೆ. ಇದರ ಬೆನ್ನಲ್ಲೇ ಬಿಬಿಎಂಪಿ (BBMP) ಈ ವರ್ಷ ಟ್ರಾಫಿಕ್ ಸಮಸ್ಯೆ ನಿವಾರಣೆಗೆ 10,000 ಕೋಟಿ ರೂ. ಖರ್ಚು ಮಾಡಲು ಮುಂದಾಗಿದೆ.

    ಮುಂದಿನ 25 ವರ್ಷದವರೆಗೂ ರಸ್ತೆಗಳ ಸಮಸ್ಯೆ ಉದ್ಭವವಾಗದಂತೆ ಬಿಬಿಎಂಪಿ ಹಲವು ಯೋಜನೆ ರೂಪಿಸಿದೆ. 80 ರಿಂದ 90 ಕಿಲೋಮೀಟರ್ ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಮಾಡಲು ಪ್ಲ್ಯಾನ್ ಹಾಕಿಕೊಂಡಿದೆ. ಇದನ್ನೂ ಓದಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ – 9,000 ನರ್ಸ್‌ಗಳಿಂದ ಅಹೋರಾತ್ರಿ ಧರಣಿ

    ಬೆಂಗಳೂರಿನಲ್ಲಿ ಇರುವ ಎಲ್ಲಾ ಆರ್ಟಿರಿಯಲ್, ಸಬ್ ಆರ್ಟಿರಿಯಲ್ ರಸ್ತೆಗಳಿಗೆ ವೈಟ್ ಟಾಪಿಂಗ್ ಕಾಮಗಾರಿ ಮಾಡೋದಕ್ಕೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಜೊತೆಗೆ ಈ ವರ್ಷ ಒಂದೆರಡು ಫ್ಲೈ ಓವರ್‌ಗೆ ಚಾಲನೆ ನೀಡೋದಲ್ಲದೇ ಟನಲ್‌ಗೂ ಚಾಲನೆ ಕೊಡುತ್ತೇವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಇದನ್ನೂ ಓದಿ: ರಾಯಚೂರಿನಲ್ಲಿ ಪಕ್ಷಿಗಳ ನಿಗೂಢ ಸಾವು – ಹಕ್ಕಿ ಜ್ವರದ ಶಂಕೆ

  • ಬೆಂಗಳೂರು ಬಿಜೆಪಿ ಶಾಸಕರ ಅನುದಾನಕ್ಕೆ ಕತ್ತರಿ ಹಾಕಿದ ಕಾಂಗ್ರೆಸ್ – ಯಾರ ಕ್ಷೇತ್ರಕ್ಕೆ ಎಷ್ಟು ಹಂಚಿಕೆ?

    ಬೆಂಗಳೂರು ಬಿಜೆಪಿ ಶಾಸಕರ ಅನುದಾನಕ್ಕೆ ಕತ್ತರಿ ಹಾಕಿದ ಕಾಂಗ್ರೆಸ್ – ಯಾರ ಕ್ಷೇತ್ರಕ್ಕೆ ಎಷ್ಟು ಹಂಚಿಕೆ?

    ಬೆಂಗಳೂರು: ಬೆಂಗಳೂರು ಬಿಜೆಪಿ (BJP) ಶಾಸಕರಿಗೆ ಕಾಂಗ್ರೆಸ್ (Congress) ಸರ್ಕಾರ ಬಿಗ್ ಶಾಕ್ ನೀಡಿದೆ. ಕಳೆದ ಬಿಜೆಪಿ ಸರ್ಕಾರದಲ್ಲಿ ಬಿಜೆಪಿ ಶಾಸಕರಿಗೆ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ಬಿಡುಗಡೆ ಮಾಡಿದ್ದ 485 ಕೋಟಿ ರೂ. ಅನುದಾನವನ್ನು (Grant) ವಾಪಸ್ ಪಡೆದಿದೆ. ಬಿಜೆಪಿ ಶಾಸಕರ ಅನುದಾನ ವಾಪಸ್ ಪಡೆದು ಬೆಂಗಳೂರಿನ (Bengaluru) ಕಾಂಗ್ರೆಸ್ ಶಾಸಕರಿಗೆ ಮರು ಹಂಚಿಕೆ ಮಾಡಿದೆ. ಕಾಂಗ್ರೆಸ್‌ನ 11 ಶಾಸಕರ ಕ್ಷೇತ್ರಗಳಿಗೆ ತಲಾ 40 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ.

    ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್‌ಗೂ (ST Somashekar) ಅನುದಾನ ಹಂಚಿಕೆ ಮಾಡಿದ್ದು, ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆ ಸುದ್ದಿ ಹಿನ್ನಲೆ ಅನುದಾನ ಬಿಡುಗಡೆ ಮಾಡಿರುವ ಸಾಧ್ಯತೆ ಎನ್ನಲಾಗುತ್ತಿದೆ. ಬಿಜೆಪಿ ಶಾಸಕರ ಅನುದಾನದ ಪೈಕಿ ಆರ್‌ಆರ್ ನಗರ (RR Nagara) ಕ್ಷೇತ್ರದ ಅನುದಾನಕ್ಕೆ ಹೆಚ್ಚು ಕೊಕ್ಕೆ ಬಿದ್ದಿದೆ. ಆರ್‌ಆರ್ ನಗರ ಕ್ಷೇತ್ರದ ಮೇಲೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅನುದಾನ ವಾಪಸ್ ಪಾಲಿಟಿಕ್ಸ್ ಶುರು ಮಾಡಿದ್ದಾರಾ ಎನ್ನುವ ಅನುಮಾನ ಶುರುವಾಗಿದೆ. ಇದನ್ನೂ ಓದಿ: ಮಾಜಿ ಸಿಎಂಗಳಿಗೆ ಮತ್ತೆ Z ಭದ್ರತೆ ನೀಡಲು ಸರ್ಕಾರ ನಿರ್ಧಾರ

     

    ರಾಜರಾಜೇಶ್ವರಿ ನಗರದ ಅನುದಾನಕ್ಕೆ ಬ್ರೇಕ್ ಹಾಕಿದ್ದು, ಆರ್‌ಆರ್ ನಗರ ಕ್ಷೇತ್ರದ ಅನುದಾನ ಬೇರೆ ಕ್ಷೇತ್ರಗಳಿಗೆ ಹಂಚಿಕೆ ಮಾಡಲಾಗಿದೆ. ಆರ್‌ಆರ್ ನಗರ ಬಿಲ್‌ಗೆ ಇತ್ತೀಚೆಗಷ್ಟೇ ಡಿಕೆ ಶಿವಕುಮಾರ್ ಬ್ರೇಕ್ ಹಾಕಿದ್ದರು. ಈಗ ವಿವಿಧ ಕಾಮಗಾರಿಗೆ ಬಿಡುಗಡೆ ಆಗಿದ್ದ ಅನುದಾನಕ್ಕೂ ಕತ್ತರಿ ಹಾಕಿದೆ. ಬಸವರಾಜ ಬೊಮ್ಮಾಯಿ ಸರ್ಕಾರ ಆರ್‌ಆರ್ ನಗರಕ್ಕೆ ನೀಡಿದ್ದ 126 ಕೋಟಿ ರೂ. ವಾಪಸ್ ಪಡೆದು ಆದೇಶ ಹೊರಡಿಸಿದೆ. ಮಳೆಗಾಲುವೆಯ 15 ಕೋಟಿ ರೂ. ಕಾಮಗಾರಿ ಟೆಂಡರ್ ಆಗಿದ್ದರೂ ಅನುದಾನ ವಾಪಸ್ ಪಡೆಯಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಪಟಾಕಿ ಬ್ಯಾನ್: ಸಿದ್ದರಾಮಯ್ಯ

    ಚುನಾವಣೆ ಘೋಷಣೆಗೆ ಕೆಲವು ದಿನಗಳಿರುವಾಗ ಮಂಜೂರಾಗಿದ್ದ 41 ಕೋಟಿ ರೂ. ವಾಪಸ್ ಪಡೆಯಲಾಗಿದೆ. ಬಿಇಎಲ್ ಸರ್ಕಲ್ – ಗಂಗಮ್ಮ ಸರ್ಕಲ್‌ವರೆಗಿನ ರಸ್ತೆ ಅಗಲೀಕರಣಕ್ಕೂ ಬ್ರೇಕ್ ಹಾಕಿದ್ದು, ರಸ್ತೆ ಅಗಲೀಕರಣಕ್ಕೆ ಮಂಜೂರಾಗಿದ್ದ 70 ಕೋಟಿ ರೂ. ವಾಪಸ್ ಪಡೆಯಲಾಗಿದೆ. ಇದನ್ನೂ ಓದಿ: ಇಸ್ರೇಲ್‌ನಲ್ಲಿರುವ ಕರಾವಳಿಗರ ರಕ್ಷಣೆಗೆ ವಿದೇಶಾಂಗ ಸಚಿವರಿಗೆ ಪತ್ರ: ನಳಿನ್ ಕುಮಾರ್ ಕಟೀಲ್

    ಯಾರ ಕ್ಷೇತ್ರಕ್ಕೆ ಎಷ್ಟು ಹಂಚಿಕೆ? ಎಷ್ಟು ಕಾಮಗಾರಿ?
    ಹೆಬ್ಬಾಳ – 40 ಕೋಟಿ ರೂ. (39 ಕಾಮಗಾರಿಗಳು)
    ಪುಲಕೇಶಿನಗರ – 40 ಕೋಟಿ ರೂ. (39 ಕಾಮಗಾರಿ)
    ಸರ್ವಜ್ಞ ನಗರ – 40 ಕೋಟಿ ರೂ. (27 ಕಾಮಗಾರಿ)
    ಶಿವಾಜಿನಗರ – 40 ಕೋಟಿ ರೂ. (7 ಕಾಮಗಾರಿ)
    ಚಾಮರಾಜಪೇಟೆ – 40 ಕೋಟಿ ರೂ. (24 ಕಾಮಗಾರಿ)
    ಗಾಂಧಿ ನಗರ – 40 ಕೋಟಿ ರೂ. (10 ಕಾಮಗಾರಿ)
    ಗೋವಿಂದರಾಜ ನಗರ – 40 ಕೋಟಿ ರೂ. (20 ಕಾಮಗಾರಿ)
    ಬಿಟಿಎಮ್ ಲೇಔಟ್ – 40 ಕೋಟಿ ರೂ. (40 ಕಾಮಗಾರಿ)
    ವಿಜಯನಗರ – 40 ಕೋಟಿ ರೂ. (20+ ಕಾಮಗಾರಿ)
    ಬ್ಯಾಟರಾಯನಪುರ – 40 ಕೋಟಿ ರೂ. (22 ಕಾಮಗಾರಿ)
    ಯಶವಂತಪುರ- 40 ಕೋಟಿ ರೂ. (18 ಕಾಮಗಾರಿ)

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳ ಬಗ್ಗೆ ಗಡ್ಕರಿ ಜೊತೆ ಚರ್ಚೆ: ಸತೀಶ್ ಜಾರಕಿಹೊಳಿ

    ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳ ಬಗ್ಗೆ ಗಡ್ಕರಿ ಜೊತೆ ಚರ್ಚೆ: ಸತೀಶ್ ಜಾರಕಿಹೊಳಿ

    ನವದೆಹಲಿ: ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳ ಬಗ್ಗೆ ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ (Nitin Gadkari) ಜೊತೆಗೆ ಚರ್ಚಿಸಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಹೇಳಿದ್ದಾರೆ.

    ನವದೆಹಲಿಯಲ್ಲಿ (New Delhi) ಮಾತನಾಡಿದ ಅವರು, ರಾಜ್ಯದಲ್ಲಿ ಹಲವಾರು ರಸ್ತೆಗಳ ಕಾಮಗಾರಿ (Road Work) ನೆನೆಗುದಿಗೆ ಬಿದ್ದಿದ್ದು, ಮುಂದಿನ ದಿನಗಳಲ್ಲಿ ಕೇಂದ್ರದ ಅಧಿಕಾರಿಗಳ ಜೊತೆಗೆ ಜಂಟಿ ಸಭೆ ಮಾಡಿ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಸಲಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ವಿಪಕ್ಷ ನಾಯಕರು 20 ಲಕ್ಷ ಕೋಟಿ ಹಗರಣದ ಗ್ಯಾರಂಟಿ ಕೊಡುತ್ತಿದ್ದಾರೆ – ವಿರೋಧ ಪಕ್ಷದ ವಿರುದ್ಧ ಮೋದಿ ಕಿಡಿ

    38 ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮಾಡಬೇಕಿದೆ. ಚಿಕ್ಕಮಗಳೂರು- ಬಿಳಿಕೆರೆ ರಸ್ತೆ ಉನ್ನತೀಕರಿಸಬೇಕಿದೆ. ಶಿರಾಡಿ ಘಾಟ್ ಸುರಂಗ ಮಾಡಲು ಕೇಂದ್ರ ಸರ್ಕಾರ ಉತ್ಸುಕತೆ ತೋರಿದೆ. ಬೆಂಗಳೂರಿನಲ್ಲಿ (Bengaluru) ಅಂಡರ್ ಗ್ರೌಂಡ್ 65 ಕಿಲೋ ಮೀಟರ್ ರಸ್ತೆ ಮಾಡಲು ಚಿಂತನೆ ನಡೆದಿದ್ದು, ಮೆಟ್ರೋ ಸುರಂಗದ ರೀತಿ ಅಂಡರ್ ಗ್ರೌಂಡ್ ರಸ್ತೆಯ ಕೆಲಸ ಮಾಡಬೇಕಿದೆ ಎಂದರು. ಇದನ್ನೂ ಓದಿ: ಮಮತಾ ಬ್ಯಾನರ್ಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ

    ಹೆಬ್ಬಾಳ ಕೆರೆ ಪಕ್ಕಕ್ಕೆ ಮತ್ತೊಂದು ರಸ್ತೆ ಕೇಳಿದ್ದೇವೆ. ಮೈಸೂರು ರಿಂಗ್ ರೋಡ್‌ಗೆ ಫ್ಲೈಓವರ್ ಅಗತ್ಯವಿದೆ. ಆ ಬಗ್ಗೆಯೂ ಮಾತುಕತೆ ನಡೆದಿದೆ. ಕರ್ನಾಟಕ ಭವನದ ನಿರ್ಮಾಣದ ವೆಚ್ಚ ಮತ್ತೆ ಏರಿಕೆ ಆಗಿದೆ. ಯೋಜನೆ ಬದಲಾವಣೆಯಾಗಿರುವ ಹಿನ್ನೆಲೆ ಸುಮಾರು 20 ಕೋಟಿ ರೂ. ವೆಚ್ಚ ಹೆಚ್ಚಳವಾಗಬಹುದು ಎಂದು ತಿಳಿಸಿದರು. ಇದನ್ನೂ ಓದಿ: ನಿನಗೆ 3 ದಿನವಷ್ಟೇ ಸಮಯ- ಫೋಟೋ ವಾಟ್ಸಪ್ ಮಾಡಿ ಸಮಾಜವಾದಿ ಪಕ್ಷದ ನಾಯಕನಿಗೆ ಕೊಲೆ ಬೆದರಿಕೆ

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಚತುಷ್ಪತ ರಸ್ತೆ ಕಾಮಗಾರಿ ಮುಗಿಯುವ ಮುಂಚೆಯೇ ಟೋಲ್ ಶುಲ್ಕ – ಸ್ಥಳೀಯರಿಗೆ ವಿನಾಯ್ತಿ ನೀಡುವಂತೆ ಆಗ್ರಹ

    ಚತುಷ್ಪತ ರಸ್ತೆ ಕಾಮಗಾರಿ ಮುಗಿಯುವ ಮುಂಚೆಯೇ ಟೋಲ್ ಶುಲ್ಕ – ಸ್ಥಳೀಯರಿಗೆ ವಿನಾಯ್ತಿ ನೀಡುವಂತೆ ಆಗ್ರಹ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಐ.ಆರ್.ಬಿ ಕಂಪನಿ ಚತುಷ್ಪತ ರಸ್ತೆ ಕಾಮಗಾರಿ ಅಪೂರ್ಣ ವಾಗಿರುವಾಗಲೇ ಟೋಲ್ ನಿರ್ಮಾಣ ಮಾಡಿ ಸ್ಥಳೀಯರಿಗೆ ಶುಲ್ಕ ವಸೂಲಿ ಮಾಡುತ್ತಿರುವುದಕ್ಕೆ ಕಾರವಾರದ ಮಾಜಿ ಶಾಸಕ ಸತೀಶ್ ಸೈಲ್ ಅಕ್ಷೇಪ ವ್ಯಕ್ತಪಡಿಸಿದ್ದಾರೆ.

    ಇಂದು ಕಾರವಾರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಅವರು ನಿನ್ನೆದಿನ ಐ.ಆರ್.ಬಿ ಕಂಪನಿ ಅಧಿಕಾರಿಗಳೊಂದಿಗೆ ಮೀಟಿಂಗ್ ಮಾಡಿದ್ದೇನೆ. ಸ್ಥಳೀಯರಿಗೆ ಶುಲ್ಕ ವಸೂಲಿ ಮಾಡುತ್ತಿರುವುದು ತಪ್ಪು, ಮಾಜಾಳಿಯಿಂದ ಅಂಕೋಲದ ವರೆಗೆ ಶೇಕಡ 50 ರಷ್ಟು ಕಾಮಗಾರಿ ಪೂರ್ಣವಾಗಿಲ್ಲ ಆದರೂ ಅಂಕೋಲದ ಬೇಲಿಕೇರಿ ಬಳಿ ಶುಲ್ಕ ವಸೂಲಿ ಮಾಡುತಿದ್ದಾರೆ, ಅರಗ, ಅಮದಳ್ಳಿ, ಚಂಡಯಾ, ಹಟ್ಟಿಕೇರಿ ಬಿಡ್ಜ್ ಗಳು, ರಸ್ತೆಗಳೇ ಆಗಿಲ್ಲ. ಹೀಗಿರುವಾಗ ಹೇಗೆ ಶುಲ್ಕ ವಸೂಲಿ ಮಾಡುತ್ತಾರೆ ಎಂದು ಪ್ರಶ್ನಿಸಿದರು.

    ಕರಾವಳಿ ಭಾಗದಲ್ಲಿನ ಸ್ಥಳೀಯ ವಾಹನಗಳಿಗೆ ವಿನಾಯ್ತಿ ನೀಡಲೇ ಬೇಕು ಈ ಹಿಂದೆ ಮಾಜಾಳಿ ನಂತರ ಗೋವಾ ಗಡಿಯಲ್ಲಿ ಗೋವಾ ಸರ್ಕಾರದ ಟೋಲ್ ಗೆ ಕಾರವಾರದ ಸ್ಥಳೀಯ ವಾಹನಗಳಿಗೆ ವಿನಾಯ್ತಿ ನೀಡಬೇಕೆಂದು ಗೋವಾದ ಅಂದಿನ ಮುಖ್ಯಮಂತ್ರಿ ಪಾಲೇಕರ್ ರವರಿಗೆ ನಾನು ಶಾಸಕನಾಗಿದ್ದಾಗ ವಿನಾಯ್ತಿ ನೀಡಬೇಕೆಂದು ಕೇಳಿದ್ದೆ ಆಗ ಕಾರವಾರದ ವಾಹನಗಳಿಗೆ ವಿನಾಯ್ತಿ ನೀಡಿದ್ದರು. ಆದರೇ ನಮ್ಮಲ್ಲಿ ಸ್ಥಳೀಯ ವಾಹನಗಳಿಗೆ ವಿನಾಯ್ತಿ ನೀಡಿಲ್ಲ, ಕೇಳಿದರೆ ವೈಟ್ ಬೋರ್ಡ ಗೆ ಮಾತ್ರ ನೀಡುತ್ತೇವೆ ಎಂದು ಕಂಪನಿಯವರು ಹೇಳುತ್ತಾರೆ. ಇದು ತಪ್ಪು ಎಲ್ಲಾ ವಾಹನಗಳಿಗೆ ವಿನಾಯ್ತಿ ನೀಡಬೇಕು, ಕಾಮಗಾರಿ ಪೂರ್ಣವಾಗದೇ ಶುಲ್ಕ ವಸೂಲಿ ಮಾಡುತಿದ್ದಾರೆ. ನಾನು ಮಾಜಾಳಿಯಿಂದ ಅಂಕೋಲದ ವರೆಗೆ ರಸ್ತೆ ಸರ್ವೆ ಮಾಡಿಸಿ ಐ.ಆರ್.ಬಿ ಕಂಪನಿ ವಿರುದ್ಧ ಕೋರ್ಟ ನಲ್ಲಿ ದಾವೆ ಹೂಡುತ್ತೇನೆ. ಹತ್ತು ದಿನ ಸಮಯ ಕೇಳಿದ್ದಾರೆ ತೆಗೆದುಕೊಳ್ಳಲಿ ಆದರೇ ಸ್ಥಳೀಯ ವಾಹನಗಳಿಗೆ ಶುಲ್ಕ ವಿನಾಯ್ತಿ ನೀಡಲೇ ಬೇಕು ಎಂದರು.

    ಸರ್ಕಾರಿ ಬಸ್ಸುಗಳ ಮೇಲೆ ಟೋಲ್ ಶುಲ್ಕ:
    ಕಾರವಾರದಿಂದ ಅಂಕೋಲಕ್ಕೆ ಹೋಗುವ ಸ್ಥಳೀಯ ಸರ್ಕಾರಿ ಬಸ್ ಗಳಿಗೆ ಟೋಲ್ ಶುಲ್ಕದಿಂದಾಗಿ ಪ್ರಯಾಣಿಕರ ಮೇಲೆ ಹೆಚ್ಚಿನ ದರ ವಿಧಿಸಲಾಗುತ್ತಿದೆ. ಮೂರು ಕಡೆ ಟೋಲ್‍ಗಳಿದ್ದು, ಕೆಎಸ್‌ಆರ್‌ಟಿಸಿಯ ಬಸ್ಸಿಗೆ ಕ್ರಮವಾಗಿ 9 ರೂ., ಸ್ಲೀಪರ್ ಗೆ 13 ರೂ., ರಾಜಹಂಸಕ್ಕೆ 10 ರೂ. ಏರಿಸಲಾಗಿದೆ. ಆದರೆ ಲೋಕಲ್ ಬಸ್ಸಿಗೆ ವಿನಾಯ್ತಿ ನೀಡಬೇಕು ಇದರಿಂದ ಸ್ಥಳೀಯ ಪ್ರಯಾಣಿಕರಿಗೆ ಹೊರೆ ತಪ್ಪುತ್ತದೆ. ಪ್ರತಿ ಟ್ರಿಪ್‍ಗೆ ಟೋಲ್ ಶುಲ್ಕ ತೆಗೆದುಕೊಳ್ಳುವುದನ್ನು ಬಿಡಬೇಕು. 24 ಘಂಟೆಗೆ ತೆಗೆದುಕೊಳ್ಳಬೇಕು. ಐ.ಆರ್.ಬಿ ಕಂಪನಿ ರಸ್ತೆಯಲ್ಲಿ ದರೋಡೆಗೆ ಮಾಡುತಿದ್ದಾರೆ. ಇದು ಸರಿಯಲ್ಲ ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದು ಸತೀಶ್ ಸೈಲ್ ಹೇಳಿದರು.

    ಅಪಘಾತ ತಪ್ಪಿಸಲು ಬೀದಿ ದೀಪ ಅಳವಡಿಸಿ:
    ಮಾಜಾಳಿಯಿಂದ ಅಂಕೋಲ ಭಾಗದಲ್ಲಿ ಅಲ್ಲಲ್ಲಿ ಬೀದಿ ದೀಪವನ್ನು ರಸ್ತೆಯಲ್ಲಿ ಅಳವಡಿಸಲಾಗಿದೆ. ಆದರೆ ಎಲ್ಲಿ ಅವಷ್ಯಕತೆ ಇದೆಯೋ ಅಲ್ಲಿ ಅಳವಡಿಸಿಲ್ಲ. ರಸ್ತೆ ತಿರುವು, ಗ್ರಾಮಗಳು ಇರುವ ಪ್ರದೇಶಕ್ಕೆ ಕಡ್ಡಾಯವಾಗಿ ಬೀದಿ ದೀಪಗಳನ್ನು ಅಳವಡಿಸಬೇಕು ಎಂದು ಆಗ್ರಹಿಸಿದರು. ಇತ್ತ ರಸ್ತೆಯನ್ನು ಸಹ ಸಮರ್ಪಕವಾಗಿ ಮಾಡದೇ ಅಪಘಾತವಾಗಿ ಜನರು ಸಾಯುವಂತಾಗಿದೆ ಎಂದು ಐ.ಆರ್.ಬಿ ಕಂಪನಿ ವಿರುದ್ಧ ಸತೀಶ್ ಸೈಲ್ ಆಕ್ರೋಶ ವ್ಯಕ್ತಪಡಿಸಿದರು.

  • 20 ವರ್ಷವಾದ್ರೂ ಪರಿಹಾರ ನೀಡದ್ದಕ್ಕೆ ರಸ್ತೆಗೆ ಬೇಲಿ ಹಾಕಿದ ರೈತರು

    20 ವರ್ಷವಾದ್ರೂ ಪರಿಹಾರ ನೀಡದ್ದಕ್ಕೆ ರಸ್ತೆಗೆ ಬೇಲಿ ಹಾಕಿದ ರೈತರು

    ಶಿವಮೊಗ್ಗ: ಜಮೀನಿನ ಮಧ್ಯೆ ರಸ್ತೆಗೆಂದು ಬಿಟ್ಟಿದ್ದ ಭೂಮಿಗೆ ಸರ್ಕಾರ ಪರಿಹಾರ ನೀಡಿಲ್ಲ ಎಂದು ಜಮೀನಿನ ಮಾಲೀಕರು ರಸ್ತೆಗೆ ಬೇಲಿ ಹಾಕಿರುವ ಘಟನೆ ಶಿವಮೊಗ್ಗದ ಗೆಜ್ಜೇನಹಳ್ಳಿ ಗ್ರಾಮದ ಬಳಿ ನಡೆದಿದೆ.

    ಗೆಜ್ಜೇನಹಳ್ಳಿ ಗ್ರಾಮದ ರೈತರಾದ ಮಹದೇವ, ಜಯನಾಯ್ಕ ಅವರು ತಮ್ಮ ಜಮೀನು ಸೇರಿದಂತೆ ಗ್ರಾಮದ ಇತರೆ ರೈತರ ಜಮೀನಿಗೆ ತೆರಳಲು ಅನುಕೂಲ ಆಗಲೆಂದು ಕಳೆದ 20 ವರ್ಷಗಳ ಹಿಂದೆ ರಸ್ತೆಗೆ ಭೂಮಿ ಬಿಟ್ಟು ಕೊಟ್ಟಿದ್ದರು. ಆದರೆ ರಸ್ತೆಗೆಂದು ಬಿಟ್ಟಿದ್ದ ಭೂಮಿಗೆ ಸರ್ಕಾರದಿಂದ ಇದುವರೆಗೂ ಯಾವುದೇ ಪರಿಹಾರ ದೊರೆತಿರಲಿಲ್ಲ. ಆದರೆ ಇಂದು ಇದೇ ರಸ್ತೆಯ ಮಾರ್ಗವಾಗಿ ಅಬ್ಬಲಗೆರೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ ಡಾಂಬರೀಕರಣ ಮಾಡಲು ಲೋಕೋಪಯೋಗಿ ಇಲಾಖೆಯಿಂದ 40 ಲಕ್ಷ ರೂ. ಹಣ ಬಿಡುಗಡೆಯಾಗಿದೆ.

    ಇಂದು ರಸ್ತೆ ಕಾಮಗಾರಿಗೆ ಚಾಲನೆ ನೀಡಲು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಆಗಮಿಸಿದ್ದರು. ಈ ವೇಳೆ ಜಮೀನಿನ ಮಾಲೀಕರು ನಮಗೆ ಪರಿಹಾರದ ಹಣ ನೀಡಿ ಕಾಮಗಾರಿ ಆರಂಭಿಸಿ ಎಂದು ತಡೆ ಹಿಡಿದಿದ್ದರು.

    ಈ ವೇಳೆ ಗುತ್ತಿಗೆದಾರ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಮಾತ್ರ ಮೊದಲು ರಸ್ತೆಗೆ ಹಾಕಿರುವ ಬೇಲಿ ತೆರವುಗೊಳಿಸಿ ನಮಗೆ ಟೆಂಡರ್ ಸಿಕ್ಕಿದೆ ನಾವು ಕೆಲಸ ಆರಂಭಿಸುತ್ತೇವೆ. ನಂತರ ಬೇಕಾದರೆ ನೀವು ಬೇಲಿ ಹಾಕಿಕೊಳ್ಳಿ. ಈಗ ಕಾಮಗಾರಿ ಸ್ಥಗಿತವಾದರೆ ನಾವು ಹಾಕಿರುವ ಬಂಡವಾಳ ನಷ್ಟವಾಗುವುದರ ಜೊತೆಗೆ ಬಂದಿರುವ ಟೆಂಡರ್ ಹಣವು ಸಹ ವಾಪಸ್ ಹೋಗಲಿದೆ. ನಾವು ಕೆಲಸ ಮಾಡಿಯೇ ತೀರುತ್ತೇವೆ ಎನ್ನುತ್ತಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

    ಪರಿಹಾರದ ಹಣ ನೀಡುವವರೆಗೂ ರಸ್ತೆ ಕಾಮಗಾರಿ ಮಾಡಲು ಬಿಡುವುದಿಲ್ಲ. ನಮ್ಮ ಜಮೀನಿನ ಸ್ಥಳವನ್ನು ಸರ್ಕಾರಕ್ಕಾಗಿ ಬಿಟ್ಟುಕೊಟ್ಟಿದ್ದೇವೆ. ಆದರೆ ಸರ್ಕಾರ ನಮಗೆ ಹೀಗೆ ಪರಿಹಾರ ನೀಡದೆ ಅನ್ಯಾಯ ಮಾಡುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಬೀದರ್ ಲೋಕೋಪಯೋಗಿ ಇಲಾಖೆ ಮುಂದೆಯೇ ರಸ್ತೆ ಕುಸಿದು ಹಳ್ಳಕ್ಕೆ ಬಿದ್ದ ಲಾರಿ, ಕಾರು

    ಬೀದರ್ ಲೋಕೋಪಯೋಗಿ ಇಲಾಖೆ ಮುಂದೆಯೇ ರಸ್ತೆ ಕುಸಿದು ಹಳ್ಳಕ್ಕೆ ಬಿದ್ದ ಲಾರಿ, ಕಾರು

    ಬೀದರ್: ಕಳಪೆ ಕಾಮಗಾರಿಗೆ ಸಾಕ್ಷಿ ಎಂಬಂತೆ ಜಿಲ್ಲೆಯ ಲೋಕೋಪಯೋಗಿ ಇಲಾಖೆಯ ಮುಂದೆಯೇ ರಸ್ತೆ ಕುಸಿದ ಪರಿಣಾಮ ಕಾರು ಹಾಗೂ ಲಾರಿ ಹಳ್ಳಕ್ಕೆ ಬಿದ್ದಿದೆ.

    ಕೆಲವೇ ದಿನಗಳ ಹಿಂದಷ್ಟೆ ಮಾಡಿದ್ದ ಯುಜಿಡಿ ರಸ್ತೆ ಕುಸಿದು ಕಾರು ಮತ್ತು ಲಾರಿ ಹಳ್ಳದಲ್ಲಿ ಸಿಲುಕಿಕೊಂಡಿದೆ. ವಿಪರ್ಯಾಸವೆಂದರೆ ಲೋಕೋಪಯೋಗಿ ಇಲಾಖೆಯ ಕಚೇರಿ ಮುಂದೆಯೇ ರಸ್ತೆ ಕುಸಿದು ಈ ಅವಘಡ ಸಂಭವಿಸಿದ್ದಕ್ಕೆ ಅಧಿಕಾರಿಗಳು ನಾಚಿಕೆಪಡುವಂತಾಗಿದೆ.

    ಎರಡು ವರ್ಷಗಳಿಂದ ಮಂದಗತಿಯಲ್ಲಿ ನಡೆಯುತ್ತಿರುವ ಯುಜಿಡಿ ಕಾಮಗಾರಿಗೆ ಯಾವಾಗ ಮುಕ್ತಿ ಸಿಗುತ್ತೆ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಚಿವರು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ಸ್ಥಳೀಯರು ಹಿಡಿಶಾಪ ಹಾಕುತ್ತಿದ್ದಾರೆ. ಯುಜಿಡಿ ಕಳಪೆ ಕಾಮಗಾರಿಯ ಭಯದಲ್ಲೇ ವಾಹನ ಸವಾರರು ಸಂಚಾರ ಮಾಡುತ್ತಿದ್ದಾರೆ.

