Tag: robertt

  • ತೂಗುದೀಪ ನಿಲಯದಲ್ಲಿ ಕ್ರಿಸ್ಮಸ್ ಆಚರಣೆ

    ತೂಗುದೀಪ ನಿಲಯದಲ್ಲಿ ಕ್ರಿಸ್ಮಸ್ ಆಚರಣೆ

    ಬೆಂಗಳುರು: ಕ್ರಿಸ್‍ಮಸ್ ಹಬ್ಬದ ಪ್ರಯುಕ್ತ ‘ರಾಬರ್ಟ್’ ಸಿನಿಮಾದ ಫಸ್ಟ್‌ಲುಕ್‌ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ. ಜೊತೆಗೆ ಕ್ರಿಸ್‍ಮಸ್ ಹಬ್ಬವನ್ನು ಕೂಡ ಅದ್ಧೂರಿಯಾಗಿ ಆಚರಣೆ ಮಾಡಲಾಗಿದೆ.

    ದರ್ಶನ್ ಮತ್ತು ತರುಣ್ ಸುಧೀರ್ ಕಾಂಬಿನೇಷನ್‍ನಲ್ಲಿ ‘ರಾಬರ್ಟ್’ ಸಿನಿಮಾ ಮೂಡಿ ಬರುತ್ತಿದೆ. ಈಗಾಗಲೇ ದರ್ಶನ್ ಅವರ ಫಸ್ಟ್‌ಲುಕ್‌ಗೆ ಫ್ಯಾನ್ಸ್ ಫಿದಾ ಆಗಿದ್ದು, ಯೂಟ್ಯೂಬ್‍ನಲ್ಲಿ ಧೂಳೆಬ್ಬಿಸುತ್ತಿದೆ. ಇದೇ ಖುಷಿಯಲ್ಲಿ ಚಿತ್ರತಂಡ ತೂಗುದೀಪ ನಿಲಯದಲ್ಲಿ ಕ್ರಿಸ್‍ಮಸ್ ಹಬ್ಬವನ್ನು ಆಚರಣೆ ಮಾಡಿದೆ.

    ದರ್ಶನ್ ಅಭಿಮಾನಿಗಳು ಟ್ವಿಟ್ಟರ್ ಖಾತೆಯಲ್ಲಿ ಕ್ರಿಸ್‍ಮಸ್ ಆಚರಣೆ ಮಾಡುತ್ತಿರುವ ಫೋಟೋವನ್ನು ಶೇರ್ ಮಾಡಿಕೊಂಡಿದೆ. ಅದರಲ್ಲಿ ತರುಣ್ ಸುಧೀರ್, ದರ್ಶನ್ ಸೇರಿದಂತೆ ಚಿತ್ರತಂಡದವರು ಕೇಕ್ ಕಟ್ ಮಾಡಿ, ಪರಸ್ಪರ ತಿನ್ನಿಸುವ ಮೂಲಕ ಸಂಭ್ರಮದಿಂದ ಆಚರಣೆ ಮಾಡಿದ್ದಾರೆ. ಈಗಾಗಲೇ ರಿಲೀಸ್ ಆಗಿರುವ ‘ರಾಬರ್ಟ್’ ಮೋಷನ್ ಪೋಸ್ಟರ್ ಯೂಟ್ಯೂಬ್‍ನಲ್ಲಿ 4.5 ಲಕ್ಷಕ್ಕೂ ಅಧಿಕ ವೀವ್ಸ್ ಕಂಡಿದೆ.

    ಮೋಷನ್ ಪೋಸ್ಟರಿನಲ್ಲಿ ದರ್ಶನ್ ಖಡಕ್ ಆದ ರಗಡ್ ಲುಕ್‍ನಲ್ಲಿ ಕಾಣಿಸಿಕೊಂಡಿದ್ದಾರೆ. ಪೋಸ್ಟರ್ ಬ್ಲಾಕ್ ಬಣ್ಣದಿಂದ ಮೂಡಿ ಬಂದಿದ್ದು, ಕಪ್ಪು ಬಣ್ಣದ ಜಾಕೆಟ್, ಕತ್ತಿನಲ್ಲಿ ಶಿಲುಬೆಯ ಚೈನ್, ಗಡ್ಡಧಾರಿಯಾಗಿ ಕೈಯಲ್ಲಿ ಗನ್ ಹಿಡಿದುಕೊಂಡು ದರ್ಶನ್ ರಗಡ್ ಪೋಸ್ ಕೊಟ್ಟಿದ್ದಾರೆ. ಪೋಸ್ಟರಿನಲ್ಲಿ ಲಾಂಗ್ ಹೇರಿನಲ್ಲಿ ಕಾಣಿಸಿಕೊಂಡಿದ್ದಾರೆ.

    ‘ರಾಬರ್ಟ್’ ಸಿನಿಮಾವನ್ನು ನಿರ್ದೇಶಕ ತರುಣ್ ಸುಧೀರ್ ನಿರ್ದೇಶನ ಮಾಡುತ್ತಿದ್ದು, ಇತ್ತೀಚೆಗಷ್ಟೆ ಚಿತ್ರದ ಶೂಟಿಂಗ್ ಕೂಡ ಕಂಪ್ಲೀಟ್ ಆಗಿದೆ. ಚಿತ್ರದಲ್ಲಿ ದರ್ಶನ್ ಅವರಿಗೆ ನಟಿ ಆಶಾ ಭಟ್ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ.