Tag: robert film

  • ತರುಣ್, ಸೋನಲ್ ಮದುವೆ ಆಮಂತ್ರಣ ಪತ್ರಿಕೆ ಹೇಗಿದೆ ಗೊತ್ತಾ?

    ತರುಣ್, ಸೋನಲ್ ಮದುವೆ ಆಮಂತ್ರಣ ಪತ್ರಿಕೆ ಹೇಗಿದೆ ಗೊತ್ತಾ?

    ಚಂದನವನದಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ತರುಣ್ ಸುಧೀರ್ (Tharun Sudhir) ಮತ್ತು ಸೋನಲ್ (Sonal) ಹಸೆಮಣೆ ಏರೋದಕ್ಕೆ ಸಜ್ಜಾಗಿದ್ದಾರೆ. ಕಲರ್‌ಫುಲ್ ಫೋಟೋಶೂಟ್ ಮೂಲಕ ಮದುವೆ ಡೇಟ್ ಅನೌನ್ಸ್ ಮಾಡಿದ ಬೆನ್ನಲ್ಲೇ ಈಗ ಆಮಂತ್ರಣ ಪತ್ರಿಕೆ ಕೂಡ ಸದ್ದು ಮಾಡುತ್ತಿದೆ. ಇದನ್ನೂ ಓದಿ:ನಟನೆ ಚೆನ್ನಾಗಿದೆ ಅಂತಾರೆ ಆದರೆ ಸಿನಿಮಾ ಆಫರ್ ಕೊಡಲ್ಲ: ನೇಹಾ ಧೂಪಿಯಾ ಬೇಸರ

    ತರುಣ್ ಮತ್ತು ಸೋನಲ್ ಮಂಥೆರೋ ಮದುವೆ ಕಾರ್ಡ್ ಆಕರ್ಷಕವಾಗಿದೆ. ಮದುವೆ ಪತ್ರಿಕೆ ಮೇಲೆ ಇಬ್ಬರ ರೊಮ್ಯಾಂಟಿಕ್ ಫೋಟೋ ಹಾಕಿಸಿದ್ದು, ಒಳಗೆ ಮದುವೆ ಮುಹೂರ್ತ ಸಮಾರಂಭ ಕುರಿತು ಬರೆಯಲಾಗಿದೆ.

    ತರುಣ್ ಸುಧೀರ್ ಮತ್ತು ಸೋನಲ್ ಜೋಡಿ ಇದೇ ಆಗಸ್ಟ್ 10, 11ರಂದು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಆಗಸ್ಟ್ 10ರಂದು ಸಂಜೆ 6:30 ನಂತರ ಆರತಕ್ಷತೆ ಕಾರ್ಯಕ್ರಮ, ಆ.11ರಂದು ಬೆಳಗ್ಗೆ 10:50 ರಿಂದ 11:35ರ ಶುಭ ಮುಹೂರ್ತದಲ್ಲಿ ಮದುವೆ ನಡೆಯಲಿದೆ. ಹಿಂದೂ ಸಂಪ್ರದಾಯದಂತೆ ಮದುವೆ ಜರುಗಲಿದೆ.

    ಈ ಎರಡು ದಿನದ ಸಮಾರಂಭವು ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ಆರ್.ವಿ ಕಾಲೇಜ್ ಬಳಿ ಇರುವ ಪೂರ್ಣಿಮಾ ಪ್ಯಾಲೇಸ್‌ನಲ್ಲಿ ನಡೆಯಲಿದೆ. ಸದ್ಯ ಸ್ಯಾಂಡಲ್‌ವುಡ್ ನಟ, ನಟಿಯರಿಗೆ ಮದುವೆ ಕಾರ್ಡ್ ಕೊಡುವುದರಲ್ಲಿ ತರುಣ್ ಮತ್ತು ಸೋನಲ್ ಬ್ಯುಸಿಯಾಗಿದ್ದಾರೆ.