  • ಒಂದೇ ಕಾಮಗಾರಿಗೆ ಡಬಲ್ ಬಿಲ್ – ಹೂವಿನಹಡಗಲಿಯಲ್ಲಿ ಪರಮೇಶ್ವರ್ ನಾಯ್ಕ್ ದರ್ಬಾರ್

    ಒಂದೇ ಕಾಮಗಾರಿಗೆ ಡಬಲ್ ಬಿಲ್ – ಹೂವಿನಹಡಗಲಿಯಲ್ಲಿ ಪರಮೇಶ್ವರ್ ನಾಯ್ಕ್ ದರ್ಬಾರ್

    ಬಳ್ಳಾರಿ: ಅಲ್ಲಿರೋದು ಒಂದೆ ರೋಡ್, ಆದ್ರೆ ಆ ಒಂದು ರೋಡ್ ಕಾಮಗಾರಿಗೆ ಎರಡೆರಡು ಬಾರಿ ಬಿಲ್ ಪಾವತಿ ಆಗಿದೆ. ಇದು ಹೂವಿನಹಡಗಲಿಯ ಪುರಸಭೆಯಲ್ಲಿ ನಡೆದ ಅವ್ಯವಹಾರ.

    ಮಾಜಿ ಸಚಿವ ಪರಮೇಶ್ವರ ನಾಯ್ಕ್ ಅಧಿಕಾರವಧಿಯಲ್ಲಿ ಆದ ಅವ್ಯವಹಾರಗಳು ಇದೀಗ ಒಂದೊಂದೇ ಬಯಲಾಗುತ್ತಿವೆ. ಹೂವಿನಹಡಗಲಿಯಲ್ಲಿ ಒಂದೇ ರೋಡ್ ಕಾಮಗಾರಿಗೆ ಎರಡೆರಡು ಬಾರಿ ಬಿಲ್ ಪಾವತಿಯಾಗಿರೋದು ದಾಖಲೆಗಳ ಮೂಲಕ ಬೆಳಕಿಗೆ ಬಂದಿದೆ.

    ಪಿಟಿ ಪರಮೇಶ್ವರ ನಾಯ್ಕ್ ಸಚಿವರಾಗಿದ್ದ ವೇಳೆ ಅಧಿಕಾರ ದುರುಪಯೋಗಪಡಿಸಿಕೊಂಡು ಹೂವಿನಹಡಗಲಿಯ ರಾಜೀವನಗರದಿಂದ ನಜೀರ್ ನಗರದವರೆಗೆ ರಸ್ತೆ ಕಾಮಗಾರಿ ಮಾಡಲಾಗಿದೆ. ಈ ಕಾಮಗಾರಿಗೆ ಪುರಸಭೆಯಿಂದ ಮೆಟಲಿಂಗ್ ಮಾಡಲು 5.18 ಲಕ್ಷ ಹಾಗೂ ಸಿಸಿ ರಸ್ತೆ, ಚರಂಡಿಗಾಗಿ 8.17 ಲಕ್ಷ ಬೋಗಸ್ ಬಿಲ್ ಪಡೆಯಲಾಗಿದೆ. ಇದೇ ಕಾಮಗಾರಿಯನ್ನು ಎಚ್‍ಕೆಡಿಬಿ ಯೋಜನೆಯಡಿಯಲ್ಲಿ ಜಿಲ್ಲಾ ಪಂಚಾಯ್ತಿ ಮೂಲಕ ಮಾಡಲಾಗಿದೆ ಎಂದು ತೋರಿಸಿ ಬರೋಬ್ಬರಿ 53.49 ಲಕ್ಷ ರೂಪಾಯಿ ಹಣ ಕಿತ್ತಿದ್ದಾರೆ.

    ಇನ್ನೂ ವಿಚಿತ್ರ ಅಂದ್ರೆ ಈ ಕಾಮಗಾರಿ ನಡೆದಿರೋದು ಖಾಸಗಿ ಲೇಔಟ್‍ನಲ್ಲಿ ಅಂದ್ರೆ ನಂಬಲೇಬೇಕು. ಅಧಿಕಾರ ದುರುಪಯೋಗ ಮಾಡ್ಕೊಂಡ ಪರಮೇಶ್ವರ ನಾಯ್ಕ್ ಪುರಸಭೆ ಅಧಿಕಾರಿಗಳ ಜೊತೆಗೂಡಿ ಈ ಲೂಟಿ ನಡೆಸಿರೋದು ದಾಖಲೆಗಳ ಸಮೇತ ಬೆಳಕಿಗೆ ಬಂದಿದೆ.

    ಈ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಸರ್ಕಾರ ತನಿಖೆ ನಡೆಸಿದ್ರೆ ಒಂದೇ ರೋಡ್‍ಗೆ ಎರಡು ಬಿಲ್ ಪಾವತಿ ಮಾಡಿ ಹಣ ಲೂಟಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬಹುದಾಗಿದೆ.