Tag: Robbery Case

  • 3.5 ಕೆಜಿ ಚಿನ್ನಾಭರಣ ದರೋಡೆ ಕೇಸ್ – ಐವರು ಅರೆಸ್ಟ್, ಓರ್ವ ಆರೋಪಿ ನೇಣಿಗೆ ಶರಣು

    3.5 ಕೆಜಿ ಚಿನ್ನಾಭರಣ ದರೋಡೆ ಕೇಸ್ – ಐವರು ಅರೆಸ್ಟ್, ಓರ್ವ ಆರೋಪಿ ನೇಣಿಗೆ ಶರಣು

    ಕೋಲಾರ: ಮೂರುವರೆ ಕೋಟಿ ರೂ. ಮೌಲ್ಯದ 3.5 ಕೆಜಿ ಚಿನ್ನಾಭರಣ (Gold) ದೋಚಿದ್ದ ಪ್ರಕರಣದಲ್ಲಿ ಮತ್ತೆ ಐವರನ್ನು ಕೆಜಿಎಫ್‌ ಪೊಲೀಸರು (KGF Police) ಬಂಧಿಸಿದ್ದಾರೆ.

    ಬಂಧಿತರನ್ನು ತಮಿಳುನಾಡು (Tamil Nadu) ಮೂಲದ ಪಿ.ವೇದಾವಲಂ, ಕುಮಾರನ್, ರಂಜಿತ್, ಶಂಕರ್, ದೇಬೇಶ್ ಚಕ್ರವರ್ತಿ ಮತ್ತು ವೇಲು ಎಂದು ಗುರುತಿಸಲಾಗಿದೆ. ಇನ್ನೂ ಮೂರ್ನಾಲ್ಕು ಮಂದಿ ಪ್ರಕರಣದಲ್ಲಿ ಭಾಗಿಯಾಗಿದ್ದು ಶೀಘ್ರದಲ್ಲೇ ಬಂಧಿಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 

    ಪ್ರಕರಣದ 8ನೇ ಆರೋಪಿ ಅಪ್ಪು ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ ತಮಿಳುನಾಡಿನ ಕಂಬಟ್ಟು ಬಳಿ ಮರಕ್ಕೆ ನೇಣು ಬಿಗಿದುಕೊಂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬಿಡದಿ ಪಟ್ಟಣದಲ್ಲಿ ಜೆಸಿಬಿಗಳ ಘರ್ಜನೆ – ಅಧಿಕಾರಿಗಳಿಂದ ಫುಟ್‌ಪಾತ್ ಒತ್ತುವರಿ ತೆರವು

    ಏ.2 ರಂದು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ವಿ ಕೋಟ ನಾಕಿನೇರಿ ಘಾಟ್ ಬಳಿ ಚೆನ್ನೈನಿಂದ ಕೆಜಿಎಫ್‍ಗೆ ತರುತ್ತಿದ್ದ ಚಿನ್ನಾಭರಣವನ್ನು ದರೋಡೆ ಮಾಡಲಾಗಿತ್ತು. ಈ ಸಂಬಂಧ ಕೆಜಿಎಫ್‍ನ ಚಿನ್ನದಂಗಡಿಯೊಂದರ ಮಾಲೀಕ ದೀಪಕ್ ಜೈನ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು.

    ಪ್ರಕರಣ ಸಂಬಂಧ ಈಗಾಗಲೇ ಕೆಜಿಎಫ್ ಮೂಲದ ನಾಲ್ಕು ಜನರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಇದನ್ನೂ ಓದಿ: ರಾಜೇಂದ್ರ ಕೊಲೆ ಸುಪಾರಿ ಕೇಸ್ – 9 ದಿನ ಕಳೆದರೂ ಆರೋಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸದ ಪೊಲೀಸರು

  • ಸಭಾಪತಿ ಹೊರಟ್ಟಿ ಮನೆ ಬಳಿ ದರೋಡೆ ಮಾಡಿದ್ದ ಇಬ್ಬರ ಕಾಲಿಗೆ ಗುಂಡೇಟು!

    ಸಭಾಪತಿ ಹೊರಟ್ಟಿ ಮನೆ ಬಳಿ ದರೋಡೆ ಮಾಡಿದ್ದ ಇಬ್ಬರ ಕಾಲಿಗೆ ಗುಂಡೇಟು!

    ಹುಬ್ಬಳ್ಳಿ: ನಗರದಲ್ಲಿ (Hubli) ಮತ್ತೆ ಪೊಲೀಸರ ಗನ್ ಸದ್ದು ಮಾಡಿದೆ. ಮನೆಯೊಂದರಲ್ಲಿ ದರೋಡೆ (Robbery Case) ಮಾಡಿದ್ದ ಇಬ್ಬರು ಅಂತರರಾಜ್ಯ ದರೋಡೆಕೋರರಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ.

    ಅಂತರರಾಜ್ಯ ಕಳ್ಳರಾದ ಇರ್ಷಾದ್ ಹಾಗೂ ಅಕ್ಬರ್ ಕಾಲಿಗೆ ಹುಬ್ಬಳ್ಳಿಯ ಉಪನಗರ ಪೊಲೀಸರು ಗುಂಡು ಹಾರಿಸಿದ್ದಾರೆ. ಸಭಾಪತಿ ಬಸವರಾಜ್ ಹೊರಟ್ಟಿಯವರ ಹುಬ್ಬಳ್ಳಿಯ ನಿವಾಸದ ಬಳಿ ಆರೋಪಿಗಳು ದರೋಡೆ ಮಾಡಿದ್ದರು. ಆರೋಪಿಗಳ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದು, ಪೊಲೀಸರು ಗುಂಡೇಟು ನೀಡಿ ಬಂಧಿಸಿದ್ದಾರೆ.

    ಕಾರ್ಯಾಚರಣೆ ವೇಳೆ, ಮೂವರು ಪೊಲೀಸ್ ಸಿಬ್ಬಂದಿಗೆ ಗಾಯವಾಗಿದ್ದು, ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಭೇಟಿ ನೀಡಿ ಪೊಲೀಸ್ ಸಿಬ್ಬಂದಿಯ ಆರೋಗ್ಯ ವಿಚಾರಿಸಿದ್ದಾರೆ.

    ಪೊಲೀಸರಿಂದ ಗುಂಡೇಟು ತಿಂದ ಆರೋಪಿಗಳನ್ನು ಸಹ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

  • ದರೋಡೆ ಕೇಸ್; ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು

    ದರೋಡೆ ಕೇಸ್; ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು

    ಹಾಸನ: ದರೋಡೆ ಪ್ರಕರಣದ (Robbery case) ಪ್ರಮುಖ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಪೊಲೀಸ್ (Hirisave Police) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಚನ್ನರಾಯಪಟ್ಟಣ ತಾಲೂಕಿನ ಬೂಕನಬೆಟ್ಟ ಪ್ರದೇಶದಲ್ಲಿ ಘಟನೆ ನಡೆದಿದೆ. ಎರಡು ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳ ಬಂಧನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ರಘುಪತಿ ನೇತೃತ್ವದಲ್ಲಿ ತಂಡವೊಂದನ್ನ ರಚಿಸಲಾಗಿತ್ತು.

    ನಾಲ್ವರು ಆರೋಪಿಗಳು ಬೂಕನಬೆಟ್ಟದಲ್ಲಿ ತಲೆಮರೆಸಿಕೊಂಡಿರುವ ಬಗ್ಗೆ ಖಚಿತ ಮಾಹಿತಿ ಪಡೆದು, ಇಂದು (ಭಾನುವಾರ) ಮುಂಜಾನೆ ಪೊಲೀಸರ ತಂಡ ಆರೋಪಿಗಳನ್ನು ಬಂಧಿಸಲು ತೆರಳಿತ್ತು. ಈ ವೇಳೆ ಆರೋಪಿ ಸತೀಶ್ ಡ್ರ‍್ಯಾಗನ್‌ನಿಂದ ಪೊಲೀಸ್ ಕಾನ್ಸ್‌ಟೇಬಲ್ ಪುಟ್ಟರಾಜು ಮೇಲೆ ಹಲ್ಲೆ ಮಾಡಿದ್ದಾನೆ. ಇದರಿಂದಾಗಿ ಆತ್ಮ ರಕ್ಷಣೆಗೋಸ್ಕರ ಪಿಎಸ್‌ಐ ಭರತ್‌ರೆಡ್ಡಿ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ.

    ಗಾಯಾಳು ಕಾನ್ಸ್ಟೇಬಲ್‌ಗೆ ಹಿರಿಸಾವೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ಸತೀಶ್ ಕಾಲಿಗೆ ಗುಂಡು ತಗುಲಿದ್ದರಿಂದ ಹಿರಿಸಾವೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ನಾಲ್ವರು ಆರೋಪಿಗಳ ಪೈಕಿ ಆರೋಪಿ ಸತೀಶ್‌ಗೆ ಗುಂಡೇಟು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಇನ್ನೂ ಮೂವರು ಆರೋಪಿಗಳು ತಪ್ಪಿಸಿಕೊಂಡಿದ್ದಾರೆ.

  • ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ – ಆರೋಪಿಗೆ ಗುಂಡೇಟು ಕೊಟ್ಟ ಲೇಡಿ ಪಿಎಸ್‌ಐ

    ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ – ಆರೋಪಿಗೆ ಗುಂಡೇಟು ಕೊಟ್ಟ ಲೇಡಿ ಪಿಎಸ್‌ಐ

    ಹುಬ್ಬಳ್ಳಿ: ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ದರೋಡೆಕೋರನಿಗೆ ಗುಂಡೇಟು ನೀಡಿದ ಘಟನೆ ಹುಬ್ಬಳ್ಳಿಯಲ್ಲಿ (Hubballi) ನಡೆದಿದೆ.

    ಗುಂಡೇಟು ತಿಂದ ಆರೋಪಿಯನ್ನು ಹೈದರಾಬಾದ್ ಮೂಲದ ಫರ್ಹಾನ್ ಶೇಖ್ ಎಂದು ಗುರುತಿಸಲಾಗಿದೆ. ಆರೋಪಿ ಕೇಶ್ವಾಪುರ ವ್ಯಾಪ್ತಿಯಲ್ಲಿ ಚಿನ್ನದ ಅಂಗಡಿ ಕಳ್ಳತನ ಮಾಡಿದ್ದ. ಈತನನ್ನು ಗುರುವಾರ ಬಂಧಿಸಲಾಗಿತ್ತು. ಅಲ್ಲದೇ ವಿವಿಧ ರಾಜ್ಯಗಳಲ್ಲಿ ನಡೆದ ಕೊಲೆ, ಡಕಾಯಿತಿ ಮತ್ತು ದರೋಡೆ ಪ್ರಕರಣದಲ್ಲಿ ಆರೋಪಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

    ಫರ್ಹಾನ್‌ಗೆ ಸಹಕಾರ ನೀಡಿದ ಇತರೆ ಆರೋಪಿಗಳನ್ನು ಬಂಧಿಸಲು ಗಾಮನ ಗಟ್ಟಿ ರಸ್ತೆಯ ತಾರಿಹಾಳ ಕ್ರಾಸ್ ಬಳಿ ತಪಾಸಣೆ ನಡೆಸುತ್ತಿದ್ದ ವೇಳೆ ಕಾನ್ಸ್ಟೇಬಲ್ ಸುಜಾತ ಹಾಗೂ ಮಹೇಶ್ ಎಂಬವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪಿಎಸ್‌ಐ ಕವಿತಾ ಅವರು ಗಾಳಿಯಲ್ಲಿ 2 ಸುತ್ತು ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ. ಆದರೆ ಆತ ಪರಾರಿಯಾಗಲು ಯತ್ನಿಸಿದ್ದು ಆತನ ಕಾಲಿಗೆ ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಗಾಯಗೊಂಡ ಪೊಲೀಸ್ ಸಿಬ್ಬಂದಿ ಮತ್ತು ಆರೋಪಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

  • ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ ಪ್ರಕರಣ – ಚಾಲಕನೇ ಮಾಸ್ಟರ್ ಮೈಂಡ್

    ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ ಪ್ರಕರಣ – ಚಾಲಕನೇ ಮಾಸ್ಟರ್ ಮೈಂಡ್

    – ಐವರು ದರೋಡೆಕೋರರು ಅರೆಸ್ಟ್

    ವಿಜಯಪುರ: ಜಿಲ್ಲೆಯ ಕೊಲ್ಹಾರ ಪಟ್ಟಣದ ಹೊರವಲಯದಲ್ಲಿ ಇತ್ತೀಚೆಗೆ ಕ್ಯಾಂಟರ್ ಅಡ್ಡಗಟ್ಟಿ ಚಾಲಕ ಮತ್ತು ಕ್ಲೀನರ್ ಮೇಲೆ ಹಲ್ಲೆ ನಡೆಸಿ 32 ಲಕ್ಷ ರೂ. ಹಣ ದರೋಡೆ (Robbery Case) ಮಾಡಿದ್ದ ಆರೋಪಿಗಳನ್ನು ವಿಜಯಪುರ ಪೊಲೀಸರು (Vijayapur Police) ಬಂಧಿಸಿದ್ದಾರೆ. ಇದೀಗ ತನಿಖೆ ವೇಳೆ ದರೋಡೆಯಲ್ಲಿ ವಾಹನ ಚಾಲಕನ ಪಾತ್ರ ಇರುವುದು ಬೆಳಕಿಗೆ ಬಂದಿದೆ.

    ಬಂಧಿತ ಆರೋಪಿಗಳನ್ನು ಮಹಾಂತೇಶ್ ತಳವಾರ, ಧರೇಶ್ ದಳವಾಯಿ, ಶಿವಪ್ಪ ಮಾಶ್ಯಾಳ, ಸುನೀಲ್ ವಡ್ಡರ, ಶಿವಾನಂದ್ ದಳವಾಯಿ ಎಂದು ಗುರುತಿಸಲಾಗಿದೆ. ಆರೋಪಿಗಳು ಶನಿವಾರ (ಮೇ 18) ಕೊಲ್ಹಾರದ ಹೊರವಲಯದಲ್ಲಿ ಕ್ಯಾಂಟರ್ ವಾಹನ ತಡೆದು, ಚಾಲಕ ಮತ್ತು ಕ್ಲೀನರ್ ಮೇಲೆ ಹಲ್ಲೆ ಮಾಡಿ ಹಣ ದೋಚಿ ಪರಾರಿಯಾಗಿದ್ದರು. ಇದೀಗ ವಿಚಾರಣೆ ವೇಳೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದ್ದು, ವಾಹನ ಚಾಲಕ ಸಹ ಭಾಗಿಯಾಗಿದ್ದಾನೆ ಎಂಬ ವಿಚಾರ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಮದುವೆಗೆ ಹೆಣ್ಣು ಸಿಗದೆ ಮನನೊಂದು ನೇಣಿಗೆ ಕೊರಳೊಡ್ಡಿದ ಯುವಕ

    ಮೇ 18ರಂದು ಜೀವರ್ಗಿಯ ಹತ್ತಿ ವ್ಯಾಪಾರಿ ಚಂದ್ರಕಾಂತ್ ಕುಂಬಾರ ಎಂಬವರಿಗೆ ಸೇರಿದ ಹತ್ತಿಯನ್ನು ಧಾರವಾಡದಲ್ಲಿ ಮಾರಾಟ ಮಾಡಿ ವಾಪಸ್ ಹಣ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಈ ದರೋಡೆ ನಡೆದಿತ್ತು. ಈ ಸಂಬಂಧ ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಆರಂಭಿಸಿದ ಪೊಲೀಸರು ಚಾಲಕನನ್ನು ವಿಚಾರಣೆ ನಡೆಸಿದಾಗ ದರೋಡೆಯ ಹಿಂದಿನ ಸಂಚು ಬಯಲಾಗಿದೆ.

    ಬಂಧಿತರಿಂದ ಕೃತ್ಯಕ್ಕೆ ಬಳಸಿದ ವಾಹನ, ಬಡಿಗೆ, ರಾಡ್ ಹಾಗೂ ಸುಲಿಗೆಯಾದ ಹಣದ ಪೈಕಿ 31,04,364 ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಮದುವೆ ಪಲ್ಲಕ್ಕಿಯಲ್ಲಿ ಹೋಗಬೇಕಿದ್ದವಳು ಶವದ ಪೆಟ್ಟಿಗೆಯಲ್ಲಿ ಹೋದಳು: ಅಪಘಾತಕ್ಕೆ ಬಲಿಯಾದ ಯುವತಿ ತಾಯಿ ಕಣ್ಣೀರು