    ಇನ್ನೂ ದರ್ಶನ್ ನಟನೆಯ ರಾಬರ್ಟ್ ಸಿನಿಮಾಗೆ ತರುಣ್ ಸುಧೀರ್ ನಿರ್ದೇಶನ ಮಾಡಿದ್ದರು. ಈ ಸಿನಿಮಾದಲ್ಲಿ ವಿನೋದ್ ಪ್ರಭಾಕರ್‌ಗೆ ಜೋಡಿಯಾಗಿ ಸೋನಲ್ ನಟಿಸಿದ್ದರು. ಈ ಪರಿಚಯವೇ ಈಗ ಮದುವೆಗೆ ಮುನ್ನುಡಿ ಬರೆದಿದೆ.

  • ‘ರಾಬರ್ಟ್’ ನಿರ್ದೇಶಕ ತರುಣ್ ಜೊತೆ ಸೋನಲ್ ಮದುವೆ

    ‘ರಾಬರ್ಟ್’ ನಿರ್ದೇಶಕ ತರುಣ್ ಜೊತೆ ಸೋನಲ್ ಮದುವೆ

    ಸ್ಯಾಂಡಲ್‌ವುಡ್‌ನಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಮತ್ತೊಂದು ಜೋಡಿ ಹಸೆಮಣೆ ಏರೋದಕ್ಕೆ ಸಜ್ಜಾಗಿದೆ. ‘ರಾಬರ್ಟ್’ ನಿರ್ದೇಶಕ ತರುಣ್ ಸುಧೀರ್ (Tharun Sudhir) ಜೊತೆ ಸೋನಲ್ (Sonal) ಮದುವೆಗೆ ರೆಡಿಯಾಗಿದ್ದಾರೆ. ಈ ಮೂಲಕ ಫ್ಯಾನ್ಸ್‌ಗೆ ಸಿಹಿಸುದ್ದಿ ನೀಡಿದ್ದಾರೆ. ಇದನ್ನೂ ಓದಿ:ರೇಣುಕಾಸ್ವಾಮಿ ಕುಟುಂಬಕ್ಕೆ ಧನ ಸಹಾಯ ಮಾಡಿದ ಧ್ರುವ ಸರ್ಜಾ ಫ್ಯಾನ್ಸ್

    ಖಳನಟ ಸುಧೀರ್ ಪುತ್ರ ತರುಣ್ ಸುಧೀರ್ ಚಿತ್ರರಂಗದ ಸಕ್ಸಸ್‌ಫುಲ್ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ಸದ್ಯ ಸಿನಿಮಾ ಬಿಟ್ಟು ವೈಯಕ್ತಿಕ ಬದುಕಿನ ವಿಚಾರವಾಗಿ ಸುದ್ದಿಯಾಗ್ತಿದ್ದಾರೆ. ಸೋನಲ್‌ ಜೊತೆಗಿನ ತರುಣ್‌ ಮದುವೆ ಮ್ಯಾಟರ್. ಈ ಹಿಂದೆ ದರ್ಶನ್ ನಟನೆಯ ‘ರಾಬರ್ಟ್’ ಚಿತ್ರ ನಿರ್ದೇಶನ ಮಾಡುವಾಗ ಸೋನಲ್ ಮತ್ತು ತರುಣ್ ಪರಿಚಯವಾಗಿದೆ. ಈ ಪರಿಚಯವೇ ಈಗ ಮದುವೆ ಮಾತುಕತೆಗೆ ಮುನ್ನುಡಿ ಬರೆದಿದೆ. ಈ ಮದುವೆ (Wedding) ಬಗ್ಗೆ ಬಲ್ಲ ಮೂಲಗಳಿಂದ ವಲಯದಿಂದ ತಿಳಿದು ಬಂದಿದೆ.

    ಎರಡು ಕುಟುಂಬದ ಸಮ್ಮತಿಯ ಮೇರೆಗೆ ಈಗ ತರುಣ್ ಮತ್ತು ಸೋನಲ್ ಮದುವೆಗೆ ರೆಡಿಯಾಗಿದ್ದಾರೆ. ಆಗಸ್ಟ್‌ಗೆ ಮದುವೆ ಡೇಟ್ ಕೂಡ ಫಿಕ್ಸ್ ಆಗಿತ್ತು. ಕಾರಣಾಂತರಗಳಿಂದ ಮದುವೆ ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ. ಹರಿದಾಡುತ್ತಿರುವ ಸುದ್ದಿಗೆ ಸ್ಪಷ್ಟನೆ ಕೊಟ್ಟು ಶೀಘ್ರದಲ್ಲಿ ಮದುವೆ ಬಗ್ಗೆ ಅಧಿಕೃತ ಘೋಷಣೆ ಮಾಡ್ತಾರಾ? ಕಾದುನೋಡಬೇಕಿದೆ.

    ಅಂದಹಾಗೆ, ಚೌಕ, ರಾಬರ್ಟ್, ಕಾಟೇರ ಸಿನಿಮಾದ ಸಕ್ಸಸ್ ನಂತರ ತರುಣ್ ಹೊಸ ಸಿನಿಮಾದ ತಯಾರಿಯಲ್ಲಿದ್ದಾರೆ. ಇದರ ನಡುವೆ ತರುಣ್ ಶೋವೊಂದರ ಜಡ್ಜ್ ಆಗಿದ್ದಾರೆ. ಎಂಎಲ್‌ಎ, ಮದುವೆ ದಿಬ್ಬಣ, ರಾಬರ್ಟ್, ಗರಡಿ, ಶುಗರ್ ಫ್ಯಾಕ್ಟರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ಸೋನಲ್ ನಟಿಸಿದ್ದಾರೆ.

  • ನಮ್ಮ ಚಟ ಚಟ್ಟ ಹತ್ತಿಸುವವರೆಗೂ ಇರಬಾರದು- ದರ್ಶನ್‌ಗೆ ಉಮಾಪತಿ ಟಾಂಗ್

    ನಮ್ಮ ಚಟ ಚಟ್ಟ ಹತ್ತಿಸುವವರೆಗೂ ಇರಬಾರದು- ದರ್ಶನ್‌ಗೆ ಉಮಾಪತಿ ಟಾಂಗ್

    ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣವಾಗಿ ದರ್ಶನ್ ಅರೆಸ್ಟ್ ಆಗಿದ್ದಾರೆ. ಈ ಬೆನ್ನಲ್ಲೇ ತಾವು ಕಂಡಂತೆ ದರ್ಶನ್ ಹೇಗೆ? ಎಂಬುದನ್ನು ನಿರ್ಮಾಪಕ ಉಮಾಪತಿ ವಿವರಿಸಿದ್ದಾರೆ. 6 ಗಂಟೆ ನಂತರ ದರ್ಶನ್ ಬ್ಯಾಡ್ ಮ್ಯಾನ್ ಎಂದು ಉಮಾಪತಿ ಕುಟುಕಿದ್ದಾರೆ. ನಮ್ಮ ಚಟ ಚಟ್ಟ ಹತ್ತಿಸುವವರೆಗೂ ಆಗಬಾರದು ಎಂದು ದರ್ಶನ್‌ಗೆ (Darshan) ಉಮಾಪತಿ ಟಾಂಗ್‌ ಕೊಟ್ಟಿದ್ದಾರೆ. ಇದನ್ನೂ ಓದಿ:ದರ್ಶನ್ ಕುಳಿತರೆ ಜುಟ್ಟು, ನಿಂತರೆ ಕಾಲು- ಗುಮ್ಮಿದ ಉಮಾಪತಿ

    ನಾನು ಅವರು ಸ್ನೇಹಿತರಾಗಿರುವರೆಗೂ ದರ್ಶನ್ ಒಳ್ಳೆಯ ವ್ಯಕ್ತಿನೇ. 6 ಗಂಟೆ ನಂತರ ಬ್ಯಾಡ್ ಮ್ಯಾನ್, 6ರ ಮುಂಚೆ ಗುಡ್ ಮ್ಯಾನ್ ಅಂತ. ಅವರವರ ಹವ್ಯಾಸ, ಚಟ ಅವರನ್ನು ಹಾಳು ಮಾಡುತ್ತೆ. ನಮ್ಮ ಚಟ, ಚಟ್ಟ ಹತ್ತಿಸುವರೆಗೂ ಇರಬಾರದು. ಅತಿಯಾದರೆ ಅಮೃತ ಕೂಡ ವಿಷವಾಗುತ್ತದೆ ಎಂದು ದರ್ಶನ್ ಕುರಿತು ಉಮಾಪತಿ ಮಾತನಾಡಿದ್ದಾರೆ.

    ಅವತ್ತೂ ಈ ಪ್ರಕರಣದ ಬಗ್ಗೆ ಮಾತನಾಡಿದಾಗ, ಮನೆಯಲ್ಲಿ ಅವರದ್ದು ಏನೋ ಕೆಟ್ಟ ಸಮಯ. ಆ ತರಹ ನೀನು ಮಾತನಾಡಬಾರದು ಎಂದು ನನ್ನ ತಾಯಿ ಮತ್ತು ಪತ್ನಿ ನನಗೆ ತಿದ್ದಿದರು. ಹಾಗೇ ನಾವು ಕುಟುಂಬವನ್ನು ಇಟ್ಟುಕೊಂಡಿದ್ದೇವೆ. ಎಷ್ಟೇ ಬೆಳೆದರೂ ಕೂಡ ಮನುಷ್ಯ ತಗ್ಗಿ ಬಗ್ಗಿ ನಡೆಯಬೇಕಾಗುತ್ತದೆ ಎಂದು ಉಮಾಪತಿ ಮಾತನಾಡಿದ್ದಾರೆ.

    ನಾನು ನೋಡಿದ ಹಾಗೆ ದರ್ಶನ್ ಒಳ್ಳೆಯ ಮನುಷ್ಯನೇ. ನನಗಂತೂ ಅವರು ಅನ್ಯಾಯ ಮಾಡಿಲ್ಲ. ಆದರೆ ಆ ಮೈಸೂರು ಕೇಸ್ ನಂತರ ಅವರ ನಡವಳಿಕೆ ಬದಲಾಯ್ತು. ಅವರ ಸಹವಾಸ ಕೂಡ ಬದಲಾಯಿತು ಎಂದು ಮಾತನಾಡಿದ್ದಾರೆ. ಇವತ್ತಿಗೂ ಹೇಳ್ತೀನಿ ಆ ಕಾಟೇರ ಟೈಟಲ್ ಅವರೇ ಕೊಟ್ಟಿರಬಹುದು. ಆದರೆ ಅದು ನನ್ನ ಬ್ಯಾನರ್‌ನಲ್ಲಿ ರಿಜಿಸ್ಟರ್ ಆಗಿದ್ದು, ಅದಕ್ಕೆ ದುಡ್ಡು ಕೊಟ್ಟಿದ್ದು ನಾನೇ ಎಂದಿದ್ದಾರೆ. ಸಿನಿಮಾದಿಂದ ನಾನು ದುಡ್ಡು ಮಾಡಿದ್ದಲ್ಲ. ಸಿನಿಮಾ ಮಾಡುವ ದುಡ್ಡಿನಲ್ಲಿ ನಾನು ವ್ಯಾಪಾರ ಮಾಡಿದ್ರೆ ಡಬಲ್ ದುಡಿಯುತ್ತೇನೆ. ಇವತ್ತು ಇಷ್ಟು ಗೌರವ, ಸ್ಥಾನಮಾನ ಸಿಕ್ಕಿದೆ ಅಂದರೆ ಅದು ಸಿನಿಮಾದಿಂದ ಎಂದು ಉಮಾಪತಿ ಮಾತನಾಡಿದ್ದಾರೆ.

    ಅಂದಹಾಗೆ, ದರ್ಶನ್ ನಟನೆಯ ‘ರಾಬರ್ಟ್’ (Robert Film) ಸಿನಿಮಾವನ್ನು ಉಮಾಪತಿ ಶ್ರೀನಿವಾಸ್ ನಿರ್ಮಾಣ ಮಾಡಿದ್ದರು. 2021ರಲ್ಲಿ ಈ ಸಿನಿಮಾ ಸೂಪರ್ ಹಿಟ್ ಆಗಿತ್ತು.

  • ದರ್ಶನ್ ಕುಳಿತರೆ ಜುಟ್ಟು, ನಿಂತರೆ ಕಾಲು- ಗುಮ್ಮಿದ ಉಮಾಪತಿ

    ದರ್ಶನ್ ಕುಳಿತರೆ ಜುಟ್ಟು, ನಿಂತರೆ ಕಾಲು- ಗುಮ್ಮಿದ ಉಮಾಪತಿ

    ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ (Renukaswamy Murder Case) ವಿಚಾರವಾಗಿ ಖ್ಯಾತ ನಟ ದರ್ಶನ್ (Darshan) ಅರೆಸ್ಟ್ ಆಗಿದ್ದಾರೆ. ರೇಣುಕಾಸ್ವಾಮಿ ಬರ್ಬರ ಹತ್ಯೆ ಬಗ್ಗೆ ನಿರ್ಮಾಪಕ ಉಮಾಪತಿ ಖಂಡಿಸಿದ್ದಾರೆ. ದರ್ಶನ್ ಕುಂತ್ರೆ ಜುಟ್ಟು, ನಿಂತ್ರೆ ಕಾಲು ಎಂದು ಹೇಳುವ ಮೂಲಕ ದರ್ಶನ್‌ಗೆ ಉಮಾಪತಿ ಟಾಂಗ್ ಕೊಟ್ಟಿದ್ದಾರೆ.

    ಬರ್ಬರವಾಗಿ ಕೊಲೆ ಮಾಡಿರೋದು ನಿಜವಾಗಿವೇ ಆಗಿದ್ದಲ್ಲಿ ಖಂಡಿತವಾಗಿಯೂ ಅವರನ್ನು ಗಲ್ಲಿಗೆ ಏರಿಸಬೇಕು ಎಂದು ಉಮಾಪತಿ (Umapathy Srinivas) ಗುಡುಗಿದ್ದಾರೆ. ತಪ್ಪು ಎಲ್ಲರೂ ಮಾಡ್ತಾರೆ. ತೀರಾ ಹೀನಾಯ ಕೃತ್ಯ ಮಾಡಿದ್ದಾರೆ ಅಂದರೆ ಅವರ ಉದ್ದೇಶ ಏನು ಎಂಬುದು ಅರ್ಥ ಮಾಡಿಕೊಳ್ಳಬೇಕಾಗುತ್ತದೆ. ಯಾರಿಗೋ ತೊಂದರೆ ಕೊಟ್ಟು, ಅವರನ್ನು ಹೀಯಾಳಿಸಿ ಮಣ್ಣಿಗೆ ಹಾಕಿ ನಾವು ನೆಮ್ಮದಿಯಾಗಿ ಬದುಕುತ್ತೇವೆ ಎಂಬುದೆಲ್ಲಾ ಸುಳ್ಳು ಎಂದಿದ್ದಾರೆ.

    ಯಾವಾಗಲೂ ಆ ಪಾಪ ಪ್ರಜ್ಞೆ ಕಾಡುತ್ತಲೇ ಇರುತ್ತದೆ. ಕೊನೆಗೆ ರೇಣುಕಾಸ್ವಾಮಿಗೆ ಏನು ಆಗಿದೆಯೋ ಅದೇ ಗತಿ ಅವರಿಗೂ ಬರುತ್ತದೆ. ಎಲ್ಲರಿಗೂ ಬದುಕು ಹಕ್ಕಿದೆ. ಆ ಹಕ್ಕನ್ನು ಯಾರು ಕಿತ್ತುಕೊಳ್ಳಲಾಗದು ಎಂದು ದರ್ಶನ್‌ಗೆ ಉಮಾಪತಿ ಗುಮ್ಮಿದ್ದಾರೆ. ಇದನ್ನೂ ಓದಿ:ಲ್ಯಾಂಬೋರ್ಗಿನಿ ತಗೋಳೋಕೆ ದರ್ಶನ್‌ಗೆ ಅಡ್ವಾನ್ಸ್ ಕೊಟ್ಟಿದ್ದೇ ನಾನು: ಉಮಾಪತಿ

    ಈ ಪ್ರಕರಣದಲ್ಲಿ ಲಿಂಕ್ ಇರೋದು ಕೆಲವರಿಗೆ ಮಾತ್ರ. ಇನ್ನೂ ಉಳಿದವರು ಅಮಾಯಕರು ದರ್ಶನ್ ಮೇಲಿನ ಪ್ರೀತಿಗೆ ಬಂದಿದ್ದಾರೆ ಅಷ್ಟೇ. ಇವಾಗ ಅವರು ಜೈಲಿಗೆ ಹೋಗುವ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಸಮಾಜಕ್ಕೆ ಮಾದರಿಯಾಗುವ ವ್ಯಕ್ತಿಯನ್ನು ಪ್ರೀತಿಸಿ ಬೇಡ ಹೇಳೋದಿಲ್ಲ. ಆದರೆ ನಿಮ್ಮ ಕುಟುಂಬನ ಬೀದಿಗೆ ಬಿಟ್ಟು ಪೋಷಕರನ್ನು ಬಲಿ ಕೊಟ್ಟು ಪ್ರೀತಿಸಲು ಹೋಗಬೇಡಿ ಎಂದು ಅಭಿಮಾನಿಗಳಿಗೆ ಉಮಾಪತಿ ಕಿವಿ ಹಿಂಡಿದ್ದಾರೆ.


    ಮೆಗ್ಗಾರ್ ಎಲ್ಲಾ ತರಿಸುವ ಅವಶ್ಯಕತೆ ಇತ್ತಾ? ರೇಣುಕಾಸ್ವಾಮಿ ಟೆರೆರಿಸ್ಟ್ ಆಗಿದ್ರಾ ಎಂದು ಉಮಾಪತಿ ಪ್ರಶ್ನಿಸಿದ್ದಾರೆ. ದರ್ಶನ್ ಕುಂತ್ರೆ ಜುಟ್ಟು, ನಿಂತರೆ ಕಾಲು ಇದು ನನ್ನ ಅನುಭವ ಎಂದಿದ್ದಾರೆ. ಇನ್ನಾದರೂ ಅವರು ಸುಧಾರಿಸಿಕೊಳ್ಳಬೇಕು. ಅದೆಷ್ಟೋ ದರ್ಶನ್ ವಿರುದ್ಧ ಧರಣಿ ಮಾಡುತ್ತಿದ್ದಾರೆ ಎಂದು ಖಡಕ್ ಆಗಿ ರೇಣುಕಾಸ್ವಾಮಿ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ.

  • ʻಸಿಂಧೂರ ಲಕ್ಷ್ಮಣʼನಾಗಿ ಬರಲಿದ್ದಾರೆ ನಟ ಧನಂಜಯ

    ʻಸಿಂಧೂರ ಲಕ್ಷ್ಮಣʼನಾಗಿ ಬರಲಿದ್ದಾರೆ ನಟ ಧನಂಜಯ

    ಸ್ಯಾಂಡಲ್‌ವುಡ್ (Sandalwood) ನಟ ರಾಕ್ಷಸ ಧನಂಜಯ(Dhananjay) ಇದೀಗ ಭರ್ಜರಿ ಡಿಮ್ಯಾಂಡ್ ಶುರುವಾಗಿದೆ. ಇತ್ತೀಚೆಗಷ್ಟೇ ರಮ್ಯಾ(Ramya) ಜೊತೆಗಿನ `ಉತ್ತರಕಾಂಡ’ ಚಿತ್ರ ಅನೌನ್ಸ್ ಮಾಡಿದ್ದ ಬೆನ್ನಲ್ಲೇ ಮತ್ತೊಂದು ಹೊಸ ಸಿನಿಮಾಗೆ ಡಾಲಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಐತಿಹಾಸಿಕ ಪಾತ್ರದಲ್ಲಿ ಮಿಂಚಲು ಡಾಲಿ ರೆಡಿಯಾಗಿದ್ದಾರೆ. ಸಿಂಧೂರ ಲಕ್ಷ್ಮಣನಾಗಿ(Sindhura Lakshmana) ಡಾಲಿ ಬರಲಿದ್ದಾರೆ.

    ಇತ್ತೀಚೆಗೆ ಡಾಲಿ ನಟಿಸಿರುವ ಸಲಗ, ರತ್ನನ್ ಪ್ರಪಂಚ, ಬೈರಾಗಿ, ಪುಷ್ಪ, ಹೆಡ್‌ಬುಷ್, ಅಷ್ಟು ಚಿತ್ರಗಳು ಸಿಕ್ಕಾಪಟ್ಟೆ ಸದ್ದು ಮಾಡಿದೆ. ಇದೀಗ  `ರಾಬರ್ಟ್‌'(Robert) ಖ್ಯಾತಿಯ ನಿರ್ಮಾಪಕ ಉಮಾಪತಿ(Umapathy) ನಿರ್ಮಾಣದ ಚಿತ್ರಕ್ಕೆ ಡಾಲಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಉತ್ತರ ಕರ್ನಾಟಕದ ಹೋರಾಟಗಾರ `ವೀರ ಸಿಂಧೂರ ಲಕ್ಷ್ಮಣ’ನಾಗಿ ಬರಲು ಡಾಲಿ ರೆಡಿಯಾಗಿದ್ದಾರೆ. ಇದನ್ನೂ ಓದಿ:ಸಂಭಾಷಣೆಗಾರ ಪ್ರಶಾಂತ್ ರಾಜಪ್ಪ ಇದೀಗ ರಿಷಿ ಸಿನಿಮಾದ ನಿರ್ದೇಶಕ

    `ರಾಬರ್ಟ್’ ನಿರ್ಮಾಪಕ ಉಮಾಪತಿ `ಸಿಂಧೂರ ಲಕ್ಷ್ಮಣʼ ಕಥೆಯನ್ನು ಕನ್ನಡದ ಸೂಪರ್ ಸ್ಟಾರ್ ನಟನಿಗೆ ನಿರ್ಮಾಣ ಮಾಡಲು ಪ್ಲ್ಯಾನ್ ಮಾಡಿದ್ದರು. ಈಗ ಈ ಪಾತ್ರಕ್ಕೆ ಡಾಲಿನೇ ಸೂಕ್ತ ಎಂದೇನಿಸಿ, ಧನಂಜಯ ಅವರನ್ನ ಈ ಸಿನಿಮಾಗೆ ಕೇಳಲಾಗಿದೆಯಂತೆ. ಕಥೆ ಕೇಳಿ ಡಾಲಿ ಕೂಡ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ತರುಣ್ ಸುಧೀರ್ ನಿರ್ದೇಶನದಲ್ಲಿ ಈ ಚಿತ್ರ ಮೂಡಿ ಬರಲಿದೆ.

    ಉತ್ತರ ಕರ್ನಾಟಕ ಮತ್ತು ಮುಂಬೈ ಕರ್ನಾಟಕ ಭಾಗಗಳಲ್ಲಿ ಸಿಂಧೂರ ಲಕ್ಷ್ಮಣ ಅಗಾಧವಾಗಿ ಗೌರವಿಸುತ್ತಾರೆ. ಸ್ವಾತಂತ್ರ್ಯಕ್ಕಾಗಿ ತಮ್ಮದೇ ಶೈಲಿಯಲ್ಲಿ ಸಿಂಧೂರ ಲಕ್ಷ್ಮಣ ಹೋರಾಡಿದ್ದರು. ಬಡವರ ಬಳಿಯೇ ತೆರಿಗೆ ವಸೂಲಿ ಮಾಡುತ್ತಿದ್ದ ಬ್ರಿಟಿಷರಿಗೆ ಸಿಂಧೂರ ಲಕ್ಷ್ಮಣ ತಕ್ಕ ಪಾಠ ಕಲಿಸಿದ್ದರು. ಇದೀಗ ಈ ಪಾತ್ರಕ್ಕೆ ಡಾಲಿ ಜೀವ ತುಂಬಲಿದ್ದಾರೆ. ಈಗಾಗಲೇ ಸ್ಕ್ರಿಪ್ಟ್ ವರ್ಕ್ ಕೂಡ ನಡೆಯುತ್ತಿದೆ. ಸದ್ಯದಲ್ಲೇ ಚಿತ್ರದ ಕುರಿತು ಮತ್ತಷ್ಟು ಅಪ್‌ಡೇಟ್ ಸಿಗಲಿದೆ.

    Live Tv
    [brid partner=56869869 player=32851 video=960834 autoplay=true]