Tag: Robo

  • ‘ಎವಿಡೆನ್ಸ್’ ಸಿನಿಮಾದಲ್ಲಿ ರೋಬೊ ಖ್ಯಾತಿಯ ಗಣೇಶನ್

    ‘ಎವಿಡೆನ್ಸ್’ ಸಿನಿಮಾದಲ್ಲಿ ರೋಬೊ ಖ್ಯಾತಿಯ ಗಣೇಶನ್

    ಕೊಡ್ಲಾಡಿ ಸುರೇಂದ್ರಶೆಟ್ಟಿ ಅವರು ಅರ್ಪಿಸಿ, ಶ್ರೀನಿವಾಸ್‌ಪ್ರಭು, ಕೆ.ಮಾದೇಶ್ (ಕೊಡಿಹಳ್ಳಿ), ನಟರಾಜ್ ಸಿ.ಎಸ್.(ಚನ್ನಸಂದ್ರ) ಸೇರಿ ನಿರ್ಮಿಸುತ್ತಿರುವ “ಎವಿಡೆನ್ಸ್” (Evidence) ಚಿತ್ರಕ್ಕೆ ಪ್ರವೀಣ್ ರಾಮಕೃಷ್ಣ ಆ್ಯಕ್ಷನ್‌ ಕಟ್ ಹೇಳಿದ್ದಾರೆ. ಅರವಿಂದ್ ಅಚ್ಚು, ಎಂ.ಎನ್.ರವೀಂದ್ರ ರಾವ್ (ದೂರದರ್ಶನ), ಪ್ರಶಾಂತ್ ಸಿ.ಪಿ. ರಮೇಶ್ ಕೆ, ಕಿಶೋರ್‌ಬಾಬು ಮತ್ತು ನರಸಿಂಹಮೂರ್ತಿ ಚಿತ್ರದ ಸಹ ನಿರ್ಮಾಪಕರಾಗಿ ಕೈಜೋಡಿಸಿದ್ದಾರೆ. ವಿಷ್ಯುಯಲ್ ಮ್ಯಾಜಿಕ್ ಸ್ಟುಡಿಯೋದಲ್ಲಿ ಈ ಚಿತ್ರದ ಕೊನೆಯ ಹಂತದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು, ಸದ್ಯದಲ್ಲೇ ಹಾಡುಗಳು ಮತ್ತು ಟೀಸರ್, ಟ್ರೇಲರನ್ನು ಬಿಡುಗಡೆ ಮಾಡುವುದಾಗಿ ಚಿತ್ರತಂಡ ತಿಳಿಸಿದೆ.

    ಕ್ರೈಮ್, ಸಸ್ಪೆನ್ಸ್ , ಥ್ರಿಲ್ಲರ್ ಜೊತೆಗೆ ತ್ರಿಕೋನ ಪ್ರೇಮಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಪ್ರವೀಣ್ ರಾಮಕೃಷ್ಣ (Praveen Ramakrishna) ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ಬೆಂಗಳೂರು, ಮಂಗಳೂರು, ಚಿಕ್ಕಮಗಳೂರು ಮತ್ತು ನೆಲಮಂಗಲ ಹೊರವಲಯದಲ್ಲಿ ಚಿತ್ರೀಕರಣ ನಡೆಸಲಾಗಿದೆ.  ಈ ಚಿತ್ರದಲ್ಲಿ ಜೋಶ್ ಖ್ಯಾತಿಯ ರೋಬೊ (Robo) ಗಣೇಶನ್ (Ganeshan) ನಾಯಕನಾಗಿ ನಟಿಸಿದ್ದಾರೆ. ಕಿರಗೂರಿನ ಗಯ್ಯಾಳಿಗಳು ಖ್ಯಾತಿಯ ಮಾನಸ ಜೋಶಿ (Manasa Joshi) ಚಿತ್ರದ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದ ಪಾತ್ರಗಳಲ್ಲಿ ಆಕರ್ಷ್ ಆದಿತ್ಯ, ರಚಿತಾ, ಪೂಜಿತ ಬೋಬೆಗೌಡ, ಚಮಕ್‌ಚಂದ್ರ, ಪವನ್‌ಸುರೇಶ್, ಶಶಿಧರಕೋಟೆ, ಕಾರ್ತಿಕ್ ವರ್ಣೇಕರ್, ಮನಮೋಹನ್ ರೈ, ರೇಣು ಶಿಕಾರಿ, ಆರಾಧ್ಯ ಶಿವಕುಮಾರ್  ಮುಂತಾದವರು ನಟಿಸಿದ್ದಾರೆ. ಇದನ್ನೂ ಓದಿ:ಕೊಟ್ಟ ಮಾತಿನಂತೆ ದಾವಣಗೆರೆ ಬೆಣ್ಣೆದೋಸೆ ಸವಿದ ಸ್ಯಾಂಡಲ್ ವುಡ್ ಕ್ವೀನ್

    ಈ ಚಿತ್ರದಲ್ಲಿ 4 ಹಾಡುಗಳಿದ್ದು, ಆರೋನ್ ಕಾರ್ತಿಕ್ ವೆಂಕಟೇಶ್ ಸಂಗೀತ ಸಂಯೋಜನೆ ಮಾಡಿದ್ದಾರೆ. ವಿಶೇಷವಾಗಿ ಹಾಡೊಂದಕ್ಕೆ “ಸ ರಿ ಪ” ಎನ್ನುವ ಮೂರೇ ಸ್ವರದಲ್ಲಿ ರಾಗ ಸಂಯೋಜನೆ ಮಾಡುವ ಜೊತೆಗೆ 2 ಹಾಡಿನ ಸಾಹಿತ್ಯವನ್ನೂ ಬರೆದಿದ್ದಾರೆ. ಉಳಿದಂತೆ ಡಾ.ವಿ.ನಾಗೇಂದ್ರಪ್ರಸಾದ್ ಮತ್ತು ಪ್ರವೀಣ್‌ ರಾಮಕೃಷ್ಣ ಸಾಹಿತ್ಯ ರಚಿಸಿದ್ದಾರೆ. ಹನುಮಯ್ಯ ಬಂಡಾರು ಮತ್ತು ಆರ್. ಚಂದ್ರಶೇಖರ ಪ್ರಸಾದ್ ಅವರ ಸಂಭಾಷಣೆ, ರವಿ ಸುವರ್ಣ ಅವರ ಛಾಯಾಗ್ರಹಣ, ಶೇಷಾಚಲ ಕುಲಕರ್ಣಿ ಅವರ ಸಂಕಲನ, ಕರಿಯ ನಂದ ಮತ್ತು ರಘು ಆರ್.ಜೆ. ನೃತ್ಯ ನಿರ್ದೇಶನ, ಜಾನಿ ಮಾಸ್ಟರ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

  • ಮಲ್ಲೇಶ್ವರ ಸರ್ಕಾರಿ ಪ್ರೌಢಶಾಲೆಯಲ್ಲಿ ಪಾಠ ಮಾಡಿದ `ರೋಬೋ’

    ಮಲ್ಲೇಶ್ವರ ಸರ್ಕಾರಿ ಪ್ರೌಢಶಾಲೆಯಲ್ಲಿ ಪಾಠ ಮಾಡಿದ `ರೋಬೋ’

    ಬೆಂಗಳೂರು: ಪಾಠ-ಪ್ರವಚನಗಳಲ್ಲಿ ಬೋಧಕರಿಗೂ ವಿದ್ಯಾರ್ಥಿಗಳಿಗೂ ಸಹಕರಿಸಿ, ಕಲಿಕೆಯನ್ನು ಸುಲಭವಾಗಿಸುವಂತಹ `ಈಗಲ್’ ರೋಬೋ ಪರೀಕ್ಷಾರ್ಥ ಪ್ರಾತ್ಯಕ್ಷಿಕೆಯು ಬುಧವಾರದಂದು ಮಲ್ಲೇಶ್ವರಂ 13ನೇ ಅಡ್ಡರಸ್ತೆಯಲ್ಲಿರುವ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.

    ಕ್ಷೇತ್ರದ ಶಾಸಕರಾಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. ಶಾಲೆಯ ಬೋಧಕರು ಮತ್ತು ವಿದ್ಯಾರ್ಥಿನಿಯರು ಇದರಲ್ಲಿ ಪಾಲ್ಗೊಂಡು, ರೋಬೋ ಕಾರ್ಯಕ್ಷಮತೆಗೆ ಸಾಕ್ಷಿಯಾದರು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ರೋಬೋಗೆ ಹಲವು ಪ್ರಶ್ನೆಗಳನ್ನು ಕೇಳಿದರು. ಹಾಗೆಯೇ, ಅದು ನೀಡಿದ ಉತ್ತರ ನೆರವನ್ನು ಕಂಡು ಬೆರಗಾದರು. ಇದನ್ನೂ ಓದಿ: ಮಲ್ಲೇಶ್ವರಂ 18ನೇ ಅಡ್ಡರಸ್ತೆ ಮೈದಾನದಲ್ಲಿ ವಾಕಿಂಗ್ ಪಥ ನಿರ್ಮಾಣ ಇಲ್ಲ: ಅಶ್ವತ್ಥನಾರಾಯಣ

    ರೋಬೋ ಬೋಧನೆ ನಂತರ ಮಾತನಾಡಿದ ಅಶ್ವತ್ಥನಾರಾಯಣ ಅವರು, ಇದು ಪ್ರಾಯೋಗಿಕ ಕಾರ್ಯಕ್ರಮವಾಗಿದ್ದು, ರೋಬೋದ ಕಾರ್ಯ ಸಾಮಥ್ರ್ಯವನ್ನು ವೀಕ್ಷಿಸಲಾಗಿದೆ. ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಜಾಗತಿಕ ಗುಣಮಟ್ಟದ ಬೋಧನೆಯ ಸಲುವಾಗಿ, ಇಂತಹ ರೋಬೋಗಳು ಇದ್ದರೆ ಒಳ್ಳೆಯದು ಎಂದು ಅಭಿಪ್ರಾಯಪಟ್ಟರು.

    ರೋಬೋ ಶಿಕ್ಷಕರಿಗೆ ಪರ್ಯಾಯ ಅಲ್ಲ. ಆದರೆ ಶಿಕ್ಷಕರಿಗೆ ಬೋಧನೆಯಲ್ಲಿ ಸಹಕರಿಸುವ ಕೆಲಸ ಮಾಡಲಿದೆ. ಇದರಿಂದ ವಿದ್ಯಾರ್ಥಿಗಳ ಕಲಿಕೆಯ ಮಟ್ಟ ಕೂಡ ಹೆಚ್ಚಾಗಲಿದೆ ಎಂದು ಹೇಳಿದರು.

    21ನೇ ಶತಮಾನವು ತಂತ್ರಜ್ಞಾನದ ಯುಗವಾಗಿದ್ದು, ಬೋಧನೆಯಲ್ಲಿ ಇದರ ಅಳವಡಿಕೆ ಅಗತ್ಯವಾಗಿದೆ. ಇದರಿಂದಾಗಿ, ಸರ್ಕಾರಿ ಶಾಲಾ-ಕಾಲೇಜುಗಳು ಕೂಡ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕಡಿಮೆಯಿಲ್ಲದಂತೆ ವಿದ್ಯಾರ್ಥಿಗಳನ್ನು ಆಕರ್ಷಿಸಬಹುದು. ಇದರಿಂದ ಬಡಕುಟುಂಬಗಳ ಮಕ್ಕಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ನುಡಿದರು.

    ಮುಂದಿನ ದಿನಗಳಲ್ಲಿ `ಈಗಲ್’ ರೋಬೋವನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೂ ತೋರಿಸಲಾಗುವುದು. ನಂತರ ಅವರಿಂದಲೇ ಈ ಯೋಜನೆಗೆ ಚಾಲನೆ ಕೊಡಿಸುವ ಉದ್ದೇಶ ಇದೆ. ಮಲ್ಲೇಶ್ವರ ಕ್ಷೇತ್ರದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಇದನ್ನು ಜಾರಿ ಮಾಡುವ ಉದ್ದೇಶ ಇದೆ ಎಂದು ಅವರು ವಿವರಿಸಿದರು. ಇದನ್ನೂ ಓದಿ: ಹುಡುಗಿ ಎಂದು ಅಪ್ಪನ ಜೊತೆಗೆ ಚಾಟ್ ಮಾಡಿ ಸಿಕ್ಕಿಬಿದ್ದ ಖ್ಯಾತ ನಿರ್ಮಾಪಕ!

    ಇಂಡಸ್ ಟ್ರಸ್ಟ್‌ನ ಸ್ಥಾಪಕ ಸಿಇಒ ಹಾಗೂ ವ್ಯವಸ್ಥಾಪಕ ನಿರ್ದೇಶಕ ಲೆ.ಜನರಲ್ ಅರ್ಜುನ್ ರಾಯ್, ಮಲ್ಲೇಶ್ವರ ಬಿಇಒ ಉಮಾದೇವಿ, ಕಾಲೇಜಿನ ಪ್ರಾಂಶುಪಾಲರಾದ ಡಾ.ರವಿ, ಶಾಲೆ ಉಪ ಪ್ರಾಂಶುಪಾಲ ರವಿಕುಮಾರ್ ಈ ಸಂದರ್ಭದಲ್ಲಿ ಇದ್ದರು.